Tag: Jnanpith Award 2023

  • ಉರ್ದು ಕವಿ ಗುಲ್ಜಾರ್, ವಿದ್ವಾಂಸ ರಾಮಭದ್ರಾಚಾರ್ಯರಿಗೆ ಜ್ಞಾನಪೀಠ ಪ್ರಶಸ್ತಿ

    ಉರ್ದು ಕವಿ ಗುಲ್ಜಾರ್, ವಿದ್ವಾಂಸ ರಾಮಭದ್ರಾಚಾರ್ಯರಿಗೆ ಜ್ಞಾನಪೀಠ ಪ್ರಶಸ್ತಿ

    ನವದೆಹಲಿ: ಖ್ಯಾತ ಉರ್ದು ಗೀತರಚನೆಕಾರ ಮತ್ತು ಕವಿ ಗುಲ್ಜಾರ್ ಮತ್ತು ಸಂಸ್ಕೃತ ವಿದ್ವಾಂಸ ಜಗದ್ಗುರು ರಾಮಭದ್ರಾಚಾರ್ಯ ಅವರಿಗೆ 2023 ರ ಜ್ಞಾನಪೀಠ ಪ್ರಶಸ್ತಿ ಘೋಷಿಸಲಾಗಿದೆ.

    ಗುಲ್ಜಾರ್ ಅವರು ಪ್ರಸ್ತುತ ಕಾಲದ ಅತ್ಯುತ್ತಮ ಉರ್ದು ಕವಿಗಳಲ್ಲಿ ಒಬ್ಬರು. ಗುಲ್ಜಾರ್ ಅವರು ಹಿಂದಿ ಚಿತ್ರರಂಗದಲ್ಲಿ ತಮ್ಮ ಗೀತರಚನೆಗಳಿಗೆ ಹೆಸರುವಾಸಿಯಾಗಿದ್ದಾರೆ. ಈ ಯುಗದ ಅತ್ಯುತ್ತಮ ಉರ್ದು ಕವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿದೆ. ಈ ಹಿಂದೆ 2002ರಲ್ಲಿ ಉರ್ದು ಸಾಹಿತ್ಯ ಅಕಾಡೆಮಿ ಪ್ರಶಸ್ತಿ, 2013ರಲ್ಲಿ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ, 2004ರಲ್ಲಿ ಪದ್ಮಭೂಷಣ, ಮತ್ತು ಅವರ ಕೃತಿಗಳಿಗಾಗಿ ಕನಿಷ್ಠ ಐದು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಕೂಡ ಪಡೆದಿದ್ದಾರೆ.

    ಮಧ್ಯಪ್ರದೇಶದ ಚಿತ್ರಕೂಟದ ತುಳಸಿ ಪೀಠದ ಸಂಸ್ಥಾಪಕರೂ ಹಾಗೂ ಮುಖ್ಯಸ್ಥರಾದ ಜಗದ್ಗುರು ರಾಮಭದ್ರಾಚಾರ್ಯರು ಹೆಸರಾಂತ ಸಂಸ್ಕೃತ ವಿದ್ವಾಂಸ, ಹಿಂದೂ ಆಧ್ಯಾತ್ಮಿಕ ನಾಯಕರಾಗಿಯೂ ಗುರುತಿಸಿಕೊಂಡಿದ್ದಾರೆ. 100ಕ್ಕೂ ಹೆಚ್ಚು ಪುಸ್ತಕಗಳ ಬರಹಗಾರರಾಗಿದ್ದಾರೆ. ಇವರು ಕೂಡ ಜ್ಞಾನಪೀಠ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಎಂದು ಆಯ್ಕೆ ಸಮಿತಿ ತಿಳಿಸಿದೆ.