Tag: JNTR

  • ನಟ ತಾರಕ ರತ್ನ ಅಂತಿಮ ದರ್ಶನಕ್ಕೆ ತೆಲುಗು ಫಿಲ್ಮ್ ಚೇಂಬರ್ ವ್ಯವಸ್ಥೆ

    ನಟ ತಾರಕ ರತ್ನ ಅಂತಿಮ ದರ್ಶನಕ್ಕೆ ತೆಲುಗು ಫಿಲ್ಮ್ ಚೇಂಬರ್ ವ್ಯವಸ್ಥೆ

    ಜ್ಯೂ.ಎನ್‌ಟಿಆರ್ (Jr.Ntr)ಸಹೋದರ ತೆಲುಗು ನಟ- ರಾಜಕಾರಣಿ ನಂದಮೂರಿ ತಾರಕ ರತ್ನ (Nandamuri Tarak Ratna) ಅವರು ಬೆಂಗಳೂರಿನಲ್ಲಿ ಶನಿವಾರ (ಫೆ.18) ಕೊನೆಯುಸಿರೆಳೆದಿದ್ದಾರೆ. ತಾರಕ ರತ್ನ ನಿಧನ ನಂದಮೂರಿ ಕುಟುಂಬಕ್ಕೆ (Nandamuri Family) ಆಘಾತ ನೀಡಿದೆ. ತೆಲುಗು ಫಿಲ್ಮ್ ಚೇಂಬರ್ ಆವರಣದಲ್ಲಿ ಫೆ.20ರ ಬೆಳಗ್ಗೆ ತಾರಕ ರತ್ನ ಅವರ ಪಾರ್ಥಿವ ಶರೀರವನ್ನ ಅಂತಿಮ ದರ್ಶನಕ್ಕೆ ಇಡಲಾಗುತ್ತದೆ.

    ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು (Chandrababu Naidu) ಅವರ ಪುತ್ರ ನರಾ ಲೋಕೇಶ್ ಅವರು ಏರ್ಪಡಿಸಿದ್ದ ಪಾದಯಾತ್ರೆಯಲ್ಲಿ ಜ.27ರಂದು ನಂದಮೂರಿ ತಾರಕ ರತ್ನ ಭಾಗಿ ಆಗಿದ್ದರು. ಪಾದಯಾತ್ರೆ ಆರಂಭವಾದ ಕೆಲವೇ ನಿಮಿಷಗಳಲ್ಲಿ ಅವರು ಪ್ರಜ್ಞೆ ತಪ್ಪಿ ಬಿದ್ದಿದ್ದರು. ಕೂಡಲೇ ಅವರನ್ನು ಕುಪ್ಪಂ ಬಳಿ ಇರುವ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇದನ್ನೂ ಓದಿ:ನಟ ನಂದಮೂರಿ ತಾರಕ ರತ್ನ ಇನ್ನಿಲ್ಲ

    ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ನಾರಾಯಣ ಹೃದಯಾಲಯ (Narayana Hrudayalaya) ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ನಿಧನರಾಗಿದ್ದಾರೆ. ಭಾನುವಾರ (ಫೆ.19) ನಂದಮೂರಿ ತಾರಕ ರತ್ನ ಅವರ ಪಾರ್ಥಿವ ಶರೀರವನ್ನು ರಂಗಾ ರೆಡ್ಡಿ ಜಿಲ್ಲೆಯ ಮೋಕಿಲಾಗೆ ರವಾನೆ ಮಾಡಲಾಗಿದೆ. ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ಸೋಮವಾರ (ಫೆ.20) ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬಳಿಕ ನಂದಮೂರಿ ತಾರಕ ರತ್ನ ಅಂತ್ಯಕ್ರಿಯೆ ನಡೆಯಲಿದೆ.

    ತೆಲುಗು ಚಲನಚಿತ್ರ ವಾಣಿಜ್ಯ ಮಂಡಳಿಯ (Telagu Film Chamber) ಆವರಣದಲ್ಲಿ ನಂದಮೂರಿ ತಾರಕ ರತ್ನ ಅವರ ಪಾರ್ಥೀವ ಶರೀರ ಇರಿಸಲಾಗುವುದು. ಅಲ್ಲಿ ಸಾರ್ವಜನಿಕರು ಅಂತಿಮ ದರ್ಶನ ಪಡೆಯಬಹುದು. ಬೆಳಗ್ಗೆ 7 ಗಂಟೆಯಿಂದಲೇ ಅಂತಿಮ ದರ್ಶನಕ್ಕೆ ಅವಕಾಶ ಇರಲಿದೆ. ಅಂದು ಸಂಜೆ 5 ಗಂಟೆ ಸುಮಾರಿಗೆ ಹೈದರಾಬಾದ್‌ನ ಮಹಾಪ್ರಸ್ತಾನಂನಲ್ಲಿ ಅಂತ್ಯಕ್ರಿಯೆ ಮಾಡಲಾಗುವುದು.

    ಇನ್ನೂ ನಂದಮೂರಿ ತಾರಕ ರತ್ನ ಅವರ ನಿಧನಕ್ಕೆ ಟಾಲಿವುಡ್ ಜೊತೆ ಇಡೀ ಚಿತ್ರರಂಗ ಕಂಬನಿ ಮಿಡಿದಿದೆ. ತಾರಕ ರತ್ನ ಅವರ ನಿಧನ ಚಿತ್ರರಂಗಕ್ಕೆ ಮತ್ತು ರಾಜಕೀಯಕ್ಕೆ ತುಂಬಲಾರದ ನಷ್ಟವಾಗಿದೆ.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಆರ್.ಆರ್.ಆರ್ ಅಕೌಂಟ್ ಕ್ಲೋಸ್ : ನಿರ್ಮಾಪಕರಿಗೆ ಒಟ್ಟು ಹರಿದು ಬಂದ ಹಣವೆಷ್ಟು?

    ಆರ್.ಆರ್.ಆರ್ ಅಕೌಂಟ್ ಕ್ಲೋಸ್ : ನಿರ್ಮಾಪಕರಿಗೆ ಒಟ್ಟು ಹರಿದು ಬಂದ ಹಣವೆಷ್ಟು?

    ರಾಜಮೌಳಿ ನಿರ್ದೇಶನದ ಬಹುಕೋಟಿ ಬಜೆಟ್ ಸಿನಿಮಾ ಆರ್.ಆರ್.ಆರ್ ಸಿನಿಮಾ ಬಹುತೇಕ ಚಿತ್ರಮಂದಿರಗಳಿಂದ ಎತ್ತಂಗಡಿ ಆಗಿದೆ. ಹಾಗಾಗಿ ಈ ಸಿನಿಮಾ ಎಷ್ಟೆಲ್ಲ ಹಣವನ್ನು ತಂದುಕೊಟ್ಟಿತು ಎನ್ನುವ ಕುತೂಹಲ ಮೂಡಿದೆ. ಸಿನಿಮಾ ರಿಲೀಸ್ ಆಗಿ ಎರಡ್ಮೂರು ವಾರಗಳ ಕಾಲ, ನೂರು ಕೋಟಿ ಬಂತು, ಐನೂರು ಕೋಟಿ ಆಯಿತು ಹೀಗೆ ಸುದ್ದಿಗಳನ್ನು ಓದಿದ್ದೇವೆ. ಇದೀಗ ಒಟ್ಟು ಎಷ್ಟು ಹಣ ಬಂದಿದೆ ಎನ್ನುವ ಪ್ರಶ್ನೆ ಕ್ಯೂರಿಯಾಸಿಟಿ ಮೂಡಿಸಿದೆ.

    ಕೇವಲ ರಾಜಮೌಳಿ ನಿರ್ದೇಶನ ಮಾಡಿದಾಗ, ಬಾಕ್ಸ್ ಆಫೀಸಿನಲ್ಲಿ ಒಂದು ಲೆಕ್ಕಚಾರ ಇದ್ದೇ ಇರುತ್ತದೆ. ಆದರೆ, ಈ ಬಾರಿ ಇಬ್ಬರು ಸೂಪರ್ ಸ್ಟಾರ್ ಜೊತೆ ರಾಜಮೌಳಿ ಬಂದಿದ್ದಾರೆ. ಹಾಗಾಗಿ ಲೆಕ್ಕಾಚಾರ ಭರ್ಜರಿಯಾಗಿಯೇ ಇರುತ್ತದೆ ಎನ್ನುವ ನಂಬಿಕೆ ಚಿತ್ರೋದ್ಯಮದ್ದು. ರಾಜಮೌಳಿಯೂ ಸೇರಿದಂತೆ ಮೂವರು ಸ್ಟಾರ್ ಗಳು ಒಂದೇ ಸಿನಿಮಾದಲ್ಲಿ ಸಮಾಗಮವಾಗಿದ್ದರಿಂದ ಸಾವಿರ ಕೋಟಿಯೇ ನಿರ್ಮಾಪಕರ ಜೇಬಿಗೆ ಹರಿದು ಬಂದಿದೆ. ಇದನ್ನೂ ಓದಿ: ಶಿವಣ್ಣ – ತಲೈವಾ ಸಿನಿಮಾಗೆ `ಜೈಲರ್’ ಟೈಟಲ್ ಫಿಕ್ಸ್

    ಸಿನಿ ರಂಗದ ಲೆಕ್ಕಾಚಾರದ ಪಂಡಿತರ ಪ್ರಕಾರ ಥಿಯೇಟರ್ ನಿಂದಲೇ ಒಟ್ಟು 1100 ಕೋಟಿ ಬಂದಿದೆ ಎಂದು ಹೇಳಲಾಗುತ್ತಿದೆ. ಟಿವಿ ರೈಟ್ಸ್, ಡಿಜಿಟಲ್ ರೈಟ್ಸ್, ಆಡಿಯೋ ಹಕ್ಕುಗಳನ್ನು ಸೇರಿಸಿದರೆ, 1450 ಕೋಟಿಯಷ್ಟು ಹಣವು ಆರ್.ಆರ್.ಆರ್ ಗಳಿಸಿದೆ ಎನ್ನಲಾಗುತ್ತಿದೆ. ಟ್ಯಾಕ್ಸ್, ಕಮಿಷನ್, ಇತ್ಯಾದಿ ಇತ್ಯಾದಿ ಕಡಿತಗೊಂಡು ನಿರ್ಮಾಪಕರಿಗೆ ಎಷ್ಟು ಹಣ ಸೇರುತ್ತದೆ ಎನ್ನುವುದೇ ಸದ್ಯಕ್ಕಿರುವ ಕುತೂಹಲ. ಮುಂದಿನ ದಿನಗಳಲ್ಲಿ ಅದೂ ಗೊತ್ತಾಗಬಹುದು.

    Live Tv

  • ಪತ್ರಕರ್ತರಿಗೆ ಮಧ್ಯರಾತ್ರಿಯ ಸರ್ಪ್ರೈಸ್ ಕೊಟ್ಟ RRR ಟೀಮ್..!

    ಪತ್ರಕರ್ತರಿಗೆ ಮಧ್ಯರಾತ್ರಿಯ ಸರ್ಪ್ರೈಸ್ ಕೊಟ್ಟ RRR ಟೀಮ್..!

    ದೇ ಮೊದಲ ಬಾರಿಗೆ ಸಿನಿಮಾ ಪತ್ರಕರ್ತರಿಗೆ ಮಧ್ಯರಾತ್ರಿ ಸಿನಿಮಾ ತೋರಿಸಲು ಮುಂದಾಗಿದೆ  ‘ಆರ್.ಆರ್.ಆರ್’ ಸಿನಿಮಾ ಟೀಮ್. ಈ ಕುರಿತು ಆರ್.ಆರ್.ಆರ್ ಟೀಮ್ ಪತ್ರಕರ್ತರಿಗೆ ಸಂದೇಶ ಕಳುಹಿಸಿದ್ದು, ಕೆ.ಜಿ ರೋಡ್ ಭೂಮಿಕಾ ಚಿತ್ರಮಂದಿರದಲ್ಲಿ ಇಂದು ಮಧ್ಯರಾತ್ರಿ 12.45ಕ್ಕೆ ಪ್ರೆಸ್ ಶೋ ಆಯೋಜನೆ ಮಾಡಲಾಗಿದೆ ಎಂದು ಕಳುಹಿಸಿದ್ದಾರೆ. ಈ ಮೂಲಕ ಮಧ್ಯರಾತ್ರಿಯ ಟಾಸ್ಕ್ ಕೊಟ್ಟಿದ್ದಾರೆ. ಇದನ್ನೂ ಓದಿ : ದಪ್ಪಗಿರೋರಿಗೆ ‘ಸೂ’ ಅನ್ನೋ ಕ್ಯಾರೆಕ್ಟರ್ ಸರ್ಟಿಫಿಕೇಟ್ : ಹಿಗ್ಗಾಮುಗ್ಗ ಝಾಡಿಸಿದ ಗಾಳಿಪಟ ನೀತು

    ಮಧ್ಯರಾತ್ರಿ ನಡೆಯುವ ಈ ಶೋನಲ್ಲಿ ‘ಆರ್.ಆರ್.ಆರ್’ ಕನ್ನಡದ ಅವತರಣಿಕೆಯನ್ನು ತೋರಿಸಲಾಗುತ್ತಿದೆ. ಈ ಚಿತ್ರ ಮಂದಿರದಲ್ಲಿ ಕನ್ನಡಕ್ಕೆ ಡಬ್ ಆಗಿರುವ ಆರ್.ಆರ್.ಆರ್ ಸಿನಿಮಾ ಪ್ರದರ್ಶನವಾಗುತ್ತಿದೆ. ರಾಜಮೌಳಿ ನಿರ್ದೇಶನದ ಆರ್.ಆರ್.ಆರ್ ಸಿನಿಮಾ ನಾಳೆ ವಿಶ್ವದಾದ್ಯಂತ ಹತ್ತು ಸಾವಿರಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗುತ್ತಿದೆ. ಕನ್ನಡದಲ್ಲೇ 250ಕ್ಕೂ ಹೆಚ್ಚು ಥಿಯೇಟರ್ ನಲ್ಲಿ ತೆರೆ ಕಾಣುತ್ತಿದೆ. ಈ ದಿನ ಮಧ್ಯರಾತ್ರಿಯಿಂದಲೇ ಅನೇಕ ಕಡೆ ಪ್ರದರ್ಶನಗಳು ನಡೆಯುತ್ತಿವೆ. ಇದನ್ನೂ ಓದಿ : ಶ್ರುತಿ ಹಾಸನ್ ಜತೆ ನನ್ನ ಮದುವೆ ಆಗಿದೆ: ಸ್ಫೋಟಕ ಮಾಹಿತಿ ಹಂಚಿಕೊಂಡ ಬಾಯ್ ಫ್ರೆಂಡ್

    ಆರ್.ಆರ್.ಆರ್ ಸಿನಿಮಾಗಾಗಿ ಕನ್ನಡದ ಜೇಮ್ಸ್ ಚಿತ್ರವನ್ನು ಥಿಯೇಟರ್ ಗಳಿಂದ ಎತ್ತಂಗಡಿ ಮಾಡಲಾಗುತ್ತಿದೆ ಎನ್ನುವ ಆರೋಪ ಕೇಳಿ ಬಂದಿತ್ತು. ಈ ಕುರಿತು ನಟ ಶಿವರಾಜ್ ಕುಮಾರ್ ಕೂಡ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ್ದರು. ಕೊನೆಗೆ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಸಂಧಾನ ಸಭೆ ಕೂಡ ನಡೆಯಿತು. ಈಗ ಸಮಸ್ಯೆ ಬಗೆಹರಿದಿದೆ ಎನ್ನಲಾಗುತ್ತಿದೆ. ಇದನ್ನೂ ಓದಿ : ವರುಣ್ ದವನ್ ಜತೆ ‘ಸಿಟಾಡೆಲ್’ ನಲ್ಲಿ ಸಮಂತಾ: ಕ್ಯಾಮರಾ ಕಣ್ಣಿಗೆ ಹಬ್ಬ

    ಇಂದು ಮುಂಜಾನೆ ಆರ್.ಆರ್.ಆರ್ ಸಿನಿಮಾ ತಂಡದ ವಿರುದ್ಧ ಕನ್ನಡಪರ ಸಂಘಟನೆಗಳು ಕೂಡ ಪ್ರತಿಭಟನೆ ನಡೆಸಿದ್ದವು. ಈ ಸಿನಿಮಾದ ಪೋಸ್ಟರ್ ಕಿತ್ತು ಹಾಕುವ ಮೂಲಕ ಆಕ್ರೋಶ ವ್ಯಕ್ತ ಪಡಿಸಿದವು. ಆನಂತರ ಪ್ರತಿಭಟನೆಯನ್ನು ಕೈ ಬಿಡಲಾಯಿತು.

  • ಆರ್.ಆರ್.ಆರ್ ಬೈಕಾಟ್ : ಕನ್ನಡ ಪರ ಹೋರಾಟಗಾರರಿಗೇ ಜವಾಬ್ದಾರಿ ಕೊಟ್ಟ ರಾಜಮೌಳಿ ಟೀಮ್

    ಆರ್.ಆರ್.ಆರ್ ಬೈಕಾಟ್ : ಕನ್ನಡ ಪರ ಹೋರಾಟಗಾರರಿಗೇ ಜವಾಬ್ದಾರಿ ಕೊಟ್ಟ ರಾಜಮೌಳಿ ಟೀಮ್

    ರಾಜಮೌಳಿ ನಿರ್ದೇಶನದ ಆರ್.ಆರ್.ಆರ್ ಸಿನಿಮಾ ಕನ್ನಡದಲ್ಲಿ ಡಬ್ ಆಗಿದ್ದರೂ, ಅದು ಕರ್ನಾಟಕದಲ್ಲಿ ಪ್ರದರ್ಶನ ಕಾಣುತ್ತಿಲ್ಲ. ಒಂದೇ ಒಂದು ಥಿಯೇಟರ್ ಕೂಡ ಕನ್ನಡ ಡಬ್ಬಿಂಗ್ ಚಿತ್ರಕ್ಕೆ ಕೊಟ್ಟಿಲ್ಲವೆಂದು ಎರಡು ದಿನಗಳಿಂದ ‘ಬೈಕಾಟ್ ಆರ್.ಆರ್.ಆರ್’ ಹೋರಾಟ ಸೋಷಿಯಲ್ ಮೀಡಿಯಾದಲ್ಲಿ ಶುರುವಾಗಿದೆ. ಕನ್ನಡ ಪರ ಕೆಲ ಹೋರಾಟಗಾರರು ಮತ್ತು ಸತತವಾಗಿ ಡಬ್ಬಿಂಗ್ ಪರ ಒಲವು ತೋರಿರುವ ಕನ್ನಡಿಗರ ‘ಆರ್.ಆರ್.ಆರ್’ ಸಿನಿಮಾ ಕನ್ನಡದಲ್ಲೇ ಬೇಕು ಎಂದು ಕ್ಯಾಂಪೇನ್ ಶುರು ಮಾಡಿದ್ದರು. ಇದನ್ನೂ ಓದಿ : ಅನಿಲ್ ಕಪೂರ್ ಈ ಫೋಟೋ ಹಾಕಬಾರದಿತ್ತು: ಕಿವಿ ಹಿಂಡಿದ ಅಭಿಮಾನಿಗಳು

    ಸೋಷಿಯಲ್ ಮೀಡಿಯಾದಲ್ಲಿ ಈ ಹೋರಾಟ ಕಾವು ಪಡೆದುಕೊಂಡಿತ್ತು. ಕನ್ನಡದಲ್ಲೇ ಆರ್.ಆರ್.ಆರ್ ನೋಡುತ್ತೇವೆ. ಬೇರೆ ಭಾಷೆಯಲ್ಲಿರುವ ಚಿತ್ರವನ್ನು ತಿರಸ್ಕರಿಸುತ್ತೇವೆ ಎಂದು ಅನೇಕ ಕನ್ನಡಿಗರು ಪೋಸ್ಟ್ ಮಾಡಿದ್ದರು. ಈ ಕಾವು ಮತ್ತಷ್ಟು ಜೋರಾಗುತ್ತಿದ್ದಂತೆಯೇ ಕರ್ನಾಟಕದಲ್ಲಿ ವಿತರಣಾ ಹಕ್ಕು ಪಡೆದಿರುವ ಕೆ.ವಿ.ಎನ್ ಸಂಸ್ಥೆಯು ತುಂಬಾ ಜಾಣ್ಮೆಯ ಉತ್ತರವನ್ನು ಕೊಟ್ಟಿದೆ. ಆರ್.ಆರ್.ಆರ್ ಸಿನಿಮಾವನ್ನು ಕನ್ನಡದಲ್ಲಿ ನೋಡಲು ನೀವೇ ನಮಗೆ ಸಹಾಯ ಮಾಡಬೇಕು ಎಂದು ಕನ್ನಡ ಪರ ಹೋರಾಟಗಾರರಿಗೆ ಈ ಜವಾಬ್ದಾರಿ ಹೊರೆಸಿದೆ. ಇದನ್ನೂ ಓದಿ : ರಾಜಕೀಯ ದಾಳವಾದ ಪುನೀತ್ ನಟನೆಯ ‘ಜೇಮ್ಸ್’ ಚಿತ್ರ

    ಈ ಕುರಿತು ಡಬ್ಬಿಂಗ್ ಪರ ಹೋರಾಟಗಾರರಿಗೆ ಅದು ಸುದೀರ್ಘವಾಗಿ ಪತ್ರ ಬರೆದು, “ಆರ್.ಆರ್.ಆರ್ ನಾಯಕ ನಟರಾದ ರಾಮ್ ಚರಣ್ ಮತ್ತು ಜ್ಯೂ.ಎನ್.ಟಿ.ಆರ್ ಕನ್ನಡ ಕಲಿಯಲು ವಿಶೇಷ ಪ್ರಯತ್ನಗಳನ್ನು ಮಾಡಿ, ಮೊದಲ ಬಾರಿಗೆ ತಮ್ಮದೇ ಧ್ವನಿಯಲ್ಲಿ ಡಬ್ ಮಾಡಿದ್ದಾರೆ. ನೀವು ಕನ್ನಡ ಭಾಷೆಯಲ್ಲಿ ಈ ಮಹೋನ್ನತ ದೃಶ್ಯಕಾವ್ಯವನ್ನು ನೋಡಲು ಇಷ್ಟಪಡುತ್ತೀರಿ ಎಂದು ನಾವು ಭಾವಿಸಿದ್ದೇವೆ. ಆದ್ದರಿಂದ ಆರ್.ಆರ್.ಆರ್ ಸಿನಿಮಾವನ್ನು ಕನ್ನಡದ ಅವತರಣಿಕೆಯನ್ನು ಪ್ರದರ್ಶಿಸಲು ಹಿಂದೇಟು ಹಾಕುತ್ತಿರುವ ಥಿಯೇಟರ್ ಮಾಲೀಕರ ಮನವೊಲಿಸುವ ಕಾರ್ಯ ನಡೆಯುತ್ತಿದೆ. ಕನ್ನಡದ ಅವತರಣಿಕೆಯನ್ನು ಹೆಚ್ಚಿನ ಸ್ಕ್ರೀನ್ ಗಳಲ್ಲಿ ಬಿಡುಗಡೆ ಮಾಡಲು ಎಲ್ಲಾ ಪ್ರಯತ್ನಗಳನ್ನೂ ನಾವು ಸತತವಾಗಿ ಮಾಡುತ್ತಿದ್ದೇವೆ. ಈ ಬಗ್ಗೆ ನಾಳೆಯೊಳಗೆ ಸಂಪೂರ್ಣ ಮಾಹಿತಿ ನೀಡಲಿದ್ದೇವೆ. ಕನ್ನಡ ಅವತರಣಿಕೆಯನ್ನು ವೀಕ್ಷಿಸುವ ಮೂಲಕ ಹಾಗೂ ರಾಜ್ಯದಾದ್ಯಂತ ಹೆಚ್ಚಿನ ಪರದೆಗಳಲ್ಲಿ ಕನ್ನಡದ ಆವೃತ್ತಿಯನ್ನೇ ಬಿಡುಗಡೆ ಮಾಡುವುದಕ್ಕೆ ನಮಗೆ ನೀವು ಸಹಾಯ ಮಾಡುತ್ತೀರಿ, ನಮ್ಮನ್ನು ಬೆಂಬಲಿಸುತ್ತೀರಿ ಎಂದು ಭಾವಿಸುತ್ತೇವೆ’’ ಕನ್ನಡದ ಸಿನಿಮಾವನ್ನು ಗೆಲ್ಲಿಸುವ ಜವಾಬ್ದಾರಿ ನಿಮ್ಮದೇ ಎಂದು ಕೈ ತೊಳೆದುಕೊಂಡಿದೆ. ಇದನ್ನೂ ಓದಿ : ಸ್ವಂತ ಜಮೀನು ಮಾರಿ ಆಸ್ಪತ್ರೆ ಕಟ್ಟಿಸಲು ಮುಂದಾದ ಹಿರಿಯ ನಟಿ ಲೀಲಾವತಿ: ಬಹುಪರಾಕ್ ಹೇಳಿದ ಕನ್ನಡ ಜನತೆ

     

     

    ಇನ್ನೆರಡು ದಿನ ಕಳೆದರೆ ಆರ್.ಆರ್. ಆರ್ ಸಿನಿಮಾ ವಿಶ್ವದಾದ್ಯಂತ ಬಿಡುಗಡೆ ಆಗುತ್ತಿದೆ. ಮಾರ್ಚ್ 25ಕ್ಕೆ ಹತ್ತು ಸಾವಿರಕ್ಕೂ ಹೆಚ್ಚಿನ ಚಿತ್ರಮಂದಿರಗಳಲ್ಲಿ ಈ ಸಿನಿಮಾ ತೆರೆ ಕಾಣುತ್ತಿದೆ.

  • ಆರ್.ಆರ್.ಆರ್ ಸಿನಿಮಾದಲ್ಲಿ ಹೀರೋ ಯಾರು? ವಿಲನ್ ಯಾರು? : ರಾಜಮೌಳಿ ಕೊಟ್ಟರು ಉತ್ತರ

    ಆರ್.ಆರ್.ಆರ್ ಸಿನಿಮಾದಲ್ಲಿ ಹೀರೋ ಯಾರು? ವಿಲನ್ ಯಾರು? : ರಾಜಮೌಳಿ ಕೊಟ್ಟರು ಉತ್ತರ

    ದೇ ಮೊದಲ ಬಾರಿಗೆ ತೆಲುಗಿನ ಇಬ್ಬರೂ ಸ್ಟಾರ್ ನಟರು ಒಂದಾಗಿ ‘ಆರ್.ಆರ್.ಆರ್’ ಸಿನಿಮಾ ಮಾಡಿದ್ದಾರೆ. ಜ್ಯೂ.ಎನ್.ಟಿ.ಆರ್ ಮತ್ತು ರಾಮ್ ಚರಣ್ ತೇಜ ಅವರಿಗೆ ಅವರದ್ದೇ ಆದ ಅಭಿಮಾನಿ ಬಳಗವಿದೆ. ಈ ಇಬ್ಬರೂ ಕಲಾವಿದರ ಅಭಿಮಾನಿಗಳಿಗೆ ಒಬ್ಬರನ್ನು ಕಂಡರೆ ಒಬ್ಬರಿಗೆ ಆಗುತ್ತಿರಲಿಲ್ಲ. ಆದರೆ, ರಾಜಮೌಳಿ ಈ ಸಿನಿಮಾದಲ್ಲಿ ಇಬ್ಬರನ್ನೂ ಒಟ್ಟಾಗಿಸಿಕೊಂಡು ಸಿನಿಮಾ ಮಾಡಿದ್ದಾರೆ. ಹಾಗಾಗಿ ಈ ಸಿನಿಮಾದಲ್ಲಿ ಯಾರು ಹೀರೋ, ಯಾರು ವಿಲನ್ ಎಂಬ ಚರ್ಚೆ ಶುರುವಾಗಿದೆ.

    ಇಂದು ಆರ್.ಆರ್.ಆರ್ ಚಿತ್ರತಂಡ ಕರ್ನಾಟಕಕ್ಕೆ ಆಗಮಿಸಿದೆ. ಇಂದು ಚಿಕ್ಕಬಳ್ಳಾಪುರದಲ್ಲಿ ನಡೆಯುತ್ತಿರುವ ಪ್ರಿ  ರಿಲೀಸ್ ಇವೆಂಟ್ ನಲ್ಲಿ ಭಾಗವಹಿಸುತ್ತಿದೆ. ಅದಕ್ಕೂ ಮುನ್ನ ಮಾಧ್ಯಮ ಗೋಷ್ಠಿಯಲ್ಲಿ ಚಿತ್ರತಂಡ ಹಲವು ವಿಷಯಗಳನ್ನು ಹಂಚಿಕೊಂಡಿದೆ. ಈ ಸಿನಿಮಾದಲ್ಲಿ ಇಬ್ಬರೂ ನಾಯಕರಾ? ಅಥವಾ ಒಬ್ಬರು ವಿಲನ್ ಮತ್ತೊಬ್ಬರು ಹೀರೋನಾ ಎಂಬ ಪ್ರಶ್ನೆ ನಿರ್ದೇಶಕರಿಗೆ ಎದುರಾಗಿದೆ. ಇದನ್ನೂ ಓದಿ : ದಿ ಕಾಶ್ಮೀರ್ ಫೈಲ್ಸ್ ಮಾದರಿಯಲ್ಲಿ ಯಾವೆಲ್ಲ ಚಿತ್ರಗಳು ಬರಬೇಕು : ಪ್ರಕಾಶ್ ರೈ ಲಿಸ್ಟ್ ನೋಡಿ

    ಸಿನಿಮಾದ ಟ್ರೇಲರ್ ನೋಡಿದರೆ, ಒಬ್ಬರು ಖಳನಟರಂತೆ ಮತ್ತೊಬ್ಬರು ನಟರಂತೆ ಬಿಂಬಿಸಲಾಗಿದೆ. ಹೀಗಾಗಿ ಅಭಿಮಾನಿಗಳಿಗೆ ಯಾರು, ಯಾವ ಪಾತ್ರ ಮಾಡಿದ್ದಾರೆ ಎನ್ನುವ  ಕುತೂಹಲ ಹೆಚ್ಚಾಗಿದೆ. ಹೀಗಾಗಿ ನಿರ್ದೇಶಕ ರಾಜಮೌಳಿಗೆ ಮಾಧ್ಯಮದವರು ಈ ಪ್ರಶ್ನೆಯನ್ನು ಕೇಳಿದರು. ಅದಕ್ಕೆ ನಿರ್ದೇಶಕರಿಂದ ಬಂದ ಉತ್ತರ ಮಜವಾಗಿದೆ. ಈ ಸಿನಿಮಾದಲ್ಲಿ ಹೀರೋ ಯಾರು? ವಿಲನ್ ಯಾರು? ಎಂದು ಕೇಳಲಾದ ಪ್ರಶ್ನೆಗೆ, ಜಾಣತನದಿಂದಲೇ ಉತ್ತರ ನೀಡಿದ್ದಾರೆ ರಾಜಮೌಳಿ. ‘ಈ ಪ್ರಶ್ನೆಗೆ ಜ್ಯೂನಿಯರ್ ಎನ್.ಟಿ.ಆರ್ ಮತ್ತು ರಾಮ್ ಚರಣ್ ತೇಜ ಅವರೇ ಉತ್ತರಿಸಬೇಕು’ ಎಂದು ಜಾರಿಕೊಂಡರು.

    ಕೂಡಲೇ ಈ ಪ್ರಶ್ನೆಗೆ ಉತ್ತರಸಿದ ಜೂನಿಯರ್ ಎನ್.ಟಿ.ಆರ್. ನಾವಿಬ್ಬರೂ ವಿಲನ್. ಜತೆಗೆ ರಾಜಮೌಳಿ ಅವರೂ ವಿಲನ್ ಎಂದು ಹಾಸ್ಯ ಚಟಾಕಿ ಹಾರಿಸಿದರು. ಅಲ್ಲಿಗೆ ಇಬ್ಬರಲ್ಲ ಒಬ್ಬರು ನೆಗೆಟಿವ್ ಶೇಡ್ ರೀತಿಯ ಪಾತ್ರವನ್ನು ಮಾಡಿದ್ದಾರೆ ಎನ್ನುವುದು ಖಾತ್ರಿಯಾಗಿದೆ. ಇದನ್ನೂ ಓದಿ : ನವೀನ್ ಸಜ್ಜು ಹೀರೋ: ಯಾರಿವ ಮುತ್ತು ವಿತ್? Exclusive Photos

    ಆರ್.ಆರ್.ಆರ್. ಸಿನಿಮಾದ ಬಗ್ಗೆಯೂ ಸಾಕಷ್ಟು ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಇದೊಂದು ಪ್ಯಾನ್ ಇಂಡಿಯಾ ಸಿನಿಮಾವಾಗಿದ್ದರಿಂದ ಸಾವಿರಾರು ಚಿತ್ರಮಂದಿರಗಳಲ್ಲಿ ಸಿನಿಮಾ ರಿಲೀಸ್ ಆಗಲಿದೆಯಂತೆ. ದೇಶದಲ್ಲಿ ಮಾತ್ರವಲ್ಲ, ವಿದೇಶದಲ್ಲೂ ಸಿನಿಮಾ ಬಿಡುಗಡೆ ಆಗುತ್ತಿದೆ. ರಾಮ್ ಚರಣ್ ತೇಜ್ ಮತ್ತು ಜ್ಯೂನಿಯರ್ ಎನ್.ಟಿ.ಆರ್ ಕಾಂಬಿನೇಷನ್ ನ ಮೊದಲ ಸಿನಿಮಾವಿದು. ಆಲಿಯಾ ಭಟ್ ನಾಯಕಿಯಾಗಿ ನಟಿಸಿದ್ದಾರೆ. ಈಗಾಗಲೇ ಎಂ.ಎಂ.ಕೀರವಾಣಿ ಸಂಗೀತ  ಸಂಯೋಜನೆಯಲ್ಲಿ ಮೂಡಿ ಬಂದ ಹಾಡುಗಳು ಹಿಟ್ ಆಗಿವೆ. ಟ್ರೇಲರ್ ಕೂಡ ಭರವಸೆ ಮೂಡಿಸಿದೆ. ಸಿನಿಮಾ ಬಗ್ಗೆಯೂ ಸಾಕಷ್ಟು ನಿರೀಕ್ಷೆ ಇಟ್ಟುಕೊಳ್ಳಲಾಗಿದೆ.

  • ಜೇಮ್ಸ್ ಸಿನಿಮಾ ನೋಡಿಲ್ಲ, ನೋಡ್ತೀನಿ: ಜ್ಯೂ.ಎನ್.ಟಿ.ಆರ್

    ಜೇಮ್ಸ್ ಸಿನಿಮಾ ನೋಡಿಲ್ಲ, ನೋಡ್ತೀನಿ: ಜ್ಯೂ.ಎನ್.ಟಿ.ಆರ್

    ತೆಲುಗಿನ ಖ್ಯಾತ ನಟ ಜ್ಯೂನಿಯರ್ ಎನ್.ಟಿ.ಆರ್ ತಮ್ಮ ಆರ್.ಆರ್.ಆರ್ ಸಿನಿಮಾದ ಕಾರ್ಯಕ್ರಮಕ್ಕಾಗಿ ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ. ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ‘ಆತ್ಮೀಯ ಸ್ನೇಹಿತರಾದ ಪುನೀತ್ ರಾಜ್ ಕುಮಾರ್ ನಟನೆಯ ಜೇಮ್ಸ್ ಸಿನಿಮಾ ನೋಡುವುದಕ್ಕೆ ಆಗಿಲ್ಲ. ಆರ್.ಆರ್.ಆರ್ ಸಿನಿಮಾದ ಬಿಡುಗಡೆಯ ಬ್ಯುಸಿಯಲ್ಲಿರುವೆ. ಇದು ಸಿನಿಮಾ ರಿಲೀಸ್ ಆದ ತಕ್ಷಣವೇ ಜೇಮ್ಸ್ ಸಿನಿಮಾ ನೋಡುವೆ’ ಎಂದಿದ್ದಾರೆ ಜ್ಯೂನಿಯರ್.

    ಜ್ಯೂ.ಎನ್ಟಿಆರ್ ಮತ್ತು ಪುನೀತ್ ರಾಜ್ ಕುಮಾರ್ ಸ್ನೇಹ ಗಾಢವಾದದ್ದು. ಗೆಳೆತನದ ಕಾರಣಕ್ಕಾಗಿ ಪುನೀತ್ ಅವರ ಚಿತ್ರಕ್ಕೆ ಜೂ.ಎನ್.ಟಿ.ಆರ್ ಹಾಡು ಹೇಳಿದ್ದರು. ಇವರ ಕಾರ್ಯಕ್ರಮಕ್ಕಾಗಿ ಹಲವು ಬಾರಿ ಪುನೀತ್ ರಾಜ್ ಕುಮಾರ್ ಹೈದರಾಬಾದ್ ಗೆ ಹೋಗಿದ್ದಾರೆ. ಅಷ್ಟೊಂದು ಸ್ನೇಹ ಇವರಲ್ಲಿತ್ತು. ಇದನ್ನೂ ಓದಿ : ದಿ ಕಾಶ್ಮೀರ್ ಫೈಲ್ಸ್ ಮಾದರಿಯಲ್ಲಿ ಯಾವೆಲ್ಲ ಚಿತ್ರಗಳು ಬರಬೇಕು : ಪ್ರಕಾಶ್ ರೈ ಲಿಸ್ಟ್ ನೋಡಿ

    ಪುನೀತ್ ಸಿನಿಮಾ ಬಿಡುಗಡೆಯ ಬೆನ್ನಲ್ಲೇ ಜ್ಯೂನಿಯರ್ ಚಿತ್ರವೂ ರಿಲೀಸ್ ಆಗುತ್ತಿದೆ. ಜೇಮ್ಸ್ ಒಳ್ಳೆಯ ಓಪನಿಂಗ್ ಪಡೆದಿದೆ. ಆರ್.ಆರ್.ಆರ್. ಸಿನಿಮಾದ ಬಗ್ಗೆಯೂ ಸಾಕಷ್ಟು ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಇದೊಂದು ಪ್ಯಾನ್ ಇಂಡಿಯಾ ಸಿನಿಮಾವಾಗಿದ್ದರಿಂದ ಸಾವಿರಾರು ಚಿತ್ರಮಂದಿರಗಳಲ್ಲಿ ಸಿನಿಮಾ ರಿಲೀಸ್ ಆಗಲಿದೆಯಂತೆ. ದೇಶದಲ್ಲಿ ಮಾತ್ರವಲ್ಲ, ವಿದೇಶದಲ್ಲೂ ಸಿನಿಮಾ ಬಿಡುಗಡೆ ಆಗುತ್ತಿದೆ. ಇದನ್ನೂ ಓದಿ : ನವೀನ್ ಸಜ್ಜು ಹೀರೋ: ಯಾರಿವ ಮುತ್ತು ವಿತ್? Exclusive Photos

    ರಾಮ್ ಚರಣ್ ತೇಜ್ ಮತ್ತು ಜ್ಯೂನಿಯರ್ ಎನ್.ಟಿ.ಆರ್ ಕಾಂಬಿನೇಷನ್ ನ ಮೊದಲ ಸಿನಿಮಾವಿದು. ಆಲಿಯಾ ಭಟ್ ನಾಯಕಿಯಾಗಿ ನಟಿಸಿದ್ದಾರೆ. ಈಗಾಗಲೇ ಎಂ.ಎಂ.ಕೀರವಾಣಿ ಸಂಗೀತ  ಸಂಯೋಜನೆಯಲ್ಲಿ ಮೂಡಿ ಬಂದ ಹಾಡುಗಳು ಹಿಟ್ ಆಗಿವೆ. ಟ್ರೇಲರ್ ಕೂಡ ಭರವಸೆ ಮೂಡಿಸಿದೆ. ಸಿನಿಮಾ ಬಗ್ಗೆಯೂ ಸಾಕಷ್ಟು ನಿರೀಕ್ಷೆ ಇಟ್ಟುಕೊಳ್ಳಲಾಗಿದೆ.

  • ಆಂಧ್ರಪ್ರದೇಶ ಪ್ರವಾಹ ಸಂತ್ರಸ್ತರಿಗೆ ಮಿಡಿದ ಟಾಲಿವುಡ್ ಸ್ಟಾರ್ಸ್

    ಆಂಧ್ರಪ್ರದೇಶ ಪ್ರವಾಹ ಸಂತ್ರಸ್ತರಿಗೆ ಮಿಡಿದ ಟಾಲಿವುಡ್ ಸ್ಟಾರ್ಸ್

    ಹೈದರಾಬಾದ್: ಆಂಧ್ರಪ್ರದೇಶದಲ್ಲಿ ಪ್ರವಾಹವಾಗುತ್ತಿದ್ದು, ಅದಕ್ಕೆ ಟಾಲಿವುಡ್ ಸ್ಟಾರ್ ಗಳು ಸಂತ್ರಸ್ತರಿಗಾಗಿ ಮಿಡಿದಿದ್ದಾರೆ.

    ಆಂಧ್ರ ಪ್ರವಾಹದಿಂದ ತತ್ತರಿಸುತ್ತಿರುವ ಜನರಿಗಾಗಿ ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು 25 ಲಕ್ಷ ರೂ. ದೇಣಿಗೆ ನೀಡುವುದಾಗಿ ಪ್ರಕಟಿಸಿದ್ದಾರೆ.

    ಟ್ವೀಟ್ ಮಾಡಿದ ಅವರು, ಆಂಧ್ರಪ್ರದೇಶದಲ್ಲಿ ವಿನಾಶಕಾರಿ ಪ್ರವಾಹವಾಗುತ್ತಿದೆ. ನಾನು ಸಿಎಂಆಎರ್‍ಎಫ್ ನಿಧಿಗೆ 25 ಲಕ್ಷ ರೂ. ನೀಡಲು ಬಯಸುತ್ತೇನೆ. ಈ ಬಿಕ್ಕಟ್ಟಿನ ಸಮಯದಲ್ಲಿ ಎಪಿಗೆ ಸಹಾಯ ಮಾಡಲು ಎಲ್ಲರೂ ಮುಂದೆ ಬರಲು ವಿನಂತಿಸಿಕೊಳ್ಳುತ್ತೇನೆ ಎಂದು ಜನರಲ್ಲಿ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಸ್ನೇಹಿತರು ಒಬ್ಬರಿಗೊಬ್ಬರು ಟ್ವೀಟ್ ಮಾಡಬಾರದೇ – ಅಭಿಮಾನಿಗಳಲ್ಲಿ ಶ್ರೇಯಾ ಪ್ರಶ್ನೆ

    ಮಹೇಶ್ ಬಾಬು ಮಾತ್ರವಲ್ಲ ಟಾಲಿವುಡ್ ನ ಮತ್ತೊಬ್ಬ ಸೂಪರ್ ಸ್ಟಾರ್ ಜ್ಯೂ.ಎನ್ ಟಿಆರ್ ಸಹ ಸಂತ್ರಸ್ತರಿಗೆ ಸಹಾಯ ಮಾಡಲು ಮುಂದಾಗಿದ್ದು, ಆಂಧ್ರಪ್ರದೇಶದಲ್ಲಿ ಇತ್ತೀಚೆಗೆ ಸಂಭವಿಸಿದ ಪ್ರವಾಹದಿಂದ ಸಂತ್ರಸ್ತರಾದ ಜನರು ದುಃಸ್ಥಿತಿಯಲ್ಲಿ ಇದ್ದಾರೆ. ಅದಕ್ಕೆ ನಾನು ಅವರ ಚೇತರಿಕೆಗೆ ಒಂದು ಸಣ್ಣ ಹೆಜ್ಜೆಯನ್ನು ಇಡುತ್ತಿದ್ದು, ಸಿಎಂ ಪರಿಹಾರ ನಿಧಿಗೆ 25 ಲಕ್ಷವನ್ನು ನೀಡುತ್ತಿದ್ದೇನೆ ಎಂದು ಬರೆದು ಅಭಿಮಾನಿಗಳಲ್ಲಿ ನೀವು ಸಹ ಸಹಾಯ ಮಾಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

    ಆಂಧ್ರಪ್ರದೇಶದಲ್ಲಿ ಪ್ರಕೃತಿ ವಿಕೋಪದಿಂದ ನೂರಾರು ಜನರು ತಮ್ಮ ಮನೆಗಳನ್ನು ಕಳೆದುಕೊಂಡು ಕಷ್ಟ ಪಡುತ್ತಿದ್ದಾರೆ. ಟಾಲಿವುಡ್ ಸ್ಟಾರ್ ಗಳು ಆಂಧ್ರ ಸಿಎಂ ಪರಿಹಾರ ನಿಧಿಗೆ ತಲಾ 25 ಲಕ್ಷ ದೇಣಿಗೆ ನೀಡುವ ಮೂಲಕ ತಮ್ಮ ಅಭಿಮಾನಿಗಳಿಗೆ ಸಂದೇಶವನ್ನು ನೀಡಿದ್ದಾರೆ. ಇದನ್ನೂ ಓದಿ:  ಉತ್ತರ ಪ್ರದೇಶದ ಸರ್ಕಾರಿ ನೌಕರರು, ವಕೀಲರಿಗೆ 1 ರೂ.ಗೆ ಸಿಗಲಿದೆ ಮನೆ

    ಆಂಧ್ರ ಸಿಎಂ ವೈ.ಎಸ್.ಜಗನ್ಮೋಹನ್ ರೆಡ್ಡಿ ಅವರು ಸಂತ್ರಸ್ತರ ಕಷ್ಟವನ್ನು ತಿಳಿದುಕೊಳ್ಳಲು ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡಿದ್ದಾರೆ.