Tag: JNU student

  • ಚುನಾವಣೆ ವಿಚಾರಕ್ಕೆ ಜೆಎನ್‌ಯು ವಿದ್ಯಾರ್ಥಿಗಳ ಮಧ್ಯೆ ಘರ್ಷಣೆ

    ಚುನಾವಣೆ ವಿಚಾರಕ್ಕೆ ಜೆಎನ್‌ಯು ವಿದ್ಯಾರ್ಥಿಗಳ ಮಧ್ಯೆ ಘರ್ಷಣೆ

    – ವಿದ್ಯಾರ್ಥಿಗಳ ಮೇಲೆ ಸೈಕಲ್‌ ಎಸೆದ ವ್ಯಕ್ತಿ

    ನವದೆಹಲಿ: ವಿದ್ಯಾರ್ಥಿ ಸಂಘದ ಚುನಾವಣೆ ವಿಚಾರವಾಗಿ ಜೆಎನ್‌ಯು (JNU Students) ವಿದ್ಯಾರ್ಥಿ ಗುಂಪುಗಳು ಗಲಾಟೆ ಮಾಡಿಕೊಂಡಿರುವ ಘಟನೆ ಗುರುವಾರ ತಡರಾತ್ರಿ ನಡೆದಿದೆ.

    ಗುರುವಾರ ರಾತ್ರಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ಮತ್ತು ಎಡ ಬೆಂಬಲಿತ ಗುಂಪುಗಳ ನಡುವಿನ ಗಲಾಟೆಯಲ್ಲಿ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ (JNU) ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ದೀದಿ ಸರ್ಕಾರ ಉರುಳಿಸೋ ವರೆಗೂ ತಲೆ ಕೂದಲು ಬೆಳೆಸಲ್ಲ: ಶಪಥ ಮಾಡಿದ್ದ ‘ಕೈ’ ನಾಯಕ ಬಿಜೆಪಿ ಸೇರ್ಪಡೆ

    ಮುಂಬರುವ ವಿದ್ಯಾರ್ಥಿಗಳ ಒಕ್ಕೂಟದ ಚುನಾವಣೆಗಾಗಿ ಸಾಮಾನ್ಯ ಸಭೆ ನಡೆಸಲಾಗಿತ್ತು. ಈ ವೇಳೆ ಪರಸ್ಪರ ವಿದ್ಯಾರ್ಥಿಗಳು ಹೊಡೆದಾಡಿಕೊಳ್ಳುತ್ತಿರುವ ದೃಶ್ಯದ ವೀಡಿಯೋ ವೈರಲ್‌ ಆಗಿದೆ. ಕಳೆದ ರಾತ್ರಿ ಭಾಷಾ ಶಾಲೆಯಲ್ಲಿ ಚುನಾವಣಾ ಸಮಿತಿ ಸದಸ್ಯರ ಆಯ್ಕೆ ವಿಚಾರದಲ್ಲಿ ಗುಂಪುಗಳ ನಡುವೆ ವಾಗ್ವಾದ ನಡೆದು ವಿದ್ಯಾರ್ಥಿಗಳು ಪರಸ್ಪರ ಹೊಡೆದಾಡಿಕೊಂಡಿದ್ದಾರೆ.

    ಒಬ್ಬ ವಿದ್ಯಾರ್ಥಿಯ ತಲೆಯಿಂದ ರಕ್ತಸ್ರಾವವಾಗುತ್ತಿರುವುದು ಮತ್ತು ವ್ಯಕ್ತಿಯೊಬ್ಬ ವಿದ್ಯಾರ್ಥಿಗಳ ಗುಂಪಿನ ಮೇಲೆ ಸೈಕಲ್‌ ಎಸೆಯುತ್ತಿರುವ ದೃಶ್ಯವು ವೀಡಿಯೋಗಳಲ್ಲಿ ಸೆರೆಯಾಗಿದೆ. ಗಲಾಟೆಯಲ್ಲಿ ಗಾಯಗೊಂಡವರನ್ನು ಸಫ್ದರ್‌ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಜೆಎನ್‌ಯು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: LPG Price Hike: ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 25 ರೂ. ಹೆಚ್ಚಳ

    ಘಟನೆಯ ಕುರಿತು ವಿಶ್ವವಿದ್ಯಾನಿಲಯ ಆಡಳಿತವು ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಘರ್ಷಣೆ ಸಂಬಂಧ ವಿದ್ಯಾರ್ಥಿ ಗುಂಪುಗಳು ಪರಸ್ಪರ ಮೇಲೆ ಆರೋಪ ಮಾಡಿದ್ದಾರೆ. ಆದರೆ, ಈ ಕುರಿತು ಯಾವುದೇ ದೂರುಗಳು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

    ಎಡ-ಸಂಯೋಜಿತ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಫೆಡರೇಶನ್ (ಡಿಎಸ್‌ಎಫ್) ಮತ್ತು ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್‌ಎ) ಎಬಿವಿಪಿ ಸದಸ್ಯರು ಸಭೆಗೆ ಅಡ್ಡಿಪಡಿಸಿದರು. ವಿದ್ಯಾರ್ಥಿಗಳು ಮತ್ತು ಸೆಕ್ಯುರಿಟಿ ಗಾರ್ಡ್‌ಗಳಿಗೆ ಬೆದರಿಕೆ ಹಾಕಿದರು. ಜಾತಿ ನಿಂದನೆ ಪದ ಬಳಕೆ ಕೂಡ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

  • ದೆಹಲಿ ಗಲಭೆ ಕಲ್ಲು ತೂರಾಟ ಕೇಸ್‍ನಲ್ಲಿ ಉಮರ್ ಖಾಲಿದ್ ಖುಲಾಸೆ, ಬಿಡುಗಡೆ ಭಾಗ್ಯವಿಲ್ಲ

    ದೆಹಲಿ ಗಲಭೆ ಕಲ್ಲು ತೂರಾಟ ಕೇಸ್‍ನಲ್ಲಿ ಉಮರ್ ಖಾಲಿದ್ ಖುಲಾಸೆ, ಬಿಡುಗಡೆ ಭಾಗ್ಯವಿಲ್ಲ

    ನವದೆಹಲಿ: 2020ರ ದೆಹಲಿ ಗಲಭೆಗೆ ಸಂಬಂಧಿಸಿ ಪ್ರಕರಣದಲ್ಲಿ ಆರೋಪಿಯಾಗಿದ್ದ ಜೆಎನ್‍ಯು ವಿದ್ಯಾರ್ಥಿ ಸಂಘದ ಮಾಜಿ ನಾಯಕ (Former  JNU Student) ಉಮರ್ ಖಾಲಿದ್‍ಗೆ (Umar Khalid) ಬಿಗ್ ರಿಲೀಫ್ ಸಿಕ್ಕಿದ್ದು, ದೆಹಲಿ ನ್ಯಾಯಾಲಯ (Delhi Court) ಖುಲಾಸೆಗೊಳಿಸಿದೆ.

    ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಪುಲಸ್ತ್ಯ ಪ್ರಮಾಚಲ ಈ ತೀರ್ಪನ್ನು ನೀಡಿದ್ದಾರೆ. ಉಮರ್ ಖಾಲಿದ್ ಹಾಗೂ ಮತ್ತೋರ್ವ ಜೆಎನ್‍ಯು ಮಾಜಿ ವಿದ್ಯಾರ್ಥಿ ಹಾಗೂ ಯುನೈಟೆಡ್ ಅಗೈನ್ಸ್ಟ್‍ಹೇಟ್ ಸಂಸ್ಥಾಪಕ ಖಾಲಿದ್ ಸೈಫಿ ಎರಡು ವರ್ಷದ ಹಿಂದೆ ದೆಹಲಿಯ ಚಾಂದ್‍ಬಾಗ್‍ನಲ್ಲಿ ನಡೆದ ಕಲ್ಲು ತೂರಾಟ ಪ್ರಕರಣದಲ್ಲಿ (Stone-Throwing Case) ಭಾಗಿಯಾಗಿದ್ದಾರೆ ಎಂಬ ಆರೋಪದ ಮೇರೆಗೆ ಬಂಧಿಸಲಾಗಿತ್ತು.

    ಈ ಪ್ರಕರಣಕ್ಕೆ ಸಂಬಂಧಿಸಿ ದೆಹಲಿಯ ಕರ್ಕರ್ಡೂಮಾ ನ್ಯಾಯಾಲಯ ಇಂದು ತೀರ್ಪು ನೀಡಿದ್ದು, ದೆಹಲಿಯ ಚಾಂದ್‍ಬಾಗ್‍ನಲ್ಲಿ ನಡೆದ ಕಲ್ಲು ತೂರಾಟ ಪ್ರಕರಣದಲ್ಲಿ ಖಾಲಿದ್ ಮತ್ತು ಸೈಫಿ ವಿರುದ್ಧ ಸಾಕ್ಷ್ಯಾಧಾರಗಳ ಕೊರೆತೆಯಿಂದಾಗಿ ಅವರನ್ನು ಖುಲಾಸೆಗೊಳಿಸಿದೆ. ಆದರೆ ದೆಹಲಿ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿ ಉಮರ್ ಖಾಲಿದ್‍ಗೆ ಜಾಮೀನು ಸಿಕ್ಕಿದ್ದರೂ, ಬಿಡುಗಡೆ ಭಾಗ್ಯ ಇನ್ನು ದೊರೆತಿಲ್ಲ.

    ಉಮರ್ ಖಲೀದ್ ಈಗಾಗಲೇ ದೆಹಲಿ ಕಲ್ಲು ತೂರಾಟ ಪ್ರಕರಣವೊಂದೇ ಅಲ್ಲದೇ ಭಯೋತ್ಪಾದನಾ ಚಟುವಟಿಕೆಯಲ್ಲೂ ಭಾಗಿಯಾಗಿರುವ ಆರೋಪವನ್ನು ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಸ್ತುತ ಇನ್ನೂ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇದನ್ನೂ ಓದಿ: ಬಿಜೆಪಿ, ಆರ್‌ಎಸ್‍ಎಸ್ ವಿರುದ್ಧ ರಾಹುಲ್ ಸೀತಾ ಅಸ್ತ್ರ

    2020ರ ಫೆಬ್ರವರಿ 20 ರಂದು ದೆಹಲಿಯಲ್ಲಿ ನಡೆದ ಕೋಮು ಗಲಭೆ ಪ್ರಕರಣದಲ್ಲಿ ಉಮರ್ ಖಾಲಿದ್ ಬಂಧನವಾಗಿತ್ತು. ಪ್ರಕರಣದಲ್ಲಿ ಒಳಸಂಚು ಮಾಡಿರುವುದಾಗಿ ಆರೋಪಿಸಿ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಪ್ರಕರಣ ದಾಖಲಿಸಲಾಗಿತ್ತು. ಗಲಭೆ ವೇಳೆ 53 ಜನ ಮೃತಪಟ್ಟಿದ್ದು, 700 ಹೆಚ್ಚು ಜನರಿಗೆ ಗಾಯಗಳಾಗಿತ್ತು.  ಇದನ್ನೂ ಓದಿ: ವರದಕ್ಷಿಣೆ ಕಿರುಕುಳ ಆರೋಪ- ಮದುವೆಯಾಗಿ ಒಂದೂವರೆ ವರ್ಷಕ್ಕೆ ಗೃಹಿಣಿ ಆತ್ಮಹತ್ಯೆ

    Live Tv
    [brid partner=56869869 player=32851 video=960834 autoplay=true]