Tag: Jo Lindner

  • ಫೇಮಸ್‌ ಬಾಡಿ ಬಿಲ್ಡರ್‌ ಜೋ ಲಿಂಡ್ನರ್‌ 30ನೇ ವಯಸ್ಸಿಗೆ ನಿಧನ

    ಫೇಮಸ್‌ ಬಾಡಿ ಬಿಲ್ಡರ್‌ ಜೋ ಲಿಂಡ್ನರ್‌ 30ನೇ ವಯಸ್ಸಿಗೆ ನಿಧನ

    ಬ್ಯಾಂಕಾಕ್‌: ಫಿಟ್ನೆಸ್‌ (Fitness), ಬಾಡಿ ಬಿಲ್ಡಿಂಗ್‌ ಮೂಲಕ ಸೋಶಿಯಲ್‌ ಮೀಡಿಯಾದಲ್ಲಿ ಹವಾ ಸೃಷ್ಟಿಸಿದ್ದ ಬಾಡಿ ಬಿಲ್ಡರ್‌ ಜೋ ಲಿಂಡ್ನರ್‌ (Jo Lindner) 30ನೇ ವಯಸ್ಸಿಗೆ ನಿಧನರಾಗಿದ್ದಾರೆ.

     

    View this post on Instagram

     

    A post shared by NICHA (@immapeaches)

    ರಕ್ತನಾಳ ಸಮಸ್ಯೆಯಿಂದ ಬಳಲುತ್ತಿದ್ದ ಲಿಂಡ್ನರ್‌ ನಿಧನ ಹೊಂದಿದ್ದು, ಅವರ ಗೆಳತಿ ನಿಚಾ ಸಾವಿನ ಸುದ್ದಿಯನ್ನ ತಮ್ಮ ಇನ್ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಜೋ ಲಿಂಡ್ನರ್ ತಮ್ಮ ಇನ್ಸ್ಟಾಗ್ರಾಮ್‌ನಲ್ಲಿ ಫಿಟ್ನೆಸ್‌ ಕುರಿತ ವಿಡಿಯೋ ಹಂಚಿಕೊಂಡಿದ್ದರು ಎಂಬುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಫ್ರಾನ್ಸ್‌ ಧಗ ಧಗ – ಭದ್ರತೆಗೆ 45 ಸಾವಿರ ಪೊಲೀಸರ ನಿಯೋಜನೆ, 994 ಮಂದಿ ಅರೆಸ್ಟ್‌

    ಥಾಯ್‌ಲ್ಯಾಂಡ್‌ನಲ್ಲಿ ವೇಟ್ ಲಿಫ್ಟಿಂಗ್ ಹಾಗೂ ಬಾಡಿ ಬಿಲ್ಡಿಂಗ್ (Bodybuilding) ಮೂಲಕ ಲೆಜೆಂಡ್‌ ಎಂದೇ ಗುರುತಿಸಿಕೊಂಡಿದ್ದ ಜೋ ಲಿಂಡ್ನರ್ ಸೋಶಿಯಲ್ ಮೀಡಿಯಾ ಮೂಲಕ ಅಭಿಮಾನಿಗಳಿಗೆ ಫಿಟ್ನೆಸ್‌ ಟಿಪ್ಸ್‌ ನೀಡುತ್ತಿದ್ದರು. ಜೊತೆಗೆ ಲಿಂಡ್ನರ್‌ ತಮ್ಮದೇ ಯುಟ್ಯೂಬ್‌ ಚಾನೆಲ್‌ ಆರಂಭಿಸಿ ತಾನು ಅಭ್ಯಾಸ ಮಾಡುವ ವೇಳೆ ಫಿಟ್ನೆಸ್‌ ಸಲಹೆಗಳನ್ನ ಅದರಲ್ಲಿ ಹಂಚಿಕೊಳ್ಳುತ್ತಿದ್ದರು. ಇದನ್ನೂ ಓದಿ: ಮೋದಿಯವರ `ಮೇಕ್ ಇನ್ ಇಂಡಿಯಾ’ ಭಾರತದ ಆರ್ಥಿಕತೆ ಮೇಲೆ ಭಾರೀ ಪ್ರಭಾವ ಬೀರಿದೆ: ಪುಟಿನ್

    ತಮ್ಮದೇ ಅಭಿಮಾನಿ ಬಳಗ ಸೃಷ್ಟಿಸಿಕೊಂಡಿದ್ದ ಲಿಂಡ್ನರ್‌ ಯುಟ್ಯೂಬ್‌ನಲ್ಲಿ 940,000 ಚಂದಾದಾರರು ಹಾಗೂ ಇನ್ಸ್ಟಾಗ್ರಾಮ್‌ನಲ್ಲಿ 8.5 ದಶಲಕ್ಷ ಫಾಲೋವರ್ಸ್‌ಗಳನ್ನ ಹೊಂದಿದ್ದರು. ಪ್ರತಿದಿನ ಯುಟ್ಯೂಬ್‌ನಲ್ಲಿ ಫಿಟ್ನೆಸ್‌ ತರಬೇತಿ ಜೊತೆಗೆ ಆಹಾರ ಸೇವನೆಯ ಕ್ರಮದ ಬಗ್ಗೆಯೂ ಸಲಹೆ ನೀಡುತ್ತಿದ್ದರು. ಇದರಿಂದ ಥಾಯ್‌ಲ್ಯಾಂಡ್‌ನಲ್ಲಿ ಹೆಚ್ಚು ಜನಪ್ರಿಯತೆ ಗಳಿಸಿದ್ದರು.

    ಲಿಂಡ್ನರ್‌ ಸಾವಿನ ಸುದ್ದಿ ಕೇಳಿ ಅಭಿಮಾನಿಗಳು ಆಘಾತಕ್ಕೊಳಗಾಗಿದ್ದಾರೆ. ಬಾಡಿಬಿಲ್ಡಿಂಗ್‌ ಲೋಕದ ಲೆಜೆಂಡ್‌ ಅನ್ನು ನಾವು ಕಳೆದುಕೊಂಡಿದ್ದೇವೆ ಎಂದು ಸಂತಾಪ ಸೂಚಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]