Tag: John cena

  • ಅನಂತ್‌ ಅಂಬಾನಿ-ರಾಧಿಕಾ ಮರ್ಚೆಂಟ್‌ ವಿವಾಹ; ತೆಂಡೂಲ್ಕರ್‌, ಜಾನ್‌ ಸೀನಾ ಭಾಗಿ

    ಅನಂತ್‌ ಅಂಬಾನಿ-ರಾಧಿಕಾ ಮರ್ಚೆಂಟ್‌ ವಿವಾಹ; ತೆಂಡೂಲ್ಕರ್‌, ಜಾನ್‌ ಸೀನಾ ಭಾಗಿ

    ಮುಂಬೈ: ಉದ್ಯಮಿ ಮುಕೇಶ್‌ ಅಂಬಾನಿ (Mukesh Ambani) ಅವರ ಪುತ್ರ ಅನಂತ್‌ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್‌ (Anant Ambani-Radhika Merchant Wedding) ಅವರ ಅದ್ಧೂರಿ ವಿವಾಹಕ್ಕೆ ಗಣ್ಯರು, ತಾರಾಗಣ ಸಾಕ್ಷಿಯಾಗಿದೆ. ಇಲ್ಲಿನ ಜಿಯೋ ವರ್ಲ್ಡ್‌ ಕನ್ವೆನ್ಷನ್‌ ಸೆಂಟರ್‌ನಲ್ಲಿ ನಡೆಯುತ್ತಿರುವ ವಿವಾಹ ಸಮಾರಂಭಕ್ಕೆ ಕ್ರಿಕೆಟ್‌ ದೇವರು ಸಚಿನ್‌ ತೆಂಡೂಲ್ಕರ್‌ (Sachin Tendulkar), ಡಬ್ಲ್ಯೂಡಬ್ಲ್ಯೂಇ ಸ್ಟಾರ್‌ ಜಾನ್‌ ಸೀನಾ ಆಗಮಿಸಿದ್ದಾರೆ.

    ಕುಟುಂಬದವರೊಂದಿಗೆ ತೆಂಡೂಲ್ಕರ್‌ ವಿವಾಹ ಸಮಾರಂಭಕ್ಕೆ ಆಗಮಿಸಿದ್ದಾರೆ. ಭಾರೀ ಮಳೆಯ ನಡುವೆ ಮಾಜಿ ಕ್ರಿಕೆಟಿಗ ಕಾರಿನಿಂದ ಇಳಿಯುತ್ತಿರುವ ದೃಶ್ಯ ಕ್ಯಾಮೆರಾಗಳ ಕಣ್ಣಲ್ಲಿ ಸೆರೆಯಾಗಿದೆ. ಮಧ್ಯರಾತ್ರಿಯ ಸುಮಾರಿಗೆ, ಬಾಲಿವುಡ್‌ ಸೂಪರ್ ಸ್ಟಾರ್ ಶಾರುಖ್ ಖಾನ್ ಮದುವೆಯಲ್ಲಿ ಪಾಲ್ಗೊಳ್ಳಲು ಮುಂಬೈಗೆ ಬಂದಿಳಿದಿದ್ದರು. ಇದನ್ನೂ ಓದಿ: ಅಂಬಾನಿ ಮಗನ ಮದುವೆಯಲ್ಲಿ ರಾಕಿ ಭಾಯ್- ಯಶ್‌ ಗೆಟಪ್‌ಗೆ ಫ್ಯಾನ್ಸ್‌ ಫಿದಾ

    ಅನಂತ್‌-ರಾಧಿಕಾ ವಿವಾಹ ಸಮಾರಂಭದಲ್ಲಿ ಪಾಲ್ಗೊಳ್ಳಲು ಜಾನ್‌ ಸೀನಾ (John Cena) ಕೂಡ ಮುಂಬೈಗೆ ಶುಕ್ರವಾರ ಬಂದಿಳಿದರು. ಆ ಮೂಲಕ ಭಾರತದ ಮೇಲಿನ ತಮ್ಮ ಪ್ರೀತಿಯನ್ನು ಡಬ್ಲ್ಯೂಡಬ್ಲ್ಯೂಇ ಸ್ಟಾರ್‌ ವ್ಯಕ್ತಪಡಿಸಿದ್ದಾರೆ.

    ಅಲ್ಲದೇ, ಬಿಹಾರ್‌ ಮಾಜಿ ಸಿಎಂ ಲಾಲು ಪ್ರಸಾದ್‌ ಯಾದವ್‌ ಕುಟುಂಬ, ಸಮಾಜವಾದಿ ಪಕ್ಷದ ಅಖಿಲೇಶ್‌ ಯಾದವ್‌, ಕನ್ನಡದ ಸ್ಟಾರ್‌ ನಟ ಯಶ್‌-ರಾಧಿಕಾ ಪಂಡಿತ್‌ ದಂಪತಿ ಸೇರಿದಂತೆ ಅನೇಕ ಗಣ್ಯರು, ಸೆಲೆಬ್ರಿಟಿಗಳು ಅಂಬಾನಿ ಪುತ್ರನಿಗೆ ಶುಭಕೋರಲು ಆಗಮಿಸಿದ್ದಾರೆ. ಇದನ್ನೂ ಓದಿ: ನನ್ನ ಭೇಟಿಗೆ ಬರುವವರು ಕಡ್ಡಾಯವಾಗಿ ಆಧಾರ್‌ ತನ್ನಿ: ಕಂಗನಾ ರಣಾವತ್‌!

  • WWEಗೆ ನಿವೃತ್ತಿ ಹೇಳಿದ ಜಾನ್‌ ಸೀನಾ

    WWEಗೆ ನಿವೃತ್ತಿ ಹೇಳಿದ ಜಾನ್‌ ಸೀನಾ

    ಟೊರೊಂಟೊ: 16 ಬಾರಿ WWE ಚಾಂಪಿಯನ್ ಆಗಿರುವ 47 ವರ್ಷದ ಜಾನ್ ಸೀನಾ (John Cena) 2025 ರಿಂದ ನಾನು ಸ್ಪರ್ಧೆಗೆ ನಿವೃತ್ತಿ ಹೇಳುತ್ತೇನೆ ಎಂದು ಘೋಷಿಸಿದ್ದಾರೆ.

    ಟೊರೊಂಟೊದಲ್ಲಿ ನಡೆದ ‘ಮನಿ ಇನ್ ದಿ ಬ್ಯಾಂಕ್’ ಕಾರ್ಯಕ್ರಮದಲ್ಲಿ ಜಾನ್ ಸೀನಾ ಅವರು ತಮ್ಮ ನಿವೃತ್ತಿ ನಿರ್ಧಾರವನ್ನು ಘೋಷಿಸಿದರು.  ಇದನ್ನೂ ಓದಿ: ಓದಿದ್ದು 10ನೇ ತರಗತಿ ಮಾಡುವುದು ಡಾಕ್ಟರ್ ವೃತ್ತಿ- ಬಾಗಲಕೋಟೆಯಲ್ಲಿದ್ದಾರೆ 384 ನಕಲಿ ವೈದ್ಯರು

    ಇಂದು ರಾತ್ರಿ ನಾನು WWE ಗೆ ನನ್ನ ನಿವೃತ್ತಿಯನ್ನು ಅಧಿಕೃತವಾಗಿ ಘೋಷಿಸುತ್ತೇನೆ ಎಂದು ಜಾನ್ ಸೀನಾ ಹೇಳಿದರು. ಮುಂದುವರಿಸಿ ನಾನು ತಕ್ಷಣವೇ ನಿವೃತ್ತಿ ಹೇಳುವುದಿಲ್ಲ. 2025 ರ ರಾಯಲ್ ರಂಬಲ್, ಎಲಿಮಿನೇಷನ್ ಚೇಂಬರ್, ಲಾಸ್ ವೇಗಾಸ್‌ನಲ್ಲಿ ರೆಸಲ್ಮೇನಿಯಾ 41 ರಲ್ಲಿ ಅಲೆಜಿಯಂಟ್ ಸ್ಟೇಡಿಯಂನಲ್ಲಿ ಸ್ಪರ್ಧಿಸುವುದಾಗಿ ಹೇಳಿದರು. ಇದನ್ನೂ ಓದಿ: ಬಬಲೇಶ್ವರ | ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯ ಬಾಯ್ಲರ್ ಸ್ಫೋಟ

    2002 ರಲ್ಲಿ WWE ಗೆ ಜಾನ್ ಸೀನಾ ಪಾದಾರ್ಪಣೆ ಮಾಡಿದ್ದರು. ಕುಸ್ತಿಯ ಜೊತೆಗೆ ಜಾನ್ ಸೀನಾ ಫಾಸ್ಟ್ ಎಕ್ಸ್, ದಿ ಇಂಡಿಪೆಂಡೆಂಟ್, ದಿ ಸೂಸೈಡ್ ಸ್ಕ್ವಾಡ್‌ನಂತಹ ಚಲನ ಚಿತ್ರಗಳಲ್ಲಿ ಜಾನ್ ಸೀನಾ ಅಭಿನಯಿಸಿದ್ದಾರೆ.

     

  • ‘ಆಸ್ಕರ್’ ವೇದಿಕೆಯ ಮೇಲೆ ಬೆತ್ತಲೆ: ಜಾನ್ ಸೇನಾ ವಿರುದ್ಧ ಭಾರೀ ಟೀಕೆ

    ನಿನ್ನೆಯಷ್ಟೇ ನಡೆದ ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಡಬ್ಲುಡಬ್ಲುಇ ಸ್ಟಾರ್ ಹಾಗೂ ಹಾಲಿವುಡ್ ನಟ ಜಾನ್ ಸೇನಾ, ಬೆತ್ತಲೆಯಾಗಿ ವೇದಿಕೆಗೆ ಆಗಮಿಸಿದ್ದರು. ಈ ನಡೆ ಭಾರೀ ಟೀಕೆಗೆ ವ್ಯಕ್ತವಾಗಿದೆ. ಜಗತ್ತಿನ ಸಾಕಷ್ಟು ದಿಗ್ಗಜರು ಸೇರಿದಂತೆ ಸಿನಿ ಪ್ರೇಮಿಗಳು ಈ ನಡೆಯನ್ನು ಖಂಡಿಸಿದ್ದಾರೆ. ಪ್ರತಿಷ್ಠಿತ ವೇದಿಕೆಯಲ್ಲಿ ಇಂಥದ್ದೆಲ್ಲ ಆಗಬಾರದು ಎಂದು ಸಲಹೆ ನೀಡಿದ್ದಾರೆ.

    ಆಸ್ಕರ್ ‍ಪ್ರಶಸ್ತಿ (Oscar Award) ಪ್ರದಾನ ಸಮಾರಂಭದಲ್ಲಿ ಒಂದಿಲ್ಲೊಂದು ಎಡವಟ್ಟು ನಡೆಯೋದು ಕಾಮನ್ ಅನ್ನುವಂತಾಗಿದೆ. ಕೆಲವನ್ನು ಆಸ್ಕರ್ ಸಮಿತಿಯೇ ಡಿಸೈನ್ ಮಾಡಿದರೆ, ಇನ್ನೂ ಕೆಲವು ತಾನಾಗಿಯೇ ಅಲ್ಲಿ ನಡೆದು ಬಿಡುತ್ತವೆ. ಈವರೆಗೂ ನಡೆದ ಎಲ್ಲ ಸಂಗತಿಗಳು ವೈರಲ್ ಆಗುವುದರ ಜೊತೆಗೆ ವಿವಾದವನ್ನೂ ಹುಟ್ಟು ಹಾಕಿವೆ.

    ಈ ಬಾರಿಯ ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅತ್ಯುತ್ತಮ ಕಾಸ್ಟ್ಯೂಮ್ ಡಿಸೈನರ್ ಪ್ರಶಸ್ತಿಯನ್ನು ಘೋಷಣೆ ಮಾಡುವುದಕ್ಕಾಗಿ ಖ್ಯಾತ ಹಾಲಿವುಡ್ ನಟ, ಡಬ್ಲುಡಬ್ಲುಇ ಸ್ಟಾರ್ ಜಾನ್ ಸೇನಾ  (John Cena)ಬೆತ್ತಲೆಯಾಗಿ (Nude) ವೇದಿಕೆಗೆ ಬಂದಿದ್ದರು. ಸ್ಟೋರಿ ಬೋರ್ಡ್ ನಿಂದ ಖಾಸಗಿ ಅಂಗಾಂಗ ಮುಚ್ಚಿಕೊಂಡು ಮೈಕ್ ಮುಂದೆ ನಿಂತಿದ್ದರು. ನಂತರ ಅವರಿಗೆ ವೇದಿಕೆಯ ಮೇಲೆ ಡಿಸೈನರ್ ಬಟ್ಟೆ ತೊಡಿಸಲಾದರೂ, ಈ ನಡೆ ಸಾಕಷ್ಟು ವಿರೋಧಕ್ಕೆ ಕಾರಣವಾಗಿದೆ.

    ಪ್ರತಿಷ್ಠಿತ 96ನೇ ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭ ಅಮೆರಿಕಾದ ಲಾಸ್ ಏಂಜಲೀಸ್ ನ ಡಾಲ್ಬಿ ಚಿತ್ರಮಂದಿರದಲ್ಲಿ ನಡೆಯಿತು. ಅತ್ಯಂತ ಕುತೂಹಲ ಮೂಡಿಸಿದ್ದ ನಾಮ ನಿರ್ದೇಶನ ಪಟ್ಟಿಯಲ್ಲಿ ಯಾರೆಲ್ಲ ಪ್ರಶಸ್ತಿ ಪಡೆಯಲಿದ್ದಾರೆ ಎನ್ನುವ ಸಹಜ ನಿರೀಕ್ಷೆ ಇದ್ದೇ ಇತ್ತು. ಈ ಬಾರಿ ಅತ್ಯುತ್ತಮ ನಟ ಪ್ರಶಸ್ತಿಯು ಓಪನ್ ಹೈಮರ್ ಸಿನಿಮಾಗಾಗಿ ಸಿಲಿಯನ್ ಮರ್ಫಿ ಪಡೆದುಕೊಂಡರೆ, ಅತ್ಯುತ್ತಮ ನಟಿ ಪ್ರಶಸ್ತಿಯು ಪೂರ್ ಥಿಂಗ್ಸ್ ಸಿನಿಮಾಗಾಗಿ ಎಮ್ಮಾ ಸ್ಟೋನ್ ಪಡೆದುಕೊಂಡಿದ್ದಾರೆ.

     

    ಅತ್ಯುತ್ತಮ ಚಿತ್ರ ಪ್ರಶಸ್ತಿಯು ಓಪನ್ ಹೈಮರ್ ಚಿತ್ರ ಪಡೆದುಕೊಂಡಿದೆ. ಅತ್ಯುತ್ತಮ ನಿರ್ದೇಶಕ ಕ್ರಿಸ್ಟೋಫರ್ ನೋಲನ್ ಓಪನ್ ಹೈಮರ್ ಚಿತ್ರಕ್ಕಾಗಿ ಪಡೆದುಕೊಂಡಿದ್ದಾರೆ. ಓಪನ್ ಹೈಮರ್ ಚಿತ್ರದ ನಟನೆಗಾಗಿ ರಾಬರ್ಟ್ ಡೌನಿ ಜ್ಯೂ ಅತ್ಯುತ್ತಮ ಪೋಷಕ ನಟ ಪ್ರಶಸ್ತಿ ಸಂದಿದ್ದರೆ, ದಿ ಹೋಲ್ಡೋವರ್ಸ್ ಸಿನಿಮಾದಲ್ಲಿನ ಅಭಿನಯಕ್ಕಾಗಿ ಡೇವಿನ್ ಜಾಯ್ ರಾಂಡೋಲ್ಫ್‍ ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.

  • ಜಾನ್ ಸೀನಾ ಸೈಲ್‌ನಲ್ಲಿ ಮೋದಿ – ಫೋಟೋ ಹಂಚಿಕೊಂಡ WWE ಸೂಪರ್ ಸ್ಟಾರ್

    ಜಾನ್ ಸೀನಾ ಸೈಲ್‌ನಲ್ಲಿ ಮೋದಿ – ಫೋಟೋ ಹಂಚಿಕೊಂಡ WWE ಸೂಪರ್ ಸ್ಟಾರ್

    – ಮೋದಿ ರಿಯಲ್ ಚಾಂಪಿಯನ್ ಅಂದ್ರು ಫ್ಯಾನ್ಸ್

    ವಾಷಿಂಗ್ಟನ್: 16 ಬಾರಿ WWE ವಿಶ್ವ ಚಾಂಪಿಯನ್ ಆಗಿ ವಿಶ್ವದೆಲ್ಲೆಡೆ ಜನಪ್ರಿಯತೆ ಗಳಿಸಿರುವ ಜಾನ್ ಸೀನಾ (John Cena) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಫೋಟೋವನ್ನ ಹಂಚಿಕೊಂಡಿದ್ದಾರೆ.

     

    View this post on Instagram

     

    A post shared by John Cena (@johncena)

    ಅಧ್ಯಕ್ಷ ಜೋ ಬೈಡನ್ (Joe Biden) ಅವರ ಆಹ್ವಾನದ ಮೇರೆಗೆ ಅಮೆರಿಕ ಪ್ರವಾಸ ಕೈಗೊಂಡಿದ್ದ ಪ್ರಧಾನಿ ಮೋದಿ, ಜೋ ಬೈಡನ್ ಹಾಗೂ ಜಿಲ್ ಬೈಡನ್ ಅವರೊಂದಿಗೆ ಮಾತನಾಡುತ್ತಿದ್ದ ವೇಳೆ ಜಾನ್ ಸೀನಾ ಸ್ಟೈಲ್‌ನಲ್ಲಿ ಆಕ್ಷನ್ ಮಾಡಿರುವುದು ಕಂಡುಬಂದಿದೆ. ಈ ಫೋಟೋವನ್ನ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿರುವ ಸೀನಾ `ನೀವು ನನ್ನನ್ನ ನೋಡಲು ಸಾಧ್ಯವಿಲ್ಲ’ ಎಂದು ಬರೆದುಕೊಂಡಿದ್ದಾರೆ.

    ಜಾಲತಾಣದಲ್ಲಿ ಈ ಫೋಟೋ ಭಾರೀ ಸದ್ದು ಮಾಡುತ್ತಿದ್ದು, 4 ಲಕ್ಷಕ್ಕೂ ಹೆಚ್ಚು ಮಂದಿ ಲೈಕ್ ಮಾಡಿದ್ದಾರೆ. ಈ ಫೋಟೋಗೆ ಪ್ರತಿಕ್ರಿಯೆ ನೀಡಿರುವ ನೆಟ್ಟಿಗರು `ಮೋದಿ ರಿಯಲ್ ಚಾಂಪಿಯನ್’ ಎಂದು ಹೊಗಳಿದ್ದಾರೆ. ಇದನ್ನೂ ಓದಿ: ಮೋದಿಗಾಗಿ ಬೃಹತ್‌ ಔತಣ ಕೂಟ – ಮುಖೇಶ್‌ ಅಂಬಾನಿ, ಸುಂದರ್‌ ಪಿಚೈ ಸೇರಿ ಹಲವು VIP ಗಣ್ಯರು ಭಾಗಿ: ಇಲ್ಲಿದೆ ಫುಲ್‌ ಲಿಸ್ಟ್‌

    ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕದಲ್ಲಿ ನೆಲೆಸಿರುವ ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಮಾತನಾಡಿದ್ದರು. ಅದಕ್ಕೂ ಮುನ್ನಾ ದಿನ ಮೋದಿ ಅವರು ಅಮೆರಿಕಕ್ಕೆ ಭೇಟಿ ನೀಡಿದ್ದರ ಗೌರವಾರ್ಥವಾಗಿ ಅಧ್ಯಕ್ಷ ಜೋ ಬೈಡನ್ ಆಯೋಜಿಸಿದ್ದ ಬೃಹತ್ ಔತಣ ಕೂಟದಲ್ಲಿ ಭಾಗಿಯಾಗಿದ್ದರು. ಈ ಔತಣ ಕೂಟದಲ್ಲಿ ಭಾರತ ಮೂಲದ ಗೂಗಲ್ ಸಿಇಒ ಸುಂದರ್ ಪಿಚೈ, ಉದ್ಯಮಿ ಮುಕೇಶ್ ಅಂಬಾನಿ, ಪತ್ನಿ ನೀತಾ ಅಂಬಾನಿ, ಆನಂದ್ ಮಹೀಂದ್ರಾ ಸೇರಿದಂತೆ ಘಟಾನುಘಟಿ ಉದ್ಯಮಿಗಳು ಭಾಗಿಯಾಗಿದ್ದರು. ಇದನ್ನೂ ಓದಿ: ಬೆಂಗಳೂರಲ್ಲೇ ಸಿಗಲಿದೆ ಅಮೆರಿಕ ವೀಸಾ – ಸಿಲಿಕಾನ್ ಸಿಟಿಯಲ್ಲಿ ರಾಯಭಾರ ಕಚೇರಿ ತೆರೆಯಲು US ನಿರ್ಧಾರ

  • ಮಡಕೆ ಒಡೆಯುವ ಜಾನ್ ಸಿನಾ ಫೋಟೋ ಹಂಚಿಕೊಂಡು ಶ್ರೀಕೃಷ್ಣ ಜನ್ಮಾಷ್ಟಮಿ ಶುಭಕೋರಿದ WWE

    ಮಡಕೆ ಒಡೆಯುವ ಜಾನ್ ಸಿನಾ ಫೋಟೋ ಹಂಚಿಕೊಂಡು ಶ್ರೀಕೃಷ್ಣ ಜನ್ಮಾಷ್ಟಮಿ ಶುಭಕೋರಿದ WWE

    ಮುಂಬೈ: ದೇಶಾದ್ಯಂತ ಇಂದು ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ ನಡೆದಿದೆ. ಭಾರತದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ನಿಮಿತ್ತ ವರ್ಲ್ಡ್ ವ್ರೆಸ್ಲಿಂಗ್ ಎಂಟರ್‌ಟೈನ್‌ಮೆಂಟ್‌ (WWE) ಡಬ್ಲ್ಯೂ ಡಬ್ಲ್ಯೂ ಇ ಸೂಪರ್ ಸ್ಟಾರ್ ಜಾನ್ ಸಿನಾ ಮಡಕೆ ಒಡೆಯುತ್ತಿರುವ ಫೋಟೋ ಹಂಚಿಕೊಂಡು ಶುಭ ಕೋರಿದೆ.

    ಭಾರತದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಹ್ಯಾಪಿ ಜನ್ಮಾಷ್ಟಮಿ ಇಂಡಿಯಾ ಎಂದು ಹ್ಯಾಷ್‌ಟ್ಯಾಗ್ ಬಳಕೆ ಮಾಡಿ ಫೋಟೋ ಹಂಚಿಕೊಂಡು WWE ಟ್ವೀಟ್ ಮಾಡಿದೆ. ಫೋಟೋದಲ್ಲಿ ಜಾನ್ ಸಿನಾ ಏಣಿಯ ಮೇಲೆ ಕೂತು ಎರಡು ಕೈ ಮೇಲೆತ್ತಿ ಮಡಕೆಯನ್ನು ಹಿಡಿದಿರುವಂತೆ ಚಿತ್ರಿಸಲಾಗಿದೆ. ಈ ಬಗ್ಗೆ ಕಾಮೆಂಟ್‌ ಮಾಡಿರುವ ನೆಟ್ಟಿಗರು, ಮನಿ ಇನ್‌ ದಿ ಬ್ಯಾಂಕ್‌ಗಿಂತ ಮೊಸರು ಇನ್‌ ದಿ ಬ್ಯಾಂಕ್‌ ಚೆನ್ನಾಗಿರುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ರಾಷ್ಟ್ರಗೀತೆ ಹಾಡುತ್ತಿದ್ದ ಇಶನ್ ಕಿಶನ್‍ಗೆ ಕಚ್ಚಿದ ಜೇನುನೊಣ

    ಈ ಫೋಟೋ ಕಂಡ WWE ಅಭಿಮಾನಿಗಳು ಸಂಭ್ರಮಿಸಿದ್ದು, ತಮ್ಮ ನೆಚ್ಚಿನ WWE ಸೂಪರ್ ಸ್ಟಾರ್ ಈ ರೀತಿ ಕಾಣಿಸಿಕೊಂಡಿರುವುದಕ್ಕೆ ಸಂತಸ ಪಟ್ಟಿದ್ದಾರೆ. ಭಾರತ ಸೇರಿದಂತೆ ವಿಶ್ವದಾದ್ಯಂತ WWEಗೆ ಸಾಕಷ್ಟು ಅಭಿಮಾನಿಗಳಿದ್ದಾರೆ. ಇದನ್ನೂ ಓದಿ: ದಾಂಪತ್ಯ ಜೀವನದಲ್ಲಿ ಬಿರುಕು – ಚಹಲ್‍ರನ್ನು ಕೈಬಿಟ್ರಾ ಧನಶ್ರೀ?

    Live Tv
    [brid partner=56869869 player=32851 video=960834 autoplay=true]

  • ಮೂರನೇ ಮದುವೆಯಾದ WWE ಸೂಪರ್ ಸ್ಟಾರ್ ಜಾನ್ ಸಿನಾ

    ಮೂರನೇ ಮದುವೆಯಾದ WWE ಸೂಪರ್ ಸ್ಟಾರ್ ಜಾನ್ ಸಿನಾ

    – ಯಾರು ಈ ಶೇ ಶರಿಯತ್‍ಜಾಡೆ

    ಫ್ಲೋರಿಡಾ: ಡಬ್ಯ್ಲುಡಬ್ಯ್ಲುಇ ಸೂಪರ್ ಸ್ಟಾರ್ ಜಾನ್ ಸಿನಾ ಅವರು ಮೂರನೇ ಬಾರಿಗೆ ವಿವಾಹವಾಗಿದ್ದು, ತಮ್ಮ ಗೆಳತಿ ಶೇ ಶರಿಯತ್‍ಜಾಡೆ ಅವರನ್ನು ವರಿಸಿದ್ದಾರೆ.

    ಜಾನ್ ಸಿನಾ ಮದುವೆಯಾಗಿರುವುದನ್ನು ಅಧಿಕೃತವಾಗಿ ಘೋಷಣೆ ಮಾಡಿಲ್ಲ. ಆದರೆ ಫ್ಲೋರಿಡಾದ ಸುದ್ದಿ ಮಾಧ್ಯಮಗಳು ಜಾನ್ ಸಿನಾ ಮತ್ತು ಶೇ ಶರಿಯತ್‍ಜಾಡೆ ಅವರು ಬುಧವಾರ ನಡೆದ ಸರಳ ಮತ್ತು ಶಾಂತ ರೀತಿಯ ಮದುವೆ ಕಾರ್ಯಕ್ರಮದಲ್ಲಿ ವಿವಾಹವಾಗಿದ್ದಾರೆ ಎಂದು ವರದಿ ಮಾಡಿವೆ. ಸಿನಾ ತನಗಿಂತ 12 ವರ್ಷ ಚಿಕ್ಕವರಾದ ಶೇ ಶರಿಯತ್‍ಜಾಡೆ ಅವರನ್ನು ಮೂರನೇ ಬಾರಿಗೆ ವಿವಾಹವಾಗಿದ್ದಾರೆ.

    ಯಾರು ಈ ಶೇ ಶರಿಯತ್‍ಜಾಡೆ
    ಶೇ ಶರಿಯತ್‍ಜಾಡೆ ಇರಾನ್‍ನಲ್ಲಿ ಜನಿಸಿದರೂ ಕೆನಡಾದ ಪ್ರಜೆಯಾಗಿದ್ದಾರೆ. 31 ವರ್ಷದ ಶೇ, ಬ್ರಿಟಿಷ್ ಕೊಲಂಬಿಯಾ ವಿಶ್ವವಿದ್ಯಾಲಯದಿಂದ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ ಎಂಜಿನಿಯರಿಂಗ್ ಅಧ್ಯಯನ ಮಾಡಿದ್ದಾರೆ. ಜೊತೆಗೆ 2013ರಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಶರಿಯತ್‍ಜಾಡೆ ವ್ಯಾಂಕೋವರ್ ನಲ್ಲಿರುವ ಟೆಕ್ ಕಂಪನಿಯೊಂದರಲ್ಲಿ ಉತ್ಪನ್ನ ಮಟ್ಟದ ಕಾರ್ಯನಿರ್ವಾಹಕರಾಗಿ ಕೆಲಸ ಮಾಡುತ್ತಿದ್ದಾರೆ ಎಂದು ವರದಿಯಾಗಿದೆ.

    ಜಾನ್ ಸಿನಾ ಮತ್ತು ಶೇ ಶರಿಯತ್‍ಜಾಡೆ ಮೊದಲ ಬಾರಿಗೆ ಭೇಟಿಯಾಗಿದ್ದು, 2019ರಲ್ಲಿ ನಡೆದ ಡಬ್ಯ್ಲುಡಬ್ಯ್ಲುಇ ತಾರೆಯರ ಚಿತ್ರೀಕರಣದ ಸಮಯದಲ್ಲಿ. ಈ ವೇಳೆ ಪರಿಚಯವಾದ ಸಿನಾ ಮತ್ತು ಶರಿಯತ್‍ಜಾಡೆ ನಂತರ ಪ್ರೇಮಪಾಶದಲ್ಲಿ ಬಂಧಿಯಾಗಿದ್ದರು. ಇದಾದ ನಂತರ ಪ್ಲೇಯಿಂಗ್ ವಿತ್ ಫೈರ್ ಇನ್ ವ್ಯಾಂಕೋವರ್ ಎಂಬ ಕಾರ್ಯಕ್ರಮದಲ್ಲಿ ಮೊದಲ ಬಾರಿಗೆ ರೆಡ್ ಕಾರ್ಪೆಟ್‍ನಲ್ಲಿ ಕಾಣಿಸಿಕೊಂಡಿದ್ದರು.

    ಸಿನಾಗಿದು ಮೂರನೇ ಮದ್ವೆ
    43 ವರ್ಷದ ಜಾನ್ ಸಿನಾ ಈಗಾಗಲೇ ಇಬ್ಬರನ್ನು ಮದುವೆಯಾಗಿ ವಿಚ್ಛೇದನ ಪಡೆದುಕೊಂಡಿದ್ದಾರೆ. 1999ರಲ್ಲಿ ಡಬ್ಯ್ಲುಡಬ್ಯ್ಲುಇಗೆ ಪಾದಾರ್ಪಣೆ ಮಾಡಿದ ಸಿನಾ 2009ರಲ್ಲಿ ಡಬ್ಯ್ಲುಡಬ್ಯ್ಲುಇ ಲೇಡಿ ಸೂಪರ್ ಸ್ಟಾರ್ ಎಲಿಜಬೆತ್ ಹಬಡ್ರ್ಯೂ ಅವರನ್ನು ವಿವಾಹವಾಗಿದ್ದರು. ಆದರೆ 2012ರಲ್ಲಿ ಈ ಜೋಡಿ ವಿಚ್ಛೇದನ ಪಡೆದು ಬೇರೆಯಾಗಿತ್ತು. ಇದಾದ ನಂತರ ಸಿನಾ ಡಬ್ಯ್ಲುಡಬ್ಯ್ಲುಇದ ಲೇಡಿ ಕುಸ್ತಿಪಟು ನಿಕ್ಕಿ ಬೆಲ್ಲಾ ಅವರ ಜೊತೆ ಡೇಟಿಂಗ್‍ನಲ್ಲಿ ಇದ್ದರು.

    ಸುಮಾರು ಐದು ವರ್ಷಗಳ ಕಾಲ ಜೊತೆಗಿದ್ದ ಸಿನಾ ಮತ್ತು ನಿಕ್ಕಿ ಬೆಲ್ಲಾ ಜೋಡಿ 2018ರಲ್ಲಿ ತಾವು ಬೇರೆಯಾಗುತ್ತೇವೆ ಎಂದು ಘೋಷಿಸಿಕೊಂಡಿತ್ತು. ಇದಾದ ನಂತರ 2019ರಲ್ಲಿ ನಿಕ್ಕಿ ಡ್ಯಾನ್ಸರ್ ಆರ್ಟೆಮ್ ಜೊತೆ ಮದುವೆಯಾದರು. ಜೊತೆಗೆ ಅವರಿಗೆ 2020ರ ಜುಲೈನಲ್ಲಿ ಮಗು ಜನಿಸಿದೆ. ಈಗ ಸಿನಾ ಶೇ ಶರಿಯತ್‍ಜಾಡೆ ಅವರನ್ನು ವರಿಸಿದ್ದಾರೆ.

  • ಐಶ್ವರ್ಯಾ ರೈ ಫೋಟೋ ಹಂಚಿಕೊಂಡ WWE ಸೂಪರ್ ಸ್ಟಾರ್ ಜಾನ್ ಸಿನಾ

    ಐಶ್ವರ್ಯಾ ರೈ ಫೋಟೋ ಹಂಚಿಕೊಂಡ WWE ಸೂಪರ್ ಸ್ಟಾರ್ ಜಾನ್ ಸಿನಾ

    ಮುಂಬೈ: ಡಬ್ಲ್ಯೂಡಬ್ಲ್ಯೂಇ ಸೂಪರ್ ಸ್ಟಾರ್ ಜಾನ್ ಸಿನಾ ಅವರು ಇತ್ತೀಚೆಗೆ ಕೊರೊನಾ ಸೋಂಕಿಗೆ ತುತ್ತಾಗಿರುವ ನಟಿ ಐಶ್ವರ್ಯಾ ರೈ ಬಚ್ಚನ್ ಅವರ ಫೋಟೋವನ್ನು ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡಿದ್ದಾರೆ.

    ಇತ್ತೀಚೆಗೆ ಅಮಿತಾಬ್ ಬಚ್ಚನ್ ಮತ್ತು ಅಭಿಷೇಕ್ ಅವರಿಗೆ ಮೊದಲು ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ನಂತರ ಐಶ್ವರ್ಯಾ ರೈ ಮತ್ತು ಮಗಳ ಆರಾಧ್ಯ ಬಚ್ಚನ್ ಅವರಿಗೆ ಕೊರೊನಾ ಕಾಣಿಸಿಕೊಂಡಿದ್ದು, ಕಳೆದ ಶುಕ್ರವಾರದವರೆಗೂ ಮನೆಯಲ್ಲೇ ಕ್ವಾರಂಟೈನ್ ಆಗಿದ್ದರು, ನಂತರ ಅವರನ್ನು ಕೂಡ ಮುಂಬೈನ ನಾನಾವತಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

    https://www.instagram.com/p/CCyL3cWFeWb/

    ಕೊರೊನಾ ಭೀತಿಯಿಂದ ಆಸ್ಪತ್ರೆ ಸೇರಿರುವ ಐಶ್ವರ್ಯಾ ರೈ ಅವರ ಫೋಟೋವನ್ನು ಜಾನ್ ಸಿನಾ ಅವರು ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡಿದ್ದಾರೆ. ಆದರೆ ಯಾವುದೇ ಕ್ಯಾಪ್ಶನ್ ಬರೆದುಕೊಂಡಿಲ್ಲ. ಜುಲೈ 11ರಂದು ಅಮಿತಾಬ್ ಬಚ್ಚನ್ ಅವರಿಗೆ ಮತ್ತು ಅಭಿಷೇಕ್ ಬಚ್ಚನ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಈ ಕುರಿತು ಅಂದು ಟ್ವೀಟ್ ಮಾಡಿದ್ದ ಬಿಗ್‍ಬಿ, ನನಗೆ ಕೊರೊನಾ ಸೋಂಕು ದೃಢಪಟ್ಟಿದೆ. ಆಸ್ಪತ್ರೆಗೆ ಸ್ಥಳಾಂತರಗೊಂಡಿದ್ದೇನೆ ಎಂದಿದ್ದರು. ಆಗ ಕೂಡ ಜಾನ್ ಸಿನಾ ಅಮಿತಾಬ್ ಬಚ್ಚನ್ ಮತ್ತು ಅಭಿಷೇಕ್ ಬಚ್ಚನ್ ಅವರ ಫೋಟೋವನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಶೇರ್ ಮಾಡಿಕೊಂಡಿದ್ದರು.

    https://www.instagram.com/p/CCi38tClP1V/

    ಡಬ್ಲ್ಯೂಡಬ್ಲ್ಯೂಇ ಸೂಪರ್ ಸ್ಟಾರ್ ಜಾನ್ ಸಿನಾ ಅವರು ಕುಸ್ತಿಯ ಜೊತೆಗೆ ಸಿನಿಮಾದಲ್ಲಿ ನಟನೆಯನ್ನು ಮಾಡುತ್ತಾರೆ. ಅವರಿಗೆ ಇಡೀ ವಿಶ್ವದಲ್ಲೇ ಅಭಿಮಾನಿಗಳಿದ್ದು, ಭಾರತದಲ್ಲೂ ಅವರ ಅಭಿಮಾನಿಗಳು ಇದ್ದಾರೆ. ಬಾಲಿವುಡ್ ಜೊತೆ ನಿಕಟ ಸಂಬಂಧವೊಂದಿರುವ ಅವರು ಕಳೆದ ಜೂನ್ 14ರಂದು ಆತ್ಮಹತ್ಯೆ ಮಾಡಿಕೊಂಡ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಫೋಟೋವನ್ನು ಕೂಡ ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡಿದ್ದರು.