Tag: Jollywood

  • ತಪ್ಪು ಸರಿಪಡಿಸಿಕೊಳ್ಳಲು ಕಾಲಾವಕಾಶ ಕೊಡಿ: ಜಾಲಿವುಡ್ ಆಡಳಿತ ಮಂಡಳಿ

    ತಪ್ಪು ಸರಿಪಡಿಸಿಕೊಳ್ಳಲು ಕಾಲಾವಕಾಶ ಕೊಡಿ: ಜಾಲಿವುಡ್ ಆಡಳಿತ ಮಂಡಳಿ

    ರಾಮನಗರ: ಮಾಲಿನ್ಯ ನಿಯಮ ಉಲ್ಲಂಘಿಸಿದ್ದಕ್ಕೆ ಬಿಗ್‌ಬಾಸ್‌ (Bigg Boss) ಮನೆಗೆ ಬೀಗ ಜಡಿದ ಬೆನ್ನಲ್ಲೇ ರಾಮನಗರ ಡಿಸಿ (Ramanagar DC Office) ಕಚೇರಿಗೆ ಜಾಲಿವುಡ್ (Jollywood) ಆಡಳಿತ ಮಂಡಳಿ ಭೇಟಿ ನೀಡಿದ್ದು, 15 ದಿನ ಕಾಲಾವಕಾಶ ಕೇಳಿ ಮನವಿ ಸಲ್ಲಿಸಿದೆ.

    ಜಾಲಿವುಡ್ ಸ್ಟುಡಿಯೋದಲ್ಲಿ ಬಿಗ್‌ಬಾಸ್ ಸೀಸನ್ 12ರ ಶೋ ನಡೆಯುತ್ತಿದ್ದು, ಸ್ಟುಡಿಯೋದಲ್ಲಿ 400ಕ್ಕೂ ಹೆಚ್ಚು ಕಾರ್ಮಿಕರು ಕೆಲಸ ಮಾಡ್ತಿದ್ದಾರೆ. ಹೀಗೆ ಏಕಾಏಕಿ ಬಂದ್ ಮಾಡಿದರೆ ಕಾರ್ಮಿಕರ ಕೆಲಸಕ್ಕೆ ಕುತ್ತು ಬೀಳಲಿದೆ. ನಮ್ಮಿಂದ ತಪ್ಪಾಗಿದೆ, ತಪ್ಪು ಸರಿಪಡಿಸಿಕೊಳ್ಳಲು ಕಾಲಾವಕಾಶ ಕೊಡಿ ಎಂದು ಜಾಲಿವುಡ್ ಆಡಳಿತ ಮಂಡಳಿ ಡಿಸಿ ಬಳಿ ಪರಿಪರಿಯಾಗಿ ಬೇಡಿಕೊಂಡಿದೆ.ಇದನ್ನೂ ಓದಿ:Bigg Boss | ಉಲ್ಲಂಘನೆಯಾಗಿದ್ರೆ ಸರಿ ಮಾಡಲು ಅವಕಾಶ ಕೊಡಿ: ಡಿಕೆಶಿ ಸಾಫ್ಟ್‌ ಕಾರ್ನರ್‌

    ಸದ್ಯ ಜಾಲಿವುಡ್ ಆಡಳಿತ ಮಂಡಳಿ ಜಿಲ್ಲಾಧಿಕಾರಿ ಜೊತೆ ಮಾತುಕತೆ ನಡೆಸುತ್ತಿದೆ. ಮಾತುಕತೆ ಫಲಪ್ರದವಾದರೆ ಜಿಲ್ಲಾಧಿಕಾರಿಯವರು ಷರತ್ತು ಬದ್ಧ ಅನುಮತಿ ನೀಡಿದರೆ ಇಂದೇ ಜಾಲಿವುಡ್ ಸ್ಟುಡಿಯೋ ಓಪನ್ ಆಗುವ ಸಾಧ್ಯತೆಯಿದೆ ಎನ್ನಲಾಗಿದೆ. ಜಿಲ್ಲಾಧಿಕಾರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಆಗಿರುವ ಕಾರಣ ಅವರಿಗೆ ಷರತ್ತುಗಳನ್ನು ವಿಧಿಸಿ ಬೀಗ ತೆಗೆಸಲು ಅಧಿಕಾರವಿದೆ.

  • Bigg Boss | ಉಲ್ಲಂಘನೆಯಾಗಿದ್ರೆ ಸರಿ ಮಾಡಲು ಅವಕಾಶ ಕೊಡಿ: ಡಿಕೆಶಿ ಸಾಫ್ಟ್‌ ಕಾರ್ನರ್‌

    Bigg Boss | ಉಲ್ಲಂಘನೆಯಾಗಿದ್ರೆ ಸರಿ ಮಾಡಲು ಅವಕಾಶ ಕೊಡಿ: ಡಿಕೆಶಿ ಸಾಫ್ಟ್‌ ಕಾರ್ನರ್‌

    ಬೆಂಗಳೂರು: ಬಿಗ್ ಬಾಸ್ ಮನೆಗೆ ಬಿಗ ಜಡಿದ ವಿಚಾರದಲ್ಲಿ ಡಿಸಿಎಂ ಡಿಕೆಶಿ ಸಾಫ್ಟ್ ಕಾರ್ನರ್ ವ್ಯಕ್ತಪಡಿಸಿದ್ದಾರೆ. ಜಿಲ್ಲಾಧಿಕಾರಿ, ಮಾಲಿನ್ಯ ಇಲಾಖೆಯ ಜೊತೆ ಮಾತನಾಡಿದ್ದೇನೆ. ಏನಾದರೂ ಉಲ್ಲಂಘನೆಯಾಗಿದ್ದರೆ ಸರಿಪಡಿಸಿಕೊಳ್ಳಲು ಅವಕಾಶ ಕೊಡಿ ಎಂದು ಸೂಚಿಸಿರುವುದಾಗಿ ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದ್ದಾರೆ.

    ಬಿಗ್‌ಬಾಸ್‌ ನಡೆಯುತ್ತಿದ್ದ ಜಾಲಿವುಡ್‌ ಸ್ಟುಡಿಯೋಗೆ ಬೀಗ ಜಡಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ನಾವು ವಿಚಾರಣೆ ನಡೆಸಿದ್ದೇನೆ. ಜನರಿಗೆ ಮನರಂಜನೆ ನೀಡಲು ಕೋಟ್ಯಂತರ ರೂಪಾಯಿ ಖರ್ಚು ಮಾಡಿರುತ್ತಾರೆ. ಏನಾದ್ರೂ ತಪ್ಪಾಗಿದ್ದರೂ ಅವಕಾಶ ಕೊಡಲು ಹೇಳಿದ್ದೇನೆ ಎಂದು ತಿಳಿಸಿದರು. ಇದನ್ನೂಓದಿ:  ರೆಸಾರ್ಟ್‌ನಲ್ಲೂ ಬಿಗ್‌ಬಾಸ್‌ ನಿಯಮ ಅನ್ವಯ!

     

    ಜೆಡಿಎಸ್‌ನವರ ನಟ್ಟು ಬೋಲ್ಟ್‌ ಆರೋಪಕ್ಕೆ ಮಾತನಾಡಿದ ಅವರು, ಅವರಿಗೆ ಶಕ್ತಿ ಬೇಕು ಎಂದಾಗ ನನ್ನ ಹೆಸರು ತೆಗೆದುಕೊಳ್ಳುತ್ತಾರೆ. ಜಾಲಿವುಡ್‌ ಸ್ಟುಡಿಯೋ ಉದ್ಘಾಟನೆಯನ್ನು ನಾನೇ ಮಾಡಿದ್ದೇನೆ. ಕುಮಾರಸ್ವಾಮಿಯಾದ್ರೂ ಆರೋಪ ಮಾಡಲಿ. ಮೇಲೆ ಇರುವವರನ್ನು ಕರಕೊಂಡು ಬಂದರೂ ನಾನು ತಲೆಕೆಡೆಸಿಕೊಳ್ಳುವುದಿಲ್ಲ ಎಂದರು. ಇದನ್ನೂ ಓದಿ:  ಕಲಾವಿದರ ಮೇಲೆ ಸೇಡು ತೀರಿಸಿದ ನಟ್ಟು ಬೋಲ್ಟ್‌ ಮಿನಿಸ್ಟರ್‌- ಜೆಡಿಎಸ್‌ ಕಿಡಿ

  • ಬಿಗ್ ಬಾಸ್ ಸೀಸನ್-12ಗೆ ಆರಂಭದಲ್ಲೇ ವಿಘ್ನ – ಶೂಟಿಂಗ್ ನಡೆಯುತ್ತಿರುವ ಜಾಲಿವುಡ್ ಸ್ಟುಡಿಯೋ ಬಂದ್‌ಗೆ ಆದೇಶ

    ಬಿಗ್ ಬಾಸ್ ಸೀಸನ್-12ಗೆ ಆರಂಭದಲ್ಲೇ ವಿಘ್ನ – ಶೂಟಿಂಗ್ ನಡೆಯುತ್ತಿರುವ ಜಾಲಿವುಡ್ ಸ್ಟುಡಿಯೋ ಬಂದ್‌ಗೆ ಆದೇಶ

    – ಮಾಲೀನ್ಯ ನಿಯಂತ್ರಣ ಮಂಡಳಿಯಿಂದ ಆದೇಶ

    ರಾಮನಗರ: ಬಿಗ್ ಬಾಸ್ ಸೀಸನ್ 12ಕ್ಕೆ (BBK 12) ಆರಂಭದಲ್ಲೇ ವಿಘ್ನ ಎದುರಾಗಿದೆ. ಬಿಗ್ ಬಾಸ್ ರಿಯಾಲಿಟಿ ಶೋ ನಡೆಯುತ್ತಿರೋ ಬಿಡದಿ ಸಮೀಪದ ಜಾಲಿವುಡ್ ಸ್ಟುಡಿಯೋಸ್ & ಅಡ್ವೆಂಚರ್ಸ್ ಪಾರ್ಕ್ (Jollywood Studios and Adventures) ಬಂದ್ ಮಾಡಲು ರಾಜ್ಯ ಮಾಲೀನ್ಯ ನಿಯಂತ್ರಣ ಮಂಡಳಿ ಆದೇಶ ಹೊರಡಿಸಿದೆ.

    ಮಾಲೀನ್ಯ ನಿಯಂತ್ರಣ ಮಂಡಳಿ (Pollution Control Board) ಅನುಮತಿ ಪಡೆಯದೇ ಮನರಂಜನಾ ಪಾರ್ಕ್ ಓಪನ್ ಮಾಡಿರೋ ಆರೋಪ ಕೇಳಿಬಂದಿದೆ. ಅಲ್ಲದೇ ಅವೈಜ್ಞಾನಿಕ ತ್ಯಾಜ್ಯ ವಿಲೇವಾರಿ ಹಾಗೂ ತ್ಯಾಜ್ಯದ ನೀರನ್ನ ಪರಿಸರಕ್ಕೆ ಬಿಡುವ ಮೂಲಕ ಮಾಲಿನ್ಯ ನಿಯಂತ್ರಣ ಕಾಯ್ದೆಗಳನ್ನ ಉಲ್ಲಂಘನೆ ಮಾಡಿರೋ ಆರೋಪ ಕೂಟ ಕೇಳಿಬಂದಿದೆ.

    ಕರ್ನಾಟಕ ಮಾಲಿನ್ಯ ನಿಯಂತ್ರಣ ಕಾಯ್ದೆ 1981ರ ಸೆಕ್ಷನ್ 31, ಕಾಯ್ದೆ 1983 ನಿಯಮ 20(ಎ) ಅನ್ವಯ ತಕ್ಷಣದಿಂದಲೇ ಸ್ಟುಡಿಯೋ ಬಂದ್ ಮಾಡಲು ಆದೇಶ ಹೊರಡಿಸಿದ್ದು, ಕೂಡಲೇ ಜಾಲಿವುಡ್ ಸ್ಟುಡಿಯೋಸ್ & ಅಡ್ವೆಂಚರ್ಸ್ ಪಾರ್ಕ್ ಬಂದ್ ಮಾಡಸಿ ಕ್ರಮವಹಿಸಲು ರಾಮನಗರ ಜಿಲ್ಲಾಧಿಕಾರಿಗೆ ಸೂಚನೆ ನೀಡಲಾಗಿದೆ.

    ಜೊತೆಗೆ ತಕ್ಷಣದಿಂದಲೇ ಮನರಂಜನಾ ಪಾರ್ಕ್‌ಗೆ ವಿದ್ಯುತ್ ಸ್ಥಗಿತಗೊಳಿಸುವಂತೆ ಬೆಸ್ಕಾಂಗೂ ಮಾಲಿನ್ಯ ನಿಯಂತ್ರಣ ಮಂಡಳಿ ನಿರ್ದೇಶನ ನೀಡಿದೆ. ಬಿಗ್ ಬಾಸ್ ಸೀಸನ್ 12ರ ಶೂಟಿಂಗ್ ಸೆಟ್ ಕೂಡ ಜಾಲಿವುಡ್ ಸ್ಟುಡಿಯೋದಲ್ಲೇ ನಿರ್ಮಾಣ ಆಗಿರೋದ್ರಿಂದ ಬಿಗ್ ಬಾಸ್ ಶೂಟಿಂಗ್ ಸ್ಥಗಿತಗೊಳ್ಳುವ ಸಾಧ್ಯತೆ ಇದೆ.