Tag: Jonny Bairstow

  • ರನ್‌ ಮಳೆಯಲ್ಲಿ ಪಂಜಾಬ್‌ಗೆ 8 ವಿಕೆಟ್‌ಗಳ ಜಯ – ಚೇಸಿಂಗ್‌ನಲ್ಲಿ ಆರ್‌ಸಿಬಿ ದಾಖಲೆ ಸರಿಗಟ್ಟಿದ ಕಿಂಗ್ಸ್‌

    ರನ್‌ ಮಳೆಯಲ್ಲಿ ಪಂಜಾಬ್‌ಗೆ 8 ವಿಕೆಟ್‌ಗಳ ಜಯ – ಚೇಸಿಂಗ್‌ನಲ್ಲಿ ಆರ್‌ಸಿಬಿ ದಾಖಲೆ ಸರಿಗಟ್ಟಿದ ಕಿಂಗ್ಸ್‌

    ಕೋಲ್ಕತ್ತಾ: ಜಾನಿ ಬೈರ್‌ಸ್ಟೋವ್‌ (Jonny Bairstow) ಭರ್ಜರಿ ಶತಕ ಹಾಗೂ ಶಶಾಂಕ್‌ ಸಿಂಗ್‌, ಪ್ರಭ್‌ ಸಿಮ್ರನ್‌ಸಿಂಗ್‌ ಸ್ಫೋಟಕ ಅರ್ಧಶತಕಗಳ ಬ್ಯಾಟಿಂಗ್‌ ನೆರವಿನಿಂದ ಪಂಜಾಬ್‌ ಕಿಂಗ್ಸ್‌ (Punjab Kings) ತಂಡವು ಕೋಲ್ಕತ್ತಾ ನೈಟ್‌ ರೈಡರ್ಸ್‌ ವಿರುದ್ಧ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ.

    ಅಲ್ಲದೇ ಐಪಿಎಲ್‌ ಇತಿಹಾಸದಲ್ಲಿ ಚೇಸಿಂಗ್‌ನಲ್ಲಿ ತಂಡವೊಂದು ಗಳಿಸಿದ ಗರಿಷ್ಠ ರನ್‌ ಇದಾಗಿದೆ. ಇತ್ತೀಚೆಗೆ ಸನ್‌ ರೈರ್ಸ್‌ ಹೈದರಾಬಾದ್‌ (SRH) ವಿರುದ್ಧ ನಡೆದ ಪಂದ್ಯದಲ್ಲಿ ಆರ್‌ಸಿಬಿ (RCB) ಚೇಸಿಂಗ್‌ನಲ್ಲಿ 262 ರನ್‌ ಗಳಿಸಿತ್ತು. ಇದು ದಾಖಲೆಯಾಗಿತ್ತು. ಇದೀಗ ಪಂಜಾಬ್‌ ಕಿಂಗ್ಸ್‌ ಸಹ 262 ರನ್‌ ಗಳಿಸಿ ಆರ್‌ಸಿಬಿ ದಾಖಲೆ ಸರಿಗಟ್ಟಿದೆ.

    262 ರನ್‌ಗಳ ಬೃಹತ್‌ ಮೊತ್ತದ ಚೇಸಿಂಗ್‌ ಆರಂಭಿಸಿದ ಪಂಜಾಬ್‌ ಕಿಂಗ್ಸ್‌ ಆರಂಭದಿಂದಲೇ ಸ್ಫೋಟಕ ಇನ್ನಿಂಗ್ಸ್‌ ಶುರು ಮಾಡಿತ್ತು. ಮೊದಲ ವಿಕೆಟ್‌ಗೆ 6 ಓವರ್‌ಗಳಲ್ಲಿ ಬರೋಬ್ಬರಿ 93 ರನ್‌ ಚಚ್ಚಿತ್ತು. ಆರಂಭಿಕ ಪ್ರಭ್‌ ಸಿಮ್ರನ್‌ ಸಿಂಗ್‌ (Prabhsimran Singh) 20 ಎಸೆತಗಳಲ್ಲಿ 54 ರನ್‌ (5 ಸಿಕ್ಸರ್‌, 4 ಬೌಂಡರಿ) ರನ್‌ ಚಚ್ಚಿ ಔಟಾದರು. ಈ ಬೆನ್ನಲ್ಲೇ 26 ರನ್‌ ಗಳಿಸಿದ್ದ ರೀಲಿ ರೋಸೋ ಸಹ ಪೆವಿಲಿಯನ್‌ಗೆ ಮರಳಿದರು. ಬಳಿಕ ಜಾನಿ ಬೈರ್‌ಸ್ಟೋವ್‌ ಜೊತೆಗೂಡಿದ ಶಶಾಂಕ್‌ ಸಿಂಗ್‌ (Shashank Singh) ಕೆಕೆಆರ್‌ ಬೌಲರ್‌ಗಳ ವಿರುದ್ಧ ಬೆಂಕಿ-ಬಿರುಗಾಳಿಯಂತೆ ಬ್ಯಾಟಿಂಗ್‌ ನಡೆಸಿದರು. ಪರಿಣಾಮ ಪಂಬಾಜ್‌ 18.4 ಓವರ್‌ಗಳಲ್ಲೇ 262 ರನ್‌ ಚಚ್ಚಿ ವಿಜಯಮಾಲೆ ಹಾಕಿಕೊಂಡಿತು.

    ಪಂಜಾಬ್‌ ಪರ ಜಾನಿ ಬೈರ್‌ಸ್ಟೋವ್‌ 48 ಎಸೆತಗಳಲ್ಲಿ ಅಜೇಯ 108 ರನ್‌ (9 ಸಿಕ್ಸರ್‌, 8 ಬೌಂಡರಿ), ಶಶಾಂಕ್‌ ಸಿಂಗ್‌ 68 ರನ್‌ (8 ಸಿಕ್ಸರ್‌, 2 ಬೌಂಡರಿ) ಸಿಡಿಸಿ ತಂಡದ ಗೆಲುವಿಗೆ ನೆರವಾದರು.

    ರನ್‌ ಏರಿದ್ದು ಹೇಗೆ?
    21 ಎಸೆತ – 50 ರನ್‌
    44 ಎಸೆತ – 100 ರನ್‌
    66 ಎಸೆತ – 150 ರನ್‌
    90 ಎಸೆತ – 200 ರನ್‌
    112 ಎಸೆತ – 262 ರನ್‌

    ಇದಕ್ಕೂ ಮುನ್ನ ಬ್ಯಾಟಿಂಗ್‌ ಮಾಡಿದ ಕೆಕೆಆರ್‌ ಬ್ಯಾಟರ್ಸ್‌ಗಳು ಪಂಬಾಜ್‌ ಬೌಲರ್‌ಗಳನ್ನು ಹಿಗ್ಗಾಮುಗ್ಗಾ ಚೆಂಡಾಡಿದರು. ಆರಂಭಿಕರಾಗಿ ಕಣಕ್ಕಿಳಿದ ಸುನೀಲ್‌ ನರೇನ್‌ ಮತ್ತು ಪಿಲ್‌ ಸಾಲ್ಟ್‌ (Phil Salt) ಜೋಡಿ ಸಿಕ್ಸರ್‌ ಬೌಂಡರಿಗಳ ಅಬ್ಬರ ಶುರು ಮಾಡಿತು. ಮೊದಲ ವಿಕೆಟ್‌ಗೆ ಈ ಜೋಡಿ 10.2 ಓವರ್‌ಗಳಲ್ಲಿ 138 ರನ್‌ ಸಿಡಿಸಿತ್ತು.

    ಸುನೀಲ್‌ ನರೇನ್‌ 32 ಎಸೆತಗಳಲ್ಲಿ ಸ್ಫೋಟಕ 71 ರನ್‌ (9 ಸಿಕ್ಸರ್‌, 4 ಬೌಂಡರಿ) ಚಚ್ಚಿದರೆ, ಪಿಲ್‌ ಸಾಲ್ಟ್‌ 37 ಎಸೆಗಳಲ್ಲಿ 75 ರನ್‌ ಬಾರಿಸಿ ಪೆವಿಲಿಯನ್‌ಗೆ ಮರಳಿದರು. ನಂತರ ಕಣಕ್ಕಿಳಿದ ವೆಂಕಟೇಶ್‌ ಅಯ್ಯರ್‌ 33 ರನ್‌, ಆಂಡ್ರೆ ರಸ್ಸೆಲ್‌ 24 ರನ್‌, ಶ್ರೇಯಸ್‌ ಅಯ್ಯರ್‌ ಸ್ಪೋಟಕ 28 ರನ್‌, ರಿಂಕು ಸಿಂಗ್‌ 5 ರನ್‌, ರಮಣದೀಪ್‌ ಸಿಂಗ್‌ 6 ರನ್‌ ಗಳ ಕೊಡುಗೆ ನೀಡಿದರು.

    ಕೆಕೆಆರ್‌ ಪರ ಅರ್ಷ್‌ದೀಪ್‌ ಸಿಂಗ್‌ 2 ವಿಕೆಟ್‌, ಸ್ಯಾಮ್‌ ಕರ್ರನ್‌, ಹರ್ಷಲ್‌ ಪಟೇಲ್‌ ಮತ್ತು ರಾಹುಲ್‌ ಚಹಾರ್‌ ತಲಾ ಒಂದೊಂದು ವಿಕೆಟ್‌ ಪಡೆದರು.

    ರನ್‌ ಏರಿದ್ದು ಹೇಗೆ?
    23 ಎಸೆತ – 50 ರನ್‌
    48 ಎಸೆತ – 100 ರನ್‌
    71 ಎಸೆತ – 150 ರನ್‌
    93 ಎಸೆತ – 200 ರನ್‌
    120 ಎಸೆತ – 261 ರನ್‌

  • IPL-2023 – ಗಾಯದಿಂದಾಗಿ ಪಂದ್ಯಗಳಿಂದ ಹೊರಗುಳಿಯಲಿರುವ ಐದು ಆಟಗಾರರು

    IPL-2023 – ಗಾಯದಿಂದಾಗಿ ಪಂದ್ಯಗಳಿಂದ ಹೊರಗುಳಿಯಲಿರುವ ಐದು ಆಟಗಾರರು

    ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ (IPL) 16 ನೇ ಆವೃತ್ತಿ ಮಾ.31 ರಂದು ಪ್ರಾರಂಭವಾಗಲಿದೆ. ಶುಕ್ರವಾರ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯಾವಳಿಯ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ನಾಲ್ಕು ಬಾರಿ ವಿಜೇತ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸೆಣಸಲಿದೆ. ಮೇ 28 ರಂದು ಫೈನಲ್ ಪಂದ್ಯ ನಡೆಯಲಿದ್ದು, ಟೂರ್ನಿಯ ಆರಂಭಕ್ಕೂ ಮುನ್ನ, ಗಾಯದ ಸಮಸ್ಯೆಯಿಂದ ಟೂರ್ನಿಯಿಂದ ಹೊರಗುಳಿಯಲಿರುವ 5 ಆಟಗಾರ ಪಟ್ಟಿ ಇಲ್ಲಿದೆ.

    ಜಸ್ಪ್ರೀತ್ ಬುಮ್ರಾ: ಇಂಡಿಯನ್ ಪ್ರೀಮಿಯರ್ ಲೀಗ್‍ನಲ್ಲಿ ಮುಂಬೈ ಇಂಡಿಯನ್ಸ್ ಯಶಸ್ಸಿಗೆ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ (Jasprit Bumrah) ಪ್ರಮುಖ ಪಾತ್ರ ವಹಿಸಿದ್ದಾರೆ. ಆದರೆ ಬುಮ್ರಾ ಬೆನ್ನಿನ ಸಮಸ್ಯೆಯಿಂದ ಬಳಲುತ್ತಿದ್ದು ಮುಂಬರುವ ಐಪಿಎಲ್ ಆವೃತ್ತಿಯಿಂದ ಹೊರಗುಳಿಯಲಿದ್ದಾರೆ. ಇದನ್ನೂ ಓದಿ: ಕ್ರಿಕೆಟ್‌ ಅಭಿಮಾನಿಗಳಿಗೆ ಗುಡ್‌ನ್ಯೂಸ್‌; ಮಾ.31 ರಿಂದ IPL ಧಮಾಕ – ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್‌

    ರಿಷಬ್ ಪಂತ್: ಕಾರು ಅಪಘಾತದಿಂದ ಪಂತ್, ತೀವ್ರಗಾಯಗೊಂಡು ಚೇತರಿಸಿಕೊಳ್ಳುತ್ತಿದ್ದಾರೆ. ಪಂತ್ (Rishabh Pant) ಅನುಪಸ್ಥಿತಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಡೇವಿಡ್ ವಾರ್ನರ್ ಮುನ್ನಡೆಸಲಿದ್ದಾರೆ.

    ಜಾನಿ ಬೈರ್‍ಸ್ಟೋವ್: ಐಪಿಎಲ್ ಅತ್ಯಂತ ಪ್ರಭಾವಶಾಲಿ ಬ್ಯಾಟರ್‌ಗಳಲ್ಲಿ ಒಬ್ಬರಾದ ಬೈರ್‍ಸ್ಟೋವ್ (Jonny Bairstow), ಕಾಲು ಮುರಿತದಿಂದ ಶಸ್ತ್ರಚಿಕಿತ್ಸೆಗೊಳಗಾಗಿದ್ದಾರೆ. ಪಂಜಾಬ್ ಕಿಂಗ್ಸ್ ಅವರ ಬದಲಿಗೆ ಮ್ಯಾಟ್ ಶಾರ್ಟ್ ಅವರನ್ನು ಆಯ್ಕೆಮಾಡಿಕೊಂಡಿದೆ.

    KKR

    ಕೈಲ್ ಜೆಮಿಸನ್: ಬೆನ್ನಿನ ಗಾಯದಿಂದ ಶಸ್ತ್ರಚಿಕಿತ್ಸೆಗೊಳಗಾದ ಜೆಮಿಸನ್ (Kyle Jamieson) ನಾಲ್ಕು ತಿಂಗಳ ಕಾಲ ವಿಶ್ರಾಂತಿಯಲ್ಲಿದ್ದಾರೆ. ಸಿಎಸ್‍ಕೆ ಅವರ ಬದಲಿಯಾಗಿ ದಕ್ಷಿಣ ಆಫ್ರಿಕಾದ ವೇಗಿ ಸಿಸಂಡಾ ಮಗಾಲಾ ಅವರನ್ನು ಆಯ್ಕೆ ಮಾಡಿಕೊಂಡಿದೆ.

    ಶ್ರೇಯಸ್ ಅಯ್ಯರ್: ಬೆನ್ನುನೋವಿನಿಂದಾಗಿ ಶ್ರೇಯಸ್ ಅಯ್ಯರ್ (Shreyas Iyer) ಹೊರಗುಳಿದಿದ್ದಾರೆ. ಕೋಲ್ಕತ್ತಾ ನೈಟ್ ರೈಡರ್ಸ್‍ನ ಇವರ ಸ್ಥಾನವನ್ನು ಸ್ಟಾರ್ ಬ್ಯಾಟರ್ ನಿತೀಶ್ ರಾಣಾ ಅವರನ್ನು ತುಂಬಲಿದ್ದಾರೆ. ಇದನ್ನೂ ಓದಿ: ಪ್ರಾಕ್ಟೀಸ್‌ ಟೈಮ್‌ನಲ್ಲಿ ಧೋನಿ ಸಿಕ್ಸರ್‌ ಸುರಿಮಳೆ – ಹುಚ್ಚೆದ್ದು ಕುಣಿದ ಫ್ಯಾನ್ಸ್‌

  • ICC ಟೆಸ್ಟ್ ರ‍್ಯಾಂಕಿಂಗ್: ಕಳಪೆ ಬ್ಯಾಟಿಂಗ್‌ನಿಂದ ಟಾಪ್-10 ಪಟ್ಟಿಯಲ್ಲಿ ಸ್ಥಾನ ಕಳೆದುಕೊಂಡ ಕೊಹ್ಲಿ

    ICC ಟೆಸ್ಟ್ ರ‍್ಯಾಂಕಿಂಗ್: ಕಳಪೆ ಬ್ಯಾಟಿಂಗ್‌ನಿಂದ ಟಾಪ್-10 ಪಟ್ಟಿಯಲ್ಲಿ ಸ್ಥಾನ ಕಳೆದುಕೊಂಡ ಕೊಹ್ಲಿ

    ದುಬೈ: ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರ ನಿರಂತರ ಕಳಪೆ ಬ್ಯಾಟಿಂಗ್ ಪ್ರದರ್ಶನದಿಂದಾಗಿ ಒಂದಿಲ್ಲೊಂದು ಆಘಾತ ಎದುರಿಸುತ್ತಿದ್ದಾರೆ. 15ನೇ ಆವೃತ್ತಿಯ ಐಪಿಎಲ್‌ನಲ್ಲಿ ಕಳಪೆ ಬ್ಯಾಟಿಂಗ್ ಮಾಡಿ ಸಾಕಷ್ಟು ಟ್ರೋಲ್ ಹಾಗೂ ಟೀಕೆಗಳಿಗೆ ಗುರಿಯಾಗಿದ್ದರು. ಐಪಿಎಲ್ ಬಳಿಕ ಇಂಗ್ಲೆಂಡ್ ವಿರುದ್ಧ ನಡೆದ ಟೆಸ್ಟ್ ಕ್ರಿಕೆಟ್‌ನಲ್ಲೂ ಕಳಪೆ ಬ್ಯಾಟಿಂಗ್ ಪ್ರದರ್ಶನ ನೀಡಿದ್ದು ಐಸಿಸಿ (ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ) ಟೆಸ್ಟ್ ರ‍್ಯಾಂಕಿಗ್‌ನ ಟಾಪ್-10 ಪಟ್ಟಿಯಿಂದ ಹೊರಗುಳಿದಿದ್ದಾರೆ.

    ಜುಲೈ 1 ರಿಂದ 5ರ ವರೆಗೆ ಎಡ್ಜ್‌ಬಸ್ಟನ್‌ನಲ್ಲಿ ನಡೆದ ಟೆಸ್ಟ್ ಸರಣಿಯಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡಿದ ವಿರಾಟ್ ಕೊಹ್ಲಿ ಐಸಿಸಿ ಟೆಸ್ಟ್ ರ‍್ಯಾಂಕಿಂಗ್ ಪಟ್ಟಿಯಲ್ಲಿ 8 ರಿಂದ 13ನೇ ಸ್ಥಾನಕ್ಕೆ ಕುಸಿದಿದ್ದಾರೆ. ಇದನ್ನೂ ಓದಿ: ಭಾರತ – ವೆಸ್ಟ್ಇಂಡೀಸ್ ಏಕದಿನ ಕ್ರಿಕೆಟ್‌ ಸರಣಿಗೆ ಆಯ್ಕೆ ಪಟ್ಟಿ ಪ್ರಕಟ – ಶಿಖರ್ ಧವನ್ ಕ್ಯಾಪ್ಟನ್

    ಭಾರತ-ಇಂಗ್ಲೆಂಡ್ ನಡುವಿನ ಟೆಸ್ಟ್ ಕ್ರಿಕೆಟ್ ಸರಣಿಯ ಅಂತಿಮ ಪಂದ್ಯದಲ್ಲಿನ ಪ್ರದರ್ಶನಗಳು ಐಸಿಸಿ ಟೆಸ್ಟ್ ರ‍್ಯಾಂಕಿಂಗ್‌ನಲ್ಲಿ ಸಾಕಷ್ಟು ಬದಲಾವಣೆಯನ್ನುಂಟು ಮಾಡಿವೆ. ಅಂತಿಮ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ 7 ವಿಕೆಟ್‌ಗಳ ಅಂತರದಿಂದ ಜಯ ಸಾಧಿಸಿತು. ಈ ಪಂದ್ಯದಲ್ಲಿ ಜೋ ರೂಟ್ ಹಾಗೂ ಜಾನಿ ಬೈರ್‌ಸ್ಟೋವ್ ತಮ್ಮ ಆಕರ್ಷತಕ ಶತಕಗಳಿಂದ ಇಂಗ್ಲೆಂಡ್ ತಂಡವನ್ನು ಗೆಲುವಿನ ದಡಕ್ಕೆ ಸೇರಿಸಿದ್ದಲ್ಲದೇ ಟೆಸ್ಟ್ ರ‍್ಯಾಂಕಿಂಗ್‌ನಲ್ಲೂ ಸ್ಥಾನ ಪಡೆದುಕೊಳ್ಳುವಂತೆ ಮಾಡಿದೆ.

    ಟಾಪ್-10 ಆಟಗಾರರಲ್ಲಿ ಅಗ್ರಸ್ಥಾನದಲ್ಲಿರುವ ಜೋ ರೂಟ್ ತಮ್ಮ ಸ್ಥಾನವನ್ನು ಮತ್ತಷ್ಟು ಭದ್ರಪಡಿಸಿಕೊಂಡಿದ್ದಾರೆ. ಆದರೆ 11ನೇ ಸ್ಥಾನದಲ್ಲಿದ್ದ ಬೈರ್‌ಸ್ಟೋವ್ 10ನೇ ಸ್ಥಾನಕ್ಕೆ ಜಿಗಿದಿದ್ದಾರೆ. ಟೆಸ್ಟ್ನಲ್ಲಿ ಶತಕ ಹಾಗೂ ಅರ್ಧಶತಕ ಸಿಡಿಸುವ ಮೂಲಕ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದ ರಿಷಭ್ ಪಂತ್ ತಮ್ಮ ಕ್ರಿಕೆಟ್ ವೃತ್ತಿ ಜೀವನದ ಅತ್ಯುತ್ತಮ 5ನೇ ಸ್ಥಾನ ಪಡೆದುಕೊಂಡಿದ್ದಾರೆ. ಇನ್ನೂ ಕೋವಿಡ್ ಪಾಸಿಟಿವ್ ಪ್ರಕರಣದಿಂದಾಗಿ ಇಂಗ್ಲೆಂಡ್ ಟೆಸ್ಟ್‌ನಿಂದ ಹೊರಗುಳಿದ ಟೀಂ ಇಂಡಿಯಾ ಕ್ಯಾಪ್ಟನ್ ರೋಹಿತ್ ಶರ್ಮಾ 8 ರಿಂದ 9ನೇ ಸ್ಥಾನಕ್ಕೆ ಕುಸಿದಿದ್ದಾರೆ. ಇದನ್ನೂ ಓದಿ: ಭಾರತ ತಂಡದ ಒಂದು ಎಡವಟ್ಟಿನಿಂದಾಗಿ ರ್‍ಯಾಂಕಿಂಗ್‌ನಲ್ಲಿ ಜಿಗಿತ ಕಂಡ ಪಾಕ್

    4ನೇ ಸ್ಥಾನದಲ್ಲಿದ್ದ ವಿರಾಟ್ ಕೊಹ್ಲಿ ತಮ್ಮ ನಿರಂತರ ಕಳಪೆ ಬ್ಯಾಟಿಂಗ್ ಪ್ರದರ್ಶನದಿಂದಾಗಿ 13ನೇ ಸ್ಥಾನಕ್ಕೆ ಇಳಿದಿದ್ದಾರೆ. ಇದು ವಿರಾಟ್ ಅಭಿಮಾನಿಗಳಲ್ಲೂ ಬೇಸರ ಮೂಡಿಸಿದೆ.

    Live Tv
    [brid partner=56869869 player=32851 video=960834 autoplay=true]

  • IND Vs ENG T20 ಸರಣಿ: ಇಂಗ್ಲೆಂಡ್ ವಿರುದ್ಧ ಸೇಡು ತೀರಿಸಿಕೊಳ್ಳಲು ಸಜ್ಜಾದ ಭಾರತ

    IND Vs ENG T20 ಸರಣಿ: ಇಂಗ್ಲೆಂಡ್ ವಿರುದ್ಧ ಸೇಡು ತೀರಿಸಿಕೊಳ್ಳಲು ಸಜ್ಜಾದ ಭಾರತ

    ಬರ್ಮಿಂಗ್‌ಹ್ಯಾಂ: ಅಂತಿಮ ಪಂದ್ಯ ಗೆದ್ದು ಟೆಸ್ಟ್ ಸರಣಿ ಕೈವಶ ಮಾಡಿಕೊಳ್ಳುವ ಆಸೆಗೆ ತಣ್ಣೀರು ಎರಚಿದ ಇಂಗ್ಲೆಂಡ್ ವಿರುದ್ಧ ಟಿ20 ಸರಣಿಯಲ್ಲಿ ಸೇಡು ತೀರಿಸಿಕೊಳ್ಳಲು ಭಾರತ ಸಜ್ಜಾಗಿದೆ.

    ಇದೇ ಜುಲೈ 7ರಿಂದ ಭಾರತ ಹಾಗೂ ಇಂಗ್ಲೆಂಡ್ ನಡುವಿನ T20 ಸರಣಿ ಆರಂಭವಾಗಲಿದೆ. ನಂತರ ಜುಲೈ 15ರಿಂದ ಏಕದಿನ ಕ್ರಿಕೆಟ್ ಸರಣಿ ನಡೆಯಲಿದೆ. ಟೀಂ ಇಂಡಿಯಾ ಮತ್ತು ಇಂಗ್ಲೆಂಡ್ ನಡುವೆ 3 ಟಿ20 ಪಂದ್ಯಗಳು ಮತ್ತು 3 ಏಕದಿನ ಪಂದ್ಯಗಳು ನಡೆಯಲಿವೆ. ಜುಲೈ 7, 9 ಮತ್ತು 10 ರಂದು ಟಿ20 ಸರಣಿ ನಡೆಯಲಿದ್ದು, ಜುಲೈ 12, 14 ಹಾಗೂ 17ರಂದು ಏಕದಿನ ಸರಣಿ ನಡೆಯಲಿದೆ. ಇದನ್ನೂ ಓದಿ: ಭಾರತದ ಕನಸು ಭಗ್ನ – ಇಂಗ್ಲೆಂಡ್‌ಗೆ 7 ವಿಕೆಟ್‌ಗಳ ಜಯ

    ಬರ್ಮಿಂಗ್‌ಹ್ಯಾಮ್‌ನ ಎಡ್ಜಾಬಸ್ಟನ್ ಸ್ಟೇಡಿಯಂನಲ್ಲಿ ನಡೆದ 5ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದ 2ನೇ ಇನ್ನಿಂಗ್ಸ್‌ನಲ್ಲಿ ಟೀಂ ಇಂಡಿಯಾ ನೀಡಿದ್ದ 378 ರನ್‌ಗಳ ಗುರಿ ಪಡೆದಿದ್ದ ಇಂಗ್ಲೆಂಡ್ ತಂಡವು 2ನೇ ಇನ್ನಿಂಗ್ಸ್‌ನ 76.4 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 378 ರನ್‌ಗಳಿಸುವ ಮೂಲಕ ಜಯ ಸಾಧಿಸಿತು. ಇದರಿಂದ ಅಂತಿಮ ಟೆಸ್ಟ್‌ ಗೆದ್ದು ಸರಣಿ ಕೈವಶ ಮಾಡಿಕೊಳ್ಳುವ ಟೀಂ ಇಂಡಿಯಾ ಕನಸು ಭಗ್ನಗೊಂಡಿತು. ಇದನ್ನೂ ಓದಿ: ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯಕ್ಕೆ ವಿವಿಎಸ್ ಲಕ್ಷ್ಮಣ್ ಟೀಂ ಇಂಡಿಯಾ ಕೋಚ್?

    ಟಿ20 ಸರಣಿ – ಯಾವಾಗ ಎಲ್ಲಿ?

    • 1ನೇ ಪಂದ್ಯ – ಜುಲೈ 07- ಸೌಥಂಪ್ಟನ್‌ನ ದಿ ರೋಸ್‌ಬೌಲ್ ಸ್ಟೇಡಿಯಂ
    • 2ನೇ ಪಂದ್ಯ – ಜುಲೈ 09- ಬರ್ಮಿಂಗ್‌ಹ್ಯಾಂನ ಎಡ್ಜಾಬಸ್ಟನ್ ಸ್ಟೇಡಿಯಂ
    • 3ನೇ ಪಂದ್ಯ – ಜುಲೈ 10- ನಾಟಿಂಗ್‌ಹ್ಯಾಂನ ಟ್ರೆಂಟ್‌ಬ್ರಿಡ್ಜ್ ಸ್ಟೇಡಿಯಂ

    ಏಕದಿನ ಸರಣಿ – ಯಾವಾಗ ಎಲ್ಲಿ?

    • ಮೊದಲ ಏಕದಿನ – ಜುಲೈ 12- ಲಂಡನ್‌ನ ದಿ ಓವಲ್ ಸ್ಟೇಡಿಯಂ
    • 2ನೇ ಏಕದಿನ – ಜುಲೈ 14- ಲಂಡನ್‌ನ ಲಾರ್ಡ್ಸ್ ಸ್ಟೇಡಿಯಂ
    • 3ನೇ ಏಕದಿನ – ಜುಲೈ 17- ಮ್ಯಾಂಚೆಸ್ಟರ್‌ನ ಎಮಿರೇಟ್ಸ್ ಒಲ್ಡ್ ಟ್ರಾನ್ಸ್‌ಫರ್ಡ್‌ ಸ್ಟೇಡಿಯಂ

    Live Tv
    [brid partner=56869869 player=32851 video=960834 autoplay=true]

  • ಭಾರತದ ಕನಸು ಭಗ್ನ – ಇಂಗ್ಲೆಂಡ್‌ಗೆ 7 ವಿಕೆಟ್‌ಗಳ ಜಯ

    ಭಾರತದ ಕನಸು ಭಗ್ನ – ಇಂಗ್ಲೆಂಡ್‌ಗೆ 7 ವಿಕೆಟ್‌ಗಳ ಜಯ

    ಬರ್ಮಿಂಗ್‌ಹ್ಯಾಮ್: ಜೋ ರೂಟ್ ಹಾಗೂ ಜಾನಿ ಬೈರ್‌ಸ್ಟೋವ್ ಅವರ ಶತಕಗಳ ನೆರವಿನಿಂದ ಭಾರತದ ವಿರುದ್ಧದ 5ನೇ ಟೆಸ್ಟ್ ಪಂದ್ಯವನ್ನು ಇಂಗ್ಲೆಂಡ್ 7 ವಿಕೆಟ್‌ಗಳಿಂದ ಜಯಗಳಿಸಿದೆ. ಈ ಮೂಲಕ ಟೆಸ್ಟ್ ಸರಣಿ 2-2ರಲ್ಲಿ ಸಮಬಲ ಸಾಧಿಸಿದೆ.

    ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯುತ್ತಿರುವ 5ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದ 2ನೇ ಇನ್ನಿಂಗ್ಸ್‌ನಲ್ಲಿ ಟೀಂ ಇಂಡಿಯಾ ನೀಡಿದ್ದ 378 ರನ್‌ಗಳ ಗುರಿ ಪಡೆದಿದ್ದ ಇಂಗ್ಲೆಂಡ್ ತಂಡವು 2ನೇ ಇನ್ನಿಂಗ್ಸ್‌ನ 76.4 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 378 ರನ್‌ಗಳಿಸುವ ಮೂಲಕ ಜಯ ಸಾಧಿಸಿತು. ಇದರಿಂದ ಅಂತಿಮ ಟೆಸ್ಟ್ಗೆದ್ದು ಸರಣಿ ಕೈವಶ ಮಾಡಿಕೊಳ್ಳುವ ಟೀಂ ಇಂಡಿಯಾ ಕನಸು ಭಗ್ನಗೊಂಡಿತು. ಇದನ್ನೂ ಓದಿ: ಹಿಟ್‌ಮ್ಯಾನ್ ರೋಹಿತ್ ಶರ್ಮಾ ಕೋವಿಡ್‌ನಿಂದ ಗುಣಮುಖ – T20ಗೆ ಲಭ್ಯ

    ಇಂಗ್ಲೆಂಡ್ ತಂಡವು 2ನೇ ಇನ್ನಿಂಗ್ಸ್‌ನ 4ನೇ ದಿನದ ಆಟದಲ್ಲಿ 3 ವಿಕೆಟ್‌ಗಳ ನಷ್ಟಕ್ಕೆ 259 ರನ್ ಪೇರಿಸಿತ್ತು. ಜಾನಿ ಬೈರ್‌ಸ್ಟೋವ್ ಹಾಗೂ ಜೋ ರೂಟ್ ತಮ್ಮ ಆಕರ್ಷಕ ಬ್ಯಾಟಿಂಗ್‌ನಿಂದ ಕ್ರಮವಾಗಿ 114 ಹಾಗೂ 142 ರನ್‌ಗಳನ್ನು ಗಳಿಸಿದ್ದರು. ಇದನ್ನೂ ಓದಿ: ಸುಮ್ನೆ ಬ್ಯಾಟಿಂಗ್ ಮಾಡ್ ಗುರು – ಬೈರ್‌ಸ್ಟೋವ್ ಜೊತೆ ವಾಗ್ವಾದಕ್ಕಿಳಿದ ಕೊಹ್ಲಿ

    5ನೇ ದಿನದ ಆಟಕ್ಕೆ ಗೆಲ್ಲಲು 119 ರನ್‌ಗಳು ಮಾತ್ರವೇ ಬೇಕಿತ್ತು. ಆದರೆ ಟೀಂ ಇಂಡಿಯಾವು ರೂಟ್ ಹಾಗೂ ಬೈರ್‌ಸ್ಟೋವ್ ಅವರ ಜೋಡಿಯು ಭಾರತದ ಸರಣಿ ಗೆಲ್ಲುವ ಆಸೆಗೆ ತಣ್ಣೀರು ಎರಚಿತು.

    ಮೊದಲ 4 ಪಂದ್ಯಗಳಲ್ಲಿ ಟೀಂ ಇಂಡಿಯಾ 2 ಪಂದ್ಯಗಳಲ್ಲಿ ಗೆದ್ದು ಮುನ್ನಡೆ ಸಾಧಿಸಿತ್ತು. ಕಳೆದ ವರ್ಷದ ಆಗಸ್ಟ್ ತಿಂಗಳಲ್ಲಿ ನ್ಯಾಟಿಂಗ್‌ಹ್ಯಾಮ್‌ನಲ್ಲಿ ನಡೆದಿದ್ದ ಮೊದಲ ಪಂದ್ಯವು ಡ್ರಾನಲ್ಲಿ ಅಂತ್ಯಗೊಂಡಿತ್ತು. ಕಾಶಿ ಲಾರ್ಡ್ಸ್ ಮೈದಾನದಲ್ಲಿ ನಡೆದ 2ನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ 151 ರನ್‌ಗಳಿಂದ ಇಂಗ್ಲೆಂಡ್ ತಂಡವನ್ನು ಮಣಿಸಿತ್ತು. ಹೆಡಿಂಗ್ಲೆಯಲ್ಲಿ ನಡೆದ 3ನೇ ಪಂದ್ಯದಲ್ಲಿ ಅಬ್ಬರಿಸಿದ್ದ ಇಂಗ್ಲೆಂಡ್ ತಂಡವು 76 ರನ್ ಹಾಗೂ 7 ವಿಕೆಟ್‌ಗಳ ಅಂತರದಿಂದ ಭರ್ಜರಿ ಜಯ ಸಾಧಿಸಿತ್ತು.

    ಓವಲ್ ಮೈದಾನದಲ್ಲಿ ನಡೆದ 4ನೇ ಪಂದ್ಯದಲ್ಲಿ ಭಾರತವು 157 ರನ್‌ಗಳಿಂದ ಇಂಗ್ಲೆಂಡ್ ತಂಡವನ್ನು ಸೋಲಿಸಿ ಸರಣಿ ಕೈವಶ ಮಾಡಿಕೊಳ್ಳುವ ಕನಸುಕಂಡಿತ್ತು. ಆದರೆ ಅಂತಿಮ ಟೆಸ್ಟ್‌ನಲ್ಲಿ ರೂಟ್ ಹಾಗೂ ಬೈರ್‌ಸ್ಟೋವ್ ಜೋಡಿಯ ಬಿರುಸಿನ ಆಟವು ಇಂಡಿಯಾದ ಸರಣಿ ಗೆಲ್ಲುವ ಕನಸನ್ನು ನುಚ್ಚುನೂರು ಮಾಡಿದೆ.

    ರೂಟ್, ಬೈರ್‌ಸ್ಟೋವ್ ಶತಕಗಳ ಅಬ್ಬರ: ಅಂತಿಮ ಟೆಸ್ಟ್ ಪಂದ್ಯದ 2ನೇ ಇನ್ನಿಂಗ್ಸ್‌ನಲ್ಲಿ 4ನೇ ವಿಕೆಟ್ ಆಟಕ್ಕೆ ಜೊತೆಯಾದ ಜೋ ರೂಟ್ ಹಾಗೂ ಜಾನಿ ಬೈರ್‌ಸ್ಟೋವ್ 315 ಎಸೆತಗಳಲ್ಲಿ 268 ರನ್‌ಗಳ ಜೊತೆಯಾಟವಾಡಿದರು. ಇಬ್ಬರ ಆಕರ್ಷಕ ಶತಕಗಳ ನೆರವಿನಿಂದ ತವರಿನಲ್ಲಿ ಮುಖಭಂಗ ಆಗುವುದನ್ನು ತಪ್ಪಿಸಿಕೊಂಡಿತು. ಜೋ ರೂಟ್ 173 ಎಸೆತಗಳಲ್ಲಿ 142 ರನ್ (19 ಫೋರ್, 1 ಸಿಕ್ಸರ್) ಗಳಿಸಿದರೆ 145 ಎಸೆತಗಳನ್ನು ಎದುರಿಸಿದ ಬೈರ್‌ಸ್ಟೋವ್ 114 ರನ್ (15 ಫೋರ್ ಹಾಗೂ 1 ಸಿಕ್ಸರ್) ಗಳಿಸುವ ಮೂಲಕ ತವರಿನಲ್ಲಿ ಗೆದ್ದು ಬೀಗಿದರು.

    ಇಂಗ್ಲೆಂಡ್ ಪರ ಬೌಲಿಂಗ್ ನಲ್ಲಿ ಬೆನ್‌ಸ್ಟೋಕ್ಸ್ 4, ಬ್ರಾಡ್ ಮತ್ತು ಪೋಟ್ಸ್ ತಲಾ 2 ವಿಕೆಟ್ ಹಾಗೂ ಲೀಚ್, ಆಂಡ್ರ‍್ಯೂಸನ್ ತಲಾ 1 ವಿಕೆಟ್ ಪಡೆದಿದ್ದರು. ಇದನ್ನೂ ಓದಿ: ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯಕ್ಕೆ ವಿವಿಎಸ್ ಲಕ್ಷ್ಮಣ್ ಟೀಂ ಇಂಡಿಯಾ ಕೋಚ್?

    ಆತಿಥೇಯ ಇಂಗ್ಲೆಂಡ್ ವಿರುದ್ಧದ 5ನೇ ಟೆಸ್ಟ್ ಪಂದ್ಯದ 2ನೇ ಇನ್ನಿಂಗ್ಸ್ ನಲ್ಲಿ ಟೀಂ ಇಂಡಿಯಾ 245 ರನ್ ಗಳಿಗೆ ಆಲೌಟ್ ಆಗಿ ಇಂಗ್ಲೆಂಡ್‌ಗೆ ಗೆಲ್ಲಲು 378 ರನ್‌ಗಳ ಗುರಿ ನೀಡಿತ್ತು. 2ನೇ ಇನ್ನಿಂಗ್ಸ್‌ನಲ್ಲಿ ಟೀಂ ಇಂಡಿಯಾ 245 ರನ್ ಗಳಿಗೆ ಸರ್ವಪತನ ಕಂಡಿತ್ತು. ಟೀಂ ಇಂಡಿಯಾ ಪರ ಚೇತೇಶ್ವರ ಪೂಜಾರ 66, ವಿರಾಟ್ ಕೊಹ್ಲಿ 20, ರಿಷಬ್ ಪಂತ್ 57, ಶ್ರೇಯಸ್ ಅಯ್ಯರ್ 19, ರವೀಂದ್ರ ಜಡೇಜಾ 23 ರನ್ ಗಳಿಸಿದ್ದರು.

    Live Tv
    [brid partner=56869869 player=32851 video=960834 autoplay=true]

  • ಸುಮ್ನೆ ಬ್ಯಾಟಿಂಗ್ ಮಾಡ್ ಗುರು – ಬೈರ್‌ಸ್ಟೋವ್ ಜೊತೆ ವಾಗ್ವಾದಕ್ಕಿಳಿದ ಕೊಹ್ಲಿ

    ಸುಮ್ನೆ ಬ್ಯಾಟಿಂಗ್ ಮಾಡ್ ಗುರು – ಬೈರ್‌ಸ್ಟೋವ್ ಜೊತೆ ವಾಗ್ವಾದಕ್ಕಿಳಿದ ಕೊಹ್ಲಿ

    ಲಂಡನ್: ಭಾರತ ಹಾಗೂ ಇಂಗ್ಲೆಂಡ್ ನಡುವೆ ನಡೆಯುತ್ತಿರುವ 5ನೇ ಟೆಸ್ಟ್ ಪಂದ್ಯದ ಮೂರನೇ ದಿನ ಭಾರತ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಮತ್ತು ಇಂಗ್ಲೆಂಡ್ ಬ್ಯಾಟ್ಸ್‌ಮ್ಯಾನ್‌ ಜಾನಿ ಬೈರ್‌ಸ್ಟೋವ್ ನಡುವೆ ಮಾತಿನ ಚಕಮಕಿ ನಡೆಯಿತು.

    ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ 416 ರನ್ ಗಳಿಸಿ ಆಲೌಟ್ ಆದ ಬಳಿಕ ಎರಡನೇ ದಿನ ಮೊದಲ ಇನ್ನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ತಂಡ 4 ವಿಕೆಟ್ ನಷ್ಟಕ್ಕೆ 84 ರನ್ ಗಳಿಸಿದ್ದ ವೇಳೆ ಮಳೆ ಬಂದ ಕಾರಣ ಪಂದ್ಯ ಸ್ಥಗಿತಗೊಳಿಸಲಾಯಿತು. ಇಂದು ಮೂರನೇ ದಿನದಾಟ ಆರಂಭಿಸಿದ ಇಂಗ್ಲೆಂಡ್ ತಂಡಕ್ಕೆ ಜಾನಿ ಬೈರ್‌ಸ್ಟೋವ್ ಮತ್ತು  ಬೆನ್ ಸ್ಟೋಕ್ಸ್ ಚೇತರಿಕೆ ನೀಡಿದರು. ಈ ನಡುವೆ ವಿರಾಟ್ ಕೊಹ್ಲಿ ಕ್ರಿಸ್‍ನಲ್ಲಿದ್ದ ಬೈರ್‌ಸ್ಟೋವ್ ಬಳಿ ಬಂದು ಮಾತು ಆರಂಭಿಸಿದರು. ಈ ವೇಳೆ ಬೈರ್‌ಸ್ಟೋವ್ ಹೋಗಿ ಫೀಲ್ಡಿಂಗ್ ಮಾಡು ಎಂದು ಕೊಹ್ಲಿಗೆ ಸಲಹೆ ನೀಡದರು. ಈ ಮಾತು ಕೇಳಿಸಿಕೊಳ್ಳುತ್ತಿದ್ದಂತೆ ಕೊಹ್ಲಿ ಕೈ ಸನ್ನೆ ಮಾಡಿ ಸುಮ್ನೆ ಬ್ಯಾಟಿಂಗ್ ಮಾಡು ಎನ್ನುತ್ತ ಗರಂ ಆದರು. ಇದನ್ನೂ ಓದಿ: ಅಂದು ಯುವಿ ಇಂದು ಬುಮ್ರಾ – ಬ್ರಾಡ್ ಕಕ್ಕಾಬಿಕ್ಕಿ ಒಂದೇ ಓವರ್‌ನಲ್ಲಿ 35 ರನ್ ಚಚ್ಚಿ ವಿಶ್ವ ದಾಖಲೆ

    ಈ ವಾಗ್ವಾದದ ಬಳಿಕ ಇಂಗ್ಲೆಂಡ್ ಪರ ಅಬ್ಬರಿಸಲು ಆರಂಭಿಸಿದ ಬೈರ್‌ಸ್ಟೋವ್ ಬೌಂಡರಿ, ಸಿಕ್ಸರ್‌ಗಳೊಂದಿಗೆ ಅಜೇಯ 91 ರನ್ (113 ಎಸೆತ, 12 ಬೌಂಡರಿ, 2 ಸಿಕ್ಸ್) ಬಾರಿಸಿ ಬ್ಯಾಟಿಂಗ್ ಮುಂದುವರಿಸಿದ್ದಾರೆ. 45.3 ಓವರ್‌ಗಳಲ್ಲಿ ಇಂಗ್ಲೆಂಡ್ 6 ವಿಕೆಟ್ ನಷ್ಟಕ್ಕೆ 200 ಗಳಿಸಿದ್ದ ವೇಳೆ ಮಳೆ ಆರಂಭವಾಗಿದೆ. ಇದನ್ನೂ ಓದಿ: 17 ವರ್ಷಗಳ ಬಳಿಕ ಧೋನಿ ದಾಖಲೆ ಸರಿಗಟ್ಟಿದ ಪಂತ್- ಅಂತಿಮ ಟೆಸ್ಟ್‌ನಲ್ಲಿ ಅಮೋಘ ಶತಕದಾಟ

    ಇಂಗ್ಲೆಂಡ್ ತಂಡ 216 ರನ್‍ಗಳ ಹಿನ್ನಡೆಯಲ್ಲಿದ್ದು, ಮೂರನೇ ದಿನದಾಟದಲ್ಲಿ ಮಳೆಯಾಟ ಆರಂಭವಾಗಿದೆ. ಇನ್ನೆರಡು ದಿನ ಬಾಕಿ ಇದ್ದು ಮಳೆ ಬರದಿದ್ದರೆ ಫಲಿತಾಂಶ ಹೊರಬರುವ ಸಾಧ್ಯತೆ ಇದೆ.

    Live Tv

  • ಜಾನಿ ಬೈರ್‌ಸ್ಟೋವ್ ಶತಕ ಸಿಡಿಸುತ್ತಿದ್ದಂತೆ ಚಪ್ಪಲಿ ತೆಗೆದು ಕೈಯಲ್ಲಿ ಹಿಡಿದ ಅಭಿಮಾನಿಗಳು!

    ಜಾನಿ ಬೈರ್‌ಸ್ಟೋವ್ ಶತಕ ಸಿಡಿಸುತ್ತಿದ್ದಂತೆ ಚಪ್ಪಲಿ ತೆಗೆದು ಕೈಯಲ್ಲಿ ಹಿಡಿದ ಅಭಿಮಾನಿಗಳು!

    ಲಂಡನ್: ನ್ಯೂಜಿಲೆಂಡ್ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ ಮೂರನೇ ಟೆಸ್ಟ್‌ನಲ್ಲಿ ಇಂಗ್ಲೆಂಡ್ ತಂಡದ ಆಟಗಾರ ಜಾನಿ ಬೈರ್‌ಸ್ಟೋವ್  ಭರ್ಜರಿ ಶತಕ ಸಿಡಿಸುತ್ತಿದ್ದಂತೆ ಸ್ಟೇಡಿಯಂನಲ್ಲಿದ್ದ ಬರ್ಮಾ ಆರ್ಮಿ ಸದಸ್ಯರು ಕಾಲಿನಲ್ಲಿದ್ದ ಚಪ್ಪಲಿ, ಶೂಗಳನ್ನು ತೆಗೆದು ಕೈಯಲ್ಲಿ ಹಿಡಿದು ಸಂಭ್ರಮಿಸಿದರು.

    ಮೂರನೇ ಟೆಸ್ಟ್ ಪಂದ್ಯದಲ್ಲಿ ಎರಡೂ ತಂಡಗಳ ಮಧ್ಯೆ ಜಿದ್ದಾಜಿದ್ದಿನ ಕಾದಾಟ ಕಂಡು ಬರುತ್ತಿದೆ. ನ್ಯೂಜಿಲೆಂಡ್ ಪ್ರಥಮ ಇನ್ನಿಂಗ್ಸ್‌ನಲ್ಲಿ 329 ರನ್‍ಗಳಿಗೆ ಆಲೌಟ್ ಆಯಿತು. ನಂತರ ಇನ್ನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ತಂಡ 55 ರನ್‍ಗಳಿಗೆ 6 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಈ ವೇಳೆ ಬ್ಯಾಟಿಂಗ್‍ಗೆ ಆಗಮಿಸಿದ ಬೈರ್‌ಸ್ಟೋವ್ ತಾಳ್ಮೆಯುತ ಇನ್ನಿಂಗ್ಸ್ ಕಟ್ಟಿದರು. ಜೇಮೀ ಓವರ್ಟನ್ ಜೊತೆ ಕೂಡಿಕೊಂಡು ಭರ್ಜರಿ ಬ್ಯಾಟ್ ಬೀಸಿದ ಬೈರ್‌ಸ್ಟೋವ್ ಶತಕ ಸಿಡಿಸುತ್ತಿದ್ದಂತೆ ಸ್ಟೇಡಿಯಂನಲ್ಲಿದ್ದ ಜಾನಿ ಬೈರ್‌ಸ್ಟೋವ್ ಬರ್ಮಾ ಆರ್ಮಿ ಸದಸ್ಯರು ತಾವು ಧರಿಸಿದ್ದ ಚಪ್ಪಲಿ, ಶೂಗಳನ್ನು ತೆಗೆದು ಕೈಯಲ್ಲಿ ಹಿಡಿದು ಬೈರ್‌ಸ್ಟೋವ್‌ಗೆ ಅಭಿನಂದನೆ ಸಲ್ಲಿಸಿದರು. ಇದನ್ನೂ ಓದಿ: ಔಟ್ ಮಾಡಿದ ಬೌಲರ್‌ಗೆ ಮಧ್ಯದ ಬೆರಳು ತೋರಿಸಿದ CSK ಆಟಗಾರ – ಟಿಎನ್‍ಪಿಎಲ್‍ನಲ್ಲಿ ಕಿರಿಕ್

    ಈ ರೀತಿ ಅಭಿನಂದನೆ ಸಲ್ಲಿಸಿ ಈ ವೀಡಿಯೋವನ್ನು ಪೋಸ್ಟ್ ಮಾಡಿದ ಬರ್ಮಾ ಆರ್ಮಿ ಚಪ್ಪಲಿಯನ್ನು ತೆಗೆದು ಬೈರ್‌ಸ್ಟೋವ್‌ಗೆ ಅಭಿನಂದಿಸಿದ್ದೇವೆ ಎಂದು ಬರೆದುಕೊಂಡಿದೆ. ಪಂದ್ಯದಲ್ಲಿ ಬೈರ್‌ಸ್ಟೋವ್‌ ಶತಕದ ನೆರವಿನಿಂದ ಕುಸಿತ ಕಂಡಿದ್ದ ಇಂಗ್ಲೆಂಡ್ ತಿರುಗೇಟು ನೀಡುತ್ತಿದ್ದು, ಅಲ್ಪ ಹಿನ್ನಡೆಯಲ್ಲಿದೆ. ಇದನ್ನೂ ಓದಿ: ಫಿಫಾ ವಿಶ್ವಕಪ್ ವೇಳೆ ಸೆಕ್ಸ್‌ ಮಾಡಿದ್ರೆ 7 ವರ್ಷ ಜೈಲು!

    ಈಗಾಗಲೇ 3 ಪಂದ್ಯಗಳ ಟೆಸ್ಟ್ ಸರಣಿಯನ್ನು ಇಂಗ್ಲೆಂಡ್ ತಂಡ 2-0 ಅಂತರದಲ್ಲಿ ವಶಪಡಿಸಿಕೊಂಡರೂ, ಮೂರನೇ ಟೆಸ್ಟ್‌ನಲ್ಲಿ ಗೆಲುವಿಗಾಗಿ ಹೋರಾಡುತ್ತಿದೆ. ಇತ್ತ ಕೊನೆಯ ಪಂದ್ಯವನ್ನು ಗೆದ್ದು ಸರಣಿಗೆ ಅಂತ್ಯವಾಡಲು ನ್ಯೂಜಿಲೆಂಡ್ ಪ್ಲಾನ್ ಮಾಡಿದೆ. ಹಾಗಾಗಿ ಎರಡೂ ತಂಡಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.

    Live Tv