Tag: JP Nadda

  • ನನ್ನಿಂದ ಟ್ಯೂಷನ್‌ ತೆಗೆದುಕೊಳ್ಳಿ: ಖರ್ಗೆ vs ನಡ್ಡಾ ವಾಕ್ಸಮರ

    ನನ್ನಿಂದ ಟ್ಯೂಷನ್‌ ತೆಗೆದುಕೊಳ್ಳಿ: ಖರ್ಗೆ vs ನಡ್ಡಾ ವಾಕ್ಸಮರ

    ನವದೆಹಲಿ: ರಾಜ್ಯಸಭೆಯಲ್ಲಿ ಕೇಂದ್ರ ಸಚಿವ ಜೆಪಿ ನಡ್ಡಾ (JP Nadda), ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ (Mallaikarjun Kharge) ಮಧ್ಯೆ ಕೇಂದ್ರಿಯ ಕೈಗಾರಿಕಾ ಭದ್ರತಾ ಸಿಬ್ಬಂದಿ (CISF) ವಿಚಾರಕ್ಕೆ ಸಂಬಂಧಿಸಿದಂತೆ ವಾಕ್ಸಮರ ನಡೆದಿದೆ.

    ಸದನದ ಬಾವಿ ಬಳಿ ಕೇಂದ್ರಿಯ ಕೈಗಾರಿಕಾ ಭದ್ರತಾ ಸಿಬ್ಬಂದಿ ನಿಯೋಜನೆ ಸರಿಯಲ್ಲ. ಸದಸ್ಯರು ತಮ್ಮ ಪ್ರಜಾಸತಾತ್ಮಕ ಹಕ್ಕುಗಳನ್ನು ಚಲಾಯಿಸುವಾಗ ಸಿಐಎಸ್‌ಎಫ್ ಇಟ್ಟು ಸದನ ನಡೆಸ್ತಿರುವುದು ಆಘಾತ ತಂದಿದೆ. ಜೇಟ್ಲಿ, ಸುಷ್ಮಾಸ್ವರಾಜ್ ಪ್ರಜಾಸತ್ತಾತ್ಮಕ ರೀತಿಯಲ್ಲಿ ಪ್ರತಿಭಟನೆ ಕಲಾಪಕ್ಕೆ ಅಡ್ಡಿ ಅಂದಿದ್ದರು. ಅದನ್ನು ಮುಂದುವರಿಸುತ್ತೇವೆ ಎಂದು ಖರ್ಗೆ ಹೇಳಿದರು.  ಇದನ್ನೂ ಓದಿ: ಕರ್ನಾಟಕದಲ್ಲಿರುವ 6,291 ಪ್ರಾಥಮಿಕ ಕೃಷಿ ಸಾಲ ಸಂಘಗಳಲ್ಲಿ 125 ಸಂಘಗಳು ದಿವಾಳಿ ಅಂಚಿನಲ್ಲಿವೆ: ಅಮಿತ್ ಶಾ

    ಖರ್ಗೆ ಹೇಳಿಕೆಯನ್ನು ರಾಜ್ಯಸಭಾ ಉಪಸಭಾಪತಿ ಹರಿವಂಶ್ ತಳ್ಳಿ ಹಾಕಿದರು. ಇದು ಸಿಐಎಸ್‌ಎಫ್ ಸಿಬ್ಬಂದಿಯಲ್ಲ, ಸಂಸತ್ತಿನ ಭದ್ರತಾ ಸಿಬ್ಬಂದಿ. ಮಾರ್ಷಲ್ ಮಾತ್ರ ಸಭಾಧ್ಯಕ್ಷರ ಆದೇಶ ಪಾಲಿಸುತ್ತಾರೆ ಎಂದು ಸ್ಪಷ್ಪಪಡಿಸಿದರು. ಹಾಗಾದರೆ, ಈ ಸದನವನ್ನು ಯಾರು ನಡೆಸುತ್ತಿದ್ದಾರೆ ನೀವಾ? ಅಥವಾ ಅಮಿತ್ ಶಾನ ಎಂದು ಖರ್ಗೆ ಮರು ಪ್ರಶ್ನಿಸಿದರು.

    ಮಧ್ಯಪ್ರವೇಶಿಸಿದ ಕೇಂದ್ರ ಸಚಿವ ನಡ್ಡಾ, ಕಲಾಪಕ್ಕೆ ಅಡ್ಡಿಪಡಿಸುವುದು ಪ್ರಜಾಸತ್ತಾತ್ಮಕವಲ್ಲ. ಪ್ರತಿಪಕ್ಷವಾಗಿ ಹೇಗೆ ಕೆಲಸ ಮಾಡಬೇಕೆಂದ ನನ್ನಿಂದ ಟ್ಯೂಷನ್ ತೆಗೆದುಕೊಳ್ಳಿ. ಇದೇ ರೀತಿ ಮಾತನಾಡುತ್ತಿದ್ದರೆ ಮುಂದಿನ 40 ವರ್ಷ ನೀವು ವಿರೋಧ ಪಕ್ಷದಲ್ಲಿಯೇ ಇರುತ್ತೀರಿ ಎಂದು ನಡ್ಡಾ ಗುಡುಗಿದರು.

  • ಖಾಸಗಿ ಕಾರ್ಯಕ್ರಮ – ಬೆಂಗಳೂರಿಗೆ ಆಗಮಿಸಿದ್ದ ನಡ್ಡಾ

    ಖಾಸಗಿ ಕಾರ್ಯಕ್ರಮ – ಬೆಂಗಳೂರಿಗೆ ಆಗಮಿಸಿದ್ದ ನಡ್ಡಾ

    ಬೆಂಗಳೂರು: ಖಾಸಗಿ ಕಾರ್ಯಕ್ರಮದ ನಿಮಿತ್ತ ಭಾನುವಾರ ಬೆಂಗಳೂರಿಗೆ (BJP) ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ, ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆಯ ಸಚಿವ ಜೆಪಿ ನಡ್ಡಾ (JP Nadda) ಆಗಮಿಸಿದರು.

    ಜೆಪಿ ನಡ್ಡಾ ಅವರನ್ನು ಆರ್.ಅಶೋಕ್ (Ashok) ಅವರು ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಸಂಸದರಾದ ಪಿಸಿ ಮೋಹನ್, ಮತ್ತು ಶಾಸಕರಾದ ಎಸ್.ಆರ್ ವಿಶ್ವನಾಥ್ ಉಪಸ್ಥಿತರಿದ್ದರು. ಇದನ್ನೂ ಓದಿ: ಕನ್ನಂಬಾಡಿ ಶಿಲಾನ್ಯಾಸಲ್ಲಿ ಟಿಪ್ಪು ಹೆಸರು ಬಂದಿದ್ದು ಹೇಗೆ – ಸಂಶೋಧಕರ ಚಿಕ್ಕರಂಗೇಗೌಡ ಹೇಳಿದ್ದು ಏನು?

    ಖಾಸಗಿ ಹೊಟೇಲಿನಲ್ಲಿ ಖಾಸಗಿ ಕಾರ್ಯಕ್ರಮ ಹಿನ್ನೆಲೆಯಲ್ಲಿ ಆಗಮಿಸಿದ ನಡ್ಡಾ ರಾತ್ರಿ ದೆಹಲಿಗೆ ನಿರ್ಗಮಿಸಿದರು.

  • ರಾಜ್ಯಕ್ಕೆ ಕೊಡಬೇಕಾದ ಯೂರಿಯಾ ಕೂಡಲೇ ಬಿಡುಗಡೆ ಮಾಡಿ – ಕೇಂದ್ರ ಸಚಿವರಿಗೆ ಸಿಎಂ ಪತ್ರ

    ರಾಜ್ಯಕ್ಕೆ ಕೊಡಬೇಕಾದ ಯೂರಿಯಾ ಕೂಡಲೇ ಬಿಡುಗಡೆ ಮಾಡಿ – ಕೇಂದ್ರ ಸಚಿವರಿಗೆ ಸಿಎಂ ಪತ್ರ

    ಬೆಂಗಳೂರು: ರಾಜ್ಯದಲ್ಲಿ ಉಂಟಾಗುತ್ತಿರುವ ಯೂರಿಯಾ (Urea) ಕೊರತೆ ಹಿನ್ನಲೆಯಲ್ಲಿ ರಾಜ್ಯಕ್ಕೆ ಕೊಡಬೇಕಾದ ಯೂರಿಯಾವನ್ನು ಕೂಡಲೇ ಬಿಡುಗಡೆಗೊಳಿಸುವಂತೆ ಕೇಂದ್ರ ಸಚಿವ ಜೆ.ಪಿ.ನಡ್ಡಾ (JP Nadda) ಅವರಿಗೆ ಸಿಎಂ ಸಿದ್ದರಾಮಯ್ಯ (CM Siddaramaiah) ಪತ್ರದ ಮೂಲಕ ಆಗ್ರಹಿಸಿದ್ದಾರೆ.ಇದನ್ನೂ ಓದಿ: Ullu, ALTT ಬಾಲಾಜಿ ಸೇರಿದಂತೆ 25 OTT ಪ್ಲಾಟ್‌ಫಾರಂಗಳು ಬ್ಯಾನ್‌

    ಪತ್ರದಲ್ಲಿ, ರಾಜ್ಯಕ್ಕೆ ಒಟ್ಟು 11.17 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಕೊಡಬೇಕಿತ್ತು. ಇಲ್ಲಿಯವರೆಗೆ 5.16 ಲಕ್ಷ ಮೆಟ್ರಿಕ್ ಟನ್ ಮಾತ್ರ ಕೊಡಲಾಗಿದೆ. ರಾಜ್ಯಕ್ಕೆ ಇನ್ನೂ 6.80 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಬರಬೇಕಿದೆ. ಆದರೆ ಕೆಲ ಫರ್ಟಿಲೈಸರ್ ಕಂಪನಿಗಳು ಕೊರತೆಯ ಕಾರಣ ಹೇಳಿ ಯೂರಿಯಾ ಒದಗಿಸುತ್ತಿಲ್ಲ. ಹೀಗಾಗಿ ಕೂಡಲೇ ಯೂರಿಯಾ ಕೊಡುವಂತೆ ಒತ್ತಾಯಿಸಿದ್ದಾರೆ.

    ಕಳೆದ ವರ್ಷಕ್ಕಿಂತ ಈ ಬಾರಿ ಮುಂಗಾರು ಮಳೆ ಹೆಚ್ಚಾಗಿದೆ. ಕಾವೇರಿ, ತುಂಗಭದ್ರಾ, ಕೃಷ್ಣಾದಿಂದ ನೀರು ಬಿಡುಗಡೆಯಾಗಿದೆ. ಇದರಿಂದ ರೈತರು ಕೃಷಿ ಚಟುವಟಿಕೆಗಳನ್ನ ಪ್ರಾರಂಭ ಮಾಡಿದ್ದಾರೆ. ಕಳೆದ ವರ್ಷಕ್ಕಿಂತ ಎರಡು ಲಕ್ಷ ಹೆಕ್ಟೇರ್‌ಗಳಲ್ಲಿ ಕೃಷಿ ಚಟುವಟಿಕೆಗಳು ಹೆಚ್ಚಾಗಿದೆ. ಹೀಗಾಗಿ ಕೂಡಲೇ ಯೂರಿಯಾ ಒದಗಿಸುವಂತೆ ಮನವಿ ಮಾಡಿದ್ದಾರೆ.ಇದನ್ನೂ ಓದಿ: ಟಿ.ನರಸೀಪುರ ಪುರಸಭೆಯಲ್ಲಿ 40 ಕೋಟಿ ತೆರಿಗೆ ವಂಚನೆ ಆರೋಪ – ಆಡಿಯೋ ಸ್ಫೋಟ

  • ರಾಜ್ಯಾಧ್ಯಕ್ಷರ ಬದಲಿಸುವ ಪ್ರಸ್ತಾಪ ದೆಹಲಿಯಲ್ಲಿ ಕೇಳಿ ಬಂದಿಲ್ಲ: ಆರ್.ಅಶೋಕ್

    ರಾಜ್ಯಾಧ್ಯಕ್ಷರ ಬದಲಿಸುವ ಪ್ರಸ್ತಾಪ ದೆಹಲಿಯಲ್ಲಿ ಕೇಳಿ ಬಂದಿಲ್ಲ: ಆರ್.ಅಶೋಕ್

    ನವದೆಹಲಿ: ಬಿಜೆಪಿ (BJP) ರಾಜ್ಯಾಧ್ಯಕ್ಷರ ನೇಮಿಸುವ ಬಗ್ಗೆ ದೆಹಲಿಯಲ್ಲಿ ಯಾವುದೇ ಚರ್ಚೆ ನಡೆದಿಲ್ಲ. ಬೇರೆ ರಾಜ್ಯಗಳ ಅಧ್ಯಕ್ಷರ ನೇಮಕದ ಬಗ್ಗೆ ಚರ್ಚೆ ನಡೆಯುತ್ತಿದೆ. ಆದರೆ ಕರ್ನಾಟಕದ ಬಗ್ಗೆ ಈವರೆಗೂ ಪ್ರಸ್ತಾಪ ಕೇಳಿ ಬಂದಿಲ್ಲ. ಈ ಬಗ್ಗೆ ಚರ್ಚಿಸಲು ನಾನು ದೆಹಲಿಗೆ ಬಂದಿಲ್ಲ, ನಾನು ಆ ರೇಸ್‌ನಲ್ಲಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ (R Ashok) ಹೇಳಿದ್ದಾರೆ.

    ಕಳೆದ ಮೂರು ದಿನಗಳಿಂದ ದೆಹಲಿಯಲ್ಲಿರುವ ಆರ್.ಅಶೋಕ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್, ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ರಾಜ್ಯಾಧ್ಯಕ್ಷ ಬದಲಾವಣೆ ಚರ್ಚೆ ಬೆನ್ನಲ್ಲೇ ಹೀಗೆ ಭೇಟಿಯಾಗಿರುವುದು ಕುತೂಹಲ ಮೂಡಿಸಿತ್ತು.ಇದನ್ನೂ ಓದಿ: ಇರಾನ್‌ನ ಪರಮಾಣು ಯೋಜನೆಗೆ 30 ಶತಕೋಟಿ ಡಾಲರ್‌ ನೆರವು ಪ್ರಸ್ತಾಪಿಸಿದ ಅಮೆರಿಕ

    ವರಿಷ್ಠರ ಭೇಟಿ ಬಳಿಕ ಈ ಬಗ್ಗೆ ದೆಹಲಿಯಲ್ಲಿ ಮಾತನಾಡಿದ ಅವರು, ನಮ್ಮ ರಾಜ್ಯಾಧ್ಯಕ್ಷರ ಬಗ್ಗೆ ಚರ್ಚೆ ನಡೆದಿಲ್ಲ. ಆ ಬಗ್ಗೆ ಚರ್ಚಿಸಲು ನಾನು ಬಂದಿಲ್ಲ. ಪ್ರತಿ ಮೂರು ತಿಂಗಳಿಗೊಮ್ಮೆ ಬಂದು ರಾಜ್ಯದಲ್ಲಿ ನಡೆಯುವ ಬೆಳವಣಿಗೆ ಬಗ್ಗೆ ಮಾಹಿತಿ ನೀಡಲು ಸೂಚಿಸಿದ್ದರು. ಅದರಂತೆ ನಾನು ಮಾಹಿತಿ ನೀಡಲು ಬಂದಿದ್ದೇನೆ ಎಂದರು.

    ನಮ್ಮ ವರಿಷ್ಠರ ಜೊತೆಗೆ ಸುಧೀರ್ಘ ಮಾತುಕತೆ ನಡೆಸಿದ್ದೇನೆ. ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಗೊಂದಲ, ಶಾಸಕರ ಹೇಳಿಕೆಗಳ ಬಗ್ಗೆ ಚರ್ಚೆ ನಡೆಸಿದ್ದೇನೆ. ನಾವು ಹೋರಾಟ ಮಾಡುತ್ತಿದ್ದೇವೆ, ನಮ್ಮ ಹೋರಾಟದಿಂದ ಸಚಿವರೊಬ್ಬರು ರಾಜೀನಾಮೆ ನೀಡಿದರು. ಸಿಎಂ ಸಿದ್ದರಾಮಯ್ಯ ಸೈಟ್ ವಾಪಸ್ ನೀಡಿದರು. ಸರ್ಕಾರದ ವಿರುದ್ಧ ಹೋರಾಟ ಮಾಡಲು ನಮಗೆ ಮಾರ್ಗದರ್ಶನ ಮಾಡುತ್ತಾರೆ, ಹೋರಾಟದಲ್ಲಿ ಹಿಂದೆ ಉಳಿಯುವ ಪ್ರಶ್ನೆಯೇ ಇಲ್ಲ ಎಂದರು.

    ದೆಹಲಿಗೆ ಬಂದು ರಾಜ್ಯಾಧ್ಯಕ್ಷರ ಬಗ್ಗೆ ಚರ್ಚಿಸುವ ಅಗತ್ಯ ಇಲ್ಲ. ಬೆಂಗಳೂರಿಗೆ ಬಂದಾಗಲೇ ಅಮಿತ್ ಶಾ ಅವರ ಜೊತೆಗೆ ಸುದೀರ್ಘವಾಗಿ ಮಾತುಕತೆ ನಡೆಸಿದ್ದೇನೆ. ಕಾಂಗ್ರೆಸ್ ಸರ್ಕಾರ ನಿರ್ಗಮಿತ ಸರ್ಕಾರ, ಸರ್ಕಾರದ ವಿರುದ್ಧ ಅವರ ಶಾಸಕರೇ ಮಾತನಾಡುತ್ತಿದ್ದಾರೆ. ಶಾಸಕರು ರೆಬಲ್ ಆದರೆ, ಸರ್ಕಾರದ ಅವಧಿ ಮುಗಿತು ಎಂದರ್ಥ. ಮುಂದಿನ ಬಾರಿ ಈ ಸರ್ಕಾರ ಅಧಿಕಾರಕ್ಕೆ ಬರುವುದಿಲ್ಲ ಎಂದು ಭವಿಷ್ಯ ನುಡಿದರು.ಇದನ್ನೂ ಓದಿ: ಮಾದಕ ಲುಕ್‌ನಲ್ಲಿ ಸಪ್ತಮಿ ಶೈನ್‌ – ಅದೆಷ್ಟು ಅಂತ ನಮ್ಮ ಎದೆಗೆ ಕೊಳ್ಳಿ ಇಡ್ತೀರಿ ಅಂದ್ರು ಪಡ್ಡೆ ಹೈಕ್ಳು

  • ಬಿಎಸ್‌ವೈ ಮೊಮ್ಮಗನ ಅದ್ಧೂರಿ ಆರತಕ್ಷತೆಯಲ್ಲಿ ಜೆ.ಪಿ ನಡ್ಡಾ, ಉಪರಾಷ್ಟ್ರಪತಿ ಭಾಗಿ

    ಬಿಎಸ್‌ವೈ ಮೊಮ್ಮಗನ ಅದ್ಧೂರಿ ಆರತಕ್ಷತೆಯಲ್ಲಿ ಜೆ.ಪಿ ನಡ್ಡಾ, ಉಪರಾಷ್ಟ್ರಪತಿ ಭಾಗಿ

    ಬೆಂಗಳೂರು: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ (BS Yediyurappa) ಅವರ ಮೊಮ್ಮಗ, ಬಿ.ವೈ ರಾಘವೇಂದ್ರ (BY Raghavendra) ಪುತ್ರ ಸುಭಾಷ್ ಅವರಿಂದು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಶನಿವಾರ (ನಿನ್ನೆ) ಶನಿವಾರ ನಡೆದ ಆರತಕ್ಷತೆ ಕಾರ್ಯಕ್ರಮದಲ್ಲಿ ಗಣ್ಯಾತಿಗಣ್ಯರು ಪಾಲ್ಗೊಂಡು ನವಜೋಡಿಗಳಿಗೆ ಶುಭಹಾರೈಸಿದರು.

    ಬೆಂಗಳೂರಿನ ಅರಮನೆ ಮೈದಾನದಲ್ಲಿ ಸುಭಾಷ್ ಹಾಗೂ ಶ್ರಾವಣಾ ಅದ್ಧೂರಿ ಆರತಕ್ಷತೆ ಸಮಾರಂಭದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕೇಂದ್ರ ಸಚಿವರೂ ಆಗಿರುವ ಜೆ.ಪಿ ನಡ್ಡಾ, ಉಪರಾಷ್ಟ್ರಪತಿ ಜಗದೀಪ್ ಧನಕರ್ (Jagdeep Dhankhar), ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಆಂಧ್ರ ಪ್ರದೇಶದ ರಾಜ್ಯಪಾಲ ಅಬ್ದುಲ್ ನಜೀರ್, ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು ಪಾಲ್ಗೊಂಡು, ನವ ವಧು-ವರರಿಗೆ ಶುಭ ಹಾರೈಸಿದರು. ದನ್ನೂ ಓದಿ: ಭಾರತಕ್ಕೆ ಗುಡ್‌ನ್ಯೂಸ್: ದೇಶದ ಕಡುಬಡತನ ಪ್ರಮಾಣ 27.1% ರಿಂದ 5.3% ಕ್ಕೆ ಇಳಿಕೆ 

    ಈ ಸಂಭ್ರಮದಲ್ಲಿ ಜಮೀರ್ ಅಹ್ಮದ್, ಬೈರತಿ ಸುರೇಶ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಸೇರಿದಂತೆ ಗಣ್ಯಾತಿಗಣ್ಯರು ಭಾಗಿಯಾಗಿದ್ದರು. ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಬಿ.ವೈ ರಾಘವೇಂದ್ರ ಶಾಲು ಹೊದಿಸಿ ಗೌರವಿಸಿದರು. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ರಾಘವೇಂದ್ರ ಪತ್ನಿ ಶಾಲು ಹೊದಿಸಿ ಸ್ವಾಗತಿಸಿದರು. ದನ್ನೂ ಓದಿ: ಕಾಲ್ತುಳಿತ ಘಟನೆಯಿಂದ ಸಿಎಂ ಸಿದ್ದರಾಮಯ್ಯ ಬಹಳ ನೊಂದಿದ್ದಾರೆ: ಎಂ.ಸಿ ಸುಧಾಕರ್

    ಮಾರ್ಚ್ 24ರಂದು ಕಲಬುರಗಿಯಲ್ಲಿ ಬಿಎಸ್‌ವೈ ಪುತ್ರನ ನಿಶ್ಚಿತಾರ್ಥ ಕಾರ್ಯಕ್ರಮ ನಡೆದಿತ್ತು. ಬಿವೈ ರಾಘವೇಂದ್ರ ಪುತ್ರ ಸುಭಾಷ್ ಕಲಬುರಗಿಯ ಮಹಾದಾಸೋಹಿ ಶರಣಬಸವೇಶ್ವರ ಸಂಸ್ಥಾನದ ಲಿಂಗರಾಜಪ್ಪ ಅಪ್ಪ-ದೀಪಾಲಿ ದಂಪತಿಯ ಪುತ್ರಿ ಶ್ರಾವಣ ಅವರನ್ನು ಭಾನುವಾರ (ಇಂದು) ವರಿಸಲಿದ್ದಾರೆ. ದನ್ನೂ ಓದಿ: ಕಾಮೆಡ್‌-ಕೆ: ಎಕ್ಸಲೆಂಟ್ ಮೂಡುಬಿದಿರೆಗೆ ರಾಷ್ಟ್ರಮಟ್ಟದಲ್ಲಿ ಮೊದಲ ರ‍್ಯಾಂಕ್

  • ದೇವಸ್ಥಾನ, ಕೆರೆ, ಕೃಷಿ ಭೂಮಿ ಸೇರಿ 5,970 ಸರ್ಕಾರಿ ಆಸ್ತಿಗಳನ್ನ ವಕ್ಫ್‌ ಆಸ್ತಿ ಎಂದು ಘೋಷಿಸಲಾಗಿದೆ – ಜೆ.ಪಿ ನಡ್ಡಾ ಕಳವಳ

    ದೇವಸ್ಥಾನ, ಕೆರೆ, ಕೃಷಿ ಭೂಮಿ ಸೇರಿ 5,970 ಸರ್ಕಾರಿ ಆಸ್ತಿಗಳನ್ನ ವಕ್ಫ್‌ ಆಸ್ತಿ ಎಂದು ಘೋಷಿಸಲಾಗಿದೆ – ಜೆ.ಪಿ ನಡ್ಡಾ ಕಳವಳ

    – ಮೋದಿ ಸರ್ಕಾರದಲ್ಲಿ ಎಲ್ಲರೂ ಸಮಾನರು
    – ರಾಜ್ಯಸಭೆಯಲ್ಲಿ ಕಾಂಗ್ರೆಸ್‌ಗೆ ತಿವಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ

    ನವದೆಹಲಿ: ಕಳೆದ ಕೆಲವು ದಶಕಗಳಲ್ಲಿ 5,970 ಸರ್ಕಾರಿ ಆಸ್ತಿಗಳನ್ನು ವಕ್ಫ್‌ ಆಸ್ತಿ ಎಂದು ಘೋಷಿಸಲಾಗಿದೆ. ಕರ್ನಾಟಕದಲ್ಲಿ 1975 -2020ರ ವರೆಗೂ 40 ಆಸ್ತಿಗಳನ್ನು ವಕ್ಫ್‌ ಆಸ್ತಿ (Wafq Property) ಎಂದು ಘೋಷಿಸಲಾಗಿದೆ. ಇದರಲ್ಲಿ ಕೆರೆಗಳುಮ, ರೈತರ ಜಮೀನು, ಮಂದಿರ, ಸಾರ್ವಜನಿಕ ಆಸ್ತಿಯೂ ಸೇರಿದೆ. ವಕ್ಫ್ ಆಸ್ತಿ ಹೆಚ್ಚುತ್ತಿದೆ, ಹಾಗಾಗಿ ಅದರ ದುರುಪಯೋಗ ಆಗಬಾರದು. ಆದ್ದರಿಂದಲೇ ಅದಕ್ಕೆ ಕಾನೂನು ಮಾಡುತ್ತಿದ್ದೇವೆ ಎಂದು ಸಚಿವ ಜೆ.ಪಿ ನಡ್ಡಾ (JP Nadda) ಹೇಳಿದ್ದಾರೆ.

    ರಾಜ್ಯಸಭೆಯಲ್ಲಿ ವಕ್ಫ್ ಬಿಲ್ ಮೇಲೆ ಮಾತನಾಡಿದ ಅವರು, ಮೋದಿ ಸರ್ಕಾರದಲ್ಲಿ (Modi Government) ಎಲ್ಲರನ್ನೂ ಸಮಾನವಾಗಿ ನೋಡಲಾಗುತ್ತದೆ. ಕಳೆದ 70 ವರ್ಷಗಳಲ್ಲಿ ಯಾರು ಅವರನ್ನು ಬೆದರಿಸಿ ಇಟ್ಟಿದ್ದಾರೆ? ಅವರನ್ನು ಯಾರು ಪ್ರತ್ಯೇಕವಾಗಿ ನೋಡಿದ್ದಾರೆ? 50-100 ವರ್ಷಗಳ ಬಳಿಕ ನಾವು ಯಾರು ಇರಲ್ಲ. ಆದರೆ ಮಾಡಿದ ಕೆಲಸಗಳು ಪರಿಣಾಮ ಬೀರುತ್ತವೆ. ತ್ರಿವಳಿ ತಲಾಖ್‌ ಕೋರ್ಟ್ ಹೇಳಿದರೂ ರದ್ದು ಮಾಡಲಿಲ್ಲ, ಕಾಂಗ್ರೆಸ್ ಸರ್ಕಾರ (Congress Government) ಯಾಕೆ ರದ್ದು ಮಾಡಲಿಲ್ಲ? ಕಾಂಗ್ರೆಸ್ ಸಂಸದ ನಾಸೀರ್ ಹುಸೇನ್ ಮುಸ್ಲಿಮರನ್ನು 2ನೇ ದರ್ಜೆ ನಾಗರಿಕಂತೆ ನೋಡಲಾಗುತ್ತಿದೆ ಎನ್ನುತ್ತಾರೆ. ಮುಸ್ಲಿಂ ಮಹಿಳೆಯರನ್ನ 2ನೇ ದರ್ಜೆ ನಾಗರಿಕನ್ನಾಗಿ ನೋಡಲಾಗುತ್ತಿತ್ತು. ಆದ್ರೆ ಇಂದು ಕೋಟ್ಯಂತರ ಮುಸ್ಲಿಂ ಮಹಿಳೆಯರು (Muslim Women) ಸ್ವಾತಂತ್ರ‍್ಯಗೊಂಡಿದ್ದಾರೆ ಎಂದು ಸಚಿವರು ಹೇಳಿದರು. ಇದನ್ನೂ ಓದಿ: ನನ್ನ ವಿರುದ್ಧದ ಆರೋಪ ಸಾಬೀತುಪಡಿಸಿದ್ರೆ ರಾಜೀನಾಮೆ, ಇಲ್ಲದಿದ್ರೆ ನೀವು ಕೊಡಿ – ಅನುರಾಗ್ ಠಾಕೂರ್‌ಗೆ ಖರ್ಗೆ ಸವಾಲು

    ವಕ್ಫ್ ಅನ್ನು ಬೇರೆ ದೇಶಗಳು ಸರ್ಕಾರಕ್ಕೆ ತೆಗೆದುಕೊಂಡು ನಡೆಸುತ್ತಿವೆ. ಆದ್ರೆ ನಾವು ಸರ್ಕಾರದ ವ್ಯಾಪ್ತಿಗೆ ತೆಗೆದುಕೊಂಡಿಲ್ಲ. ಬದಲಿಗೆ ಹೊಣೆಗಾರಿಕೆಗೆ ತರುತ್ತಿದ್ದೇವೆ. ಮುಸ್ಲಿಂ ದೇಶಗಳು ವಕ್ಫ್ ಅನ್ನು ಪರಾಮರ್ಶಕ, ಡಿಜಿಟಲ್ ಮಾಡುತ್ತಿವೆ. ಭಾರತದಲ್ಲಿ ಮಾಡಲು ಏನ್ ಸಮಸ್ಯೆ? ವಕ್ಫ್ ಆಸ್ತಿ ಸರಿಯಾದ ಕೈಯಲ್ಲಿ ಇರಬೇಕು, ಸರಿಯಾಗಿ ಬಳಕೆಯಾಗಬೇಕು. ವಕ್ಫ್ ಆಸ್ತಿ ಹೆಚ್ಚುತ್ತಿದೆ, ಹಾಗಾಗಿ ಅದರ ದುರುಪಯೋಗ ಆಗಬಾರದು. ಆದ್ದರಿಂದಲೇ ಅದಕ್ಕೆ ಕಾನೂನು ಮಾಡುತ್ತಿದ್ದೇವೆ, ದುರುಪಯೋಗ ತಡೆಯುತ್ತಿದ್ದೇವೆ ಎಂದು ಜೆ.ಪಿ ನಡ್ಡಾ ಹೇಳಿದರು. ಇದನ್ನೂ ಓದಿ: 25 ಸಾವಿರ ಶಿಕ್ಷಕರ ವಜಾ – ಜಡ್ಜ್‌ಗಳ ಮನೆಯಲ್ಲಿ ಹಣ ಪತ್ತೆಯಾದ್ರೆ ವರ್ಗಾವಣೆ, ಶಿಕ್ಷಕರ ವಜಾ ಯಾಕೆ? – ಮಮತಾ ಬ್ಯಾನರ್ಜಿ ಪ್ರಶ್ನೆ

    ಕಳೆದ ಕೆಲವು ದಶಕಗಳಿಂದ 5,970 ಸರ್ಕಾರಿ ಆಸ್ತಿಗಳನ್ನು ವಕ್ಫ್ ಆಸ್ತಿ ಎಂದು ಘೋಷಿಸಲಾಗಿದೆ. ಕರ್ನಾಟಕದಲ್ಲಿ 1975 -2020ರ ವರೆಗೂ 40 ಆಸ್ತಿಗಳನ್ನು ವಕ್ಫ್‌ ಆಸ್ತಿ ಎಂದು ಘೋಷಿಸಲಾಗಿದೆ. ಇದರಲ್ಲಿ ಕೆರೆಗಳುಮ, ರೈತರ ಜಮೀನು, ಮಂದಿರ, ಸಾರ್ವಜನಿಕ ಆಸ್ತಿಯೂ ಸೇರಿದೆ. ವಕ್ಫ್ ಆಸ್ತಿಯಲ್ಲಿ ಏರಿಕೆಯಾದರೂ ಅದರ ಆದಾಯದಲ್ಲಿ ಯಾವುದೇ ಏರಿಕೆಯಾಗಿಲ್ಲ. ವಕ್ಫ್ ಆಸ್ತಿ ದುರ್ಬಳಕೆ ಬಗ್ಗೆ ಸಿಎಜಿ ವರದಿಯಲ್ಲಿ ಉಲ್ಲೇಖಿಸಿದೆ. ಕೇರಳದಲ್ಲಿ ಕ್ರಿಶ್ಚಿಯನ್ ಆಸ್ತಿಯನ್ನೂ ವಶಪಡಿಸಿಕೊಳ್ಳಿಸಲಾಗುತ್ತಿದೆ. ಅವರು ನಮ್ಮ ಬಳಿ ಅಳಲು ವ್ಯಕ್ತಪಡಿಸುತ್ತಿದ್ದಾರೆ. ಈ ದುರ್ಬಳಕೆಗೆ ಕಡಿವಾಣ ಹಾಕೋದಕ್ಕೆ ವಕ್ಫ್‌ ಮಸೂದೆಗೆ ತಿದ್ದುಪಡಿ ತರಲಾಗಿದೆ. ಇದನ್ನೂ ಓದಿ: ರಾಹುಲ್ ಜೊತೆ ಸಿದ್ದರಾಮಯ್ಯ ಪ್ರತ್ಯೇಕ ಮಂಥನ – ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ಸ್ಥಾಪಿಸಲು ತೀರ್ಮಾನ

  • ಜೆ.ಪಿ ನಡ್ಡಾ ವಿರುದ್ಧ ಹಕ್ಕುಚ್ಯುತಿ ಮಂಡನೆ ಮಾಡ್ತೀನಿ: ಡಿಕೆಶಿ

    ಜೆ.ಪಿ ನಡ್ಡಾ ವಿರುದ್ಧ ಹಕ್ಕುಚ್ಯುತಿ ಮಂಡನೆ ಮಾಡ್ತೀನಿ: ಡಿಕೆಶಿ

    ಬೆಂಗಳೂರು: ನನ್ನ ಹೆಸರನ್ನು ಎಲ್ಲಾ ಕಡೆ ತೆಗೆದುಕೊಂಡರೆ ತೆಗೆದುಕೊಳ್ಳಲಿ. ನಾನು ಜೆ.ಪಿ ನಡ್ಡಾ (JP Nadda) ವಿರುದ್ಧ ಹಕ್ಕುಚ್ಯುತಿ ಮಂಡನೆ ಮಾಡುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ.

    ಈ ಕುರಿತು ಮಾತನಾಡಿದ ಅವರು, ಜೆ.ಪಿ.ನಡ್ಡಾಗಿಂತ ನಾನು ಸೆನ್ಸಿಬಲ್ ರಾಜಕಾರಣಿ. ನಾನು 36 ವರ್ಷ ಶಾಸಕ. ನಮ್ಮದು ರಾಷ್ಟ್ರೀಯ ಪಕ್ಷ. ಸಂವಿಧಾನ ಏನು? ಸಂವಿಧಾನ ಏನು ಹೇಳುತ್ತದೆ ಎಂಬ ಪರಿಜ್ಞಾನ ನನಗಿದೆ. ಬಿಜೆಪಿಯವರು ದಾರಿ ತಪ್ಪಿಸುತ್ತಿದ್ದಾರೆ. ಅವರ ಗ್ರಾಫ್ ಇಳಿಯುತ್ತಿದೆ ಎಂದರು. ಇದನ್ನೂ ಓದಿ: ಹನಿಟ್ರ್ಯಾಪ್ ಪ್ರಕರಣ; FIR ಆಗದೇ ತನಿಖೆಗೆ ಕೊಡಲು ಆಗಲ್ಲ: ಪರಮೇಶ್ವರ್

    ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ನಾನು ಹೇಳಿಲ್ಲ. ಇದು ರಾಜಕೀಯ ಪಿತೂರಿ. ಬಿಜೆಪಿ ಅವರಿಗೆ ರಾಜಕೀಯ ಅಷ್ಟೇ. ಮುಸ್ಲಿಂ ಕೋಟಾ ಬಗ್ಗೆ ನ್ಯಾಯಾಲಯ ತೀರ್ಪುಗಳ ಬಗ್ಗೆ ಹೇಳಿದ್ದೇನೆ. ಸಂವಿಧಾನ ಬದಲಾವಣೆ ಬಗ್ಗೆ ಎಲ್ಲಿ ಮಾತನಾಡಿದ್ದೇನೆ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಮಕ್ಕಳನ್ನು ಕರೆದುಕೊಂಡು ಹೋಗುವಾಗ ಲಾರಿ ಡಿಕ್ಕಿ – ತಂದೆ ಸ್ಥಳದಲ್ಲೇ ಸಾವು

  • Delhi Poll | ಗರ್ಭಿಣಿಯರಿಗೆ 21,000 ರೂ., ಪ್ರತಿ ಮಹಿಳೆಗೆ 2,500 ರೂ., 500 ರೂ.ಗೆ ಗ್ಯಾಸ್‌ ಸಿಲಿಂಡರ್‌ – ಬಿಜೆಪಿ ʻಸಂಕಲ್ಪ ಪತ್ರʼ ಬಿಡುಗಡೆ

    Delhi Poll | ಗರ್ಭಿಣಿಯರಿಗೆ 21,000 ರೂ., ಪ್ರತಿ ಮಹಿಳೆಗೆ 2,500 ರೂ., 500 ರೂ.ಗೆ ಗ್ಯಾಸ್‌ ಸಿಲಿಂಡರ್‌ – ಬಿಜೆಪಿ ʻಸಂಕಲ್ಪ ಪತ್ರʼ ಬಿಡುಗಡೆ

    ನವದೆಹಲಿ: ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಗಾಗಿ ʻಸಂಕಲ್ಪ ಪತ್ರʼ (ಪ್ರಣಾಳಿಕೆ) ಬಿಡುಗಡೆ ಮಾಡಿರುವ ಬಿಜೆಪಿ ಹಲವು ಗ್ಯಾರಂಟಿಗಳನ್ನ ಘೋಷಣೆ ಮಾಡಿದೆ.

    ಫೆ.5ರಂದು ನಡೆಯಲಿರುವ ಚುನಾವಣೆ ಹಿನ್ನೆಲೆ ಕೇಂದ್ರ ಸಚಿವರೂ ಆಗಿರುವ ಪಕ್ಷದ ರಾಷ್ಟ್ರೀಯ ಜೆ.ಪಿ ನಡ್ಡಾ ಅವರು ಸಂಕಲ್ಪ ಪತ್ರ ಬಿಡುಗಡೆಗೊಳಿಸಿದರು. ಅಲ್ಲದೇ ಆಡಳಿತಾರೂಢ ಆಪ್‌ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡುತ್ತಲೇ ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಭರವಸೆಗಳನ್ನು ಈಡೇರಿಸುವುದಾಗಿ ಆಶ್ವಾಸನೆ ನೀಡಿದರು. ಇದನ್ನೂ ಓದಿ: 500 ರೂ.ಗೆ ಗ್ಯಾಸ್ ಸಿಲಿಂಡರ್, 300 ಯೂನಿಟ್ ವಿದ್ಯುತ್ ಉಚಿತ – ದೆಹಲಿ ಚುನಾವಣೆಗೆ `ಕೈ’ ಗ್ಯಾರಂಟಿ

    ಮಹಿಳೆಯರಿಗೆ 6 ಪೌಷ್ಠಿಕಾಂಶ ಕಿಟ್‌ಗಳು, ಗರ್ಭಿಣಿಯರಿಗೆ 21,000 ರೂ. ನೀಡಲಾಗುವುದು. ಅಲ್ಲದೇ ಮಹಿಳಾ ಸಮೃದ್ಧಿ ಯೋಜನೆಯಡಿ ಮಹಿಳೆಯರಿಗೆ ಪ್ರತಿ ತಿಂಗಳು 2,500 ರೂ. ನೆರವು, 500 ರೂ. ಗೆ ಎಲ್‌ಪಿಜಿ ಸಿಲಿಂಡರ್ ನೀಡುವುದಾಗಿ ಘೋಷಿಸಿದರು. ಇದರೊಂದಿಗೆ 60-70 ವರ್ಷ ವಯಸ್ಸಿನ ಹಿರಿಯ ನಾಗರಿಕರಿಗೆ 2,500 ರೂ. ಮತ್ತು 70 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮಾಸಿಕ 3,000 ರೂ. ನೆರವು ನೀಡುವುದಾಗಿ ಘೋಷಿಸಿದ್ದಾರೆ. ಇದನ್ನೂ ಓದಿ: ಕುಂಭಮೇಳದಲ್ಲಿ 7 ಅಡಿ ಎತ್ತರದ ರಷ್ಯಾದ ಬಾಬಾ – ‘ಪರಶುರಾಮನ ಅವತಾರ’ ಎಂದ ಭಕ್ತರು

    ಅಲ್ಲದೇ ಪಕ್ಷ ಅಧಿಕಾರಕ್ಕೆ ಬಂದರೆ, ಮೊದಲ ಸಂಪುಟ ಸಭೆಯಲ್ಲೇ ಆಯುಷ್‌ಮಾನ್‌ ಭಾರತ್ ಯೋಜನೆ ಜಾರಿಗೆ ಒಪ್ಪಿಗೆ ನೀಡಲಾಗುವುದು ಜೊತೆಗೆ ಹೆಚ್ಚುವರಿಯಾಗಿ ಆರೋಗ್ಯ ರಕ್ಷಣೆಗಾಗಿ 5 ಲಕ್ಷ ರೂ. ನೀಡಲಾಗುವುದು. 500 ರೂ.ಗೆ ಎಲ್‌ಪಿಜಿ ಸಿಲಿಂಡರ್‌ ನೀಡುವ ಜೊತೆಗೆ ಹೋಳಿ ಮತ್ತು ದೀಪಾವಳಿ ಹಬ್ಬಗಳ ಸಂದರ್ಭದಲ್ಲಿ 1 ಉಚಿತ ಸಿಲಿಂಡ‌ರ್ ನೀಡಲಾಗುವುದು ಎಂದು ಗ್ಯಾರಂಟಿ ನೀಡಿದರು.

    ಇದೇ ವೇಳೆ ಆಪ್‌ ವಿರುದ್ಧ ವಾಗ್ದಾಳಿ ನಡೆಸಿದ ಕೇಂದ್ರ ಸಚಿವ ನಡ್ಡಾ, ಬಿಜೆಪಿಯ ಪ್ರಣಾಳಿಕೆ ದೆಹಲಿಯ ಅಭಿವೃದ್ಧಿಗೆ ಅಡಿಪಾಯ ಎಂದು ಬಣ್ಣಿಸಿದರು. ಇದನ್ನೂ ಓದಿ: ಕುಂಭಮೇಳದಲ್ಲಿ ಪಾಲ್ಗೊಳ್ಳಲು 50 ವರ್ಷದ ವ್ಯಕ್ತಿಯಿಂದ ಸೈಕಲ್‌ನಲ್ಲಿ 1,100 ಕಿಮೀ ಪ್ರಯಾಣ

  • ರೆಬೆಲ್ಸ್ ವಿರುದ್ಧ ನಡ್ಡಾಗೆ ವಿಜಯೇಂದ್ರ ದೂರು-ಶೀಘ್ರವೇ ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ

    ರೆಬೆಲ್ಸ್ ವಿರುದ್ಧ ನಡ್ಡಾಗೆ ವಿಜಯೇಂದ್ರ ದೂರು-ಶೀಘ್ರವೇ ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ

    ಬೆಂಗಳೂರು: ಬಣ ಬಡಿದಾಟ ತೀವ್ರಗೊಂಡಿರುವ ಹೊತ್ತಲ್ಲೇ ರಾಜ್ಯಕ್ಕೆ ಎಂಟ್ರಿಕೊಟ್ಟ ಜೆಪಿ ನಡ್ಡಾಗೆ (JP Nadda) ನಿರೀಕ್ಷೆಯಂತೆಯೇ ವಿಜಯೇಂದ್ರ (BY Vijayendra) ರೆಬೆಲ್ ಬಣದ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಿದ್ದಾರೆ.

    ಪ್ರತ್ಯೇಕ ಹೋರಾಟಕ್ಕೆ ಬ್ರೇಕ್ ಹಾಕಿಸಿ ಸಹಕಾರ ತತ್ವ ಬೋಧಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ. ಇದಕ್ಕೆ ನಡ್ಡಾ, ಎಲ್ಲಾ ಸರಿ ಹೋಗಲಿದೆ. ನಾನು ಸಹ ಅವರನ್ನ ಕರೆದು ಮಾತನಾಡುವೆ. ಸದ್ಯದಲ್ಲಿ ಎಲ್ಲದಕ್ಕೂ ಅಂತ್ಯ ಹಾಡಲಾಗುತ್ತೆ ಎಂದು ಭರವಸೆ ಕೊಟ್ಟಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಮಟನ್‌ 100 ರೂಪಾಯಿ ಇದ್ದದ್ದು 500 ರೂಪಾಯಿ ಆದ್ರೆ ತಗೋತೀರ – ಟಿಕೆಟ್‌ ದರ ಏರಿಕೆ ಬಗ್ಗೆ ಚಲುವರಾಯಸ್ವಾಮಿ ಪ್ರತಿಕ್ರಿಯೆ

    ಇನ್ನು, ಶೀಘ್ರವೇ ನಡೆಯಲಿರುವ ರಾಜ್ಯಾಧ್ಯಕ್ಷರ ಚುನಾವಣೆ ಬಗ್ಗೆಯೂ ನಡ್ಡಾ-ವಿಜಯೇಂದ್ರ ಚರ್ಚೆ ನಡೆಸಿದ್ದಾರೆ. ಸಿ ಟಿ ರವಿ (CT Ravi), ಮುನಿರತ್ನ (Munirthana) ವಿಚಾರದಲ್ಲಿ ಸರ್ಕಾರದ ನಡೆ ಖಂಡಿಸಿ ಹಮ್ಮಿಕೊಂಡಿರುವ ಹೋರಾಟಗಳ ಬಗ್ಗೆ ವಿಜಯೇಂದ್ರ ವಿವರ ನೀಡಿದ್ದಾರೆ. ಸಂಜೆ ಮುನಿರತ್ನ ಸೇರಿ ಹಲವರು ಜೆಪಿ ನಡ್ಡಾರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.

    ಜೆಪಿ ನಡ್ಡಾ ಬೆಂಗಳೂರಿಗೆ ಬಂದರೂ ಭಿನ್ನರ ಪಡೆ ಭೇಟಿ ಮಾಡಲಿಲ್ಲ. ಬದಲಿಗೆ ಶನಿವಾರದಿಂದ ಶುರು ಮಾಡಲಿರುವ 2ನೇ ಹಂತದ ವಕ್ಫ್ ವಿರೋಧಿ ಹೋರಾಟದ ಸಿದ್ಧತೆಯಲ್ಲಿ ಮುಳುಗಿತ್ತು.

     

  • ಬಿಜೆಪಿ, ಕಾಂಗ್ರೆಸ್ ದೂರು – ನಡ್ಡಾ, ಖರ್ಗೆಯಿಂದ ಸ್ಪಷ್ಟನೆ ಕೇಳಿದ ಚುನಾವಣಾ ಆಯೋಗ

    ಬಿಜೆಪಿ, ಕಾಂಗ್ರೆಸ್ ದೂರು – ನಡ್ಡಾ, ಖರ್ಗೆಯಿಂದ ಸ್ಪಷ್ಟನೆ ಕೇಳಿದ ಚುನಾವಣಾ ಆಯೋಗ

    – ಸೋಮವಾರ ಮಧ್ಯಾಹ್ನ 1 ಗಂಟೆಯೊಳಗೆ ಉತ್ತರಿಸುವಂತೆ ಸೂಚನೆ

    ನವದೆಹಲಿ: ಮಹಾರಾಷ್ಟ್ರ ಚುನಾವಣಾ ಪ್ರಚಾರದ ರ‍್ಯಾಲಿಗಳಲ್ಲಿ ಸ್ಟಾರ್ ಪ್ರಚಾರಕರಾದ ಅಮಿತ್ ಶಾ ಮತ್ತು ರಾಹುಲ್ ಗಾಂಧಿ ಮಾಡಿದ ಕಾಮೆಂಟ್‌ಗಳಿಗೆ ವಿವರಣೆ ನೀಡುವಂತೆ ಚುನಾವಣಾ ಆಯೋಗ (Election Commission) ಕೇಳಿದೆ. ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷಗಳ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ ನಡ್ಡಾ (JP Nadda) ಹಾಗೂ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ಈ ಸಂಬಂಧ ಸ್ಪಷ್ಟನೆ ನೀಡುವಂತೆ ಚುನಾವಣಾ ಆಯೋಗ ಕೇಳಿದ್ದು, ಸೋಮವಾರ ಮಧ್ಯಾಹ್ನ 1 ಗಂಟೆ ಒಳಗೆ ಉತ್ತರಿಸುವಂತೆ ಸೂಚನೆ ನೀಡಿದೆ.

    ಚುನಾವಣಾ ಪ್ರಚಾರದ ವೇಳೆ ಅಮಿತ್‌ ಶಾ ಮತ್ತು ರಾಹುಲ್‌ ಗಾಂಧಿ (Rahul Gandhi) ಅವರ ಹೇಳಿಕೆಗಳು ನೀತಿ ಸಂಹಿತಿಯನ್ನು ಉಲ್ಲಂಘಿಸಿದ ಆರೋಪ ಕೇಳಿಬಂದಿದೆ. ಇದೇ ನವೆಂಬರ್‌ 20ರಂದು ಮಹಾರಾಷ್ಟ್ರ ಮತ್ತು ಜಾರ್ಖಂಡ್‌ (Jharkhand )(ಜಾರ್ಖಂಡ್‌ನಲ್ಲಿ 2ನೇ ಸುತ್ತಿನ ಮತದಾನ) ಚುನಾವಣೆಗೆ 2 ದಿನ ಮೊದಲು ಸ್ಪಷ್ಟನೆ ನೀಡುವಂತೆ ಸೂಚಿಸಿದೆ. ಇದನ್ನೂ ಓದಿ: ‘ಅಮರನ್’ ಚಿತ್ರದಲ್ಲಿ ಮುಸ್ಲಿಮರ ಅವಹೇಳನ – ತಮಿಳುನಾಡಿನ ಚಿತ್ರಮಂದಿರಕ್ಕೆ ಪೆಟ್ರೋಲ್ ಬಾಂಬ್ ದಾಳಿ

    ಇದೇ ನವೆಂಬರ್‌ 6ರಂದು ಮುಂಬೈನಲ್ಲಿ ನಡೆದ ರ‍್ಯಾಲಿ ವೇಳೆ ರಾಹುಲ್‌ ಗಾಂಧಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಕೇಂದ್ರ ಸಚಿವ ಅರ್ಜುನ್ ರಾಮ್ ಮೇಘವಾಲ್ ನೇತೃತ್ವದ ಬಿಜೆಪಿ ನಿಯೋಗವು ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು. ರಾಹುಲ್‌, ರಾಜ್ಯಗಳ ನಡುವೆ ಭಿನ್ನಾಭಿಪ್ರಾಯ ಸೃಷ್ಟಿಸಲು ಸುಳ್ಳು ಹೇಳುತ್ತಿದ್ದಾರೆ, ಇದಕ್ಕೆ ಕಡಿವಾಣ ಹಾಕುವಂತೆ ದೂರಿನಲ್ಲಿ ತಿಳಿಸಿತ್ತು. ಇದನ್ನೂ ಓದಿ: ಅಮೆರಿಕದಲ್ಲಿ ಟೇಕಾಫ್‌ಗೆ ಸಿದ್ಧವಾಗಿದ್ದ ವಿಮಾನದ ಮೇಲೆ ಗುಂಡಿನ ದಾಳಿ – ಕಿಡಿಗೇಡಿಗಳಿಗೆ ಶೋಧ

    ಇತ್ತ ಕಾಂಗ್ರೆಸ್ ‌ಪ್ರಧಾನಿ ಮೋದಿ ಮತ್ತು ಅಮಿತ್‌ ಶಾ ವಿರುದ್ಧ ಪ್ರತ್ಯೇಕ ದೂರುಗಳನ್ನು ಸಲ್ಲಿಸಿತ್ತು. ಮೋದಿ ಮತ್ತು ಶಾ, ಮಹಾರಾಷ್ಟ್ರ, ಜಾರ್ಖಂಡ್‌ ಚುನಾವಣಾ ಪ್ರಚಾರ ರ‍್ಯಾಲಿಗಳಲ್ಲಿ ಸುಳ್ಳು ಹಬ್ಬಿಸುತ್ತಿದ್ದಾರೆ, ದೇಶ ವಿಭಜನೆಯಂತಹ ಪ್ರಚೋದನಕಾರಿ ಭಾಷಣಗಳನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು. ಈ ಸಂಬಂಧ ಉಭಯ ಪಕ್ಷಗಳ ರಾಷ್ಟ್ರೀಯ ಅಧ್ಯಕ್ಷರು ಸ್ಪಷ್ಟನೆ ನೀಡುವಂತೆ ಆಯೋಗ ಕೋರಿದೆ.

    ಇದೇ ನವೆಂಬರ್‌ 20ರಂದು ಜಾರ್ಖಂಡ್‌ನಲ್ಲಿ 2ನೇ ಹಂತ ಹಾಗೂ ಮಹಾರಾಷ್ಟ್ರದ 288 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ನವೆಂಬರ್ 23 ರಂದು ಫಲಿತಾಂಶ ಪ್ರಕಟವಾಗಲಿದೆ. ಇದನ್ನೂ ಓದಿ: 75 ಕೋಟಿ ಮೌಲ್ಯದ ಚಾಪರ್‌ನಲ್ಲಿ ಸೆಕ್ಸ್‌ ಮಾಡುತ್ತಲೇ ಸಿಕ್ಕಿಬಿದ್ದ ಬ್ರಿಟನ್‌ ಸೈನಿಕರು