Tag: Judicial Abuse

  • CFI ಅಧ್ಯಕ್ಷ ಅತಾವುಲ್ಲಾ ಮೇಲೆ ಕೇಸ್ ದಾಖಲಿಸಲು AG ಅನುಮತಿ ಕೇಳಿದ್ದೇನೆ: ಮುತಾಲಿಕ್

    CFI ಅಧ್ಯಕ್ಷ ಅತಾವುಲ್ಲಾ ಮೇಲೆ ಕೇಸ್ ದಾಖಲಿಸಲು AG ಅನುಮತಿ ಕೇಳಿದ್ದೇನೆ: ಮುತಾಲಿಕ್

    ಧಾರವಾಡ: ನಿನ್ನೆ ಹಿಜಬ್ ಕುರಿತು ನ್ಯಾಯಾಲಯ ಐತಿಹಾಸಿಕ ತೀರ್ಪನ್ನು ನೀಡಿತು. ಆದರೆ ಈ ತೀರ್ಪಿನ ಕುರಿತು ಕೆಲವರು ಕೆಟ್ಟದಾಗಿ ಮಾತನಾಡಿದ್ದಾರೆ. ಅವರ ವಿರುದ್ಧ ಕೇಸ್ ದಾಖಲಿಸಬೇಕು ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದರು.

    ಧಾರವಾಡದಲ್ಲಿ ಮಾತನಾಡಿದ ಅವರು, ನಿನ್ನೆ 6 ವಿದ್ಯಾರ್ಥಿನಿಯರು ಹೈ-ಕೋರ್ಟ್ ಆದೇಶವನ್ನು ಗೌರವಿಸದೇ ಅಗೌರವವಾಗಿ ನಡೆದುಕೊಂಡಿದ್ದಾರೆ. ಸಿಎಫ್‍ಐ ಅಧ್ಯಕ್ಷ ಅತಾವುಲ್ಲಾ ನಿನ್ನೆಯ ಹಿಜಬ್ ಹೈಕೋರ್ಟ್ ಆದೇಶವನ್ನು ಅಸಂವಿಧಾನಿಕ ಎಂದು ಹೇಳುವ ಮೂಲಕ ಕೊರ್ಟ್‍ಗೆ ಅವಮಾನ ಮಾಡಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಅಲ್ಪಸಂಖ್ಯಾತರನ್ನು ರಕ್ಷಿಸುವುದು ಮುಸ್ಲಿಮರ ಕರ್ತವ್ಯ: ಅಸ್ಸಾಂ ಸಿಎಂ

    ನ್ಯಾಯಾಲಯ ಇರುವುದೇ ಸಂವಿಧಾನದ ಮೇಲೆ. ಈ ರೀತಿಯ ಹೇಳಿಕೆ ಸರಿಯಲ್ಲ. ನಾವು ಅತಾವುಲ್ಲಾ ಅವರ ಮೇಲೆ ನ್ಯಾಯಾಂಗ ನಿಂದನೆ ಕೇಸ್ ಹಾಕಲು ಎಜಿ ಅವರಿಗೆ ಅನುಮತಿ ಕೇಳಿದ್ದೇವೆ. ಧಾರವಾಡ ಹೈಕೋರ್ಟ್‌ನಲ್ಲಿ ಹೆಚ್ಚುವರಿ ಎಜಿ(ಸಹಾಯಕ ನಿರ್ದೇಶಕಿ) ವಿದ್ಯಾವತಿ ಅವರಿಗೆ ಮನವಿ ನೀಡಿದ್ದೇವೆ ಎಂದ ಅವರು, ಮೇಲಾಧಿಕಾರಿ ಕೇಳಿ ಕೇಸ್ ಬಗ್ಗೆ ತಿಳಿಸ್ತಾರೆ ಎಂದು ವಿವರಿದರು.

    ಅರ್ಜಿದಾರರು ಮೇಲ್ಮನವಿ ಸಲ್ಲಿಸುವ ಅವಕಾಶ ಇದೆ. ಅದಕ್ಕೆ ಈ ರೀತಿ ಮಾತನಾಡಿದವರ ಮೇಲೆ ಕ್ರಮವನ್ನು ತೆಗೆದುಕೊಳ್ಳಲು ಮುಂದಾಗಬೇಕು. ನ್ಯಾಯಾಂಗ ನಿಂದನೆ ಕೇಸ್ ದಾಖಲಿಸಲು ಅನುಮತಿ ಬೇಕು ಎಂದು ಕೇಳಿದರು. ಇದನ್ನೂ ಓದಿ: ಕರೀನಾ ಕಪೂರ್ ಕಮ್ ಬ್ಯಾಕ್ – ಜಪಾನಿ ಲೇಖಕನ ಕೃತಿಗೆ ಮಿಲ್ಕಿ ಬ್ಯೂಟಿ ಹೀರೋಯಿನ್

  • ಕ್ಷಮೆ ಕೇಳುವುದರಲ್ಲಿ ತಪ್ಪೇನಿದೆ, ಆ ಪದ ಅಷ್ಟು ಕೆಟ್ಟದಾಗಿದೆಯೇ- ಪ್ರಶಾಂತ್ ಭೂಷಣ್‍ಗೆ ಸುಪ್ರೀಂ ಪ್ರಶ್ನೆ

    ಕ್ಷಮೆ ಕೇಳುವುದರಲ್ಲಿ ತಪ್ಪೇನಿದೆ, ಆ ಪದ ಅಷ್ಟು ಕೆಟ್ಟದಾಗಿದೆಯೇ- ಪ್ರಶಾಂತ್ ಭೂಷಣ್‍ಗೆ ಸುಪ್ರೀಂ ಪ್ರಶ್ನೆ

    ನವದೆಹಲಿ: ನ್ಯಾಯಂಗ ನಿಂದನೆ ಪ್ರಕರಣದಲ್ಲಿ ದೋಷಿಯಾಗಿರುವ ವಕೀಲ ಪ್ರಶಾಂತ್ ಭೂಷಣ್‍ಗೆ ಶಿಕ್ಷೆಯ ಪ್ರಮಾಣ ಪ್ರಕಟಿಸುವ ಕುರಿತ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಪೂರ್ಣಗೊಳಿಸಿದ್ದು, ಪ್ರಕರಣವನ್ನು ಸೆಪ್ಟೆಂಬರ್ 10ಕ್ಕೆ ಮುಂದೂಡಿದೆ.

    ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಸಾಬೀತಾದ ಹಿನ್ನೆಲೆ ಶಿಕ್ಷೆ ಪ್ರಮಾಣ ಪ್ರಕಟಿಸುವ ಕುರಿತು ಸುಪ್ರೀಂ ಕೋರ್ಟ್ ಇಂದು ವಿಚಾರಣೆ ನಡೆಸಿತು. ಈ ವೇಳೆ ನ್ಯಾಯಾಂಗದ ವಿರುದ್ಧ ಟ್ವೀಟ್ ಮಾಡಿರುವ ಪ್ರಶಾಂತ್ ಭೂಷಣ್ ಸರ್ವೋಚ್ಛ ನ್ಯಾಯಾಲಯದ ಕ್ಷಮೆಯಾಚಿಸಲು ಯಾಕೆ ಹಿಂಜರಿಯುತ್ತಿದ್ದಾರೆ ಎಂದು ಕೋರ್ಟ್ ಪ್ರಶ್ನಿಸಿದೆ.

    ಕ್ಷಮೆ ಕೇಳುವುದರಲ್ಲಿ ತಪ್ಪೇನಿದೆ? ಈ ಪದ ತುಂಬಾ ಕೆಟ್ಟದಾಗಿದೆಯೇ? ಎಂದು ನ್ಯಾಯಾಧೀಶರಾದ ಅರುಣ್ ಮಿಶ್ರಾ, ಬಿ.ಆರ್.ಗವಾಯಿ ಹಾಗೂ ಕೃಷ್ಣ ಮುರಾರಿ ಅವರಿದ್ದ ತ್ರಿ ಸದಸ್ಯ ಪೀಠ ಪ್ರಶಾಂತ್ ಭೂಷಣ್ ಅವರನ್ನು ಪ್ರಶ್ನಿಸಿದೆ. ತಾವು ಮಾಡಿದ ನ್ಯಾಯಾಂಗ ನಿಂದನೆ ಟ್ವೀಟ್ ಕುರಿತು ಕೋರ್ಟ್ ಯಾವುದೇ ಶಿಕ್ಷೆ ನೀಡಲಿ, ಅನುಭವಿಸುತ್ತೇನೆ. ಆದರೆ ಕ್ಷಮೆಯಾಚಿಸುವುದಿಲ್ಲ ಎಂದು ಪ್ರಶಾಂತ್ ಭೂಷಣ್ ಹೇಳಿದ್ದರು. ಈ ಹಿನ್ನೆಲೆ ಕೋರ್ಟ್ ಅವರಿಗೆ ಈ ಪ್ರಶ್ನೆ ಕೇಳಿದೆ.

    ಊಟದ ಅವಧಿ ಮುಗಿದ ಬಳಿಕ ಸುಪ್ರೀಂ ಕೋರ್ಟ್‍ನ ಪೀಠವು ಪ್ರಶಾಂತ್ ಭೂಷಣ್ ಪರ ವಾದ ಮಂಡಿಸುತ್ತಿದ್ದ ಹಿರಿಯ ವಕೀಲ ರಾಜೀವ್ ಧವನ್ ಅವರ ವಾದವನ್ನು ಆಲಿಸಿತು. ಈ ವೇಳೆ ವಾದ ಮಂಡಿಸಿದ ಹಿರಿಯ ವಕೀಲ ಧವನ್, ಪ್ರಶಾಂತ್ ಭೂಷಣ್ ಅವರನ್ನು ಶಿಕ್ಷೆಗೊಳಪಡಿಸುವ ತೀರ್ಪನ್ನು ಮರುಪರಿಶೀಲಿಸಬೇಕು ಹಾಗೂ ಅವರಿಗೆ ಯಾವುದೇ ಶಿಕ್ಷೆ ವಿಧಿಸಬಾರದು. ಭೂಷಣ್ ಅವರ ಪ್ರಕರಣವನ್ನು ಮುಚ್ಚುವುದು ಮಾತ್ರವಲ್ಲ, ವಿವಾದವನ್ನೇ ಅಂತ್ಯಗೊಳಿಸುವ ಮೂಲಕ ಉತ್ತಮ ಸಂದೇಶವನ್ನು ರವಾನಿಸಬೇಕು ಎಂದು ಮನವಿ ಮಾಡಿದರು.

    ಪ್ರಶಾಂತ್ ಭೂಷಣ್ ಅವರನ್ನು ಹುತಾತ್ನರನ್ನಾಗಿ ಮಾಡಬಾರದು, ಅವರು ಕೊಲೆ ಅಥವಾ ಕಳ್ಳತನದಲ್ಲಿ ದೋಷಿಯಾಗಿಲ್ಲ ಎಂದು ಧವನ್ ವಾದ ಮಂಡಿಸಿದರು. ಅಲ್ಲದೆ ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಅವರ ವಾದವನ್ನು ಖಂಡಿಸಿದ ಧವನ್, ಇದು ಅತಿಯಾಯಿತು ಎಂದು ಉತ್ತರಿಸಿದರು.

    ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಶಾಂತ್ ಭೂಷಣ್ ಕ್ಷಮೆಯಾಚಿಸಲು ನಿರಾಕರಿಸಿದ ನಂತರವೂ ತಮ್ಮ ಅಫಿಡೆವಿಟ್‍ನಲ್ಲಿ ನ್ಯಾಯಾಂಗದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂಬುದು ಸುಪ್ರೀಂ ಕೋರ್ಟ್ ಗಮನಿಸಿದೆ. ನ್ಯಾಯಾಂಗ ನಿಂದನೆ ಕುರಿತು ಮಾಡಿದ ಟ್ವೀಟ್‍ಗಳಿಗೆ ಸಂಬಂಧಿಸಿದಂತೆ ಕ್ಷಮೆಯಾಚಿಸುವ ನಿಲುವಿನ ಕುರಿತು ಯೋಚಿಸುವಂತೆ ಭೂಷಣ್ ಅವರಿಗೆ ಕೋರ್ಟ್ 30 ನಿಮಿಷಗಳ ಕಾಲಾವಕಾಶ ನೀಡಿತು.

    ಇದಾದ ಬಳಿಕವೂ ಧವನ್ ವಾದ ಮುಂದುವರಿಸಿ, ಭೂಷಣ್ ಅವರಿಗೆ ಎಚ್ಚರಿಕೆ ನೀಡಿ ಬಿಡುಗಡೆಗೊಳಿಸಬೇಕು ಎಂದು ಮನವಿ ಮಾಡಿದರು. ಇದಕ್ಕೆ ಖಾರವಾಗಿ ಪ್ರಶ್ನಿಸಿದ ನ್ಯಾಯಪೀಠ, ಸುಪ್ರೀಂ ಕೋರ್ಟ್ ಕುಸಿದಿದೆ ಎಂದು ಪ್ರಶಾಂತ್ ಭೂಷಣ್ ಹೇಳುತ್ತಾರೆ. ಇದು ಆಕ್ಷೇಪಾರ್ಹವಲ್ಲವೇ ಎಂದು ಪ್ರಶ್ನಿಸಿತು.

    ಅದಾಗ್ಯೂ ವಾದ ಮುಂದುವರಿಸಿದ ಭೂಷಣ್ ಪರ ವಕೀಲ ಧವನ್, ಪ್ರಶಾಂತ್ ಭೂಷಣ್ ಅವರನ್ನು ಕ್ಷಮಿಸಬೇಕು. ಎಚ್ಚರಿಕೆ ನೀಡಿ ಕಳುಹಿಸಬೇಕು. ಕೋರ್ಟ್ ಇದನ್ನು ಸಹಾನುಭೂತಿ ದೃಷ್ಟಿಕೋನದಿಂದ ತೆಗೆದುಕೊಳ್ಳಬೇಕು ಎಂದು ನ್ಯಾಯಪೀಠಕ್ಕೆ ತಿಳಿಸಿದರು. ಆದರೆ ನ್ಯಾಯಾಲಯ ಪ್ರಶಾಂತ್ ಭೂಷಣ್ ಕ್ಷಮೆಯಾಚಿಸಬೇಕು ಎಂದು ಹೇಳಿತು. ಬಳಿಕ ಪ್ರಕರಣವನ್ನು ಸೆಪ್ಟೆಂಬರ್ 10ಕ್ಕೆ ಮುಂದೂಡಿತು.

  • ಕ್ಷಮೆ ಕೇಳಲ್ಲ, ಶಿಕ್ಷೆ ಅನುಭವಿಸಲು ಸಿದ್ಧ- ವಕೀಲ ಪ್ರಶಾಂತ್ ಭೂಷಣ್

    ಕ್ಷಮೆ ಕೇಳಲ್ಲ, ಶಿಕ್ಷೆ ಅನುಭವಿಸಲು ಸಿದ್ಧ- ವಕೀಲ ಪ್ರಶಾಂತ್ ಭೂಷಣ್

    ನವದೆಹಲಿ: ನನಗೆ ಕರುಣೆ ಬೇಡ, ಅದನ್ನು ಒತ್ತಾಯಿಸುವುದಿಲ್ಲ. ಸುಪ್ರೀಂ ಕೋರ್ಟ್ ನಿಂದ ದಯೆ ಬಯಸುತ್ತಿಲ್ಲ. ನ್ಯಾಯಾಲಯ ಏನೇ ಶಿಕ್ಷೆ ನೀಡದರೂ ಸಂತೋಷದಿಂದ ಅನುಭವಿಸಲು ಸಿದ್ಧನಿದ್ದೇನೆ ಎಂದು ಹಿರಿಯ ವಕೀಲ ಪ್ರಶಾಂತ್ ಭೂಷಣ್ ತಮ್ಮ ಹೇಳಿಕೆ ದಾಖಲಿಸಿದ್ದಾರೆ.

    ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷೆ ಅವಧಿ ನಿಗದಿಪಡಿಸುವ ವಿಚಾರಣೆ ವೇಳೆ ಪ್ರಶಾಂತ್ ಭೂಷಣ್ ತಮ್ಮ ಹೇಳಿಕೆ ದಾಖಲಿಸಿದ್ದಾರೆ. ಆರಂಭದಲ್ಲಿ ವಿಚಾರಣೆಯನ್ನು ಮುಂದೂಡಬೇಕು, ಪ್ರಕರಣದಲ್ಲಿ ದೋಷಿ ಎಂದು ಆದೇಶ ನೀಡಿದ್ದು, ತೀರ್ಪು ಪರಿಶೀಲನಾ ಅರ್ಜಿ ಸಲ್ಲಿಸಲಾಗುತ್ತಿದೆ. ಪರಿಶೀಲನೆ ಅರ್ಜಿ ಬಳಿಕ ವಿಚಾರಣೆ ದಿನಾಂಕ ನಿಗದಿ ಮಾಡುವಂತೆ ಅವರು ಮನವಿ ಮಾಡಿದರು.

    ಈ ಅರ್ಜಿ ಆಲಿಸಿದ ಸುಪ್ರೀಂ ಕೋರ್ಟ್ ನ್ಯಾ.ಅರುಣ್ ಮಿಶ್ರಾ ನೇತೃತ್ವದ ಪೀಠ, ಶಿಕ್ಷೆಯ ಪ್ರಮಾಣ ನಿಗದಿಪಡಿಸುವ ವಿಚಾರಣೆಯ ಮುಂದೂಡಿಕೆಗೆ ನಿರಾಕರಿಸಿತು. ಈ ವೇಳೆ ಪ್ರಶಾಂತ್ ಭೂಷಣ್ ವಿಡಿಯೋ ಕಾನ್ಫರೆನ್ಸ್ ಮೂಲಕ ತಮ್ಮ ಹೇಳಿಕೆ ದಾಖಲಿಸಿದರು. ನ್ಯಾಯಾಲಯದ ತಿರಸ್ಕಾರಕ್ಕೆ ಗುರಿಯಾಗಿದ್ದಕ್ಕೆ ತುಂಬಾ ಬೇಸರವಾಗಿದೆ. ಆರೋಗ್ಯಕರ ಪ್ರಜಾಪ್ರಭುತ್ವಕ್ಕಾಗಿ, ಟೀಕೆಗಳನ್ನು ಮಾಡಬೇಕಾಗುತ್ತದೆ. ನನಗೆ ಕರುಣೆ ಬೇಡ, ನಾನು ಅದನ್ನು ಬಯಸುತ್ತಿಲ್ಲ. ನ್ಯಾಯಾಲಯ ಏನೇ ಶಿಕ್ಷೆ ನೀಡಿದರೂ ಸಂತೋಷದಿಂದ ಅನುಭವಿಸಲು ಸಿದ್ಧನಾಗಿದ್ದೇನೆ ಎಂದರು.

    ಮೂರು ದಶಕಗಳಿಂದ ಯಾವ ಘನ ನ್ಯಾಯಾಲಯದ ಗೌರವವನ್ನು ಎತ್ತಿ ಹಿಡಿಯಲು ಪ್ರಯತ್ನಿಸಿದ್ದೇನೋ ಅದೇ ನ್ಯಾಯಾಲಯ ನಿಂದನೆ ಪ್ರಕರಣದಲ್ಲಿ ನನ್ನನ್ನು ತಪ್ಪಿತಸ್ಥನೆಂದು ಘೋಷಿಸಿದೆ. ನನ್ನನ್ನು ಸಂಪೂರ್ಣವಾಗಿ ತಪ್ಪು ಅರ್ಥ ಮಾಡಿಕೊಂಡಿದ್ದಕ್ಕೆ ನನಗೆ ನೋವಿದೆ. ಉದ್ದೇಶವನ್ನು ಅರಿಯದೆ, ಸ್ಪಷ್ಟ ವಿಚಾರಣೆ ನಡೆಸದೆ ನ್ಯಾಯಾಲಯ ಈ ತೀರ್ಮಾನಕ್ಕೆ ಬಂದಿರುವುದಕ್ಕೆ ಆಘಾತವಾಗಿದೆ ಎಂದಿದ್ದಾರೆ.

    ನನ್ನ ಟ್ವೀಟ್‍ಗಳು ನಾಗರಿಕನಾಗಿ ನನ್ನ ಕರ್ತವ್ಯ ನಿಭಾಯಿಸುವ ಉತ್ತಮ ಪ್ರಯತ್ನದ ಭಾಗವಾಗಿವೆ. ಇತಿಹಾಸದ ಈ ಹಂತದಲ್ಲಿ ನಾನು ಮಾತನಾಡದಿದ್ದರೆ ನನ್ನ ಕರ್ತವ್ಯದಲ್ಲಿ ವಿಫಲವಾಗುತ್ತಿದ್ದೆ. ನ್ಯಾಯಾಲಯ ವಿಧಿಸಬಹುದಾದ ಯಾವುದೇ ದಂಡವನ್ನು ಸಲ್ಲಿಸುತ್ತೇನೆ. ಆದರೆ ಕ್ಷಮೆಯಾಚಿಸುವುದಿಲ್ಲ ಎಂದು ಭೂಷಣ್ ಸುಪ್ರೀಂಕೋರ್ಟ್‍ಗೆ ತಿಳಿಸಿದ್ದಾರೆ.

    ವಕೀಲ ಪ್ರಶಾಂತ್ ಭೂಷಣ್ ಪರ ರಾಜೀವ್ ದವನ್ ಮತ್ತು ದುಷ್ಯಂತ್ ದವೆ ವಾದ ಮಂಡಿಸಿದರು. ಮರು ಪರಿಶೀಲನೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಬೇಕೆಂದು ರಾಜೀವ್ ದವನ್ ಮನವಿ ಮಾಡಿದರು. ಇದಕ್ಕೆ ನ್ಯಾ.ಗವಾಯಿ ಪ್ರತಿಕ್ರಿಯಿಸಿ, ಆಗಸ್ಟ್ 17ರಂದೇ ಅರ್ಜಿ ಸಲ್ಲಿಸುವುದಾಗಿ ಹೇಳಿದ್ದಿರಿ ಇನ್ನೂ ಯಾಕೆ ಸಲ್ಲಿಸಿಲ್ಲ ಎಂದು ಪ್ರಶ್ನಿಸಿದರು. ಈ ವೇಳೆ ಮಧ್ಯ ಪ್ರವೇಶಿಸಿದ ವಕೀಲ ದುಷ್ಯಂತ್ ದವೆ, ಮರು ಪರಿಶೀಲನಾ ಅರ್ಜಿ ಸಲ್ಲಿಕೆ ಒಂದು ತಿಂಗಳ ಅವಕಾಶವಿದೆ ಎಂದರು.

    ಅಂತಿಮವಾಗಿ ಕೋರ್ಟ್ 3 ದಿನಗಳ ಒಳಗಡೆ ಮರು ಪರಿಶೀಲನಾ ಅರ್ಜಿಯನ್ನು ಸಲ್ಲಿಸುವಂತೆ ಸೂಚಿಸಿತು. ಇದನ್ನೂ ಓದಿ: 2 ಟ್ವೀಟ್‍ನಿಂದ ಅಪರಾಧಿಯಾದ ಭೂಷಣ್

    ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಹಿರಿಯ ವಕೀಲ, ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಭೂಷಣ್ ಅಪರಾಧಿ ಎಂದು ಸುಪ್ರೀಂ ಕೋರ್ಟ್ ಆಗಸ್ಟ್ 14ರಂದು ಮಹತ್ವದ ತೀರ್ಪು ಪ್ರಕಟಿಸಿತ್ತು.ನ್ಯಾ.ಅರುಣ್ ಮಿಶ್ರಾ, ಬಿ.ಆರ್.ಗವಾಯಿ ಮತ್ತು ಕೃಷ್ಣ ಮುರಾರಿ ಅವರಿದ್ದ ನ್ಯಾಯಪೀಠವು `ನ್ಯಾಯಾಂಗ ನಿಂದನೆ ಕಾಯ್ದೆ’ ಅನ್ವಯ ತೀರ್ಪು ನೀಡಿತ್ತು. ಪ್ರಶಾಂತ್ ಭೂಷಣ್ ಅವರಿಗೆ ಈ ಕಾಯ್ದೆಯ ಅಡಿ ಗರಿಷ್ಟ 6 ತಿಂಗಳು ಜೈಲು ಶಿಕ್ಷೆ ಅಥವಾ 2 ಸಾವಿರ ರೂಪಾಯಿ ದಂಡ ಅಥವಾ ಜೈಲುವಾಸ ಮತ್ತು ದಂಡ ಎರಡನ್ನೂ ವಿಧಿಸಲು ಅವಕಾಶವಿದೆ.

    ಸೆಪ್ಟೆಂಬರ್ 2 ರಂದು ಅರುಣ್ ಮಿಶ್ರಾ ನಿವೃತ್ತಿಯಾಗಲಿದ್ದಾರೆ. ಹೀಗಾಗಿ ಈ ಅವಧಿಯೊಳಗೆ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಬೇಕಿದೆ.

  • ಕಾವೇರಿ ನೀರು ಹಂಚಿಕೆ – ಮೇ 3ರ ಒಳಗಡೆ ಸ್ಕೀಂ ರಚಿಸಿ: ಕೇಂದ್ರಕ್ಕೆ ಸುಪ್ರೀಂ ಆದೇಶ

    ಕಾವೇರಿ ನೀರು ಹಂಚಿಕೆ – ಮೇ 3ರ ಒಳಗಡೆ ಸ್ಕೀಂ ರಚಿಸಿ: ಕೇಂದ್ರಕ್ಕೆ ಸುಪ್ರೀಂ ಆದೇಶ

    ನವದೆಹಲಿ: ಮತ್ತೆ ಕಾವೇರಿ ನದಿ ನೀರಿನ ಹಂಚಿಕೆ ವಿಚಾರ ಕೇಂದ್ರದ ಅಂಗಳಕ್ಕೆ ತಲುಪಿದೆ. ನಾವು ತೀರ್ಪಿನಲ್ಲಿ ಉಲ್ಲೇಖಿಸಿರುವ ಸ್ಕೀಂ ಅನ್ನು ಕೂಡಲೇ ರಚನೆ ಮಾಡಿ ಎಂದು ಸುಪ್ರೀಂ ಕೋರ್ಟ್ ಕೇಂದ್ರಕ್ಕೆ ಸೂಚಿಸಿದೆ.

    ನಿರ್ವಹಣಾ ಮಂಡಳಿ ರಚನೆಯ ಕುರಿತು ತಮಿಳುನಾಡು ಸಲ್ಲಿಸಿದ್ದ ನ್ಯಾಯಾಂಗ ನಿಂದನಾ ಅರ್ಜಿ ಜತೆಗೆ ಕೇಂದ್ರದ ಸ್ಪಷ್ಟನಾ ಅರ್ಜಿಯನ್ನು ವಿಚಾರಣೆ ಇಂದು ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರ ನೇತೃತ್ವದ ತ್ರಿಸದಸ್ಯ ಪೀಠ ವಿಚಾರಣೆ ನಡೆಯಿತು.

    ಈ ವೇಳೆ ಕಾವೇರಿ ನದಿ ನೀರು ಹಂಚಿಕೆ ಸಂಬಂಧ ಕೇಂದ್ರ ಸರ್ಕಾರದ ವಿರುದ್ಧ ತಮಿಳುನಾಡು ಸಲ್ಲಿಸಿದ್ದ ನ್ಯಾಯಂಗ ನಿಂದನೆ ಅರ್ಜಿಯನ್ನು ತಿರಸ್ಕರಿಸಿತು. ಅಲ್ಲದೇ ಸ್ಕೀಂ ರಚನೆ ವಿಚಾರವಾಗಿ ಕೇಂದ್ರ ಈಗಾಗಲೇ ಕಾರ್ಯ ಪ್ರವೃತ್ತವಾಗಿದ್ದು ನ್ಯಾಯಾಂಗ ನಿಂದನೆ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿತು.

    ಕಾವೇರಿ ನೀರಿನ ಹಂಚಿಕೆ ಕುರಿತು ವಿಚಾರದಲ್ಲಿ ಕೇಂದ್ರ ಸರ್ಕಾರ ನ್ಯಾಯಾಂಗ ನಿಂದನೆ ಮಾಡಿಲ್ಲ. ಈಗಾಗಲೇ ಈ ಕುರಿತು ಕ್ರಮಕೈಗೊಳ್ಳಲಾಗಿದೆ ಎಂದು ಅಭಿಪ್ರಾಯಪಟ್ಟಿತು. ಅಲ್ಲದೇ ಮೇ 3 ರ ಒಳಗೆ ಸ್ಕೀಂ ರಚನೆ ಕುರಿತು ಕೇಂದ್ರ ಸರ್ಕಾರ ಕರಡು ಪ್ರತಿಯನ್ನು ಸುಪ್ರಿಂಕೊರ್ಟ್ ಗೆ ಸಲ್ಲಿಸಬೇಕು. ಸುಪ್ರೀಂ ಕೋರ್ಟ್ ಕರಡು ಪ್ರತಿ ಪರಿಶೀಲನೆ ನಡೆಸಿ ಅಂತಿಮಗೊಳಿಸಲಾಗುವುದು ಎಂದು ಹೇಳಿದೆ.

    ಇದೇ ವೇಳೆ ಕಾವೇರಿ ವಿಚಾರದಲ್ಲಿ ಸುಪ್ರೀಂ ಕೋರ್ಟ್ ನ್ಯಾಯಧಿಕರಣ ತೀರ್ಪು ವಿಲೀನಗೊಳಿಸಿ ಆದೇಶ ನೀಡಿದ್ದು, ಪದೇ ಪದೇ ನ್ಯಾಯಧಿಕರಣ ಆದೇಶ ಉಲ್ಲೇಖಿಸುವಂತಿಲ್ಲ ಎಂದು ಸೂಚನೆ ನೀಡಿದೆ. ನೀರು ಹಂಚಿಕೆ ಮಾಡಿ ನಾವು ಆದೇಶ ನೀಡಿದ್ದೇವೆ. ಹಂಚಿಕೆ ಕಾರ್ಯರೂಪಕ್ಕೆ ಬರಲು ಕೇಂದ್ರ ಸರ್ಕಾರ ಸ್ಕೀಂ ರಚನೆ ಮಾಡಲಿದೆ. ಕೇಂದ್ರ ರಚಿಸುವ ಸ್ಕೀಂಗೆ ಎಲ್ಲ ರಾಜ್ಯಗಳು ಬದ್ಧವಾಗಿರಬೇಕು ಎಂದು ನ್ಯಾ. ದೀಪಕ್ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠ ಸೂಚಿಸಿತು.

    ಅರ್ಜಿ ವಿಚಾರಣೆ ವೇಳೆ ಕಾವೇರಿ ನಿರ್ವಹಣಾ ಮಂಡಳಿ ವಿಚಾರವನ್ನು ಸುಪ್ರೀಂ ಕೋರ್ಟ್ ಪ್ರಸ್ತಾಪಿಸಲಿಲ್ಲ. ತೀರ್ಪು ಪಾಲನೆಗೆ ಯೋಜನೆ ಅವಶ್ಯಕತೆ ಇದ್ದು ಆ ನಿಟ್ಟಿನಲ್ಲಿ ಸ್ಕೀಂ ರಚನೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿತು. ಈ ಮೂಲಕ ತಮಿಳುನಾಡಿನ ಕಾವೇರಿ ನಿರ್ವಹಣಾ ಮಂಡಳಿ ಸ್ಥಾಪನೆ ಹೋರಾಟಕ್ಕೆ ಸುಪ್ರೀಂ ಕೋರ್ಟ್  ಪರೋಕ್ಷ ಚಾಟಿ ಬೀಸಿತು. ಎಲ್ಲ ರಾಜ್ಯಗಳನ್ನು ಸಮಾನವಾಗಿ ಪರಿಗಣಿಸಿಲಾಗಿದೆ. ರಾಜ್ಯಗಳ ಜನರು ಶಾಂತಿ ರೀತಿಯಿಂದ ವರ್ತಿಸುವಂತೆ ಮನವಿ ಮಾಡಲು ಸುಪ್ರೀಂ ಕೋರ್ಟ್ ರಾಜ್ಯಗಳಿಗೂ ಸೂಚಿಸಿತು.