Tag: Jump

  • ಲೈಂಗಿಕ ಕಿರುಕುಳದಿಂದ ತಪ್ಪಿಸಿಕೊಳ್ಳಲು ಆಟೋದಿಂದ ಜಂಪ್ – ಬಾಲಕಿ ತಲೆಗೆ ಗಂಭೀರ ಗಾಯ

    ಲೈಂಗಿಕ ಕಿರುಕುಳದಿಂದ ತಪ್ಪಿಸಿಕೊಳ್ಳಲು ಆಟೋದಿಂದ ಜಂಪ್ – ಬಾಲಕಿ ತಲೆಗೆ ಗಂಭೀರ ಗಾಯ

    ಮುಂಬೈ: ಲೈಂಗಿಕ ಕಿರುಕುಳದಿಂದ ತಪ್ಪಿಸಿಕೊಳ್ಳಲು ವೇಗವಾಗಿ ಚಲಿಸುತ್ತಿದ್ದ ಆಟೋವಿನಿಂದ 17 ವರ್ಷದ ಬಾಲಕಿ ಜಿಗಿದು ತಲೆಗೆ ಗಂಭೀರವಾಗಿ ಗಾಯಗೊಂಡಿರುವ ಮಹಾರಾಷ್ಟ್ರದ (Maharashtra) ಔರಂಗಾಬಾದ್‌ನಲ್ಲಿ (Aurangabad)ನಡೆದಿದೆ.

    ಭಾನುವಾರ ಈ ಘಟನೆ ನಡೆದಿದ್ದು, ಆರೋಪಿಯನ್ನು ಮುಂಬೈ ನಿವಾಸಿ ಸೈಯದ್ ಅಕ್ಬರ್ ಹಮೀದ್ ಎಂದು ಗುರುತಿಸಲಾಗಿದೆ. ನಾಲ್ಕೈದು ತಿಂಗಳ ಹಿಂದೆ ಔರಂಗಾಬಾದ್‍ಗೆ ತೆರಳಿ ಬಾಡಿಗೆ ಆಟೋರಿಕ್ಷಾ ಓಡಿಸುತ್ತಿದ್ದ ಆರೋಪಿಯನ್ನು ಇದೀಗ ಪೊಲೀಸರು ಬಂಧಿಸಿದ್ದು, ಆತನ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೋಕ್ಸೊ) ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ಅಂಗಡಿಯೊಂದರ ಸಿಸಿಟಿವಿ ಕ್ಯಾಮೆರಾದಲ್ಲಿ ಬಾಲಕಿ ಆಟೋರಿಕ್ಷಾದಿಂದ ಜಿಗಿದ ಘಟನೆಯ ವೀಡಿಯೋ ಸೆರೆಯಾಗಿದೆ. ಅದೃಷ್ಟವಶಾತ್ ಬಾಲಕಿ ಜಿಗಿದ ವೇಳೆ ಕಾರೊಂದು ಪಕ್ಕದಲ್ಲಿಯೇ ಚಲಿಸಿದ್ದು, ಸಂಭವಿಸಬಹುದಾದ ಪ್ರಾಣಾಪಾಯದಿಂದ ಆಕೆ ಬಚಾವ್ ಆಗಿದ್ದಾಳೆ. ವೀಡಿಯೋದಲ್ಲಿ ಕೆಳಗೆ ಬಿದ್ದ ಬಾಲಕಿಗೆ ಪಾದಚಾರಿಗಳು ಸಹಾಯ ಮಾಡುತ್ತಿರುವುದನ್ನು ಕಾಣಬಹುದಾಗಿದೆ. ಇದನ್ನೂ ಓದಿ: ಯಜಮಾನನ ಜೀವ ಉಳಿಸಲು ಹಾವಿನ ಜೊತೆ ಸೆಣಸಾಟ – ಕೊನೆಗೆ ತನ್ನ ಪ್ರಾಣವನ್ನೇ ತ್ಯಾಗ ಮಾಡಿದ ನಾಯಿ

    ಬಾಲಕಿ ತನ್ನ ಟ್ಯೂಷನ್‍ಗೆ ತೆರಳಲು ಆಟೋ ಹತ್ತಿದ್ದಾಳೆ. ಈ ವೇಳೆ ಆರೋಪಿ ಆಟೋ ಚಾಲಕ ಸೈಯದ್ ಅಕ್ಬರ್ ಹಮೀದ್ ಸಾಮಾನ್ಯವಾಗಿ ಪ್ರಶ್ನೆಗಳನ್ನು ಕೇಳುವ ಮೂಲಕ ಮಾತನಾಡಲು ಆರಂಭಿಸಿದ್ದಾನೆ. ನಂತರ ಕ್ರಮೇಣ ಬಾಲಕಿಗೆ ಬೆದರಿಕೆಯೊಡ್ಡಿ ಅಶ್ಲೀಲ ಟೀಕೆಗಳನ್ನು ಮಾಡಿದ್ದಾನೆ. ಬಳಿಕ ಆಟೋವನ್ನು ವೇಗವಾಗಿ ಚಲಾಯಿಸಲು ಆರಂಭಿಸಿದಾಗ ಬಾಲಕಿ ರಿಕ್ಷಾದಿಂದ ಏಕಾಏಕಿ ಜಿಗಿದಿದ್ದಾಳೆ. ಇದನ್ನೂ ಓದಿ: ಹನುಮಂತನ ಫೋಟೋ, ದೇವಾಲಯ ಆಕಾರದ ಕೇಕ್ ಕತ್ತರಿಸಿ ಕೈ ನಾಯಕನ ಬರ್ತ್‍ಡೇ ಸೆಲೆಬ್ರೇಷನ್

    ಸದ್ಯ ಬಾಲಕಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ರಸ್ತೆಯಲ್ಲಿದ್ದ 40 ಸಿಸಿಟಿವಿ ಕ್ಯಾಮೆರಾಗಳ ಸಹಾಯದಿಂದ ಆಟೋ ಚಾಲಕನ ಸ್ಥಳವನ್ನು ಪತ್ತೆ ಹಚ್ಚಿ ಆತನನ್ನು ಪೊಲೀಸರು ಬಂಧಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಆಸ್ಪತ್ರೆಯ 8ನೇ ಮಹಡಿಯಿಂದ ಜಿಗಿದ ರೋಗಿ – ವೀಡಿಯೋ ವೈರಲ್

    ಆಸ್ಪತ್ರೆಯ 8ನೇ ಮಹಡಿಯಿಂದ ಜಿಗಿದ ರೋಗಿ – ವೀಡಿಯೋ ವೈರಲ್

    ಕೋಲ್ಕತ್ತಾ: ಕೋಲ್ಕತ್ತಾದ ಇನ್‍ಸ್ಟಿಟ್ಯೂಟ್ ಆಫ್ ನ್ಯೂರೋ ಸೈನ್ಸ್ ಆಸ್ಪತ್ರೆಯ ಎಂಟನೇ ಮಹಡಿಯಿಂದ ಜಿಗಿದು ರೋಗಿಯೊಬ್ಬ ತೀವ್ರವಾಗಿ ಗಾಯಗೊಂಡಿದ್ದಾನೆ.

    ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿ ತನ್ನ ಬೆಡ್‍ನಿಂದ ತಪ್ಪಿಸಿಕೊಂಡು 8ನೇ ಮಹಡಿಯಲ್ಲಿದ್ದ ಕಿಟಕಿಯಿಂದ ತೂರಿಕೊಂಡು ಹೊರಬಂದು ಕಾರ್ನಿಸ್‍ನ ಅಂಚಿನಲ್ಲಿ ಕುಳಿತುಕೊಂಡಿದ್ದನು. ಈ ವೇಳೆ ಅಗ್ನಿಶಾಮಕ ದಳ, ಪೊಲೀಸರು ಮತ್ತು ಆಸ್ಪತ್ರೆ ಅಧಿಕಾರಿಗಳು ಆತನನ್ನು ಮರಳಿ ಬರುವಂತೆ ಒತ್ತಾಯಿಸಿದರು. ವ್ಯಕ್ತಿಯನ್ನು ಕೆಳಗೆ ಇಳಿಸಲು ಹಲವಾರು ಪ್ರಯತ್ನಗಳನ್ನು ಮಾಡಿದರು. ಆದರೆ ಯಾರನ್ನು ಕೂಡ ವ್ಯಕ್ತಿ ತನ್ನ ಸಮೀಪ ಬರಲು ಬಿಡಲಿಲ್ಲ. ಇದನ್ನೂ ಓದಿ: ಅಗ್ನಿಪಥ್ ಯೋಜನೆಯನ್ನು ಕಾಂಗ್ರೆಸ್ ಸರ್ಕಾರ ರೂಪಿಸಿದೆ: ಅಚ್ಚರಿ ಹೇಳಿಕೆ ಕೊಟ್ಟ ಸವದಿ

    ರೋಗಿಯನ್ನು ಸುಧೀರ್ ಎಂದು ಗುರುತಿಸಲಾಗಿದ್ದು, ಮಧ್ಯಾಹ್ನ 1:10ರ ಸುಮಾರಿಗೆ ಮೇಲಿನಿಂದ ಕೆಳಗೆ ಬಿದ್ದಿದ್ದಾನೆ. ಘಟನೆಯಲ್ಲಿ ವ್ಯಕ್ತಿ ತೀವ್ರವಾಗಿ ಗಾಯಗೊಂಡಿದ್ದು, ಆತನ ತಲೆಬುರುಡೆ, ಪಕ್ಕೆಲುಬು ಮತ್ತು ಎಡಗೈಗೆ ತೀವ್ರ ಪೆಟ್ಟಾಗಿದೆ. ಸದ್ಯ ಸುಧೀರ್ ಸ್ಥಿತಿ ಗಂಭಿರವಾಗಿದ್ದು, ಆತನಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಕುಟುಂಬ ರಾಜಕಾರಣ ಮಾಡೋರಿಗೆ ಮಹಾರಾಷ್ಟ್ರದಲ್ಲಿ ತಕ್ಕ ಪಾಠವಾಗಿದೆ: ಪ್ರತಾಪ್ ಸಿಂಹ

    Live Tv

  • ವಿಪತ್ತು ನಿರ್ವಹಣೆ ಪ್ರಾತ್ಯಕ್ಷಿಕೆ ವೇಳೆ ಮಹಡಿಯಿಂದ ಜಿಗಿದ ವಿದ್ಯಾರ್ಥಿನಿ ಸಾವು: ವಿಡಿಯೋ ವೈರಲ್

    ವಿಪತ್ತು ನಿರ್ವಹಣೆ ಪ್ರಾತ್ಯಕ್ಷಿಕೆ ವೇಳೆ ಮಹಡಿಯಿಂದ ಜಿಗಿದ ವಿದ್ಯಾರ್ಥಿನಿ ಸಾವು: ವಿಡಿಯೋ ವೈರಲ್

    ಚೆನ್ನೈ: ಸುರಕ್ಷತಾ ನಿಯಮಗಳನ್ನು ಪಾಲಿಸುವ ಕುರಿತು ಹಮ್ಮಿಕೊಂಡಿದ್ದ ವಿಪತ್ತು ನಿರ್ವಹಣಾ ಜಾಗೃತಿಯಲ್ಲಿ ವಿದ್ಯಾರ್ಥಿನಿಯೊರ್ವಳು ಕಟ್ಟಡದಿಂದ ಜಿಗಿಯುವಾಗ ಆಯತಪ್ಪಿ ಬಿದ್ದು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದಿದ್ದು, ಕಟ್ಟಡದಿಂದ ವಿದ್ಯಾರ್ಥಿನಿ ಜಿಗಿಯುತ್ತಿರುವ ವಿಡಿಯೋ ವೈರಲ್ ಆಗಿದೆ.

    ಲೋಕೇಶ್ವರಿ (19) ಮೃತಪಟ್ಟ ವಿದ್ಯಾರ್ಥಿನಿ. ಈಕೆ ಕೊಯಮತ್ತೂರಿನ ಕೊಲೈ ಮಗಲ್ ಕಲಾ ಮತ್ತು ವಿಜ್ಞಾನ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯಾಗಿದ್ದಳು. ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಸುರಕ್ಷತಾ ನಿಯಮಗಳನ್ನು ಪಾಲಿಸುವ ವಿಪತ್ತು ನಿರ್ವಹಣಾ ಜಾಗೃತಿಯಲ್ಲಿ ಕಾಲೇಜು ಕಟ್ಟಡದ ಎರಡನೇ ಮಹಡಿಯಿಂದ ಜಿಗಿಯುವಾಗ ಮೊದಲ ಮಹಡಿಯ ಸಜ್ಜಕ್ಕೆ ತಲೆ ಬಡಿದು ತೀವ್ರವಾಗಿ ಗಾಯಗೊಂಡಿದ್ದಳು. ಕಾಲೇಜು ಸಿಬ್ಬಂದಿ ಕೂಡಲೇ ವಿದ್ಯಾರ್ಥಿನಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದರೂ ಗಂಭೀರವಾಗಿ ತಲೆಗೆ ಪೆಟ್ಟಾಗಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೇ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ.

    ವಿದ್ಯಾರ್ಥಿನಿ ಎರಡನೇ ಮಹಡಿಯಿಂದ ಜಿಗಿಯುವುದಕ್ಕೆ ಹಿಂಜರಿಯುತ್ತಿದ್ದಾಗ ತರಬೇತುದಾರ ಆಕೆಯನ್ನು ತಳ್ಳಿದ್ದರಿಂದ ಈ ದುರಂತ ಸಂಭವಿಸಿದೆ. ತರಬೇತುದಾರ ತಳ್ಳಿದಾಗ ಆತಂಕಗೊಂಡ ವಿದ್ಯಾರ್ಥಿನಿ ಮುಂದಕ್ಕೆ ಜಿಗಿಯದ ಪರಿಣಾಮ ತಲೆ ಸಜ್ಜಕ್ಕೆ ಬಡಿದು ಸಾವನ್ನಪ್ಪಿದ್ದಾಳೆ. ಘಟನೆ ಸಂಬಂಧ ವಿಡಿಯೋದಲ್ಲಿ ವಿದ್ಯಾರ್ಥಿನಿಯನ್ನು ಬಲವಂತವಾಗಿ ತಳ್ಳಿದ್ದು ತಿಳಿದುಬಂದಿದ್ದು, ತರಬೇತು ನೀಡುತ್ತಿದ್ದ ಆರ್ಮುಗಂನನ್ನು ಪೊಲೀಸರು ಬಂಧಿಸಿದ್ದಾರೆ.

    ಏನಿದು ಘಟನೆ?
    ಗುರುವಾರ ಕೊಲೈ ಮಗಲ್ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ಸುರಕ್ಷತಾ ನಿಯಮಗಳನ್ನು ಪಾಲಿಸುವ ವಿಪತ್ತು ನಿರ್ವಹಣಾ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಪ್ರಮಾಣಪತ್ರ ಪಡೆದಿರುವ ಅಧಿಕಾರಿಗಳು ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದರು. ತರಬೇತಿಯಲ್ಲಿ ಸುಮಾರು ಇಪ್ಪತ್ತು ವಿದ್ಯಾರ್ಥಿಗಳಿಗೆ ಎಮರ್ಜೆನ್ಸಿ ವಿಂಡೋ ಮೂಲಕ ಜಿಗಿಯುವ ಪ್ರಾತ್ಯಕ್ಷಿಕೆ ನಡೆದಿತ್ತು.

    ಜಾಗೃತಿ ಪ್ರಾತ್ಯಕ್ಷಿಕೆಯಲ್ಲಿ ಕಟ್ಟಡದ ಕೆಳಗೆ ನೆಟ್ ಹಿಡಿದ ಹಲವು ವಿದ್ಯಾರ್ಥಿಗಳು ನಿಂತಿದ್ದರು. ಈ ವೇಳೆ ಭಾಗವಹಿಸಿದ್ದ ಲೋಕೇಶ್ವರಿ ಎರಡನೇ ಮಹಡಿಯಿಂದ ಜಿಗಿಯುವುದಕ್ಕೆ ಹಿಂಜರಿದಿದ್ದಾಳೆ. ಈ ವೇಳೆ ತರಬೇತುದಾರ ಬಲವಂತವಾಗಿ ಆಕೆಯನ್ನು ತಳ್ಳಿದ್ದರ ಪರಿಣಾಮ ಸರಿಯಾದ ರೀತಿಯಲ್ಲಿ ಜಿಗಿಯದ ಕಾರಣ ಆಕೆಯ ತಲೆ ಮೊದಲ ಮಹಡಿಯ ಸಜ್ಜಕ್ಕೆ ಬಡಿದು ಆಕೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಈ ದೃಶ್ಯವನ್ನು ಸ್ಥಳದಲ್ಲೇ ಇದ್ದ ವಿದ್ಯಾರ್ಥಿಯೊಬ್ಬ ತನ್ನ ಮೊಬೈಲ್‍ನಲ್ಲಿ ಸೆರೆಹಿಡಿದಿದ್ದು, ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದಾನೆ. ವಿದ್ಯಾರ್ಥಿ ಕಟ್ಟಡದಿಂದ ಜಿಗಿಯುತ್ತಿರುವ ವಿಡಿಯೋ ಸಾಕಷ್ಟು ವೈರಲ್ ಆಗಿದೆ.