Tag: jyothi rai

  • ಜ್ಯೋತಿ ರೈ ಅಶ್ಲೀಲ ವಿಡಿಯೋ- ಸೈಬರ್ ಕ್ರೈಂಗೆ ದೂರು ನೀಡಿದ ನಟಿ

    ಜ್ಯೋತಿ ರೈ ಅಶ್ಲೀಲ ವಿಡಿಯೋ- ಸೈಬರ್ ಕ್ರೈಂಗೆ ದೂರು ನೀಡಿದ ನಟಿ

    ಕಿರುತೆರೆ ನಟಿ ಜ್ಯೋತಿ ರೈ (Jyothi Rai) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಕುರಿತಾಗಿ ನಟಿ ಜ್ಯೋತಿ ಸೈಬರ್ ಕ್ರೈಂ ವಿಭಾಗಕ್ಕೆ ದೂರು ನೀಡಿದ್ದಾರೆ. ಮಾರ್ಫಿಂಗ್ ಮಾಡಿರುವವರ ವಿರುದ್ಧ ಕಾನೂನು ಸಮರ ಸಾರಿದ್ದಾರೆ. ಇದನ್ನೂ ಓದಿ:ಕಮಲ್-ಮಣಿರತ್ನಂ ಟೀಮ್ ಸೇರಿಕೊಂಡ ಸಿಲಂಬರಸನ್

    ಮಾರ್ಫಿಂಗ್ ಮಾಡಿರುವ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ನಟಿ ಜ್ಯೋತಿ ರೈ ಮನವಿ ಮಾಡಿದ್ದಾರೆ. ನನ್ನ ಮಾನ ಹಾಗೂ ಕುಟುಂಬದ ಗೌರವ ಅಪಾಯದಲ್ಲಿದೆ. ಸರಿಯಾದ ಕ್ರಮ ತೆಗೆದುಕೊಳ್ಳದಿದ್ದರೆ ನನ್ನ ಜೀವನದಲ್ಲಿ ಸರಿಪಡಿಸಲಾಗದ ಹಾನಿ ಉಂಟಾಗುತ್ತದೆ ಎಂದು ದೂರಿನಲ್ಲಿ ನಟಿ ಕಳವಳ ವ್ಯಕ್ತಪಡಿಸಿದ್ದಾರೆ.‌

    ನಾನು ಇಂಟರ್‌ನೆಟ್ ಮತ್ತು ಸಾಮಾಜಿಕ ಜಾಲತಾಣಗಳನ್ನು ನಿತ್ಯ ಬಳಕೆ ಮಾಡುತ್ತೇನೆ. ಇತ್ತೀಚಿನ ದಿನಗಳಲ್ಲಿ ಫೇಕ್ ಅಕೌಂಟ್‌ಗಳ ಮೂಲಕ ನನಗೆ ಮೆಸೇಜ್‌ಗಳು ಬರುತ್ತಿವೆ. ನನ್ನ ಫೋಟೋಗಳ ಜೊತೆಗೆ ಇಂಟರ್‌ನೆಟ್ ಡೌನ್‌ಲೋಡ್ ಮಾಡಲಾದ ನಗ್ನ ಹಾಗೂ ಅಶ್ಲೀಲ ಚಿತ್ರಗಳನ್ನು ಮಾರ್ಫಿಂಗ್ ಮಾಡಿ ನನ್ನ ಇನ್‌ಬಾಕ್ಸ್‌ಗೆ ಕಳುಹಿಸುತ್ತಿದ್ದಾರೆ. ನನ್ನ ಇನ್ಸ್ಟಾಗ್ರಾಂ ಸ್ಟೋರಿಗಳಲ್ಲಿ ಹಾಕಲಾದ ಫೋಟೋಗಳನ್ನು ಬಳಸಿ ಮಾರ್ಫಿಂಗ್ ಮಾಡಲಾಗಿದೆ. ನನಗೆ ಕಿರುಕುಳ ನೀಡುವ ಮತ್ತು ನನ್ನ ಮಾನಹಾನಿ ಮಾಡುವ ಉದ್ದೇಶದಿಂದಲೇ ಮಾಡಲಾಗಿದೆ ಎಂದಿದ್ದಾರೆ. ಕೆಲವು ದಿವಸಗಳ ಹಿಂದೆಯೇ ಕ್ರೈಂ ವಿಭಾಗಕ್ಕೆ ದೂರು ಸಲ್ಲಿಸಿದ್ದೇನೆ. ನನ್ನ ಕುಟಂಬದವರ ಮಾನ ಹರಾಜು ಹಾಕುವವರಿಗೆ ಖಂಡಿತಾ ಕಠಿಣ ಶಿಕ್ಷೆ ಆಗತ್ತೆ ಎಂದು ಜ್ಯೋತಿ ರೈ ಕಿಡಿಗೇಡಿಗಳ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

    ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋಗಳು ಸಖತ್ ಸುದ್ದಿ ಮಾಡುತ್ತಿರುವ ಬೆನ್ನಲ್ಲೇ. ಕನ್ನಡದ ಕಿರುತೆರೆಯ ಪ್ರಸಿದ್ಧ ನಟಿಯೊಬ್ಬರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದ್ದವು. ಮೂರು ಅಶ್ಲೀಲ ವಿಡಿಯೋಗಳು ಮತ್ತು ಹಲವು ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಭಾರೀ ಸೇಲ್ ಆಗುತ್ತಿದ್ದವು. ಅವು ಕನ್ನಡದ ನಟಿಯದ್ದು ಎನ್ನುವಂತೆ ಬಿಂಬಿಸಲಾಗಿತ್ತು.

    ಕನ್ನಡದಲ್ಲಿ ‘ಜೋಗುಳ’ ಸೇರಿದಂತೆ ಸಾಕಷ್ಟು ಧಾರಾವಾಹಿಗಳಲ್ಲಿ ನಟಿಸಿರುವ ಮತ್ತು ಈಗ ಪರಭಾಷೆಯ ಕಿರುತೆರೆ ಹಾಗೂ ವೆಸ್ ಸಿರೀಸ್ ಗಳಲ್ಲಿ ನಟಿಸಿರುವ ಈ ನಟಿ ಇತ್ತೀಚೆಗಷ್ಟೇ ತಮ್ಮ ಮತ್ತೊಂದು ಸಂಬಂಧವನ್ನು ಖಚಿತ ಪಡಿಸಿದ್ದರು ಎಂದು ಪ್ರಚಾರ ಮಾಡಲಾಗಿತ್ತು. ಆ ನಟಿ ಬೇರೆ ಯಾರೂ ಅಲ್ಲ ಮಂಗಳೂರಿನ ಬೆಡಗಿ ಜ್ಯೋತಿ ರೈ ಎಂಬ ಬಿಲ್ಡ್ ಅಪ್ ಕೂಡ ಕೊಡಲಾಗಿತ್ತು.

    ಜ್ಯೋತಿ ರೈ (Jyothi Rai) ಕನ್ನಡದಲ್ಲಿ ಬದುಕು ಕಟ್ಟಿಕೊಂಡು ಇದೀಗ ಪರಭಾಷಾ ಧಾರಾವಾಹಿಗಳಲ್ಲೂ ಮಿಂಚುತ್ತಿದ್ದಾರೆ. ಕೆಲವು ಸಿನಿಮಾಗಳಲ್ಲಿ ಕಾಣಿಸಿಕೊಂಡಿದ್ದಾರೆ. ಜೊತೆಗೆ ವೆಬ್ ಸಿರೀಸ್ ನಲ್ಲಿ ನಟಿಸಿದ್ದಾರೆ. ತಮಗಿಂತ ಚಿಕ್ಕ ವಯಸ್ಸಿನ ನಿರ್ದೇಶಕನ ಜೊತೆ ಮದುವೆ ಆಗಿದ್ದಾರೆ ಎಂದು ಹೇಳಲಾಗುತ್ತಿದೆ. ಆ ನಿರ್ದೇಶಕನ ಜೊತೆಗಿನ ಫೋಟೋಗಳನ್ನೂ ಅವರು ಅಪ್ ಲೋಡ್ ಮಾಡಿದ್ದರು. ಇದನ್ನೂ ಓದಿ:‘ಕಣ್ಣಪ್ಪ’ ಸಿನಿಮಾದ ವಿಶೇಷ ಪಾತ್ರದಲ್ಲಿ ನಟ ಪ್ರಭಾಸ್

    ಜೊತೆಗೆ ಸದಾ ಸೋಷಿಯಲ್ ಮೀಡಿಯಾಗಳಲ್ಲಿ ಆಕ್ಟಿವ್ ಆಗಿರುವ ಜ್ಯೋತಿ ರೈ ಆಗಾಗ್ಗೆ ಹಾಟ್ ಫೋಟೋಗಳನ್ನು ಶೇರ್ ಮಾಡಿ, ಅಭಿಮಾನಿಗಳ ಹೃದಯಕ್ಕೆ ಕಿಚ್ಚು ಹಚ್ಚಿಸುತ್ತಿರುತ್ತಾರೆ. ಆದರೆ, ಈ ಬಾರಿ ಅವರು ಅಶ್ಲೀಲ ವಿಡಿಯೋಗಳ ಮೂಲಕ ಸೋಷಿಯಲ್ ಮೀಡಿಯಾದಲ್ಲಿ ಹಲ್ಚೆಲ್ ಎಬ್ಬಿಸಿದ್ದರು. ಈಗ ಅದಕ್ಕೆಲ್ಲ ಸ್ಪಷ್ಟನೆ ಸಿಕ್ಕಿದೆ.

  • ಕನ್ನಡ ಪ್ರಸಿದ್ಧ ಕಿರುತೆರೆ ನಟಿಯದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್: ಜ್ಯೋತಿ ರೈ ಹೇಳಿದ್ದೇನು?

    ಕನ್ನಡ ಪ್ರಸಿದ್ಧ ಕಿರುತೆರೆ ನಟಿಯದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್: ಜ್ಯೋತಿ ರೈ ಹೇಳಿದ್ದೇನು?

    ನ್ನಡ ಕಿರುತೆರೆ ಲೋಕದ ಪ್ರಸಿದ್ಧ ನಟಿ ಜ್ಯೋತಿ ರೈ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಒಟ್ಟು ಮೂರು ಅಶ್ಲೀಲ ವಿಡಿಯೋಗಳು ಹಾಗೂ ಒಂದಷ್ಟು ಅಶ್ಲೀಲ ಫೋಟೋಗಳನ್ನು ಅನೇಕರು ಕದ್ದು ಮುಚ್ಚಿ ಹಂಚಿಕೊಂಡಿದ್ದರು.  ಎಡಿಟ್ ಬಾ ಅಭಿ ಎನ್ನುವ ಎಕ್ಸ್ ಖಾತೆಯಲ್ಲಿ ತನ್ನ ಯೂಟ್ಯೂಬ್ ಚಾನೆಲ್ ನಲ್ಲಿ ವಿಡಿಯೋಗಳನ್ನು ಅಪ್ ಲೋಡ್ ಮಾಡುತ್ತೇನೆ ಎಂದು ಬಹಿರಂಗವಾಗಿಯೇ ಬರೆದುಕೊಂಡಿದ್ದು. ಇದಕ್ಕೆ ಸಂಬಂಧಿಸಿದಂತೆ ಜ್ಯೋತಿ ರೈ ಸುದೀರ್ಘವಾಗಿ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

    ಈ ಕುರಿತಂತೆ ಜ್ಯೋತಿ ರೈ ಪ್ರತಿಕ್ರಿಯೆ ನೀಡದೇ ಇದ್ದರೂ, ಕೆಲವು ವ್ಯಕ್ತಿಗಳು ತಮ್ಮ ನಕಲಿ ಫೋಟೋ ಮತ್ತು ವಿಡಿಯೋಗಳನ್ನು ಶೇರ್ ಮಾಡಿ ಕಿರುಕುಳ ನೀಡುತ್ತಿದ್ದಾರೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಈಗಾಗಲೇ ದೂರು ಕೂಡ ನೀಡಿರುವುದಾಗಿ ತಿಳಿಸಿದ್ದಾರೆ. ಹರಿದಾಡುತ್ತಿರುವ ಫೋಟೋ ಮತ್ತು ವಿಡಿಯೋಗಳು ಫೇಕ್ ಎಂದು ಅವರು ಸೋಷಿಯಲ್ ಮೀಡಿಯಾ ಮೂಲಕ ಸ್ಪಷ್ಟ ಪಡಿಸಿದ್ದಾರೆ. ಕೆಲವರ ನಂಬರ್ ನಿಂದ ನನಗೆ ಕರೆಗಳು ಬಂದಿದ್ದವು. ಅವರೇ ಇಂದು ನನ್ನದು ಎನ್ನಲಾಗುತ್ತಿರುವ ವಿಡಿಯೋ ಮತ್ತು ಫೋಟೋ ಕಳುಹಿಸಿದ್ದಾರೆ ಎಂದು ಬರೆದಿದ್ದಾರೆ.

    ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋಗಳು ಸಖತ್ ಸುದ್ದಿ ಮಾಡುತ್ತಿರುವ ಬೆನ್ನಲ್ಲೇ. ಕನ್ನಡದ ಕಿರುತೆರೆಯ ಪ್ರಸಿದ್ಧ ನಟಿಯೊಬ್ಬರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದ್ದವು. ಮೂರು ಅಶ್ಲೀಲ ವಿಡಿಯೋಗಳು ಮತ್ತು ಹಲವು ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಭಾರೀ ಸೇಲ್ ಆಗುತ್ತಿದ್ದವು. ಅವು ಕನ್ನಡದ ನಟಿಯದ್ದು ಎನ್ನುವಂತೆ ಬಿಂಬಿಸಲಾಗಿತ್ತು.

    ಕನ್ನಡದಲ್ಲಿ ಜೋಗುಳ ಸೇರಿದಂತೆ ಸಾಕಷ್ಟು ಧಾರಾವಾಹಿಗಳಲ್ಲಿ ನಟಿಸಿರುವ ಮತ್ತು ಈಗ ಪರಭಾಷೆಯ ಕಿರುತೆರೆ ಹಾಗೂ ವೆಸ್ ಸಿರೀಸ್ ಗಳಲ್ಲಿ ನಟಿಸಿರುವ ಈ ನಟಿ ಇತ್ತೀಚೆಗಷ್ಟೇ ತಮ್ಮ ಮತ್ತೊಂದು ಸಂಬಂಧವನ್ನು ಖಚಿತ ಪಡಿಸಿದ್ದರು ಎಂದು ಪ್ರಚಾರ ಮಾಡಲಾಗಿತ್ತು. ಆ ನಟಿ ಬೇರೆ ಯಾರೂ ಅಲ್ಲ ಮಂಗಳೂರಿನ ಬೆಡಗಿ ಜ್ಯೋತಿ ರೈ ಎಂಬ ಬಿಲ್ಡ್ ಅಪ್ ಕೂಡ ಕೊಡಲಾಗಿತ್ತು.

    ಜ್ಯೋತಿ ರೈ ಕನ್ನಡದಲ್ಲಿ ಬದುಕು ಕಟ್ಟಿಕೊಂಡು ಇದೀಗ ಪರಭಾಷಾ ಧಾರಾವಾಹಿಗಳಲ್ಲೂ ಮಿಂಚುತ್ತಿದ್ದಾರೆ. ಕೆಲವು ಸಿನಿಮಾಗಳಲ್ಲಿ ಕಾಣಿಸಿಕೊಂಡಿದ್ದಾರೆ. ಜೊತೆಗೆ ವೆಬ್ ಸಿರೀಸ್ ನಲ್ಲಿ ನಟಿಸಿದ್ದಾರೆ. ತಮಗಿಂತ ಚಿಕ್ಕ ವಯಸ್ಸಿನ ನಿರ್ದೇಶಕನ ಜೊತೆ ಮದುವೆ ಆಗಿದ್ದಾರೆ ಎಂದು ಹೇಳಲಾಗುತ್ತಿದೆ. ಆ ನಿರ್ದೇಶಕನ ಜೊತೆಗಿನ ಫೋಟೋಗಳನ್ನೂ ಅವರು ಅಪ್ ಲೋಡ್ ಮಾಡಿದ್ದರು.

     

    ಜೊತೆಗೆ ಸದಾ ಸೋಷಿಯಲ್ ಮೀಡಿಯಾಗಳಲ್ಲಿ ಆಕ್ಟಿವ್ ಆಗಿರುವ ಜ್ಯೋತಿ ರೈ… ಆಗಾಗ್ಗೆ ಹಾಟ್ ಫೋಟೋಗಳನ್ನು ಶೇರ್ ಮಾಡಿ, ಅಭಿಮಾನಿಗಳ ಹೃದಯಕ್ಕೆ ಕಿಚ್ಚು ಹಚ್ಚಿಸುತ್ತಿರುತ್ತಾರೆ. ಆದರೆ, ಈ ಬಾರಿ ಅವರು ಅಶ್ಲೀಲ ವಿಡಿಯೋಗಳ ಮೂಲಕ ಸೋಷಿಯಲ್ ಮೀಡಿಯಾದಲ್ಲಿ ಹಲ್ಚೆಲ್ ಎಬ್ಬಿಸಿದ್ದರು. ಈಗ ಅದಕ್ಕೆಲ್ಲ ಸ್ಪಷ್ಟನೆ ಸಿಕ್ಕಿದೆ.

  • ಬೆಳ್ಳುಳ್ಳಿ ಸೇವಿಸೋದ್ರಿಂದ ಏನೆಲ್ಲ ಆಗಲಿದೆ ಎಂದು ಹಾಟ್ ಬೆಡಗಿ ಜ್ಯೋತಿ ರೈ ಸಲಹೆ

    ಬೆಳ್ಳುಳ್ಳಿ ಸೇವಿಸೋದ್ರಿಂದ ಏನೆಲ್ಲ ಆಗಲಿದೆ ಎಂದು ಹಾಟ್ ಬೆಡಗಿ ಜ್ಯೋತಿ ರೈ ಸಲಹೆ

    ಜೋಗುಳ, ಕನ್ಯಾದಾನ, ಗೆಜ್ಜೆಪೂಜೆ ಸೀರಿಯಲ್‌ಗಳಲ್ಲಿ ನಟಿಸಿದ ಜ್ಯೋತಿ ರೈ (Jyothi Rai) ಸದ್ಯ ತೆಲುಗಿನಲ್ಲಿ (Tollywood) ಬ್ಯುಸಿಯಾಗಿದ್ದಾರೆ. ಇದರ ನಡುವೆ ತಮ್ಮ ಅಭಿಮಾನಿಗಳಿಗೆ ಹೆಲ್ತ್ ಟಿಪ್ಸ್ ನೀಡಿದ್ದಾರೆ. ಬೆಳ್ಳುಳ್ಳಿ ಸೇವಿಸೋದ್ರಿಂದ ಏನೆಲ್ಲ ಆಗಲಿದೆ ಎಂದು ಹಾಟ್ ಬೆಡಗಿ ಜ್ಯೋತಿ ರೈ ಸಲಹೆ ನೀಡಿದ್ದಾರೆ. ಇದನ್ನೂ ಓದಿ:ದರ್ಶನ್ ಅಭಿಮಾನಿಗಳ ಬೈಕ್ ರ‍್ಯಾಲಿಗೆ ಪೊಲೀಸ್ ನಿರಾಕರಣೆ

    ಬೆಳ್ಳುಳ್ಳಿಯನ್ನು ಫೋಟೋವನ್ನು ಶೇರ್ ಮಾಡಿ, ಅದರ ಉಪಯೋಗಗಳನ್ನು ಬರೆದುಕೊಂಡಿದ್ದಾರೆ. ಬೆಳಗ್ಗೆ ಎದ್ದ ಕೂಡಲೇ ಬೆಳ್ಳುಳ್ಳಿಯನ್ನು ಸೇವಿಸುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ. ರಕ್ತದ ಒತ್ತಡವನ್ನು ನಿಯಂತ್ರಿಸುತ್ತದೆ. ಲಿವರ್ ಕಾರ್ಯಕ್ಷಮತೆಯನ್ನು ಹೆಚ್ಚಿಸುತ್ತದೆ. ಜೀರ್ಣಕ್ರಿಯೆ ಹೆಚ್ಚಾಗುತ್ತೆ ಎಂದು ಜ್ಯೋತಿ ರೈ ಸಲಹೆ ನೀಡಿದ್ದಾರೆ.

    ಮೊದಲ ಮದುವೆಯ ಡಿವೋರ್ಸ್ ನಂತರ ಇತ್ತೀಚೆಗೆ ತೆಲುಗಿನ ನಿರ್ದೇಶಕ ಸುಕು ಪೂರ್ವಜ್ ಜೊತೆ ಜ್ಯೋತಿ ರೈ 2ನೇ ಮದುವೆಯಾಗಿದ್ದಾರೆ. ತಮ್ಮ ಮದುವೆಯ ಸ್ವತಃ ನಟಿಯೇ ಸೋಷಿಯಲ್ ಮೀಡಿಯಾದಲ್ಲಿ ರಿವೀಲ್ ಮಾಡಿದ್ದರು.

    ಅನುರಾಗ, ಲವಲವಿಕೆ, ಮೂರುಗಂಟು, ಕಿನ್ನರಿ, ಕಸ್ತೂರಿ ನಿವಾಸ ಸೇರಿದಂತೆ 18ಕ್ಕೂ ಹೆಚ್ಚು ಕನ್ನಡ ಸೀರಿಯಲ್‌ಗಳಲ್ಲಿ ಜ್ಯೋತಿ ನಟಿಸಿದ್ದಾರೆ. ‘ಸೀತಾರಾಮ ಕಲ್ಯಾಣ’ ಸೇರಿದಂತೆ ಹಲವು ಚಿತ್ರಗಳಲ್ಲಿ ಈ ಕರಾವಳಿ ಬ್ಯೂಟಿ ನಟಿಸಿದ್ದಾರೆ.

  • ತಾಯಿ ಕಳೆದುಕೊಂಡ ಮಗನ ಆಕ್ರಂದನ- ‘Supplier ಶಂಕರ್’ ಸಿನಿಮಾದ ಸಾಂಗ್‌ ಔಟ್

    ತಾಯಿ ಕಳೆದುಕೊಂಡ ಮಗನ ಆಕ್ರಂದನ- ‘Supplier ಶಂಕರ್’ ಸಿನಿಮಾದ ಸಾಂಗ್‌ ಔಟ್

    ‘ಗಂಟುಮೂಟೆ’, ‘ಟಾಮ್ ಆ್ಯಂಡ್‌ ಜರ‍್ರಿ’ ಸಿನಿಮಾ ಖ್ಯಾತಿಯ ನಾಯಕ ನಿಶ್ಚಿತ್ ಕೊರೋಡಿ (Nishchith Korodi) ಅಭಿನಯದ ‘ಸಪ್ಲೈಯರ್‌ ಶಂಕರ’ (Supplier Shankara) ಸಿನಿಮಾದ ಮೊದಲ ಹಾಡು ಇದೀಗ ಬಿಡುಗಡೆಯಾಗಿದೆ. ಈ ಎಮೋಷನಲ್‌ ಸಾಂಗ್‌ ಪ್ರೇಕ್ಷಕರ ಗಮನ ಸೆಳೆಯುತ್ತಿದೆ.

    ತಾಯಿ ಕಳೆದುಕೊಂಡ ಮಗನ ಆಕ್ರಂದನ, ತುಂಬಾ ಪ್ರೀತಿಸುವ ಜೀವ ದೂರವಾದಾಗ ಆಗುವ‌ ನೋವಿನ ಗೀತೆಯಾಗಿರುವ ಅಯ್ಯೋ ದೈವವೇ ಹಾಡಿಗೆ ನಿರ್ದೇಶಕ ರಂಜಿತ್ ಸಿಂಗ್ ರಜಪೂತ್ ಸಾಹಿತ್ಯ ಬರೆದಿದ್ದು, ಸುನಿಲ್ ಕಶ್ಯಪ್ ಧ್ವನಿಯಾಗಿದ್ದು, ಆರ್ ಬಿ ಭರತ್ ಟ್ಯೂನ್ ಹಾಕಿದ್ದಾರೆ. ಕೇಳುಗರಿಗೆ ಬಹಳ ಕನೆಕ್ಟ್ ಆಗುವ ಸೆಂಟಿಮೆಂಟ್ ಹಾಡು ಇದಾಗಿದ್ದು, ಸಾಹಿತ್ಯ, ಸಂಗೀತ ಎಲ್ಲಾ ವಿಚಾರದಲ್ಲೂ ಗಮನ ಸೆಳೆಯುತ್ತಿದೆ.

    ಇತ್ತೀಚಿಗೆ ರಿಲೀಸ್ ಆದ ಮೋಷನ್ ಪೋಸ್ಟರ್ ಗೆ ಒಳ್ಳೆ ರೆಸ್ಪಾನ್ಸ್ ಸಿಕ್ತಿತ್ತು. ಯುವ ಪ್ರತಿಭೆ ರಂಜಿತ್ ಸಿಂಗ್ ರಜಪೂತ್ ಈ ಚಿತ್ರಕ್ಕೆ ಆ್ಯಕ್ಷನ್‌ ಕಟ್ ಹೇಳಿದ್ದಾರೆ. ತ್ರಿನೇತ್ರ ಫಿಲ್ಮಂಸ್ ಸಂಸ್ಥೆಯಡಿ ಎಂ.ಚಂದ್ರಶೇಖರ್ – ನಾಗೇಂದ್ರ ಸಿಂಗ್ ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಇದನ್ನೂ ಓದಿ:ದಿಗ್ಗಜರು- 2 ಸಿನಿಮಾಗಾಗಿ ಮತ್ತೆ ಜೊತೆಯಾಗ್ತಾರಾ ಸುದೀಪ್-‌ ದರ್ಶನ್?‌

    ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿದ್ದು, ಬಾರ್ ಸಪ್ಲೈಯರ್‌ ಸುತ್ತ ಇಡೀ ಸಿನಿಮಾ ಸಾಗುತ್ತದೆ. ಗೋಪಾಲ ಕೃಷ್ಣ ದೇಶಪಾಂಡೆ, ಜ್ಯೋತಿ ರೈ(Jyothi Rai), ನವೀನ್ ಡಿ ಪಡಿಲ್ ಸೇರಿದಂತೆ ಒಂದಷ್ಟು ಹೊಸಬರು ಚಿತ್ರದಲ್ಲಿದ್ದಾರೆ ಎಂದು ನಿರ್ದೇಶಕರು ಹೇಳಿದ್ದಾರೆ. ಸತೀಶ್ ಕುಮಾರ್.ಎ ಛಾಯಾಗ್ರಹಣ, ಆರ್.ಬಿ.ಭರತ್ ಸಂಗೀತ, ಸತೀಶ್ ಚಂದ್ರಯ್ಯ ಸಂಕಲನ ಚಿತ್ರಕ್ಕಿದೆ. ಸದ್ದಿಲ್ಲದೇ ಶೂಟಿಂಗ್ ಮುಗಿಸಿರುವ ‘ಸಪ್ಲೈಯರ್ ಶಂಕರ’ ಬಿಡುಗಡೆಗೆ ಸಜ್ಜಾಗಿದ್ದಾನೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]