Tag: Jyotiraditya Scindia

  • ಕೊಡಗಿನಲ್ಲಿ BSNL ಸೇವೆ ಸರಿಪಡಿಸಲು ಕೇಂದ್ರ ಸಚಿವರಿಗೆ ಯದುವೀರ್‌‌ ಒಡೆಯರ್‌ ಮನವಿ

    ಕೊಡಗಿನಲ್ಲಿ BSNL ಸೇವೆ ಸರಿಪಡಿಸಲು ಕೇಂದ್ರ ಸಚಿವರಿಗೆ ಯದುವೀರ್‌‌ ಒಡೆಯರ್‌ ಮನವಿ

    ಮಡಿಕೇರಿ: ಕೊಡಗಿನಲ್ಲಿ ತುರ್ತಾಗಿ ಬಿಎಸ್‌ಎನ್‌ಎಲ್‌ ನೆಟ್‌ವರ್ಕ್‌ (BSNL Network) ವ್ಯವಸ್ಥೆಯನ್ನು ಸರಿಪಡಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಕೇಂದ್ರ ದೂರ ಸಂಪರ್ಕ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ (Yaduveer Wadiyar) ಮನವಿ ಮಾಡಿದ್ದಾರೆ.

    ನವದೆಹಲಿಯಲ್ಲಿ (New Delhi) ಕೇಂದ್ರ ಸಚಿವರನ್ನು ಭೇಟಿಯಾದ ಸಂಸದ ಯದುವೀರ್‌, ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಇದರಿಂದ ವಿದ್ಯುತ್‌ ಕಂಬಗಳು, ಟೆಲಿಫೋನ್‌ ಕಂಬಗಳು ನೆಲಕ್ಕುರುಳಿವೆ. ಅವುಗಳ ದುರಸ್ತಿಗೂ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಕೆಲಸದ ಅವಧಿ 9ರಿಂದ 10ಗಂಟೆಗೆ ಹೆಚ್ಚಳಕ್ಕೆ ಸರ್ಕಾರ ಚಿಂತನೆ – ಕಾರ್ಮಿಕ ಸಂಘಟನೆಗಳ ವಿರೋಧ

    ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿ, ಕೊಡಗಿನಲ್ಲಿ (Kodagu) ಬಿಎಸ್‌ಎನ್‌ಎಲ್‌ ನೆಟ್‌ವರ್ಕ್‌ ಸೇವೆ ಅತ್ಯಂತ ಕಳಪೆಯಾಗಿದೆ. ಇಲ್ಲಿ ಟವರ್‌ಗಳನ್ನು ಬದಲಿಸಬೇಕು, ಉತ್ತಮ ಕನೆಕ್ಟಿವಿಟಿ ಒದಗಿಸಬೇಕು ಎಂದು ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಈ ಬಗ್ಗೆಯೂ ಸಚಿವರ ಗಮನಕ್ಕೆ ತರಲಾಗಿದೆ. ಕಳಪೆ ನೆಟ್‌ವರ್ಕ್ ಸಂಪರ್ಕದಿಂದ ವಿದ್ಯಾರ್ಥಿಗಳ ಮೇಲೆ ತೀವ್ರ ಪರಿಣಾಮ ಬೀರುತ್ತಿದೆ, ಆನ್‌ಲೈನ್ ತರಗತಿಗಳಿಗೆ ಹಾಜರಾಗಲು ಅಥವಾ ಡಿಜಿಟಲ್ ಕೋರ್ಸ್‌ ಮಾಡಲು ಸಾಧ್ಯವಾಗುತ್ತಿಲ್ಲ. ಅಷ್ಟೇ ಅಲ್ಲದೇ, ಸರ್ಕಾರಿ ಕಚೇರಿಗಳ ದಿನನಿತ್ಯದ ಕೆಲಸಗಳಿಗೂ ತೊಂದರೆಯಾಗುತ್ತಿದೆ ಎಂದು ಸಮಸ್ಯೆಗಳ ಬಗ್ಗೆ ಗಮನ ಸೆಳೆಯಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಮದುವೆಯಾಗಲು ಗೋವಾಕ್ಕೆ ತೆರಳಿದ್ದ ಜೋಡಿ – ಗಂಟಲು ಸೀಳಿ ಪ್ರೇಯಸಿಯ ಕೊಲೆ

    ಕೊಡಗಿನಲ್ಲಿ ನನ್ನ ಗಮನಕ್ಕೆ ಬಂದಿರುವ ಪ್ರಮುಖ ವಿಷಯ ಎಂದರೆ ಪವರ್‌ ಬ್ಯಾಕ್‌ ಅಪ್‌. ಬ್ಯಾಕ್‌ ಅಪ್‌ ಬ್ಯಾಟರಿಗಳು ಸಂಪೂರ್ಣ ನಿಷ್ಕ್ರಿಯವಾದರೆ, ಅವುಗಳನ್ನು ಮತ್ತೆ ಸರಿಪಡಿಸಲು ಸಾಕಷ್ಟು ಸಮಯ ಮತ್ತು ಪ್ರಯಾಸದ ಕೆಲಸವಾಗಿದೆ. ಕಳೆದ ಮಾರ್ಚ್‌ 8ರಂದು ದಿಶಾ ಸಭೆ ನಡೆಸಿದ ಅಧಿಕಾರಿಗಳಿಗೆ ಈ ಬಗ್ಗೆ ಸೂಚನೆ ನೀಡಿ ಎಲ್ಲವನ್ನೂ ಸರಿಪಡಿಸಲು ತಿಳಿಸಿದ್ದೆ. ಆದರೂ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ ಎಂದು ಯದುವೀರ್‌ ವಿವರಿಸಿದ್ದಾರೆ. ಇದನ್ನೂ ಓದಿ: ಕೇದಾರನಾಥ ಟ್ರಕ್ಕಿಂಗ್ ದಾರಿಯಲ್ಲಿ ಭೂಕುಸಿತ – ಇಬ್ಬರು ಸಾವು, ಮೂವರಿಗೆ ಗಾಯ

  • ಎಲ್ಲಾ ಲೋಕಸಭಾ ಕ್ಷೇತ್ರಗಳಲ್ಲಿ ಪಾಸ್‌ಪೋರ್ಟ್‌ ಕೇಂದ್ರ: ಸಿಂಧಿಯಾ ಘೋಷಣೆ

    ಎಲ್ಲಾ ಲೋಕಸಭಾ ಕ್ಷೇತ್ರಗಳಲ್ಲಿ ಪಾಸ್‌ಪೋರ್ಟ್‌ ಕೇಂದ್ರ: ಸಿಂಧಿಯಾ ಘೋಷಣೆ

    ನವದೆಹಲಿ: ದೇಶದ 543 ಲೋಕಸಭಾ ಕ್ಷೇತ್ರಗಳಲ್ಲಿ ಪಾಸ್‌ಪೋರ್ಟ್ ಸೇವಾ ಕೇಂದ್ರ (Passport Seva Kendra) ತೆರೆಯಲಾಗುವುದು ಎಂದು ಕೇಂದ್ರ ಸಂವಹನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ (Jyotiraditya Scindia) ಹೇಳಿದ್ದಾರೆ.

    ತಾವು ಪ್ರತಿನಿಧಿಸುವ ಸಂಸದೀಯ ಕ್ಷೇತ್ರವಾದ ಮಧ್ಯಪ್ರದೇಶದ ಗುಣದಲ್ಲಿ ಪಾಸ್‌ಪೋರ್ಟ್ ಸೇವಾ ಕೇಂದ್ರವನ್ನು ಉದ್ಘಾಟಿಸುತ್ತಾ ಸಿಂಧಿಯಾ ಈ ಘೋಷಣೆ ಮಾಡಿದರು. ಈ ವರ್ಷ ಮಧ್ಯಪ್ರದೇಶದಲ್ಲಿ ಆರು ಹೊಸ ಪಾಸ್‌ಪೋರ್ಟ್ ಕೇಂದ್ರಗಳನ್ನು ತೆರೆಯಲಾಗುವುದು ಎಂದು ಕೇಂದ್ರ ಸಚಿವರು ಹೇಳಿದರು. ಇದನ್ನೂ ಓದಿ: ಸಿದ್ದರಾಮಯ್ಯರನ್ನ ಯಾರೂ ಏನೂ ಮಾಡೋಕ್ಕಾಗಲ್ಲ: ಬೈರತಿ ಸುರೇಶ್

    ಸೇವೆಗಳನ್ನು ವಿಸ್ತರಿಸುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಪ್ರತಿ ಲೋಕಸಭಾ ಕ್ಷೇತ್ರದಲ್ಲಿ ಪಾಸ್‌ಪೋರ್ಟ್ ಸೇವಾ ಕೇಂದ್ರವನ್ನು ಸ್ಥಾಪಿಸಲು ನಿರ್ಧರಿಸಿದ್ದಾರೆ. ವಿದೇಶಾಂಗ ಸಚಿವಾಲಯದ ಸಹಯೋಗದೊಂದಿಗೆ ಅಂಚೆ ಇಲಾಖೆಯು ಈ ನಿರ್ಣಯವನ್ನು ನನಸಾಗಿಸಲು ಬದ್ಧವಾಗಿದೆ ಎಂದರು.

    ದೇಶಾದ್ಯಂತ 6,000 ಅಂಚೆ ಕಚೇರಿಗಳನ್ನು ತೆರೆಯಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.

     

  • ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾಗೆ ಮಾತೃ ವಿಯೋಗ

    ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾಗೆ ಮಾತೃ ವಿಯೋಗ

    ನವದೆಹಲಿ: ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ (Jyotiraditya Scindia) ಅವರ ತಾಯಿ ಮಾಧವಿ ರಾಜೇ ಸಿಂಧಿಯಾ (Madhavi Raje Scindia) ಇಂದು ನಿಧನರಾದರು.

    ಗ್ವಾಲಿಯರ್ ರಾಜಮನೆತನದ ‘ರಾಜಮಾತಾ’ ಮಾಧವಿ ರಾಜೇ ಸಿಂಧಿಯಾ ಅವರು ಕಳೆದ ಕೆಲವು ದಿನಗಳಿಂದ ಏಮ್ಸ್‌ನಲ್ಲಿ ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇಂದು ಬೆಳಗ್ಗೆ 9.28ರ ಸುಮಾರಿಗೆ ಕೊನೆಯುಸಿರೆಳೆದರು ಎಂಬುದಾಗಿ ಜ್ಯೋತಿರಾದಿತ್ಯ ಸಿಂಧಿಯಾ ಕಚೇರಿಯಿಂದ ಮಾಹಿತಿ ಲಭಿಸಿದೆ.

    ನ್ಯುಮೋನಿಯಾ ಮತ್ತು ಸೆಪ್ಸಿಸ್‌ನಿಂದ ಬಳಲುತ್ತಿದ್ದ ಮಾಧವಿ ರಾಜೆ ಕಳೆದ ಮೂರು ತಿಂಗಳಿನಿಂದ ದೆಹಲಿಯ ಪ್ರಮುಖ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಮೂರನೇ ಹಂತದ ಮತದಾನಕ್ಕೂ ಮುನ್ನ ಸಿಂಧಿಯಾ ಕುಟುಂಬದ ರಾಜಮಾತೆ ಅವರ ಆರೋಗ್ಯ ಹದಗೆಟ್ಟ ಕಾರಣ ದೆಹಲಿ ಏಮ್ಸ್‌ಗೆ ದಾಖಲಾಗಿದ್ದರು.

    ಸದ್ಯ ಮಾಧವಿ ರಾಜೆ ಅವರ ಪಾರ್ಥಿವ ಶರೀರವನ್ನು ಅಂತಿಮ ವಿಧಿ-ವಿಧಾನಗಳಿಗಾಗಿ ಮಧ್ಯಪ್ರದೇಶದ ಗ್ವಾಲಿಯರ್‌ಗೆ ತರಲಾಗುತ್ತದೆ. ಇದನ್ನೂ ಓದಿ: ಸಾಲ ತೀರಿಸಲು ಮನೆ ಮಾಲಕಿಯನ್ನೇ ಹತ್ಯೆ ಮಾಡಿದ್ದ ಸುಂದರಿ ಅರೆಸ್ಟ್

    ಕಳೆದ ತಿಂಗಳುಗಳಿಂದ ದೆಹಲಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಧವಿ ರಾಜೇ ಸಿಂಧಿಯಾ ಅವರ ಆರೋಗ್ಯ ಚಿಂತಾಜನಕ ಹಂತ ತಲುಪಿತ್ತು. ಈ ಸಂದರ್ಭದಲ್ಲಿ ಗುಣಾ ಸಂಸದೀಯ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜ್ಯೋತಿರಾದಿತ್ಯ ಸಿಂಧಿಯಾ ಅವರು ತಮ್ಮ ಪತ್ನಿ ಪ್ರಿಯದರ್ಶಿನಿ ರಾಜೆ ಮತ್ತು ಪುತ್ರ ಮಹಾಅರ್ಯಮನ್ ಸಿಂಧಿಯಾ ಅವರೊಂದಿಗೆ ಚುನಾವಣಾ ಪ್ರಚಾರವನ್ನು ಅರ್ಧಕ್ಕೆ ನಿಲ್ಲಿಸಿ ಹೋಗಬೇಕಾಯಿತು.

  • ಮಧ್ಯಪ್ರದೇಶದ ಮುಂದಿನ ಮುಖ್ಯಮಂತ್ರಿ ಯಾರು? – ‘ಮಹಾರಾಜ’ನ ಪಟ್ಟದಾಸೆ

    ಮಧ್ಯಪ್ರದೇಶದ ಮುಂದಿನ ಮುಖ್ಯಮಂತ್ರಿ ಯಾರು? – ‘ಮಹಾರಾಜ’ನ ಪಟ್ಟದಾಸೆ

    – ಸಿಎಂ ರೇಸ್‌ನಲ್ಲಿ ನಾಲ್ವರ ಪೈಪೋಟಿ

    ಭೋಪಾಲ್: 2003 ರಿಂದ ಮಧ್ಯಪ್ರದೇಶದಲ್ಲಿ ಆಡಳಿತ (2018 ರ ನಂತರ 15 ತಿಂಗಳ ಅವಧಿ ಹೊರತುಪಡಿಸಿ) ನಡೆಸಿಕೊಂಡು ಬಂದಿರುವ ಬಿಜೆಪಿ 2023 ರ ಚುನಾವಣೆಯಲ್ಲೂ ಭರ್ಜರಿ ಗೆಲುವು ದಾಖಲಿಸಿದೆ. ಅಮೋಘ ಜಯ ಸಾಧಿಸಿರುವ ಮಧ್ಯಪ್ರದೇಶದಲ್ಲಿ ಈಗ ಸಿಎಂ ಯಾರಾಗುತ್ತಾರೆ ಎಂಬುದೇ ಪ್ರಶ್ನೆ.

    ಮಧ್ಯಪ್ರದೇಶದಲ್ಲಿ ಹಾಲಿ ಸಿಎಂ ಶಿವರಾಜ್‌ ಸಿಂಗ್‌ ಚೌಹಾಣ್‌ ಇದ್ದರೂ, ಇವರನ್ನು ಸಿಎಂ ಅಭ್ಯರ್ಥಿ ಎಂದು ಬಿಜೆಪಿ ಘೋಷಣೆ ಮಾಡಿರಲಿಲ್ಲ. ಇಲ್ಲಿ ಕೇಂದ್ರ ಸಚಿವರು, ಸಂಸದರನ್ನೂ ಕಣಕ್ಕಿಳಿಸಲಾಗಿತ್ತು. ಬಿಜೆಪಿ ತಂತ್ರ, ಸಾಮೂಹಿಕ ನಾಯಕತ್ವ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆ ಫಲ ನೀಡಿತು. ರಾಜ್ಯದ 230 ಸ್ಥಾನಗಳ ಪೈಕಿ ಬಿಜೆಪಿ 163 ಸ್ಥಾನಗಳನ್ನು ಗಳಿಸಿದ್ದು, ಕಾಂಗ್ರೆಸ್ ಕೇವಲ 66ಕ್ಕೆ ಕುಸಿದಿದೆ.

    ಬಿಜೆಪಿ ವಲಯದಲ್ಲಿ ದಾಖಲೆ ಬರೆಯುತ್ತಾರಾ ಚೌಹಾಣ್‌
    ಮೂವರು ಕೇಂದ್ರ ಸಚಿವರು ಸೇರಿದಂತೆ ಏಳು ಸಂಸದರು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದರೊಂದಿಗೆ ಚೌಹಾಣ್ ಅವರನ್ನು ಸೈಡ್‌ಲೈನ್‌ ಮಾಡಲಾಗಿದೆ ಎಂದು ಹೇಳಲಾಗಿತ್ತು. ಅಲ್ಲದೇ ಚೌಹಾಣ್‌ಗೆ ಟಿಕೆಟ್‌ ಕೊಟ್ಟಿದ್ದೂ ತಡವಾಗಿಯೇ. ಮೊದಲ ಪಟ್ಟಿಯಲ್ಲಿ ಇವರ ಹೆಸರೇ ಇರಲಿಲ್ಲ. ಆದರೆ ಬಿಜೆಪಿಯ ಇತಿಹಾಸದಲ್ಲಿಯೇ ಅತಿ ಹೆಚ್ಚು ಕಾಲ ಮುಖ್ಯಮಂತ್ರಿಯಾಗಿದ್ದ ಹೆಗ್ಗಳಿಕೆಯನ್ನು ಚೌಹಾಣ್‌ ಹೊಂದಿದ್ದಾರೆ. ಈ ಕಾರಣದಿಂದಲೂ ಅವರನ್ನು ಮೂಲೆಗುಂಪು ಮಾಡುವ ಯತ್ನ ನಡೆದಿದೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಮುಖ್ಯಸ್ಥನ ಸ್ಥಾನಕ್ಕೆ ಕಮಲ್‍ನಾಥ್ ರಾಜೀನಾಮೆ?

    ಕೇಂದ್ರ ಸಚಿವರಾದ ಪ್ರಹ್ಲಾದ್ ಸಿಂಗ್ ಪಟೇಲ್ ಮತ್ತು ಜ್ಯೋತಿರಾದಿತ್ಯ ಸಿಂಧಿಯಾ (ಇಬ್ಬರೂ ರಾಜ್ಯದ ಜನಸಂಖ್ಯೆಯ ಅರ್ಧದಷ್ಟು ಇರುವ ಇತರೆ ಹಿಂದುಳಿದ ವರ್ಗಗಳ ನಾಯಕರು), ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯಾ ಮತ್ತು ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್ ಅವರ ಹೆಸರು ಸಿಎಂ ರೇಸ್‌ನಲ್ಲಿ ಕೇಳಿಬರುತ್ತಿದೆ.

    ಸಿಎಂ ರೇಸ್‌ನಲ್ಲಿರುವವರ ಪೈಕಿ ಇಬ್ಬರು ಬ್ರಾಹ್ಮಣ ನಾಯಕರು ಸೇರಿದ್ದಾರೆ. ಮಧ್ಯಪ್ರದೇಶ ರಾಜ್ಯಾಧ್ಯಕ್ಷರೂ ಆದ ಸಂಸದ ವಿ.ಡಿ. ಶರ್ಮಾ ಹಾಗೂ ಐದನೇ ಬಾರಿಗೆ ಶಾಸಕ ಮತ್ತು ಸಚಿವರೂ ಆದ ರಾಜೇಂದ್ರ ಶುಕ್ಲಾ ಇಬ್ಬರೂ ವಿಂಧ್ಯಾ ಪ್ರದೇಶದಿಂದ ಬಂದವರು.

    ಅಮಿತ್‌ ಶಾ ನಿಕಟವರ್ತಿಗೆ ಪಟ್ಟ?
    ವಿಜಯವರ್ಗಿಯಾ ಮಾಲ್ವಾ-ನಿಮಾರ್ ಪ್ರದೇಶದಿಂದ ಬಂದವರು. ಆ ಭಾಗದಲ್ಲಿ ಬಿಜೆಪಿ 66 ಸ್ಥಾನಗಳ ಪೈಕಿ 47 ಸ್ಥಾನಗಳನ್ನು ಗೆದ್ದಿದೆ. ಇವರು ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ನಿಕಟವರ್ತಿ. ಆದರೆ ಪಶ್ಚಿಮ ಬಂಗಾಳದಲ್ಲಿ ಅತ್ಯಾಚಾರ ಪ್ರಕರಣದಲ್ಲಿ ಇವರ ವಿರುದ್ಧವೂ ಆರೋಪ ಕೇಳಿಬಂದಿದೆ. ಇದು ಮುಖ್ಯಮಂತ್ರಿ ಆಗುವ ಇವರ ಕನಸಿಗೆ ಅಡ್ಡಗಾಲಾಗಿದೆ. ಇದನ್ನೂ ಓದಿ: ಮಧ್ಯಪ್ರದೇಶದಲ್ಲಿ ಹಾವು ಏಣಿಯಾಟ – ಅತಿದೊಡ್ಡ, ಅತಿಸಣ್ಣ ನಿರ್ಣಾಯಕ ಗೆಲುವುಗಳಿವು

    ಮಧ್ಯಪ್ರದೇಶದಲ್ಲಿ ಪಕ್ಷದ ಗೆಲುವಿನಲ್ಲಿ ಚೌಹಾಣ್ ಅವರ ಲಾಡ್ಲಿ ಬೆಹ್ನಾ ಯೋಜನೆ ಪಾತ್ರ ವಹಿಸಿತ್ತು ಎಂದು ಹೇಳಲಾಗಿದೆ. ಆದರೆ ರಾಜ್ಯ, ಛತ್ತೀಸ್‌ಗಢ ಮತ್ತು ರಾಜಸ್ಥಾನದಲ್ಲಿ ಬಿಜೆಪಿಯ ಗೆಲುವಿನ ಹಿಂದಿನ ಏಕೈಕ ಅಂಶವೆಂದರೆ ‘ಮೋದಿ ಮ್ಯಾಜಿಕ್’ ಎಂದು ವಿಜಯವರ್ಗಿಯಾ ಅವರು ಅಭಿಪ್ರಾಯಪಟ್ಟಿದ್ದಾರೆ.

    ಸಿಎಂ ಕಿರೀಟ ಧರಿಸ್ತಾರಾ ಸಿಂಧಿಯಾ?
    ಬಿಜೆಪಿಯ ಗೆಲುವಿನಲ್ಲಿ ಯುವ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಅವರ ಪಾತ್ರವೂ ಮಹತ್ವದ್ದು ಎನ್ನಲಾಗಿದೆ. ಗ್ವಾಲಿಯರ್‌ ರಾಜಮನೆತನದಲ್ಲಿ ಜನಿಸಿದ ಸಿಂಧಿಯಾ ಅವರು, ರಾಜ್ಯದ ವರ್ಚಸ್ವಿ ಹಾಗೂ ಪ್ರಭಾವಿ ನಾಯಕನೂ ಹೌದು. 2002 ರಲ್ಲಿ ಗುನಾ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದು, ಮೊದಲ ಬಾರಿಗೆ ಕಾಂಗ್ರೆಸ್‌ ಸಂಸದರಾದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೇರಿದರೂ, ಸಿಎಂ ಕಮಲ್‌ನಾಥ್‌ ವಿರುದ್ಧದ ಮುನಿಸು ಮತ್ತು ಸಿಎಂ ಸ್ಥಾನ ಸಿಗಲಿಲ್ಲವೆಂಬ ಸಿಟ್ಟಿನಿಂದ ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿಕೊಂಡರು.

    ಈ ಬಾರಿ ಬಿಜೆಪಿಯ ಗೆಲುವಿನಲ್ಲಿ ಸಿಂಧಿಯಾ ಪ್ರಮುಖ ಪಾತ್ರ ವಹಿಸಿದ್ದಾರೆ. ಗ್ವಾಲಿಯರ್‌-ಚಂಬಲ್‌ ವಲಯದಲ್ಲಿ ಬಿಜೆಪಿ ಅಮೋಘ ಬೆಂಬಲ ಸಿಗುವಂತೆ ಮಾಡಿದ್ದಾರೆ. ಈ ಭಾಗದಲ್ಲಿ 2018 ರಲ್ಲಿ ಬಿಜೆಪಿ 7 ಸ್ಥಾನ ಗೆದ್ದಿತ್ತು. ಈಗ ಆ ಸಂಖ್ಯೆ 18 ಸ್ಥಾನಗಳಿಗೆ ಏರಿದೆ. 2018 ರಲ್ಲಿ ಕಾಂಗ್ರೆಸ್‌ ಗೆಲುವಿನ ಹಿಂದೆಯೂ ಸಿಂಧಿಯಾ ಪ್ರಾಬಲ್ಯವಿರುವ ಪ್ರದೇಶಗಳೇ ಕಾರಣವಾಗಿದ್ದವು. ಆದರೆ ಈ ಬಾರಿ ಈ ಮತಗಳು ಬಿಜೆಪಿಯತ್ತ ಕ್ರೋಢೀಕರಣಗೊಂಡವು. ಬಿಜೆಪಿಯ ಗೆಲುವು ಸಿಂಧಿಯಾರನ್ನು ಮತ್ತಷ್ಟು ಬಲಶಾಲಿಯಾಗಿಸಿದ್ದು, ‘ಮಹಾರಾಜ’ನ ಕಣ್ಣು ಈಗ ಸಿಎಂ ಕುರ್ಚಿಯತ್ತ ನೆಟ್ಟಿದೆ.

    ಆದರೆ ಮಾಜಿ ಕಾಂಗ್ರೆಸ್‌ ನಾಯಕ ಬಿಜೆಪಿ ಸೇರಿ ಕೇವಲ ಮೂರೂವರೆ ವರ್ಷವಷ್ಟೇ ಆಗಿದೆ. ಅವರನ್ನು ಮುಖ್ಯಮಂತ್ರಿ ಮಾಡುವುದರಿಂದ ಪಕ್ಷದ ಹಿರಿಯರ ಅಸಮಾಧಾನಕ್ಕೆ ಕಾರಣವಾಗಬಹುದು. ಇದು ಮುಂಬರುವ ಲೋಕಸಭಾ ಚುನಾವಣಾ ಮೇಲೆ ಪರಿಣಾಮ ಬೀರಬಹುದು. ಇದನ್ನೂ ಓದಿ: ಮಧ್ಯಪ್ರದೇಶದಲ್ಲಿ ಬಿಜೆಪಿ ಗೆಲುವು – ಜೋತಿರಾದಿತ್ಯ ಸಿಂಧಿಯಾ ಬಣಕ್ಕೆ ಖುಷಿ ಕೊಡದ ಫಲಿತಾಂಶ

    ರೇಸ್‌ನಲ್ಲಿ ಕೇಂದ್ರ ಸಚಿವ
    ಕೇಂದ್ರ ಕೃಷಿ ಸಚಿವ ಮತ್ತು ಪಕ್ಷದ ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಮುಖ್ಯಸ್ಥರಾಗಿರುವ ನರೇಂದ್ರ ಸಿಂಗ್ ತೋಮರ್ ಕೂಡ ಸಿಎಂ ಸ್ಥಾನಕ್ಕೆ ಪ್ರಬಲ ಸ್ಪರ್ಧಿಯಾಗಿ ಕಾಣಿಸಿಕೊಂಡಿದ್ದಾರೆ. ಆದರೆ ಕೋಟ್ಯಂತರ ರೂ. ನಗದು ಡೀಲ್‌ ವೀಡಿಯೋ ಮೂಲಕ ಅವರ ಪುತ್ರ ದೇವೇಂದ್ರ ಸಿಂಗ್ ತೋಮರ್ ವಿವಾದಕ್ಕೆ ಸಿಲುಕಿದ್ದಾರೆ. ಇದು ತೋಮರ್‌ ಅವರಿಗೆ ಸಂಕಷ್ಟ ತಂದೊಡ್ಡಿದೆ.

  • ಮಧ್ಯಪ್ರದೇಶದಲ್ಲಿ ಬಿಜೆಪಿ ಗೆಲುವು – ಜೋತಿರಾದಿತ್ಯ ಸಿಂಧಿಯಾ ಬಣಕ್ಕೆ ಖುಷಿ ಕೊಡದ ಫಲಿತಾಂಶ

    ಮಧ್ಯಪ್ರದೇಶದಲ್ಲಿ ಬಿಜೆಪಿ ಗೆಲುವು – ಜೋತಿರಾದಿತ್ಯ ಸಿಂಧಿಯಾ ಬಣಕ್ಕೆ ಖುಷಿ ಕೊಡದ ಫಲಿತಾಂಶ

    ನವದೆಹಲಿ: ಮಧ್ಯಪ್ರದೇಶ (Madhya Pradesh) ವಿಧಾನಸಭೆ ಚುನಾವಣೆಯಲ್ಲಿ (Assembly Election) ಬಿಜೆಪಿ (BJP) ಐತಿಹಾಸಿಕ ಗೆಲುವು ಸಾಧಿಸಿದೆ. ಆಡಳಿತ ವಿರೋಧಿ ಅಲೆಯನ್ನು ಮೀರಿ ಭಾರೀ ಬಹುಮತಗಳಿಸುವ ಮೂಲಕ ಜಯದ ನಗೆ ಬೀರಿದೆ. ಈ ಗೆಲುವು ಬಿಜೆಪಿ ವಲಯದಲ್ಲಿ ರಣೋತ್ಸಾಹ ಮೂಡಿಸಿದ್ದರೂ ಕೇಂದ್ರ ಸಚಿವ ಜೋತಿರಾದಿತ್ಯ ಸಿಂಧಿಯಾ (Jyotiraditya Scindia) ಬಣಕ್ಕೆ ಇದು ಹೆಚ್ಚು ಖುಷಿ ತಂದು ಕೊಟ್ಟಿಲ್ಲ.

    ಮಧ್ಯಪ್ರದೇಶದಲ್ಲಿ ಬಿಜೆಪಿ ಬಹುಮತ ಪಡೆದರೂ ಸಿಂಧಿಯಾ ಪ್ರಭಾವ ಇರುವ ಚಂಬಲ್  ಪ್ರದೇಶದಲ್ಲಿ (Chambal Region) ಬಿಜೆಪಿಗೆ ದೊಡ್ಡ ಲಾಭವಾಗಿಲ್ಲ. ಚಂಬಲ್ ಪ್ರದೇಶದ 34 ಸ್ಥಾನಗಳಲ್ಲಿ ಬಿಜೆಪಿ ಸುಮಾರು 18 ಸ್ಥಾನಗಳನ್ನು ಪಡೆದುಕೊಂಡಿದೆ. ಕಾಂಗ್ರೆಸ್ 16 ಕ್ಷೇತ್ರಗಳನ್ನು ಗೆದ್ದುಕೊಂಡಿದೆ. ಜೋತಿರಾದಿತ್ಯ ಸಿಂಧಿಯಾ ಇಲ್ಲಿ ಹೆಚ್ಚು ಪ್ರಭಾವ ಬೀರಲು ಸಾಧ್ಯವಾಗಿಲ್ಲ ಎನ್ನುವುದು ಗಮನಾರ್ಹ ಸಂಗತಿಯಾಗಿದೆ. ಇದನ್ನೂ ಓದಿ: ಬಿಜೆಪಿಗೆ ಭರ್ಜರಿ ಜಯ, ಹೂಡಿಕೆದಾರರ ಸಂಪತ್ತು ಒಂದೇ ದಿನ 6 ಲಕ್ಷ ಕೋಟಿ ಹೆಚ್ಚಳ – ದಾಖಲೆ ಬರೆದ ಸೆನ್ಸೆಕ್ಸ್‌

    ಇದಕ್ಕೂ ಮುಖ್ಯವಾಗಿ ಚಂಬಲ್ ಪ್ರದೇಶದಲ್ಲಿ ಸ್ಪರ್ಧಿಸಿದ್ದ ಸಿಂಧಿಯಾ ಬೆಂಬಲಿಗರ ಪೈಕಿ ಅರ್ಧದಷ್ಟು ಜನರು ಸೋತಿದ್ದಾರೆ. ಸಿಂಧಿಯಾ ಬೆಂಬಲಿಗರು ಸುಮಾರು 13 ಸ್ಥಾನಗಳಲ್ಲಿ ಸ್ಪರ್ಧಿಸಿದ್ದರು. ಅದರಲ್ಲಿ 8 ಸಿಂಧಿಯಾ ಬೆಂಬಲಿಗರು ಚುನಾವಣೆಯಲ್ಲಿ ಸೋತು ಸುಣ್ಣವಾಗಿದ್ದಾರೆ. ರಘುರಾಜ್ ಸಿಂಗ್ ಕಂಸಾನಾ, ಕಮಲೇಶ್ ಜಾತವ್, ಇಮಾರ್ತಿ ದೇವಿ, ಮಾಯಾ ಸಿಂಗ್, ಸುರೇಶ್ ಧಕಡ್, ಮಹೇಂದ್ರ ಸಿಸೋಡಿಯಾ, ಜಸ್ಪಾಲ್ ಜಜ್ಜಿ ಮತ್ತು ಹಿರೇಂದ್ರ ಸಿಂಗ್ ಬನಾ ಸೋತು ಮನೆ ಸೇರಿದ್ದಾರೆ. ಇದನ್ನೂ ಓದಿ: ಗೆದ್ದ ಮರುದಿನವೇ ರಸ್ತೆಬದಿಯಲ್ಲಿನ ಮಾಂಸದಂಗಡಿಗಳ ತೆರವಿಗೆ ಬಿಜೆಪಿ ನೂತನ ಶಾಸಕ ಆದೇಶ

    ಸಿಂಧಿಯಾ 2018ರಲ್ಲಿ ಕಾಂಗ್ರೆಸ್‌ನಲ್ಲಿದ್ದಾಗ ಗ್ವಾಲಿಯರ್ ಚಂಬಲ್ ಪ್ರದೇಶದಲ್ಲಿ 26 ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲ್ಲುವಂತೆ ಮಾಡಿದ್ದರು. ಇದೇ ಕಾರಣಕ್ಕೆ ಕಾಂಗ್ರೆಸ್ (Congress) ತೊರೆದಿದ್ದ ಸಿಂಧಿಯಾ ಅವರಿಗೆ ಬಿಜೆಪಿ ಕೇಂದ್ರ ಸಚಿವ ಸ್ಥಾನವನ್ನು ನೀಡಿತ್ತು. ಈ ಬಾರಿಯ ಫಲಿತಾಂಶ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಅವರ ರಾಜಕೀಯ ವಿಶ್ವಾಸಾರ್ಹತೆಯನ್ನು ಪ್ರಶ್ನಿಸುವಂತೆ ಮಾಡಿದೆ. ಸದ್ಯ ಸಿಂಧಿಯಾ ಡಿಸಿಎಂ ಹುದ್ದೆಯ ನಿರೀಕ್ಷೆಯಲ್ಲಿದ್ದು, ಬಿಜೆಪಿ ಹೈಕಮಾಂಡ್ ಏನು ಮಾಡಲಿದೆ ಎಂದು ಕಾದು ನೋಡಬೇಕಿದೆ. ಇದನ್ನೂ ಓದಿ: ವೈಯಕ್ತಿಕ ದುಃಖದ ನಡುವೆಯೂ ಗೆಲುವಿಗೆ ಶ್ರಮಿಸಿದ್ರು- ನಡ್ಡಾ ಕೊಂಡಾಡಿದ ಪ್ರಧಾನಿ

  • 1,200 ಕಾರುಗಳ ಬೆಂಗಾವಲಿನೊಂದಿಗೆ ಸಮಂದರ್ ಪಟೇಲ್ ಕಾಂಗ್ರೆಸ್ ಸೇರ್ಪಡೆ

    1,200 ಕಾರುಗಳ ಬೆಂಗಾವಲಿನೊಂದಿಗೆ ಸಮಂದರ್ ಪಟೇಲ್ ಕಾಂಗ್ರೆಸ್ ಸೇರ್ಪಡೆ

    ಭೋಪಾಲ್: ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ (Jyotiraditya Scindia) ಅವರ ಆಪ್ತರಾಗಿದ್ದ ಸಮಂದರ್ ಪಟೇಲ್ (Samandar Patel) ಅವರು ಬಿಜೆಪಿ (BJP) ತೊರೆದು ಮತ್ತೆ ಕಾಂಗ್ರೆಸ್ (Congress) ಸೇರಿದ್ದಾರೆ. ಮಧ್ಯಪ್ರದೇಶದ (Madhya Pradesh) ಕಾಂಗ್ರೆಸ್ ಮುಖ್ಯಸ್ಥ ಕಮಲ್ ನಾಥ್ (Kamal Nath) ಅವರ ಸಮ್ಮುಖದಲ್ಲಿ ಪಟೇಲ್ ತಮ್ಮ ಭಾರೀ ಬೆಂಬಲಿಗರೊಂದಿಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

    1,200 ಕಾರುಗಳ ಬೆಂಗಾವಲಿನೊಂದಿಗೆ ಸಮಂದರ್ ಪಟೇಲ್ ತಮ್ಮ ಕ್ಷೇತ್ರವಾದ ಜವಾದ್‌ನಿಂದ ಭೋಪಾಲ್‌ಗೆ ತೆರಳಿ ಬಿಜೆಪಿಗೆ ರಾಜೀನಾಮೆ ನೀಡಿದ ಬಳಿಕ ಕಾಂಗ್ರೆಸ್ ಸೇರಿದ್ದಾರೆ. 1,200ಕ್ಕೂ ಹೆಚ್ಚು ಕಾರುಗಳಲ್ಲಿ ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್ ಕಚೇರಿಗೆ ತೆರಳುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದನ್ನೂ ಓದಿ: ಕೆಟಿಎಮ್ 390 ಬೈಕ್‌ನಲ್ಲಿ ರಾಹುಲ್ ಗಾಂಧಿ ಲಡಾಖ್ ಪ್ರವಾಸ – ಪ್ಯಾಂಗಾಂಗ್ ಸರೋವರ ಭೇಟಿ

    ಬಿಜೆಪಿ ಪಕ್ಷ ನನಗೆ ಉಸಿರುಗಟ್ಟಿಸಿದೆ ಎಂದು ಸಮಂದರ್ ಪಟೇಲ್ ಆರೋಪಿಸಿದ್ದಾರೆ. ಕಳೆದ 3 ತಿಂಗಳ ಅವಧಿಯಲ್ಲಿ ಕಾರ್ ರ‍್ಯಾಲಿಗಳ ಮೂಲಕ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದವರಲ್ಲಿ ಸಮಂದರ್ ಪಟೇಲ್ ಮೂರನೆಯವರು ಎಂದು ತಿಳಿದುಬಂದಿದೆ. ನೀಮುಚ್ ಪ್ರದೇಶದಲ್ಲಿ ತಮ್ಮದೇ ಆದ ಹಿಡಿತವನ್ನು ಸಾಧಿಸಿದ್ದ ಸಮಂದರ್ ಕಾಂಗ್ರೆಸ್‌ಗೆ ಸೇರ್ಪಡೆಯಾಗಿರುವುದರಿಂದ ಬಿಜೆಪಿಗೆ ದೊಡ್ಡ ಹಿನ್ನಡೆ ಉಂಟಾಗಿದೆ. ಇದನ್ನೂ ಓದಿ: ದ್ವಾರಕಾ ಎಕ್ಸ್‌ಪ್ರೆಸ್‌ವೇ ಯೋಜನೆಯಲ್ಲಿ ಅಕ್ರಮ ನಡೆದಿಲ್ಲ: ನಿತಿನ್ ಗಡ್ಕರಿ ಸ್ಪಷ್ಟನೆ

    ಇದಕ್ಕೂ ಮೊದಲು ಜೂನ್ 14ರಂದು ಶಿವಪುರಿ ಬಿಜೆಪಿ ನಾಯಕ ಬೈಜನಾಥ್ ಸಿಂಗ್ ಯಾದವ್ ಅವರು ಸಿಂಧಿಯಾ ಅವರೊಂದಿಗಿನ ಸಂಬಂಧವನ್ನು ಕಡಿತಗೊಳಿಸಿದ ಸಂದರ್ಭ 700 ಕಾರ್‌ಗಳ ರ‍್ಯಾಲಿಯನ್ನು ನಡೆಸಿದ್ದರು. ನಂತರ ಜೂನ್ 26ರಂದು ಬಿಜೆಪಿ ಶಿವಪುರಿ ಜಿಲ್ಲಾ ಉಪಾಧ್ಯಕ್ಷ ರಾಕೇಶ್ ಗುಪ್ತಾ ಅವರು ಇದೇ ರೀತಿ ರ‍್ಯಾಲಿ ನಡೆಸಿ ಬಿಜೆಪಿ ತೊರೆದಿದ್ದರು. ಇದನ್ನೂ ಓದಿ: Rajasthan: ವಿದ್ಯಾರ್ಥಿಗಳ ಆತ್ಮಹತ್ಯೆ ತಡೆಯಲು ಸಮಿತಿ ರಚಿಸಿದ ರಾಜಸ್ಥಾನ ಸಿಎಂ

    ಸಖಲೇಚಾ ಅವರ ಪಾಳಯದಿಂದ ನನ್ನ ಬೆಂಬಲಿಗರು ನಿರಂತರವಾಗಿ ಅವಮಾನಕ್ಕೊಳಗಾಗಿದ್ದಾರೆ. ಸಣ್ಣಪುಟ್ಟ ಜಗಳಗಳ ಮೇಲೆ ಅವರ ಮೇಲೆ ಅನೇಕ ಸುಳ್ಳು ಪ್ರಕರಣಗಳನ್ನು ದಾಖಲಿಸಲಾಗಿದೆ. ಇದರಿಂದಾಗಿ ನಾನು ಬಿಜೆಪಿ ತೊರೆಯುವ ನಿರ್ಧಾರ ಮಾಡಿದೆ ಎಂದು ಸಮಂದರ್ ಪಟೇಲ್ ತಿಳಿಸಿದ್ದಾರೆ. ಇದನ್ನೂ ಓದಿ: ಸರ್ಕಾರದ ಎಲ್ಲ ಸಂಸ್ಥೆಗಳಲ್ಲೂ RSS ತನ್ನ ಜನರನ್ನಿರಿಸಿದೆ – ರಾಹುಲ್ ಗಾಂಧಿ ಆರೋಪ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹುಬ್ಬಳ್ಳಿ ವಿಮಾನ ನಿಲ್ದಾಣದ ಟರ್ಮಿನಲ್ ವಿಸ್ತರಣೆಗೆ 273 ಕೋಟಿ ಅನುದಾನ

    ಹುಬ್ಬಳ್ಳಿ ವಿಮಾನ ನಿಲ್ದಾಣದ ಟರ್ಮಿನಲ್ ವಿಸ್ತರಣೆಗೆ 273 ಕೋಟಿ ಅನುದಾನ

    ನವದೆಹಲಿ: ಹುಬ್ಬಳ್ಳಿ ವಿಮಾನ ನಿಲ್ದಾಣದ ಟರ್ಮಿನಲ್ (Hubli Airport Terminal) ವಿಸ್ತರಣೆಗೆ ಕೇಂದ್ರ ಸರ್ಕಾರದಿಂದ 273 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ತಿಳಿಸಿದ್ದಾರೆ.

    ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ಅನುದಾನ ಬಿಡುಗಡೆ ಮಾಡಿದ ಪ್ರಧಾನಿ ನರೇಂದ್ರ ಮೋದಿ (Narendra Modi) ಮತ್ತು ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ (Jyotiraditya Scindia) ಅವರಿಗೆ ಉತ್ತರ ಕರ್ನಾಟಕದ ಜನತೆ ಪರವಾಗಿ ಅಭಿನಂದನೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ಸಮಸ್ಯೆ ಬಗೆಹರಿದರೆ ಮಾತ್ರ ಏಷ್ಯನ್ ಗೇಮ್ಸ್‌ನಲ್ಲಿ ಭಾಗವಹಿಸುತ್ತೇನೆ: ಪಟ್ಟು ಬಿಡದ ಸಾಕ್ಷಿ ಮಲಿಕ್

    ವಿಮಾನ ನಿಲ್ದಾಣದ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು, ಪ್ರಸ್ತಾವನೆಗೆ ಸರ್ಕಾರ ಶೀಘ್ರವಾಗಿ ಸ್ಪಂದಿಸಿದೆ. 273 ಕೋಟಿ ರೂ. ವೆಚ್ಚದಲ್ಲಿ ಟರ್ಮಿನಲ್‌ನ ನೆಲ ಮತ್ತು ಮೊದಲ ಮಹಡಿಯನ್ನು 20,000 ಚದರ ಮೀಟರ್‌ಗೆ ವಿಸ್ತರಣೆ ಮಾಡಲಾಗುವುದು. ಇದರಿಂದ ದಟ್ಟಣೆಯ ಸಮಯದಲ್ಲಿ 1,400 ಜನರು ಏಕಕಾಲದಲ್ಲಿ (ಆಗಮಿಸುವ ಮತ್ತು ನಿರ್ಗಮಿಸುವ) ನಿರ್ವಹಿಸುವ ಸಾಮರ್ಥ್ಯ ಹೊಂದಲಿದೆ. ಇದನ್ನೂ ಓದಿ: 370 ದಿನ, 8640 ಕಿ.ಮೀ – ಕಾಲ್ನಡಿಗೆಯಲ್ಲೇ ಮೆಕ್ಕಾ ತಲುಪಿದ ಕೇರಳದ ವ್ಯಕ್ತಿ

    ವಿಸ್ತರಣೆ ಕಾಮಗಾರಿ ಜನವರಿಯಲ್ಲಿ ಆರಂಭವಾಗಲಿದ್ದು, ಎರಡು ವರ್ಷಗಳಲ್ಲಿ ಪ್ರಯಾಣಿಕರ ಉಪಯೋಗಕ್ಕೆ ಮುಕ್ತವಾಗಿಸುವ ಗುರಿ ಹೊಂದಿದೆ ಎಂದು ಪ್ರಹ್ಲಾದ್ ಜೋಶಿ ಟ್ವೀಟ್‌ ಮೂಲಕ ಮಾಹಿತಿ ನೀಡಿದ್ದಾರೆ.

  • ಹಾರಾಟ ನಿಲ್ಲಿಸಿದ ಗೋ ಫಸ್ಟ್ – ಕಂಪನಿ ದಿವಾಳಿಯಾಗಿದ್ದು ಯಾಕೆ?

    ಹಾರಾಟ ನಿಲ್ಲಿಸಿದ ಗೋ ಫಸ್ಟ್ – ಕಂಪನಿ ದಿವಾಳಿಯಾಗಿದ್ದು ಯಾಕೆ?

    ಮುಂಬೈ: ತೀವ್ರ ಹಣಕಾಸಿನ ಕೊರತೆಯಿಂದಾಗಿ ಗೋ ಫಸ್ಟ್ ಏರ್‌ಲೈನ್ಸ್‌ (Go First airline) ತನ್ನ ಹಾರಾಟವನ್ನು ನಿಲ್ಲಿಸಿದೆ.

    ಆರ್ಥಿಕ ಸಮಸ್ಯೆಯಿಂದಾಗಿ ಅಮೆರಿಕ ಮೂಲದ ಕಂಪನಿಯಿಂದ ಎಂಜಿನ್‍ಗಳನ್ನು ಪಡೆಯಲು ಸಾಧ್ಯವಾಗದ ಕಾರಣ ಸಂಸ್ಥೆಯ 50% ನಷ್ಟು ವಿಮಾನಗಳನ್ನು ಈಗಾಗಲೇ ಸ್ಥಗಿತಗೊಳಿಸಲಾಗಿತ್ತು. ಇದೀಗ ಸಂಪೂರ್ಣ ವಿಮಾನಗಳ ಹಾರಾಟವನ್ನು ಸ್ಥಗಿತಗೊಳಿಸುವುದಾಗಿ ಸಂಸ್ಥೆ ಘೋಷಿಸಿಕೊಂಡಿದೆ. ಈ ಬಗ್ಗೆ 24 ಗಂಟೆಗಳ ಒಳಗಾಗಿ ಉತ್ತರವನ್ನು ನೀಡುವಂತೆ ವಿಮಾನಯಾನ ನಿಯಂತ್ರಣ ಸಂಸ್ಥೆ (DGCA) ಕೇಳಿದೆ. ವಿಮಾನ ಹಾರಾಟ ಸ್ಥಗಿತಕ್ಕೂ ಮುನ್ನ ನಿಯಂತ್ರಣ ಸಂಸ್ಥೆಗೆ ಮಾಹಿತಿ ನೀಡುವುದು ಕಡ್ಡಾಯವಾಗಿದ್ದು, ಮಾಹಿತಿ ನೀಡದಿದ್ದಲ್ಲಿ ನಿಯಮದ ಉಲ್ಲಂಘನೆಯಾಗಲಿದೆ. ಇದನ್ನೂ ಓದಿ: ಕೇಂದ್ರದ ಮಾಜಿ ನೌಕರನ ಮನೆ ಮೇಲೆ ಸಿಬಿಐ ದಾಳಿ – 20 ಕೋಟಿ ವಶ

    ಪಿ ಅಂಡ್ ಡಬ್ಲ್ಯೂ (Pratt & Whitney) ಇಂಟರ್‌ನ್ಯಾಷನಲ್ ಏರೋ ಇಂಜಿನ್‍ಗಳು ನಿರಂತರವಾಗಿ ಸಮಸ್ಯೆ ನೀಡುತ್ತಿದ್ದವು. ಇದರ ಪರಿಣಾಮವಾಗಿ ಗೋ ಫಸ್ಟ್ 28 ವಿಮಾನಗಳನ್ನು ಸ್ಥಗಿತಗೊಳಿಸಬೇಕಾದ ಅನಿವಾರ್ಯತೆ ಎದುರಾಯಿತು. ವಾಡಿಯಾ ಗ್ರೂಪ್ ಒಡೆತನದ ರಾಷ್ಟ್ರೀಯ ಕಂಪನಿಯು ಕಾನೂನು ನ್ಯಾಯಮಂಡಳಿಯ ಮುಂದೆ ದಿವಾಳಿತನಕ್ಕಾಗಿ ಅರ್ಜಿ ಸಲ್ಲಿಸಿದೆ. ಇದು ದುರದೃಷ್ಟಕರ ನಿರ್ಧಾರ, ಆದರೆ ಕಂಪನಿಯ ಹಿತಾಸಕ್ತಿಗಳನ್ನು ರಕ್ಷಿಸಲು ಇದನ್ನು ಮಾಡಬೇಕಾಗಿದೆ ಎಂದು ಗೋ ಫಸ್ಟ್ ಮುಖ್ಯ ಕಾರ್ಯನಿರ್ವಾಹಕ ಕೌಶಿಕ್ ಖೋನಾ ತಿಳಿಸಿದ್ದಾರೆ.

    ವಿಮಾನಯಾನ ಸಂಸ್ಥೆಯು ಇಂಜಿನ್‍ಗಳ ಪೂರೈಕೆ ಸಮಸ್ಯೆಗಳನ್ನು ಎದುರಿಸುತ್ತಿದೆ. ಅಲ್ಲದೆ ಸರ್ಕಾರವು ಸಂಸ್ಥೆಗೆ ಸಾಧ್ಯವಿರುವ ಎಲ್ಲ ರೀತಿಯ ಸಹಾಯ ಮಾಡಲಿದೆ ಎಂದು ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ (Jyotiraditya Scindia) ತಿಳಿಸಿದ್ದಾರೆ.

    ಗೋ ಫಸ್ಟ್ ದಿವಾಳಿಗೇನು ಕಾರಣ?
    ಗೋ ಫಸ್ಟ್ ವಿಮಾನಗಳು ಎಂಜಿನ್ ಸಮಸ್ಯೆ ಎದುರಿಸುತ್ತಿದ್ದವು. ಆದರೆ ಎಂಜಿನ್ ಪೂರೈಕೆ ಒಪ್ಪಂದ ಮಾಡಿಕೊಂಡಿದ್ದ ಪಿ ಅಂಡ್ ಡಬ್ಲ್ಯೂ ಕಂಪನಿ ಎಂಜಿನ್ ಪೂರೈಕೆ ಮಾಡುವಲ್ಲಿ ವಿಫಲವಾಗಿತ್ತು. ಇದರಿಂದ 28 ವಿಮಾನಗಳನ್ನು ಸಂಸ್ಥೆ ನಿಲ್ಲಿಸಿತ್ತು. ಇದು ಸಂಸ್ಥೆಯ ಆರ್ಥಿಕ ನಷ್ಟಕ್ಕೆ ಕಾರಣವಾಗಿತ್ತು.

    17 ವರ್ಷಗಳ ಹಿಂದೆ ಸ್ಥಾಪನೆಗೊಂಡಿದ್ದ ಸಂಸ್ಥೆಯು 9000 ಕೋಟಿ ರೂ. ಸಾಲವನ್ನು ಹೊಂದಿದೆ. ವಿಮಾನಯಾನ ಸಂಸ್ಥೆಯನ್ನು ಉಳಿಸಲು ಹೂಡಿದಾರರು ಕಳೆದ ಮೂರು ವರ್ಷಗಳಲ್ಲಿ 3200 ಕೋಟಿ ರೂ. ಹೂಡಿಕೆ ಮಾಡಿದ್ದರು. ಇದನ್ನೂ ಓದಿ: ಪೊಲೀಸರೆಂದು ಯಾಮಾರಿಸಿ ವಿದೇಶಿ ಪ್ರಜೆಯ ಹಣ ದೋಚಿದ ದುಷ್ಕರ್ಮಿಗಳು

  • ಸೌಹಾರ್ದ ಕ್ರಿಕೆಟ್ ಆಡಲು ಹೋಗಿ ಎಡವಟ್ಟು ಮಾಡಿಕೊಂಡ ಬಿಜೆಪಿ ಕೇಂದ್ರ ಸಚಿವ

    ಸೌಹಾರ್ದ ಕ್ರಿಕೆಟ್ ಆಡಲು ಹೋಗಿ ಎಡವಟ್ಟು ಮಾಡಿಕೊಂಡ ಬಿಜೆಪಿ ಕೇಂದ್ರ ಸಚಿವ

    ಭೋಪಾಲ್: ಮಧ್ಯಪ್ರದೇಶದಲ್ಲಿ (Madhya Pradesh) ಹೊಸದಾಗಿ ನಿರ್ಮಿಸಲಾದ ಕ್ರಿಕೆಟ್ ಕ್ರೀಡಾಂಗಣದಲ್ಲಿ (Cricket Stadium) ನಡೆದ ಸೌಹಾರ್ದ ಕ್ರಿಕೆಟ್ ವೇಳೆ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ (Jyotiraditya Scindia) ಅವರು ಹೊಡೆದ ಬಾಲ್ ತಮ್ಮದೇ ಪಕ್ಷದ ಕಾರ್ಯಕರ್ತನ ತಲೆಗೆ ಬಿದ್ದು, ತೀವ್ರ ರಕ್ತಸ್ರಾವವಾದ ಘಟನೆ ನಡೆಸಿದೆ.

    ಬ್ಯಾಟಿಂಗ್ ಮಾಡುವಾಗ ಸಚಿವರು ಹೊಡೆದ ಬಾಲ್ ಅನ್ನು ಕಾರ್ಯಕರ್ತ (BJP Worker) ವಿಕಾಸ್ ಮಿಶ್ರಾ ಕ್ಯಾಚ್ ಹಿಡಿಯಲು ಪ್ರಯತ್ನಿಸಿದರು. ಈ ವೇಳೆ ಕೈತಪ್ಪಿದ ಚೆಂಡು ಕಾರ್ಯಕರ್ತನ ಹಣೆಗೆ ಬಿದ್ದು ಪೆಟ್ಟಾಯಿತು. ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಅವರನ್ನ ತಕ್ಷಣವೇ ಆಸ್ಪತ್ರೆಗೆ (Hospital) ಕರೆದೊಯ್ಯಲಾಯಿತು. ವೈದ್ಯರು ಹಣೆಗೆ ಹೊಲಿಗೆ ಹಾಕಿದ ನಂತರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಇದನ್ನೂ ಓದಿ: ‘ಹೋಗತ್ಲಾಗ’ ಎಂದ ಪ್ರೇಮಲೋಕದ ದೊರೆ ಹಂಸಲೇಖ

    ಮಧ್ಯಪ್ರದೇಶದ (Madhya Pradesh) ಇಟೌರಾದಲ್ಲಿ ಹೊಸದಾಗಿ ನಿರ್ಮಿಸಲಾದ ಕ್ರೀಡಾಂಗಣದಲ್ಲಿ, ಸೌಹಾರ್ದ ಕ್ರಿಕೆಟ್ ಆಡುವ ವೇಳೆ ಈ ಘಟನೆ ನಡೆದಿದೆ ಎಂದು ಸ್ಥಳೀಯ ಬಿಜೆಪಿ ಕಾರ್ಯಾಧ್ಯಕ್ಷ ಧೀರಜ್ ದ್ವಿವೇದಿ ತಿಳಿಸಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನದಲ್ಲಿ ರಾತ್ರೋ ರಾತ್ರಿ ಪೆಟ್ರೋಲ್, ಡೀಸೆಲ್ ಬೆಲೆ ಭಾರೀ ಏರಿಕೆ!

    ವಿಕಾಸ್ ಗಾಯಗೊಂಡ ತಕ್ಷಣ ಆಟ ನಿಲ್ಲಿಸಿ ಅವರನ್ನ ಸಂಜಯ್ ಗಾಂಧಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸಾಗಿಸಲಾಯಿತು. ಇಂದು ಮಾಜಿ ಸಚಿವ ರಾಜೇಂದ್ರ ಶುಕ್ಲಾ ಮತ್ತು ರೇವಾ ಸಂಸದ ಜನಾರ್ದನ್ ಮಿಶ್ರಾ ಅವರೊಂದಿಗೆ ಜ್ಯೋತಿರಾದಿತ್ಯ ಸಿಂಧಿಯಾ ಅವರನ್ನ ಆಸ್ಪತ್ರೆಗೆ ಭೇಟಿ ಆರೋಗ್ಯ ವಿಚಾರಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ವಿಮಾನದೊಳಗೆ ಸಿಗರೇಟ್ ಸೇದುತ್ತಾ ಪೋಸ್ ಕೊಟ್ಟ ವ್ಯಕ್ತಿ – ಸಿಂಧಿಯಾಗೆ ಬೆಂಡೆತ್ತಿದ ನೆಟ್ಟಿಗರು!

    ವಿಮಾನದೊಳಗೆ ಸಿಗರೇಟ್ ಸೇದುತ್ತಾ ಪೋಸ್ ಕೊಟ್ಟ ವ್ಯಕ್ತಿ – ಸಿಂಧಿಯಾಗೆ ಬೆಂಡೆತ್ತಿದ ನೆಟ್ಟಿಗರು!

    ನವದೆಹಲಿ: ಸ್ಪೈಸ್‍ಜೆಟ್ ವಿಮಾನದೊಳಗೆ ವ್ಯಕ್ತಿಯೋರ್ವ ಸಿಗರೇಟ್ ಸೇದಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಇದೀಗ ಆತನ ವಿರುದ್ಧ ಪೊಲೀಸರಿಗೆ ಪ್ರಕರಣ ದಾಖಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

    ಇನ್‍ಸ್ಟಾಗ್ರಾಮ್‍ನಲ್ಲಿ 6.30 ಲಕ್ಷಕ್ಕೂ ಹೆಚ್ಚು ಫಾಲೋವರ್ಸ್‍ಗಳನ್ನು ಹೊಂದಿರುವ ಗುಗಾರ್ಂವ್ ನಿವಾಸಿ ಬಾಬಿ ಕಟಾರಿಯಾ ವಿಮಾನದ ಸೀಟಿನ ಮೇಲೆ ಶೂನಲ್ಲಿಯೇ ಮಲಗಿಕೊಂಡು ಆರಾಮದಾಯಕವಾಗಿ, ಲೈಟರ್‌ನಲ್ಲಿ ಸಿಗರೇಟ್ ಅನ್ನು ಹೊತ್ತಿಸಿಕೊಂಡು, ನಿಟ್ಟುಸಿರು ಬಿಡುತ್ತಾ ಸಿಗರೇಟ್ ಸೇದುತ್ತಿರುವುದನ್ನು ವೀಡಿಯೋದಲ್ಲಿ ಕಾಣಬಹುದಾಗಿದೆ. ಇದನ್ನೂ ಓದಿ: ಭೇಟಿಗೆಂದು ಕಬ್ಬನ್ ಪಾರ್ಕ್‍ಗೆ ಕರೆಸಿ ಸಂಬಂಧಿ ಯುವತಿ ಮೇಲೆ ಅತ್ಯಾಚಾರ!

    ಈ ವೀಡಿಯೋವನ್ನು ಜನರು ಟ್ವಿಟ್ಟರ್‍ನಲ್ಲಿ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಟ್ಯಾಗ್ ಮಾಡಿ ಟೀಕೆ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಜ್ಯೋತಿರಾದಿತ್ಯ ಸಿಂಧಿಯಾ ಅವರು ಪ್ರತಿಕ್ರಿಯೆ ಸಹ ನೀಡಿದ್ದು, ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಮೂಲಗಳ ಪ್ರಕಾರ ಈ ವೀಡಿಯೋ 2022 ಜನವರಿ 23ರದ್ದಾಗಿದೆ. ವಿಮಾನದೊಳಗೆ ಸಿಗರೇಟ್ ಸೇದುಕೊಂಡಿದ್ದ ವ್ಯಕ್ತಿಯ ಹೆಸರು ಬಲ್ವಿಂದರ್ ಕಟಾರಿಯಾ ಅಲಿಯಾಸ್ ಬಾಬಿ ಕಟಾರಿಯಾ. ಗುರುವಾರದಿಂದ ಈ ವೀಡಿಯೋ ಸೊಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. 2022ರ ಜನವರಿ 23 ರಂದು, ಬಲ್ವಿಂದರ್ ಕಟಾರಿಯಾ ಅವರು ಸ್ಪೈಸ್ ಜೆಟ್ ವಿಮಾನದಲ್ಲಿ ದುಬೈನಿಂದ ದೆಹಲಿಗೆ ಪ್ರಯಾಣಿಸಿದ್ದ ವೇಳೆ ಈ ವಿಡಿಯೋ ಮಾಡಲಾಗಿದೆ ಎಂದು ಟ್ವೀಟ್ ಮಾಡುವ ಮೂಲಕ ತಿಳಿಸಿದ್ದಾರೆ.

    ಇದೀಗ ವ್ಯಕ್ತಿ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದ್ದು, ಈ ಪ್ರಕರಣ ಕುರಿತಂತೆ ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದಿದ್ದಾರೆ. ಇದನ್ನೂ ಓದಿ: ಬಡವರಿಗೆ ತೆರಿಗೆ ಹೊರೆ; ಶ್ರೀಮಂತರಿಗೆ ಮಾತ್ರ ವಿನಾಯಿತಿ – ಕೇಂದ್ರದ ವಿರುದ್ಧ ಕೇಜ್ರಿವಾಲ್‌ ಕಿಡಿ

    Live Tv
    [brid partner=56869869 player=32851 video=960834 autoplay=true]