Tag: k c venugopal

  • ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ಗರಂ!

    ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ಗರಂ!

    – ಕಾಂಗ್ರೆಸ್ ಹೈಕಮಾಂಡ್‍ಗೆ ದೂರು ನೀಡಲು ದೆಹಲಿಗೆ ತೆರಳಿದ ಸಿಎಂ
    – ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ ವೇಣುಗೋಪಾಲ್ ವಿರುದ್ಧ ಸಿಎಂ ಕಿಡಿ

    ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಾಂಗ್ರೆಸ್ ಹೈಕಮಾಂಡ್‍ಗೆ ದೂರು ನೀಡಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ದೆಹಲಿಗೆ ತೆರಳಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

    ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಹಾಗೂ ಸಿಎಂ ಕುಮಾರಸ್ವಾಮಿ ಒಂದೇ ವಿಮಾನದಲ್ಲಿ ಇಂದು ದೆಹಲಿಗೆ ತೆರಳಿದ್ದಾರೆ. ಈ ಮೂಲಕ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಜೊತೆಗೆ ರಾಜ್ಯ ಕಾಂಗ್ರೆಸ್ ನಾಯಕರ ಕಿತ್ತಾಟದ ಕುರಿತು ಚರ್ಚೆ ಮಾಡಿ, ಸಿದ್ದರಾಮಯ್ಯ ವಿರುದ್ಧ ದೂರು ನೀಡಲು ಸಿಎಂ ನಿರ್ಧರಿಸಿದ್ದಾರಂತೆ. ಇದನ್ನೂ ಓದಿ: ಖಾತೆ ಹಂಚಿಕೆ ಸಭೆಯಲ್ಲಿ ಸಿದ್ದರಾಮಯ್ಯ, ಪರಮೇಶ್ವರ್ ಕಿತ್ತಾಟ!

    ಸಿಎಂ ಆರೋಪಗಳೇನು?:
    ಸಿದ್ದರಾಮಯ್ಯ ಮುಂದೊಂದು ಆಟ ಆಡುತ್ತಾರೆ, ಹಿಂದೊಂದು ಆಟವಾಡುತ್ತಾರೆ. ಸಚಿವ ಸ್ಥಾನ ಹಾಗೂ ಪ್ರಮುಖ ಖಾತೆಗಳಿಗಾಗಿ ಕೇಳುವಂತೆ ಬೆಂಬಲಿಗರನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದಾರೆ. ಬಂಡಾಯ ಏಳುತ್ತಿರುವ ಶಾಸಕನ ಬೆಂಬಲಕ್ಕೆ ನಿಂತು ಕುಮ್ಮಕ್ಕು ನೀಡುತ್ತಿದ್ದಾರೆ. ಇದರಿಂದಾಗಿ ರಾಜ್ಯ ರಾಜಕೀಯ ನಿಯಂತ್ರಣಕ್ಕೆ ಬರುತ್ತಿಲ್ಲ. ಸಿದ್ದರಾಮಯ್ಯ ಅವರು ತಮ್ಮ ಬೆಂಬಲಿಗರಿಗೆ ಉನ್ನತ ಸ್ಥಾನ ಹಾಗೂ ಖಾತೆ ಕೊಡಿಸಲು ಪ್ಲಾನ್ ಮಾಡಿದ್ದಾರೆ. ಇದನ್ನು ಓದಿ: ಫೈನಲ್ ಆಯ್ತು ಖಾತೆ ಹಂಚಿಕೆ – ಕೊನೆಗೂ ಗೆದ್ದ ಸಿದ್ದರಾಮಯ್ಯ: ಯಾರಿಗೆ ಯಾವ ಖಾತೆ?

    ಕಾಂಗ್ರೆಸ್ ನಾಯಕರ ಜಗಳದ ಹಿಂದೆ ಯಾರು ಇದ್ದಾರೆ ಎನ್ನುವ ಮಾಹಿತಿ ರಾಹುಲ್ ಗಾಂಧಿ ಅವರಿಗೆ ಗೊತ್ತಾಗಲೇಬೇಕು. ರಾಜ್ಯದಲ್ಲಿ ಸಿದ್ದರಾಮಯ್ಯ ಅವರ ಆಟದ ಬಗ್ಗೆ ಹೈಕಮಾಂಡ್‍ಗೆ ತಿಳಿಯಬೇಕು ಎನ್ನುವ ಉದ್ದೇಶದಿಂದ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ ಎಂದು ಪಕ್ಷದ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

    ಮಾಜಿ ಸಿಎಂ ಬೆಂಬಲಕ್ಕೆ ನಿಂತ ಕೆ.ಸಿ.ವೇಣುಗೋಪಾಲ್ ಅವರು ಎಲ್ಲವನ್ನೂ ಸಿದ್ದರಾಮಯ್ಯ ಸರಿ ಮಾಡುತ್ತಾರೆ. ಬಂಡಾಯವನ್ನು ಹತ್ತಿಕ್ಕುತ್ತಾರೆ ಎಂದು ಹೇಳಿದ್ದರಂತೆ. ಇದರಿಂದಾಗಿ ವೇಣುಗೋಪಾಲ್ ವಿರುದ್ಧವೂ ಕುಮಾರಸ್ವಾಮಿ ಫುಲ್ ಗರಂ ಆಗಿದ್ದು, ಅವರ ಜೊತೆಗೆ ಪ್ರಯಾಣ ಬೆಳೆಸಿ ರಾಜ್ಯ ಕಾಂಗ್ರೆಸ್ ನಾಯಕರ ಡಬಲ್ ಗೇಮ್ ಕುರಿತು ಹೈಕಮಾಂಡ್ ಮಾಹಿತಿ ನೀಡಲಿದ್ದಾರೆ ಎನ್ನಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಖಾತೆ ಹಂಚಿಕೆ ಸಭೆಯಲ್ಲಿ ಸಿದ್ದರಾಮಯ್ಯ, ಪರಮೇಶ್ವರ್ ಕಿತ್ತಾಟ!

    ಖಾತೆ ಹಂಚಿಕೆ ಸಭೆಯಲ್ಲಿ ಸಿದ್ದರಾಮಯ್ಯ, ಪರಮೇಶ್ವರ್ ಕಿತ್ತಾಟ!

    – ಎರಡು ಖಾತೆಗೆ ಪರಂಮೇಶ್ವರ್ ಪಟ್ಟು
    – ಒಂದು ಖಾತೆ ಬಿಟ್ಟುಕೊಂಡಿ ಎಂದ ಮಾಜಿ ಸಿಎಂ

    ಬೆಂಗಳೂರು: ಖಾತೆ ಹಂಚಿಕೆ ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ನಡುವೆ ಮಾತಿ ಚಕಮಕಿ ನಡೆದಿದ್ದು, ಏರು ಧ್ವನಿಯಲ್ಲಿಯಲ್ಲಿ ಕಿತ್ತಾಡಿಕೊಂಡಿದ್ದಾರೆ.

    ನಗರದ ಖಾಸಗಿ ಹೋಟೆಲ್‍ನಲ್ಲಿ ಖಾತೆ ಹಂಚಿಕೆ ವಿಚಾರವಾಗಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ನೇತೃತ್ವದಲ್ಲಿ ಇಂದು ಸಭೆ ನಡೆಸಲಾಗಿತ್ತು. ಈ ವೇಳೆ ಏರು ಧ್ವನಿಯಲ್ಲಿ ಪರಸ್ಪರ ಉಭಯ ನಾಯಕರು ಮಾತನಾಡಿದರು. ಇದರಿಂದಾಗಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಶಾಕ್‍ಗೆ ಒಳಗಾದರು ಎನ್ನುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ಇದನ್ನು ಓದಿ: ಫೈನಲ್ ಆಯ್ತು ಖಾತೆ ಹಂಚಿಕೆ – ಕೊನೆಗೂ ಗೆದ್ದ ಸಿದ್ದರಾಮಯ್ಯ: ಯಾರಿಗೆ ಯಾವ ಖಾತೆ?

    ಸಭೆಯಲ್ಲಿ ಏನಾಯ್ತು?
    ಬೆಂಗಳೂರು ಅಭಿವೃದ್ಧಿ ಖಾತೆ ಅಥವಾ ಗೃಹ ಖಾತೆ ಎರಡರಲ್ಲಿ ಒಂದನ್ನು ಬಿಟ್ಟು ಕೊಡುವಂತೆ ಮಾಜಿ ಸಿಎಂ ಸಿದ್ದರಾಮಯ್ಯ, ಜಿ. ಪರಮೇಶ್ವರ್ ಅವರಿಗೆ ತಿಳಿಸಿದರು. ಇದಕ್ಕೆ ಖಾರವಾಗಿ ಪ್ರತಿಕ್ರಿಯೆ ನೀಡಿದ ಉಪಮುಖ್ಯಮಂತ್ರಿ, ನೀವು ಹೇಳಿದ್ದೆಲ್ಲಾ ಕೇಳೋಕೆ ಆಗಲ್ಲ. ಎರಡೂ ಖಾತೆ ನನಗೆ ಅಂತ ಮೊದಲೇ ಮಾತುಕತೆಯಾಗಿದೆ. ಹೀಗಾಗಿ ನಾನೇ ಎರಡು ಖಾತೆಯ ಜವಾಬ್ದಾರಿ ಹೊತ್ತುಕೊಳ್ಳುತ್ತೇನೆ ಎಂದರು.

    ಪರಮೇಶ್ವರ್ ಉತ್ತರದಿಂದ ಗರಂ ಆದ ಸಿದ್ದರಾಮಯ್ಯ, ನೀವು ಡಿಸಿಎಂ ರೀ. ಪಕ್ಷದ ಹಿತ ಹಾಗೂ ಸರ್ಕಾರದ ಹಿತ ಎರಡು ಮುಖ್ಯ. ನಿಮಗೆ ಅಷ್ಟು ಅರ್ಥ ಆಗಲ್ವೇನ್ರಿ ಎಂದು ಏರು ಧ್ವನಿಯಲ್ಲಿಯೇ ಹೇಳಿದರು. ಪರಮೇಶ್ವರ್ ಪ್ರತಿಕ್ರಿಯೆ ನೀಡಿ, ರೀ ಸ್ವಾಮಿ 8 ವರ್ಷ ಪಕ್ಷದ ಅಧ್ಯಕ್ಷನಾಗಿದ್ದವನು ನಾನು. ಪಕ್ಷದ ಹಿತ ಕಾಯೋದು ಹೇಗೆ ಅಂತ ನನಗೆ ಗೊತ್ತು ಎಂದು ತಿರುಗೇಟು ನೀಡಿದರು.

    ಸಿದ್ದರಾಮಯ್ಯ ಹಾಗೂ ಪರಮೇಶ್ವರ್ ಜಗಳ ನೋಡಿ ಗಾಬರಿಯಾದ ವೇಣುಗೋಪಾಲ್ ಹಾಗೂ ದಿನೇಶ್ ಗುಂಡೂರಾವ್ ಮಧ್ಯ ಪ್ರವೇಶಿಸಿ ಸಮಾಧಾನ ಮಾಡಿದರು. ಈ ಸಮಸ್ಯೆಯನ್ನು ಹೈಕಮಾಂಡ್ ಗಮನಕ್ಕೆ ತರುತ್ತೇನೆ ಅವರೇ ತೀರ್ಮಾನ ಮಾಡಲಿ ಎಂದು ಹೇಳಿ ವೇಣುಗೋಪಾಲ್ ಅವರು ಸಭೆಯಿಂದ ಹೊರ ನಡೆದರು.

    ಸಭೆಯ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ವೇಣುಗೋಪಾಲ್, ನಾಯಕರು ಯಾವುದೇ ರೀತಿಯ ಜಗಳ ಮಾಡಿಕೊಂಡಿಲ್ಲ ಎಂದ ಅವರು, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಜೊತೆಗೆ ಹೈಕಮಾಂಡ್ ಮಾತುಕತೆ ನಡೆಸಲಿದೆ ಎಂದು ಮಾಹಿತಿ ನೀಡಿದರು.

    ಪರಮೇಶ್ವರ್ ಬಳಿ ಎರಡು ಖಾತೆ ಇರಬೇಕೋ? ಬೇಡವೋ ಎಂದು ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ. ಒಂದು ವೇಳೆ ಒಂದು ಖಾತೆಯನ್ನು ಬಿಟ್ಟುಕೊಡಬೇಕು ಎನ್ನುವ ಆದೇಶ ಬಂದರೆ ಒಂದು ಖಾತೆಯನ್ನು ಅವರು ಬಿಟ್ಟುಕೊಡುವ ಪರಿಸ್ಥಿತಿ ಎದುರಾಗಲಿದೆ. ರಾಜ್ಯದಲ್ಲಿ 8 ವರ್ಷಗಳ ಕಾಲ ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸಿದ ಪರಮೇಶ್ವರ್ ಅವರ ಕೈಯನ್ನು ಹೈಕಮಾಂಡ್ ಹಿಡಿಯುತಾ? ಅಥವಾ ಸಿದ್ದರಾಮಯ್ಯ ಅವರ ಪಟ್ಟು ಗೆಲ್ಲುತ್ತಾ ಎನ್ನುವುದು ಈಗ ಸದ್ಯದ ಕುತೂಹಲ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮಾಜಿ ಸಚಿವ ಅಂಬರೀಶ್‍ಗೆ ಕೆ.ಸಿ ವೇಣುಗೋಪಾಲ್ ಖಡಕ್ ಸೂಚನೆ!

    ಮಾಜಿ ಸಚಿವ ಅಂಬರೀಶ್‍ಗೆ ಕೆ.ಸಿ ವೇಣುಗೋಪಾಲ್ ಖಡಕ್ ಸೂಚನೆ!

    ಬೆಂಗಳೂರು: ಮಾಜಿ ಸಚಿವ ಅಂಬರೀಶ್ ಅವರ ವರ್ತನೆಗೆ ಬ್ರೇಕ್ ಹಾಕಲು ಕಾಂಗ್ರೆಸ್ ಹೈಕಮಾಂಡ್ ಮುಂದಾಗಿದೆ ಎಂಬುದಾಗಿ ಪಕ್ಷದ ಮೂಲಗಳಿಂದ ತಿಳಿದುಬಂದಿದೆ.

    ರಾಜ್ಯ ಕಾಂಗ್ರೆಸ್ ನಾಯಕರಿಗೆ ಮಾತಿಗೂ ಸಿಗದೆ, ತಮ್ಮ ಅಭಿಪ್ರಾಯವನ್ನು ತಿಳಿಸದೆ ಸತಾಯಿಸುತ್ತಿರುವ ಅಂಬರೀಶ್ ವರ್ತನೆಯಿಂದ ಬೇಸತ್ತ ಕೆಪಿಸಿಸಿ ನಾಯಕರು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಅವರ ಮೊರೆ ಹೋಗಿದ್ದಾರೆ. ಈ ಹಿನ್ನೆಲೆಯಲ್ಲಿ ಅಂಬರೀಶ್ ಅವರನ್ನ ಸಂಪರ್ಕ ಮಾಡಿದ ಕೆ.ಸಿ.ವೇಣುಗೋಪಾಲ್ ಭಾನುವಾರ ಸಂಜೆ ಒಳಗೆ ತಮ್ಮ ನಿರ್ಧಾರ ತಿಳಿಸುವಂತೆ ಖಡಕ್ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಕಾಂಗ್ರೆಸ್ ಗೆ ಕಗ್ಗಂಟಾದ ಅಂಬರೀಶ್ ಮೌನ- `ಕೈ’ ಬಿಡ್ತಾರಾ ಮಂಡ್ಯದ ಗಂಡು!

    ಮಂಡ್ಯದಿಂದ ಸ್ಪರ್ಧೆ ಮಾಡುವುದಾದರೆ ಪಕ್ಷ ನಿಮಗೆ ಟಿಕೆಟ್ ನೀಡಲಿದೆ. ತಮಗೆ ಇಷ್ಟ ಇಲ್ಲದಿದ್ದರೆ ಬೇರೆ ಅಭ್ಯರ್ಥಿ ಆಯ್ಕೆಯನ್ನು ಪಕ್ಷ ಮಾಡಲಿದೆ. ಏಪ್ರಿಲ್ 9 ರಂದು ರಾಜ್ಯ ಕಾಂಗ್ರೆಸ್ ಚುನಾವಣಾ ಸಮಿತಿಯ ಕೊನೆಯ ಸಭೆ ನಡೆಯಲಿದೆ. ಅಷ್ಟರೊಳಗೆ ನಿಮ್ಮ ನಿರ್ಧಾರ ನಮಗೆ ತಿಳಿಸಿ. ನಿಮ್ಮ ಬದಲಿಗೆ ನೀವು ಸೂಚಿಸುವ ನಿಮ್ಮ ಆಪ್ತರಿಗೆ ಟಿಕೆಟ್ ನೀಡಲು ಸಾಧ್ಯವಿಲ್ಲ. ನಿಮ್ಮನ್ನು ಬಿಟ್ಟು ಬೇರೆ ಯಾರಿಗೆ ಟಿಕೆಟ್ ನೀಡುವುದಾದರು ಜಿಲ್ಲೆಯ ಪಕ್ಷದ ಮುಖಂಡರುಗಳೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಬೇಕಾಗುತ್ತೆ. ಆದ್ದರಿಂದ ತಮ್ಮ ಅಭಿಪ್ರಾಯವನ್ನ ನೇರವಾಗಿ ನನ್ನ ಬಳಿಯೆ ಹಂಚಿಕೊಳ್ಳಿ ಅಂತ ವೇಣುಗೋಪಾಲ್ ತಿಳಿಸಿದ್ದಾರೆಂದು ಹೇಳಲಾಗಿದೆ.

    ಭಾನುವಾರ ಬೆಂಗಳೂರಿನಲ್ಲಿ ರಾಹುಲ್ ಗಾಂಧಿ ಅವರ ಬೃಹತ್ ಸಮಾವೇಶವಿದೆ. ಎರಡು ದಿನಗಳ ಕಾಲ ನಾನು ಬೆಂಗಳೂರಿನಲ್ಲಿ ಇರುತ್ತೇನೆ. ತಮ್ಮದು ಏನೇ ಅಭಿಪ್ರಾಯ ಇದ್ದರೂ, ಬಂದು ನನ್ನೊಂದಿಗೆ ಚರ್ಚಿಸಿ, ತೀರ್ಮಾನ ತಿಳಿಸಬೇಕು ಎಂದು ಖಡಕ್ ಸೂಚನೆ ನೀಡಿದ್ದು, ಇನ್ನೊಂದೆಡೆ ಕೆಪಿಸಿಸಿ ಅಧ್ಯಕ್ಷರಿಗೂ ಮಂಡ್ಯ ಜಿಲ್ಲಾ ನಾಯಕರ ಅಭಿಪ್ರಾಯ ಸಂಗ್ರಹಿಸಿ ವರದಿ ಸಿದ್ಧಪಡಿಸುವಂತೆ ಸೂಚಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.