Tag: K Chandrasekhar Rao

  • BJP ನೀತಿಗಳಿಂದ ಭಾರತದಲ್ಲೂ ತಾಲಿಬಾನ್‌ನಂಥ ಭಯಾನಕ ಪರಿಸ್ಥಿತಿ ಎದುರಾಗುತ್ತೆ: KCR

    BJP ನೀತಿಗಳಿಂದ ಭಾರತದಲ್ಲೂ ತಾಲಿಬಾನ್‌ನಂಥ ಭಯಾನಕ ಪರಿಸ್ಥಿತಿ ಎದುರಾಗುತ್ತೆ: KCR

    ಹೈದರಾಬಾದ್: ಬಿಜೆಪಿ ಸರ್ಕಾರ (BJP Government) ಧಾರ್ಮಿಕ ಮತ್ತು ಜಾತಿ ಮತಾಂಧತೆ ಉತ್ತೇಜಿಸಿದರೆ, ಸಮುದಾಯಗಳನ್ನ ಒಡೆಯುವ ಕೆಲಸ ಮಾಡಿದ್ರೆ ಮುಂದೆ ಭಾರತದಲ್ಲೂ ತಾಲಿಬಾನ್ (Taliban) ನಂತಹ ಭಯಾನಕ ಪರಿಸ್ಥಿತಿ ಸೃಷ್ಟಿಯಾಗುತ್ತದೆ ಎಂದು ತೆಲಂಗಾಣ ಸಿಎಂ ಕೆ. ಚಂದ್ರಶೇಖರ ರಾವ್ (K Chandrasekhar Rao) ಎಚ್ಚರಿಕೆ ನೀಡಿದ್ದಾರೆ.

    ನೂತನ ಜಿಲ್ಲಾಧಿಕಾರಿ ಕಚೇರಿ ಉದ್ಘಾಟನಾ ಕಾರ್ಯಕ್ರಮದ ವೇಳೆ ಮಾತನಾಡಿರುವ ಅವರು, ಬಿಜೆಪಿ (BJP) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ದ್ವೇಷದಿಂದ ದೇಶದ ಜೀವನಾಡಿಯೇ ಸುಟ್ಟು ಭಸ್ಮವಾಗುವ ಸಂದರ್ಭ ಎದುರಾಗಲಿದೆ. ಆದ್ದರಿಂದ ವಿಶೇಷವಾಗಿ ಯುವಕರು ಜಾಗೃತರಾಗಬೇಕು ಎಂದು ಕರೆ ನೀಡಿದ್ದಾರೆ. ಇದನ್ನೂ ಓದಿ: ಶನಿವಾರ ಮುಳಬಾಗಿಲು ಶಾಸಕ ಎಚ್.ನಾಗೇಶ್ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆ

    2014 ರಲ್ಲಿ ರಾಜ್ಯ ರಚನೆಯ ಸಮಯದಲ್ಲಿ ತೆಲಂಗಾಣದ ರಾಜ್ಯ ಆಂತರಿಕ ಉತ್ಪನ್ನವು (GSDP) 5 ಲಕ್ಷ ಕೋಟಿ ರೂ. ಇತ್ತು. ಇಂದು 11.5 ಲಕ್ಷ ಕೋಟಿ ರೂ.ಗೆ ಏರಿಕೆಯಾಗಿದೆ. ಆದರೆ ಕೇಂದ್ರ ಸರ್ಕಾರವು ತೆಲಂಗಾಣ ರಾಜ್ಯಕ್ಕೆ ಸರಿಸಮನಾಗಿ ಕಾರ್ಯ ನಿರ್ವಹಿಸದೇ ಇರೋದ್ರಿಂದ ರಾಜ್ಯದ ಜಿಎಸ್‌ಡಿಪಿ ಇಳಿಮುಖವಾಗಿದೆ. ಕೇಂದ್ರದ ಈ ಅಸಮರ್ಥ ನೀತಿಗಳಿಂದಾಗಿ ತೆಲಂಗಾಣ ರಾಜ್ಯವೊಂದರಲ್ಲೇ 3 ಲಕ್ಷ ಕೋಟಿ ನಷ್ಟವಾಗಿದೆ ಎಂದು ಅರ್ಥಶಾಸ್ತ್ರಜ್ಞರು ಅಂಕಿ-ಅಂಶಗಳ ಸಮೇತ ಮಾಹಿತಿ ನೀಡಿದ್ದಾರೆ. ಮಾಹಿತಿ ಪ್ರಕಾರ, ಜಿಎಸ್‌ಡಿಪಿ 14.50 ಲಕ್ಷ ಕೋಟಿ ಇರಬೇಕಿತ್ತು. ಆದರೆ 11.50 ಲಕ್ಷ ಕೋಟಿಗೆ ತಲುಪಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ದೇಶದಲ್ಲಿ ಎಲ್ಲ ನಾಗರಿಕರನ್ನು ಸಮಾನವಾಗಿ ನೋಡಿಕೊಳ್ಳುವ ಪಕ್ಷ ಮತ್ತು ಸರ್ಕಾರ ಯಾವಾಗಲೂ ಉತ್ತಮವಾಗಿರುತ್ತೆ. ಆದರೆ ಕೋಮುದ್ವೇಷ, ಜಾತಿವಾದಿಗಳ ರೀತಿಯಲ್ಲಿ ಜನರ ನಡುವೆ ದ್ವೇಷ ಸೃಷ್ಟಿಸೋದು ದೇಶಕ್ಕೆ ನೋವುಂಟು ಮಾಡುತ್ತದೆ ಎಂದು ಆಕ್ಷೇಪಿಸಿದ್ದಾರೆ. ಇದನ್ನೂ ಓದಿ: ಸಂಕ್ರಾಂತಿಗೂ ಇರಲಿದೆ ಮೈ ಕೊರೆವ ಚಳಿ- ಆರೋಗ್ಯದ ಮುನ್ನೆಚ್ಚರಿಕೆ ನೀಡಿದ ಹವಾಮಾನ ಇಲಾಖೆ!

    ಭಾರತ ದೇಶವೂ ಇಂತಹ ಗೊಂದಲಗಳನ್ನ ಎದುರಿಸಿದರೆ ನಾವು ತಾಲಿಬಾನ್ ನಂತೆಯೇ ಪರಿಸ್ಥಿತಿ ಎದುರಾಗುತ್ತದೆ. ಆಗ ಹೂಡಿಕೆಗಳನ್ನು ನಿರೀಕ್ಷಿಸಲು ಸಾಧ್ಯವಾ? ಉದ್ಯೋಗಳು ಸೃಷ್ಟಿಯಾಗುತ್ತಾ? ಇರುವ ಉದ್ಯಮಗಳು ಉಳಿಯುತ್ತಾ? ಗಲಭೆಗಳು ಉಂಟಾಗಿ, ಲಾಠಿಚಾರ್ಜ್ ಹಾಗೂ ಗುಂಡಿನ ದಾಳಿ ವಾತಾವರಣ ನಿರ್ಮಾಣ ಅದ್ರೆ ಸಮಾಜ ಹೇಗಿರುತ್ತೆ? ಎಂಬುದನ್ನು ಒಮ್ಮೆ ಯೋಚಿಸಿ. ಇಂದು ದೇಶವನ್ನು ತಪ್ಪುದಾರಿಗೆ ಎಳೆಯುವ ಎಲ್ಲ ದುಷ್ಪ್ರಯತ್ನಗಳು ನಡೆಯುತ್ತಿವೆ. ಇದರಿಂದ ಎಚ್ಚರವಾಗಿರಬೇಕು ಎಂದು ಸಲಹೆ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಕೆಸಿಆರ್ ಅಭಿಮಾನಿಯ ಕನಸು ನನಸು – 9 ವರ್ಷದ ಬಳಿಕ ಮಗಳ ನಾಮಕರಣ

    ಕೆಸಿಆರ್ ಅಭಿಮಾನಿಯ ಕನಸು ನನಸು – 9 ವರ್ಷದ ಬಳಿಕ ಮಗಳ ನಾಮಕರಣ

    ಹೈದರಾಬಾದ್: ಹೆಸರೇ ಇಲ್ಲದ ಒಂಬತ್ತು ವರ್ಷದ ತೆಲಂಗಾಣದ (Telangana) ಬಾಲಕಿ ತನ್ನ ಪೋಷಕರೊಂದಿಗೆ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ (Chief Minister K Chandrashekar Rao) ಅವರನ್ನು ಭೇಟಿಯಾಗಿ ಕೊನೆಗೂ ನಾಮಕರಣ ಮಾಡಿಸಿಕೊಂಡಿದ್ದಾಳೆ.

    ಸುರೇಶ್ ( Suresh) ಮತ್ತು ಅನಿತಾ (Anitha) ದಂಪತಿ ಜನಪ್ರಿಯ ನಾಯಕ ಚಂದ್ರಶೇಖರ್ ರಾವ್ ಅವರ ನೇತೃತ್ವದ ತೆಲಂಗಾಣ ರಾಜ್ಯ ಚಳವಳಿಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು. 2013ರಲ್ಲಿ ತಮ್ಮ ಮಗಳು ಜನಿಸಿದಾಗ ಆಕೆಗೆ ಕೆಸಿಆರ್ ಅವರೇ ಹೆಸರಿಡಬೇಕೆಂದು ಬಯಸಿದ್ದರು. ಆದರೆ ಒಂಬತ್ತು ವರ್ಷಗಳ ಕಾಲ ಈ ಆಸೆ ಈಡೇರಲಿಲ್ಲ. ಆದರೆ ಇದೀಗ ಕಾಲಗೂಡಿ ಬಂದಿದ್ದು, ಕೊನೆಗೂ ಬಾಲಕಿಗೆ ಹೆಸರು ಇಡಲಾಗಿದೆ. ಇದನ್ನೂ ಓದಿ: ಹಾಡಹಗಲೇ ವಕೀಲೆ ಮೇಲೆ ದುಷ್ಕರ್ಮಿಯಿಂದ ಕುಡುಗೋಲಿನಲ್ಲಿ ಅಟ್ಯಾಕ್

    ತೆಲಂಗಾಣ ರಾಷ್ಟ್ರ ಸಮಿತಿಯ (Telangana Rashtra Samithi ) ವಿಧಾನಪರಿಷತ್ ಸದಸ್ಯ ಹಾಗೂ ಮಾಜಿ ಅಸೆಂಬ್ಲಿ ಸ್ಪೀಕರ್ ಮಧುಸೂಧನ ಚಾರಿ (Madhusudhana Chary) ಅವರಿಗೆ ಇತ್ತೀಚೆಗೆ ಈ ವಿಚಾರ ತಿಳಿದುಬಂದಿದ್ದು, ನಂತರ ದಂಪತಿ ಮತ್ತು ಅವರ ಪುತ್ರಿಯನ್ನು ತೆಲಂಗಾಣ ಮುಖ್ಯಮಂತ್ರಿಯ ಅಧಿಕೃತ ನಿವಾಸ ಪ್ರಗತಿ ಭವನಕ್ಕೆ(Pragathi Bhavan) ಆಹ್ವಾನಿಸಿದ್ದಾರೆ.

    ವಿಷಯ ತಿಳಿದ ಮುಖ್ಯಮಂತ್ರಿ ಕೆಸಿಆರ್ ದಂಪತಿ, ಸುರೇಶ್ ಮತ್ತು ಅನಿತಾ ಅವರನ್ನು ಅಭಿನಂದಿಸಿ, ಅವರ ಪುತ್ರಿಗೆ ಮಹತಿ (Mahati) ಎಂದು ನಾಮಕರಣ ಮಾಡಿದರು. ದಂಪತಿ ಮತ್ತು ಅವರ ಮಗಳಿಗೆ ಉಡುಗೊರೆ ನೀಡಿದರು. ಅಲ್ಲದೇ ಮಹತಿಯ ಶಿಕ್ಷಣಕ್ಕೆ ಆರ್ಥಿಕ ಸಹಾಯ ಮಾಡುವುದಾಗಿ ತಿಳಿಸಿದರು.  ಇದನ್ನೂ ಓದಿ: ಸುಮಲತಾ ಹೇಳಿದ ದಿನ ಆಣೆ ಮಾಡಲು ರೆಡಿ- ಮೇಲುಕೋಟೆ ಸನ್ನಿಧಿಯಲ್ಲಿ ಪುಟ್ಟರಾಜು ಸವಾಲು ಸ್ವೀಕಾರ

    Live Tv
    [brid partner=56869869 player=32851 video=960834 autoplay=true]

  • ಮೋದಿ ಆಡಳಿತದ ವಿರುದ್ಧ ಕೆಸಿಆರ್ ಕಿಡಿ

    ಮೋದಿ ಆಡಳಿತದ ವಿರುದ್ಧ ಕೆಸಿಆರ್ ಕಿಡಿ

    ಪಾಟ್ನಾ: ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಭೇಟಿಯಾಗಲು ಬುಧವಾರ ಬಿಹಾರಕ್ಕೆ ಭೇಟಿ ನೀಡಿದ್ದರು. ಜೊತೆಗೆ ಉಪಮುಖ್ಯಮಂತ್ರಿ ಮತ್ತು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ತೇಜಸ್ವಿ ಯಾದವ್ ಅವರನ್ನು ಭೇಟಿ ಮಾಡಿ “ಬಿಜೆಪಿ-ಮುಕ್ತ ಭಾರತಕ್ಕೆ ಕರೆ ನೀಡಿದರು.

     

    ನಿತೀಶ್ ಕುಮಾರ್ ಮತ್ತು ತೇಜಸ್ವಿ ಯಾದವ್ ಅವರನ್ನು ಭೇಟಿಯಾಗಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿರುವ ಅನೇಕ ಸಮಸ್ಯೆಗಳಿಗೆ ಕೇಂದ್ರದಲ್ಲಿರುವ ಬಿಜೆಪಿ ನೇತೃತ್ವದ ಆಡಳಿತ ಕಾರಣವೆಂದು ಆರೋಪಿಸಿದರು. ಇದೇ ವೇಳೆ ರೂಪಾಯಿ ಮೌಲ್ಯ ಕುಸಿತ, ರೈತರ ಪ್ರತಿಭಟನೆ, ನಿರುದ್ಯೋಗ ಮತ್ತು ಬೆಲೆ ಏರಿಕೆಯ ಕುರಿತಂತೆ ನರೇಂದ್ರ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ದಾವೂದ್ ಇಬ್ರಾಹಿಂನ ಸುಳಿವು ಕೊಟ್ಟವರಿಗೆ 25 ಲಕ್ಷ ನಗದನ್ನು ಘೋಷಿಸಿದ ಎನ್‍ಐಎ

    ಜೂನ್ 2020ರಲ್ಲಿ ಗಾಲ್ವಾನ್ ಕಣಿವೆಯಲ್ಲಿ ಚೀನಾ ಸೈನಿಕರೊಂದಿಗಿನ ಘರ್ಷಣೆಯಲ್ಲಿ ಮಡಿದ ಬಿಹಾರದ ಐವರು ಸೈನಿಕರ ಕುಟುಂಬಸ್ಥರಿಗೆ ತಲಾ 10 ಲಕ್ಷ ರೂಪಾಯಿ ಚೆಕ್‍ಗಳನ್ನು ಹಸ್ತಾಂತರಿಸಲು ಕೆಸಿಆರ್ ಅವರು ಪಾಟ್ನಾಕ್ಕೆ ಭೇಟಿ ನೀಡುವ ಉದ್ದೇಶವನ್ನು ಹೊಂದಿದ್ದರು. ಹೀಗಾಗಿ ಬುಧವಾರ ಪಾಟ್ನಾಕ್ಕೆ ಬಂದಿದ್ದರು. ಇದನ್ನೂ ಓದಿ: ಅಬುಧಾಬಿಯಲ್ಲಿ ನಿರ್ಮಾಣವಾಗ್ತಿದೆ ಮೊದಲ ಹಿಂದೂ ದೇವಾಲಯ – ಜೈಶಂಕರ್‌ ಭೇಟಿ

    ಇದೇ ವೇಳೆ ನಿತೀಶ್ ಕುಮಾರ್ ಮತ್ತು ತೇಜಸ್ವಿ ಯಾದವ್ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿ ನಡೆಸಿ, ಬೆಲೆ ಏರಿಕೆ, ನಿರುದ್ಯೋಗ, ಖಾಸಗೀಕರಣ ನೀತಿಗಳ ಬಗ್ಗೆ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು ಮತ್ತು ‘ಬಿಜೆಪಿ-ಮುಕ್ತ್ ಭಾರತ’ಕ್ಕೆ ಕರೆ ನೀಡಿದರು. ಸಾಧ್ಯವಾದಷ್ಟು ರೀತಿಯಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸಲು ಪ್ರಯತ್ನಿಸಬೇಕು ಎಂದರು.

    Live Tv
    [brid partner=56869869 player=32851 video=960834 autoplay=true]

  • ರಾಯಚೂರನ್ನು ತೆಲಂಗಾಣಕ್ಕೆ ವಿಲೀನಗೊಳಿಸಲು ಜನರು ಒತ್ತಾಯಿಸುತ್ತಿದ್ದಾರೆ: ಕೆಸಿಆರ್

    ರಾಯಚೂರನ್ನು ತೆಲಂಗಾಣಕ್ಕೆ ವಿಲೀನಗೊಳಿಸಲು ಜನರು ಒತ್ತಾಯಿಸುತ್ತಿದ್ದಾರೆ: ಕೆಸಿಆರ್

    ಅಮರಾವತಿ: ಟಿಆರ್‌ಎಸ್ ಸರ್ಕಾರದ ಯೋಜನೆಗಳಿಂದ ಆಕರ್ಷಿತರಾಗಿರುವ ಕರ್ನಾಟಕದ ರಾಯಚೂರು ಜಿಲ್ಲೆಯ ಜನರು ಅಲ್ಲಿನ ಪ್ರದೇಶವನ್ನು ತೆಲಂಗಾಣಕ್ಕೆ ವಿಲೀನಗೊಳಿಸಬೇಕೆಂದು ಒತ್ತಾಯಿಸುತ್ತಿದ್ದಾರೆ ಎಂದು ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಹೇಳಿದರು.

    ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಕರ್ನಾಟಕದೊಂದಿಗೆ ಉತ್ತಮ ಸಂಪರ್ಕ ಹೊಂದಿರುವ ಗಡಿ ಪ್ರದೇಶವಾದ ತಾಂಡೂರಿಗೆ ರಾಯಚೂರಿನ ಜನರು ಹತ್ತಿರದಲ್ಲಿದ್ದೀರಿ. ಈ ಹಿನ್ನೆಲೆಯಲ್ಲಿ ರಾಯಚೂರಿನ ಕೆಲವು ಗಡಿ ಭಾಗದ ಜನರು ತಮ್ಮನ್ನು ತೆಲಂಗಾಣದೊಂದಿಗೆ ವಿಲೀನಗೊಳಿಸಬೇಕು ಎಂದು ಒತ್ತಾಯಿಸುತ್ತಿದ್ದಾರೆ. ಇಲ್ಲದಿದ್ದರೆ ನಮ್ಮ ರಾಜ್ಯದಲ್ಲಿ ಜಾರಿಗೆ ತಂದಿರುವ ರೀತಿಯ ಯೋಜನೆಗಳನ್ನು ಕರ್ನಾಟಕದಲ್ಲಿ ಒದಗಿಸಬೇಕು ಎಂದು ಹೇಳಬೇಕು ಎಂದರು.

    ಇದೇ ಸಂದರ್ಭದಲ್ಲಿ ಅವರು ತಮ್ಮ ಉಚಿತ ಕುಡಿಯುವ ನೀರು, ಮಿಷನ್ ಭಗೀರಥ, ಗರ್ಭಿಣಿಯರಿಗೆ ಕೆಸಿಆರ್ ಕಿಟ್‍ಗಳಂತಹ ಉಪಕ್ರಮಗಳನ್ನು ಪ್ರಸ್ತಾಪಿಸಿದರು. ಹಾಲುಣಿಸುವ ತಾಯಂದಿರು, ಉಚಿತ ವಿದ್ಯುತ್, ಎಕರೆಗೆ ವಾರ್ಷಿಕ 10,000 ರೂ. ನೀಡುವ ಯೋಜನೆಗಳನ್ನು ಕೊಂಡಾಡಿದರು. ಇದನ್ನೂ ಓದಿ: ಸಿದ್ದರಾಮಯ್ಯ ಎದುರು ಯಡಿಯೂರಪ್ಪ ಮಾಸ್ ಇಮೇಜ್ ಅಸ್ತ್ರ – ಬಿಜೆಪಿ ಸಂಸದೀಯ ಮಂಡಳಿಗೆ ಬಿಎಸ್‍ವೈ ಆಯ್ಕೆ ಹಿಂದಿನ ಪ್ಲಾನ್ ಏನು?

    ಕೆಸಿಆರ್ ಈ ರೀತಿ ಹೇಳಿಕೆ ನೀಡುತ್ತಿರುವುದು ಇದೇ ಮೊದಲಲ್ಲ. ಅವರು ಈ ಹಿಂದೆಯೂ ಇಂತಹ ಅನೇಕ ಹೇಳಿಕೆಗಳನ್ನು ನೀಡಿದ್ದರು. ನಾಂದೇಡ್‍ನಂತಹ ಮಹಾರಾಷ್ಟ್ರದ ಕೆಲವು ಗಡಿ ಪ್ರದೇಶಗಳನ್ನು ಉಲ್ಲೇಖಿಸಿ, ಮತದಾರರು ಬುದ್ಧಿವಂತಿಕೆಯಿಂದ ಯೋಚಿಸುವಂತೆ ಕರೆ ನೀಡಿದ್ದರು. ಇದನ್ನೂ ಓದಿ: ಶಾಲಾ-ಕಾಲೇಜುಗಳಲ್ಲಿ ರಾಷ್ಟ್ರಗೀತೆ ನಿತ್ಯ ಹಾಡಿಸೋದು ಕಡ್ಡಾಯ

    Live Tv
    [brid partner=56869869 player=32851 video=960834 autoplay=true]

  • ಕೆಸಿಆರ್‌ ಮತ್ತೊಬ್ಬ ನಿಜಾಮನಂತೆ ವರ್ತಿಸುತ್ತಿದ್ದಾರೆ: ತೆಲಂಗಾಣ ಸಿಎಂ ವಿರುದ್ಧ ಗೋಯಲ್‌ ಕಿಡಿ

    ಕೆಸಿಆರ್‌ ಮತ್ತೊಬ್ಬ ನಿಜಾಮನಂತೆ ವರ್ತಿಸುತ್ತಿದ್ದಾರೆ: ತೆಲಂಗಾಣ ಸಿಎಂ ವಿರುದ್ಧ ಗೋಯಲ್‌ ಕಿಡಿ

    ಹೈದರಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ನೀತಿ ಆಯೋಗದ ಸಭೆಯನ್ನು ಬಹಿಷ್ಕರಿಸಿದ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್‌ ವಿರುದ್ಧ ಕೇಂದ್ರ ಸಚಿವ ಪೀಯೂಷ್‌ ಗೋಯಲ್‌ ವಾಗ್ದಾಳಿ ನಡೆಸಿದ್ದಾರೆ.

    ಕೆಸಿಆರ್‌ ಅವರು ತನಗೆ ತಾನು ಮತ್ತೊಬ್ಬ ನಿಜಾಮ ಎಂದುಕೊಂಡಿದ್ದಾರೆ. ರಾಷ್ಟ್ರದ ಪ್ರಗತಿಗಾಗಿ ಪ್ರತಿಯೊಂದು ರಾಜ್ಯವೂ ಅಭಿವೃದ್ಧಿ ಹೊಂದಬೇಕು ಎಂಬುದನ್ನು ಅವರು ಮರೆಯುತ್ತಾರೆ. ಪ್ರತಿಯೊಂದು ರಾಜ್ಯಗಳ ಅಭಿವೃದ್ಧಿ ಪ್ರಧಾನಿ ಮೋದಿಯವರ ಕನಸು. ಕೇಂದ್ರವು ನೀತಿ ಆಯೋಗ ಮತ್ತು ರಾಜ್ಯಗಳೊಂದಿಗೆ ಕಲ್ಯಾಣ ಯೋಜನೆಗಳನ್ನು ರೂಪಿಸಲು ಕೆಲಸ ಮಾಡುತ್ತಿದೆ. ಕೆಸಿಆರ್ ತೆಲಂಗಾಣದ ಅಭಿವೃದ್ಧಿಯಲ್ಲಿ ಆಸಕ್ತಿ ಹೊಂದಿಲ್ಲ. ಇದು ರಾಜ್ಯ ಸರ್ಕಾರದಿಂದ ಸ್ಪಷ್ಟವಾಗಿದೆ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ಭಾರತದ ಜಲಗಡಿಗೆ ಬಂದಿದ್ದ ಪಾಕ್ ಯದ್ಧನೌಕೆಯನ್ನು ಓಡಿಸಿದ ಡಾರ್ನಿಯರ್

    ರಾಜ್ಯಗಳ ಬಗ್ಗೆ ಕೇಂದ್ರದ ತಾರತಮ್ಯ ಧೋರಣೆ ಹಾಗೂ ರಾಜ್ಯಗಳನ್ನು ಸಮಾನ ಪಾಲುದಾರರನ್ನಾಗಿ ಪರಿಗಣಿಸುತ್ತಿಲ್ಲ. ಹೀಗಾಗಿ ನೀತಿ ಆಯೋಗದ ಸಭೆಯನ್ನು ಬಹಿಷ್ಕರಿಸುವ ನಿರ್ಧಾರ ಮಾಡಲಾಗಿದೆ ಎಂದು ಪ್ರಧಾನಿ ಮೋದಿಗೆ ಕೆಸಿಆರ್‌ ಪತ್ರ ಬರೆದಿದ್ದರು.

    ರಾಷ್ಟ್ರಪತಿ ಭವನದ ಸಾಂಸ್ಕೃತಿಕ ಕೇಂದ್ರದಲ್ಲಿ ನೀತಿ ಆಯೋಗದ ಸಭೆ ನಡೆಯಿತು. ಈ ಸಭೆಗೆ ಬಿಹಾರ್‌ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಸಹ ಗೈರಾಗಿದ್ದರು. ನಿತೀಶ್‌ ಕುಮಾರ್‌ ಅವರು ಕೋವಿಡ್‌ ಕಾರಣಗಳಿಂದಾಗಿ ಸಭೆಗೆ ಗೈರಾಗಿದ್ದರು ಎನ್ನಲಾಗಿತ್ತು. ಇದನ್ನೂ ಓದಿ: ಪತ್ರಾ ಚಾವ್ಲ್‌ ಭೂಹಗರಣ: ಸಂಜಯ್‌ ರಾವತ್‌ಗೆ ಆ.22ರವರೆಗೆ ನ್ಯಾಯಾಂಗ ಬಂಧನ

    ನೀತಿ ಆಯೋಗ ಸಭೆಯ ಕಾರ್ಯಸೂಚಿಯು ಬೆಳೆ ವೈವಿಧ್ಯೀಕರಣ ಮತ್ತು ಎಣ್ಣೆಕಾಳು, ಬೇಳೆ ಕಾಳು, ಕೃಷಿ ಸಮುದಾಯದಲ್ಲಿ ಸ್ವಾವಲಂಬನೆ ಸಾಧಿಸುವುದು, ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ ಒಳಗೊಂಡಿತ್ತು.

    Live Tv
    [brid partner=56869869 player=32851 video=960834 autoplay=true]

  • ತೆಲಂಗಾಣದ ಮೇಘಸ್ಫೋಟದ ಹಿಂದೆ ವಿದೇಶಿ ಶಕ್ತಿಗಳ ಷಡ್ಯಂತ್ರ – KCR

    ತೆಲಂಗಾಣದ ಮೇಘಸ್ಫೋಟದ ಹಿಂದೆ ವಿದೇಶಿ ಶಕ್ತಿಗಳ ಷಡ್ಯಂತ್ರ – KCR

    ಹೈದರಾಬಾದ್: ದೇಶದಲ್ಲಿ ಮುಂಗಾರು ಮಳೆಯ ಅಬ್ಬರದ ಮಧ್ಯೆ ಮೇಘಸ್ಫೋಟದ ವಿಚಾರವಾಗಿ ತೆಲಂಗಾಣದ ಸಿಎಂ ಕೆ.ಚಂದ್ರಶೇಖರ ರಾವ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.

    ಕುಂಭದ್ರೋಣ ಮಳೆಯ ಹಿಂದೆ ಯಾವುದೋ ಷಡ್ಯಂತ್ರ ಇದೆ ಎನ್ನಲಾಗುತ್ತಿದೆ. ಕೆಲ ವಿದೇಶಿ ಶಕ್ತಿಗಳು ಬೇಕಂತಲೇ ನಮ್ಮ ದೇಶದ ಕೆಲವು ಭಾಗಗಳಲ್ಲಿ ಮೇಘ ಸ್ಫೋಟ ಮಾಡ್ತಿದ್ದಾರೆ ಎಂದು ಅವರು ಸಂಶಯ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಮದರಸಾಗಳಲ್ಲೂ ತ್ರಿವರ್ಣಧ್ವಜ ಹಾರಲೇಬೇಕು – ರಾಜ್ಯ ಸರ್ಕಾರದಿಂದ ಖಡಕ್ ಆದೇಶ

    ಭದ್ರಾಚಲಂ ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿದ ಅವರು, ವಿದೇಶಿ ಶಕ್ತಿಗಳು ಉದ್ದೇಶ ಪೂರ್ವಕವಾಗಿಯೇ ಆಯ್ದ ಕೆಲವು ಪ್ರದೇಶಗಳಲ್ಲಿ ಮೇಘಸ್ಫೋಟ ಮಾಡುತ್ತಿವೆ. ಆದ್ರೆ ಇದು ಎಷ್ಟರ ಮಟ್ಟಿಗೆ ಸತ್ಯವೋ ಗೊತ್ತಿಲ್ಲ. ಈ ಹಿಂದೆ ಕಾಶ್ಮೀರ, ಲೇಹ್, ಲಡಾಖ್ ಹಾಗೂ ಉತ್ತರಾಖಂಡದಲ್ಲಿ ಈ ರೀತಿ ಆಗಿತ್ತು. ಈಗ ಇಂತಹ ಸಂಚು ಗೋದಾವರಿ ಪ್ರಾಂತ್ಯದಲ್ಲಿ ನಡೆಯುತ್ತಿದೆ ಎಂದು ಕೆಲವು ವರದಿಗಳು ಹೇಳಿವೆ ಎಂದಿದ್ದಾರೆ. ಇದನ್ನೂ ಓದಿ: ಅಯೂಬ್‌ಖಾನ್ ಹತ್ಯೆ – ಎಫ್‌ಬಿಯಲ್ಲಿ ಬಿಲ್ಡಪ್ ಕೊಟ್ಟಿದ್ದ ಆರೋಪಿ ಮತೀನ್ ಖಾನ್ ಬಂಧನ

    ಅಲ್ಲದೆ ಗೋದಾವರಿ ನದಿಗೆ ಶಾಂತಿ ಪೂಜೆ ಮಾಡಿಸಿದ್ದಾರೆ. ಕೆಸಿಆರ್ ಹೇಳಿಕೆಯನ್ನು ತೆಲಂಗಾಣ ಬಿಜೆಪಿ ಅಧ್ಯಕ್ಷ ಬಂಡಿ ಸಂಜಯ್ ಮಾತನಾಡುತ್ತಾ, ಇದು ಶತಮಾನದ ದೊಡ್ಡ ಜೋಕ್ ಎಂದು ವ್ಯಂಗ್ಯವಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ತೆಲಂಗಾಣದಲ್ಲಿ ಬಿಜೆಪಿ ಅಲೆ ಶುರುವಾಗಿದೆ : ಮೋದಿ

    ತೆಲಂಗಾಣದಲ್ಲಿ ಬಿಜೆಪಿ ಅಲೆ ಶುರುವಾಗಿದೆ : ಮೋದಿ

    ಹೈದರಾಬಾದ್: ತೆಲಂಗಾಣ ರಾಜ್ಯದಲ್ಲಿ ಬಿಜೆಪಿ ಅಲೆ ಶುರುವಾಗಿದ್ದು, ಇಲ್ಲಿ ಬಿಜೆಪಿ ಮುಂದಿನ ಸರ್ಕಾರ ರಚಿಸಲಿದೆ ಎಂದು ಪ್ರಧಾನಿ ನರೇಂದ್ರಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ಬೇಗಂಪೇಟೆ ವಿಮಾನ ನಿಲ್ದಾಣದಲ್ಲಿಂದು ಬಿಜೆಪಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, ಟಿಆರ್‌ಎಸ್ (ತೆಲಂಗಾಣ ರಾಷ್ಟ್ರಸಮಿತಿ) ಒಂದು ಕುಟುಂಬದ ಪಕ್ಷವಾಗಿದ್ದು, ಅಧಿಕಾರದಲ್ಲಿರಲು ಯೋಗ್ಯವಲ್ಲ. ತೆಲಂಗಾಣದಲ್ಲಿ ಬಿಜೆಪಿ ಮುಂದಿನ ಸರ್ಕಾರ ರಚಿಸಲಿದೆ ಎಂದಿದ್ದಾರೆ. ಇದನ್ನೂ ಓದಿ: ಮೋದಿ ಪ್ರಧಾನಿಯಾಗಿ 8 ವರ್ಷ – ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ ವೇಗೆ ಚಾಲನೆ

    MODi

    ಕುಟುಂಬ ಆಡಳಿತದಿಂದಾಗಿ ದೇಶದ ಯುವಕರಿಗೆ ರಾಜಕೀಯದಲ್ಲಿ ಅವಕಾಶ ಸಿಗುತ್ತಿಲ್ಲ. ಈಗಾಗಲೇ ರಾಜ್ಯದಲ್ಲಿ ಬಿಜೆಪಿ ಪರ ಅಲೆ ಎದ್ದಿದ್ದು, ಮುಂದಿನ ವಿಧಾನಸಭೆ ಚುನಾವಣೆಯ ನಂತರ ಸರ್ಕಾರ ಬದಲಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಇದನ್ನೂ ಓದಿ: ಪಾಟಿದರ್ ಸ್ಫೋಟಕ ಶತಕ, ಡಿ.ಕೆ ಅಬ್ಬರ – ಅಹಮದಾಬಾದ್‌ಗೆ ಹಾರಿದ ಬೆಂಗ್ಳೂರು

    ಹಾಲಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ (KCR) ಮತ್ತು ಅವರ ಕುಟುಂಬದ ವಿರುದ್ಧ ಮೋದಿ ಪರೋಕ್ಷ ವಾಗ್ದಾಳಿ ನಡೆಸಿದರು. ಅಲ್ಲದೆ, ತೆಲಂಗಾಣದಲ್ಲಿ ಕುಟುಂಬ ಆಡಳಿತವನ್ನು ಕೊನೆಗಾಣಿಸುವಂತೆ ಜನರಿಗೆ ಕರೆ ನೀಡಿದರು.

    ಪ್ರತ್ಯೇಕ ತೆಲಂಗಾಣಕ್ಕಾಗಿ ಪ್ರಾಣ ತ್ಯಾಗ ಮಾಡಿದವರ ಆಶೋತ್ತರಗಳನ್ನು ಈಡೇರಿಸುವಲ್ಲಿ ಕುಟುಂಬ ಆಡಳಿತ ವಿಫಲವಾಗಿದೆ. ಆದ್ದರಿಂದ ತೆಲಂಗಾಣಕ್ಕೆ ಪ್ರಗತಿಪರ ಸರ್ಕಾರ ಬೇಕಿದ್ದು, ಬಿಜೆಪಿಯಿಂದ ಮಾತ್ರ ಅದು ಸಾಧ್ಯ ಎಂದು ಮೋದಿ ಹೇಳಿದ್ದಾರೆ.

    ಈ ಕುರಿತು ಪ್ರತಿಕ್ರಿಯಿಸಿರುವ ಕೆಸಿಆರ್ ಪಕ್ಷದ ವಕ್ತಾರ ಕ್ರಿಶಾಂಕ್ ಮನ್ನೆ, ಪ್ರಧಾನಿ ನರೇಂದ್ರಮೋದಿ ದೇಶದ ಪ್ರಧಾನಿಯಂತೆ ಮಾತನಾಡಿಲ್ಲ. ಅವರು ಬಿಜೆಪಿ ನಾಯಕನಾಗಿ ಒಂದು ಪರಿವಾರದ ಬಗ್ಗೆ ಮಾತನಾಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

  • ಭತ್ತ ಖರೀದಿ ಕೇಂದ್ರ ಪ್ರಾರಂಭಿಸಲು ತೆಲಂಗಾಣ ಸಿಎಂ ಅಸ್ತು

    ಭತ್ತ ಖರೀದಿ ಕೇಂದ್ರ ಪ್ರಾರಂಭಿಸಲು ತೆಲಂಗಾಣ ಸಿಎಂ ಅಸ್ತು

    ಹೈದರಾಬಾದ್: ರೈತರ ಹಿತದೃಷ್ಟಿಯಿಂದ ರಾಜ್ಯ ಸರ್ಕಾರ ಭತ್ತ ಖರೀದಿ ಕೇಂದ್ರಗಳನ್ನು ತೆರೆಯಲಿದೆ ಎಂದು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ತಿಳಿಸಿದರು.

    ಬುಧವಾರ ಸಚಿವ ಸಂಪುಟ ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆಹಾರ ಭದ್ರತೆಗೆ ಉತ್ತೇಜನ ನೀಡಲು ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್‌ಪಿ) ಸಾಂವಿಧಾನಿಕ ಸುರಕ್ಷತೆ ಒದಗಿಸುವ `ಸಂಯೋಜಿತ ನೂತನ ಕೃಷಿ ನೀತಿ’ ರೂಪಿಸಲು ಶೀಘ್ರವೇ ಅರ್ಥಶಾಸ್ತ್ರಜ್ಞರು ಹಾಗೂ ರೈತ ಮುಖಂಡರ ಸಭೆ ಕರೆಯುವುದಾಗಿಯೂ ಅವರು ಹೇಳಿದರು. ಇದನ್ನೂ ಓದಿ: ಝೊಮ್ಯಾಟೊ ಡೆಲಿವರಿ ಬಾಯ್ ಆದ ಶಿಕ್ಷಕ- ಕಥೆಯೇ ರೋಚಕ!

    paddy 2

    ತೆಲಂಗಾಣ ರಾಷ್ಟ್ರೀಯ ಸಮಿತಿ (TRS) ಸರ್ಕಾರವು ರೈತರ ಉತ್ಪನ್ನಗಳನ್ನು ಸಂಗ್ರಹಿಸುವ ಜವಾಬ್ದಾರಿಯನ್ನು ಕೇಂದ್ರ ಸರ್ಕಾರಕ್ಕೆ ನೆನಪಿಸಲು ಪ್ರಯತ್ನಿಸಿದೆ. ಏಕೆಂದರೆ, ನರೇಂದ್ರ ಮೋದಿ ಸರ್ಕಾರವು ಕಾರ್ಪೋರೇಟ್‌ಗಳು ಹಾಗೂ ಬ್ಯಾಂಕುಗಳಿಗೆ ವಂಚಿಸಿದವರ 10.50 ಲಕ್ಷ ಕೋಟಿ ರೂ.ಗಳ ಸಾಲ ಮನ್ನಾ ಮಾಡಿದೆ. ಆದರೆ ಒಂದು ರಾಜ್ಯದ ರೈತರ ಹಿತದೃಷ್ಟಿಯಿಂದ 3,500 ಕೋಟಿ ರೂ. ಹಣವನ್ನು ಭರಿಸಲು ಕೇಂದ್ರ ಸಿದ್ಧವಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

    ತೆಲಂಗಾಣದಲ್ಲಿ ರಬಿ ಹಂಗಾಮಿನಲ್ಲಿ ಉತ್ಪಾದಿತವಾದ ಭತ್ತವನ್ನು ಬೇಸಿಗೆಯಲ್ಲಿ ಕೊಯ್ಲು ಮಾಡುವುದರಿಂದ ಕಡಿಮೆ ಪ್ರಮಾಣದ ಅಕ್ಕಿಯ ಉತ್ಪಾದನೆಯಾಗಿದ್ದು 3,500 ಕೋಟಿ ನಷ್ಟವಾಗಿದೆ. ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಕನಿಕರವಿಲ್ಲ. ಆದರೆ ನಮ್ಮ ಸರ್ಕಾರ ರೈತರನ್ನು ಕಂಗಾಲಾಗಲು ಬಿಡುವುದಿಲ್ಲ. ಇಂದಿನಿಂದಲೇ ಎಲ್ಲ ಗ್ರಾಮಗಳಲ್ಲೂ ಭತ್ತ ಖರೀದಿ ಕೇಂದ್ರಗಳನ್ನು ತೆರೆಯಲಾಗುವುದು ಎಂದು ಭರವಸೆ ನೀಡಿದರು. ಇದನ್ನೂ ಓದಿ: ಕೆಜಿಗೆ 350ರೂ. ದಾಟಿದ ನಿಂಬೆಹಣ್ಣಿನ ಬೆಲೆ – ಜನ ಸಾಮಾನ್ಯರು ತತ್ತರ

    Reliance paddy agrulture farm bill (1)
    ಸಾಂದರ್ಭಿಕ ಚಿತ್ರ

    ಬಿಜೆಪಿ ಕೇಂದ್ರ ಸರ್ಕಾರ ದೇಶಕ್ಕೆ ಹಲವು ರೀತಿಯಲ್ಲಿ ನೋವುಂಟು ಮಾಡಿದೆ, ಕೋಮುವಾದವನ್ನು ಪ್ರಚೋದಿಸುತ್ತಿದೆ ಎಂದು ಬುದ್ಧಿಜೀವಿಗಳು ಅಭಿಪ್ರಾಯಪಟ್ಟಿದ್ದಾರೆ. ಬೆಲೆ ಏರಿಕೆ ಮತ್ತು ಇತರ ನಕಾರಾತ್ಮಕ ಅಂಶಗಳ ನಡುವೆಯೂ ರಾಜಕೀಯ ಲಾಭಕ್ಕಾಗಿ `ದಿ ಕಾಶ್ಮೀರ್ ಫೈಲ್ಸ್’ ಚಲನಚಿತ್ರವನ್ನು ಬಳಸಿಕೊಂಡಿದೆ ಎಂದು ಕಿಡಿಕಾರಿದರು.

  • ಪ್ರಾದೇಶಿಕ ರಾಜಕೀಯ ಪಕ್ಷಗಳೊಂದಿಗೆ ಸೇರಿ ಬಿಜೆಪಿಯೇತರ ರಂಗ ರೂಪಿಸುತ್ತೇವೆ: ಕೆಸಿಆರ್‌

    ಪ್ರಾದೇಶಿಕ ರಾಜಕೀಯ ಪಕ್ಷಗಳೊಂದಿಗೆ ಸೇರಿ ಬಿಜೆಪಿಯೇತರ ರಂಗ ರೂಪಿಸುತ್ತೇವೆ: ಕೆಸಿಆರ್‌

    ರಾಂಚಿ: ದೇಶಕ್ಕೆ ನೂತನ ದಿಕ್ಕನ್ನು ನೀಡಲು ಸಮಾನ ಮನಸ್ಕ ಪಕ್ಷಳೊಂದಿಗೆ ಮಾತುಕತೆ ನಡೆಸುತ್ತಿದ್ದೇನೆ ಎಂದು ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ತಿಳಿಸಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಾದೇಶಿಕ ರಾಜಕೀಯ ಸಂಘಟನೆಗಳ ಜೊತೆ ಮಾತುಕತೆ ನಡೆಸಿ ಬಿಜೆಪಿಯೇತರ ರಂಗವನ್ನು ರೂಪಿಸುತ್ತೇನೆ ಎಂದು ತಿಳಿಸಿದರು.

    ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳಾದರೂ ದೇಶ ಯಾವುದೇ ರೀತಿಯಲ್ಲೂ ಅಭಿವೃದ್ಧಿಯನ್ನು ಹೊಂದಿಲ್ಲ. ಇದರಿಂದಾಗಿ ರಾಷ್ಟ್ರದ ಅಭಿವೃದ್ಧಿಗೆ ಅಗತ್ಯವಾದ ಕ್ರಮ ಜರುಗಿಸುವಲ್ಲಿ ರಾಜಕೀಯ ಚರ್ಚೆಗಳು ನಡೆಯುತ್ತಿವೆ ಎಂದು ಹೇಳಿದರು.

    ದೇಶವನ್ನು ಸರಿಯಾದ ದಿಕ್ಕಿನಲ್ಲಿ ಕೊಂಡೊಯ್ಯಲು ಪ್ರಾಮಾಣಿಕ ಪ್ರಯತ್ನವನ್ನು ನಡೆಸುತ್ತೇವೆ. ಈ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಇದನ್ನು ಕೆಲವರು ಮೂರನೇ ರಂಗವೆಂದು ಇನ್ನೂ ಕೆಲವರು ನಾಲ್ಕನೇ ರಂಗವೆಂದು ಕರೆಯುತ್ತಿದ್ದಾರೆ. ಆದರೆ ಇದು ಯಾವ ಆಕಾರವನ್ನು ತೆಗೆದುಕೊಳ್ಳುತ್ತವೆ ಎಂದು ನಂತರ ನಿಮಗೆ ತಿಳಿಯುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಬುದ್ಧಿಮಾಂದ್ಯನ ಮೇಲೆ ಮನಬಂದಂತೆ ಥಳಿಸಿದ PSI

    ಈ ಬಗ್ಗೆ ಶೀಘ್ರವೇ ನಿಮಗೆ ಅರ್ಥವಾಗುತ್ತದೆ. ಈಗಲೇ ತೀರ್ಮಾನಕ್ಕೆ ಬರಬೇಡಿ ಎಂದ ಅವರು, ಜಾರ್ಖಂಡ್‌ ಮುಖ್ಯಮಂತ್ರಿ ಮತ್ತು ಜೆಎಂಎಂ ನಾಯಕ ಹೇಮಂತ್ ಸೊರೆನ್ ಅವರೊಂದಿಗೆ ರಾಜಕೀಯ ಚರ್ಚೆ ನಡೆಸಿದ್ದೇನೆ ಎಂದು ಈ ವೇಳೆ ತಿಳಿಸಿದರು. ಇದನ್ನೂ ಓದಿ: ಉಕ್ರೇನ್‍ನಿಂದ ಹಿಂತಿರುಗಿದ ವಿದ್ಯಾರ್ಥಿಗಳಿಗೆ ಕಾಲೇಜುಗಳಲ್ಲಿ ಅನುಮತಿ ನೀಡಿ – ಪ್ರಧಾನಿಗೆ ಐಎಂಎ ಪತ್ರ

    ಕಳೆದ ಡಿಸೆಂಬರ್‌ನಲ್ಲಿ ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಹಾಗೂ ಕಳೆದ ತಿಂಗಳು ಮಹಾರಾಷ್ಟ್ರದಲ್ಲಿ ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಹಾಗೂ ಶರದ್ ಪವರ್ ಜೊತೆ ಮಾತುಕತೆ ನಡೆಸಿದ್ದರು.

  • ಎಲ್ಲರನ್ನು ಒಟ್ಟಾಗಿ ಮುನ್ನಡೆಸುವ ಶಕ್ತಿ ಕೆಸಿಆರ್‌ಗಿದೆ: ಸಂಜಯ್ ರಾವತ್

    ಎಲ್ಲರನ್ನು ಒಟ್ಟಾಗಿ ಮುನ್ನಡೆಸುವ ಶಕ್ತಿ ಕೆಸಿಆರ್‌ಗಿದೆ: ಸಂಜಯ್ ರಾವತ್

    ಮುಂಬೈ: ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು ಎಲ್ಲರನ್ನು ಒಟ್ಟಾಗಿ ಮುನ್ನಡೆಸುವ ಸಾಮರ್ಥ್ಯವನ್ನು ಹೊಂದಿದ್ದಾರೆ ಎಂದು ಶಿವಸೇನಾ ಸಂಸದ ಸಂಜಯ್ ರಾವತ್ ಅಭಿಪ್ರಾಯಪಟ್ಟರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆ. ಚಂದ್ರಶೇಖರ್ ರಾವ್ ಅವರು ತುಂಬಾ ಕಷ್ಟಪಟ್ಟು ಕೆಲಸ ಮಾಡುವ ನಾಯಕರಾಗಿದ್ದಾರೆ. ಅವರು ತಮ್ಮ ರಾಜಕೀಯ ಜೀವನದಲ್ಲಿ ಸಾಕಷ್ಟು ಹೋರಾಟಗಳನ್ನು ಎದುರಿಸಿದ್ದಾರೆ. ಅವರು ಎಲ್ಲವನ್ನೂ ಒಟ್ಟಾಗಿ ಮುನ್ನಡೆಸುವ ಸಾಮರ್ಥ್ಯವನ್ನು ಹೊಂದಿದ್ದಾರೆ ಎಂದು ವಿಧ್ವಾಸ ವ್ಯಕ್ತಪಡಿಸಿದ ಅವರು, ಪ್ರಸ್ತುತ ನಡೆಯುತ್ತಿರುವ ಉತ್ತರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲನುಭವಿಸಲಿದೆ ಎಂದು ಭವಿಷ್ಯ ನುಡಿದರು.

    ಭಾನುವಾರ ನಡೆದ ಸಭೆಯಲ್ಲಿ, ತೆಲಂಗಾಣ ರಾಷ್ಟ್ರ ಸಮಿತಿಯ ಮುಖ್ಯಸ್ಥರಾದ ಚಂದ್ರಶೇಖರ್ ರಾವ್ ಮತ್ತು ಶಿವಸೇನಾ ಅಧ್ಯಕ್ಷ ಉದ್ಧವ್ ಠಾಕ್ರೆ ಅವರು ಅಭಿವೃದ್ಧಿ ಮತ್ತು ದೇಶದ ರಾಜಕೀಯ ಪರಿಸ್ಥಿತಿಯ ಬಗ್ಗೆ ಚರ್ಚಿಸಿದ್ದಾರೆಂದರು. ಇದನ್ನೂ ಓದಿ: ಈಶ್ವರಪ್ಪನಿಗೆ ದಿನಕ್ಕೊಮ್ಮೆ ನನ್ನ ಹೆಸ್ರು ಹೇಳದಿದ್ರೆ ನಿದ್ರೆ ಬರಲ್ಲ: ಡಿಕೆಶಿ

    ಮುಂಬೈನಲ್ಲಿ ಚಂದ್ರಶೇಖರ್ ರಾವ್ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರನ್ನು ಭೇಟಿಯಾದ ನಂತರದಲ್ಲಿ ನಾನು ಹಾಗೂ ಠಾಕ್ರೆ ಅವರು ಚರ್ಚಿಸಿ, ಈ ಸಮಯದ ಬದಲಾವಣೆಯ ಅಗತ್ಯವಿದೆ ಎಂದು ನಾವು ಒಪ್ಪಿಕೊಂಡಿದ್ದೇವೆ ಎಂದರು. ಇದನ್ನೂ ಓದಿ: ಹಿಜಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ಕೊಡುವಂತೆ ಪಟ್ಟು ಹಿಡಿದ ವಿದ್ಯಾರ್ಥಿನಿಯರು!

    ಟಿಆರ್‌ಎಸ್ ಮುಖ್ಯಸ್ಥರಾಗಿರುವ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಅವರು ಭಾನುವಾರ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರನ್ನು ಭೇಟಿಯಾಗಿದ್ದರು. ಶಿವಸೇನಾ ಸಂಸದ ಮತ್ತು ಪಕ್ಷದ ಮುಖ್ಯ ವಕ್ತಾರ ಸಂಜಯ್ ರಾವತ್ ಕೂಡ ಈ ಸಭೆಯಲ್ಲಿ ಭಾಗವಹಿಸಿದ್ದು, ಚಂದ್ರಶೇಖರ್ ರಾವ್ ಅವರು ಮಹಾರಾಷ್ಟ್ರದಲ್ಲಿ ಶಿವಸೇನೆ ಮತ್ತು ಕಾಂಗ್ರೆಸ್‌ನೊಂದಿಗೆ ಅಧಿಕಾರವನ್ನು ಹಂಚಿಕೊಂಡಿರುವ ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಅವರನ್ನು ಭೇಟಿಯಾಗಿದ್ದಾರೆ.