Tag: K. G. George

  • ಮಾಲಿವುಡ್ ನಿರ್ಮಾಪಕ ಕೆ.ಜಿ ಜಾರ್ಜ್ ವಿಧಿವಶ

    ಮಾಲಿವುಡ್ ನಿರ್ಮಾಪಕ ಕೆ.ಜಿ ಜಾರ್ಜ್ ವಿಧಿವಶ

    ಲಯಾಳಂ (Malyalam) ಚಿತ್ರರಂಗದ ಹಿರಿಯ ನಿರ್ಮಾಪಕ (Producer) ಕೆ.ಜಿ ಜಾರ್ಜ್ (K g George)  ಭಾನುವಾರ (ಸೆ.24) ವಿಧಿವಶರಾಗಿದ್ದಾರೆ. ಕೊಚ್ಚಿಯ ವೃದ್ಧಾಶ್ರಮದಲ್ಲಿ ಅವರು ಇಹಲೋಕ ತ್ಯಜಿಸಿದ್ದಾರೆ. ಇದನ್ನೂ ಓದಿ:‘ಜವಾನ್’ ಸಕ್ಸಸ್ ಬಳಿಕ ಪ್ರಭಾಸ್ ಸಿನಿಮಾದಲ್ಲಿ ನಯನತಾರಾ

    ಕಳೆದ 5 ವರ್ಷಗಳಿಂದ ಕೆ.ಜಿ ಜಾರ್ಜ್ ಅವರು ಪಾರ್ಶ್ವವಾಯುವಿಗೆ ಒಳಗಾಗಿದ್ದರು. ಅದಕ್ಕಾಗಿ ಸೂಕ್ತ ಚಿಕಿತ್ಸೆ ಕೂಡ ಪಡೆಯುತ್ತಿದ್ದರು. ಆದರೆ ಈಗ ಚಿಕಿತ್ಸೆ ಫಲಕಾರಿಯಾಗದೇ 78ನೇ ವಯಸ್ಸಿಗೆ ನಟ ನಿಧನರಾಗಿದ್ದಾರೆ. ಹಿರಿಯ ನಟನ ನಿಧನಕ್ಕೆ ಚಿತ್ರರಂಗದ ನಟ-ನಟಿಯರು, ರಾಜಕಾರಣಿಗಳು, ಆಪ್ತರು, ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ.

    1976ರಲ್ಲಿ ‘ಸ್ಪಪ್ನದನಂ’ (Swapnaadanam) ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟರು. ಈ ಸಿನಿಮಾವು ಅತ್ಯುತ್ತಮ ಚಲನಚಿತ್ರ ವಿಭಾಗದಲ್ಲಿ ನ್ಯಾಶನಲ್ ಅವಾರ್ಡ್ (National Award) ಕೂಡ ಬಾಚಿಕೊಂಡಿತ್ತು. ಉಳ್ಕಡಲ್, ಮೇಳ, ಯವನಿಕಾ ಸಿನಿಮಾ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಜನ ಸೇವೆಗಾಗಿ ನನ್ನ ಜೀವನ ಮುಡಿಪು: ಕೆ. ಜೆ. ಜಾರ್ಜ್

    ಜನ ಸೇವೆಗಾಗಿ ನನ್ನ ಜೀವನ ಮುಡಿಪು: ಕೆ. ಜೆ. ಜಾರ್ಜ್

    ಬೆಂಗಳೂರು: ಜೆಡಿಎಸ್ ಮತ್ತು ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸಂಪುಟ ಸ್ಥಾನ ಹಂಚಿಕೆಯಾದ ಹಿನ್ನೆಲೆಯಲ್ಲಿ ಇಂದು ನೂತನ ಸಚಿವರುಗಳು ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

    ಈ ವೇಳೆ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಕೆ. ಜೆ. ಜಾರ್ಜ್‍ರವರು ಹೈಕಮಾಂಡ್‍ನ ವರಿಷ್ಠರು ನಾನು ಮಾಡಿದ ಕೆಲಸಗಳಿಗೆ ಗುರುತಿಸಿ ಸಚಿವ ಸ್ಥಾನ ನೀಡಿದ್ದಾರೆ. ನನಗೆ ಸಮ್ಮಿಶ್ರ ಸರ್ಕಾರದಲ್ಲಿ ಯಾವುದೇ ಖಾತೆಯನ್ನಾದರೂ ನೀಡಲಿ ನಾನು ನಿಭಾಯಿಸಲು ಸಿದ್ಧನಾಗಿದ್ದೇನೆಂದು ಹೇಳಿದ್ದಾರೆ. ಜನ ಸೇವೆಗಾಗಿ ನನ್ನ ಜೀವವನ್ನೇ ಮುಡಿಪಾಗಿಡುತ್ತೇನೆಂದು ತಿಳಿಸಿದ್ದಾರೆ. ಸಿಕ್ಕ ಯಾವುದೇ ಖಾತೆಯನ್ನು ನಿಷ್ಠೆಯಿಂದ ಜನರ ಅಭಿವೃದ್ಧಿ ಕಾರ್ಯಕ್ಕೆ ಶ್ರಮವಹಿಸಿ ಸೇವೆ ಮಾಡುತ್ತೇನೆ ಎಂದು ಹೇಳಿದ್ದಾರೆ.

    ಕಾಂಗ್ರೆಸ್ ಸರ್ಕಾರದ ಆರಂಭದಲ್ಲಿ ಜಾರ್ಜ್ ಅವರಿಗೆ ಆರಂಭದಲ್ಲಿ ಗೃಹ ಇಲಾಖೆಯನ್ನು ನೀಡಲಾಗಿತ್ತು. ಇದಾದ ಬಳಿಕ ಬೆಂಗಳೂರು ನಗರಾಭಿವೃದ್ಧಿ ಇಲಾಖೆಯನ್ನು ಜಾರ್ಜ್ ವಹಿಸಿಕೊಂಡಿದ್ದರು. ಇದನ್ನೂ ಓದಿ: 1 ಕೋಟಿಯ ಕಾರು ಜೊತೆಗೆ 1 ವರ್ಷ ಡೀಸೆಲ್ ಭಾಗ್ಯ – ಮಾಜಿ ಸಿಎಂಗೆ ಜಾರ್ಜ್ ಭರ್ಜರಿ ಗಿಫ್ಟ್!

     

    https://youtu.be/4QmHFwPxOGg

  • ಅಂಬರೀಶ್ ಮನವೊಲಿಕೆಗೆ ಮುಂದಾದ ಕೈ ಬಳಗ

    ಅಂಬರೀಶ್ ಮನವೊಲಿಕೆಗೆ ಮುಂದಾದ ಕೈ ಬಳಗ

    ಬೆಂಗಳೂರು: ಚುನಾವಣೆ ಹಾಗೂ ಪ್ರಚಾರದ ಕುರಿತಾಗಿ ಏನನ್ನು ಮಾತನಾಡದೇ ಸಿಎಂ ಹಾಗೂ ಕಾಂಗ್ರೆಸ್ ಮುಖಂಡರನ್ನು ಸತಾಯಿಸುತ್ತಿರುವ ನಟ ಅಂಬರೀಶ್ ಅವರ ಮನವೊಲಿಸಲು ಕೈ ಬಳಗವೇ ಮುಂದಾಗಿದೆ.

    ಇಲ್ಲಿನ ಗಾಲ್ಫ್ ರಸ್ತೆಯಲ್ಲಿರುವ ನಟ ಅಂಬರೀಶ್ ನಿವಾಸಕ್ಕೆ ಸಚಿವ ಕೆ.ಜೆ.ಜಾರ್ಜ್ ಭೇಟಿ ನೀಡಿ ಮಂಡ್ಯ ಮತಕ್ಷೇತ್ರದಿಂದ ಸ್ಪರ್ಧಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಅಲ್ಲದೆ, ಚುನಾವಣೆ ಪ್ರಚಾರಕ್ಕೆ ಸಿದ್ಧರಾಗುವಂತೆ ಒಂದು ಗಂಟೆ ಜಾರ್ಜ್ ಅವರು ಅಂಬರೀಶ್ ಜೊತೆಗೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

    ಈ ಮುನ್ನ ಟಿಕೆಟ್ ಸಿಗಲಿ ನೋಡೋಣ ಎನ್ನುತ್ತಿದ್ದ ಅಂಬರೀಶ್, ಟಿಕೆಟ್ ಸಿಕ್ಕ ಮೇಲೂ ಪಕ್ಷದ ಮುಖಂಡರನ್ನು ಸಂಪರ್ಕಿಸಿಲ್ಲ. ಅಲ್ಲದೇ ಬಿ ಫಾರ್ಮ್ ಅನ್ನು ಕೂಡ ಪಡೆದಿಲ್ಲ. ಸ್ಪರ್ಧೆ ಮಾಡುವ ಕುರಿತಾಗಿಯೂ ಅವರು ಏನನ್ನೂ ಹೇಳದೆ ಕಾಂಗ್ರೆಸ್ ನಾಯಕರನ್ನು ಸತಾಯಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

    ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಪಾಲ್ ಮತ್ತು ಸಿಎಂ ಸಿದ್ದರಾಮಯ್ಯನವರ ಸಲಹೆಯಂತೆ ಸಚಿವ ಕೆ.ಜೆ.ಜಾರ್ಜ್ ಅವರನ್ನು ಅಂಬಿ ನಿವಾಸಕ್ಕೆ ಸಂಧಾನಕ್ಕೆ ಕಳುಹಿಸಲಾಗಿತ್ತು ಎನ್ನಲಾಗಿದೆ.

    ಅಂಬರೀಶ್ ಭೇಟಿ ನಂತರ ಮಾತನಾಡಿದ ಸಚಿವ ಕೆ.ಜೆ.ಜಾರ್ಜ್, ನಾನು ಅಂಬರೀಶ್ ಒಳ್ಳೆಯ ಸ್ನೇಹಿತರು. ಪ್ರತಿ ಚುನಾವಣೆ ಸಂದರ್ಭದಲ್ಲಿಯೂ ಅವರನ್ನು ಭೇಟಿ ಮಾಡುತ್ತೇನೆ. ಯಾವುದೇ ಸಂಧಾನ ಮಾತುಕತೆಗೆ ನಾನು ಇಲ್ಲಿಗೆ ಬಂದಿಲ್ಲ. ನನ್ನ ಮತಕ್ಷೇತ್ರದ ಪ್ರಚಾರಕ್ಕೆ ಬೆಂಬಲ ನೀಡುವಂತೆ ಕೇಳಲು ಬಂದಿದ್ದೆ. ಅವರಿಗೆ ಟಿಕೆಟ್ ಸಿಕ್ಕಿದೆ. ಬಿ ಫಾರ್ಮ್ ಪಡೆಯುವ ಬಗ್ಗೆ ನನಗೆ ಗೊತ್ತಿಲ್ಲ ಎಂದು ಹೇಳಿದ್ದಾರೆ.

    ನನಗೆ ಬೆಂಬಲ ನೀಡುವುದಾಗಿ ತಿಳಿಸಿದ್ದಾರೆ. ಆದರೆ, ಪ್ರಚಾರದ ಕುರಿತಾಗಿ ಏನು ಹೇಳಿಲ್ಲ. ಅವರ ಆರೋಗ್ಯ ಚೆನ್ನಾಗಿದೆ. ಸಿನಿಮಾ ಚಿತ್ರೀಕರಣಕ್ಕೂ ಹೋಗುತ್ತಿದ್ದಾರೆ. ಅವರು ಸಿನಿಮಾ ಹೀರೋ. ಹೀಗಾಗಿ ಅವರಿಗೆ ಬಿ ಫಾರ್ಮ್ ಅನ್ನು ಮನೆಗೆ ಕೊಟ್ಟು ಕಳಿಸಬಹುದು ಎಂದು ತಿಳಿಸಿದ್ದಾರೆ.