Tag: K.H Srinivas

  • ಹಿರಿಯ ರಾಜಕಾರಣಿ, ಮಾಜಿ ಸಚಿವ ಕೆ.ಹೆಚ್.ಶ್ರೀನಿವಾಸ್ ನಿಧನ

    ಹಿರಿಯ ರಾಜಕಾರಣಿ, ಮಾಜಿ ಸಚಿವ ಕೆ.ಹೆಚ್.ಶ್ರೀನಿವಾಸ್ ನಿಧನ

    ಬೆಂಗಳೂರು: ಶಿವಮೊಗ್ಗ ಹಾಗೂ ಸಾಗರ ಕ್ಷೇತ್ರದ ಮಾಜಿ ಶಾಸಕ ಹಾಗೂ ಮಾಜಿ ಸಚಿವ, ಹಿರಿಯ ರಾಜಕಾರಣಿ ಕೆ.ಎಚ್‌ಶ್ರೀನಿವಾಸ್‌ (KH Srinivas) (86) ನಿಧನರಾಗಿದ್ದಾರೆ.

    ಸಾಗರ ತಾಲ್ಲೂಕು ಕಾನುಗೋಡು ಗ್ರಾಮದವರಾದ ಶ್ರೀನಿವಾಸ್‌ ಜನತಾಪರಿವಾರದಲ್ಲಿ (Janata parivar) ಗುರುತಿಸಿಕೊಂಡಿದ್ದರು. ಆನಂತರ ಕಾಂಗ್ರೆಸ್‌ನಲ್ಲೂ ಇದ್ದರು. ಮಾಜಿ ಸಿಎಂ ರಾಮಕೃಷ್ಣ ಹೆಗಡೆ (Rama Krishna Hegde) ಅವರ ಆಪ್ತರಾಗಿದ್ದ ಅವರು ಸಾಂಸ್ಕೃತಿಕ ವಲಯದಲ್ಲೂ ಗುರುತಿಸಿಕೊಂಡಿದ್ದರು. ವಕೀಲರಾಗಿ. ಕೃಷಿಕರೂ ಆಗಿದ್ದರು. ಕವನ ಸಂಕಲನಗಳನ್ನೂ ರಚಿಸಿದ್ದ ಅವರು ಸಿನಿಮಾದಲ್ಲೂ ಅಭಿನಯಿಸಿದ್ದರು.

    ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ಕಾನುಗೋಡು ಗ್ರಾಮದಲ್ಲಿ 1938ರ ಫೆಬ್ರವರಿ 5ರಂದು ಜನಿಸಿದರು. ಸಾಗರ, ಶಿವಮೊಗ್ಗದಲ್ಲಿ ಶಿಕ್ಷಣ ಪಡೆದಿದ್ದರು. ಕೃಷಿಕರಾಗಿ, ವಕೀಲರಾಗಿದ್ದುಕೊಂಡೇ ರಾಜಕೀಯ ಪ್ರವೇಶಿಸಿದ್ದರು. ಕೆಲವು ದಿನಗಳ ಕಾಲ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ರಾಜ್ಯಶಾಸ್ತ್ರ ಅಧ್ಯಾಪಕರಾಗಿ ಸೇವೆ ಸಲ್ಲಿಸಿದರು.

    ಹೈಕೋರ್ಟ್‌ನಲ್ಲಿ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ವಕೀಲರಾಗಿಯೂ ಸೇವೆ ಸಲ್ಲಿಸಿದ್ದರು. ಹಲವಾರು ಸಾಮಾಜಿಕ ಮತ್ತು ಸರ್ಕಾರಿ ಸಂಸ್ಥೆಗಳಲ್ಲಿ ಕಾನೂನು ಸಲಹೆಗಾರರಾಗಿ ನೇಮಕಗೊಂಡು ಸಾಮಾಜಿಕವಾಗಿ ಗುರುತಿಸಿಕೊಂಡಿದ್ದರು. ಸಾಗರ ತಾಲೂಕು ಮತ್ತು ಸುತ್ತಮುತ್ತ ಉನ್ನತ ಶಿಕ್ಷಣ ಸಂಸ್ಥೆಗಳನ್ನು ಹೊಂದಿರುವ ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದಲ್ಲಿ ಅಧ್ಯಕ್ಷರಾಗಿ ಹಾಗೂ ಶಿವಮೊಗ್ಗದ ಸಹ್ಯಾದ್ರಿ ಶಿಕ್ಷಣ ಟ್ರಸ್ಟ್‌ನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

    ಇವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರಾಜ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಇಂಧನ ಮತ್ತು ಮಾಹಿತಿ ಇಲಾಖೆಯ ಕ್ಯಾಬಿನೆಟ್ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. 1987-88ರಲ್ಲಿ ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಅಧ್ಯಕ್ಷರಾಗಿದ್ದರು. ಆನಂತರ ವಿಧಾನಪರಿಷತ್‌ಗೂ ಆಯ್ಕೆಯಾಗಿ ಪ್ರತಿಪಕ್ಷ ನಾಯಕರಾಗಿ ಕೆಲಸ ಮಾಡಿದ್ದರು. ವಾಗ್ಮಿಯಾಗಿ ಗುರುತಿಸಿಕೊಂಡಿದ್ದರು.