Tag: K.N Rajanna

  • ಈದ್ಗಾ ಮೈದಾನ ಬಳಿ ರಸ್ತೆಯಲ್ಲೇ ನಮಾಜ್ ಮಾಡ್ತಾರಪ್ಪ, ಪರ್ಮಿಷನ್ ತಗೋತಾರ ಅವ್ರು?: ಕೆ.ಎನ್.ರಾಜಣ್ಣ

    ಈದ್ಗಾ ಮೈದಾನ ಬಳಿ ರಸ್ತೆಯಲ್ಲೇ ನಮಾಜ್ ಮಾಡ್ತಾರಪ್ಪ, ಪರ್ಮಿಷನ್ ತಗೋತಾರ ಅವ್ರು?: ಕೆ.ಎನ್.ರಾಜಣ್ಣ

    ತುಮಕೂರು: ಆರ್‌ಎಸ್‌ಎಸ್‌ಗೆ (RSS) ಅಂಕುಶ ಹಾಕಲು ಹೊರಟಿದ್ದ ಸರ್ಕಾರದ ಧೋರಣೆಗೆ ಮಾಜಿ ಸಚಿವ ಕೆ.ಎನ್.ರಾಜಣ್ಣ (K.N.Rajanna) ಪರೋಕ್ಷವಾಗಿ ಬೇಸರ ವ್ಯಕ್ತಪಡಿಸಿದ್ದಾರೆ. ‌

    ತುಮಕೂರಿನಲ್ಲಿ (Tumakuru) ಮಾತನಾಡಿದ ರಾಜಣ್ಣ, ಈದ್ಗಾ ಮೈದಾನದಲ್ಲಿ ನಮಾಜ್ ಮಾಡುವಾಗ ರಸ್ತೆಯಲ್ಲೇ ನಮಾಜ್ ಮಾಡ್ತಾರಪ್ಪ. ಹಾಗಾದರೆ ಅವರೆಲ್ಲ ಪರ್ಮಿಷನ್ ತಗೊಂಡೇ ಅಲ್ಲಿ ನಮಾಜ್ ಮಾಡ್ತಾರಾ ಎಂದು ರಾಜಣ್ಣ ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ: ನಾಳೆ RSS ಪಥ ಸಂಚಲನ – ಚಿತ್ತಾಪುರದಲ್ಲಿ ಹಾಕಿದ್ದ ಬ್ಯಾನರ್‌, ಬಂಟಿಂಗ್‌ ತೆರವು

    ಪರ್ಮಿಷನ್ ಕೊಡಿ ಅಂತ ಅವ್ರು ಬರಲ್ಲಾ. ಅಥವಾ ಪರ್ಮಿಷನ್ ತಗೊಳಿ ಅಂತ ನಾವು ಕೇಳೋದಿಲ್ಲ. ಹೀಗಾಗಿ, ಜಾರಿ ಮಾಡಲು ಸಾಧ್ಯವಾಗುವಂತಹ ಕಾನೂನನ್ನು ಮಾತ್ರ ತರಬೇಕು. ಅದನ್ನು ಬಿಟ್ಟು ಜಾರಿ ಮಾಡಲಾಗದ ಕಾನೂನು ತಂದ್ರೆ ಪುಸ್ತಕದಲ್ಲಿ ಇರಬೇಕು ಅಷ್ಟೇ ಎಂದು ಆರ್‌ಎಸ್‌ಎಸ್‌ಗೆ ನಿರ್ಬಂಧ ಹಾಕುವ ಸರ್ಕಾರದ ಧೋರಣೆಗೆ ರಾಜಣ್ಣ ಪರೋಕ್ಷವಾಗಿ ಬೇಸರ ವ್ಯಕ್ತಪಡಿಸಿದ್ದಾರೆ.

    ಸರ್ಕಾರಿ ಜಾಗದಲ್ಲಿ ಆರ್‌ಎಸ್‌ಎಸ್ ಆಗಲಿ ಬೇರೆ ಯಾವುದೇ ಸಂಘಟನೆ ಆಗಲಿ ಅನುಮತಿ ಪಡೆದು ಕಾರ್ಯಕ್ರಮ ಮಾಡಿ ಅಂತ ಹೇಳಿದ್ದಾರೆ. ಅದು ಎಷ್ಟರ ಮಟ್ಟಿಗೆ ಜಾರಿ ಆಗುತ್ತೆ ಎನ್ನುವುದನ್ನು ನೋಡೋಣ ಎಂದು ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: ಲಿಂಗಾಯತ ಧರ್ಮದ ಬಗ್ಗೆ ಅವಹೇಳನ; ಬಾಗಲಕೋಟೆ ತೊರೆಯುವಂತೆ ಕನ್ನೇರಿ ಶ್ರೀಗಳಿಗೆ ನೊಟೀಸ್!

  • ಕಾಂಗ್ರೆಸ್ ನನಗೆ ಮೋಸ ಮಾಡಿಲ್ಲ, ಯಾವುದೇ ಕಾರಣಕ್ಕೂ ಪಕ್ಷ ಬಿಡಲ್ಲ: ಕೆ.ಎನ್.ರಾಜಣ್ಣ ಸ್ಪಷ್ಟನೆ

    ಕಾಂಗ್ರೆಸ್ ನನಗೆ ಮೋಸ ಮಾಡಿಲ್ಲ, ಯಾವುದೇ ಕಾರಣಕ್ಕೂ ಪಕ್ಷ ಬಿಡಲ್ಲ: ಕೆ.ಎನ್.ರಾಜಣ್ಣ ಸ್ಪಷ್ಟನೆ

    – ಸಿದ್ದರಾಮಯ್ಯ ನೇತೃತ್ವ ಇರೋವರೆಗೂ ನನ್ನ ಭವಿಷ್ಯಕ್ಕೆ ತೊಂದರೆ ಇಲ್ಲ ಎಂದ ಮಾಜಿ ಸಚಿವ

    ತುಮಕೂರು: ಕಾಂಗ್ರೆಸ್ ಪಕ್ಷ ನನಗೆ ಮೋಸ ಮಾಡಿಲ್ಲ. ಯಾವುದೇ ಕಾರಣಕ್ಕೂ ನಾನು ಪಕ್ಷ ಬಿಡಲ್ಲ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ (K.N.Rajanna) ಸ್ಪಷ್ಟಪಡಿಸಿದ್ದಾರೆ. ಬಿಜೆಪಿ ಸೇರುತ್ತಾರೆಂಬ ಆರೋಪವನ್ನು ಅಲ್ಲಗಳೆದಿದ್ದಾರೆ.

    ಮಧುಗಿರಿಯ ಜನಸಂಪರ್ಕ ಸಭೆಯಲ್ಲಿ ಮಾತನಾಡಿದ ರಾಜಣ್ಣ, ಅನ್ನಭಾಗ್ಯ ಕಾರ್ಯಕ್ರಮ ನನಗೆ ಬಹಳ ಪ್ರೀತಿಯ ಯೋಜನೆ. ಸಿದ್ದರಾಮಯ್ಯ ಅವರು ಅನ್ನಭಾಗ್ಯ ಕಾರ್ಯಕ್ರಮದಿಂದ ನನಗೆ ಅಚ್ಚುಮೆಚ್ಚು. ಅದಕ್ಕೆ ನಾನು ಅವರನ್ನು ಹೆಚ್ಚು ಪ್ರೀತಿ ಮಾಡುತ್ತೇನೆ. ಹಸಿವಿನ ಪಿಡುಗು ತೊಡೆದು ಹಾಕಿದ್ದು ಮಾನ್ಯ ಸಿದ್ದರಾಮಯ್ಯ. ಉಳಿದ ಸಿಎಂಗಳಿಗೆ ಮನಸ್ಥಿತಿ ಇರಲಿಲ್ಲ. ಹಾಗಾಗಿ ಅವರು ಅನ್ನಭಾಗ್ಯದಂತಹ ಕಾರ್ಯಕ್ರಮ ತಂದಿಲ್ಲ. ಸಿದ್ದರಾಮಯ್ಯನವರು ಅವರ ಮನೆಯಿಂದ ತಂದು ಕೊಟ್ಟಿಲ್ಲ ನಿಜ. ಆದರೆ ಬೇರೆ ಸಿಎಂಗಳು ಯಾಕೆ ಕೊಟ್ಟಿಲ್ಲ. ಮಧುಗಿರಿ ತಾಲೂಕಿನಲ್ಲಿ ಅನ್ನಭಾಗ್ಯ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿದೆ. ಬಡವರ ಕಾರ್ಯಕ್ರಮ ಮಂಜೂರು ಮಾಡುವಾಗ ನಾವು ತಾರತಮ್ಯ ಮಾಡಿಲ್ಲ. ಪಕ್ಷಕ್ಕೆ ಮತ ಹಾಕಿಲ್ಲ ಎಂದು ಸವಲತ್ತು ಕೊಡದೇ ಇಲ್ಲ ನಾನು. ಎಲ್ಲಾ ಪಕ್ಷ, ಜಾತಿಯವರಿಗೆ ಮನೆಗಳು ಮಂಜೂರು ಮಾಡಿದ್ದೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರಾಜಣ್ಣ ಬಿಜೆಪಿಗೆ ಹೋಗಲು ಅರ್ಜಿ ಹಾಕಿದ್ದಾರೆ – ಬಾಲಕೃಷ್ಣ ಸ್ಫೋಟಕ ಹೇಳಿಕೆ

    ನಾನು ಮಾಜಿ ಸಚಿವನಾಗಿ ಕೆಲಸ ಮಾಡುತ್ತಿದ್ದೇನೆ. ನನಗೆ ಅದರಿಂದ ಬೇಜಾರಿಲ್ಲ. 35 ಸಾವಿರ ಲೀಡ್‌ನಿಂದ ನಾನು ಗೆದ್ದಿದ್ದೇನೆ. ಈಗ ಚುನಾವಣೆ ಆದರೂ ನಾನೂ ಹೆಚ್ಚು ಮತದಿಂದ ಗೆಲ್ಲುತ್ತೇನೆ. ನಾನು ಭ್ರಷ್ಟಾಚಾರ ಮಾಡಿಲ್ಲ. ಆದರೂ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟೆ ಎಂದು ಮಾತನಾಡಿದ್ದಾರೆ.

    ನಾನ್ಯಾಕೆ ಬಿಜೆಪಿ ಸೇರಲಿ? ಅವಕಾಶ ಇಲ್ಲ ನನಗೆ. ಪಾರ್ಟಿ ನನಗೆ ಏನೂ ಮೋಸ ಮಾಡಿಲ್ಲ. ಯಾವ ಕಾರಣಕ್ಕೂ ನಾನು ಕಾಂಗ್ರೆಸ್ ಬಿಡಲ್ಲ. ಜನರು ನನಗೆ ಕಾಂಗ್ರೆಸ್, ಬಿಜೆಪಿ ಅಥವಾ ಇಂಡಿಪೆಂಡೆಂಟ್ ನಿಂತರೂ ಮತ ಹಾಕುತ್ತಾರೆ. ರಾಹುಲ್ ಗಾಂಧಿ ಮತಗಳ್ಳತನ ಹೋರಾಟವನ್ನು ನಾನು ಬೆಂಬಲಿಸುತ್ತೇನೆ. ಸಿದ್ದರಾಮಯ್ಯ ನೇತೃತ್ವ ಇರೋವರೆಗೂ ನನ್ನ ಭವಿಷ್ಯಕ್ಕೆ ತೊಂದರೆ ಇಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮೈಸೂರು| ಕಾಂಗ್ರೆಸ್‌ ಶಾಸಕನಿಂದ ಧರ್ಮಸ್ಥಳ ಯಾತ್ರೆ

    ರಾಜಕೀಯದಲ್ಲಿ ದುಡ್ಡು ಅಥವಾ ಜಾತಿ ಇದ್ದಾಗ ಮಾತ್ರ ಬೆಳೆಯಬಹುದು. ಅದು ಎರಡೂ ನನ್ನ ಬಳಿ ಇಲ್ಲ. ಆದರೂ ಕ್ಷೇತ್ರದ ಜನರು ನನ್ನ ಬೆಳೆಸಿದ್ದಾರೆ ಎಂದಿದ್ದಾರೆ.

  • ಡಿಕೆಶಿ ಆರ್‌ಎಸ್‍ಎಸ್ ಗೀತೆನೂ ಹಾಡಬಹುದು, ನಾವು ಮಾತ್ರ ಏನು ಮಾಡೋ ಹಾಗಿಲ್ಲ: ರಾಜಣ್ಣ

    ಡಿಕೆಶಿ ಆರ್‌ಎಸ್‍ಎಸ್ ಗೀತೆನೂ ಹಾಡಬಹುದು, ನಾವು ಮಾತ್ರ ಏನು ಮಾಡೋ ಹಾಗಿಲ್ಲ: ರಾಜಣ್ಣ

    ತುಮಕೂರು: ಕೆಪಿಸಿಸಿ ಅಧ್ಯಕ್ಷರು ಆರ್‌ಎಸ್‍ಎಸ್ (RSS) ಗೀತೆ ಮಾತ್ರ ಅಲ್ಲ, ಏನು ಬೇಕಾದ್ರೂ ಮಾಡಬಹುದು. ನಾವು ಮಾತ್ರ ಮಾಡುವ ಹಾಗಿಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ (DKShivakumar) ವಿರುದ್ಧ ಮಾಜಿ ಸಚಿವ ರಾಜಣ್ಣ ಕಿಡಿಕಾರಿದ್ದಾರೆ.

    ತುಮಕೂರಿನಲ್ಲಿ (Tumakuru) ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ವೇಳೆ, ಡಿಕೆಶಿ ಆರ್‍ಎಸ್‍ಎಸ್ ಗೀತೆನೂ ಹಾಡಬಹುದು. ಅಮಿತ್ ಶಾ ಜೊತೆಗೆ ಹೋಗಿ ಸದ್ಗುರುನೊಂದಿಗೆ ಡಯಾಸ್ ಮೇಲೆ ಕುಳಿತುಕೊಳ್ಳಬಹುದು. ನಾವು ಅದನ್ನು ಮಾಡುವ ಹಾಗಿಲ್ಲ ಎಂದು ಬೇಸರ ಹೊರಹಾಕಿದ್ದಾರೆ. ಇದನ್ನೂ ಓದಿ: ಅನಾಮಿಕ ವ್ಯಕ್ತಿಯ ಹಿಂದೆ ಯಾರಿದ್ದಾರೆ ಹೊರಬರುತ್ತೆ: ರಾಮಲಿಂಗಾ ರೆಡ್ಡಿ

    ಕೆಪಿಸಿಸಿ ಅಧ್ಯಕ್ಷರು ಪ್ರಯಾಗ್ ರಾಜ್‍ಗೆ ಹೋಗಿ ಸ್ನಾನ ಮಾಡಿಬಿಟ್ಟರೆ ಬಡವರ ಹೊಟ್ಟೆ ತುಂಬುತ್ತಾ ಅಂತ ಹೇಳಿದ್ದರು. ಅದಕ್ಕೆ ವಿರುದ್ಧವಾಗಿ ಡಿಕೆಶಿ ಅಲ್ಲಿಗೂ ಹೋಗಿದ್ದರು. ಅಂಬಾನಿ ಮನೆ ಮದುವೆಯನ್ನು ರಾಹುಲ್ ಗಾಂಧಿಯವರು ಸ್ವೀಕಾರ ಮಾಡಲು ಹಿಂದೆ ಮುಂದೆ ನೋಡಿದ್ರು. ಅವರು ಸ್ವೀಕಾರ ಮಾಡೋದಿಲ್ಲ. ಅಂತಹ ಮದುವೆಗೆ ಡಿಕೆಶಿ ಕುಟುಂಬ ಸಮೇತ ಹೋಗ್ತಾರೆ. ಮುಂದೊಂದು ದಿನ ಇದರ ಬಗ್ಗೆ ಜನ ತೀರ್ಮಾನ ಮಾಡ್ತಾರೆ ಎಂದಿದ್ದಾರೆ.

    ನಾವು ಯಾವುದೇ ಎಂಎಲ್‍ಗಳ ಸಭೆ ಕರೆಯೋ ಹಾಗಿಲ್ಲ. ಬೇರೆಯವರು ಕರೆಯಬಹುದು, ಮಾತನಾಡಬಹುದು. ಇವಕ್ಕೆಲ್ಲಾ ಸೂಕ್ತ ಸಮಯದಲ್ಲಿ ಸೂಕ್ತ ಉತ್ತರ ನೀಡುತ್ತೇನೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ಬಾನು ಮುಷ್ತಾಕ್‌ರಿಂದ ದಸರಾ ಉದ್ಘಾಟನೆಗೆ ಶಾಸಕ ಯತ್ನಾಳ್ ಆಕ್ಷೇಪ

  • ಸಮಯ ಬಂದಾಗ ಮತ್ತೆ ಸಚಿವ ಸ್ಥಾನ ಪಡೆಯುತ್ತೇನೆ: ಕೆ.ಎನ್.ರಾಜಣ್ಣ

    ಸಮಯ ಬಂದಾಗ ಮತ್ತೆ ಸಚಿವ ಸ್ಥಾನ ಪಡೆಯುತ್ತೇನೆ: ಕೆ.ಎನ್.ರಾಜಣ್ಣ

    – ಕಾಣದ ಕೈಗಳ ಕೈವಾಡ ಇದೆ, ಸಿಎಂಗೂ ಅದು ಗೊತ್ತಿಲ್ಲ ಎಂದ ಮಾಜಿ ಸಚಿವ

    ತುಮಕೂರು: ಸಮಯ ಬಂದಾಗ ಇದೇ ಅವಧಿಯಲ್ಲಿ ಸಚಿವ ಸ್ಥಾನ ಮತ್ತೆ ಪಡೆಯುತ್ತೇನೆ. ಹೈಕಮಾಂಡ್ ಕನ್ವಿನ್ಸ್ ಆಗುತ್ತಾರೆ ಎಂಬ ವಿಶ್ವಾಸ ಇದೆ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ (K.N.Rajanna) ಭರವಸೆ ವ್ಯಕ್ತಪಡಿಸಿದರು.

    ಸಚಿವ ಸ್ಥಾನದಿಂದ ವಜಾ ಆದ ಬಳಿಕ ರಾಜಣ್ಣ ತಮ್ಮ ಸ್ವಕ್ಷೇತ್ರ ಮಧುಗಿರಿಗೆ ಇದೇ ಮೊದಲ ಬಾರಿಗೆ ಭೇಟಿ ಕೊಟ್ಟಿದ್ದಾರೆ. ಸ್ವಾತಂತ್ರ‍್ಯ ದಿನಾಚರಣೆ ಹಿನ್ನೆಲೆಯಲ್ಲಿ ತಾಲೂಕು ಆಡಳಿತ ನಡೆಸಿದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗಿಯಾದರು. ಬಳಿಕ ಮಧುಗಿರಿಯ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಇದನ್ನೂ ಓದಿ: ಸಿದ್ದರಾಮಯ್ಯನವರ ಕೈ ಬಲಪಡಿಸುವ ಕಡೆಗೆ ನಮ್ಮ ಚಿಂತನೆ ಇರಲಿ: ಅಭಿಮಾನಿಗಳಿಗೆ ರಾಜಣ್ಣ ಭಾವುಕ ಪತ್ರ

    ಕಳೆದ ವಾರ ಸಚಿವನಾಗಿ ಮಧುಗಿರಿಗೆ ಬಂದಿದ್ದೆ. ಈ ವಾರ ಮಾಜಿ ಸಚಿವನಾಗಿ ಬಂದಿದ್ದೇನೆ. ಇದರಲ್ಲಿ ಯಾವುದೇ ವ್ಯತ್ಯಾಸ ನನಗೆ ಕಾಣುತ್ತಿಲ್ಲ. ಜನರ ಪ್ರೀತಿ-ವಿಶ್ವಾಸ ಒಂದಿದ್ದರೆ ಸಾಕು. ನಿನ್ನೆ ರಾತ್ರಿ ಜಿ ಪರಮೇಶ್ವರ್ ಕೂಡ ನನ್ನ ಮನೆಗೆ ಬಂದು ಕುಶಲೋಪರಿ ವಿಚಾರಿಸಿ ಹೋಗಿದ್ದಾರೆ. ಅಸೆಂಬ್ಲಿ ಮುಗಿದ ಬಳಿಕ ಹೈಕಮಾಂಡ್‌ಗೆ ಭೇಟಿ ಆಗಿ ಸತ್ಯ ವಿವರಿಸುತ್ತೇನೆ. ನನಗೆ ರಾಜಕೀಯ ಏಳು-ಬೀಳು ಹೊಸತಲ್ಲ. ಸಮಯ ಬಂದಾಗ ಮತ್ತೆ ಸಚಿವನಾಗುತ್ತೇನೆ. ಹೈಕಮಾಂಡ್ ಕನ್ವಿನ್ಸ್ ಆಗುತ್ತಾರೆ ಎಂಬ ವಿಶ್ವಾಸ ಇದೆ ಎಂದರು.

    ಶೂ ಭಾಗ್ಯ ನನ್ನ ಮನವಿ ಮೇರೆಗೆ ಜಾರಿ ಮಾಡಿದ್ದು. ರಾಹುಲ್ ಗಾಂಧಿ ಮತಗಳ್ಳತನ ವಿರುದ್ಧ ಹೋರಾಟ ಮಾಡುತ್ತಿದ್ದರು. ಸಿಟಿಯಲ್ಲಿ ಮತಗಳ್ಳತನ ಹೆಚ್ಚಾಗುತ್ತದೆ. ಗ್ರಾಮಾಂತರದಲ್ಲಿ ಮತಗಳ್ಳತನ ಆಗಲ್ಲ. ಆರ್‌ಎಸ್‌ಎಸ್ ನವರು ಬಹಳ ಪದ್ಧತಿ ಪೂರ್ವಕವಾಗಿ ಚುನಾವಣೆ ಮಾಡುತ್ತಾರೆ. ನಮ್ಮ ಕಾರ್ಯಕರ್ತರು ಮತಗಳ್ಳತನ ಕುರಿತಂತೆ ಎಚ್ಚರಿಕೆಯಿಂದ ಇರಬೇಕು. ಮತಗಳ್ಳತನದ ವಿರುದ್ಧದ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲ ಇದೆ. ಅಸೆಂಬ್ಲಿ ಮುಗಿದ ಬಳಿಕ ನಾನು ಹೈಕಮಾಂಡ್‌ಗೆ ಭೇಟಿಯಾಗಿ ವಿವರಿಸುತ್ತೇನೆ. ಆಗ ನನಗೆ ನೈಜ ಕಾರಣ ಗೊತ್ತಾಗುತ್ತದೆ. ನನಗೆ ಯಾವ ಬೇಸರನೂ ಇಲ್ಲ. ಇಂಡಿಯಾ ಒಕ್ಕೂಟಕ್ಕೆ 20 ಸೀಟ್ ಜಾಸ್ತಿ ಪಡೆದರೆ, ಮೋದಿ ಪ್ರಧಾನಿ ಆಗುತ್ತಿರಲಿಲ್ಲ. ನನಗೆ ರಾಜಕೀಯ ಏಳು-ಬೀಳು ಹೊಸತ್ತಲ್ಲ. ಜನರ ವಿಶ್ವಾಸ, ಆಶೀರ್ವಾದ ಇರೋವರೆಗೂ ಎಂತಹ ಸಂದರ್ಭವನ್ನೂ ಎದುರಿಸಬಹುದು. ಅಧಿಕಾರ ಬಂದರೆ ಜನಪರ ಕೆಲಸ ಮಾಡುತ್ತೇನೆ. ನಾನು ಸುಳ್ಳು ಹೇಳೋನು, ಮೋಸ ಮಾಡೋನು ಅಲ್ಲ. ಸ್ವಾರ್ಥಕೋಸ್ಕರ ಸುಳ್ಳು ಹೇಳಿಲ್ಲ. ಅಧಿಕಾರ ಇಲ್ಲದೇ ಹಾಳಾಗಿ ಹೋಗಲಿ. ಜನರ ವಿಶ್ವಾಸ-ಪ್ರೀತಿ ಹೀಗೆ ಇರಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ: ರಾಹುಲ್‌ ಗಾಂಧಿ ನಿರ್ದೇಶನದ ಮೇಲೆ ರಾಜಣ್ಣರನ್ನ ಸಂಪುಟದಿಂದ ವಜಾ ಮಾಡಲಾಗಿದೆ: ಸಿದ್ದರಾಮಯ್ಯ

    ವಿ.ಸೋಮಣ್ಣ ಮಧುಗಿರಿ ಹಾಗೂ ಕೊರಟಗೆರೆಗೆ ಸಾಕಷ್ಟು ಕೆಲಸ ಮಾಡಿದ್ದಾರೆ. ಅದನ್ನು ಹೇಳಿದರೆ ಸೋಮಣ್ಣನ ಹೊಗಳಿದರು ಅಂತಾರೆ. ಶ್ರೀರಾಮುಲು ಅವರನ್ನು ನಾನೇ ಕಾಂಗ್ರೆಸ್‌ಗೆ ಕರೆದುಕೊಂಡು ಬರುತ್ತೇನೆ. ಶ್ರೀರಾಮುಲುಗೆ ನನ್ನ ಮೇಲೆ ವಿಶ್ವಾಸ ಇದೆ. ಹಾಗಾಗಿ ಅವರು ಬಿಜೆಪಿಗೆ ಬರುವಂತೆ ಹೇಳಿರಬಹುದು. ನನಗೆ ಕಾಂಗ್ರೆಸ್ ಏನೂ ಕಡಿಮೆ ಮಾಡಿಲ್ಲ. ಸಿಎಂ ಅಧಿವೇಶನಕ್ಕೆ ಬಂದು ವಿಧಾನ ಸೌಧದಲ್ಲಿ ಇಳಿಯುತ್ತಿದ್ದಂತೆ ಕಾಲ್ ಬಂದಿದೆ. ಸಿಎಂ ಕಾರಿನಲ್ಲೇ ಕುಂತು ಮಾತನಾಡಿದರು. ಅದೇ ಮಾತು ನನ್ನ ವಿಚಾರ ಎಂದರು.

    ನನ್ನ ವಜಾಗೆ ಕಾರಣ ಏನೂ ಅನ್ನೋದು ದೆಹಲಿಗೆ ಹೋದ ನಂತರ ಗೊತ್ತಾಗಲಿದೆ. ಮತಗಳ್ಳತನದ ಹೇಳಿಕೆ ಸೇರಿದಂತೆ ಹಿಂದಿನ ಎಲ್ಲಾ ಹೇಳಿಕೆ ಸೇರಿಸಿ ಹೈಕಮಾಂಡ್‌ಗೆ ಬೇರೆ ರೀತಿ ಅರ್ಥೈಸಿದ್ದಾರೆ. ಪಾರ್ಟಿಯಲ್ಲಿ ವಾಕ್ ಸ್ವಾತಂತ್ರ‍್ಯ ಇದೆ. ನಾನು ಒಳಮೀಸಲಾತಿ ಪರ ಇದ್ದೇನೆ. ಎಡಗೈ ಸಮುದಾಯ ರಾಜಕೀಯ ಪ್ರಾತಿನಿಧ್ಯ ಕುಗ್ಗುತ್ತಿದೆ. ಹಾಗಾಗಿ, ಅವರಿಗೆ ಒಳಮೀಸಲಾತಿ ಕೊಡಬೇಕು. ಸಿಎಂ ಸಿದ್ದರಾಮಯ್ಯರಿಗೆ ಕೂಡ ಒಲವಿದೆ ಎಂದು ಹೇಳಿದರು. ಇದನ್ನೂ ಓದಿ: ಸಚಿವ ಸಂಪುಟದಿಂದ ರಾಜಣ್ಣ ವಜಾ – ಪರಿಷತ್‌ನಲ್ಲಿ ಗದ್ದಲ ಗಲಾಟೆ

    ಅಲ್ಲಿ (ಹೈಕಮಾಂಡ್) ಯಾರಾದರು ನನ್ನ ವಿರುದ್ಧ ಹೇಳೋರಲೂ ಇರಬಹುದು. ಅದಕ್ಕೆ ನಾನು ತಲೆ ಕೆಡಿಸಿಕೊಂಡಿಲ್ಲ. ಕಾಣದ ಕೈಗಳ ಕೈವಾಡ ಇದೆ. ಸಿಎಂಗೂ ಗೊತ್ತಿರಲಿಲ್ಲ. ಏಕಾಏಕಿ ನಿರ್ಣಯ ಆಗಿದೆ. ಸಿಎಂ ಏನೂ ಮಾಡೋಕೆ ಆಗಲ್ಲ ಅಂದರು ಎಂದು ತಿಳಿಸಿದರು.

  • ರಾಜಣ್ಣ ವಜಾ ಹಿಂದೆ ಮಹಾನಾಯಕನ ಪಾತ್ರ ಇದೆ: ರಾಜುಗೌಡ ಹೊಸಬಾಂಬ್

    ರಾಜಣ್ಣ ವಜಾ ಹಿಂದೆ ಮಹಾನಾಯಕನ ಪಾತ್ರ ಇದೆ: ರಾಜುಗೌಡ ಹೊಸಬಾಂಬ್

    – ನಾಗೇಂದ್ರ, ರಾಜಣ್ಣ ಆಯ್ತು, ನೆಕ್ಸ್ಟ್‌ ಸತೀಶ್ ಜಾರಕಿಹೊಳಿ ಮುಗಿಸಲು ಪ್ಲ್ಯಾನ್- ಮಾಜಿ ಸಚಿವ

    ಯಾದಗಿರಿ: ಕೆ.ಎನ್.ರಾಜಣ್ಣ (K.N.Rajanna) ಅವರು ಪ್ರಭಾವಿ ನಾಯಕ. ಅವರ ವಜಾ ಹಿಂದೆ ಮಹಾನಾಯಕನ ಪಾತ್ರ ಇದೆ ಎಂದು ಮಾಜಿ ಸಚಿವ ರಾಜುಗೌಡ (Rajugowda) ಹೊಸ ಬಾಂಬ್ ಸಿಡಿಸಿದ್ದಾರೆ.

    ಸುರಪುರದಲ್ಲಿ ಮಾತನಾಡಿದ ಅವರು, ರಾಜಣ್ಣನ ಬಳಿಕ ಸತೀಶ್ ಜಾರಕಿಹೊಳಿ ಮುಗಿಸಲು ಪ್ಲಾನ್ ಇದೆ. ನಾಗೇಂದ್ರ, ರಾಜಣ್ಣ ಆಯ್ತು ನೆಕ್ಸ್ಟ್ ಸತೀಶ್ ಜಾರಕಿಹೊಳಿ ಸರದಿ. ಓಪನ್ ಆಗಿಯೇ ಹೇಳ್ತೀನಿ. ನಮ್ಮ ಕಮ್ಯುನಿಟಿಯಲ್ಲಿ ನಾವು ಹುಟ್ಟತ್ತಲೇ ನಾಯಕರು. ನಮ್ಮಲ್ಲಿ ಒಬ್ಬರೇ ನಾಯಕರಾಗಬೇಕು ಅಂತೇನಿಲ್ಲ. ರಾಜಣ್ಣ ಮಂತ್ರಿ ಸ್ಥಾನದಿಂದ ಇಳಿದರು ಅಂದ್ರೆ ನಮ್ಮಲ್ಲೇ ಒಬ್ಬರಿಗೆ ಸಿಗುತ್ತೆ ಅಂತ ಪ್ಲ್ಯಾನ್ ಹಾಕ್ತೀವಿ. ಮಂತ್ರಿ ಸ್ಥಾನ ಕೊಡುವ ಆಸೆಯನ್ನ ಮೇಲಿನವರು ತೋರಿಸಿ ಬಿಡ್ತಾರೆ. ನಾನ್ ಮಂತ್ರಿ ಆಗ್ತೀನಿ, ಯಾಕ್ ಇದನ್ನ ಮಾಡೋಣ ಅಂತೀವಿ. ನಮ್ಮಲ್ಲಿ ಒಗ್ಗಟ್ಟು ಇಲ್ಲದೇ ಇರೋದಕ್ಕೆ ರಮೇಶ್ ಜಾರಕಿಹೊಳಿ ಮೇಲೂ ಆ ಕೆಲಸ ಆಯ್ತು. ನಾಗೇಂದ್ರನ ಮೇಲೂ ಆಯ್ತು.. ಇವತ್ತು ರಾಜಣ್ಣಂದು ಇದೆ. ನೆಕ್ಸ್ಟ್ ಸತೀಶ್ ಅಣ್ಣಂದೂ ಇದೆ. ಬೇಕಾದರೇ ನಾಳೆ ಸತೀಶ್ ಅಣ್ಣಂಗೂ ಈ ರೀತಿ ಆದಾಗ ಪ್ಲೇ ಮಾಡಿ ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ರಾಜಕೀಯದಲ್ಲಿ ಒಬ್ಬರ ಮೇಲೆ ಒಬ್ಬರು ಹಗೆ ಸಾಧಿಸ್ತಾರೆ ಎಚ್ಚರಿಕೆಯಿಂದ ಇರಬೇಕು: ಸತೀಶ್ ಜಾರಕಿಹೊಳಿ

    ಕಾಂಗ್ರೆಸ್‌ನಲ್ಲಿರುವ 15 ಜನ ವಾಲ್ಮೀಕಿ ಶಾಸಕರು ರಾಜಣ್ಣನ ಪರ ಹೇಳಿಕೆ ಕೊಡ್ರಿ. ಅವಾಗ ಕಾಂಗ್ರೆಸ್ ಹೈಕಮಾಂಡ್ ಬಂದು ಯಥಾಸ್ಥಿತಿ ರಾಜಣ್ಣನಿಗೆ ಸಚಿವ ಸ್ಥಾನ ಕೊಡ್ತಾರೆ. ವಾಲ್ಮೀಕಿ ನಾಯಕರಿಗೆ ನೆಕ್ಸ್ಟ್ ನೀನೆ ಸಿಎಂ ಅಂತ ಕಿವಿಯಲ್ಲಿ ಹೋವಿಟ್ಟು ಹೇಳ್ತಾರೆ. ಆ ಆಸೆಗೆ ಬಿದ್ದು ಇವತ್ತು ಸಮಾಜವೇ ರಾಜಣ್ಣನ ಬಲಿ ಕೊಡುವ ಕೆಲಸ ಆಗ್ತಿದೆ. ರಾಜಣ್ಣನ ದೆಹಲಿಗೆ ಕರೆದುಕೊಂಡು ಹೋಗ್ತಾರೆ, ಸ್ವಲ್ಪ ದಿನ ಹೋಗಲಿ ಅಂತ ರಾಜಣ್ಣನ ಸಮಾಧಾನ ಮಾಡ್ತಾರೆ. ಅದಕ್ಕೇನಾದ್ರೂ ರಾಜಣ್ಣ ಸಮಾಧಾನವಾದರೆ, ಅವರ ರಾಜಕೀಯ ಭವಿಷ್ಯ ಮುಗಿದ ಅಧ್ಯಾಯ. ಸತೀಶಣ್ಣನ ನೇತೃತ್ವದಲ್ಲಿ ವಾಲ್ಮೀಕಿ ಸಮುದಾಯದ ಶಾಸಕರು ರಾಜಣ್ಣ ಪರ ಪ್ರತಿಭಟಿಸಬೇಕು. ಹಾಗೇನಾದರೂ ಮಾಡಿದರೆ ನಾವು ಮುಂದೆ ರಾಜ್ಯದಲ್ಲಿ ರಾಜಕೀಯ ಮಾಡಬಹುದು. ಇಲ್ಲದಿದ್ದರೆ ಈ ಸಮಾಜದವರಲ್ಲಿ ಒಗ್ಗಟ್ಟಿಲ್ಲ, ಇವರಲ್ಲಿ ಹೊಂದಾಣಿಕೆ ಇಲ್ಲ. ಇವರನ್ನ ಹೇಗೆ ಬೇಕಾದರೂ ಬಲಿ ಕಾ ಬಕ್ರಾ ಮಾಡಬಹುದು ಅಂತ ತೆಗೆದುಕೊಂಡು ಹೋಗ್ತಾರೆ ಎಂದು ಎಚ್ಚರಿಸಿದ್ದಾರೆ.

    ರಾಜಣ್ಣ ವಜಾ ಹಿಂದೆ ಮಹಾನಾಯಕನ ಪಾತ್ರ ಇದೆ. ಹಿಂದೆ ಪ್ಲ್ಯಾನ್ ಮಾಡಿ ರಮೇಶ್ ಜಾರಕಿಹೊಳಿ ಅವರನ್ನ ಕೇಳಗೆ ಇಳಿಸಿದ್ರು. ಈಗ ರಾಜಣ್ಣ ಅವರಿಗೆ ಪ್ಲ್ಯಾನ್ ಮಾಡಿದ್ರು, ಆದ್ರೆ ಅವರು ಹನಿಟ್ರ್ಯಾಪ್ ನಿಂದ ಬಚಾವ್ ಆದ್ರು. ಅವರನ್ನ ಹೇಗೆ ಮುಗಿಸಬೇಕು ಅಂತ ಪ್ಲಾö್ಯನ್ ಮಾಡಿದ್ರು. ಯಾಕೆಂದರೆ ರಾಜಣ್ಣ ಅವರ ಕ್ಷೇತ್ರದಲ್ಲಿ ಪ್ರಭಾವಿ ನಾಯಕ. ಅವರ ಮಗನನ್ನ ಪರಿಷತ್ ಸದಸ್ಯನಾಗಿ ಆಯ್ಕೆ ಮಾಡಿಸಿದ್ರು.‌ ಮಹಾನಾಯಕನಿಗೆ ಯಾರು ಎದುರು ಆಗ್ತಾರೆ, ಎಲ್ಲರನ್ನೂ ಮುಗಿಸ್ತಾರೆ. ರಾಹುಲ್ ಗಾಂಧಿಗೆ ಕನ್ನಡ ಬರಲ್ಲ.. ಹೀಗಾಗಿ, ಅವರ ಸ್ಟೇಟ್ಮೆಂಟ್ ತಿರುಚಿ ಅವರಿಗೆ ಹೇಳಿದ್ದಾರೆ. ರಾಜಣ್ಣ ಅವರಿಗೆ ಯಾವ ಪಕ್ಷವೂ ಸಹ ಬೇಡ ಅಂತ ಹೇಳಲ್ಲ. ಮೂರ್ನಾಲ್ಕು ಕ್ಷೇತ್ರದಲ್ಲಿ ಅವರದ್ದು ಪ್ರಭಾವವಿದೆ. ರಾಜಣ್ಣ ಅವರು ಸಾಮಾನ್ಯ ನಾಯಕ ಅಲ್ಲ, ಪ್ರಭಾವಿ ನಾಯಕ. ಕೆಲವರು ಪಕ್ಷದಿಂದ ಮಹಾನಾಯಕ ಆಗಿದ್ದಾರೆ, ಆದ್ರೆ ರಾಜಣ್ಣ ಜನರಿಂದ ಮಹಾನಾಯಕರಾಗಿದ್ದಾರೆ ಎಂದು ಟಾಂಗ್ ಕೊಟ್ಟಿದ್ದಾರೆ. ಇದನ್ನೂ ಓದಿ: ಕೆ.ಎನ್.ರಾಜಣ್ಣರನ್ನ ಸಂಪುಟದಿಂದ ತೆಗೆದದ್ದು ದುರದೃಷ್ಟಕರ, ಹೀಗೆ ಆಗಬಾರದಿತ್ತು: ಬಿ.ಕೆ.ಹರಿಪ್ರಸಾದ್‌

    ರಾಜಣ್ಣಗೆ ಪಕ್ಷ ಅವಶ್ಯಕತೆ ಇಲ್ಲ, ಪಕ್ಷಕ್ಕೆ ಅವರ ಅವಶ್ಯಕತೆಯಿದೆ. ರಾಜಣ್ಣ ಈ ಅನ್ಯಾಯದ ವಿರುದ್ಧ ಪ್ರತಿಭಟಿಸಿಲ್ಲ ಅಂದ್ರೆ ಅವರದ್ದು ಅಷ್ಟೇ ಅಲ್ಲ ಅವರ ಮಗನ ರಾಜಕೀಯ ಕೂಡ ಮುಗಿದು ಹೋಗುತ್ತದೆ. ಗಟ್ಟಿಯಾಗಿ ಹುಲಿ ತರಹ ಹೊರಗೆ ಬಂದು ಪ್ರತಿಭಟಿಸಿದ್ರು ಹೀರೊ ಆಗ್ತೀರಾ ಎಂದು ಮಾತನಾಡಿದ್ದಾರೆ.

  • ಕೆ.ಎನ್.ರಾಜಣ್ಣರನ್ನ ಸಂಪುಟದಿಂದ ತೆಗೆದದ್ದು ದುರದೃಷ್ಟಕರ, ಹೀಗೆ ಆಗಬಾರದಿತ್ತು: ಬಿ.ಕೆ.ಹರಿಪ್ರಸಾದ್‌

    ಕೆ.ಎನ್.ರಾಜಣ್ಣರನ್ನ ಸಂಪುಟದಿಂದ ತೆಗೆದದ್ದು ದುರದೃಷ್ಟಕರ, ಹೀಗೆ ಆಗಬಾರದಿತ್ತು: ಬಿ.ಕೆ.ಹರಿಪ್ರಸಾದ್‌

    – ಯಡಿಯೂರಪ್ಪರನ್ನ ಸಿಎಂ ಸ್ಥಾನದಿಂದ ತೆಗೆದಾಗ ಬಿಜೆಪಿಯವ್ರು ಎಲ್ಲಿ ಹೋಗಿದ್ರು: ಕಾಂಗ್ರೆಸ್‌ ನಾಯಕ ಪ್ರಶ್ನೆ

    ನವದೆಹಲಿ: ಹೈಕಮಾಂಡ್ ನಿರ್ದೇಶನ ಮೇರೆಗೆ ಕೆ.ಎನ್.ರಾಜಣ್ಣ (K.N.Rajanna) ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಲಾಗಿದೆ. ಕೆಲವು ವಿಚಾರಕ್ಕೆ ಪಕ್ಷದಲ್ಲಿ ಶಿಸ್ತು ಮೀರಿ ಹೋದಾಗ ಇಂತಹ ಕ್ರಮ ಆಗುತ್ತವೆ. ಇದು ದುರದೃಷ್ಟಕರ, ಹೀಗೆ ಆಗಬಾರದಿತ್ತು ಎಂದು ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ (B.K.Hariprasad) ಹೇಳಿದರು.

    ಕೆ‌.ಎನ್.ರಾಜಣ್ಣ ಅವರನ್ನು ಸಂಪುಟದಿಂದ ವಜಾ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಮಾತನಾಡಿದ ಅವರು, ರಾಜಣ್ಣ ಅವರದ್ದೇ ಆದ ಕೊಡುಗೆ ರಾಜ್ಯಕ್ಕೆ ಇದೆ. ಅವರ ತಪ್ಪುಗಳ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತೆ ಎಂದರು. ಇದನ್ನೂ ಓದಿ: ಸಚಿವ ಸಂಪುಟದಿಂದ ರಾಜಣ್ಣ ವಜಾ – ಪರಿಷತ್‌ನಲ್ಲಿ ಗದ್ದಲ ಗಲಾಟೆ

    ರಾಜಣ್ಣನಿಗೆ ಅನ್ಯಾಯ ಆಗಿದೆ ಎಂದು ಬಿಜೆಪಿ ನಾಯಕರು ಮೊಸಳೆ ಕಣ್ಣೀರು ಹಾಕುತ್ತಿದ್ದಾರೆ. ಪಾಪ ಬಿಜೆಪಿ ಸತ್ಯಹರಿಶ್ಚಂದ್ರರು, ಯಡಿಯೂರಪ್ಪರನ್ನ ಸಿಎಂ ಸ್ಥಾನದಿಂದ ತೆಗೆದು ಹಾಕಿದಾಗ ಎಲ್ಲಿ ಹೋಗಿದ್ದರು? ಈ ಸತ್ಯವಂತರು, ಜಗದೀಶ್ ಶೆಟ್ಟರ್, ಬಸನಗೌಡ ಪಾಟೀಲ್ ಯತ್ನಾಳರನ್ನ ಆರು ವರ್ಷ ವಜಾ ಮಾಡಿದಾಗ ಈ ಸತ್ಯವಂತರು ಎಲ್ಲಿ ಹೋಗಿದ್ದರು ಎಂದು ಟಾಂಗ್‌ ಕೊಟ್ಟರು.

    ರಾಜೀನಾಮೆ ಹಿಂದೆ ಷಡ್ಯಂತ್ರ ಇದೆ ಎಂದು ರಾಜಣ್ಣ ಹೇಳಿದ್ದಾರೆ. ರಾಜಕೀಯದಲ್ಲಿ ಷಡ್ಯಂತ್ರ ಇರೋದು ಸಹಜ. ಅದನ್ನೆಲ್ಲ ಹೆದರಿಸಬೇಕು. ಅವರು ಸುಮ್ಮನೆ ಕೂರುವ ವ್ಯಕ್ತಿ ಅಲ್ಲ. ನಿಷ್ಠುರವಾದ ವ್ಯಕ್ತಿ, ಮುಂದೆ ಕುಳಿತು ಮಾತಾಡಿ ಸರಿ ಮಾಡುವ ಪ್ರಯತ್ನ ಮಾಡಲಾಗುತ್ತದೆ. ಕೆಲವು ವಿಚಾರದಲ್ಲಿ ಹೈಕಮಾಂಡ್ ತೀರ್ಮಾನ ಅಂತಿಮ. ಮುಂದೆ ಹೀಗಾಗಬಾರದು ಎನ್ನುವುದಕ್ಕೆ ಇದು ಎಚ್ಚರಿಕೆ ಗಂಟೆ. ಇದು ಶಾಸಕರಿಗೂ ಸಚಿವರಿಗೂ ಎಲ್ಲರಿಗೂ ಅನ್ವಯಿಸಲಿದೆ ಎಂದರು. ಇದನ್ನೂ ಓದಿ: ರಾಜಕೀಯದಲ್ಲಿ ಒಬ್ಬರ ಮೇಲೆ ಒಬ್ಬರು ಹಗೆ ಸಾಧಿಸ್ತಾರೆ ಎಚ್ಚರಿಕೆಯಿಂದ ಇರಬೇಕು: ಸತೀಶ್ ಜಾರಕಿಹೊಳಿ

    ಧರ್ಮಸ್ಥಳ ವಿಚಾರದಲ್ಲಿ ಬಿಜೆಪಿ ಹೋರಾಟ ವಿಚಾರವಾಗಿ ಮಾತನಾಡಿ, ಕಾನೂನು ತನ್ನ ಕಾರ್ಯನಿರ್ವಹಿಸುವ ಸಂದರ್ಭದಲ್ಲಿ ಬಿಜೆಪಿಯವರು ನಿರುದ್ಯೋಗಿಗಳಾಗಿದ್ದಾರೆ. ಇದರಲ್ಲಿ ಅವರು ಉದ್ಯೋಗವನ್ನ ಹುಡುಕುತ್ತಿದ್ದಾರೆ. ಆರೋಪ ಬಂದಿದೆ. ತನಿಖೆ ನಡೆಯುತ್ತಿದೆ. ಎಸ್‌ಐಟಿ ತನ್ನ ತನಿಖೆಯನ್ನ ತ್ವರಿತವಾಗಿ ಮುಗಿಸಬೇಕು. ಸರ್ಕಾರ ನಿರ್ದಿಷ್ಟ ಕಾಲಮಿತಿ ನೀಡಬೇಕು. ಧರ್ಮಸ್ಥಳ ಕ್ಷೇತ್ರಕ್ಕೆ ಕೆಟ್ಟ ಹೆಸರು ಅಪನಂಬಿಕೆ ಬರಬಾರದು ಎಂದು ಹೇಳಿದರು.

  • ಸಚಿವ ಸ್ಥಾನದಿಂದ ಕೆ.ಎನ್.ರಾಜಣ್ಣ ವಜಾ ಖಂಡಿಸಿ ಬೆಂಬಲಿಗರ ಆಕ್ರೋಶ – ಮಧುಗಿರಿ ಬಂದ್

    ಸಚಿವ ಸ್ಥಾನದಿಂದ ಕೆ.ಎನ್.ರಾಜಣ್ಣ ವಜಾ ಖಂಡಿಸಿ ಬೆಂಬಲಿಗರ ಆಕ್ರೋಶ – ಮಧುಗಿರಿ ಬಂದ್

    ತುಮಕೂರು: ಸಚಿವ ಸ್ಥಾನದಿಂದ ಕೆ.ಎನ್.ರಾಜಣ್ಣ ಅವರನ್ನು ವಜಾ ಮಾಡಿರುವುದಕ್ಕೆ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಧುಗಿರಿ ಪಟ್ಟಣ ಬಂದ್ ಮಾಡಿ ಮಂಗಳವಾರ ಪ್ರತಿಭಟನೆ ನಡೆಸಿದರು.

    ರಾಜಣ್ಣ ಬೆಂಬಲಿಗರು ಮತ್ತು ಅಭಿಮಾನಿಗಳು ಮಧುಗಿರಿ ಪಟ್ಟಣದಲ್ಲಿ ಜಮಾವಣೆಗೊಂಡರು. ಬಸ್ ನಿಲ್ದಾಣದ ಸರ್ಕಲ್‌ನಲ್ಲಿ ಟೈರ್‌ಗೆ ಬೆಂಕಿ ಹಚ್ಚಲು ಮುಂದಾದರು. ಈ ವೇಳೆ ಅವರನ್ನು ಪೊಲೀಸರು ತಡೆದರು. ರಾಜಣ್ಣರ ರಾಜೀನಾಮೆ ವಾಪಸ್ ಪಡೆಯುವಂತೆ ಬೆಂಬಲಿಗರು ಒತ್ತಾಯಿಸಿದರು. ಬಳಿಕ ಪಾದಯಾತ್ರೆ ಮೂಲಕ ಎಸಿ ಕಚೇರಿ ವರೆಗೆ ಅಭಿಮಾನಿಗಳು ಸಾಗಿದರು.

    ಬೇಕೆ ಬೇಕು ನ್ಯಾಯ ಬೇಕು ಎಂದು ಎಸಿ ಕಚೇರಿ ಬಳಿ ಜಮಾಯಿಸಿದ ಪ್ರತಿಭಟನಾಕಾರರು ಘೋಷಣೆ ಕೂಗಿದರು. ಅವರನ್ನು ಚದುರಿಸಲು ಪೊಲೀಸರು ಹರಸಾಹಸಪಟ್ಟರು. ಎಸಿ ಕಚೇರಿಯಿಂದ ತುಮಕೂರು ಗೇಟ್ ವರೆಗೂ ರಾಜಣ್ಣ ಬೆಂಬಲಿಗರ ಪಾದಯಾತ್ರೆ ನಡೆಯಿತು.

    ತುಮಕೂರು ಗೇಟ್‌ನ ರಸ್ತೆಯಲ್ಲಿ ಪ್ರತಿಭಟನಾಕಾರರು ಧರಣಿ ಕುಳಿತರು. ಇದೇ ವೇಳೆ, ಬೇಕರಿಯೊಂದಕ್ಕೆ ನುಗ್ಗಲು ಪ್ರಯತ್ನಿಸಿದರು. ಎಂಜಿ ಕ್ರೀಡಾಂಗಣದ ಬಳಿ ಬೆಂಬಲಿಗರು ಹೈಡ್ರಾಮಾ ನಡೆಸಿದರು. ಅಭಿಮಾನಿಯೊಬ್ಬ ವಿಷ ಕುಡಿಯಲು ಪ್ರಯತ್ನಿಸಿದ ಪ್ರಸಂಗವೂ ನಡೆಯಿತು. ಆತನನ್ನು ತಕ್ಷಣವೇ ಅಂಬುಲೆನ್ಸ್ನಲ್ಲಿ ಆಸ್ಪತ್ರೆಗೆ ದಾಖಲಿಸಲಾಯಿತು.

    ತಮ್ಮ ಸಡಿಲ ಹೇಳಿಕೆಗಳ ಮೂಲಕವೇ ಪಕ್ಷದೊಳಗಡೆ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದ ಕೆ.ಎನ್.ರಾಜಣ್ಣ ಅವರನ್ನು ಹೈಕಮಾಂಡ್ ಸೂಚನೆ ಮೇರೆಗೆ ಸಿಎಂ ಸಿದ್ದರಾಮಯ್ಯ ಅವರು ಸೋವಾರ ಸಂಪುಟದಿಂದ ವಜಾಗೊಳಿಸಿದರು. ಈ ಸಂಬಂಧ ರಾಜಣ್ಣ ಬೇಸರಗೊಂಡಿದ್ದಾರೆ. ಬೆಂಬಲಿಗರು ಆಕ್ರೋಶ ಹೊರಹಾಕಿದ್ದಾರೆ.

  • ನನ್ನ ಮಾತು ಇಷ್ಟೊಂದು ತೀವ್ರ ಸ್ವರೂಪಕ್ಕೆ ಹೋಗುತ್ತೆ ಅಂತ ಗೊತ್ತಿರಲಿಲ್ಲ: ರಾಜಣ್ಣ ಪಶ್ಚಾತ್ತಾಪದ ಮಾತು

    ನನ್ನ ಮಾತು ಇಷ್ಟೊಂದು ತೀವ್ರ ಸ್ವರೂಪಕ್ಕೆ ಹೋಗುತ್ತೆ ಅಂತ ಗೊತ್ತಿರಲಿಲ್ಲ: ರಾಜಣ್ಣ ಪಶ್ಚಾತ್ತಾಪದ ಮಾತು

    – ಪರಮೇಶ್ವರ್ ಜೊತೆ 1 ಗಂಟೆಗೂ ಹೆಚ್ಚು ಕಾಲ ರಾಜಣ್ಣ ಮಾತುಕತೆ

    ಬೆಂಗಳೂರು: ಸಚಿವ ಸಂಪುಟದಿಂದ ವಜಾ ಆಗಿರುವ ಬಗ್ಗೆ ಕೆ.ಎನ್.ರಾಜಣ್ಣ (K.N.Rajanna) ಬೇಸರಗೊಂಡಿದ್ದಾರೆ. ಸಚಿವ ಪರಮೇಶ್ವರ್ ಜೊತೆ ರಾಜಣ್ಣ ಪಶ್ಚಾತ್ತಾಪದ ಮಾತುಗಳನ್ನಾಡಿದ್ದಾರೆ.

    ಪರಮೇಶ್ವರ್ ಜೊತೆ ಒಂದು ಗಂಟೆಗೂ ಹೆಚ್ಚು ಕಾಲ ರಾಜಣ್ಣ ಮಾತುಕತೆ ನಡೆಸಿದ್ದಾರೆ. ನೀವು ಈ ರೀತಿ ಮಾತನಾಡಬಾರದಿತ್ತು ಎಂದು ಪರಮೇಶ್ವರ್ ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ನನ್ನ ವಜಾದ ಹಿಂದೆ ಪಿತೂರಿ, ಷಡ್ಯಂತ್ರವಿದೆ – ಯಾರು ಹಿಂದಿದ್ದಾರೆ ಗೊತ್ತಿದೆ: ರಾಜಣ್ಣ ಬಾಂಬ್‌

    ಅದಕ್ಕೆ ಪ್ರತಿಕ್ರಿಯಿಸಿದ ರಾಜಣ್ಣ, ನನ್ನ ಮಾತು ಇಷ್ಟೊಂದು ತೀವ್ರ ಸ್ವರೂಪಕ್ಕೆ ಹೋಗುತ್ತೆ ಅಂತ ಗೊತ್ತಿರಲಿಲ್ಲ. ನನ್ನ ಮಾತಿನಿಂದ ಹೀಗಾಗುತ್ತೆ ಎಂದೂ ತಿಳಿಯಲಿಲ್ಲ ಎಂದು ಮಾತನಾಡಿದ್ದಾರೆ ಎನ್ನಲಾಗಿದೆ.

    ತಮ್ಮ ಸಡಿಲ ಹೇಳಿಕೆಗಳಿಂದಲೇ ಪಕ್ಷದೊಳಗಡೆ ರಾಜಣ್ಣ ವಿವಾದಗಳನ್ನು ಮೈಮೇಲೆ ಎಳೆದುಕೊಂಡಿದ್ದರು. ಕ್ಷಿಪ್ರ ರಾಜಕೀಯ ಬೆಳವಣಿಗೆಯೊಂದರಲ್ಲಿ ಹೈಕಮಾಂಡ್ ಸೂಚನೆ ಮೇರೆಗೆ ರಾಜಣ್ಣರನ್ನು ಸಿಎಂ ಸಿದ್ದರಾಮಯ್ಯ ಅವರು ಸಂಪುಟದಿಂದ ವಜಾ ಮಾಡಿದ್ದಾರೆ. ಇದನ್ನೂ ಓದಿ: ಸಂಪುಟದಿಂದ ರಾಜಣ್ಣ ಕಿಕ್‌ಔಟ್‌ – ಆಪ್ತನ ತಲೆದಂಡದಿಂದ ಮೌನಕ್ಕೆ ಶರಣಾದ ಸಿಎಂ

    ವಜಾಗೊಳಿಸುವ ಮುನ್ನ ಹೈಕಮಾಂಡ್ ಮನವೊಲಿಕೆಗೆ ಸಿದ್ದರಾಮಯ್ಯ ಮುಂದಾಗಿದ್ದರು. ಮೊದಲು ವೇಣುಗೋಪಾಲ್ ಮೂಲಕ ಸಿಎಂಗೆ ಕಾಲ್ ಬಂದಿತ್ತು. ರಾಜಣ್ಣ ರಾಜೀನಾಮೆ ಪಡೆಯಿರಿ ಎಂದು ಸಂದೇಶ ರವಾನೆಯಾಯಿತು. ಆದರೆ, ಆಗ ಒಪ್ಪದೇ ಸಿಎಂ ಸಮಯ ಕೇಳಿದ್ದರು. ಅಧಿವೇಶನ ಮುಗಿದ ಬಳಿಕ ನೋಡೋಣ ಎಂದಿದ್ದರು. ಹೈಕಮಾಂಡ್ ಬಳಿ ಸಿಎಂ 10 ದಿನ ಟೈಂ ಕೇಳಿದ್ದರು. ಆಗ ರಾಹುಲ್ ಬಳಿ ಮಾತನಾಡುವಂತೆ ವೇಣುಗೋಪಾಲ್ ಸಲಹೆ ನೀಡಿದ್ದರು ಎನ್ನಲಾಗಿದೆ.

    ಆದರೆ, ರಾಜಣ್ಣರನ್ನು ಸಂಪುಟದಿಂದ ವಜಾ ಮಾಡುವಂತೆ ರಾಹುಲ್ ಗಾಂಧಿ ಅವರು ಸಿಎಂಗೆ ಸೂಚನೆ ನೀಡಿದ್ದಾರೆ. ಅದಾದ ಬಳಿಕ ಆಪ್ತ ರಾಜಣ್ಣ ವಜಾಗೆ ರಾಜ್ಯಪಾಲರಿಗೆ ಸಿಎಂ ಶಿಫಾರಸು ಮಾಡಿದರು.

  • ರಾಜಣ್ಣ ಕಿಕ್‌ಔಟ್‌ | ಕಾಂಗ್ರೆಸ್‍ನಲ್ಲಿ ಸತ್ಯವಂತರಿಗೆ ಕಾಲವಿಲ್ಲ: ಶೋಭಾ ಕರಂದ್ಲಾಜೆ

    ರಾಜಣ್ಣ ಕಿಕ್‌ಔಟ್‌ | ಕಾಂಗ್ರೆಸ್‍ನಲ್ಲಿ ಸತ್ಯವಂತರಿಗೆ ಕಾಲವಿಲ್ಲ: ಶೋಭಾ ಕರಂದ್ಲಾಜೆ

    ನವದೆಹಲಿ: ಕೆ.ಎನ್ ರಾಜಣ್ಣ  (K.N Rajanna) ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ ಎಂದು ಗೊತ್ತಾಗಿದೆ. ಕಾಂಗ್ರೆಸ್‍ನಲ್ಲಿ (Congress) ಸತ್ಯವಂತರಿಗೆ ಕಾಲವಿಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ವಾಗ್ದಾಳಿ ನಡೆಸಿದ್ದಾರೆ.

    ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ರಾಹುಲ್ ಗಾಂಧಿ (Rahul Gandhi) ಅವರ ಹೇಳಿಕೆಗೆ ರಾಜಣ್ಣ ಸತ್ಯವಾದ ಉತ್ತರ ಕೊಟ್ಟಿದ್ದರು. ಸತ್ಯದ ಅರಿವಾಗುತ್ತಿದೆ, ಸಹಜವಾಗಿ ಮಹಾದೇವಪುರದಲ್ಲಿ ಮತದಾರರು ಹೆಚ್ಚಾಗುತ್ತಿದ್ದಾರೆ. ಹೆಚ್ಚಿನ ಮತದಾನ ಅಲ್ಲಿ ಆಗುತ್ತಿದೆ. ಬಿಜೆಪಿಗೆ ಹೆಚ್ಚು ಮತ ಬಂದಿದೆ. ಪಿ.ಸಿ ಮೋಹನ್ ಗೆದ್ದಿದ್ದರು. ರಾಜಣ್ಣ ಇದೇ ಸತ್ಯ ಹೇಳಿದ್ದರು ಎಂದಿದ್ದಾರೆ. ಇದನ್ನೂ ಓದಿ: ರಾಜಣ್ಣ ರಾಜೀನಾಮೆ ಅಲ್ಲ, ಸಂಪುಟದಿಂದಲೇ ಕಿಕ್‌ಔಟ್‌

    ನಮ್ಮ ಸರ್ಕಾರ ಇತ್ತು, ನಮ್ಮದೇ ತಪ್ಪು ಎಂದು ರಾಜಣ್ಣ ಹೇಳಿದ್ದರು. ಜನರ ಪ್ರಶ್ನೆಯನ್ನೇ ಅವರು ಕೇಳಿದ್ದರು. ಸತ್ಯ ಹೇಳಿದ್ದಕ್ಕೆ ಅರಗಿಸಿಕೊಳ್ಳಲಾಗದೇ ರಾಜೀನಾಮೆ ಪಡೆಯಲಾಗಿದೆ. ರಾಹುಲ್ ಗಾಂಧಿ ಸತ್ಯ ಎಂದು ಹೇಳುತ್ತಾರೆ. ಯಾಕೆ ಅಫಿಡೆವಿಟ್ ಸಲ್ಲಿಕೆ ಮಾಡುತ್ತಿಲ್ಲ. ರಾಜಣ್ಣ ಅವರು ಸಿದ್ದರಾಮಯ್ಯ ಅವರಿಗೆ ಆಪ್ತರು. ಇವತ್ತು ಸಿದ್ದರಾಮಯ್ಯ ಅವರಿಗೂ ರಾಜಣ್ಣರನ್ನು ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ. ಈ ಮೂಲಕ ದೇಶಕ್ಕೆ ರಾಹುಲ್ ಗಾಂಧಿಯವರ ಸುಳ್ಳು ಗೊತ್ತಾಗಿದೆ ಎಂದು ಕಿಡಿಕಾರಿದ್ದಾರೆ.

    ಸತ್ಯ ಹೇಳಿದರೆ ಅಫಿಡೆವಿಟ್ ಸಲ್ಲಿಸಲು ಯಾಕೆ ಹೆದರಬೇಕು? ಅಮೇಥಿ, ರಾಯ್‍ಬರೇಲಿ, ಸಿದ್ದರಾಮಯ್ಯ ಅವರ ಕ್ಷೇತ್ರದಲ್ಲಿ ಮನೆ ವಿಳಾಸ ಸರಿಯಾಗಿ ಇಲ್ಲದಿದ್ದರೆ ಸೊನ್ನೆ ಎಂದು ಬರುತ್ತದೆ. ಅದನ್ನು ಸುಳ್ಳು ಮತದಾರರು ಎಂದರೆ? ಚಿಕ್ಕ ಚಿಕ್ಕ ಮನೆಯಲ್ಲಿ ಬೇರೆ ಬೇರೆ ಕಡೆಯಿಂದ ಜನರು ಬಂದಿರುತ್ತಾರೆ. ಒಂದೇ ನೋಂದಣಿ ಇರುವ ಮನೆಯಲ್ಲಿ ವಠಾರ ಮಾಡಿಕೊಂಡು ಜನರು ಬದುಕುತ್ತಾರೆ. ಬಿಎಲ್‍ಎಗಳನ್ನು ಯಾಕೆ ಮಾಡುತ್ತಾರೆ? ಅವರದೇ ಸರ್ಕಾರ ಇತ್ತಲ್ಲ, ಯಾಕೆ ಅವರು ಪ್ರಶ್ನೆ ಮಾಡಲಿಲ್ಲ? ಎಂದು ಕಾಂಗ್ರೆಸ್ ನಾಯಕರಿಗೆ ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ನಿಂದಲೇ ರಾಜಣ್ಣ ಉಚ್ಚಾಟನೆ? – ಆಪ್ತನನ್ನು ಉಳಿಸಲು ಸಿಎಂ ಕಸರತ್ತು

  • ರಾಜಣ್ಣ ರಾಜೀನಾಮೆ ಅಲ್ಲ, ಸಂಪುಟದಿಂದಲೇ ಕಿಕ್‌ಔಟ್‌

    ರಾಜಣ್ಣ ರಾಜೀನಾಮೆ ಅಲ್ಲ, ಸಂಪುಟದಿಂದಲೇ ಕಿಕ್‌ಔಟ್‌

    ಬೆಂಗಳೂರು: ಸಚಿವ ಸ್ಥಾನಕ್ಕೆ ಕೆ.ಎನ್‌ ರಾಜಣ್ಣ (K.N Rajanna) ಅವರು ರಾಜೀನಾಮೆ ನೀಡಿಲ್ಲ. ಹೈಕಮಾಂಡ್‌ ಸೂಚನೆ ಮೇರೆಗೆ ಅವರನ್ನು  ಸಂಪುಟದಿಂದಲೇ ವಜಾ ಮಾಡಲಾಗಿದೆ.

    ಕೆಎನ್‌ ರಾಜಣ್ಣ ರಾಜೀನಾಮೆ ಪಡೆಯದೇ ಸಿಎಂ ಸಿದ್ದರಾಮಯ್ಯ ಸಂಪುಟದಿಂದಲೇ ವಜಾ ಮಾಡಿದ್ದಾರೆ. ಹೌದು, ಆರಂಭದಲ್ಲಿ ಕೆಎನ್‌ ರಾಜಣ್ಣ ರಾಜೀನಾಮೆ ನೀಡಿದ್ದಾರೆ ಎಂಬ ಸುದ್ದಿ ಬಂದಿತ್ತು. ಆದರೆ  ಅವರ ರಾಜೀನಾಮೆ ಏನು ಪಡೆಯಲಿಕ್ಕೆ ಏನಿದೆ? ಸಂಪುಟದಿಂದಲೇ ವಜಾಗೊಳಿಸಿ ಎಂದು ಸಿಎಂಗೆ ಹೈಕಮಾಂಡ್‌ ಸೂಚನೆ ನೀಡಿತ್ತು. ಇದನ್ನೂ ಓದಿ: ಕಾಂಗ್ರೆಸ್‌ನಿಂದಲೇ ರಾಜಣ್ಣ ಉಚ್ಚಾಟನೆ? – ಆಪ್ತನನ್ನು ಉಳಿಸಲು ಸಿಎಂ ಕಸರತ್ತು

    ಹೈಕಮಾಂಡ್‌ ಖಡಕ್‌ ಆದೇಶದಂತೆ ಸಿಎಂ ಸಿದ್ದರಾಮಯ್ಯ ತಮ್ಮ ಆಪ್ತ ರಾಜಣ್ಣ ಅವರನ್ನು ವಜಾಗೊಳಿಸಿದ್ದಾರೆ. ಇದನ್ನೂ ಓದಿ: ರಾಹುಲ್‌ ಖಡಕ್‌ ಸೂಚನೆ ಬೆನ್ನಲ್ಲೇ ರಾಜಣ್ಣ ರಾಜೀನಾಮೆ!

    ಮುಜುಗರ ತಪ್ಪಿಸಲು ರಾಜೀನಾಮೆ ಪತ್ರ
    ವಜಾಗೊಳಿಸುವ ಮುಜುಗರವನ್ನು ತಪ್ಪಿಸಲು ರಾಜಣ್ಣ ಅವರು ತಮ್ಮ ಪುತ್ರ, ಪರಿಷತ್‌ ಸದಸ್ಯ ರಾಜೇಂದ್ರ ಮೂಲಕ ಸಿಎಂಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದರು. ಆದರೆ ಹೈಕಮಾಂಡ್‌ ಖಡಕ್‌ ಸೂಚನೆಯ ಹಿನ್ನೆಲೆಯಲ್ಲಿ ಸಿಎಂ ರಾಜೀನಾಮೆ ಪತ್ರವನ್ನು ಅಂಗೀಕರಿಸದೇ ಸಂಪುಟದಿಂದಲೇ ವಜಾಗೊಳಿಸುವಂತೆ ರಾಜ್ಯಪಾಲರಿಗೆ ಶಿಫಾರಸು ಮಾಡಿದ್ದರು.

    ಸಿಎಂ ಶಿಫಾರಸಿನಂತೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ರಾಜಣ್ಣ ಅವರನ್ನು ವಜಾಗೊಳಿಸುವ ಗೆಜೆಟ್ ಅಧಿಸೂಚನೆಗೆ ಸಹಿ ಹಾಕಿದ್ದಾರೆ.