Tag: k r nagar

  • ಸಾ.ರಾ. ಬಾಸ್‌ಗೆ ದೇಶ ಕಾಯುವ ಸೈನಿಕನಿಂದ ಮೊದಲ ಮತ – ವೋಟ್‌ ಹಾಕಿ ಬ್ಯಾಲೆಟ್‌ ಪೇಪರ್‌ ಪ್ರದರ್ಶಿಸಿದ ಯೋಧನ ಫೋಟೋ ವೈರಲ್‌

    ಸಾ.ರಾ. ಬಾಸ್‌ಗೆ ದೇಶ ಕಾಯುವ ಸೈನಿಕನಿಂದ ಮೊದಲ ಮತ – ವೋಟ್‌ ಹಾಕಿ ಬ್ಯಾಲೆಟ್‌ ಪೇಪರ್‌ ಪ್ರದರ್ಶಿಸಿದ ಯೋಧನ ಫೋಟೋ ವೈರಲ್‌

    ಮೈಸೂರು: ಮತ ಹಾಕಿ ಬ್ಯಾಲೆಟ್‌ ಪೇಪರ್‌ ಜೊತೆಗೆ ಯೋಧರೊಬ್ಬರು ಫೋಟೋ ತೆಗೆಸಿಕೊಂಡಿರುವುದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

    ಮತ ಹಾಕಿರುವ ಬ್ಯಾಲೆಟ್‌ ಪೇಪರನ್ನು ಯೋಧ ಪ್ರದರ್ಶಿಸುತ್ತಿದ್ದಾರೆ. ಆ ಫೋಟೋದೊಂದಿಗೆ, ನಮ್ಮ “ಸಾ.ರಾ. ಬಾಸ್‌”ಗೆ ಮೊದಲ ಮತ. ನಮ್ಮ ದೇಶ ಕಾಯುವ ಸೈನಿಕನಿಂದ ಜೈ ಹಿಂದ್‌ ಎಂಬ ಅಡಿಬರಹವಿದೆ. ಈ ಪೋಸ್ಟ್‌ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ. ಇದನ್ನೂ ಓದಿ: ಯುಗಾದಿ, ಗಣೇಶ ಚತುರ್ಥಿ, ದೀಪಾವಳಿಗೆ ಉಚಿತ ಗ್ಯಾಸ್, ಅರ್ಧ ಲೀ. ಉಚಿತ ನಂದಿನಿ ಹಾಲು: ಬಿಜೆಪಿಯಿಂದ ಪ್ರಣಾಳಿಕೆ ರಿಲೀಸ್

    ಈ ಯೋಧ ಕೆ.ಆರ್.ನಗರದ ಕ್ಷೇತ್ರದ ಮತದಾರ ಎಂಬುದು ಪೋಸ್ಟ್‌ನಿಂದ ತಿಳಿದುಬಂದಿದೆ. ಕರ್ತವ್ಯದ ಹಿನ್ನಲೆಯಲ್ಲಿ ಹೊರ ರಾಜ್ಯದಿಂದ ಅಂಚೆ ಮತದಾನ ಮಾಡಿದ್ದಾರೆ ಎನ್ನಲಾಗಿದೆ. ಸದ್ಯ ಯೋಧ ಯಾರು ಮತ್ತು ಎಲ್ಲಿಂದ ಮತ ಹಾಕಿದ್ದಾರೆ ಎಂಬುದನ್ನ ಚುನಾವಣಾಧಿಕಾರಿಗಳು ಪತ್ತೆ ಹಚ್ಚುತ್ತಿದ್ದಾರೆ.

    ಇದೇ ಮೇ 10 ರಂದು ಕರ್ನಾಟಕ ವಿಧಾನಸಭಾ ಚುನಾವಣೆಗೆ ಮತದಾನ ನಡೆಯಲಿದೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಹಿರಿಯರು, ಬೇರೆ ಬೇರೆ ಕಡೆಯಿರುವ ಸರ್ಕಾರಿ ನೌಕರರು ತಾವು ಇರುವಲ್ಲಿಂದಲೇ ಮತ ಚಲಾಯಿಸಲು ಅವಕಾಶ ಕಲ್ಪಿಸಲಾಗಿದೆ. ಇದನ್ನೂ ಓದಿ: ಹೊಯ್ಸಳರ ನಾಡಲ್ಲಿ ತ್ರಿಕೋನ ಸ್ಪರ್ಧೆ – ಯಾರಾಗ್ತಾರೆ ಸಾಮ್ರಾಟ?

    ಕೆ.ಆರ್.ನಗರ ಕ್ಷೇತ್ರದಲ್ಲಿ ಶಾಸಕ ಸಾ.ರಾ.ಮಹೇಶ್ (Sa.Ra.Mahesh) (ಜೆಡಿಎಸ್), ಜಿಪಂ ಮಾಜಿ ಸದಸ್ಯ ಡಿ.ರವಿಶಂಕರ್ (ಕಾಂಗ್ರೆಸ್), ಹೊಸಹಳ್ಳಿ ವೆಂಕಟೇಶ್ (ಬಿಜೆಪಿ) ಕಣದಲ್ಲಿದ್ದಾರೆ.

  • ಅಮ್ಮಾ, ನಿಮ್ಮ ಅಳಿಯ ಒಳ್ಳೆಯವನಲ್ಲ: ಆತ್ಮಹತ್ಯೆಗೆ ಶರಣಾದ ಗೃಹಿಣಿ

    ಅಮ್ಮಾ, ನಿಮ್ಮ ಅಳಿಯ ಒಳ್ಳೆಯವನಲ್ಲ: ಆತ್ಮಹತ್ಯೆಗೆ ಶರಣಾದ ಗೃಹಿಣಿ

    – ಮಕ್ಕಳನ್ನ ಗಂಡನ ಜೊತೆ ಕಳುಹಿಸಬೇಡ
    – ತವರಿನಲ್ಲಿದ್ರೆ ನಿಮಗೂ ಅವಮಾನ, ಕ್ಷಮಿಸು ಅಮ್ಮ

    ಮೈಸೂರು: ಪತಿಯ ಕಿರುಕುಳದಿಂದ ನೊಂದ ಗೃಹಿಣಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನ ಕೆ.ಆರ್.ನಗರದಲ್ಲಿ ನಡೆದಿದೆ. ಇಂದು ಬೆಳಗ್ಗೆ ಗೃಹಿಣಿ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದು, ಮನೆಯಲ್ಲಿ ಡೆತ್ ನೋಟ್ ಲಭ್ಯವಾಗಿದೆ.

    ಬಿಂದುಶ್ರೀ ಆತ್ಮಹತ್ಯೆಗೆ ಶರಣಾದ ಗೃಹಿಣಿ. ಏಳು ವರ್ಷಗಳ ಹಿಂದೆ ಹಾಸನ ಜಿಲ್ಲೆಯ ಅರಸಿಕೆರೆಯ ಚಂದ್ರಶೇಖರ್ ಜೊತೆ ಬಿಂದುಶ್ರೀಯನ್ನ ಮದುವೆ ಮಾಡಿಕೊಡಲಾಗಿತ್ತು. ಆದ್ರೆ ಚಂದ್ರಶೇಖರ್ ಪತ್ನಿತಯ ಶೀಲ ಶಂಕಿಸಿ ಕಿರುಕುಳ ನೀಡುತ್ತಿದ್ದನು. ಪತಿಯ ಕಿರುಕುಳದಿಂದ ಬೇಸತ್ತ ಬಿಂದುಶ್ರೀ ಕೆಲ ದಿನಗಳ ಹಿಂದೆ ತವರು ಸೇರಿದ್ದರು. ಇತ್ತೀಚೆಗೆ ಕೆ.ಆರ್.ನಗರಕ್ಕೆ ಬಂದಿದ್ದ ಚಂದ್ರಶೇಖರ್ ಪತ್ನಿಯನ್ನ ಕಳುಹಿಸಿ ಕೊಡಿ. ಚೆನ್ನಾಗಿ ನೋಡಿಕೊಳ್ಳುತ್ತೆನೆಂದು ಭರವಸೆ ನೀಡಿದ್ದನು.

    ಡೆತ್‍ನೋಟ್ ನಲ್ಲಿ ಏನಿದೆ?: ಅಮ್ಮ ನಾನು ಇರೋದು ನಿನಗೆ ಇಷ್ಟ ಇಲ್ಲ. ಅಲ್ಲಿಗೆ ಹೋದ್ರೆ ಚೆನ್ನಾಗಿ ನೋಡಿಕೊಳ್ಳಲ್ಲ, ಮತ್ತೆ ಹಿಂಸೆ ಕೊಡುತ್ತಾನೆ. ಹೋಗಲ್ಲ ಅಂದ್ರೆ ಹಿಂಸೆ ಮಾಡಿ ಕಳುಹಿಸುತ್ತಿದ್ದೀರಿ. ಹೋದ್ರೆ ದಿನ ದಿನ ಸಾಯೋದಕ್ಕೆ ನನಗೆ ಆಗಲ್ಲ. ಹಾಗಾಗಿ ಒಂದೇ ದಿನ ಸಾಯೋದು ಒಳ್ಳೆಯದಲ್ವಾ? ಮತ್ತೆ ನಾನು ಸತ್ತನೆಂದು ಮಕ್ಕಳನ್ನ ಅವನ ಜೊತೆ ಕಳುಹಿಸಬೇಡ. ನನ್ನಿಂದ ನಿಮಗೆ ತುಂಬಾ ಬೇಜಾರು ಆಗಿದೆ ಅಂತ ಗೊತ್ತು. ನನ್ನಿಂದ ನಿಮ್ಮ ಮರ್ಯಾದೆ ಸಹ ಹಾಳಾಗಿದೆ.

    ನೀವು ಚೆನ್ನಾಗಿರಬೇಕು ಅಷ್ಟೆ. ಅವನು ನೀವು ಅಂದುಕೊಂಡಿರುವಷ್ಟು ಒಳ್ಳೆಯವನಲ್ಲ. ಅಲ್ಲಿ ಹೋಗಿ ದಿನ ಸಾಯೋದಕ್ಕಿಂತ ಒಂದೇ ದಿನ ಸಾಯುತ್ತಿದ್ದೇನೆ. ಈ ತರ ಮಾಡ್ತೀರೋದಕ್ಕೆ ದಯವಿಟ್ಟು ಕ್ಷಮಿಸಿ. ನನ್ನನ್ನು ಮಕ್ಕಳನ್ನ ಚೆನ್ನಾಗಿ ನೋಡಿಕೊಳ್ಳಿ. ಪ್ಲೀಸ್ ಅಮ್ಮ. ಆ ಆ್ಯಮ್ ಸಾರಿ ಅಮ್ಮ..

    ಚಂದ್ರಶೇಖರ್ ಭರವಸೆ ನೀಡಿದ್ದರಿಂದ ಬಿಂದುಶ್ರೀಯನ್ನ ಕಳುಗಹಿಸಲು ಒಪ್ಪಿದ್ದರು. ಆದ್ರೆ ಪತಿಯ ಬಗ್ಗೆ ಗೊತ್ತಿದ್ದ ಬಿಂದುಶ್ರೀ ಅವರಿಗೆ ಅರಸಿಕೆರೆಗೆ ಹೋಗಲು ಇಷ್ಟವಿರಲಿಲ್ಲ. ತವರಿನಲ್ಲಿಯೇ ಮಾತ್ರೆಗಳನ್ನ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ ಕೆ.ಆರ್. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಮೈಸೂರು: ತೆಂಗಿನ ಮರದಿಂದ ಬಿದ್ದು ರೈತ ಸಾವು

    ಮೈಸೂರು: ತೆಂಗಿನ ಮರದಿಂದ ಬಿದ್ದು ರೈತ ಸಾವು

    ಮೈಸೂರು: ತೆಂಗಿನ ಮರದಿಂದ ಬಿದ್ದು ರೈತರೊಬ್ಬರು ಮೃತಪಟ್ಟ ಘಟನೆ ಕೆ ಆರ್ ನಗರ ತಾಲೂಕಿನ ಮುಂಜನಹಳ್ಳಿ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.

    ವರದನಾಯಕ (58) ಮೃತ ದುರ್ದೈವಿ ರೈತ.

    ತಮ್ಮ ಜಮೀನಿನಲ್ಲಿದ್ದ ಮರದಲ್ಲಿ ಎಳನೀರು ಕೀಳಲು ವರದನಾಯಕ ಮರ ಏರಿದ್ದರು. ಆದ್ರೆ ನಿನ್ನೆ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಮರದಿಂದ ಕಾಲುಜಾರಿ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

    ಈ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.