Tag: K.R.Pete

  • ಎಂಪಿ ಆಗಿಲ್ಲ, ಎಂಎಲ್‍ಎ ಆಗ್ಲೇಬೇಕು- ಮಗನ ಭವಿಷ್ಯಕ್ಕಾಗಿ ಎಚ್‍ಡಿಕೆ ಶಪಥ

    ಎಂಪಿ ಆಗಿಲ್ಲ, ಎಂಎಲ್‍ಎ ಆಗ್ಲೇಬೇಕು- ಮಗನ ಭವಿಷ್ಯಕ್ಕಾಗಿ ಎಚ್‍ಡಿಕೆ ಶಪಥ

    ಬೆಂಗಳೂರು/ಮಂಡ್ಯ: ಎಲ್ಲಿ ಕಳೆದುಕೊಂಡಿದ್ದೀವೋ ಅಲ್ಲೇ ಪಡೆಯಬೇಕು. ಸಂಸದನಾಗದಿದ್ದರೆ ಶಾಸಕನಾದರೂ ಆಗಲೇಬೇಕು ಎಂದು ನಿಖಿಲ್ ರಾಜಕೀಯ ಭವಿಷ್ಯಕ್ಕಾಗಿ ತಂದೆ ಕುಮಾರಸ್ವಾಮಿ ಶಪಥ ಮಾಡಿದ್ದಾರೆ.

    ಮಂಡ್ಯ ಎಂಪಿ ಎಲೆಕ್ಷನ್ ಸೋಲಿಗೆ ಕೆ.ಆರ್ ಪೇಟೆ ಎಂಎಲ್‍ಎ ಎಲೆಕ್ಷನ್ ಸವಾಲ್ ಆಗಿದೆ. ಹೀಗಾಗಿ ಲೋಕಸಭಾ ಚುನಾವಣಾ ಫಲಿತಾಂಶದ ಬಳಿಕ ಮೇ 23ರಂದೇ ಮಗನಿಗಾಗಿ ಕುಮಾರಸ್ವಾಮಿ ಪ್ರತಿಜ್ಞೆ ಮಾಡಿದ್ದಾರೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ಮಂಡ್ಯದಲ್ಲೇ ನಿಖಿಲ್ ರಾಜಕೀಯ ಭವಿಷ್ಯ ರೂಪಿಸಲು ಅಂದೇ ಎಚ್‍ಡಿಕೆ ಶಪಥ ಮಾಡಿದ್ದು, ಕೆ.ಆರ್.ಪೇಟೆ ಕ್ಷೇತ್ರ ಉಪ ಚುನಾವಣೆಗೆ ಮಗನನ್ನ ಇಳಿಸಲು ಕುಮಾರಸ್ವಾಮಿ ಸಿದ್ಧತೆ ಮಾಡಿಕೊಂಡಿದ್ದಾರೆ. ಕಾರ್ಯಕರ್ತರ ಅಭಿಪ್ರಾಯದ ಬಳಿಕ ನಿಖಿಲ್ ಸ್ಪರ್ಧೆ ಬಗ್ಗೆ ಘೋಷಣೆ ಸಾಧ್ಯತೆ ಗಳಿವೆ. ಇದನ್ನೂ ಓದಿ: ನಿಖಿಲ್ ಸ್ಪರ್ಧೆ ಹೊತ್ತಲ್ಲೇ ‘ಕೈ’ ತ್ರಿಶೂಲ ವ್ಯೂಹ

    ಕೆ.ಆರ್ ಪೇಟೆಗೇನೆ ಯಾಕೆ?
    ಕೆಆರ್ ಪೇಟೆ ಜೆಡಿಎಸ್ ಭದ್ರಕೋಟೆ ಕೋಟೆಯಾಗಿದ್ದು, ಒಕ್ಕಲಿಗ ಮತದಾರರ ಪ್ರಾಬಲ್ಯವಿದೆ. ಎಚ್‍ಡಿಕೆ ಸರ್ಕಾರ ಕೆಡವಲು ನಾರಾಯಣಗೌಡ ಸಹ ಕಾರಣ ಅನ್ನೋ ಜನರ ಸಿಟ್ಟು ಗೌಡ್ರ ಕುಟುಂಬಕ್ಕೆ ಸಹಾಯವಾಗಬಹುದು. ಅಧಿಕಾರಕ್ಕಾಗಿ ಆಪರೇಷನ್ ಕಮಲ ಮಾಡಿದ್ರೂ ಕೆ.ಆರ್.ಪೇಟೆಯಲ್ಲಿ ಬಿಜೆಪಿಗೆ ನೆಲೆ ಇಲ್ಲದಂತಾಗಿದೆ. ತಂದೆಗೆ ಶಾಸಕರ ಬಂಡಾಯ, ಮಗನಿಗೆ ಎಂಪಿ ಸೋಲಿನ ಅನುಕಂಪವಿರಬಹುದು. ಮಂಡ್ಯದಲ್ಲಿ ಕಳೆದ ವಿಧಾನಸಭೆ ಎಲೆಕ್ಷನ್‍ನಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋಲನ್ನಪ್ಪಿರುವುದದರಿಂದ ನಿಖಿಲ್ ನನ್ನು ಕೆ.ಆರ್ ಪೇಟೆಯಲ್ಲೇ ಉಪ ಚುನಾವಣೆಗೆ ನಿಲ್ಲಿಸಬೇಕು ಎಂದು ಕುಮಾರಸ್ವಾಮಿ ತೀರ್ಮಾನ ಮಾಡಿರುವುದಾಗಿ ತಿಳಿದುಬಂದಿದೆ. ಇದನ್ನೂ ಓದಿ: ಎಚ್‍ಡಿಡಿ ಕುಟುಂಬದಲ್ಲಿ ಅಳಿಯ, ಅತ್ತೆ ಮಧ್ಯೆ ಟಿಕೆಟ್ ಲೆಕ್ಕಾಚಾರ ಶುರು

  • ಸರ್ಕಾರದ ಉಳಿವಿಗೆ ಬಿಜೆಪಿ ಮಾಸ್ಟರ್ ಪ್ಲಾನ್- ಸುಮಲತಾ, ನಿಖಿಲ್ ಮತ್ತೆ ಮುಖಾಮುಖಿಯಾಗ್ತಾರಾ?

    ಸರ್ಕಾರದ ಉಳಿವಿಗೆ ಬಿಜೆಪಿ ಮಾಸ್ಟರ್ ಪ್ಲಾನ್- ಸುಮಲತಾ, ನಿಖಿಲ್ ಮತ್ತೆ ಮುಖಾಮುಖಿಯಾಗ್ತಾರಾ?

    ಮಂಡ್ಯ: ಸಂಸದೆ ಸುಮಲತಾ ಅಂಬರೀಶ್ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಚುನಾವಣೆಯಲ್ಲಿ ಮತ್ತೆ ಮುಖಾಮುಖಿಯಾಗ್ತಾರಾ ಎಂಬ ಪ್ರಶ್ನೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಯಾಗುತ್ತಿದೆ.

    ಸರ್ಕಾರ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಬಿಜೆಪಿ ನಾಯಕರು ಸುಮಲತಾ ಅವರನ್ನು ರಾಜ್ಯ ರಾಜಕಾರಣಕ್ಕೆ ತರಲಿದ್ದಾರೆ. ಈ ಮೂಲಕ ಸಂಖ್ಯಾಬಲ ಹೆಚ್ಚಿಸಿಕೊಳ್ಳಲು ಭಾರೀ ಪ್ಲಾನ್ ರೂಪಿಸಲಾಗಿದೆ. ವಿಧಾನಸಭಾ ಉಪ ಚುನಾವಣೆಯಲ್ಲಿ ನಿಖಿಲ್ ಅವರು ಸ್ಪರ್ಧಿಸುವುದು ಖಚಿತವಾದರೆ ಸುಮಲತಾ ಅವರನ್ನು ಪ್ರತಿಸ್ಪರ್ಧಿಯಾಗಿ ನಿಲ್ಲಿಸಲು ಬಿಜೆಪಿ ಸಿದ್ಧತೆ ನಡೆಸಿದೆ ಎಂದು ಮೂಲಗಳಿಂದ ಮಾಹಿತಿ ಲಭಿಸಿದೆ.

    ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ಕ್ಷೇತ್ರದ ನಾರಾಯಣಗೌಡ ಶಾಸಕ ಸ್ಥಾನದಿಂದ ಅನರ್ಹಗೊಂಡಿದ್ದಾರೆ. ಹೀಗಾಗಿ ಈ ಕ್ಷೇತ್ರಕ್ಕೆ ನಡೆಯಲಿರುವ ಉಪಚುನವಾವಣೆಯಲ್ಲಿ ನಿಖಿಲ್ ಅವರಿಗೆ ಅವಕಾಶ ನೀಡಬೇಕು ಎಂಬ ಕೂಗು ಜೆಡಿಎಸ್‍ನಲ್ಲಿ ಕೇಳಿಬಂದಿದೆ. ಹೀಗಾಗಿ ನಿಖಿಲ್ ಸ್ಪರ್ಧೆ ಮಾಡಿ ಗೆದ್ದರೆ ಅನರ್ಹ ಶಾಸಕರ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಕನಸು ಕಂಡಿರುವ ಬಿಜೆಪಿಗೆ ಭಾರೀ ಹಿನ್ನಡೆಯಾಗಲಿದೆ. ಹೀಗಾಗಿ ಸುಮಲತಾ ಅವರಿಗೆ ಸಚಿವ ಸ್ಥಾನ ನೀಡುವುದಾಗಿ ಹೇಳಿ, ಕೆ.ಆರ್. ಪೇಟೆಯಿಂದ ಸ್ಪರ್ಧೆ ಮಾಡುವಂತೆ ಬಿಜೆಪಿ ಒತ್ತಾಯಿಸಲಿದೆ.

    ಮಂಡ್ಯ ಜಿಲ್ಲೆಯಲ್ಲಿ ಇದುವರೆಗೂ ಒಂದೇ ಒಂದು ಶಾಸಕ ಸ್ಥಾನದಲ್ಲಿ ಬಿಜೆಪಿ ಗೆಲುವು ಸಾಧಿಸಿಲ್ಲ. ಈ ಬಾರಿ ಹೇಗಾದರೂ ಮಾಡಿ ಮಂಡ್ಯದಲ್ಲಿ ಖಾತೆ ತೆರೆಯಲು ಬಿಜೆಪಿ ಹರಸಾಹಸ ಪಡುತ್ತಿದೆ. ಈ ನಿಟ್ಟಿನಲ್ಲಿ ಕೆಆರ್ ಪೇಟೆಯಲ್ಲಿ ಬಿಜೆಪಿ ಗೆಲುವು ಸಾಧಿಸಿ ಸರ್ಕಾರವನ್ನು ಮತ್ತಷ್ಟು ಭದ್ರಪಡಿಸಿಕೊಳ್ಳಲು ಪ್ಲಾನ್ ರೂಪಿಸುತ್ತಿದೆ.

    ಕಳೆದ ಲೋಕಸಭಾ ಚುನಾವಣೆಯಲ್ಲಿ ಸಂಸದೆ ಸುಮಲತಾ ಅವರು ಕೆಆರ್ ಪೇಟೆ ಕ್ಷೇತ್ರವೊಂದರಲ್ಲೇ ಸುಮಾರು 15 ಸಾವಿರಕ್ಕೂ ಹೆಚ್ಚಿನ ಲೀಡ್ ಪಡೆದಿದ್ದರು. ಹೀಗಾಗಿ ಸುಮಲತಾ ಅವರನ್ನು ಉಪ ಚುನಾವಣೆಗೆ ನಿಲ್ಲಿಸಲು ಮಾಸ್ಟರ್ ಪ್ಲಾನ್ ರೂಪಿಸಲಾಗಿದೆ. ಸ್ವತಃ ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ಕೆಆರ್ ಪೇಟೆ ಕ್ಷೇತ್ರದ ಉಸ್ತುವಾರಿ ವಹಿಸಿಕೊಳ್ಳಲಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.