Tag: K.R.Pura

  • ಬೆಂಗಳೂರು | 3 ವರ್ಷದಲ್ಲಿ 100 ಬೈಕ್ ಕಳ್ಳತನ – ಆರೋಪಿ ಅರೆಸ್ಟ್

    ಬೆಂಗಳೂರು | 3 ವರ್ಷದಲ್ಲಿ 100 ಬೈಕ್ ಕಳ್ಳತನ – ಆರೋಪಿ ಅರೆಸ್ಟ್

    – 1.45 ಕೋಟಿ ಮೌಲ್ಯದ ಬೈಕ್‌ಗಳು ವಶ

    ಬೆಂಗಳೂರು: 3 ವರ್ಷದಲ್ಲಿ ಬರೋಬ್ಬರಿ 100 ಬೈಕ್ ಕಳ್ಳತನ ಮಾಡಿರುವ ಖತರ್ನಾಕ್ ಖದೀಮನನ್ನ ಕೆ.ಆರ್ ಪುರ (K.R Pura) ಪೊಲೀಸರು ಬಂಧಿಸಿದ್ದಾರೆ.

    ಆಂಧ್ರಪ್ರದೇಶದ (Andra Pradesh) ಬಂಗಾರುಪಾಳ್ಯಂ (Bangarupalyam) ನಿವಾಸಿ ಪ್ರಸಾದ್ ಬಾಬು ಬಂಧಿತ ಕಳ್ಳ. ದುಬಾರಿ ಬೆಲೆಯ ಬೈಕ್‌ಗಳನ್ನೇ ಟಾರ್ಗೆಟ್ ಮಾಡ್ತಿದ್ದ ಪ್ರಸಾದ್ ಬಾಬು, ಪ್ರತಿ ದಿನ ಸಂಜೆ ಬಸ್‌ನಲ್ಲಿ ಬೆಂಗಳೂರಿಗೆ ಬರುತ್ತಿದ್ದ. ನಂತರ ಕೆಆರ್ ಪುರ, ಟಿನ್ ಫ್ಯಾಕ್ಟರಿ, ಮಹದೇವಪುರ ಜನವಸತಿ ಪ್ರದೇಶಗಳಲ್ಲಿ ಓಡಾಟ ನಡೆಸಿ, ಮನೆ ಮುಂದೆ ನಿಲ್ಲಿಸಿದ ಬೈಕ್‌ಗಳ ಹ್ಯಾಂಡ್ ಲಾಕ್ ಮುರಿದು ಕಳ್ಳತನ ಮಾಡುತ್ತಿದ್ದ. ಇದನ್ನೂ ಓದಿ: ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆ – ಪ್ರಯಾಣಿಕರ ಸಂಖ್ಯೆಯಲ್ಲಿ ಭಾರೀ ಇಳಿಕೆ!

    ಬಂದ ದಿನವೇ ಬೈಕ್ ಕದ್ದು, ಅದೇ ಬೈಕ್‌ನಲ್ಲಿ ಊರಿಗೆ ಎಸ್ಕೇಪ್ ಆಗುತ್ತಿದ್ದ. ಬೆಂಗಳೂರು, ತಿರುಪತಿ, ಚಿತ್ತೂರು ಸೇರಿ ಹಲವೆಡೆ ಕಳ್ಳತನ ಮಾಡುತ್ತಿದ್ದ. ಪ್ರಸಾದ್ ಬಾಬು ಕದ್ದ ಬೈಕ್‌ಗಳನ್ನ 15-20 ಸಾವಿರಕ್ಕೆ ಆಂಧ್ರದಲ್ಲಿ ಮಾರಾಟ ಮಾಡಿ, ಬಂದ ಹಣದಲ್ಲಿ ಮೋಜು ಮಸ್ತಿ ಮಾಡುತ್ತಿದ್ದ. ಆರೋಪಿಯಿಂದ 20 ರಾಯಲ್ ಎನ್‌ಫೀಲ್ಡ್ ಬೈಕ್, 30 ಫಲ್ಸರ್ ಬೈಕ್, 40 ಆಕ್ಟಿವಾ ಹಾಗೂ ಇತರೆ ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇದನ್ನೂ ಓದಿ: ಮಾ.1 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ – ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್‌

    ಸುಮಾರು 1.45 ಕೋಟಿ ರೂ. ಮೌಲ್ಯದ 100 ಬೈಕ್ ವಶಕ್ಕೆ ಪಡೆದ ಕೆಆರ್ ಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

  • ಮನೆಯಲ್ಲೇ ಇದ್ದ ಮಗುವಿಗಾಗಿ ಪೊಲೀಸರ ಜೊತೆ ಊರೆಲ್ಲಾ ಹುಡುಕಿದ್ರು ಪೋಷಕರು!

    ಮನೆಯಲ್ಲೇ ಇದ್ದ ಮಗುವಿಗಾಗಿ ಪೊಲೀಸರ ಜೊತೆ ಊರೆಲ್ಲಾ ಹುಡುಕಿದ್ರು ಪೋಷಕರು!

    ಬೆಂಗಳೂರು: ಮನೆಯಲ್ಲೇ ಇದ್ದ ಮಗುವಿಗಾಗಿ ಪೊಲೀಸರ ಜೊತೆ ಫೋಷಕರು ಊರೆಲ್ಲಾ ಹುಡುಕಾಡಿರುವ ವಿಚಿತ್ರ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

    ಬೆಂಗಳೂರಿನ ಕೆ.ಆರ್‌.ಪುರದ ಜನತಾ ಕಾಲೋನಿಯಲ್ಲಿ ಈ ಘಟನೆ ನಡೆದಿದೆ. ಮೀನಾ ದಂಪತಿ ಮನೆಯಲ್ಲೇ ಇದ್ದ ತಮ್ಮ 6 ವರ್ಷದ ಮಗಳಿಗಾಗಿ ಊರೆಲ್ಲಾ ಹುಡುಕಿದ್ದಾರೆ. ಕೊನೆಗೆ ಮನೆಗೆ ವಾಪಸ್‌ ಬಂದಾಗ ಮಗು ಕಂಡು ನಿಟ್ಟುಸಿರು ಬಿಟ್ಟಿದ್ದಾರೆ. ಇದನ್ನೂ ಓದಿ: ಶಾಲೆಯ ಗುಮಾಸ್ತನಿಂದ 4ರ ಬಾಲಕಿಗೆ ಕಿರುಕುಳ

    ನಡೆದಿದ್ದೇನು?
    ನನ್ನ ಮಗು ಕಿಡ್ನ್ಯಾಪ್‌ ಆಗಿದೆ ಎಂದು ಕೆ.ಆರ್‌.ಪುರ ಪೊಲೀಸ್‌ ಠಾಣೆಗೆ ಮೀನಾ ದೂರು ನೀಡಿದ್ದರು. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಹುಡುಕಾಟ ಆರಂಭಿಸಿದರು. ಪೊಲೀಸರ ಜೊತೆ ಮಗಳಿಗಾಗಿ ಪೋಷಕರು ಅಕ್ಕಪಕ್ಕದ ಏರಿಯಾಗಳಲ್ಲೆಲ್ಲಾ ಹುಡುಕಾಟ ನಡೆಸಿದ್ದರು.

    ಕೊನೆಗೆ ಮಗು ಸಿಗಲಿಲ್ಲ ಎಂಬ ಆತಂಕದಲ್ಲೇ ಪೋಷಕರು ಮನೆಗೆ ವಾಪಸ್‌ ಆಗಿದ್ದಾರೆ. ಈ ವೇಳೆ ಮನೆಯಲ್ಲೇ ಮಗು ನಿದ್ದೆ ಮಾಡುತ್ತಿರುವುದು ಅವರಿಗೆ ತಿಳಿದುಬಂದಿದೆ. ಮನೆಯಲ್ಲಿ ಗುಡ್ಡೆ ಹಾಕಿದ್ದ ಬಟ್ಟೆಗಳ ಅಡಿಯಲ್ಲಿ ತಮ್ಮ ಮಗಳು ಮಲಗಿರುವುದನ್ನು ಕಂಡು ಮೀನಾ ನಿಟ್ಟುಸಿರು ಬಿಟ್ಟಿದ್ದಾರೆ. ಇದನ್ನೂ ಓದಿ: 25 ದಿನಗಳಲ್ಲಿ 4.12 ಲಕ್ಷ ಕೇಸ್, 22.89 ಕೋಟಿ ದಂಡ – ರಾಜಕೀಯ ನಾಯಕರಿಗೆ ಬಿಸಿ ಮುಟ್ಟಿಸಿದ ಟ್ರಾಫಿಕ್ ಪೊಲೀಸ್

  • ಶೀಘ್ರವೇ ಬೈಯ್ಯಪ್ಪನಹಳ್ಳಿ – ಕೆ.ಆರ್. ಪುರಂ ಮೆಟ್ರೋ ಟೆಸ್ಟ್ ಟ್ರಯಲ್

    ಶೀಘ್ರವೇ ಬೈಯ್ಯಪ್ಪನಹಳ್ಳಿ – ಕೆ.ಆರ್. ಪುರಂ ಮೆಟ್ರೋ ಟೆಸ್ಟ್ ಟ್ರಯಲ್

    ಬೆಂಗಳೂರು: ಸಿಲಿಕಾನ್ ಸಿಟಿ ಮಂದಿಗೆ ಗುಡ್ ನ್ಯೂಸ್ ಕೊಡುವುದಕ್ಕೆ ಬಿಎಂಆರ್‌ಸಿಎಲ್ ಮುಂದಾಗಿದೆ.

    ಸೆಪ್ಟೆಂಬರ್‌ನಿಂದ ಪರ್ಪಲ್ ಲೈನ್ ಎಕ್ಸ್‌ಟೆನ್ಷನ್ ಟ್ರಯಲ್ ರನ್ ಶುರುವಾಗುತ್ತಿದೆ. ಇದರಿಂದ ಟ್ರಾಫಿಕ್ ದಟ್ಟಣೆಯ ಬೈಯಪ್ಪನಹಳ್ಳಿಯಿಂದ, ಕೆ.ಆರ್ ಪುರಂವರೆಗಿನ ಟೆಸ್ಟ್ ಟ್ರಯಲ್ ಮಾಡಲಿದೆ. ವೈಟ್‌ಫೀಲ್ಡ್‌ವರೆಗಿನ ವಿಸ್ತರಣೆಯನ್ನು ಇದೇ ಡಿಸೆಂಬರ್ ಹೊತ್ತಿಗೆ ಮುಗಿಸುವ ಯೋಜನೆಯಲ್ಲಿ ಬಿಎಂಆರ್‌ಸಿಎಲ್ ಇದ್ದು, 2ನೇ ಹಂತದಲ್ಲಿ ಮುಖ್ಯವಾಗಿ ಎಲೆಕ್ಟ್ರಾನಿಕ್ ಸಿಟಿ ಮಾರ್ಗ, ಸಿಲ್ಕ್ ಬೋರ್ಡ್ ಟು ಕೆಆರ್ ಪುರಂ ಮಾರ್ಗ, ಹಾಗೇ ವೈಟ್ ಫೀಲ್ಡ್ ಮಾರ್ಗದಲ್ಲಿ ಮೆಟ್ರೋ ಸಂಚರಿಸಲಿದೆ.  ಇದನ್ನೂ ಓದಿ: ಕಾಂಗೋದಲ್ಲಿ ಯುಎನ್ ವಿರೋಧಿ ಪ್ರತಿಭಟನೆ: 3 ಶಾಂತಿಪಾಲನ ಸೈನಿಕರು, 12 ನಾಗರಿಕರು ಮೃತ

    ಇಲ್ಲೆಲ್ಲಾ ಐಟಿ, ಬಿಟಿ ಕಂಪನಿಗಳು ಹೆಚ್ಚಾಗಿದ್ದು, ಪೀಕ್ ಅವರ್ಸ್‍ನಲ್ಲಿ ಸಾಕಷ್ಟು ರಷ್ ಆಗುವ ಬಗ್ಗೆ ತಜ್ಞರು ಎಚ್ಚರಿಸಿದ್ದಾರೆ. ಅಲ್ಲದೇ ಮೆಟ್ರೋ ಬೋಗಿಗಳನ್ನು 6ರ ಬದಲಾಗಿ 8ಕ್ಕೆ ಏರಿಸಲು ಸಲಹೆ ನೀಡಲಾಗಿತ್ತು. ಆದರೆ ಬಿಎಂಆರ್‌ಸಿಎಲ್ 8 ಬೋಗಿ ಮಾಡಿದರೆ ಸ್ಟೇಷನ್ ಸ್ಟ್ರಕ್ಚರ್ ಬದಲಾಯಿಸಬೇಕು. ದೊಡ್ಡ ಸ್ಟೇಷನ್ ನಿರ್ಮಾಣಕ್ಕೆ ಭೂಸ್ವಾಧೀನ ಸೇರಿ ಹೆಚ್ಚಿನ ಹಣ ವೆಚ್ಚವಾಗಲಿದೆ. ಹೀಗಾಗಿ ಬೋಗಿ ಜಾಸ್ತಿ ಮಾಡುವುದಕ್ಕಿಂತ ರೈಲಿನ ಸಂಖ್ಯೆ ಹೆಚ್ಚಿಸುವುದು ಸೂಕ್ತ ಎಂದು ತೀರ್ಮಾನಿಸಿದೆ. ಹಾಗಾಗಿ ಎರಡನೇ ಹಂತದಲ್ಲಿ ಪ್ರತಿ ಎರಡು ನಿಮಿಷಕ್ಕೊಂದು ಟ್ರೈನ್ ಓಡಿಸುವಂತಾ ತಂತ್ರಜ್ಞಾನವನ್ನು ಅಳವಡಿಸುವುದಕ್ಕೆ ಬಿಎಂಆರ್‌ಸಿಎಲ್ ಮುಂದಾಗಿದೆ. ಇದನ್ನೂ ಓದಿ: 6 ವರ್ಷ ತುಂಬಿದರಷ್ಟೇ 1ನೇ ಕ್ಲಾಸ್‌ಗೆ ಪ್ರವೇಶ – ಗೊಂದಲಕ್ಕೆ ಕಾರಣವಾದ ಆದೇಶ

    Live Tv
    [brid partner=56869869 player=32851 video=960834 autoplay=true]

  • ಕೆ.ಆರ್.ಪುರ ಕ್ಷೇತ್ರದಿಂದ ನಾನೇ ಬಿಜೆಪಿ ಅಭ್ಯರ್ಥಿ: ನಂದೀಶ್ ರೆಡ್ಡಿ

    ಕೆ.ಆರ್.ಪುರ ಕ್ಷೇತ್ರದಿಂದ ನಾನೇ ಬಿಜೆಪಿ ಅಭ್ಯರ್ಥಿ: ನಂದೀಶ್ ರೆಡ್ಡಿ

    -ಬೇರೆ ಪಕ್ಷದಿಂದ ಬಂದವರಿಗೆ ಟಿಕೆಟ್ ನೀಡಿದ್ರೆ ಸಹಿಸಲ್ಲ

    ಬೆಂಗಳೂರು: ಮುಂಬರುವ ಉಪ ಚುನಾವಣೆಯಲ್ಲಿ ಕೆ.ಆರ್.ಪುರ ಕ್ಷೇತ್ರದಿಂದ ನಾನೇ ಬಿಜೆಪಿ ಅಭ್ಯರ್ಥಿ ಎಂದು ತಿಳಿಸುವ ಮೂಲಕ ಮಾಜಿ ಶಾಸಕ ನಂದೀಶ್ ರೆಡ್ಡಿ ಅನರ್ಹ ಶಾಸಕ ಬೈರತಿ ಬಸವರಾಜ್ ಗೆ ಟಾಂಗ್ ನೀಡಿದ್ದಾರೆ.

    ಕೆ.ಆರ್.ಪುರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕ್ಷೇತ್ರದಲ್ಲಿ ನಡೆಯುವ ಮರು ಚುನಾವಣೆ ಕುರಿತು ಪ್ರತಿಕ್ರಿಯಿಸಿದರು. ಕೆ.ಆರ್.ಪುರ ಕ್ಷೇತ್ರದಿಂದ ನಾನೇ ಬಿಜೆಪಿ ಅಭ್ಯರ್ಥಿ, ಪಕ್ಷಕ್ಕಾಗಿ ನಾನು ದುಡಿದಿದ್ದೇನೆ. ಒಂದು ವೇಳೆ ನನಗೆ ಟಿಕೆಟ್ ಕೊಡದೆ, ನಮ್ಮ ಪಕ್ಷದ ಬೇರೆಯವರಿಗೆ ಟಿಕೆಟ್ ಕೊಟ್ಟರೂ ನಾನು ಅವರಿಗಾಗಿ ಕಾರ್ಯಕರ್ತರ ಜೊತೆ ಸೇರಿ ಕೆಲಸ ಮಾಡುತ್ತೇನೆ. ಆದರೆ ನಮ್ಮ ಪಕ್ಷದವರನ್ನು ಬಿಟ್ಟು ಬೇರೆ ಪಕ್ಷದಿಂದ ಬಂದವರಿಗೆ ಟಿಕೆಟ್ ಕೊಟ್ಟರೆ ಅವರ ಪರ ಕೆಲಸ ಮಾಡಲು ಕೊಂಚ ಯೋಚಿಸಬೇಕಾಗುತ್ತದೆ. ಕಾರ್ಯಕರ್ತರು ಅವರ ಪರ ಕೆಲಸ ಮಾಡಲು ಇಚ್ಛಿಸುವುದಿಲ್ಲ. ಬಿಜೆಪಿ ನಮ್ಮನ್ನ ಕೈ ಬಿಡಲ್ಲ ಎಂಬ ನಂಬಿಕೆ ಇದೆ. ಕಷ್ಟದ ಪರಿಸ್ಥಿತಿಯಲ್ಲೂ ನಾವು ಪಕ್ಷವನ್ನು ಸಂಘಟನೆ ಮಾಡಿದ್ದೇವೆ. ನನಗೆ ಟಿಕೆಟ್ ಸಿಗುತ್ತೆ ಎಂಬ ವಿಶ್ವಾಸ ಇದೆ. ನಮ್ಮ ನಾಯಕರು ಬೇರೆ ಪಕ್ಷದಿಂದ ಬಂದವರಿಗೆ ಟಿಕೆಟ್ ಕೊಟ್ಟು ನಮಗೆ ಮೋಸ ಮಾಡಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ನಡೆಸಿದ ಸಂಭ್ರಮಾಚರಣೆಯಲ್ಲಿ ನಂದೀಶ್ ಅವರು ಭಾಗವಹಿಸಿದ್ದರು. ಇಷ್ಟು ವರ್ಷಗಳಿಂದ ಇದ್ದ ಬೇಡಿಕೆಯನ್ನು ಕೇಂದ್ರ ಕೇವಲ 3 ನಿಮಿಷದಲ್ಲಿ ಬಗೆಹರಿಸಿದೆ. ಭಾರತೀಯರಿಗೆ ಇದು ಬಹಳ ಸಂತೋಷದ ವಿಚಾರ ಎಂದು ಖುಷಿಯನ್ನು ಹಂಚಿಕೊಂಡರು.

  • ಆಸ್ಪತ್ರೆಗೆ ಬರುತ್ತಿದ್ದ ಯುವತಿಯರ ಅರೆನಗ್ನ ಫೋಟೋ ಕ್ಲಿಕ್ಕಿಸುತ್ತಿದ್ದ ಕಾಮುಕ ಅಟೆಂಡರ್ ಸಿಕ್ಕಿಬಿದ್ದ

    ಆಸ್ಪತ್ರೆಗೆ ಬರುತ್ತಿದ್ದ ಯುವತಿಯರ ಅರೆನಗ್ನ ಫೋಟೋ ಕ್ಲಿಕ್ಕಿಸುತ್ತಿದ್ದ ಕಾಮುಕ ಅಟೆಂಡರ್ ಸಿಕ್ಕಿಬಿದ್ದ

    ಬೆಂಗಳೂರು: ಆಸ್ಪತ್ರೆಯಲ್ಲಿ ಇಸಿಜಿ ಚಿಕಿತ್ಸೆ ಪಡೆಯಲು ಬಂದ ಮಹಿಳಾ ರೋಗಿಗಳ ಅರೆ ನಗ್ನ ಫೋಟೋ ತೆಗೆಯುತ್ತಿದ್ದ ಕೆ.ಆರ್.ಪುರ ಸರ್ಕಾರಿ ಆಸ್ಪತ್ರೆಯಲ್ಲಿ ನೌಕರ ಈಗ ರೆಡ್‍ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ.

    ರಘು ಬಂಧಿತ ಆರೋಪಿಯಾಗಿದ್ದು, ಕೆ.ಆರ್.ಪುರ ಸರ್ಕಾರಿ ಆಸ್ಪತ್ರೆಯಲ್ಲಿ ಡಿ ಗ್ರೂಪ್ ನೌಕರನಾಗಿ ಕಾರ್ಯನಿರ್ವಹಿಸುತ್ತಿದ್ದ. ಈತ ಮಹಿಳೆಯರ ಜೊತೆ ಅನುಚಿತವಾಗಿ ವರ್ತಿಸುತ್ತಿದ್ದ ಅಲ್ಲದೆ, ಅವರ ಅರೆ ನಗ್ನ ಫೋಟೋ ತೆಗೆಯುತ್ತಿದ್ದ.

    ಶುಕ್ರವಾರ ಆಸ್ಪತ್ರೆಗೆ ಬಂದ ಯುವತಿ ಇಸಿಜಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಅನುಮಾನಗೊಂಡು ಆರೋಪಿಯನ್ನು ಹಿಡಿದು ಮೊಬೈಲ್ ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ.

    ಆರೋಪಿಯ ರಘು ಹಲವು ದಿನಗಳಿಂದ ಇಂತಹ ನೀಚ ಕೃತ್ಯದಲ್ಲಿ ತೊಡಗಿದ್ದು, ಆತನ ಮೊಬೈಲ್ ಫೋನ್ ನಲ್ಲಿ ಹಲವು ಮಹಿಳೆಯರ ಆರೆ ನಗ್ನ ಫೋಟೋಗಳು ಪತ್ತೆಯಾಗಿದೆ. ಘಟನೆ ಕುರಿತು ಆಸ್ಪತ್ರೆಯ ಮೇಲಾಧಿಕಾರಿಗಳಿಗೆ ರಘು ವಿರುದ್ಧ ದೂರು ನೀಡಿದ ಯುವತಿ ಕ್ರಮ ಜರುಗಿಸುವಂತೆ ಆಗ್ರಹಿಸಿದ್ದಾರೆ.

    ಘಟನೆ ಕುರಿತು ಪ್ರತಿಕ್ರಿಯೆ ನೀಡಿರುವ ಆಸ್ಪತ್ರೆಯ ಟಿ.ಹೆಚ್.ಒ ಡಾ. ಚಂದ್ರಶೇಖರ್ ಆರೋಪಿ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.