Tag: K Salundi

  • ಕಲುಷಿತ ನೀರು ಸೇವಿಸಿ ಸಾವು ಪ್ರಕರಣ- ಮೈಸೂರು ಡಿಸಿಗೆ ಸಿಎಂ ದೂರವಾಣಿ ಕರೆ

    ಕಲುಷಿತ ನೀರು ಸೇವಿಸಿ ಸಾವು ಪ್ರಕರಣ- ಮೈಸೂರು ಡಿಸಿಗೆ ಸಿಎಂ ದೂರವಾಣಿ ಕರೆ

    ಬೆಂಗಳೂರು: ಮೈಸೂರಿನ (Mysuru) ಕೆ.ಸಾಲುಂಡಿ (K Salundi) ಗ್ರಾಮದಲ್ಲಿ ಕಲುಷಿತ ನೀರು (Contaminated Water) ಸೇವಿಸಿ ಸಾವು ಸಂಭವಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿ ಜೊತೆ ದೂರವಾಣಿ ಮೂಲಕ ಮಾತನಾಡಿ ಮಾಹಿತಿ ಪಡೆದುಕೊಂಡರು.

    ನೀರು ಕಲುಷಿತಗೊಳ್ಳಲು ಕಾರಣವೇನು ಎಂಬುದನ್ನು ಪತ್ತೆಹಚ್ಚಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಿಎಂ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕಲುಷಿತ ನೀರು ಸೇವನೆಯಿಂದ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವವರ ಚಿಕಿತ್ಸೆಗೆ ಸೂಕ್ತ ವ್ಯವಸ್ಥೆ ಮಾಡುವಂತೆ ಆದೇಶಿಸಿದರು. ಇದನ್ನೂ ಓದಿ: ಮನೀಶ್ ಸಿಸೋಡಿಯಾ ನ್ಯಾಯಾಂಗ ಬಂಧನ ವಿಸ್ತರಣೆ

    ಮೈಸೂರು ಜಿಲ್ಲೆಯ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಕಲುಷಿತ ನೀರು ಸೇವಿಸಿದ ಪರಿಣಾಮ ಓರ್ವ ಯುವಕ ಮೃತಪಟ್ಟಿದ್ದಾನೆ. ಅಲ್ಲದೇ ಮೂವರ ಸ್ಥಿತಿ ಚಿಂತಾಜನಕವಾಗಿದ್ದು, ಒಟ್ಟು 48 ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದನ್ನೂ ಓದಿ: ಮೈಸೂರು: ಕಲುಷಿತ ನೀರು ಸೇವಿಸಿ ಯುವಕ ಸಾವು – 40 ಕ್ಕೂ ಹೆಚ್ಚು ಮಂದಿ ಅಸ್ವಸ್ಥ

    ಮೈಸೂರು ನಗರಕ್ಕೆ ಹೊಂದಿಕೊಂಡಂತೆ ಇರುವ ಕೆ.ಸಾಲುಂಡಿ ಗ್ರಾಮದಲ್ಲಿ ಕಳೆದ ಎರಡು ದಿನಗಳಿಂದ ಗ್ರಾಮಸ್ಥರಲ್ಲಿ ವಾಂತಿ-ಬೇಧಿ ಶುರುವಾಗಿತ್ತು. ಗ್ರಾಮಕ್ಕೆ ಕುಡಿಯುವ ನೀರು ಸರಬರಾಜು ಆಗುವ ಲೈನ್‌ಗೆ ಡ್ರೈನೇಜ್ ನೀರು ಸೇರಿದ ಪರಿಣಾಮ ಗ್ರಾಮಸ್ಥರು ಸಾಲು ಸಾಲಾಗಿ ಅಸ್ವಸ್ಥರಾದರು. ಸೋಮವಾರ ತೀವ್ರ ವಾಂತಿ-ಬೇಧಿಯಿಂದ ನಗರದ ಖಾಸಗಿ ಆಸ್ಪತ್ರೆಗೆ ಕನಕರಾಜ್ (23) ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಎಮಿರೇಟ್ಸ್ ವಿಮಾನಕ್ಕೆ‌ ಸಿಲುಕಿ 40 ರಾಜಹಂಸ ಹಕ್ಕಿಗಳು ಸಾವು