Tag: K-Set Examination

  • ನ.24ಕ್ಕೆ ಕೆ-ಸೆಟ್, ರಾಯಚೂರು ವಿವಿ ಪರೀಕ್ಷೆ- ಕೆಇಎ

    ನ.24ಕ್ಕೆ ಕೆ-ಸೆಟ್, ರಾಯಚೂರು ವಿವಿ ಪರೀಕ್ಷೆ- ಕೆಇಎ

    ಬೆಂಗಳೂರು: ಪದವಿ ಕಾಲೇಜು ಉಪನ್ಯಾಸಕರ ಅರ್ಹತಾ ಪರೀಕ್ಷೆಯಾದ ಕೆ-ಸೆಟ್ (KSET) ಪರೀಕ್ಷೆ ಈ ಹಿಂದೆ ನಿಗದಿಪಡಿಸಿದ ಹಾಗೆ ನ.24ರಂದು ನಡೆಯಲಿದೆ. ಹಾಗೂ ರಾಯಚೂರು (Raichur) ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆ ಕೂಡ ಅದೇ ಇನ ಬೆಂಗಳೂರಿನಲ್ಲಿ (Bengaluru) ನಡೆಯಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್ ಪ್ರಸನ್ನ ತಿಳಿಸಿದ್ದಾರೆ.

    ಈ ಎರಡೂ ಪರೀಕೆಗಳಿಗೆ ಸಂಬಂಧಿಸಿದಂತೆ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದ್ದು, ಕೆಇಎ ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು. ಈ ಬಾರಿಯೂ ಅಭ್ಯರ್ಥಿಗಳ ಅನುಕೂಲಕ್ಕಾಗಿ, ಅಭ್ಯಾಸ ಮಾಡಿಕೊಳ್ಳಲಿ ಎನ್ನುವ ಕಾರಣಕ್ಕೆ ಮಾದರಿ ಓಎಂಆರ್ ಶೀಟ್ ಬಿಡುಗಡೆ ಮಾಡಲಾಗಿದೆ. ಅದನ್ನು ಒಮ್ಮೆ ಬಬಲ್ ಮಾಡಿ ಅಭ್ಯಾಸ ಮಾಡಿಕೊಂಡರೆ ಓಎಂಆರ್ ಶೀಟ್‌ನಲ್ಲಿ ಆಗುವ ತಪ್ಪುಗಳನ್ನು ತಪ್ಪಿಸಬಹುದು. ಬಳಿಕ ಈ ಶೀಟ್ ಅನ್ನು ಪರೀಕ್ಷಾ ಕೇಂದ್ರಕ್ಕೆ ತರುವಂತಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪಿಎಸ್ಐ ನೇಮಕ ಅಂತಿಮ ಫಲಿತಾಂಶ ಪ್ರಕಟ – ಕೆಇಎ

    ಈ ಎರಡೂ ಪರೀಕ್ಷೆಗಳಿಗೆ ಪತ್ರಿಕೆ 1 ಮತ್ತು 2 ಇದೆ. ಹಾಗೆಯೇ ಪ್ರತ್ಯೇಕ ಓಎಂಆರ್ ಉತ್ತರ ಪತ್ರಿಕೆ ಮತ್ತು ಪ್ರಶ್ನೆ ಪತ್ರಿಕೆ ಇದ್ದು ಪರೀಕ್ಷೆ ಆರಂಭದಲ್ಲಿ ಒಟ್ಟಿಗೆ ನೀಡಲಾಗುತ್ತದೆ. ಅಭ್ಯರ್ಥಿಗಳು ಪತ್ರಿಕೆ-1ರ ಉತ್ತರಗಳನ್ನು ಪತ್ರಿಕೆ 1ರ ಓಎಂಆರ್ ಉತ್ತರ ಪತ್ರಿಕೆಯಲ್ಲೇ ದಾಖಲಿಸಬೇಕು. ಹಾಗೆಯೇ ಪತ್ರಿಕೆ- 2ರದ್ದು ಕೂಡ ಮಾಡಬೇಕು. ಈ ವಿಷಯದಲ್ಲಿ ಗೊಂದಲ ಮಾಡಿಕೊಳ್ಳುವುದು ಬೇಡ ಎಂದು ಸಲಹೆ ನೀಡಿದ್ದಾರೆ.

    ಕೆ-ಸೆಟ್ ಪರೀಕ್ಷೆಯನ್ನು 1.05 ಲಕ್ಷ ಮಂದಿ ತೆಗೆದುಕೊಂಡಿದ್ದಾರೆ. ಹಾಗೆಯೇ ರಾಯಚೂರು ವಿವಿ ಸಹಾಯಕ ಉಪನ್ಯಾಸಕರ ನೇಮಕಾತಿ ಪರೀಕ್ಷೆಯನ್ನು 2,000 ಮಂದಿ ತೆಗೆದುಕೊಂಡಿದ್ದಾರೆ. ಕೆ-ಸೆಟ್ ಪರೀಕ್ಷೆ 12 ಜಿಲ್ಲೆಗಳಲ್ಲಿ ನಡೆಯಲಿದೆ ಎಂದು ವಿವರಿಸಿದರು. ಇದನ್ನೂ ಓದಿ: ತೇಜಸ್ವಿ ಸೂರ್ಯ ವಿರುದ್ಧ ಎಫ್ಐಆರ್‌ಗೆ ಹೈಕೋರ್ಟ್‌ ತಡೆ

    ಜಿಟಿಟಿಸಿ ಪರೀಕ್ಷೆ:
    ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ)ದ ವಿವಿಧ ಹುದ್ದೆಗಳಿಗೆ ಡಿ.9, 10, 11 ಮತ್ತು 14ರಂದು ಪರೀಕ್ಷೆ ನಡೆಯಲಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ‘108’ ಸಿಬ್ಬಂದಿಗೆ ಸರ್ಕಾರದಿಂದ ವೇತನ ಬಾಕಿ ಉಳಿಸಿಕೊಂಡಿಲ್ಲ: ದಿನೇಶ್ ಗುಂಡೂರಾವ್

  • ನವೆಂಬರ್ 5 ಕೆ-ಸೆಟ್ ಪರೀಕ್ಷೆ: ಕೆಇಎ

    ನವೆಂಬರ್ 5 ಕೆ-ಸೆಟ್ ಪರೀಕ್ಷೆ: ಕೆಇಎ

    ಬೆಂಗಳೂರು: ಪ್ರಸಕ್ತ ಸಾಲಿನ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (K-SET)ಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ‌ ನಡೆಸುತ್ತಿದ್ದು, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಸೆಪ್ಟೆಂಬರ್ 10ರಿಂದ ಆರಂಭವಾಗಲಿದೆ.

    ಸೆ.5ರಂದು ಅಧಿಸೂಚನೆ ಹೊರಡಿಸಲಾಗುತ್ತದೆ. ಅದೇ ದಿನ ಮಾಹಿತಿ ಪುಸ್ತಕ ಕೂಡ ಪ್ರಕಟಿಸಲಾಗುತ್ತದೆ. ಸೆ.30 ರ ವರೆಗೂ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಆ.31ರಿಂದ ಬೆಂಗಳೂರು-ಶಿವಮೊಗ್ಗ ವಿಮಾನಯಾನ ಸೇವೆಗೆ ವಿದ್ಯುಕ್ತ ಚಾಲನೆ

    ಅರ್ಜಿ ಶುಲ್ಕ ಪಾವತಿಸಲು ಅ.3 ಕೊನೆ ದಿನ. ನವೆಂಬರ್ 5 ರಂದು ಲಿಖಿತ ಪರೀಕ್ಷೆ ಇರುತ್ತದೆ ಎಂದು ಅವರು ತಿಳಿಸಿದ್ದಾರೆ.

    ವಿಜ್ಞಾನ, ಮಾನವಿಕ ವಿಭಾಗಗಳ ಒಟ್ಟು 41 ವಿಷಯಗಳ ಅರ್ಹರಿಗೆ ಪರೀಕ್ಷೆ ನಡೆಸಲಾಗುತ್ತದೆ. ಕೆಇಎ ಇದೇ ಮೊದಲು ಈ ಪರೀಕ್ಷೆ ನಡೆಸುತ್ತಿದೆ. ಇದನ್ನೂ ಓದಿ: ಎರಡೂ ಕಡೆ ಬಾಗಿಲು ಇರುವ ಬಸ್ ಇದ್ದಂತೆ ನಮ್ಮ ಪಕ್ಷ: ಸಂತೋಷ್ ಲಾಡ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಜುಲೈ 25ರಂದು ಕೆ-ಸೆಟ್ ಪರೀಕ್ಷೆ

    ಜುಲೈ 25ರಂದು ಕೆ-ಸೆಟ್ ಪರೀಕ್ಷೆ

    ಬೆಂಗಳೂರು: ಮೈಸೂರು ವಿಶ್ವವಿದ್ಯಾಲಯ ಕಾರಣಾಂತರಗಳಿಂದ ಮುಂದೂಡಿದ್ದ, ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆಎಸ್.ಇ.ಟಿ)ಯ ದಿನಾಂಕವನ್ನು ನಿಗದಿ ಪಡಿಸಿದೆ.

    ಮೈಸೂರು ವಿಶ್ವವಿದ್ಯಾಲಯ, ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯನ್ನು ದಿನಾಂಕ 11ರ ಏಪ್ರಿಲ್ 2021 ರಂದು ನಡೆಸಬೇಕಾಗಿತ್ತು. ಆದರೆ ಕಾರಣಾಂತರಗಳಿಂದ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಆದ್ದರಿಂದ ಸದರಿ ಕೆ-ಸೆಟ್ 2021 ಪರೀಕ್ಷೆಯನ್ನು 25-07-2021 ರ ಭಾನುವಾರ ನಡೆಸಲು ತೀರ್ಮಾನಿಸಲಾಗಿದೆ.

    ಎಲ್ಲಾ ನೋಂದಾಯಿತ ಅಭ್ಯರ್ಥಿಗಳು ಕೆಸೆಟ್ 2021ರ ಪರೀಕ್ಷೆಗೆ ಸಂಬಂಧಿಸಿದಂತೆ ಕೆಸೆಟ್ ವೈಬ್ ಸೈಟ್ http://kset.uni.mysore.ac.in/ ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆಯಬಹುದಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: ರಾಯಚೂರಿನಲ್ಲಿ ಮಣ್ಣೆತ್ತಿನ ಅಮವಾಸ್ಯೆ ಸಂಭ್ರಮ – ಜೋಡಿ ಎತ್ತುಗಳಿಗೆ ಫುಲ್ ಡಿಮ್ಯಾಂಡ್