Tag: K. Shankar

  • ‘ಹಲೋ ಸರ್’ ಚಿತ್ರಕ್ಕೆ ಮುಹೂರ್ತ : ಕೆ.ಶಂಕರ್ ನಿರ್ದೇಶನದ ಸಿನಿಮಾ

    ‘ಹಲೋ ಸರ್’ ಚಿತ್ರಕ್ಕೆ ಮುಹೂರ್ತ : ಕೆ.ಶಂಕರ್ ನಿರ್ದೇಶನದ ಸಿನಿಮಾ

    ಹಿಂದೆ ಮುಕ್ತಿ, ಆರ್ಟಿಕಲ್ 370 ಚಿತ್ರ ನಿರ್ದೇಶಿಸಿದ  ಕೆ.ಶಂಕರ್ (Shankar) ಇದೀಗ ಮತ್ತೊಂದು ಚಿತ್ರ ನಿರ್ದೇಶನಕ್ಕೆ ಕೈ ಹಾಕಿದ್ದಾರೆ. ಆ ಚಿತ್ರದ ಹೆಸರು ‘ಹಲೋ ಸರ್’‌ (Hello Sir). ಗಾಳಿ ಆಂಜನೇಯಸ್ವಾಮಿ ದೇವಸ್ಥಾನದ ಹತ್ತಿರ ಬರುವ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದಲ್ಲಿ ಈ ಚಿತ್ರದ ಮುಹೂರ್ತ ಸಮಾರಂಭ ನೆರವೇರಿತು. ಮೊದಲ ದೃಶ್ಯಕ್ಕೆ ಭಾ.ಮ. ಗಿರೀಶ್ ಕ್ಯಾಮೆರಾ ಸ್ವಿಚಾನ್ ಮಾಡಿದರೆ, ನಿರ್ಮಾಪಕ ರಮೇಶ್ ಕ್ಲಾಪ್ ಮಾಡಿದರು. ನಾಯಕ, ನಾಯಕಿ ದೇವರನ್ನು ಪ್ರಾರ್ಥಿಸುವ ಪ್ರಥಮ ದೃಶ್ಯವನ್ನು ನಿರ್ದೇಶಕ ಶಂಕರ್ ಚಿತ್ರಿಸಿಕೊಂಡರು.

    ತಮ್ಮ ಹಣ, ಅಂತಸ್ತಿನ ಪ್ರಭಾವ ಬಳಸಿಕೊಂಡು ಕಾನೂನು ಉಲ್ಲಂಘಿಸಿ, ಸಮಾಜದ ವ್ಯವಸ್ಥೆಯನ್ನು ಬುಡಮೇಲು  ಮಾಡುತ್ತಿರುವವರ ವಿರುದ್ದ ಹೋರಾಡುವ ಯುವಕನ ಕಥೆಯಿದು.  ಇಂದಿನಿಂದಲೇ ಚಿತ್ರೀಕರಣ ಆರಂಭಿಸಿ 45 ದಿನಗಳ ಕಾಲ ಮಂಗಳೂರು, ಜೋಗಫಾಲ್ಸ್, ತಲಕಾಡು, ಮಹದೇವಪುರದ ಸುತ್ತಮುತ್ತ 45 ದಿನಗಳ‌ ಕಾಲ ಈ ಚಿತ್ರದ ಚಿತ್ರೀಕರಣ ನಡೆಸುವ ಯೋಜನೆ ಚಿತ್ರತಂಡಕ್ಕಿದೆ.

     

    ಶ್ರೀ ಅಂಕುರ ಕ್ರಿಯೆಷನ್ ಬ್ಯಾನರ್ ಅಡಿ ಎಲ್. ಮಂಜುನಾಥ್ ಮತ್ತು ಗೆಳೆಯರು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಕೆ ಶಂಕರ್ ಕಥೆ, ಚಿತ್ರಕಥೆ ಸಂಭಾಷಣೆ ಬರೆದು ಆಕ್ಷನ್ ಕಟ್ ಹೇಳುತ್ತಿದ್ದಾರೆ. ಎಂ.ಎನ್.ಕೃಪಾಕರ್ ಅವರ ಸಂಗೀತ, ಚಂದ್ರು ಸೊಂಡೇಕೊಪ್ಪ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ. ಮನ್ವಿತ್, ಸಮನ್ವಿತಾ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದು ಉಳಿದ ಕಲಾವಿದರ ಆಯ್ಕೆ ನಡೆಯುತ್ತಿದೆ.

  • ನಟ ತಬಲಾ ನಾಣಿಗೆ ಹೆಂಡತಿ ಬೇಕಂತೆ

    ನಟ ತಬಲಾ ನಾಣಿಗೆ ಹೆಂಡತಿ ಬೇಕಂತೆ

    ಈ‌ ಹಿಂದೆ ದೇಶಪ್ರೇಮ ಸಾರುವ ಆ್ಯಕ್ಟ್ 370  ಎಂಬ ಚಿತ್ರ ನಿರ್ದೇಶಿಸಿದ್ದ ಕೆ.ಶಂಕರ್ (K. Shankar) ಅವರೀಗ ಕಾಮಿಡಿ ಜಾನರ್  ಚಿತ್ರವೊಂದಕ್ಕೆ ಕೈ ಹಾಕಿದ್ದಾರೆ. ಲೈರಾ ಎಂಟರ್  ಟೈನ್ಮೆಂಟ್ ಅಂಡ್ ಮೀಡಿಯಾ ಮೂಲಕ  ಭರತ್ ಗೌಡ ಮತ್ತು ಸಿ.ರಮೇಶ್ ಜೊತೆಯಾಗಿ ನಿರ್ಮಿಸುತ್ತಿರುವ, ಕೆ.ಶಂಕರ್ ನಿರ್ದೇಶನವಿರುವ  ಆ ಚಿತ್ರದ ಹೆಸರು ‘ನನಗೂ ಹೆಂಡ್ತಿ ಬೇಕು’ (Nanagu Hendti Beku).  ದೃಷ್ಟಿ ವಿಕಲಚೇತನನೊಬ್ಬ ಮದುವೆಯಾಗಲು ಹೊರಟಾಗ ನಡೆಯುವ  ಪ್ರಸಂಗಗಗಳನ್ನು  ಹಾಸ್ಯಮಯವಾಗಿ ಹೇಳುವ ಕಥಾಹಂದರ ಹೊಂದಿರುವ ಈ ಚಿತ್ರದ ಕ್ಲೈಮ್ಯಾಕ್ಸ್ ಭಾಗದ ಚಿತ್ರೀಕರಣ  ನಡೆಯುತ್ತಿದೆ. ಕೆ. ಶಂಕರ್ ಅವರೇ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರ ಸಂಪೂರ್ಣ ಕಾಮಿಡಿ ಜಾನರ್  ಚಿತ್ರವಾಗಿದೆ.

    ಮದುವೆಯಾಗಲು ಹೊರಟು  ಒಂದು ಹೆಣ್ಣುಕೂಡ  ಸಿಗದೇ ಪರಿತಪಿಸುವ ಕುರುಡನ ಪಾತ್ರದಲ್ಲಿ ಹಾಸ್ಯನಟ ತಬಲ ನಾಣಿ (Tabla Nani) ಅವರು  ಕಾಣಿಸಿಕೊಂಡಿದ್ದಾರೆ. ತಬಲ ನಾಣಿಗೆ ಎದುರು ಬ್ಯಾಂಕ್ ಜನಾರ್ಧನ್ ಮತ್ತು ಬಾಲು ನಕರಾತ್ಮಕ ಪಾತ್ರದಲ್ಲಿ ರಂಜಿಸಲಿದ್ದಾರೆ. ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕೋಟೂರ್  ಒಬ್ಬ ಮೂಕಿಯಾಗಿ ನಟಿಸಿದ್ದಾರೆ. ಚಿತ್ರದಲ್ಲಿ ಎರಡು  ಫೈಟ್ ಮತ್ತು ಎರಡು ಹಾಡುಗಳಿದ್ದು,  ಕೆ.ಎಮ್. ಇಂದ್ರ ಅವರ ಸಂಗೀತ ಸಂಯೋಜನೆಯಿದೆ.

     

    ಇಡೀ ಚಿತ್ರದ ಚಿತ್ರೀಕರಣ  ಚಿತ್ರದುರ್ಗದಲ್ಲಿ ನಡೆಯುತ್ತಿದೆ. ಈ ಚಿತ್ರದಲ್ಲಿ ತಬಲಾ ನಾಣಿ, ರಾಜ್ ಬಾಲ, ಬ್ಯಾಂಕ್ ಜನಾರ್ಧನ್, ಶೃತಿ, ಚೈತ್ರಾ ಕೋಟೂರ್ (Chaitra Kotooru), ರಮೇಶ್ ಭಟ್, ಕಿಲ್ಲರ್ ವೆಂಕಟೇಶ್ ಗಣೇಶ್ ರಾವ್, ದೊಡ್ಡ ರಂಗೇಗೌಡ, ಧರ್ಮ, ಕೆಜಿಎಫ್ ಕೃಷ್ಣಪ್ಪ, ಪ್ರಿಯಾಂಕ, ಗಾನವಿ ಮುಂತಾದವರು ಪ್ರಮುಖ ಪಾತ್ರಗಳಲ್ಲಿ  ನಟಿಸುತ್ತಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]