Tag: K Sudhakar Rao

  • 7ನೇ ವೇತನ ಆಯೋಗದ ಶಿಫಾರಸುಗಳಿಂದ ರಾಜ್ಯ ಸರ್ಕಾರಕ್ಕೆ ವಾರ್ಷಿಕ 17,500 ಕೋಟಿ ಹೊರೆ: ಸುಧಾಕರ್ ರಾವ್ ಸ್ಪಷ್ಟನೆ

    7ನೇ ವೇತನ ಆಯೋಗದ ಶಿಫಾರಸುಗಳಿಂದ ರಾಜ್ಯ ಸರ್ಕಾರಕ್ಕೆ ವಾರ್ಷಿಕ 17,500 ಕೋಟಿ ಹೊರೆ: ಸುಧಾಕರ್ ರಾವ್ ಸ್ಪಷ್ಟನೆ

    ಬೆಂಗಳೂರು: 7ನೇ ವೇತನ ಆಯೋಗದಿಂದ (7th Pay Commission) ಸಿಎಂಗೆ ವರದಿ ಸಲ್ಲಿಸಿದ್ದೇವೆ. ಸರ್ಕಾರಿ ನೌಕರರ ಮೂಲ ವೇತನದ ಮೇಲೆ 27.5% ವೇತನ ಹೆಚ್ಚಳ ಮಾಡಲು ಶಿಫಾರಸು ಮಾಡಿದ್ದೇವೆ ಎಂದು ರಾಜ್ಯ 7ನೇ ವೇತನ ಆಯೋಗದ ಅಧ್ಯಕ್ಷ ಸುಧಾಕರ್ ರಾವ್ (K Sudhakar Rao) ಹೇಳಿದ್ದಾರೆ.

    ಸರ್ಕಾರಕ್ಕೆ ವರದಿ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ಕನಿಷ್ಠ ಮೂಲ ವೇತನವನ್ನು 17,000 ದಿಂದ 27,000ಕ್ಕೆ ಹೆಚ್ಚಳ ಮಾಡಲು ಶಿಫಾರಸು ಮಾಡಿದ್ದೇವೆ. ಪ್ರಮುಖವಾಗಿ ಎಲ್ಲ ಭತ್ಯೆಗಳ ಹೆಚ್ಚಳಕ್ಕೂ ಶಿಫಾರಸು ಮಾಡಿದ್ದೇವೆ. ಒಟ್ಟಾರೆ 7ನೇ ವೇತನ ಆಯೋಗದ ಶಿಫಾರಸುಗಳಿಂದ ಸರ್ಕಾರಕ್ಕೆ ವಾರ್ಷಿಕ 17,500 ಕೋಟಿ ಹೆಚ್ಚುವರಿ ಹೊರೆ ಆಗಲಿದೆ. ಅಂತಿಮ ವರದಿ ಜಾರಿಗೆ ಬಂದಾಗ ಹಾಲಿ ಕೊಡುತ್ತಿರುವ ಮಧ್ಯಂತರ ಪರಿಹಾರ ಇರಲ್ಲ. ಅಂತಿಮ ವರದಿ ಜಾರಿ ಆಗುವ ತನಕ ಮಧ್ಯಂತರ ಪರಿಹಾರ ಮುಂದುವರಿಯುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ಯದುವೀರ್ ವಿರುದ್ಧ ತುಟಿ ಬಿಚ್ಚಬೇಡಿ: ‘ಕೈ’ ನಾಯಕರಿಗೆ ಸಿಎಂ ಎಚ್ಚರಿಕೆ

    5 ವರ್ಷಕೊಮ್ಮೆ ವೇತನ ಆಯೋಗ ರಚನೆ, ಶಿಫಾರಸುಗಳ ಬಗ್ಗೆ ಕೆಲವರಿಗೆ ಅಸಮಾಧಾನ ಇರಬಹುದು. ಹಾಗಾಗಿ ಕೇಂದ್ರ ಸರ್ಕಾರದ ಮಾದರಿಯಲ್ಲಿ ವೇತನ ಹೆಚ್ಚಳದ ಬಗ್ಗೆ ರಾಜ್ಯ ಸರ್ಕಾರ ವರದಿ ಕೇಳಿತ್ತು. ಕೇಂದ್ರದ ವೇತನ ಹೆಚ್ಚಳ ರೀತಿ ರಾಜ್ಯದಲ್ಲಿಯೂ ಜಾರಿ ಹೇಗೆ ಮಾಡಬಹುದು ಎಂಬ ಬಗ್ಗೆಯೂ ವರದಿ ನೀಡಿದ್ದೇವೆ ಎಂದು ಸುಧಾಕರ್ ರಾವ್ ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ಏಳನೇ ವೇತನ ಆಯೋಗ ವರದಿ ಸಲ್ಲಿಕೆ; 27.5% ರಷ್ಟು ಹೆಚ್ಚಳಕ್ಕೆ ಶಿಫಾರಸು

  • ಏಳನೇ ವೇತನ ಆಯೋಗ ವರದಿ ಸಲ್ಲಿಕೆ; 27.5% ರಷ್ಟು ಹೆಚ್ಚಳಕ್ಕೆ ಶಿಫಾರಸು

    ಏಳನೇ ವೇತನ ಆಯೋಗ ವರದಿ ಸಲ್ಲಿಕೆ; 27.5% ರಷ್ಟು ಹೆಚ್ಚಳಕ್ಕೆ ಶಿಫಾರಸು

    – ವರದಿಯ ಶಿಫಾರಸುಗಳನ್ನು ಪರಿಶೀಲಿಸಿ, ಸೂಕ್ತ ತೀರ್ಮಾನ: ಸಿದ್ದರಾಮಯ್ಯ

    ಬೆಂಗಳೂರು: ರಾಜ್ಯದ 7ನೇ ವೇತನ ಆಯೋಗವು (7th Pay Commission) ಇಂದು ವರದಿಯನ್ನು ಸಲ್ಲಿಸಿದ್ದು, ಮೂಲವೇತನದ 27.5% ರಷ್ಟು ಹೆಚ್ಚಳ ಮಾಡಲು ಶಿಫಾರಸು ಮಾಡಿದೆ. ವರದಿಯನ್ನು ಪರಿಶೀಲಿಸಿ ಸರ್ಕಾರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ತಿಳಿಸಿದರು.

    ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ ಸುಧಾಕರ್ ರಾವ್  (K Sudhakar Rao) ಅಧ್ಯಕ್ಷತೆಯ ಏಳನೇ ವೇತನ ಆಯೋಗದ ವರದಿ ಸ್ವೀಕರಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವೇತನ ಆಯೋಗದ ಅವಧಿಯನ್ನು ಮೂರು ತಿಂಗಳು ವಿಸ್ತರಿಸಲಾಗಿತ್ತು. ಈ ಅವಧಿಯು ಮಾರ್ಚ್ 15ರಂದು ಮುಕ್ತಾಯಗೊಂಡಿದೆ. ಶುಕ್ರವಾರ ನಾನು ಮೈಸೂರಿನಲ್ಲಿದ್ದ ಕಾರಣ ವರದಿ ಸ್ವೀಕರಿಸಲು ಸಾಧ್ಯವಾಗಿರಲಿಲ್ಲ. ಅದಕ್ಕಾಗಿ ಇಂದು ವರದಿಯನ್ನು ಸ್ವೀಕರಿಸಲಾಗಿದೆ ಎಂದರು. ಇದನ್ನೂ ಓದಿ: ಈಶ್ವರಪ್ಪ ಹಿರಿಯ ನಾಯಕರು, ಅವರ ಮನವೊಲಿಸುತ್ತೇವೆ: ಪ್ರಹ್ಲಾದ್ ಜೋಶಿ

    ವರದಿಯಲ್ಲಿ ಕನಿಷ್ಠ ಮೂಲವೇತನವನ್ನು 17,000 ರೂ. ಗಳಿಂದ 27,000 ರೂ.ಗಳಿಗೆ ಹೆಚ್ಚಿಸುವಂತೆ ಶಿಫಾರಸು ಮಾಡಲಾಗಿದೆ. ಇದರೊಂದಿಗೆ ಇನ್ನೂ ಅನೇಕ ಶಿಫಾರಸುಗಳಿದ್ದು, ವರದಿಯನ್ನು ಆರ್ಥಿಕ ಇಲಾಖೆಗೆ ನೀಡಲಾಗಿದೆ. ಆರ್ಥಿಕ ಇಲಾಖೆಯು ವರದಿಯನ್ನು ಕೂಲಂಕಷವಾಗಿ ಅಧ್ಯಯನ ಮಾಡಿದ ನಂತರ ನೀಡುವ ಸಲಹೆಗಳ ಆಧಾರದಲ್ಲಿ ಸರ್ಕಾರ ತೀರ್ಮಾನ ಕೈಗೊಳ್ಳಲಿದೆ ಎಂದು ತಿಳಿಸಿದರು. ಇದನ್ನೂ ಓದಿ: ಮೈಸೂರಿನಿಂದ ಲಕ್ಷ್ಮಣ್‌, ಚಾಮರಾಜನಗರದಿಂದ ಹೆಚ್.ಸಿ.ಮಹದೇವಪ್ಪ ಪುತ್ರನಿಗೆ ʼಕೈʼ ಟಿಕೆಟ್ ಫೈನಲ್?

    ಆಯೋಗದ ಸದಸ್ಯರಾದ ಪಿ.ಬಿ. ರಾಮಮೂರ್ತಿ, ಶ್ರೀಕಾಂತ್ ವನಹಳ್ಳಿ, ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಡಾ.ಕೆ.ವಿ. ತ್ರಿಲೋಕಚಂದ್ರ, ಹಣಕಾಸು ಇಲಾಖೆ ಕಾರ್ಯದರ್ಶಿ ಡಾ. ಪಿ.ಸಿ. ಜಾಫರ್, ವೇತನ ಆಯೋಗದ ಸದಸ್ಯ ಕಾರ್ಯದರ್ಶಿ ಹೆಫ್ಸಿಬಾರಾಣಿ ಕೊರ್ಲಪಾಟಿ ಉಪಸ್ಥಿತರಿದ್ದರು. ಇದನ್ನೂ ಓದಿ: ಈಶ್ವರಪ್ಪ ವೈಯಕ್ತಿಕವಾಗಿ ನನ್ನ ಮೇಲೆ ಆರೋಪ ಮಾಡ್ತಿದ್ದಾರೆ: ಬಿಎಸ್‌ವೈ