Tag: K Venkatesh

  • KMF ನಂದಿನಿಯ ಹೊಸ ದಾಖಲೆ – ದಸರಾ, ದೀಪಾವಳಿಯಲ್ಲಿ 1,100 ಮೆಟ್ರಿಕ್ ಟನ್ ಸಿಹಿಉತ್ಪನ್ನಗಳ ಮಾರಾಟ

    KMF ನಂದಿನಿಯ ಹೊಸ ದಾಖಲೆ – ದಸರಾ, ದೀಪಾವಳಿಯಲ್ಲಿ 1,100 ಮೆಟ್ರಿಕ್ ಟನ್ ಸಿಹಿಉತ್ಪನ್ನಗಳ ಮಾರಾಟ

    ಬೆಂಗಳೂರು: ದಸರಾ, ದೀಪಾವಳಿ ಹಬ್ಬದ ಸಂದರ್ಭದಲ್ಲಿ 1,100 ಮೆಟ್ರಿಕ್ ಟನ್ ಸಿಹಿ ಉತ್ಪನ್ನಗಳ ಮಾರಾಟ ಮಾಡುವ ಮೂಲಕ ಕೆಎಂಎಫ್‌ನ ನಂದಿನಿ (KMF Nandini) ಬ್ರ್ಯಾಂಡ್‌ ಹೊಸ ದಾಖಲೆ ನಿರ್ಮಿಸಿದೆ ಎಂದು ಸಚಿವ ಕೆ.ವೆಂಕಟೇಶ್ (K Venkatesh) ತಿಳಿಸಿದರು.

    ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ ಅವರು, ಪ್ರತಿ ವರ್ಷ ದಸರಾ ಮತ್ತು ದೀಪಾವಳಿ ಹಬ್ಬಗಳ ಸಂದರ್ಭದಲ್ಲಿ ಸಿಹಿತಿನಿಸುಗಳಿಗೆ ರಾಜ್ಯದಾದ್ಯಂತ ಹೆಚ್ಚಿನ ಬೇಡಿಕೆ ಕಂಡುಬರುತ್ತದೆ. ಈ ಹಬ್ಬದ ಅವಧಿಯಲ್ಲಿ ನಂದಿನಿ ಬ್ರ್ಯಾಂಡ್‌ನಡಿಯಲ್ಲಿ ಲಭ್ಯವಿರುವ 40ಕ್ಕೂ ಹೆಚ್ಚು ಸಿಹಿ ಉತ್ಪನ್ನ ಮಾದರಿಗಳ ಉತ್ಪಾದನೆ ಮತ್ತು ಮಾರಾಟಕ್ಕೆ ಕೆಎಂಎಫ್ ಮುಂಚಿತ ಸಿದ್ಧತೆ ಕೈಗೊಂಡಿತ್ತು. 2025ರ ಹಬ್ಬದ ಅವಧಿಗೆ ಹೆಚ್ಚುವರಿ ಬೇಡಿಕೆಯನ್ನು ಪರಿಗಣಿಸಿ, ಸುಮಾರು ಎರಡು ತಿಂಗಳುಗಳ ಮುಂಚಿತವಾಗಿ ಎಲ್ಲ ಸದಸ್ಯ ಹಾಲು ಒಕ್ಕೂಟಗಳ ಸಹಕಾರದೊಂದಿಗೆ ನಿಖರ ಯೋಜನೆ ರೂಪಿಸಿ 1000 ಮೆಟ್ರಿಕ್ ಟನ್ ಮಾರಾಟ ಗುರಿ ನಿಗಿದಪಡಿಸಲಾಯಿತು. ಸದರಿ ಗುರಿಯನ್ನು ಮೀರಿ ಈ ವರ್ಷ ಕೆಎಂಎಫ್ ಮತ್ತು ಸದಸ್ಯ ಹಾಲು ಒಕ್ಕೂಟಗಳು ಒಟ್ಟಾಗಿ 1100 ಮೆಟ್ರಿಕ್ ಟನ್ ಸಿಹಿ ಉತ್ಪನ್ನಗಳನ್ನು ಮಾರಾಟ ಮಾಡಿದ್ದು, ಒಟ್ಟಾರೆ 46.00 ಕೋಟಿ ರೂ.ಗಳ ದಾಖಲೆಯ ವಹಿವಾಟು ಸಾಧಿಸುವ ಮೂಲಕ ಒಂದು ಮಹತ್ವದ ಮೈಲುಗಲ್ಲು ನಿರ್ಮಿಸಲಾಗಿದೆ. ಕಳೆದ ಸಾಲಿಗೆ ಹೋಲಿಕೆ ಮಾಡಿದಾಗ ಶೇ.38ರಷ್ಟು ವಹಿವಾಟು ಪ್ರಗತಿಯಾಗಿದ್ದು, ಇದು ಕೆ.ಎಂ.ಎಫ್ ಇತಿಹಾಸದಲ್ಲಿಯೇ ಸರ್ವಕಾಲಿಕ ದಾಖಲೆಯಾಗಿದೆ ಎಂದು ಹೇಳಿದರು.ಇದನ್ನೂ ಓದಿ: ಜಪಾನ್‌ನ ಮೊದಲ ಮಹಿಳಾ ಪ್ರಧಾನಿಯಾಗಿ ಬಲಪಂಥೀಯ ನಾಯಕಿ ಸನೆ ತಾಕೈಚಿ ಆಯ್ಕೆ

    ಕರ್ನಾಟಕ ಹಾಲು ಮಹಾಮಂಡಳಿ ನಿಯಮಿತ (KMF) ಸಂಸ್ಥೆಯು ಕಳೆದ ಐದು ದಶಕಗಳಿಂದ ರಾಜ್ಯದ ಹೈನುಗಾರಿಕೆ ಮತ್ತು ಸಹಕಾರ ಕ್ಷೇತ್ರದಲ್ಲಿ ಪ್ರಮುಖ ಸ್ಥಾನವನ್ನು ಹೊಂದಿದೆ. ಪ್ರತಿದಿನ ರಾಜ್ಯದ ವಿವಿಧ ಹೈನುಗಾರ ರೈತರಿಂದ ಸರಾಸರಿ 1 ಕೋಟಿ ಲೀಟರ್ ಹಾಲು ಸಂಗ್ರಹಿಸಲಾಗುತ್ತಿದ್ದು, ಅದರಲ್ಲಿ ಸುಮಾರು 65 ಲಕ್ಷ ಲೀಟರ್ ಹಾಲು, ಮೊಸರು ಹಾಗೂ ಯುಎಚ್ ಹಾಲು ಉತ್ಪನ್ನಗಳನ್ನು ರಾಜ್ಯ ಮತ್ತು ಹೊರರಾಜ್ಯ ಮಾರುಕಟ್ಟೆಗಳಲ್ಲಿ ಗ್ರಾಹಕರಿಗೆ ತಲುಪಿಸಲಾಗುತ್ತಿದೆ ಎಂದರು.

    ನಂದಿನಿ ಬ್ರ್ಯಾಂಡ್‌ನಡಿಯಲ್ಲಿ ಹಾಲಿನೊಂದಿಗೆ ತುಪ್ಪ ಬೆಣ್ಣೆ, ಪನೀರ್, ಸಿಹಿ ತಿನಿಸುಗಳು, ಹಾಲಿನ ಪುಡಿ, ಪಾನೀಯಗಳು ಸೇರಿದಂತೆ 175ಕ್ಕೂ ಅಧಿಕ ಬಗೆಯ ಹಾಲು ಹಾಗೂ ಹಾಲಿನ ಉತ್ಪನ್ನಗಳನ್ನು ರಾಜ್ಯ ನೆರೆರಾಜ್ಯಗಳು ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಮಹಾರಾಷ್ಟ್ರ, ಗೋವಾ, ಕೇರಳ ಹಾಗೂ ದೆಹಲಿ, ಅಸ್ಸಾಂ ಮತ್ತು ಕೆಲ ಹೊರದೇಶಗಳ ಮಾರುಕಟ್ಟೆಗಳಲ್ಲಿ ಯಶಸ್ವಿಯಾಗಿ ಮಾರಾಟ ಮಾಡಲಾಗುತ್ತಿದೆ. ಹಾಲು ಮತ್ತು ಹಾಲಿನ ಉತ್ಪನ್ನಗಳ ಶುದ್ಧತೆ, ಗುಣಮಟ್ಟ ಮತ್ತು ಕೈಗೆಟುಕುವ ಬೆಲೆಯು “ನಂದಿನಿ” ಬ್ರ್ಯಾಂಡ್‌ ಅನ್ನು ಗ್ರಾಹಕರ ವಿಶ್ವಾಸದ ಪ್ರತೀಕವನ್ನಾಗಿ ಮಾಡಿದೆ ಎಂದು ತಿಳಿಸಿದರು.

    ಈ ಸಾಧನೆ “ನಂದಿನಿ” ಬ್ರ್ಯಾಂಡ್‌ನ ಗುಣಮಟ್ಟ ಶುದ್ಧತೆ ಮತ್ತು ಗ್ರಾಹಕರ ವಿಶ್ವಾಸದ ಪ್ರತಿಫಲವಾಗಿದ್ದು, ರಾಜ್ಯದ ಹಾಲು ಉತ್ಪಾದಕರ ಶ್ರಮ ಮತ್ತು ಸಹಕಾರಿ ಬಲದ ದೃಢತೆಗೂ ಸಾಕ್ಷಿಯಾಗಿದೆ ಎಂದು ಹೇಳಿದರು.ಇದನ್ನೂ ಓದಿ: ಇದಾನಲ್ಲ ಅಮವಾಸ್ಯೆ ತೇಜಸ್ವಿ ಸೂರ್ಯ ಕೇಂದ್ರದಿಂದ ಹಣ ತರಲ್ಲ – ಸಿಎಂ

  • ಚಾಮರಾಜನಗರ | ಮಳೆಯಾಗದಿದ್ದರೆ ಜಿಲ್ಲೆಯ 154 ಗ್ರಾಮಗಳಿಗೆ ಕುಡಿಯುವ ನೀರಿನ ಸಮಸ್ಯೆ

    ಚಾಮರಾಜನಗರ | ಮಳೆಯಾಗದಿದ್ದರೆ ಜಿಲ್ಲೆಯ 154 ಗ್ರಾಮಗಳಿಗೆ ಕುಡಿಯುವ ನೀರಿನ ಸಮಸ್ಯೆ

    ಚಾಮರಾಜನಗರ: ಮುಂಬರುವ ದಿನಗಳಲ್ಲಿ ಸಮರ್ಪಕ ಮಳೆಯಾಗದಿದ್ದರೆ ಜಿಲ್ಲೆಯ 154 ಗ್ರಾಮಗಳಿಗೆ ಕುಡಿಯುವ ನೀರಿನ (Drinking Water) ಸಮಸ್ಯೆ ಎದುರಾಗಲಿದೆ ಎಂದು ಚಾಮರಾಜನಗರದ (Chamarajanagara) ಅಧಿಕಾರಿಗಳು ಜಿಲ್ಲಾ ಉಸ್ತುವಾರಿ ಸಚಿವರಿಗೆ ಮಾಹಿತಿ ನೀಡಿದರು.

    ಕುಡಿಯುವ ನೀರು ನಿರ್ವಹಣೆ, ಜಾನುವಾರುಗಳಿಗೆ ಮೇವು ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ (K Venkatesh) ಅವರು ನಡೆಸಿದ ಸಭೆಯಲ್ಲಿ ಅಧಿಕಾರಿಗಳು ಮಾಹಿತಿ ನೀಡಿದರು. ಇದನ್ನೂ ಓದಿ: ನಾನು ರೌಡಿಶೀಟರ್ ಅಲ್ಲ, ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಯಾವುದೇ ಬಾಕಿ ಇರಿಸಿಕೊಂಡಿಲ್ಲ: ಹರೀಶ್ ಇಂಜಾಡಿ ಸ್ಪಷ್ಟನೆ

    ಸದ್ಯ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಇಲ್ಲ, ಆದರೆ ಮುಂಬರುವ ದಿನಗಳಲ್ಲಿ ಸಮರ್ಪಕವಾಗಿ ಮಳೆಯಾಗದಿದ್ದಲ್ಲಿ ಜಿಲ್ಲೆಯ 154 ಗ್ರಾಮಗಳಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗುವ ಸಾಧ್ಯತೆಯಿದೆ ಎಂದು ವಿವರಿಸಿದರು. ಇದನ್ನೂ ಓದಿ: ಚೀನಿ ಏರ್‌ ಡಿಫೆನ್ಸ್‌ ಜಾಮ್‌ ಮಾಡಿ 23 ನಿಮಿಷದಲ್ಲಿ ಮುಗಿಯಿತು ಕಾರ್ಯಾಚರಣೆ – ಭಾರತದ ದಾಳಿಯ ರೋಚಕ ಕಥೆ ಓದಿ

    ಜಲಜೀವನ್ ಮಿಷನ್ ಯೋಜನೆಯಡಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಮುಗಿಸಬೇಕು ಅಗತ್ಯ ಇರುವ ಕಡೆ ಬೋರ್‌ವೆಲ್‌ಗಳನ್ನು ಕೊರೆಸಬೇಕು. ಹಾಗೂ ಕೆಟ್ಟು ಹೋಗಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಕೂಡಲೇ ದುರಸ್ತಿಪಡಿಸಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕೆಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು. ಇದನ್ನೂ ಓದಿ: ಪಾಕ್‌ ಕ್ಷಿಪಣಿಯನ್ನು ಧ್ವಂಸಗೊಳಿಸಿದ್ದ AI ಆಧಾರಿತ ಆಕಾಶ್‌ತೀರ್

  • ನಾವ್ ಹೇಳಿದಂಗೆ ಕೆಲ್ಸ ಮಾಡೋ ಹಾಗಿದ್ರೆ ಇಲ್ಲಿರಿ, ಇಲ್ಲ ನಡೀರಿ: ಮಹಿಳಾ ಅಧಿಕಾರಿ ಮೇಲೆ ಸಚಿವ ವೆಂಕಟೇಶ್ ದರ್ಪ

    ನಾವ್ ಹೇಳಿದಂಗೆ ಕೆಲ್ಸ ಮಾಡೋ ಹಾಗಿದ್ರೆ ಇಲ್ಲಿರಿ, ಇಲ್ಲ ನಡೀರಿ: ಮಹಿಳಾ ಅಧಿಕಾರಿ ಮೇಲೆ ಸಚಿವ ವೆಂಕಟೇಶ್ ದರ್ಪ

    ಮೈಸೂರು: ನಾವು ಹೇಳಿದ ಹಾಗೆ ಕೆಲಸ ಮಾಡುವ ಹಾಗಿದ್ದರೆ ಇಲ್ಲಿರಿ.. ಇಲ್ಲಾ ಅಂದ್ರೆ ನಡೀರಿ ಎಂದು ಮಹಿಳಾ ಅಧಿಕಾರಿ ಮೇಲೆ ಸಚಿವ ಕೆ.ವೆಂಕಟೇಶ್ ದರ್ಪ ತೋರಿದ್ದಾರೆ ಎನ್ನಲಾದ ಆಡಿಯೋವೊಂದು ವೈರಲ್ ಆಗಿದೆ.

    ತಾನು ಸೂಚಿಸಿದ ವ್ಯಕ್ತಿಗೆ ಕೆಲಸ ಕೊಡಲಿಲ್ಲ ಎಂಬ ಕಾರಣಕ್ಕೆ ಸಮಾಜ ಕಲ್ಯಾಣ ಇಲಾಖೆ ವಸತಿ ಶಾಲೆ ಪ್ರಿನ್ಸಿಪಾಲ್‌ಗೆ ಆವಾಜ್ ಹಾಕಿದ್ದಾರೆಂಬ ಆರೋಪ ಸಚಿವರ ಮೇಲೆ ಕೇಳಿಬಂದಿದೆ.

    ಪಿರಿಯಾಪಟ್ಟಣ ತಾಲೂಕಿನ ಅಬ್ಬಳತಿ ಗ್ರಾಮದಲ್ಲಿರುವ ಶಾಲೆಯ ಪ್ರಿನ್ಸಿಪಾಲ್ ಮೇಲೆ ಸಚಿವರು ದರ್ಪ ತೋರಿದ್ದಾರೆ ಎನ್ನಲಾಗಿದ್ದು, ‘ಏನಮ್ಮ ಏನ್ ತಿಳ್ಕೊಂಡಿದಿಯ? ಮಹದೇವಪ್ಪ ಕಡೆಯವಳು ಅಂತ ಏನೇನೋ ಮಾತಾಡ್ತಿಯಂತೆ. ಮಹದೇವಪ್ಪನ ಇಲ್ಲಿಗೆ ಎಂಎಲ್‌ಎನಾ ಅಥವಾ ಮಂತ್ರಿನಾ ಎಂದು ಅವಾಜ್ ಹಾಕಿದ್ದಾರೆ.

    ತಲೆಹರಟೆ ಎಲ್ಲ ಮಾಡಬೇಡಿ. ನಾವ್ ಹೇಳಿದಂಗೆ ಕೆಲಸ ಮಾಡೋ ಹಾಗಿದ್ರೆ ಇಲ್ಲಿರಿ.. ಇಲ್ಲ ನಡೀರಿ ಎಂದು ಪಶು ಸಂಗೋಪನೆ ಸಚಿವರು ಎಚ್ಚರಿಸಿದ್ದಾರೆ ಎಂದು ತಿಳಿದುಬಂದಿದೆ.

  • ಹಾಲಿನ ದರ 10 ರೂ. ಹೆಚ್ಚಳಕ್ಕೆ ಬೇಡಿಕೆ ಇದೆ: ಸಚಿವ ವೆಂಕಟೇಶ್

    ಹಾಲಿನ ದರ 10 ರೂ. ಹೆಚ್ಚಳಕ್ಕೆ ಬೇಡಿಕೆ ಇದೆ: ಸಚಿವ ವೆಂಕಟೇಶ್

    ಬೆಂಗಳೂರು: ಬಸ್ ಟಿಕೆಟ್ ದರ ಏರಿಕೆ ಬಳಿಕ ಸರ್ಕಾರ ಜನರಿಗೆ ಮತ್ತೊಂದು ಶಾಕ್ ನೀಡಲು ಸಿದ್ಧತೆ ನಡೆಸುತ್ತಿದೆ. ಶೀಘ್ರವೇ ಹಾಲಿನ ದರ ಏರಿಕೆಗೆ (Milk Price Hike) ಸರ್ಕಾರ ಚಿಂತನೆ ನಡೆಸಿದೆ. ಈ ಬಗ್ಗೆ ಪಶು ಸಂಗೋಪನೆ ಸಚಿವ ಕೆ.ವೆಂಕಟೇಶ್ (K Venkatesh) ಖುದ್ದು ಸುಳಿವು ನೀಡಿದ್ದಾರೆ.

    ಹಾಲಿನ ದರ ಏರಿಕೆ ಬಗ್ಗೆ ‘ಪಬ್ಲಿಕ್ ಟಿವಿ’ ಜೊತೆ ಮಾತನಾಡಿದ ಅವರು, ಹಾಲಿನ ದರ ಹೆಚ್ಚಳ ಮಾಡಬೇಕು ಎಂದು ರೈತರ ಒತ್ತಾಯ ಇದೆ. ಯಾಕೆಂದರೆ ರೈತರು ಜಾನುವಾರುಗಳಿಗೆ ನೀಡುತ್ತಿರುವ ಆಹಾರ ಪದಾರ್ಥಗಳ ಬೆಲೆ ಏರಿಕೆ ಆಗಿದೆ. ಈ ಹಿನ್ನೆಲೆ ಹಾಲಿನ ದರ 10 ರೂ. ಏರಿಕೆ ಮಾಡಿ ಎಂದು ಬೇಡಿಕೆ ಇಟ್ಟಿದ್ದಾರೆ. ಈ ಬಗ್ಗೆ ನಾವಿನ್ನೂ ಚರ್ಚೆ ಮಾಡುತ್ತಿದ್ದೇವೆ. ಚರ್ಚೆ ಬಳಿಕ ಅಂತಿಮ ತೀರ್ಮಾನ ಮಾಡುತ್ತೇವೆ ಎಂದರು. ಇದನ್ನೂ ಓದಿ: ಪೀಣ್ಯ ಬಸವೇಶ್ವರ ಬಸ್ ನಿಲ್ದಾಣವಾಗುತ್ತಾ ಕಲ್ಯಾಣ ಮಂಟಪ, ಮಾಲ್?

    ರೈತರು ಹಾಲಿನ ಮೇಲೆ ಅವಲಂಬಿತರಾಗಿದ್ದಾರೆ. ದಿನೇ ದಿನೇ ಹಾಲಿನ ಉತ್ಪಾದನೆ ಹೆಚ್ಚಳ ಆಗುತ್ತಿದೆ. ರೈತರಿಗೆ ಅನ್ಯಾಯ ಆಗದಂತೆ ನೋಡಿಕೊಳ್ಳಬೇಕು. 5 ರೂ, 3 ರೂ, 10 ರೂ. ಮಾಡುತ್ತೇವೋ ಅದು ಇನ್ನೂ ತೀರ್ಮಾನ ಆಗಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: 17 ಗ್ರಾಮಗಳಿಗೆ ಕುಡಿಯುವ ನೀರು ಪೂರೈಸುವ ಶುದ್ಧೀಕರಣ ಘಟಕದಲ್ಲಿ ನಾಯಿ ಶವ ಪತ್ತೆ

    ಒಟ್ಟಾರೆ ಹಾಲಿನ ದರ ಏರಿಕೆ ಪ್ರಸ್ತಾಪ ಇರೋದು ಸತ್ಯ ಎಂದು ಸಚಿವರು ಒಪ್ಪಿಕೊಂಡಿದ್ದು, ಸಿಎಂ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್ ಕೊಟ್ಟರೆ ಶೀಘ್ರವೇ ಹಾಲಿನ ದರ ಮತ್ತಷ್ಟು ದುಬಾರಿಯಾಗುವ ಸಾಧ್ಯತೆ ಇದೆ. ಇದನ್ನೂ ಓದಿ: ಬೆಳ್ಳಂಬೆಳಗ್ಗೆ ರಾಮನಗರ ಟೌನ್ ವ್ಯಾಪ್ತಿಯಲ್ಲಿ ಕಾಡಾನೆಗಳು ಪ್ರತ್ಯಕ್ಷ

  • ಹಾಲಿನ ದರ ಏರಿಕೆ ಆಗುತ್ತಾ? – ಸಚಿವ ಕೆ.ವೆಂಕಟೇಶ್ ಹೇಳಿದ್ದೇನು?

    ಹಾಲಿನ ದರ ಏರಿಕೆ ಆಗುತ್ತಾ? – ಸಚಿವ ಕೆ.ವೆಂಕಟೇಶ್ ಹೇಳಿದ್ದೇನು?

    ಚಾಮರಾಜನಗರ: ಹಾಲಿನ ದರ ಏರಿಕೆ ಕುರಿತು ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ (K.Venkatesh) ಚಾಮರಾಜನಗರದಲ್ಲಿ ಮಾತನಾಡಿದ್ದಾರೆ.

    ಲೀಟರ್ ಹಾಲಿಗೆ 5 ರೂ. ಏರಿಕೆ ಮಾಡುವಂತೆ ರೈತರ ಒತ್ತಾಯ ಇದೆ. ರೈತರ ಒತ್ತಾಯ ಪರಿಗಣಿಸಿ ಮುಂದಿನ ದಿನಗಳಲ್ಲಿ ದರ ಏರಿಕೆಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ತಳ ಸಮುದಾಯದವರು ಸಂಸ್ಕೃತ ಕಲಿತು ಕಾವ್ಯ ರಚಿಸಿದರೆ ಅಂಥವರ ಬಗ್ಗೆ ಕಥೆ ಕಟ್ಟುತ್ತಾರೆ: ಸಿದ್ದರಾಮಯ್ಯ

    ನಾಯಕ ಸಮುದಾಯದಿಂದ ಪ್ರತ್ಯೇಕ ವಾಲ್ಮೀಕಿ ಜಯಂತಿ ಆಚರಣೆ ಕುರಿತು ಮಾತನಾಡಿ, ಈಗಾಗಲೇ ಸಿಎಂ ಸಿದ್ದರಾಮಯ್ಯ ಪುತ್ಥಳಿ ನಿರ್ಮಾಣಕ್ಕೆ ಒಪ್ಪಿಗೆ ಸೂಚಿಸಿದ್ದಾರೆ. ಕೇವಲ ವಾಲ್ಮೀಕಿ ಪುತ್ಥಳಿ ಅಷ್ಟೇ ಅಲ್ಲ ಭಗೀರಥ ಮಹರ್ಷಿ ಹಾಗೂ ಕನಕ ಮಹರ್ಷಿಯ ಪುತ್ಥಳಿಯನ್ನು ಸಹ ನಿರ್ಮಿಸುತ್ತೇವೆ. ಜಾಗ ನಿಗದಿ ಆಗಬೇಕಿದ್ದು, ಬಳಿಕ ಗುದ್ದಲಿ ಪೂಜೆ ನಡೆಯಲಿದೆ ಎಂದು ಹೇಳಿದ್ದಾರೆ.

    ಇದ್ದಕ್ಕಿದ್ದಂತೆ ಇಂದೇ ಗುದ್ದಲಿ ಪೂಜೆ ಮಾಡ್ಬೇಕಂದ್ರೆ ಸಾಧ್ಯವಾಗುತ್ತಾ? ಈಗಾಗಲೇ ನಾಯಕ ಮುಖಂಡರ ಜತೆ ನಮ್ಮ ಜಿಲ್ಲಾಡಳಿತ ಮಾತನಾಡಿದೆ. ಸಮಯಾವಕಾಶ ಬೇಕಿದೆ, ಎಲ್ಲರೂ ತಾಳ್ಮೆಯಿಂದ ಇರಬೇಕಿದೆ ಎಂದಿದ್ದಾರೆ. ಇದನ್ನೂ ಓದಿ: RSS ಅಂದ್ರೆ ‘ರೂಮರ್ಸ್‌ ಸ್ಪ್ರೆಡಿಂಗ್ ಸಂಘ್’: ಬಿ.ಕೆ.ಹರಿಪ್ರಸಾದ್ ಕಿಡಿ

  • ಹಾಲಿನ ಡೈರಿ ರಾಜಕೀಯ – ಪಶು ಸಂಗೋಪನಾ ಸಚಿವರ ಸ್ವಕ್ಷೇತ್ರದಲ್ಲೇ ಹಾಲು ಚರಂಡಿ ಪಾಲು

    ಹಾಲಿನ ಡೈರಿ ರಾಜಕೀಯ – ಪಶು ಸಂಗೋಪನಾ ಸಚಿವರ ಸ್ವಕ್ಷೇತ್ರದಲ್ಲೇ ಹಾಲು ಚರಂಡಿ ಪಾಲು

    ಮೈಸೂರು: ಬಣ ರಾಜಕೀಯದಿಂದಾಗಿ ಪಶುಸಂಗೋಪನಾ ಸಚಿವರ ತವರಲ್ಲೇ ಹಾಲು (Milk) ಚರಂಡಿ ಪಾಲಾಗಿರುವ ಘಟನೆ ಪಿರಿಯಾಪಟ್ಟಣದ (Piriyapatna) ಚಿಟ್ಟೇನಹಳ್ಳಿಯಲ್ಲಿ ನಡೆದಿದೆ. ಹಾಲು ತೆಗೆದುಕೊಳ್ಳುವ ವಿಚಾರದಲ್ಲಿ ರಾಜಕೀಯ ಮಾಡಿರುವುದರಿಂದ ಹಾಲನ್ನು ಗ್ರಾಮಸ್ಥರು ಚರಂಡಿಗೆ ಸುರಿದಿದ್ದಾರೆ.

    ಗ್ರಾಮಸ್ಥರಿಂದ ಡೈರಿಯ ಕಾರ್ಯದರ್ಶಿ ಹಾಲು ಪಡೆಯುತ್ತಿಲ್ಲ. ಪಕ್ಕದ ಬೇರೆ ಡೈರಿಗೆ ಹೋಗಿ ಹಾಲು ಹಾಕುವಂತೆ ತಾಕೀತು ಮಾಡಿದ ಕಾರಣ ದಿಕ್ಕು ತೋಚದೆ ಗ್ರಾಮಸ್ಥರು ಹಾಲನ್ನು ಚರಂಡಿಗೆ ಸುರಿದಿದ್ದಾರೆ. ಈ ವೇಳೆ ಪಶು ಸಂಗೋಪನಾ ಸಚಿವ ವೆಂಕಟೇಶ್ ಅವರ ವಿರುದ್ಧ ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ – ಸೂಕ್ತ ಸಮಯದ ಆಟೋ ಸೇವೆಗೆ ‘ಮೆಟ್ರೋ ಮಿತ್ರ’

    ಈವರೆಗೂ ಗ್ರಾಮದಲ್ಲೇ ಹಾಲು ಸ್ವೀಕಾರ ಮಾಡುತ್ತಿದ್ದ ಕಾರ್ಯದರ್ಶಿ ಸಚಿವ ವೆಂಕಟೇಶ್ (K. Venkatesh) ಅವರ ಕುಮ್ಮಕ್ಕಿನಿಂದ ಹಾಲು ಪಡೆಯದೆ ಮುಖ್ಯ ರಸ್ತೆ ದಾಟಿ ಮತ್ತೊಂದು ಬಿಎಂಸಿ ಕೇಂದ್ರಕ್ಕೆ ಹಾಲು ಹಾಕುವಂತೆ ತಾಕೀತು ಮಾಡುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಮತ್ತೊಂದು ಕೇಂದ್ರಕ್ಕೆ ಹಾಲು ಕೊಂಡೊಯ್ಯಲು ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದಾರೆ. ಮುಖ್ಯ ರಸ್ತೆ ದಾಟಿ ಹಾಲು ಹಾಕಲು ಸಮಸ್ಯೆಯಾಗುತ್ತದೆ. ರಸ್ತೆ ದಾಟುವ ವೇಳೆ ಅಪಘಾತವಾಗಿದೆ. ಇದರಿಂದ ಒಂದೇ ಡೈರಿಯಲ್ಲಿ ಹಾಲು ಹಾಕಿಸಿಕೊಳ್ಳಬೇಕು ಎಂದು ರೈತರು ಮನವಿ ಮಾಡಿದ್ದಾರೆ. ಇದನ್ನೂ ಓದಿ: KRSನಿಂದ 7ನೇ ದಿನವೂ ತಮಿಳುನಾಡಿಗೆ ನೀರು – ಮಂಡ್ಯದಲ್ಲಿ ಮುಂದುವರಿದ ಪ್ರತಿಭಟನೆಗಳು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮೂಲ ಸೌಕರ್ಯ ಕೊರತೆ – ಸಚಿವ ಕೆ.ವೆಂಕಟೇಶ್‌ಗೆ ರೈತರಿಂದ ಫುಲ್ ಕ್ಲಾಸ್

    ಮೂಲ ಸೌಕರ್ಯ ಕೊರತೆ – ಸಚಿವ ಕೆ.ವೆಂಕಟೇಶ್‌ಗೆ ರೈತರಿಂದ ಫುಲ್ ಕ್ಲಾಸ್

    ಚಾಮರಾಜನಗರ: ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ (K Venkatesh) ಅವರಿಗೆ ಚಾಮರಾಜನಗರದ ಚಾಮರಾಜೇಶ್ವರ ದೇವಾಲಯ ಆವರಣದಲ್ಲಿ ಮಂಗಳವಾರ ಜಿಲ್ಲೆಯ ರೈತರು ಫುಲ್ ಕ್ಲಾಸ್ ತೆಗೆದುಕೊಂಡ ಪ್ರಸಂಗ ನಡೆದಿದೆ.

    ಸ್ವಾತಂತ್ರ‍್ಯ ಬಂದು 76 ವರ್ಷಕಳೆದರೂ ಜಿಲ್ಲೆಗೆ ಇನ್ನೂ ಸರಿಯಾದ ಮೂಲ ಸೌಕರ್ಯಗಳು ಸಿಕ್ಕಿಲ್ಲ. ಕೇವಲ ಸರ್ಕಾರಿ (Government) ಕಾರ್ಯಕ್ರಮದಲ್ಲಿ ಮಾತ್ರ ಬಂದು ಭಾಗಿಯಾಗುತ್ತೀರಿ ಹೊತು ಕುಂದುಕೊರತೆಗಳನ್ನು ಬಗೆಹರಿಸುವ ಬಗ್ಗೆ ಗಮನ ಹರಿಸುತ್ತಿಲ್ಲ. ಮಳೆ ಇಲ್ಲದೆ ಫಸಲುಗಳು ನೆಲಕಚ್ಚಿವೆ. ಅನ್ನದಾತ ಬೆಳೆದ ಬೆಳೆಗೆ ಬೆಲೆಯಿಲ್ಲದೆ ಸಾಲದಲ್ಲಿದ್ದಾರೆ. ನೀವು ಮಂತ್ರಿಗಳಾಗಿದ್ದೀರಾ ನಿಮ್ಮದೇ ಸರ್ಕಾರ ಇದೆ, ಈಗಲಾದರೂ ನಮಗೆ ಸೂಕ್ತ ನ್ಯಾಯಕೊಡಿಸಿ ಅಂತಾ ಸಚಿವರನ್ನ ತರಾಟೆಗೆ ತೆಗೆದುಕೊಂಡರು.

    ಈ ವೇಳೆ ರೈತರನ್ನ (Farmers) ಸಮಾಧಾನಪಡಿಸಲು ಮುಂದಾದ ಸಚಿವರು ಶೀಘ್ರದಲ್ಲೇ ಸಮಸ್ಯೆಗಳನ್ನ ಬಗೆಹರಿಸುವ ಬಗ್ಗೆ ಗಮನಕೊಡುತ್ತೇವೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ಸಾರಿಗೆ ಇಲಾಖೆ ಸಿಬ್ಬಂದಿಯ ಯಡವಟ್ಟು – ಧ್ವಜಾರೋಹಣ ವೇಳೆ ಅಂಬೇಡ್ಕರ್ ಪೋಟೋ ಇಡದ್ದಕ್ಕೆ ಆಕ್ರೋಶ

    ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇನ್ನು 4 ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ (Congress Government) ಬೀಳುತ್ತೆ ಅನ್ನೋ ಪ್ರಶ್ನೆಗೆ ಉತ್ತರಿಸಿ, ಯತ್ನಾಳ್ (Basangouda Patil Yatnal) ಕನಸು ಕಾಣ್ತಿದ್ದಾರೆ. ಪಾಪ ಅವರ ಕನಸನ್ನು ನಾವು ಯಾಕೆ ಭಗ್ನ ಮಾಡಬೇಕು, ಹೇಳ್ಕೊಂಡು ತಿರುಗ್ಲಿ ಬಿಡಿ. ಅವರಿಗೆ ಕನಸು ಕಾಣಬೇಡಿ ಅಂತಾ ಹೇಳೋಕಾಗುತ್ತಾ ಎಂದು ಟಾಂಗ್ ನೀಡಿದರು.

    ಸಚಿವ ಚಲುವರಾಯಸ್ವಾಮಿ ವಿರುದ್ದ ಭ್ರಷ್ಟಾಚಾರ ಆರೋಪ ಕುರಿತು ಪ್ರತಿಕ್ರಿಯಿಸಿದ ಸಚಿವರು, ಆರೋಪ ಸುಳ್ಳು ಅಂತಾ ಸಾಭೀತಾಗ್ತಾ ಇದೆ. ಸುಮ್ಮಸುಮ್ಮನೆ ಆರೋಪ ಮಾಡಿದ್ದಾರೆ. ಯಾವ ಆರೋಪ ಸಾಬೀತು ಮಾಡಿದ್ದಾರೆ ಹೇಳಿ? ಇದು ವೈಯಕ್ತಿಕ ದ್ವೇಷ ಅಲ್ಲದೆ ಇನ್ನೇನ್ನು? ಎಂದು ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ: ಭ್ರಷ್ಟಾಚಾರ, 40% ಕಮಿಷನ್ ತಗೊಂಡಿಲ್ಲ ಅಂತ ಬಿಜೆಪಿಯವರು ಮನೆದೇವರ ಮೇಲೆ ಆಣೆ ಮಾಡ್ಲಿ: ರಾಮಲಿಂಗಾ ರೆಡ್ಡಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಚಿವರ ಪುತ್ರನ ದರ್ಬಾರ್ – ತಂದೆಯ ಕ್ಷೇತ್ರದಲ್ಲಿ ಶಕ್ತಿ ಯೋಜನೆಗೆ ಚಾಲನೆ

    ಸಚಿವರ ಪುತ್ರನ ದರ್ಬಾರ್ – ತಂದೆಯ ಕ್ಷೇತ್ರದಲ್ಲಿ ಶಕ್ತಿ ಯೋಜನೆಗೆ ಚಾಲನೆ

    ಮೈಸೂರು: ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಗೆ ಸಚಿವರ ಪುತ್ರ ತಾನೇ ಮುಂದೆ ನಿಂತು ಚಾಲನೆ ನೀಡಿದ್ದು, ಇದೀಗ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

    ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕು ಶಾಸಕ ಹಾಗೂ ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ (K Venkatesh) ಅವರ ಪುತ್ರ ತಮ್ಮ ತಂದೆಯ ಅನುಪಸ್ಥಿತಿಯಲ್ಲಿ ಸರ್ಕಾರದ ಶಕ್ತಿ ಯೋಜನೆಗೆ Shakti Scheme) ಚಾಲನೆ ನೀಡಿದ್ದಾರೆ. ಇದನ್ನೂ ಓದಿ: ಶಕ್ತಿ ಯೋಜನೆ ಎಫೆಕ್ಟ್ – ಓಲಾ, ಊಬರ್‌ಗೂ ತಟ್ಟಿದ ಬಿಸಿ

    ಪಿರಿಯಾಪಟ್ಟಣದಲ್ಲಿ ಸರ್ಕಾರಿ ಕಾರ್ಯಕ್ರಮದ ವೇದಿಕೆಯಲ್ಲಿ ಸಚಿವರ ಪುತ್ರ ನಿತಿನ್ ವೆಂಕಟೇಶ್ ಅವರ ದರ್ಬಾರ್ ನಡೆದಿದೆ. ತಾಲೂಕಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ತಂದೆ ಅನುಪಸ್ಥಿತಿಯಲ್ಲಿ ತಾನೇ ಮುಂದೆ ನಿಂತು ಶಕ್ತಿಯೋಜನೆಗೆ ಚಾಲನೆ ನೀಡಿರುವುದು ಸಾರ್ವಜನಿಕ ವಲಯದಲ್ಲಿ ಟೀಕೆಗೆ ಗುರಿಯಾಗಿದೆ. ಇದನ್ನೂ ಓದಿ: ‘ಶಕ್ತಿ’ ಯೋಜನೆಗೆ ಭರ್ಜರಿ ರೆಸ್ಪಾನ್ಸ್- ಮೊದಲ ದಿನವೇ 5.71 ಲಕ್ಷ ಮಹಿಳೆಯರ ಸಂಚಾರ