Tag: KA

  • ರಾಜ್ಯ ನಾಯಕರಿಗೆ ಕ್ಲಾಸ್‌ – ಬಂಡಾಯ ಶಮನಕ್ಕೆ ಶಾ ಮದ್ದು

    ರಾಜ್ಯ ನಾಯಕರಿಗೆ ಕ್ಲಾಸ್‌ – ಬಂಡಾಯ ಶಮನಕ್ಕೆ ಶಾ ಮದ್ದು

    ಬೆಂಗಳೂರು: ಟಿಕೆಟ್‌ ಹಂಚಿಕೆಯಾದ ಬಳಿಕ ಎದ್ದ ಬಂಡಾಯ ಇನ್ನೂ ಶಮನವಾಗದ್ದಕ್ಕೆ ಗೃಹ ಸಚಿವ ಅಮಿತ್‌ ಶಾ (Amit Shah) ರಾಜ್ಯ ನಾಯಕರ ವಿರುದ್ಧ ಗರಂ ಆಗಿದ್ದಾರೆ.

    ಶುಕ್ರವಾರ ರಾತ್ರಿ ನಗರದ ತಾಜ್‌ ವೆಸ್ಟ್‌ಎಂಡ್‌ ಹೋಟೆಲ್‌ನಲ್ಲಿ ರಾಜ್ಯ ಬಿಜೆಪಿ (BJP) ನಾಯಕರ ಜೊತೆ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ರಾಜ್ಯ ನಾಯಕರು ಬಂಡಾಯ ಶಮನದ ಸಕ್ಸಸ್‌ ರೇಟಿಂಗ್‌ ಒಪ್ಪಿಸಿದ್ದಾರೆ.

    ಹಲವೆಡೆ ಇನ್ನೂ ಬಂಡಾಯ ಶಮನವಾಗದ್ದಕ್ಕೆ ಅಮಿತ್ ಶಾ ಗರಂ ಆಗಿದ್ದು, ರಾಜ್ಯ ನಾಯಕರ ಬಂಡಾಯ ಶಮನ ಕಸರತ್ತಿಗೆ ಅತೃಪ್ತಿ ವ್ಯಕ್ತಪಡಿಸಿದ್ದಾರೆ ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ಏಪ್ರಿಲ್ 23ರವರೆಗೆ ಪ್ರಚಾರ ಕಣದಲ್ಲಿ ಅಮಿತ್‌ ಶಾ ಇರಲಿದ್ದು, ಇಂದು ದಾವಣಗೆರೆಗೆ ಭೇಟಿ ನೀಡಿ ರ‍್ಯಾಲಿ ರೋಡ್ ಶೋ ಬಳಿಕ ಮಠಾಧೀಶರನ್ನು ಭೇಟಿ ಮಾಡಲಿದ್ದಾರೆ.

    ಬಂಡಾಯ ಶಮನಕ್ಕೆ ಶಾ ಮದ್ದು
    ಬಂಡಾಯ ಶಮನಕ್ಕೆ ಗುಜರಾತ್, ಉತ್ತರ ಪ್ರದೇಶ, ಉತ್ತರಾಖಂಡ್, ಹಿಮಾಚಲ ಪ್ರದೇಶಗಳ ಪರಿಸ್ಥಿತಿಯನ್ನು ವಿವರಿಸಿ ರಾಜ್ಯಗಳ ಬಿಜೆಪಿ ನಾಯಕರೇ ಸ್ಥಳೀಯವಾಗಿ ಹೇಗೆ ಬಂಡಾಯದ ಕಿಚ್ಚು ಆರಿಸಿದ ಬಗ್ಗೆ ವಿವರಣೆ ನೀಡಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯಗಾಗಿ ಒದೆ ತಿಂದಿದ್ದೇನೆ, ನನ್ನ ಪ್ಯಾಂಟ್‌ ಹರಿದು ಹಾಕಿದ್ರು – ವಿ.ಸೋಮಣ್ಣ

    ಈ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕ (Karnataka) ತುಂಬಾ ಭಿನ್ನವಾಗಿದ್ದು ಇಲ್ಲಿ ಹಲವು ಕ್ಷೇತ್ರಗಳಲ್ಲಿ ವೈಯಕ್ತಿಕ ಮತ್ತು ಕುಟುಂಬ ವರ್ಚಸ್ಸು ಹೆಚ್ಚಾಗಿದೆ. ಜೊತೆಗೆ ಇನ್ನೂ ಅನೇಕ ಸ್ಥಳೀಯ ವಿಚಾರಗಳಿಂದ ಬಂಡಾಯ ಹೆಚ್ಚಿದೆ. ಈ ಬಂಡಾಯವನ್ನು ರಾಜ್ಯದ ನಾಯಕರೇ ಸ್ಥಳೀಯವಾಗಿ ನಿಭಾಯಿಸಬೇಕು. ಬಂಡಾಯ ಶಮನಕ್ಕೆ ಹೈಕಮಾಂಡ್ ಮುಂದಾದರೆ ಮತ್ತಷ್ಟು ಹೊಸ ಸಮಸ್ಯೆಗಳು ಸೃಷ್ಟಿ ಆಗಬಹುದು. ನೀವೇ ಹೊಣೆ ಹೊತ್ತು ಬಂಡಾಯ ಶಮನ ಮಾಡಿ ಎಂದು ಅಮಿತ್ ಶಾ ಯಡಿಯೂರಪ್ಪ, ಬೊಮ್ಮಾಯಿಗೆ ಬಿಗ್ ಟಾಸ್ಕ್ ನೀಡಿದ್ದಾರೆ.

  • ‘ಧರಣಿ ಮಂಡಲ ಮಧ್ಯದೊಳಗೆ’  ಚಿತ್ರ ತಂಡದಿಂದ ಮತ್ತೊಂದು ಹೊಸ ಚಿತ್ರಕ್ಕೆ ಚಾಲನೆ

    ‘ಧರಣಿ ಮಂಡಲ ಮಧ್ಯದೊಳಗೆ’ ಚಿತ್ರ ತಂಡದಿಂದ ಮತ್ತೊಂದು ಹೊಸ ಚಿತ್ರಕ್ಕೆ ಚಾಲನೆ

    ಗಾಗಲೇ ಒಂದು ಹೊಸ ರೀತಿಯ ಸದಭಿರುಚಿಯ ಚಿತ್ರ ಧರಣಿ ಮಂಡಲ ಮಧ್ಯದೊಳಗೆ  ಚಿತ್ರ ತಂಡ ಈಗ ಮತ್ತೊಂದು ಹೊಸ ಚಿತ್ರಕ್ಕೆ ಚಾಲನೆ ನೀಡುವ‌ ಮೂಲಕ    “K A” ಎಂಬ ಅರ್ಧ ಶೀರ್ಷಿಕೆಯನ್ನು ಅನಾವರಣ ಗೊಳಿಸಿ ಪ್ರಾರಂಭದಲ್ಲೇ  ಕುತೂಹಲವನ್ನು ಕಾಯ್ದಿರಿಸಿದ್ದಾರೆ.

    ವಿಜಯನಗರದ ಶ್ರೀ ವರಸಿದ್ಧಿ ವಿನಾಯಕ ಮತ್ತು ಶ್ರೀ ಲಕ್ಷ್ಮೀ ವೆಂಕಟೇಶ್ವರ ದೇವಾಲಯದಲ್ಲಿ ಶೀರ್ಷಿಕೆ ಅನಾವರಣದ ಕಾರ್ಯ ನೆಡೆದಿದೆ. ಧರಣಿ ಮಂಡಲ ಮಧ್ಯದೊಳಗೆ ಚಿತ್ರಕ್ಕೆ ಸಹ ನಿರ್ದೇಶಕನಾಗಿ ಕಾರ್ಯ ನಿರ್ವಹಿಸಿದ್ದ  ಸಂತೋಷ್ ಈಗ ಸ್ವತಂತ್ರ ನಿರ್ದೇಶಕನಾಗಿ ಮೊದಲ ಬಾರಿಗೆ ಆಕ್ಷನ್ ಕಟ್ ಹೇಳಲು ಸಜ್ಜಾಗಿದ್ದಾರೆ. ನಾಯಕ ನಟರಾಗಿ ಯಶ್ ಶೆಟ್ಟಿ ಹಾಗೂ ಸಿದ್ದು ಮೂಲಿಮನಿ ಬಣ್ಣ ಹಚ್ಚಿದ್ದಾರೆ

    ಯಶ್ ಶೆಟ್ಟಿ ಈಗಾಗಲೇ ಹಲವಾರು ಚಿತ್ರಗಳಲ್ಲಿ ಅಭಿನಯಿಸಿ ಪ್ರೇಕ್ಷಕರ ಮನ ಗೆದ್ದಿದ್ದಾರೆ. ಹಾಗೆಯೇ ಸಿದ್ದು ಮೂಲಿಮನಿ ಕೂಡ ತಮ್ಮ ಅಭಿನಯ ಚತುರತೆಯನ್ನು ಪ್ರೇಕ್ಷಕರ ಮುಂದಿಟ್ಟು ತಾನೊಬ್ಬ ಒಳ್ಳೆಯ ಕಲಾವಿದ ಎನ್ನುವುದನ್ನು ನಿರೂಪಿಸಿದ್ದಾರೆ. ತಾಂತ್ರಿಕವಾಗಿ “ಧರಣಿ ಮಂಡಲ ಮಧ್ಯದೊಳಗೆ” ಚಿತ್ರದಲ್ಲಿ ಕಾರ್ಯ ನಿರ್ವಹಿಸಿದ್ದ ಬಹುತೇಕ ತಂತ್ರಜ್ಞರು ಈ ಚಿತ್ರದಲ್ಲಿ ಕೈ ಜೋಡಿಸಿದ್ದಾರೆ. ಇದನ್ನೂ ಓದಿ: ಪುತ್ರಿ ಐಶ್ವರ್ಯ ಜೊತೆ ತಿರುಪತಿ ದೇವಸ್ಥಾನಕ್ಕೆ ರಜನಿಕಾಂತ್ ಭೇಟಿ

    ಛಾಯಾಗ್ರಾಹಕ ನಾಗಿ ಕೀರ್ತನ್ ಪೂಜಾರಿ, ಸಂಗೀತ ನಿರ್ದೇಶಕರಾಗಿ ರೋಣದ ಬಕ್ಕೇಷ್ ಹಾಗೂ ಕಾರ್ತೀಕ್‌ ಚಿನ್ನೋಜಿ ರಾವ್ ಜಂಟಿಯಾಗಿ ಕೆಲಸ ಮಾಡುತ್ತಿದ್ದಾರೆ, ಗೀತ ರಚನೆ ಗೌಸ್ ಪೀರ್, ಸಂಕಲನಕಾರನಾಗಿ ಉಜ್ವಲ್ ಚಂದ್ರ,ಸಾಹಸ ನಿರ್ದೇಶಕನಾಗಿ ಚಂದ್ರು ಬಂಡೆ,ಪ್ರಶಾಂತ್ ಚಿತ್ರದ ಕಲೆಯ ಭಾಗದ ಜವಾಬ್ದಾರಿ ಹೊತ್ತಿದ್ದಾರೆ, ಸಂಭಾಷಣೆಗೆ  ಅಭಿನಂದನ್ ದೇಶ್ ಪ್ರಿಯ, ಪ್ರಶಾಂತ್, ಶಿವಕುಮಾರ್, ಕಡ್ಡಿಪುಡಿ ಕಾಂತರಾಜ್ ಜೊತೆಯಾಗಿದ್ದಾರೆ. ಚಿತ್ರ ಸದ್ಯದಲ್ಲೇ ಸೆಟ್ಟೇರಲಿದ್ದು ಮುಂದಿನ ದಿನಗಳಲ್ಲಿ ಚಿತ್ರತಂಡ ಚಿತ್ರದ ಬಗ್ಗೆ ಮತ್ತಷ್ಟು  ಮಾಹಿತಿ ನೀಡಲಿದೆ.

    Live Tv
    [brid partner=56869869 player=32851 video=960834 autoplay=true]