ಮೈಸೂರು: ಹೆಚ್.ಡಿ. ಕೋಟೆ (HD Kote) ತಾಲೂಕಿನ ಕಬಿನಿ ಜಲಾಶಯದಲ್ಲಿ (Kabini Dam) ನೀರಿನ ಮಟ್ಟ ದೊಡ್ಡ ಮಟ್ಟದಲ್ಲಿ ಕುಸಿಯುತ್ತಿದೆ.
ಕಬಿನಿ ಜಲಾಶಯದಲ್ಲಿ ಈಗ ಸದ್ಯ 12 ಟಿಎಂಸಿ ನೀರಿದ್ದು ಇದರಲ್ಲಿ ಕುಡಿಯಲು ಕೇವಲ 8 ಟಿಎಂಸಿ ನೀರು ಮಾತ್ರ ಲಭ್ಯವಿದೆ. ಉಳಿದ 4 ಟಿಎಂಸಿ ನೀರು ಡೆಡ್ ಸ್ಟೊರೇಜ್. ಕಬಿನಿ ಜಲಾಶಯದಿಂದ ಬೆಂಗಳೂರು, ಮೈಸೂರಿಗೆ ನೀರು ಪೂರೈಕೆ ಆಗುತ್ತಿದೆ. ಇದನ್ನೂ ಓದಿ: TMC ಪ್ರಭಾವಿ ಶೇಖ್ ಷಹಜಹಾನ್ ಬಂಧನಕ್ಕೆ ಕೋಲ್ಕತ್ತಾ ಹೈಕೋರ್ಟ್ ಆದೇಶ
ಜಲಾಶಯದಿಂದ ಕುಡಿಯುವ ನೀರಿಗಾಗಿ ಈಗ 500 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗುತ್ತಿದ್ದು ಬೆಂಗಳೂರಿಗೆ 300 ಕ್ಯೂಸೆಕ್, ಮೈಸೂರು, ಚಾಮರಾಜನಗರಕ್ಕೆ 200 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗುತ್ತಿದೆ.
ಮೈಸೂರು: ಭರ್ತಿಯಾದ ಜಲಾಶಯ ಬಾಗಿನ ಅರ್ಪಿಸುವ ಮುನ್ನವೇ ಖಾಲಿಯಾಗುತ್ತಿದೆ. 15 ದಿನಗಳ ಹಿಂದೆಯಷ್ಟೆ ಮೈಸೂರು ಜಿಲ್ಲೆಯ ಹೆಚ್.ಡಿ ಕೋಟೆ ತಾಲೂಕಿನ ಕಬಿನಿ ಜಲಾಶಯ (Kabini Dam) ಭರ್ತಿಯಾಗಿತ್ತು. ಇದೀಗ ಜಲಾಶಯದಲ್ಲಿ 5.5 ಅಡಿಯಷ್ಟು ನೀರು ಖಾಲಿಯಾಗಿದೆ.
ಕಳೆದ 15 ದಿನಗಳ ಹಿಂದೆಯಷ್ಟೆ ಜಲಾಶಯ ಭರ್ತಿಯಾಗಿತ್ತು. ಜಲಾಶಯ ಭರ್ತಿಯಾದಾಗ ರಾಜ್ಯ ಸಿಎಂ ಬಾಗಿನ ಅರ್ಪಿಸುವುದು ಸಂಪ್ರದಾಯ. ಆದ್ರೆ ಬಾಗಿನ ಸಮರ್ಪಣೆ ಆಗಿರಲಿಲ್ಲ, ಇದೀಗ ಜಲಾಶಯದಿಂದ ತಮಿಳುನಾಡಿಗೆ ನೀರು (TamilNadu Water) ಹರಿಸುತ್ತಿರುವುದರಿಂದ 5.5 ಅಡಿಯಷ್ಟು ನೀರು ಖಾಲಿಯಾಗಿದೆ. ಇದನ್ನೂ ಓದಿ: ನಮ್ಮ ಸಿದ್ಧಾಂತ ಒಪ್ಪಿ ಬರುವವರನ್ನ ನಾವು ಸ್ವಾಗತ ಮಾಡುತ್ತೇವೆ: ಜಿ.ಪರಮೇಶ್ವರ್
ಕಳೆದ ವರ್ಷ ಉತ್ತಮ ಮಳೆಯಾಗಿದ್ದರಿಂದ ಅಂದಿನ ಸಿಎಂ ಬಸವರಾಜ ಬೊಮ್ಮಾಯಿ ಜುಲೈ ತಿಂಗಳಲ್ಲೇ ಕೆಆರ್‌ಎಸ್ ಕಬಿನಿ ಜಲಾಶಯಕ್ಕೆ ಬಾಗೀನ ಅರ್ಪಿಸಿದ್ದರು. 8 ತಿಂಗಳ ಅವಧಿಯಲ್ಲೇ ಬಾಗೀನ ಅರ್ಪಣೆ ಮಾಡಿದ್ದರು. ಆದ್ರೆ ಈ ಬಾರಿ ಮುಂಗಾರು ತಡವಾಗಿ ಆರಂಭವಾದರೂ ಸಿಎಂ ಇನ್ನೂ ಬಾಗಿನ ಅರ್ಪಿಸಿಲ್ಲ.
ಮೈಸೂರು: ಜಿಲ್ಲಾ ವ್ಯಾಪ್ತಿಯ ಪ್ರತಿಷ್ಠಿತ ಕಬಿನಿ ಜಲಾಶಯದ (Kabini Dam) ನೀರಿನ ಮಟ್ಟ ಗಣನೀಯ ಪ್ರಮಾಣದಲ್ಲಿ ಕುಸಿತ ಕಂಡಿದೆ.
ಜಲಾಶಯದಲ್ಲಿ ಒಟ್ಟು 19.50 TMC ನೀರು ಸಂಗ್ರಹವಾಗುತ್ತದೆ. ಆದ್ರೆ ಸದ್ಯಕ್ಕೆ ಜಲಾಶಯದಲ್ಲಿ 4 TMC ಮಾತ್ರ ನೀರಿನ ಸಂಗ್ರಹ ಇದೆ. ಅದರಲ್ಲಿ ಡೆಡ್ ಸ್ಟೋರೆಜ್ ತೆಗೆದರೆ ಬಳಕೆಗೆ ಸಿಗುವುದು ಕೇವಲ 2 TMC ನೀರು ಮಾತ್ರ. ಇದನ್ನೂ ಓದಿ: ಮಂಡ್ಯದ ರೈತರ ಒತ್ತಡಕ್ಕೆ ಮಣಿದ ಸರ್ಕಾರ – KRSನಿಂದ ನಾಲೆ ನೀರು
ಮಂಡ್ಯ: ಹಳೆ ಮೈಸೂರು ಭಾಗದ ಜೀವನಾಡಿಯಾಗಿರುವ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಜಲಾಶಯಕ್ಕಿಂದು ವೃಶ್ಚಿಕ ಲಗ್ನದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಬಾಗಿನ ಅರ್ಪಿಸಿದ್ದಾರೆ. ಇದಕ್ಕೂ ಮುನ್ನ ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲ್ಲೂಕಿನ ಬಿದಿರಳ್ಳಿಯಲ್ಲಿರುವ ಕಬಿನಿ ಜಲಾಶಕ್ಕೂ ಬಾಗಿನ ಕೊಟ್ಟಿದ್ದಾರೆ.
8 ತಿಂಗಳ ಅವಧಿಯಲ್ಲೇ ಬೊಮ್ಮಾಯಿ ಅವರು 2ನೇ ಬಾರಿಗೆ ಬಾಗಿನ ಅರ್ಪಿಸಿದ್ದಾರೆ. ಕೆಆರ್‌ಎಸ್ ಜಲಾಶಯ ಸಾಮಾನ್ಯವಾಗಿ ಆಗಸ್ಟ್ ನಲ್ಲಿ ಭರ್ತಿಯಾಗುತ್ತಿದ್ದರಿಂದ ಒಂದು ವರ್ಷ ಕಾಯಬೇಕಿತ್ತು. ಆದರೆ ಈ ಬಾರಿ ಮೂರು ತಿಂಗಳ ಮುಂಚೆಯೇ ಭರ್ತಿಯಾಗಿದ್ದು, 8 ತಿಂಗಳಲ್ಲೇ 2 ಬಾರಿ ಬಾಗಿನ ಅರ್ಪಿಸುವ ಅವಕಾಶ ಒದಗಿಬಂದಿದೆ. ಇದನ್ನೂ ಓದಿ: ದಕ್ಷಿಣ ಆಫ್ರಿಕಾ ಟಿ 20 ಲೀಗ್ – ಎಲ್ಲಾ 6 ತಂಡಗಳು ಐಪಿಎಲ್ ಫ್ರಾಂಚೈಸಿ ಪಾಲು
ಕಾರ್ಯಕ್ರಮದಲ್ಲಿ ಸಚಿವರಾದ ಗೋವಿಂದ ಕಾರಜೋಳ, ಕೆ.ಗೋಪಾಲಯ್ಯ, ಕೆ.ಸಿ.ನಾರಾಯಣ ಗೌಡ, ಎಸ್.ಟಿ.ಸೋಮಶೇಖರ್ ಸೇರಿದಂತೆ ಹಲವರು ಭಾಗಿಯಾಗಿದ್ದರು.
ಈ ಹಿಂದೆ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು 6 ಬಾರಿ ಬಾಗಿನ ಬಿಟ್ಟು ಅತಿ ಹೆಚ್ಚು ಬಾರಿ ಬಾಗಿನ ಅರ್ಪಿಸಿದ ಸಿಎಂ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಇದೀಗ ಅತ್ಯಂತ ಕಡಿಮೆ ಅವಧಿಯಲ್ಲೇ 2 ಬಾರಿ ಬಾಗಿನ ಅರ್ಪಿಸಿದ ಹೆಗ್ಗಳಿಕೆಗೆ ಸಿಎಂ ಬೊಮ್ಮಾಯಿ ಪಾತ್ರರಾಗಿದ್ದಾರೆ.
ಕೆಆರ್‌ಎಸ್ ಜಲಾಶಯ ಕಳೆದ ವರ್ಷ ಅಕ್ಟೋಬರ್ ತಿಂಗಳ ಕೊನೆಯ ವಾರದಲ್ಲಿ ಭರ್ತಿಯಾಗಿತ್ತು. ಆದರೆ ಈ ಬಾರಿ ಜುಲೈ ತಿಂಗಳ 2ನೇ ವಾರದಲ್ಲೇ ಭರ್ತಿಯಾಗಿದೆ. ಕೆಆರ್‌ಎಸ್‌ನ ಇತಿಹಾಸದಲ್ಲೇ ಜುಲೈ ತಿಂಗಳಲ್ಲಿ 6ನೇ ಬಾರಿಗೆ ಭರ್ತಿಯಾಗಿದೆ. ಈ ಹಿಂದೆ 1980, 2006, 2007, 2009, 2018ರಲ್ಲಿ ಭರ್ತಿಯಾಗಿದೆ.
Live Tv
[brid partner=56869869 player=32851 video=960834 autoplay=true]
ಮೈಸೂರು: ಎಚ್.ಡಿ ಕೋಟೆ ತಾಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯದ ಒಳಹರಿವು ಹೆಚ್ಚಳವಾಗಿದೆ. 4,261 ಕ್ಯೂಸೆಕ್ ನೀರು ಜಲಾಶಯಕ್ಕೆ ಬರುತ್ತಿದ್ದರೆ 500 ಕ್ಯೂಸೆಕ್ ನೀರನ್ನು ಬಿಡಲಾಗುತ್ತಿದೆ.
ಕಳೆದ ವರ್ಷ ಈ ಅವಧಿಯಲ್ಲಿ ಜಲಾಶಯಕ್ಕೆ 15,000 ಕ್ಯೂಸೆಕ್ ನೀರು ಒಳಹರಿವು ಇದ್ದರೆ, 10,000 ಕ್ಯೂಸೆಕ್ ಹೊರಹರಿವು ಇತ್ತು. ಕಬಿನಿ ಜಲಾಶಯದ ಗರಿಷ್ಟ ಮಟ್ಟ 2284 ಅಡಿ ಆಗಿದ್ದು, ಇಂದಿನ ಮಟ್ಟ 2259 ಅಡಿ ನೀರಿದೆ. ಕಳೆದ ವರ್ಷ 2282 ಅಡಿ ಇತ್ತು. ಕಳೆದ ವರ್ಷ 18.55 ಟಿಎಂಸಿ ನೀರಿದ್ದರೆ ಈಗ 7.04 ಟಿಎಂಸಿ ನೀರಿದೆ.
ಕಾವೇರಿ ನದಿ ಪಾತ್ರದಲ್ಲಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಕೆಆರ್‍ಎಸ್‍ನ ಒಳಹರಿವಿನಲ್ಲಿ ಅಲ್ಪ ಪ್ರಮಾಣದ ಏರಿಕೆ ಆಗಿದೆ. ಕೆಆರ್‍ಎಸ್‍ನ ಗರಿಷ್ಟ ಮಟ್ಟ 124.80 ಅಡಿ ಇದ್ದು, ಇಂದಿನ ಮಟ್ಟ 80.75 ಅಡಿ ಆಗಿದೆ. ಒಳಹರಿವು 2,222 ಕ್ಯೂಸೆಕ್ ಇದ್ದು, 291 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ.
ಕ್ಯೂಸೆಕ್ ಮತ್ತು ಟಿಎಂಸಿ ಎಂದರೆ ಎಷ್ಟು?
ಕ್ಯೂಸೆಕ್ ಎಂಬುದು Cubic feet per Second. ಪ್ರತಿ ಸೆಕೆಂಡಿಗೆ ಒಂದು ಘನ ಅಡಿ ನೀರು ಹರಿದರೆ ಅದು ಒಂದು ಕ್ಯೂಸೆಕ್ ನೀರು ಎಂದು ಕರೆಯಲ್ಪಡುತ್ತದೆ. ಒಂದು ಘನ ಅಡಿ ನೀರನ್ನು ಲೀಟರುಗಳಿಗೆ ಪರಿವರ್ತಿಸಿದರೆ ಸುಮಾರು 28.317 ಲೀಟರುಗಳಾಗುತ್ತವೆ. 11,524 ಕ್ಯೂಸೆಕ್ ನೀರು 24 ಗಂಟೆಯ ಕಾಲ ನಿರಂತರ ಹರಿದರೆ ಒಂದು ಟಿಎಂಸಿ ಎಂದು ಕರೆಯಲಾಗುತ್ತದೆ. 10 ಸಾವಿರ ಕ್ಯೂಸೆಕ್ ನೀರು 24 ಗಂಟೆ ನಿರಂತರ ಹರಿದರೆ 0.864 ಟಿಎಂಸಿ ಅಡಿ ಆಗುತ್ತದೆ. 35.87 ಅಡಿ ಅಳದಷ್ಟು ನೀರನ್ನು ಒಂದು ಚದರ ಮೈಲಿ ಪ್ರದೇಶದಲ್ಲಿ ಸಂಗ್ರಹಿಸಿದರೆ ಒಂದು ಟಿಎಂಸಿ ಅಡಿ ಆಗುತ್ತದೆ.
ಮೈಸೂರು: ಕಬಿನಿ ರಭಸಕ್ಕೆ ನೂರಾರು ಎಕರೆ ಜಮೀನು ಬೆಳೆ ನಾಶವಾಗಿದ್ದು, ಇದೀಗ ಹೆಚ್.ಡಿ.ಕೋಟೆ ಬೆಳ್ತೂರು ಗ್ರಾಮದ ರೈತರು ಕಂಗಾಲಾಗಿದ್ದಾರೆ.
ಕೃಷಿ ಮಾಡಲೆಂದು ಇಲ್ಲಿನ ರೈತರು ಬ್ಯಾಂಕ್ ಹಾಗೂ ಸ್ತ್ರೀ ಶಕ್ತಿ ಸಂಘಗಳಿಂದ ಸಾಲ ತಂದು ನಾಟಿ ಮಾಡಿದ್ದರು. ಆದ್ರೆ ಇದೀಗ ಪ್ರವಾಹದ ರಭಸಕ್ಕೆ ಬೆಳೆ ಸಂಪೂರ್ಣ ನಾಶವಾಗಿದ್ದು, ರೈತರು ಆತಂಕಗೊಂಡಿದ್ದಾರೆ.
ಬೆಳೆ ನಾಶದಿಂದ ಕಂಗೆಟ್ಟ ರೈತರು ಇದೀಗ ನಮಗೆ ಪರಿಹಾರ ಕೊಡಿ ಅಂತ ಆಗ್ರಹಿಸುತ್ತಿದ್ದಾರೆ. ಒಂದು ವೇಳೆ ಸರ್ಕಾರ ನಮಗೆ ಸೂಕ್ತ ಪರಿಹಾರ ನೀಡದೇ ಇದ್ದಲ್ಲಿ ಆತ್ಮಹತ್ಯೆಯ ಮಾರ್ಗ ಹಿಡಿಯುವುದಾಗಿ ಎಚ್ಚರಿಸಿದ್ದಾರೆ. ಇದನ್ನೂ ಓದಿ: ಕಬಿನಿ ಜಲಾಶಯದಿಂದ ದಾಖಲೆ ಪ್ರಮಾಣದಲ್ಲಿ ನೀರು ಹೊರಕ್ಕೆ
ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನ ಬೀಚನಹಳ್ಳಿ ಗ್ರಾಮದಲ್ಲಿರುವ ಜಲಾಶಯದ ಒಳಹರಿವು 73.300 ಕ್ಯೂಸೆಕ್- ಹೊರಹರಿವು 80.000 ಕ್ಯೂಸೆಕ್ ಆಗಿದ್ದು, ಜಲಾಶಯದಿಂದ ನಾಲೆಗಳಿಗೆ 1200 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಇನ್ನು ಜಲಾಶಯದ ಇಂದಿನ ನೀರಿನ ಮಟ್ಟ 2281.41 ಅಡಿಯಾಗಿದ್ದು, ಜಲಾಶಯದ ಗರಿಷ್ಠ ನೀರಿನ ಮಟ್ಟ 2284 ಅಡಿಯಾಗಿದೆ.
ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಗುರುವಾರ ತಮ್ಮ ಸಚಿವ ಸಂಪುಟದ ಸಹೋದ್ಯೋಗಿಗಳ ಜೊತೆಯಲ್ಲಿ ಕಬಿನಿ ಜಲಾಶಯಕ್ಕೆ ಬಾಗಿನ ಸಮರ್ಪಿಸಿ ವಂದನೆ ಸಲ್ಲಿಸಿದರು.
ಆರಂಭದಲ್ಲಿ ಮುಂಗಾರು ಮಳೆ ಕಡಿಮೆಯಾಗಿದ್ದ ಕಾರಣ ಕಬಿನಿ ಜಲಾಶಯ ತುಂಬುವ ಯಾವ ಲಕ್ಷಣಗಳು ಇರಲಿಲ್ಲ. ಆದರೆ ಕೊನೆಯಲ್ಲಿ ಮುಂಗಾರು ಮಳೆ ಚುರುಕಾದ ಕಾರಣ ಎಚ್.ಡಿ.ಕೋಟೆ ತಾಲೂಕಿನ ಬೀಚನಹಳ್ಳಿಯ ಕಬಿನಿ ಜಲಾಶಯ ಭರ್ತಿಯಾಗಿದೆ.
2284 ಅಡಿ ಇದೆ ಎತ್ತರದ ಕಬಿನಿ ಜಲಾಶಯದ ಇಂದಿನ ಒಳಹರಿವು 15,800 ಕ್ಯೂಸೆಕ್ ಇದೆ. ಜಲಾಶಯದಿಂದ ಕಪಿಲಾ ನದಿಗೆ 8,300 ಕ್ಯೂಸೆಕ್‍ನೀರು ಹೊರ ಬಿಡಲಾಗುತ್ತಿದೆ.
ಜಲಾಶಯ 19.50 ಟಿಎಂಸಿ ಅಡಿ ನೀರು ಸಂಗ್ರಹದ ಸಾಮರ್ಥ್ಯವಿದ್ದು, ಅದರಲ್ಲಿ 16.50 ಟಿಎಂಸಿ ಅಡಿ ನೀರನ್ನು ಮಾತ್ರ ಬಳಕೆ ಮಾಡಬಹುದಾಗಿದೆ.
18 ದಿನಗಳಿಂದ ಬೀಳುತ್ತಿರುವ ಮಳೆಯಿಂದಾಗಿ, ನಾಲ್ಕು ವರ್ಷಗಳ ಬಳಿಕ ಕಬಿನಿ ಜಲಾಶಯ ಭರ್ತಿಯಾಗಿದೆ. ಪ್ರತಿವರ್ಷ ಬೆಳೆಗೆ ಸುಮಾರು 20 ಟಿಎಂಸಿ ಅಡಿ ಮತ್ತು ಕುಡಿಯಲು 7.86 ಟಿಎಂಸಿ ಅಡಿ ನೀರಿನ ಅವಶ್ಯಕತೆ ಇದೆ. ಬೆಂಗಳೂರು ಮಂಡ್ಯ ಮೈಸೂರು ನಗರಗಳು ಸೇರಿದಂತೆ ಪ್ರತಿ ತಿಂಗಳು ಕುಡಿಯಲು 0.655 ಟಿಎಂಸಿ ಅಡಿ ನೀರು ಬೇಕಿರುತ್ತದೆ.
ಮೈಸೂರು: ವರುಣ ದೇವನ ಕೃಪೆಯಿಂದಾಗಿ ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಒಂದಾದ ಮೈಸೂರು ಜಿಲ್ಲೆಯ ಕಬಿನಿ ಜಲಾಶಯ ಭರ್ತಿಗೆ ಇನ್ನು 2 ಅಡಿ ಬೇಕಿದೆ.
ಗರಿಷ್ಟ 2284 ಅಡಿಗಳ ಸಾಮಾಥ್ರ್ಯವನ್ನು ಹೊಂದಿರುವ ಕಬಿನಿಯಲ್ಲಿ ಈಗ ನೀರಿನ ಮಟ್ಟ 2281 ಅಡಿಗಳಿಗೆ ತಲುಪಿದೆ. ಜಲಾಶಯದ ಸಂಪೂರ್ಣ ಭರ್ತಿಗೆ ಕೇವಲ 3 ಅಡಿಗಳು ಮಾತ್ರ ಬಾಕಿ ಉಳಿದಿದೆ.
ಕಬಿನಿ ಜಲಾನಯನ ಪ್ರದೇಶ ಹಾಗೂ ಕೇರಳದ ವೈನಾಡು ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಕಪಿಲ ನದಿ ಪಾತ್ರದಲ್ಲಿ ಪ್ರವಾಹ ಉಂಟಾಗುವ ಸಾಧ್ಯತೆ ಇರುವ ಕಾರಣ ನದಿಯ ಪಾತ್ರದ ಇಕ್ಕೆಲಗಳ ತಗ್ಗು ಪ್ರದೇಶದಲ್ಲಿ ವಾಸಿಸುತ್ತಿರುವ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆಯನ್ನು ಸಹ ನೀಡಲಾಗಿದೆ.
ಜಲಾಶಯದ ಒಳಹರಿವಿನ ಪ್ರಮಾಣದಲ್ಲಿಯೂ ಭಾರೀ ಹೆಚ್ಚಳ ಕಂಡುಬಂದಿದೆ. ಇಂದು ಬೆಳಿಗ್ಗೆಯ ವೇಳೆಗೆ ಒಳಹರಿವು 13 ಸಾವಿರ ಕ್ಯೂಸೆಕ್ ಒಳಹರಿವು ಇದ್ದರೆ, 2 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದೆ. ಮಳೆಯಿಂದಾಗಿ ಒಳಹರಿವು ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆ ಇರುವ ಕಾರಣ ಪರಿಣಾಮ ಜಲಾಶಯದ ಒಳಹರಿವಿಗೆ ಅನುಗುಣವಾಗಿ ಹೊರಹರಿವಿನ ಪ್ರಮಾಣವನ್ನು ಹೆಚ್ಚಿಸುವ ಸಾಧ್ಯತೆ ಯಿದೆ.
ಮೈಸೂರು: ಕಬಿನಿಯಿಂದ ತಮಿಳುನಾಡಿಗೆ ನೀರು ಬಿಡುತ್ತಿರುವುದನ್ನ ಖಂಡಿಸಿ ಟಿ.ನರಸೀಪುರದ ಕಾವೇರಿ ನದಿಗೆ ಇಳಿದು ರೈತರು ಪ್ರತಿಭಟನೆ ನಡೆಸಿದ್ದಾರೆ.
ಕಬಿನಿ ಜಲಾಶಯದಿಂದ ತಮಿಳುನಾಡಿಗೆ ರಾತ್ರೋ ರಾತ್ರಿ 6000 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಜಲಾಶಯಕ್ಕೆ 13,000 ಕ್ಯೂಸೆಕ್ ಒಳಹರಿವು ಇದ್ದು, ಜಲಾಶಯದ ಭರ್ತಿಗೆ ಇನ್ನು 10 ಅಡಿ ಬಾಕಿ ಇದೆ. ಜಲಾಶಯ ತುಂಬುವ ಮೊದಲೇ ತಮಿಳುನಾಡಿಗೆ ನೀರು ಹರಿಸುತ್ತಿರೋದು ಈ ಭಾಗದ ರೈತರ ಆಕ್ರೋಶಕ್ಕೆ ಕಾರಣವಾಗಿದೆ.
ಈ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸಿದ ರೈತರು ತಕ್ಷಣ ನೀರು ನಿಲ್ಲಿಸುವಂತೆ ಆಗ್ರಹಿಸಿದರು. ಪ್ರತಿಭಟನಾಕಾರರನ್ನ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟು ಕೊನೆಗೆ ದೋಣಿಗಳ ಸಹಾಯದಿಂದ ಪ್ರತಿಭಟನಾಕಾರರನ್ನ ದಡಕ್ಕೆ ಕರೆತರಲಾಯಿತು.
ತಮಿಳುನಾಡಿಗೆ ನೀರು ಬಿಡುವಂತೆ ಸೂಚನೆ ನೀಡಿರುವ ಮೇಲಾಧಿಕಾರಿಗಳ ಆದೇಶವನ್ನಷ್ಟೆ ಪಾಲನೆ ಮಾಡ್ತಿದ್ದೇವೆ ಎಂದು ಜಲಾಶಯದ ಅಧಿಕಾರಿಗಳು ಹೇಳಿದ್ದಾರೆ. ಜಲಾಶಯದಿಂದ ನೇರವಾಗಿ ನದಿಯ ಮೂಲಕ 6,000 ಕ್ಯೂಸೆಕ್ ನೀರು ಹೊರಕ್ಕೆ ಬಿಟ್ಟಿದ್ದಾರೆ. ನಾಲೆಗಳ ಮೂಲಕ ನೀರು ಬಿಟ್ಟಿದ್ದರೆ ರೈತರಿಗೆ ಅನುಕೂಲವಾಗಿ ಕೆರೆ ಕಟ್ಟೆಗಳು ತುಂಬುತ್ತಿದ್ದವು. ಆದರೆ ನದಿಯ ಮೂಲಕ ಬಿಟ್ಟ ನೀರು ಕೇವಲ ತಮಿಳುನಾಡಿಗೆ ಮಾತ್ರ ಹರಿಯಲಿದೆ. ಹೀಗಾಗಿ ಈ ಭಾಗದ ರೈತರಿಗೆ ಯಾವ ಪ್ರಯೋಜನವು ಇಲ್ಲದಂತಾಗಿದೆ ಅನ್ನೋದು ರೈತರ ಆರೋಪವಾಗಿದೆ.
ಸದ್ಯ ಜಲಾಶಯದ ಇಂದಿನ ನೀರಿನ ಮಟ್ಟ 2273.30 ಅಡಿಗಳಷ್ಟಿದ್ದು, ಜಲಾಶಯದ ಗರಿಷ್ಠ ಮಟ್ಟ 2284 ಅಡಿ, ತುಂಬೋಕೆ ಇನ್ನು 10 ಅಡಿ ಮಾತ್ರ ಬಾಕಿ ಇದೆ.
ಮಂಡ್ಯ/ಮೈಸೂರು: ಕೆ.ಆರ್.ಎಸ್ ಜಲಾಶಯ ತುಂಬುವ ಮೊದಲೇ ತಮಿಳುನಾಡಿಗೆ ನೀರು ಹರಿಸ್ತಿರೋ ಶಂಕೆ ವ್ಯಕ್ತವಾಗ್ತಿದೆ.
ರಾತ್ರೋರಾತ್ರಿ ನೀರಾವರಿ ಇಲಾಖೆ ಜಲಾಶಯದ ಹೊರ ಹರಿವಿನ ಪ್ರಮಾಣ ಹೆಚ್ಚಿಸಿದೆ. ಸಾವಿರ ಕ್ಯೂಸೆಕ್ ಇದ್ದ ಹೊರ ಹರಿವಿನ ಪ್ರಮಾಣ 2,300 ಕೂಸೆಕ್ ಗೆ ಏರಿಕೆಯಾಗಿದೆ. ಜಲಾಶಯ ತುಂಬುವ ಮೊದಲೇ ನದಿಗೆ ಹೆಚ್ಚಿನ ನೀರು ಬಿಡುತ್ತಿರೋ ಬಗ್ಗೆ ರೈತರು ಅಸಮಧಾನ ವ್ಯಕ್ತಪಡಿಸಿದ್ದಾರೆ. ನಾಲೆಗೆ ನೀರು ಬಿಡಿ ಎಂದ್ರೆ ನದಿಗೆ ನೀರು ಬಿಟ್ಟ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರೈತರ ಪ್ರತಿಭಟನೆ, ಎಚ್ಚರಿಕೆಯ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಪೊಲೀಸ್ ಹೈ ಅಲರ್ಟ್ ಘೋಷಿಸಲಾಗಿದೆ. ಮಂಡ್ಯ, ಮಳವಳ್ಳಿ, ಮದ್ದೂರು, ಶ್ರೀರಂಗಪಟ್ಟಣದಲ್ಲಿ ಹೈ ಅಲರ್ಟ್ ಇದ್ದು, ಎಸ್‍ಪಿ ಜಿ. ರಾಧಿಕಾ ನೇತೃತ್ವದಲ್ಲಿ ಹೆಚ್ಚಿನ ಗಸ್ತು ನಿಯೋಜಿಸಲಾಗಿದೆ. ಹೊರ ಜಿಲ್ಲೆಗಳಿಂದಲೂ ಪೊಲೀಸರ ಆಗಮನವಾಗಿದೆ.
ತಮಿಳುನಾಡಿಗೆ ನೀರು ಬಿಟ್ಟರೆ ಬಲಿಯಾಕ್ತೀವಿ ಎಂದು ನೀರಾವರಿ ಇಲಾಖೆ ಅಧಿಕಾರಿಗೆ ಮಾಜಿ ಸಂಸದ, ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಅಧ್ಯಕ್ಷ ಡಾ.ಜಿ.ಮಾದೇಗೌಡ ಖಡಕ್ ಎಚ್ಚರಿಕೆ ನೀಡಿದ್ದಾರೆ. ನೀರಾವರಿ ಇಲಾಖೆ ಸೂಪರಿಂಟೆಂಡೆಂಟ್ ಎಂಜಿನಿಯರ್ ವಿಜಯ್ ಕುಮಾರ್ ಜೊತೆ ದೂರವಾಣಿ ಸಂಭಾಷಣೆ ನಡೆಸಿದ ಅವರು, ಹೊರ ಹರಿವು ಹೆಚ್ಚಳದ ಬಗ್ಗೆ ಮಾಹಿತಿ ಕೇಳಿದ್ರು. ಈ ವೇಳೆ ಅಧಿಕಾರಿಗಳು ಮಾದೇಗೌಡರಿಗೆ ಸುಳ್ಳು ಮಾಹಿತಿ ನೀಡಿದ್ದು, ಬೆಂಗಳೂರು ಜನರ ಕುಡಿಯುವ ಉಪಯೋಗಕ್ಕೆಂದು ಹೇಳಿದ್ದಾರೆ. ಈಗಾಗಲೇ ರೈತರು ಹೋರಾಟ ಮಾಡ್ತಿದ್ದಾರೆ. ನೀರು ಬಿಟ್ಟರೆ ರೋಡಲ್ಲಿ ಓಡಾಡೋಕೆ ಬಿಡಲ್ಲ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.
ತಮಿಳುನಾಡಿಗೆ ನೀರು ಬಿಡಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕಾವೇರಿ ಕಣಿವೆಯಲ್ಲಿ ಹೋರಾಟ ಶುರುವಾಗಿದೆ. ಮಂಡ್ಯದ ರೈತ ಸಂಘದಿಂದ ಪ್ರತ್ಯೇಕ ಹೋರಾಟ ನಡೆದಿದೆ. ಮಂಡ್ಯದ ಸರ್.ಎಂ.ವಿ ಪ್ರತಿಮೆ ಬಳಿ ರೈತರಿಂದ ಹೆದ್ದಾರಿ ತಡೆ ತಡೆದು ಪ್ರತಿಭಟಿಸಲಾಗಿದ್ದು, ಮತ್ತೊಂದು ಬಣದಿಂದ ನೀರಾವರಿ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಲಾಗಿದೆ. ಬೆಂಗಳೂರಿನ ಮೈಸೂರು ಹೆದ್ದಾರಿ ತಡೆದು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅತ್ತ ಮೈಸೂರು ಜಿಲ್ಲೆಯ ಎಚ್.ಡಿ. ಕೋಟೆ ತಾಲೂಕಿನಲ್ಲಿನ ಕಬಿನಿ ಡ್ಯಾಂ ನಿಧನವಾಗಿ ಭರ್ತಿಯಾಗುತ್ತಿದೆ. ಇದರಿಂದ ರೈತರ ಮುಖದಲ್ಲಿ ಸಂತಸ ಮನೆ ಮಾಡಿದೆ. ಆದರೆ, ಅಷ್ಟರಲ್ಲೇ ಕಬಿನಿ ಜಲಾಶಯದ ಅಧಿಕಾರಿಗಳು ಅನಧಿಕೃತವಾಗಿ ಜಲ ವಿದ್ಯುತ್ ಕಂಪನಿ ಬಳಕೆಗಾಗಿ ಡ್ಯಾಂನಿಂದ ನೀರು ಹರಿಸಿದ್ದು, ಇದರಿಂದ ರೈತರು ಸಿಟ್ಟಿಗೆದ್ದಿದ್ದಾರೆ.
ಜಲಾಶಯದ ಗರಿಷ್ಟ ಮಟ್ಟ 2284 ಅಡಿ ಇದೆ. ಇವತ್ತು ಜಲಾಶಯದ ನೀರಿನ ಮಟ್ಟ 2260 ಅಡಿ ಇದೆ. ಒಳಹರಿವಿನ ಪ್ರಮಾಣ 7,500 ಕ್ಯೂಸೆಕ್ ಇದ್ದು, ಅಧಿಕೃತವಾಗಿ ಹೊರ ಹರಿವು 1,100 ಕ್ಯೂಸೆಕ್ ಇದೆ. ಆದರೆ ಡ್ಯಾಂನಿಂದ ನೀರು ಹರಿಯುತ್ತಿರುವ ಪ್ರಮಾಣ ನೋಡಿದರೆ ಹೊರ ಹರಿವು 3 ಸಾವಿರ ಕ್ಯೂಸೆಕ್ ಗಿಂತಾ ಹೆಚ್ಚಿತ್ತು.
ಇದರಿಂದ ಸಿಟ್ಟಿಗೆದ್ದ ಸ್ಥಳೀಯ ರೈತರು ಜಲಾಶಯದ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆಸಿದರು. ಯಾವಾಗ ಪ್ರತಿಭಟನೆ ಬಿಸಿ ಜೋರಾಯಿತೋ ಆ ತಕ್ಷಣ ಅಧಿಕಾರಿಗಳು ಡ್ಯಾಂನ ಹೊರ ಹರಿವು ಪ್ರಮಾಣವನ್ನು ತಗ್ಗಿಸಿದ್ದಾರೆ. ಖಾಸಗಿ ಕಂಪನಿ ಜೊತೆ ಶಾಮೀಲಾಗಿರೋ ಅಧಿಕಾರಿಗಳು ಕಂಪನಿಗಾಗಿ ಡ್ಯಾಂ ನೀರು ಹರಿಸಿ ರೈತರ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದ್ದಾರೆ ಎಂದು ರೈತರು ಆರೋಪಿಸಿದ್ದಾರೆ.