Tag: Kabza

  • ಬಿಕಿನಿ ಧರಿಸಿ ಪಡ್ಡೆಹುಡುಗರ ಟೆಂಪ್ರೆಚರ್‌ ಹೆಚ್ಚಿಸಿದ ಶ್ರಿಯಾ ಶರಣ್

    ಬಿಕಿನಿ ಧರಿಸಿ ಪಡ್ಡೆಹುಡುಗರ ಟೆಂಪ್ರೆಚರ್‌ ಹೆಚ್ಚಿಸಿದ ಶ್ರಿಯಾ ಶರಣ್

    ‘ಕಬ್ಜ’ ಸಿನಿಮಾದ (Kabza Film) ಬ್ಯೂಟಿ ಶ್ರಿಯಾ ಶರಣ್ ಮಳೆಗಾಲದ ಚಳಿಯಲ್ಲೂ ಬಿಸಿ ಹೆಚ್ಚಿಸಿದ್ದಾರೆ. ತಮ್ಮ ಸೋಶಿಯಲ್ ಮೀಡಿಯಾದಲ್ಲಿ ನಟಿ ಶೇರ್ ಮಾಡಿದ ಫೋಟೋ ನೋಡಿದ ನೆಟ್ಟಿಗರ ಕಣ್ಣು ತಂಪಾಗಿದೆ. ಚಳಿಯಲ್ಲೂ ಬಿಕಿನಿ ಧರಿಸಿ ಪಡ್ಡೆಹುಡುಗರ ಟೆಂಪ್ರೆಚರ್‌ ಹೆಚ್ಚಿಸಿದ್ದಾರೆ. ಇದನ್ನೂ ಓದಿ:ಮೆಗಾಸ್ಟಾರ್ ಚಿರಂಜೀವಿ ಚಿತ್ರ ರಿಜೆಕ್ಟ್‌ ಮಾಡಿದ ಶ್ರೀಲೀಲಾ

    41ರ ಹರೆಯದಲ್ಲೂ 18ರ ಯುವತಿಯರನ್ನ ನಾಚಿಸುವಂತ ಫಿಟ್‌ನೆಸ್ ಹೊಂದಿದ್ದಾರೆ ಶ್ರೀಯಾ. ಬೀಚ್‌ನಲ್ಲಿ ಬಿಕಿನಿ ಹಾಕಿ ಕೊಟ್ಟ ಪೋಸ್‌ಗೆ ಪಡ್ಡೆಹುಡುಗರು ಫಿದಾ ಆಗಿದ್ದಾರೆ. ಇದನ್ನೂ ಓದಿ:ರೀಲ್ಸ್ ರಾಣಿ ಈಗ ಪ್ರಭಾಸ್‌ಗೆ ನಾಯಕಿ

    ಕಡಲ ತೀರದಲ್ಲಿ ವಿವಿಧ ಭಂಗಿಯಲ್ಲಿ ನಟಿ ಫೋಟೋಶೂಟ್ ಮಾಡಿಸಿದ್ದಾರೆ. ನಟಿಯ ಮಾದಕ ನೋಟಕ್ಕೆ ಗಂಡ್ ಹೈಕ್ಳು ಕಳೆದೋಗಿದ್ದಾರೆ.

    ‘ಕಬ್ಜ’ ನಟಿ ಶ್ರೀಯಾ ಸದ್ಯ ಸೌತ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸಿನಿಮಾದಿಂದ ಸಿನಿಮಾಗೆ ಬಗೆ ಬಗೆಯ ಪಾತ್ರಗಳನ್ನು ಮಾಡುವ ಮೂಲಕ ಸಿನಿಪ್ರೇಕ್ಷಕರ ಮನಗೆಲ್ಲುತ್ತಿದ್ದಾರೆ.

    ತೆಲುಗಿನ ‘ಸಂತೋಷಂ’ ಸಿನಿಮಾ ಮೂಲಕ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದ ಶ್ರೀಯಾ ಶರಣ್ ಇದೀಗ ಬಹುಭಾಷಾ ನಟಿಯಾಗಿ ಬೇಡಿಕೆ ಹೆಚ್ಚಿಕೊಂಡಿದ್ದಾರೆ. ಇದನ್ನೂ ಓದಿ:‘ತಂಗಲಾನ್’ ಸೀಕ್ವೆಲ್ ಬಗ್ಗೆ ಸಿಹಿಸುದ್ದಿ ಕೊಟ್ಟ ಚಿಯಾನ್ ವಿಕ್ರಮ್

    ಈ ಹಿಂದೆ ‘ಚಂದ್ರ’ (Chandra Kannada Film) ಎಂಬ ಕನ್ನಡ ಸಿನಿಮಾದಲ್ಲಿ ಲವ್ಲಿ ಸ್ಟಾರ್ ಪ್ರೇಮ್‌ಗೆ (Lovely Star Prem) ನಾಯಕಿಯಾಗಿ ನಟಿಸಿದ್ದರು. ಈ ಸಿನಿಮಾಗೆ ರೂಪಾ ಅಯ್ಯರ್ ನಿರ್ದೇಶನ ಮಾಡಿದ್ದರು.

    ಅಂದಹಾಗೆ, ಉಪೇಂದ್ರ (Upendra) ನಟನೆಯ ಕಬ್ಜ ಸಿನಿಮಾದಲ್ಲೂ ನಟಿಸಿ ಸೈ ಎನಿಸಿಕೊಂಡಿದ್ದರು. ಈ ಚಿತ್ರವನ್ನು ಆರ್. ಚಂದ್ರು ನಿರ್ದೇಶನ ಮಾಡಿದ್ರು. ‘ಕಬ್ಜ ಪಾರ್ಟ್ 2’ ಕೂಡ ಬರಲಿದೆ. ಈ ಸಿನಿಮಾಗಾಗಿ ಫ್ಯಾನ್ಸ್ ಕೂಡ ಎದುರು ನೋಡ್ತಿದ್ದಾರೆ.

  • ʻಕಬ್ಜʼ ಸಿನಿಮಾ ಬಗ್ಗೆ ಬಿಗ್‌ ಅಪ್‌ಡೇಟ್‌ ಕೊಟ್ಟ ನಿರ್ದೇಶಕ ಆರ್‌.ಚಂದ್ರು

    ʻಕಬ್ಜʼ ಸಿನಿಮಾ ಬಗ್ಗೆ ಬಿಗ್‌ ಅಪ್‌ಡೇಟ್‌ ಕೊಟ್ಟ ನಿರ್ದೇಶಕ ಆರ್‌.ಚಂದ್ರು

    ಚಿತ್ರರಂಗದ ಬಹುನಿರೀಕ್ಷಿತ ಸಿನಿಮಾ `ಕಬ್ಜ’ (Kabza) ರಿಲೀಸ್ ಬಗ್ಗೆ ನಿರ್ದೇಶಕ ಆರ್.ಚಂದ್ರು (R.Chandru) ಅಪ್‌ಡೇಟ್ ನೀಡಿದ್ದಾರೆ. ರಿಯಲ್ ಸ್ಟಾರ್ ಉಪೇಂದ್ರ (Upendra) ಮತ್ತು ಸುದೀಪ್ (Sudeep) ಕಾಂಬಿನೇಷನ್ ಸಿನಿಮಾ ನೋಡಲು ಕಾಯ್ತಿದ್ದ ಫ್ಯಾನ್ಸ್‌ಗೆ ಇದೀಗ ಗುಡ್ ನ್ಯೂಸ್ ನೀಡಿದ್ದಾರೆ.

    ಆರ್. ಚಂದ್ರು ನಿರ್ದೇಶನದ `ಕಬ್ಜ’ ಸಿನಿಮಾ ಸೋಷಿಯಲ್ ಮೀಡಿಯಾದಲ್ಲಿ ಹಲ್‌ಚಲ್ ಎಬ್ಬಿಸಿದೆ. ಚಿತ್ರದ ಪೋಸ್ಟರ್ ಲುಕ್, ಟೀಸರ್ ಮೂಲಕ ಸೆನ್ಸೆಷನ್ ಕ್ರಿಯೆಟ್ ಮಾಡಿದ್ದಾರೆ. ಹೀಗಿರುವಾಗ ಉಪ್ಪಿ-ಕಿಚ್ಚ ಫ್ಯಾನ್ಸ್‌ಗೆ ಡೈರೆಕ್ಟರ್ ಆರ್.ಚಂದ್ರು ಸಿಹಿಸುದ್ದಿ ಕೊಟ್ಟಿದ್ದಾರೆ. ಚಿತ್ರದ ಮೊದಲ ಸಾಂಗ್‌ ರಿಲೀಸ್‌ ಬಗ್ಗೆ ನಿರ್ದೇಶಕರು ಅಪ್‌ಡೇಟ್‌ ನೀಡಿದ್ದಾರೆ.

    `ಕಬ್ಜ’ ಸಿನಿಮಾ ಅಪ್ಪು (Appu) ಹುಟ್ಟಿದ ದಿನವೇ ರಿಲೀಸ್ ಆಗಲಿದೆ. ಇದು ನಿಜಕ್ಕೂ ನಮ್ಮ ಭಾಗ್ಯ. ನಮಗೆ ಇಡೀ ಚಿತ್ರರಂಗದ ಸಪೋರ್ಟ್ ಇದೆ. ಪ್ಯಾನ್ ಇಂಡಿಯಾ ಲೆವೆಲ್‌ಗೆ ಹೋಗೋ ತವಕದಲ್ಲಿದ್ದೇವೆ. ಇದನ್ನೂ ಓದಿ: ಜೀನ್ಸ್ ಪ್ಯಾಂಟನ್ನೇ ಟಾಪ್ ಮಾಡಿಕೊಂಡ ಉರ್ಫಿ ಜಾವೇದ್ ಕಾಲೆಳೆದ ನೆಟ್ಟಿಗರು

     

    View this post on Instagram

     

    A post shared by R.Chandru (@rchandrumovies)

    ಕನ್ನಡ ಚಿತ್ರರಂಗ ಹೈವೇನಲ್ಲಿ ಹೋಗುತ್ತಿದೆ. ಸುಮ್ಮನೆ ಕೂತು ಫಸ್ಟ್ ರಾಂಕ್ ಬರೋಕೆ ಆಗಲ್ಲ. ಒಂದು ಮಾಸ್ ಲಿರಿಕಲ್ ಸಾಂಗ್ ಬರುತ್ತೆ. ಹೈದ್ರಾಬಾದ್‌ನಲ್ಲಿ ಸಾಂಗ್ ರಿಲೀಸ್ ಆಗುತ್ತೆ. ಮಾರ್ಚ್.17ಕ್ಕೆ ರಿಲೀಸ್ ಮಾಡೋಕೆ ಎಲ್ಲ ಕೆಲಸಗಳು ನಡೆಯುತ್ತಿದೆ. ಪ್ಯಾನ್ ಇಂಡಿಯನ್ ಚಿತ್ರ ಗೆದ್ದರೆ ನಾವು ಗೆದ್ದ ಹಾಗೆ. ಕೆಜಿಎಫ್ 2ನಂತೆ, ಚಾರ್ಲಿಯಂತೆ ನಾವು ಸೌಂಡ್ ಆಗಬೇಕು ಎಂದು ಸಿನಿಮಾ ಬಗ್ಗೆ ನಿರ್ದೇಶಕ ಆರ್.ಚಂದ್ರು ಮಾಹಿತಿ ನೀಡಿದ್ದಾರೆ.

    ಚಿತ್ರದ ಮೊದಲ ಮಾಸ್ ಲಿರಿಕಲ್ ಸಾಂಗ್ ಹೈದರಾಬಾದ್‌ನಲ್ಲಿ ಗ್ರ್ಯಾಂಡ್ ಆಗಿ ಫೆ.4ರಂದು ರಿಲೀಸ್ ಆಗಲಿದೆ. ಹಾಗೆಯೇ ಸಿನಿಮಾ ಪುನೀತ್‌ ರಾಜ್‌ಕುಮಾರ್‌ ಅವರ ಹುಟ್ಟುಹಬ್ಬದಂದು  ಕಬ್ಜ ಸಿನಿಮಾ ತೆರೆಗೆ ಅಪ್ಪಳಿಸಲಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಅಪ್ಪು ಹುಟ್ಟುಹಬ್ಬಕ್ಕೆ ‘ಕಬ್ಜ’ ಸಿನಿಮಾ ರಿಲೀಸ್ : ನಿರ್ದೇಶಕ ಆರ್. ಚಂದ್ರು ಘೋಷಣೆ

    ಅಪ್ಪು ಹುಟ್ಟುಹಬ್ಬಕ್ಕೆ ‘ಕಬ್ಜ’ ಸಿನಿಮಾ ರಿಲೀಸ್ : ನಿರ್ದೇಶಕ ಆರ್. ಚಂದ್ರು ಘೋಷಣೆ

    ರ್ನಾಟಕ ಮಾತ್ರವಲ್ಲದೆ, ಇಡೀ ಭಾರತಾದ್ಯಂತ ಬಿಡುಗಡೆಗೂ ಪೂರ್ವದಲ್ಲೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ ಕನ್ನಡಿಗರ ಹೆಮ್ಮೆಯ ಪ್ಯಾನ್ ಇಂಡಿಯಾ ಸಿನಿಮಾ ‘ಕಬ್ಜ’, (Kabza) 2023 ರ ಮಾರ್ಚ್ 17 ಅಂದರೆ, ಪವರ್ ಸ್ಟಾರ್ ಪುನೀತ್ ರಾಜಕುಮಾರ್ (Puneeth Rajkumar) ಅವರ ಹುಟ್ಟುಹಬ್ಬದ ದಿನ ವಿಶ್ವದಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ (released). ಇದೇ ಸಂದರ್ಭದಲ್ಲಿ ನಾಡಿನ ದೊಡ್ಡ ಹಬ್ಬವಾದ ಯುಗಾದಿ ಕೂಡ ಸಮೀಪದಲ್ಲಿರುವುದು ವಿಶೇಷ.

    ಇಂಡಿಯನ್ ರಿಯಲ್ ಸ್ಟಾರ್ ಉಪೇಂದ್ರ (Upendra) ಹಾಗೂ ಪ್ರಮುಖ ಪಾತ್ರದಲ್ಲಿ ಕಿಚ್ಚ ಸುದೀಪ್ (Sudeep) ಅಭಿನಯಿಸಿರುವ ಹಾಗೂ ಆರ್ ಚಂದ್ರು ನಿರ್ದೇಶನದ ಪ್ಯಾನ್ ಇಂಡಿಯಾ ಸಿನಿಮಾ “ಕಬ್ಜ” ಚಿತ್ರಕ್ಕೆ ಪುನೀತ್ ರಾಜಕುಮಾರ್ ಅವರು ನೀಡುತ್ತಿದ್ದ ಪ್ರೋತ್ಸಾಹ ಅಪಾರ. ಚಿತ್ರದ ಕೆಲವು ತುಣುಕುಗಳನ್ನು ಅವರಿಗೆ ತೋರಿಸಿದ್ದಾಗ ಹಾಲಿವುಡ್ ಚಿತ್ರ ಇದ್ದ ಹಾಗೆ ಇದೆ ಎಂದು ಹೇಳಿ ಮೆಚ್ಚುಗೆ ಸೂಚಿಸಿದ್ದರು. ಸಹೃದಯಿ, ಅಭಿಮಾನಿಗಳ ಪಾಲಿಗಂತೂ ದೇವರೆ ಆಗಿರುವ ಪುನೀತ್ ರಾಜಕುಮಾರ್ ಅವರ ಹುಟ್ಟುಹಬ್ಬದ ದಿನ ನಮ್ಮ “ಕಬ್ಬ” ಚಿತ್ರವನ್ನು ಪ್ರೇಕ್ಷಕರ ಮಡಿಲಿಗೆ ಹಾಕುತ್ತಿದ್ದೇವೆ. ಪುನೀತ್ ರಾಜಕುಮಾರ್ ಅವರ ಹುಟ್ಟುಹಬ್ಬ ಹಾಗೂ ಹೊಸವರ್ಷದ ಮೊದಲ ದಿನವಾದ ಯುಗಾದಿ ಹಬ್ಬದ ಸಮೀಪದಲ್ಲೇ ನಮ್ಮ ಚಿತ್ರ ವಿಶ್ವದಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ ಎಂದು ಶ್ರೀಸಿದ್ದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆ ತಿಳಿಸಿದೆ‌.  ಇದನ್ನೂ ಓದಿಚಿತ್ರರಂಗ ನನ್ನ ಸ್ವತ್ತಲ್ಲ, ಕೆಸಿಸಿಗೆ ಎಲ್ಲರಿಗೂ ಆಹ್ವಾನವಿದೆ: ಕಿಚ್ಚ ಸುದೀಪ್

    ಕಳೆದವರ್ಷ ಕನ್ನಡದ ಸಾಕಷ್ಟು ಚಿತ್ರಗಳು ಭರ್ಜರಿ ಯಶಸ್ವಿಯಾಗಿ ಇಡೀ ವಿಶ್ವವೇ ಕನ್ನಡ ಚಿತ್ರರಂಗದ ಕಡೆ ನೋಡುವಂತಾಗಿತ್ತು. ಈಗ ಎಲ್ಲೆಡೆ ಅಷ್ಟೇ ಕುತೂಹಲದಿಂದ ಕಾಯತ್ತಿರುವ ಹಾಗೂ ಐಎಂಡಿಬಿ 2023ರ ಬಹು ನಿರೀಕ್ಷಿತ ಸಿನಿಮಾಗಳ ಪಟ್ಟಿಯಲ್ಲಿ ಸ್ಥಾನ ಪಡಿದಿರುವ ಕನ್ನಡದ ಹೆಮ್ಮೆಯ ಪ್ಯಾನ್ ಇಂಡಿಯಾ ಚಿತ್ರ “ಕಬ್ಜ”ದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ.  ಆಭಿಮಾನಿಗಳ ಕಾತುರಕ್ಕೆ ಚಿತ್ರತಂಡದಿಂದ ಉತ್ತರ ಸಿಕ್ಕಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಜ. 24ಕ್ಕೆ ‘ಕಬ್ಜ’ ಚಿತ್ರತಂಡದಿಂದ ಬಿಗ್ ಅನೌನ್ಸ್ ಮೆಂಟ್

    ಜ. 24ಕ್ಕೆ ‘ಕಬ್ಜ’ ಚಿತ್ರತಂಡದಿಂದ ಬಿಗ್ ಅನೌನ್ಸ್ ಮೆಂಟ್

    ಇಂಡಿಯನ್ ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಪ್ರಮುಖ ಪಾತ್ರದಲ್ಲಿ ಕಿಚ್ಚ ಸುದೀಪ್ ಅಭಿನಯಿಸಿರುವ, ಖ್ಯಾತ ನಿರ್ದೇಶಕ ಆರ್.ಚಂದ್ರು ನಿರ್ಮಿಸಿ, ನಿರ್ದೇಶಿಸಿರುವ ಪ್ಯಾನ್ ಇಂಡಿಯಾ ಸಿನಿಮಾ ಪ್ರಪಂಚದಾದ್ಯಂತ ನಿರೀಕ್ಷೆ ಹುಟ್ಟು ಹಾಕಿದೆ. ಇದು ಕನ್ನಡ ಚಿತ್ರರಂಗದ ಹೆಮ್ಮೆ, ಶ್ರೀ ಸಿದ್ದೇಶ್ವರ ಎಂಟರ್ಪ್ರೈಸಸ್ ಸಂಸ್ಥೆ ಈ ಚಿತ್ರವನ್ನು ಅದ್ದೂರಿಯಾಗಿ ನಿರ್ಮಿಸಿದೆ.

    ಭಾರತ ಮಾತ್ರವಲ್ಲದೆ ವಿವಿಧ ದೇಶಗಳಲ್ಲಿಯೂ ಕಬ್ಜ ಚಿತ್ರದ ಬಿಡುಗಡೆಗಾಗಿ ಕುತೂಹಲದಿಂದ ಕಾಯುತ್ತಿದ್ದಾರೆ. ಅಲ್ಲದೇ ಮೊನ್ನೆ ನಡೆದ ಐಎಂಡಿಬಿ 2023ರ ನಿರೀಕ್ಷಿತ ಸಿನಿಮಾಗಳ ಸರ್ವೆ ಪಟ್ಟಿಯಲ್ಲಿ ಕನ್ನಡಿಗರ ಕಬ್ಜ ಸಿನಿಮಾ ಸ್ಥಾನ ಪಡೆದಿರುವುದು ಕನ್ನಡಿಗರಿಗೆ ಹೆಮ್ಮೆಯ ವಿಷಯ. ಕಳೆದ ಮೂರ್ನಾಲ್ಕು ವರ್ಷಗಳಿಂದ ಸಾಲು ಸಾಲು ಯಶಸ್ವಿ ಸಿನಿಮಾಗಳ ಮೂಲಕ ಸ್ಯಾಂಡಲ್ ವುಡ್ ಮತ್ತಷ್ಟು ಎತ್ತರಕ್ಕೆ ಹೋಗಿದೆ. ಕೆಜಿಎಫ್, ವಿಕ್ರಾಂತ್ ರೋಣ, 777 ಚಾರ್ಲಿ ಹಾಗೂ ಕಾಂತಾರ ಯಶಸ್ಸಿನ ಬಳಿಕ ಕನ್ನಡದ ಕೀರ್ತಿ ಪತಾಕೆಯನ್ನು ಹಾರಿಸಲು ಈ ವರ್ಷ ಕಬ್ಜ ಸಜ್ಜಾಗಿದೆ. ಕಬ್ಜ ಚಿತ್ರ ಬಿಡುಗಡೆಯಾವಾಗ ಎಂಬುದು ಪ್ರತಿಯೊಬ್ಬರ ಮನೆ ಮಾತಾಗಿತ್ತು. ಈ ನಿಟ್ಟಿನಲ್ಲಿ ಇದೇ ಜನವರಿ 24ರಂದು ದೊಡ್ದದೊಂದು ವಿಷಯವನ್ನು ಹಂಚಿಕೊಳ್ಳಲಿದೆ ಕಬ್ಜ ಟೀಮ್. ಇದನ್ನೂ ಓದಿ:ಪತಿ ಜೊತೆಗಿನ ಲಿಪ್‌ಲಾಕ್ ಫೋಟೋ ಹಂಚಿಕೊಂಡ ʻಕಾಂಚನಾ 2ʼ ನಟಿ ಪೂಜಾ

    ಇದೇ ಮೊಟ್ಟ ಮೊದಲ ಬಾರಿಗೆ ಐದಕ್ಕೂ ಹೆಚ್ಚು ಭಾಷೆಗಳಲ್ಲಿ ಕಬ್ಜ ಸಿನಿಮಾ ತೆರೆಕಾಣುತ್ತಿದೆ. ಇಂಥದ್ದೊಂದು ಕನ್ನಡ ಸಿನಿಮಾ ಬೃಹತ್ ಮಟ್ಟದಲ್ಲಿ ಮೂಡಿ ಬರುತ್ತಿರೋದು ಸ್ಯಾಂಡಲ್ ವುಡ್ ಗೆ ಗೌರವ. ಇಂಥ ಪ್ರಯತ್ನಗಳಿಗೆ ಕನ್ನಡಿಗರು ಯಾವಾಗಲು ಪ್ರಶಂಶಿಸುತ್ತಾರೆ. ಈಗ ಕಬ್ಜ ರಿಲೀಸ್ ಡೇಟ್ ಅನೌನ್ಸ್ ಮಾಡಿದರೆ ಕನ್ನಡಿಗರು ಮಾತ್ರವಲ್ಲದೆ. ಭಾರತೀಯ ಚಿತ್ರರಂಗವೇ ಸಂತೋಷ ಪಡುತ್ತದೆ ಎಂಬುದರಲ್ಲಿ ಸಂಶಯವಿಲ್ಲ. ಕಾತುರತೆಗೆ ಬೇಗ ಚಂದ್ರು ಮತ್ತು ಟೀಂ ಡೇಟ್ ತಿಳಿಸಲಿ ಹಾಗೂ ಕಬ್ಜ ಚಿತ್ರವು ಮತ್ತೊಮ್ಮೆ ಗೆದ್ದು ಕನ್ನಡ ಕೀರ್ತಿ ಪತಾಕೆಯನ್ನು ವಿಶ್ವದಾದ್ಯಂತ ಹಾರಿಸಲಿ ಎಂಬುದು ಪ್ರತಿಯೊಬ್ಬ ಕನ್ನಡಿಗರ ಆಶಯ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಐಎಂಡಿಬಿ 2023ರ ನಿರೀಕ್ಷಿತ ಭಾರತೀಯ ಸಿನಿಮಾಗಳ ಪೈಕಿ ಕನ್ನಡಕ್ಕೆ ಒಂದೇ ಸ್ಥಾನ

    ಐಎಂಡಿಬಿ 2023ರ ನಿರೀಕ್ಷಿತ ಭಾರತೀಯ ಸಿನಿಮಾಗಳ ಪೈಕಿ ಕನ್ನಡಕ್ಕೆ ಒಂದೇ ಸ್ಥಾನ

    ಸಿನಿಮಾ, ಟಿವಿ ಕಾರ್ಯಕ್ರಮ ಹಾಗೂ ಸಿನಿಮಾ ತಾರೆಯರ ಅಧಿಕೃತ ಮಾಹಿತಿ ತಾಣವೆನಿಸಿಕೊಂಡಿರುವ  ಇಂಟರ್​ನೆಟ್​ ಮೂವಿ ಡೇಟಾಬೇಸ್​ (ಐಎಂಡಿಬಿ) ಈ ವರ್ಷದ ಬಹುನಿರೀಕ್ಷಿತ ಚಿತ್ರಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. 20 ಚಿತ್ರಗಳ ಈ ಪಟ್ಟಿಯಲ್ಲಿ ಕನ್ನಡದಿಂದ ಉಪೇಂದ್ರ ಹಾಗೂ ಸುದೀಪ್​ ಅಭಿನಯಿಸಿರುವ ಪ್ಯಾನ್​ ಇಂಡಿಯಾ ಚಿತ್ರ ‘ಕಬ್ಜ’ ಮಾತ್ರ ಇರುವುದು ವಿಶೇಷ.

    ‘ಕಬ್ಜ’ ಚಿತ್ರವು ಈ ಪಟ್ಟಿಯ ಏಳನೇ ಸ್ಥಾನದಲ್ಲಿದ್ದು, ಮಿಕ್ಕಂತೆ ಶಾರುಖ್​ ಖಾನ್​ ಅಭಿನಯದ ‘ಪಠಾಣ್​’, ಅಲ್ಲು ಅರ್ಜುನ್​ ಅಭಿನಯದ ‘ಪುಷ್ಪ – ದಿ ರೂಲ್​’, ಪ್ರಭಾಸ್​ ಅಭಿನಯದ ‘ಸಲಾರ್​’ ಮತ್ತು ‘ಆದಿಪುರುಷ್​’, ವಿಜಯ್​ ಅಭಿನಯದ ‘ವಾರಿಸು’, ಸಲ್ಮಾನ್​ ಖಾನ್​ ಅಭಿನಯದ ‘ಟೈಗರ್​ 3’, ಕಮಲ್​ ಹಾಸನ್​ ಅಭಿನಯದ ‘ಇಂಡಿಯನ್​ 2’ ಮುಂತಾದ ಚಿತ್ರಗಳಿವೆ. ಹಿಂದಿ, ತೆಲುಗು ಮತ್ತು ತಮಿಳು ಚಿತ್ರಗಳೇ ಹೆಚ್ಚಿರುವ ಈ ಚಿತ್ರಗಳ ಪಟ್ಟಿಯಲ್ಲಿ ಕನ್ನಡದಿಂದ ಏಕೈಕ ಚಿತ್ರವಾಗಿ ‘ಕಬ್ಜ’ ಹೊರಹೊಮ್ಮಿದೆ. ಇದನ್ನೂ ಓದಿ: ಮೊದಲ ಮಗುವಿನ ಆಗಮನದ ನಿರೀಕ್ಷೆಯಲ್ಲಿದ್ದಾರೆ ಚಂದನ್ ಶೆಟ್ಟಿ -ನಿವೇದಿತಾ

    ಶ್ರೀ ಸಿದ್ಧೇಶ್ವರ ಎಂಟರ್​ಪ್ರೈಸಸ್​ನಡಿ ಆರ್​. ಚಂದ್ರು ಬರೆದು ನಿರ್ಮಿಸಿ, ನಿರ್ದೇಶಿಸಿರುವ ‘ಕಬ್ಜ’ ಚಿತ್ರವು ಶುರುವಾದಾಗಿನಿಂದ ಇಲ್ಲಿಯವರೆಗೂ ಪ್ರೇಕ್ಷಕರಲ್ಲಿ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟುಹಾಕಿವೆ. ಅದರಲ್ಲೂ ಇತ್ತೀಚೆಗೆ ಚಿತ್ರದ ಟೀಸರ್​ ಬಿಡುಗಡೆಯಾದ ಮೇಲೆ ಆ ನಿರೀಕ್ಷೆಗಳು ನೂರ್ಮಡಿಯಾಗಿವೆ ಎಂದರೆ ತಪ್ಪಿಲ್ಲ. ಬರೀ ಕರ್ನಾಟಕವಷ್ಟೇ ಅಲ್ಲ, ಬೇರೆ ಭಾಷೆಗಳಲ್ಲೂ ಈ ಚಿತ್ರಕ್ಕಾಗಿ ಬೇಡಿಕೆ ಹೆಚ್ಚಿದ್ದು, ಈಗಾಗಲೇ ಹಿಂದಿ ಅವತರಣಿಕೆಯ ಹಕ್ಕುಗಳನ್ನು ಬಾಲಿವುಡ್​ನ ಜನಪ್ರಿಯ ಚಿತ್ರ ನಿರ್ಮಾಣ ಹಾಗೂ ವಿತರಣಾ ಸಂಸ್ಥೆಯಾದ ಆನಂದ್ ಪಂಡಿತ್ ಮೋಷನ್ ಪಿಕ್ಚರ್ಸ್​​ ಪಡೆದುಕೊಂಡಿದೆ. ಹಿಂದಿಯಷ್ಟೇ ಅಲ್ಲ, ಬೇರೆ ಅವತರಣಿಕೆಗಳ ಹಕ್ಕುಗಳಿಗೂ ಬೇಡಿಕೆ ಹೆಚ್ಚಿದೆ.

    ‘ಕಬ್ಜ’ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಪ್ರಗತಿಯಲ್ಲಿದ್ದು, ಸದ್ಯದಲ್ಲೇ ಬಿಡುಗಡೆ ದಿನಾಂಕ ಘೋಷಣೆಯಾಗಲಿದೆ. ಉಪೇಂದ್ರ, ಸುದೀಪ್, ಶ್ರೀಯಾ ಶರಣ್ ಸೇರಿದಂತೆ ಪ್ರತಿಭಾವಂತರ ದೊಡ್ಡ ದಂಡೇ ಇರುವ ಈ ಚಿತ್ರಕ್ಕೆ ‘ಕೆಜಿಎಫ್’ ಖ್ಯಾತಿಯ ರವಿ ಬಸ್ರೂರು ಸಂಗೀತ ಸಂಯೋಜಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಉಪೇಂದ್ರ- ಸುದೀಪ್ ಕಾಂಬಿನೇಷನ್ ‘ಕಬ್ಜ’ ಚಿತ್ರಕ್ಕೆ ಏಳು ಭಾಷೆಗಳಲ್ಲಿ ಡಬ್ಬಿಂಗ್

    ಉಪೇಂದ್ರ- ಸುದೀಪ್ ಕಾಂಬಿನೇಷನ್ ‘ಕಬ್ಜ’ ಚಿತ್ರಕ್ಕೆ ಏಳು ಭಾಷೆಗಳಲ್ಲಿ ಡಬ್ಬಿಂಗ್

    ಆರ್.ಚಂದ್ರು ನಿರ್ದೇಶನದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಬಹು ನಿರೀಕ್ಷಿತ “ಕಬ್ಜ” ಚಿತ್ರ ಕನ್ನಡ ಸೇರಿದಂತೆ ಏಳು ಭಾಷೆಗಳಲ್ಲಿ ನಿರ್ಮಾಣವಾಗುತ್ತಿದೆ. ಸಿನಿಮಾದ ಬಹುತೇಕ ಶೂಟಿಂಗ್ ಮುಗಿಸಿರುವ ನಿರ್ದೇಶಕರು ನಿನ್ನೆಯಿಂದ ಡಬ್ಬಿಂಗ್ ಕಾರ್ಯ ಶುರು ಮಾಡಿದ್ದಾರೆ. ಒಟ್ಟು ಏಳು ಭಾಷೆಗಳಲ್ಲಿ ಈ ಸಿನಿಮಾ ಡಬ್ ಆಗಲಿದೆ.

    ಈ ಕುರಿತು ಮಾತನಾಡಿರುವ ನಿರ್ದೇಶಕರು, ‘ನಾವು ಅಂದುಕೊಂಡಂತೆ ಸಿನಿಮಾ ತುಂಬಾ ಚೆನ್ನಾಗಿ ಬಂದಿದೆ. ಒಂದು ಹಾಡಿನ ಚಿತ್ರೀಕರಣ ಬಿಟ್ಟು, ಉಳಿದ ಚಿತ್ರೀಕರಣ  ಮುಕ್ತಾಯವಾಗಿದೆ.  ಏಕಕಾಲದಲ್ಲಿ ಏಳುಭಾಷೆಗಳಲ್ಲೂ ಡಬ್ಬಿಂಗ್ ಸಹ ಸದ್ದಿಲ್ಲದೆ ನಡೆಯುತ್ತಿದೆ. ಪಕ್ಕಾ ಪ್ಲ್ಯಾನ್ ಮಾಡಿಕೊಂಡು ಸಿನಿಮಾ ರಿಲೀಸ್ ಮಾಡಲಾಗುವುದು’ ಎಂದಿದ್ದಾರೆ.

    1940ರ ಕಾಲಘಟ್ಟದ ಕಥೆ ಅದ್ಭುತವಾಗಿದೆ. ಮೋಷನ್ ಪೋಸ್ಟರ್ ಹಾಗೂ ಸ್ಟಿಲ್ಸ್ ಜನಮನಸೂರೆಗೊಂಡಿದೆ. ಮೇಕಿಂಗ್ ತುಣುಕು ನೋಡಿದವರಂತು ಫಿದಾ ಆಗಿದ್ದಾರೆ. ಭಾರತ ದೇಶವೇ ತಿರುಗಿ ನೋಡುವ ಸಿನಿಮಾ ಇದಾಗಲಿದೆ ಎನ್ನುತ್ತಾರೆ ಚಂದ್ರು. ಇದನ್ನೂ ಓದಿ: ಹೇಗಿದ್ದೀರಾ, ಚೆನ್ನಾಗಿದ್ದೀರಾ? ಎಂದು ಕೇಳುವುದನ್ನೇ ನಿಲ್ಲಿಸಿ ಬಿಟ್ಟಿದ್ದೆ : ಧ್ರುವ ಸರ್ಜಾ

    ಕಬ್ಬ  ಚಿತ್ರ ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಮೈಲಿಗಲ್ಲಾಗಲಿ ಎಂಬುದೇ ಕನ್ನಡಿಗರ ಆಶಯ. ಚಿತ್ರದ. ಟೀಸರ್ ನೋಡುವ ಕಾತುರದಲ್ಲಿದ್ದೇವೆ. ಆದಷ್ಟು ಬೇಗ ಬಿಡುಗಡೆ ಮಾಡಿ ಎಂದು ಸಿನಿಪ್ರೇಕ್ಷಕರು ಚಂದ್ರು ಅವರನ್ನು ಒತ್ತಾಯಿಸುತ್ತಿದ್ದಾರಂತೆ ಅಭಿಮಾನಿಗಳು.

  • ಹಾಟ್ ಅವತಾರದಲ್ಲಿ ಕಾಣಿಸಿಕೊಂಡ `ಕಬ್ಜ’ ಸುಂದರಿ ಶ್ರೀಯಾ ಶರಣ್

    ಹಾಟ್ ಅವತಾರದಲ್ಲಿ ಕಾಣಿಸಿಕೊಂಡ `ಕಬ್ಜ’ ಸುಂದರಿ ಶ್ರೀಯಾ ಶರಣ್

    ಹುಭಾಷಾ ನಟಿ ಶ್ರೀಯಾ ಶರಣ್ ರಿಯಲ್ ಸ್ಟಾರ್ ಉಪೇಂದ್ರಗೆ ನಾಯಕಿಯಾಗಿ `ಕಬ್ಜ’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಇದೀಗ ಈ ಗ್ಯಾಪ್ ಮಧ್ಯೆ `ಕಬ್ಜ’ ಬ್ಯೂಟಿ ಗೋವಾ ಬೀಚ್‌ನಲ್ಲಿ ಎಂಜಾಯ್ ಮಾಡ್ತಿದ್ದಾರೆ. ಸದ್ಯ ಹಾಟ್ ಅವತಾರದಲ್ಲಿ ಶ್ರೀಯಾ ಕಾಣಿಸಿಕೊಂಡಿರುವ ಫೋಟೋ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

    `ಆರ್‌ಆರ್‌ಆರ್’ ಸಕ್ಸಸ್ ನಂತರ ಸ್ಯಾಂಡಲ್‌ವುಡ್‌ನತ್ತ ಮುಖ ಮಾಡಿರೋ ಸೌತ್ ನಟಿ ಶ್ರೀಯಾ ಶರಣ್ ಈಗ ರಿಯಲ್ ಸ್ಟಾರ್ ಉಪ್ಪಿ ಜೋಡಿಯಾಗುವ ಮೂಲಕ ಗಾಂಧಿನಗರದಲ್ಲಿ ಸೌಂಡ್ ಮಾಡ್ತಿದ್ದಾರೆ. ಇತ್ತೀಚೆಗಷ್ಟೇ `ಕಬ್ಜ’ ಸುಂದರಿಯ ಪಾತ್ರದ ಲುಕ್ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಮಹಾರಾಣಿಯ ಲುಕ್‌ನಲ್ಲಿ ಮಿರ ಮಿರ ಅಂತಾ ಮಿಂಚಿದ್ದರು. ಈ ಮಧ್ಯೆ ತುಸು ಬಿಡುವು ಮಾಡಿಕೊಂಡು ಗೋವಾ ಬೀಚ್‌ನಲ್ಲಿ ಮಗನ ಜತೆ ಆಟವಾಡಿದ್ದಾರೆ. ಅಷ್ಟೇ ಅಲ್ಲ, ಗೋವಾ ಬೀಚ್‌ನಲ್ಲಿ ಸಖತ್ ಹಾಟ್ ಹಾಟ್ ಆಗಿ ಮಿಂಚಿದ್ದಾರೆ. ಸಧ್ಯ  ಶ್ರೀಯಾ ಬೋಲ್ಡ್ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

     

    View this post on Instagram

     

    A post shared by Shriya Saran (@shriya_saran1109)

    `ಕಬ್ಜ’ ಚಿತ್ರ ಆರ್.ಚಂದ್ರು ಸಾರಥ್ಯದ ಏಳು ಭಾಷೆಗಳಲ್ಲಿ ನಿರ್ಮಾಣವಾಗಿರೋ ಬಹುಕೋಟಿ ವೆಚ್ಚದ ಸಿನಿಮಾ. ನಟ ಉಪೇಂದ್ರ ಮತ್ತು ಶ್ರೀಯಾ ಪವರ್‌ಫುಲ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಿಚ್ಚ ಸುದೀಪ್ ಸಾಥ್ ನೀಡಿದ್ದಾರೆ. `ಕಬ್ಜ’ ಕೊನೆಯ ಹಂತದ ಚಿತ್ರೀಕರಣದಲ್ಲಿದೆ. ಸದ್ಯದಲ್ಲೇ ಸಿನಿಮಾ ತೆರೆಗೆ ಅಪ್ಪಳಿಸಲಿದೆ. ಇದನ್ನೂ ಓದಿ: ಕಿಚ್ಚ ಸುದೀಪ್ ವಿರುದ್ಧ ಮತ್ತೆ ತೊಡೆತಟ್ಟಿದ ಅಜಯ್ ದೇವಗನ್

     

    View this post on Instagram

     

    A post shared by Shriya Saran (@shriya_saran1109)

    ಚಿತ್ರದ ಪೋಸ್ಟರ್ ಲುಕ್ ಮತ್ತು ನಟಿ ಶ್ರೀಯಾ ಕಲರ್‌ಫುಲ್ ಫೋಟೋಗಳಿಂದ ಈಗಾಗಲೇ ಗಮನ ಸೆಳೆದಿರೋ `ಕಬ್ಜ’ ಚಿತ್ರದ ಕುರಿತು ಅಭಿಮಾನಿಗಳಿಗೆ ಕುತೂಹಲ ಕೆರಳಿಸಿದೆ. ಉಪ್ಪಿ ಮತ್ತು ಶ್ರೀಯಾ ಜೋಡಿ ಚಿತ್ರದಲ್ಲಿ ಅದೆಷ್ಟು ಇಂಪ್ರೇಸ್ ಮಾಡಬಹುದು ಅಂತಾ ಕಾದುನೋಡಬೇಕಿದೆ.

  • ಸುದೀಪ್ ‘ಕಬ್ಜ’ ಚಿತ್ರದಿಂದ ಹೊರ ನಡೆದಿರುವ ಸುದ್ದಿ ಸುಳ್ಳು : ನಿರ್ದೇಶಕ ಆರ್.ಚಂದ್ರು

    ಸುದೀಪ್ ‘ಕಬ್ಜ’ ಚಿತ್ರದಿಂದ ಹೊರ ನಡೆದಿರುವ ಸುದ್ದಿ ಸುಳ್ಳು : ನಿರ್ದೇಶಕ ಆರ್.ಚಂದ್ರು

    ಹೆಸರಾಂತ ನಿರ್ದೇಶಕ ಆರ್.ಚಂದ್ರು ಅವರ ‘ಕಬ್ಜ’ ಸಿನಿಮಾದಿಂದ ಸುದೀಪ್ ಅವರು ಹೊರ ನಡೆದಿದ್ದಾರೆ ಎನ್ನುವ ಸುದ್ದಿ ನೆನ್ನೆಯಿಂದ ಗಾಂಧಿನಗರದಲ್ಲಿ ಗಿರಕಿ ಹೊಡೆಯುತ್ತಿತ್ತು. ಆರ್.ಚಂದ್ರು ಮತ್ತು ಸುದೀಪ್ ನಡುವೆ ಮನಸ್ತಾಪ ಕಾರಣದಿಂದಾಗಿ ಕಿಚ್ಚ ‘ಕಬ್ಜ’ ಸಿನಿಮಾದಲ್ಲಿ ನಟಿಸುತ್ತಿಲ್ಲ ಎಂಬ ಸುದ್ದಿ ಭಾರೀ ಸಂಚಲನ ಮೂಡಿಸಿತ್ತು. ಇದನ್ನೂ ಓದಿ : ಪಾವನಾ ನಾಯಕಿಯಾಗಿ ನಟಿಸಿದ ‘ಇನ್’ ಚಿತ್ರದ ಟೀಸರ್ ರಿಲೀಸ್ ಮಾಡಿದ ಕಿಚ್ಚ

    ಸುದೀಪ್ ಮತ್ತು ಉಪೇಂದ್ರ ಕಾಂಬಿನೇಷನ್ ನ ಈ ಸಿನಿಮಾ ಭಾರೀ ಬಜೆಟ್ ನಲ್ಲಿ ಮೂಡಿ ಬರುತ್ತಿದೆ. ಕನ್ನಡ, ತಮಿಳು, ತೆಲುಗು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ ಏಕಕಾಲಕ್ಕೆ ನಿರ್ಮಾಣವಾಗುತ್ತಿದೆ. ಈ ಸಿನಿಮಾದಲ್ಲಿ ಸುದೀಪ್ ಮತ್ತು ಉಪೇಂದ್ರ ವಿಭಿನ್ನ ರೀತಿಯ ಪಾತ್ರಗಳನ್ನು ಮಾಡುತ್ತಿದ್ದಾರೆ. ಈಗಾಗಲೇ ಸುದೀಪ್ ಕೂಡ ಶೂಟಿಂಗ್ ನಲ್ಲಿ ಭಾಗಿಯಾಗಿದ್ದಾರೆ. ಇಷ್ಟೆಲ್ಲ ಬೆಳವಣಿಗೆಗಳು ನಡೆದರೂ, ಕಿಚ್ಚ ಸಿನಿಮಾದಿಂದ ಹೊರ ನಡೆದಿದ್ದಾರೆ ಎನ್ನುವುದು ನಾನಾ ರೀತಿಯ ಅನುಮಾನಕ್ಕೂ ಕಾರಣವಾಗಿತ್ತು. ಇದನ್ನೂ ಓದಿ : ರಾಷ್ಟ್ರ ಪ್ರಶಸ್ತಿ ವಿಜೇತ ಸಾಗರ್ ಪುರಾಣಿಕ್ ನಿರ್ದೇಶನದ ‘ಡೊಳ್ಳು’ ಚಿತ್ರಕ್ಕೆ ಮತ್ತೆರಡು ಪುರಸ್ಕಾರ

    ಈ ಕುರಿತು ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿರುವ ಆರ್.ಚಂದ್ರು, “ಎಲ್ಲರಿಗೂ ನಮಸ್ಕಾರ, ನಿನ್ನೆಯಿಂದ ಸುದೀಪ್ ಅವರು ಕಬ್ಜ ಚಿತ್ರತಂಡದಿಂದ ಹೊರ ನಡೆದಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಆ ಸುದ್ದಿ ಸತ್ಯಕ್ಕೆ ದೂರವಾದದ್ದು. ಕಿಚ್ಚು ಸುದೀಪ್ ಅವರು ಈಗಾಗಲೇ ಕಬ್ಜ ಚಿತ್ರೀಕರಣದಲ್ಲಿ ಪಾಲ್ಗೊಂಡು ನಟಿಸಿದ್ದಾರೆ. ಹಾಗಾಗಿ ದಯವಿಟ್ಟು ಈ ರೀತಿಯ ಸುಳ್ಳು ಸುದ್ದಿಗೆ ಯಾರೂ ಕಿವಿಗೊಡಬಾರದು” ಎಂದು ಟ್ವಿಟ್ ಮಾಡಿದ್ದಾರೆ ನಿರ್ದೇಶಕರು. ಇದನ್ನೂ ಓದಿ : ಸ್ಟಾರ್ ತಾರಾಗಣದ ಬಹು ನಿರೀಕ್ಷಿತ ‘ತ್ರಿಕೋನ’ ಬಿಡುಗಡೆಗೆ ರೆಡಿ

    ಇಬ್ಬರು ಸ್ಟಾರ್ ನಟರು ಸಿನಿಮಾದಲ್ಲಿ ಇದ್ದಾರೆ ಎಂದರೆ, ಸಿನಿಮಾ ಕುರಿತು ಹೈಪ್ ಕ್ರಿಯೇಟ್ ಆಗುವುದು ಸಹಜ. ಅಲ್ಲದೇ, ಈ ಇಬ್ಬರೂ ಸ್ಟಾರ್ ನಟರು ಈಗಾಗಲೇ ಹಲವು ಚಿತ್ರರಂಗಗಳ ಜತೆ ಗುರುತಿಸಿಕೊಂಡಿದ್ದಾರೆ. ಹಾಗಾಗಿ ಕಬ್ಜ ಚಿತ್ರ ಪ್ಯಾನ್ ಇಂಡಿಯಾ ಪರಿಕಲ್ಪನೆಯಲ್ಲೇ ತಯಾರಾಗಿದೆ. ಅಷ್ಟೇ ಸದ್ದು ಮಾಡುತ್ತಿದೆ. ಹೀಗಾಗಿ ಕಿಚ್ಚನ ಬಗ್ಗೆ ಗಾಸಿಪ್ ಮೂಡಿದೆ. ಏ.1 ರಿಂದ ಈ ಸುದ್ದಿ ಸ್ಯಾಂಡಲ್ ವುಡ್ ನಲ್ಲಿ ಹರಿದಾಡುತ್ತಿದ್ದರಿಂದ ಅದು ಏಪ್ರಿಲ್ ಫೂಲ್ ಮಾಡಿದ್ದಾರೆ ಎನ್ನಲಾಗಿತ್ತು. ಆದರೆ, ಸುದ್ದಿ ಬೇರೆ ರೀತಿಯಲ್ಲಿ ಗಂಭೀರತೆಯನ್ನು ಸೃಷ್ಟಿ ಮಾಡಿತ್ತು. ಹಾಗಾಗಿ ಆರ್.ಚಂದ್ರು ಅವರೇ ಇದಕ್ಕೆ ಸ್ಪಷ್ಟನೆ ನೀಡಿದ್ದಾರೆ.

  • ಸುದೀಪ್, ಉಪ್ಪಿ ಕಾಂಬಿನೇಷನ್ ‘ಕಬ್ಜ’ ಚಿತ್ರಕ್ಕೆ ಇಬ್ಬರು ದಕ್ಷಿಣ ತಾರೆಯರ ಎಂಟ್ರಿ

    ಸುದೀಪ್, ಉಪ್ಪಿ ಕಾಂಬಿನೇಷನ್ ‘ಕಬ್ಜ’ ಚಿತ್ರಕ್ಕೆ ಇಬ್ಬರು ದಕ್ಷಿಣ ತಾರೆಯರ ಎಂಟ್ರಿ

    ಆರ್.ಚಂದ್ರು ನಿರ್ದೇಶನದ ‘ಕಬ್ಜ’ ಸಿನಿಮಾ ಭಾರತೀಯ ಚಿತ್ರ ರಂಗದಲ್ಲೇ ಹೊಸ ಮನ್ವಂತರಕ್ಕೆ ಕಾರಣವಾಗುತ್ತಿದೆ. ಭಾರೀ ಬಜೆಟ್ ಮತ್ತು ಸಿನಿಮಾ ತಾರೆಯರಿಂದಾಗಿಯೇ ಚಿತ್ರ ನಿರೀಕ್ಷೆ ಮೂಡಿಸಿದೆ. ಉಪೇಂದ್ರ ಅವರಿಂದ ಶುರುವಾಗಿ ಕಲಾವಿದರ ಆಯ್ಕೆ, ಒಂದೊಂದೇ ತಿರುವು ಪಡೆದುಕೊಳ್ಳುತ್ತಿದೆ.

    ಉಪೇಂದ್ರ ನಂತರ ಮತ್ತೊಬ್ಬ ಸ್ಟಾರ್ ಈ ಸಿನಿಮಾಗೆ ಎಂಟ್ರಿ ಕೊಟ್ಟರು. ಅವರೇ ಕಿಚ್ಚ ಸುದೀಪ್. ಕಿಚ್ಚ ಮತ್ತು ಉಪ್ಪಿ ಕಾಂಬಿನೇಷನ್ ನ ಚಿತ್ರಗಳು ಈಗಾಗಲೇ ಗೆದ್ದಿರುವುದರಿಂದ ಮತ್ತಷ್ಟು ಕುತೂಹಲಕ್ಕೆ ಕಬ್ಜ ಕಾರಣವಾಯಿತು. ಈ ಸಿನಿಮಾದಲ್ಲಿ ಇಬ್ಬರು ನಾಯಕಿಯರಿದ್ದು, ಮೊನ್ನೆಯಷ್ಟೇ ಒಬ್ಬ ನಾಯಕಿಯನ್ನು ಚಂದ್ರು ಪರಿಚಯಿಸಿದರು. ಇದನ್ನೂ ಓದಿ : ಸರ್ರಂತ ಸುಡುವ ಜ್ವಾಲಾಗ್ನಿ ಆಗಿ ಬಂದ ಈ ತೂಫಾನ್: ಕೆಜಿಎಫ್ 2 ಫಸ್ಟ್ ಲಿರಿಕಲ್ ಹಾಡು ರಿಲೀಸ್

    ಹೌದು, ಉಪ್ಪಿ ಮತ್ತು ಸುದೀಪ್ ನಂತರ  ನಾಯಕಿಯಾಗಿ ದಕ್ಷಿಣದ ಸ್ಟಾರ್ ನಟಿ ಶ್ರೀಯಾ ಶರಣ್ ತಾರಾಗಣದಲ್ಲಿ ಕಾಣಿಸಿಕೊಂಡ ಪ್ರಮುಖ ಕಲಾವಿದೆ. ಈ ಸಿನಿಮಾದಲ್ಲಿ ಶ್ರೀಯಾ ನಾಯಕಿಯಾಗಿ ನಟಿಸುತ್ತಿದ್ದು, ಹೊಸ ಬಗೆಯ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಈಗಾಗಲೇ ಶ್ರೀಯಾ  ದೃಶ್ಯಗಳನ್ನು ನಿರ್ದೇಶಕರು ಸೆರೆ ಹಿಡಿಯುತ್ತಾರೆ. ಇದನ್ನೂ ಓದಿ : ‘ದಿ ಕಾಶ್ಮೀರ್ ಫೈಲ್ಸ್’ ರಿಯಲ್ ಸ್ಟೋರಿ : ಅಕ್ಕಿ ಡ್ರಮ್ ನಲ್ಲಿ ಕೊಲ್ಲಲ್ಪಟ್ಟ ನಿಜವಾದ ಕಾಶ್ಮೀರಿ ಪಂಡಿತ ಇವರು

    ಮೊನ್ನೆಯಷ್ಟೇ ಶ್ರೀಯಾ ಅವರನ್ನು ಪರಿಚಯಿಸಿದ್ದ ನಿರ್ದೇಶಕ ಚಂದ್ರು, ಇದೀಗ ದಕ್ಷಿಣ ಸಿನಿಮಾ ರಂಗದಿಂದ ಮತ್ತಿಬ್ಬರು ಹೆಸರಾಂತ ಕಲಾವಿದರನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಇವತ್ತೇ ಈ ಕುರಿತು ಅವರು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದು, ಮುರಳಿ ಶರ್ಮಾ ಮತ್ತು ಪೊಸನಿ ಕೃಷ್ಣ ಮುರಳಿ ಕಬ್ಜ ಸಿನಿಮಾದ ಮಹತ್ವದ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ.

  • ಶೂಟಿಂಗ್‍ಗೆ ಸಜ್ಜಾದ ಆರ್.ಚಂದ್ರು ನಿರ್ದೇಶನದ ‘ಕಬ್ಜ’ ಚಿತ್ರ ತಂಡ

    ಶೂಟಿಂಗ್‍ಗೆ ಸಜ್ಜಾದ ಆರ್.ಚಂದ್ರು ನಿರ್ದೇಶನದ ‘ಕಬ್ಜ’ ಚಿತ್ರ ತಂಡ

    ಸ್ಯಾಂಡಲ್‍ವುಡ್‍ನ ಪ್ರತಿಭಾವಂತ ನಿರ್ದೇಶಕ ಆರ್.ಚಂದ್ರು ‘ಕಬ್ಜ’ ಚಿತ್ರದಲ್ಲಿ ಫುಲ್ ಬ್ಯುಸಿಯಾಗಿದ್ದಾರೆ. ರಿಯಲ್ ಸ್ಟಾರ್ ಉಪೇಂದ್ರ ನಾಯಕ ನಟನಾಗಿ ನಟಿಸುತ್ತಿರುವ ಈ ಚಿತ್ರ ಏಳು ಭಾಷೆಯಲ್ಲಿ ತೆರೆಗೆ ಬರಲಿದೆ. ಈಗಾಗಲೇ ಚಿತ್ರದ ಕೆಲ ತುಣುಕುಗಳು ಸೋಶಿಯಲ್ ಮೀಡಿಯಾದಲ್ಲಿ ಬೇಜಾನ್ ಸದ್ದು ಮಾಡಿವೆ.

    ಏಳು ಭಾಷೆಯಲ್ಲಿ ಸಿನಿಮಾ ತೆರೆಗೆ ತರುವ ಸಾಹಸಕ್ಕೆ ಕೈಹಾಕಿರುವ ಆರ್.ಚಂದ್ರು ಈ ನಡುವೆ ಶೂಟಿಂಗ್‍ನಿಂದ ಕೊಂಚ ಬಿಡುವು ಮಾಡಿಕೊಂಡು ಸ್ನೇಹಿತರ ಜೊತೆ ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ನೀರಾವರಿ ಸಚಿವರಾದ ರಮೇಶ್ ಜಾರಕಿಹೊಳಿ, ರಾಮಚಂದ್ರೇಗೌಡ, ಲಕ್ಷ್ಮಿಪ್ರಸನ್ನ ಅವರ ಜೊತೆಗೂಡಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆದು ನಿರ್ದೇಶಕ ಆರ್.ಚಂದ್ರು ಸಂತಸಪಟ್ಟಿದ್ದಾರೆ.

    ‘ಕಬ್ಜ’ ಆರ್.ಚಂದ್ರು, ರಿಯಲ್ ಸ್ಟಾರ್ ಉಪೇಂದ್ರ ಜೋಡಿಯ ಹ್ಯಾಟ್ರಿಕ್ ಕಾಂಬಿನೇಷನ್ ಸಿನಿಮಾ. ದುಬಾರಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಕಬ್ಜ ಚಿತ್ರದ ಮೇಲೆ ಇಡೀ ಭಾರತೀಯ ಚಿತ್ರರಂಗದಲ್ಲೇ ಅಪಾರ ನಿರೀಕ್ಷೆ ಮೂಡಿದೆ. ‘ಕಬ್ಜ’ ಮಾಸ್ ಹಾಗೂ ಆಕ್ಷನ್ ಓರಿಯೆಂಟೆಡ್ ಸಿನಿಮಾವಾಗಿದ್ದು ಭೂಗತಲೋಕದ ಕಹಾನಿ ಚಿತ್ರದಲ್ಲಿದೆ. ಚಿತ್ರದಲ್ಲಿನ ಉಪೇಂದ್ರ ಅವರ ಲುಕ್ ಎಲ್ಲರಿಗೂ ಪ್ರಿಯವಾಗಿದ್ದು ಉಪ್ಪಿ ಅಭಿಮಾನಿಗಳು ಕೂಡ ಕಬ್ಜ ಚಿತ್ರಕ್ಕಾಗಿ ಎದುರು ನೋಡುತ್ತಿದ್ದಾರೆ.


    ಕಬೀರ್ ದುಹಾನಿ ಸಿಂಗ್, ಕೋಟ ಶ್ರೀನಿವಾಸ್ ರಾವ್, ಜಯಪ್ರಕಾಶ್, ಪ್ರಕಾಶ್‍ರಾಜ್, ಅವಿನಾಶ್, ಜಗಪತಿಬಾಬು ಒಳಗೊಂಡಂತೆ ಘಟಾನುಘಟಿ ಕಲಾವಿದರ ದಂಡು ಕಬ್ಜ ಚಿತ್ರದಲ್ಲಿದೆ. ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರು ಸಂಗೀತ ನಿರ್ದೇಶನದಲ್ಲಿ ‘ಕಬ್ಜ’ ಚಿತ್ರದ ಬ್ಯಾಕ್ ಗ್ರೌಂಡ್ ಸ್ಕೋರ್ ಹಾಗೂ ಹಾಡುಗಳು ಮೂಡಿಬರಲಿದೆ. ಎ.ಜೆ. ಶೆಟ್ಟಿ ಕ್ಯಾಮೆರಾ ಕೈಚಳಕದಲ್ಲಿ ಮೂಡಿಬರ್ತಿರೋ ಕಬ್ಜ ಚಿತ್ರಕ್ಕೆ ಆರ್.ಚಂದ್ರಶೇಖರ್ ಬಂಡವಾಳ ಹಾಕಿದ್ದಾರೆ. ಕೊರೊನಾದಿಂದಾಗಿ ಶೂಟಿಂಗ್‍ಗೆ ಬ್ರೇಕ್ ಹಾಕಿದ್ದ ‘ಕಬ್ಜ’ ಟೀಂ ಇದೇ ತಿಂಗಳಿನಲ್ಲಿ ಚಿತ್ರೀಕರಣಕ್ಕೆ ಹೊರಡಲಿದೆ.