Tag: Kabzaa

  • ಅಚ್ಚರಿ ಮೂಡಿಸಲಿದೆ ‘ಕಬ್ಜ’ ಸಿನಿಮಾದ ಚಿತ್ರೀಕರಣಕ್ಕೆ ಬಳಕೆಯಾದ ವಾಹನಗಳ ಪಟ್ಟಿ

    ಅಚ್ಚರಿ ಮೂಡಿಸಲಿದೆ ‘ಕಬ್ಜ’ ಸಿನಿಮಾದ ಚಿತ್ರೀಕರಣಕ್ಕೆ ಬಳಕೆಯಾದ ವಾಹನಗಳ ಪಟ್ಟಿ

    ಬ್ಜ (Kabzaa) ಸಿನಿಮಾ ಬಗ್ಗೆ ಕ್ರಿಯೇಟ್​ ಆಗಿರೋ ಕ್ರೇಜ್​ ಅಷ್ಟಿಷ್ಟಲ್ಲ. ಇಷ್ಟೊಂದು ಎಕ್ಸ್​ಪೆಕ್ಟೇಷನ್​ ಸುಮ್​ ಸುಮ್ಮನೆ ಮೂಡಿದ್ದಲ್ಲ. ಅದರ ಹಿಂದೆ ನಿರ್ದೇಶಕ ಆರ್​. ಚಂದ್ರು (R.Chandru) ಅವರ ಪರಿಶ್ರಮ ಇದೆ. ಹಗಲು-ರಾತ್ರಿ ಎನ್ನದೇ ಕಷ್ಟಪಟ್ಟು ಕೆಲಸ ಮಾಡಿದ ದೊಡ್ಡ ಟೀಮ್​ ಇದೆ. ರೆಟ್ರೋ ಕಾಲದ ಕಥೆಯನ್ನ ತೆರೆಗೆ ತರೋದು ಅಂದ್ರೆ ಸುಲಭ ಅಲ್ಲ. ಆ ಕಾಲದ ರೀತಿ ಕಾಣೋಕೆ ಪ್ರಾಪರ್ಟೀಸ್​ ಬೇಕು. ಅದನ್ನೆಲ್ಲ ಹೊಂದಿಸುವಲ್ಲಿ ಆರ್​. ಚಂದ್ರು ಟೀಮ್​ ಸಿಕ್ಕಾಪಟ್ಟೆ ಎಫರ್ಟ್​ ಹಾಕಿದೆ. ಅದಕ್ಕೆ ಸಾಕ್ಷಿಯೇ ಈ ಸಿನಿಮಾದಲ್ಲಿ ಇರುವ ಕಾರುಗಳು ಕಲೆಕ್ಷನ್​.

    ಕಬ್ಜ ಅಂದ್ರೆ ಬರೀ ಸಿನಿಮಾ ಅಲ್ಲ. ಅದು ನಿರ್ದೇಶಕ ಹಾಗೂ ನಿರ್ಮಾಪಕ ಆರ್​. ಚಂದ್ರು ಕಂಡ ಬಹುದೊಡ್ಡ ಕನಸು. ಅದನ್ನು ನನಸಾಗಿಸೋಕೆ ಕೋಟಿ ಕೋಟಿ ಹಣ ಸುರಿಯಲಾಗಿದೆ. ಕ್ವಾಲಿಟಿಯಲ್ಲಿ ಕಾಂಪ್ರಮೈಸ್​ ಆಗುವ ಮಾತೇ ಇಲ್ಲ. ಇದು ಚಂದ್ರು ಪಾಲಿಸಿ. ಕಬ್ಜ ಸಿನಿಮಾದಲ್ಲಿ ಕಾಣಿಸುವ ಕಾರುಗಳನ್ನು ನೋಡಿದ್ರೆ ಗೊತ್ತಾಗುತ್ತೆ ನಿರ್ದೇಶಕರ ವಿಷನ್​ ಎಂಥದ್ದು ಅಂತ. ಇಂಡಿಯನ್​ ರಿಯಲ್​ ಸ್ಟಾರ್​ ಉಪೇಂದ್ರ (Upendra), ಕಿಚ್ಚ ಸುದೀಪ್ (Sudeep)​, ಶ್ರೀಯಾ ಶರಣ್​ (Shriya Sharan)ಅವರ ಅಭಿಮಾನಿಗಳಿಗೆ ‘ಕಬ್ಜ’ ಸಿನಿಮಾ ಎಂದರೆ ಮನರಂಜನೆಯ ಹಬ್ಬ. ಪಾತ್ರಗಳ ರೀತಿಯೇ ಈ ಸಿನಿಮಾದಲ್ಲಿ ಆ ಕಾಲದ ಕಾರುಗಳು, ಬೈಕ್​ಗಳು, ಲಾರಿಗಳು ಗಮನ ಸೆಳೆಯಲಿವೆ. ಈಗಾಗಲೇ ಟ್ರೇಲರ್​ನಲ್ಲಿ ಅವುಗಳ ಝಲಕ್​ ಕಾಣ್ಸಿದೆ. ಮಿರಮಿರ ಮಿಂಚುವ ಕಾರುಗಳು ಹೈಲೈಟ್​ ಆಗಿವೆ. ಇದನ್ನೂ ಓದಿ: ಹುಟ್ಟುಹಬ್ಬದ ದಿನವೇ ಸಿಹಿಸುದ್ದಿ ಹಂಚಿಕೊಂಡ ಜಾನ್ವಿ ಕಪೂರ್

    ಕಬ್ಜ ಶೂಟಿಂಗ್​ಗಾಗಿ ಕಲಾ ಫಾರ್ಮ್​ನಿಂದ 30 ವಿಂಟೇಜ್​ ಕಾರುಗಳನ್ನ ತರಿಸಲಾಗಿತ್ತು. ಬೇರೆ ಬೇರೆ ಕಡೆಗಳಿಂದ 30 ಲಾರಿಗಳನ್ನ ತರಿಸಿ ಶೂಟಿಂಗ್​ ಮಾಡಲಾಗಿದೆ. ಬರೋಬ್ಬರಿ 300 ಬೈಕ್​ಗಳು ಬಳಕೆ ಆಗಿವೆ. 70 ಜೀಪುಗಳು ಕೂಡ ಅಬ್ಬರಿಸುತ್ತವೆ. 1945ರ ಕಾಲದ ಸೀನ್​ಗಳನ್ನ ತೆರೆ ಮೇಲೆ ಮೂಡಿಸೋಕೆ ಕಬ್ಜ ತಂಡ ಇಷ್ಟೆಲ್ಲ ಕಷ್ಟಪಟ್ಟಿದೆ. ಒಟ್ಟಿನಲ್ಲಿ ಸಿನಿಮಾ ನೋಡೋರಿಗೆ ರೆಟ್ರೋ ಜಮಾನದ ಫೀಲ್​ ಆಗಬೇಕು. ನೋಡಿದವರೆಲ್ಲ ವಾವ್​ ಅನ್ನಲೇಬೇಕು ಎನ್ನುವಂತಹ ಗುರಿ ಇಟ್ಕೊಂಡು ಮಾಡಿದ ಪ್ರಯತ್ನವೆಲ್ಲ ತೆರೆ ಮೇಲೆ ಕಾಣಿಸ್ತಿದೆ.

    ಆರ್​. ಚಂದ್ರು ಒಬ್ಬ ಛಲಗಾರ. ಅಂದುಕೊಂಡ ರೀತಿಯೇ ಸಿನಿಮಾ ಮೂಡಿಬರಬೇಕು ಅಂತ ಪಟ್ಟು ಹಿಡಿಯುವ ಹಠವಾದಿ. ಕೊರೊನಾ ಲಾಕ್​ಡೌನ್​ ಕಾರಣಕ್ಕೆ ಶೂಟಿಂಗ್​ಗೆ ಅಡೆಚಣೆ ಉಂಟಾಗಿತ್ತು. ಆ ರೀತಿ ಎಷ್ಟೇ ಕಷ್ಟ ಬಂದ್ರೂ ಹಿಡಿದ ಕೆಲಸವನ್ನು ಅವರು ಅರ್ಧಕ್ಕೆ ಬಿಟ್ಟಿಲ್ಲ. ಅಂದುಕೊಂಡ ರೀತಿಯೇ ‘ಕಬ್ಜ’ ಲೋಕವನ್ನ ಅವರು ಕಟ್ಟಿದ್ದಾರೆ. ಅದರಲ್ಲಿನ ಪ್ರತಿಯೊಂದು ವಸ್ತುಗಳೂ ಪ್ರೇಕ್ಷಕರ ಕಣ್ಣಿಗೆ ಹಬ್ಬ.

    ವಿಂಟೇಜ್​ ಕಾರುಗಳನ್ನ ಇಟ್ಕೊಂಡು ನೂರಾರು ದಿನಗಳ ಕಾಲ ಶೂಟಿಂಗ್​​ ಮಾಡೋದು ಸುಲಭ ಅಲ್ಲ. ಆ್ಯಕ್ಷನ್​ ಸೀಕ್ವೆನ್ಸ್​ ಮಾಡುವಾಗ ಮೈಯೆಲ್ಲ ಕಣ್ಣಾಗಿರಬೇಕು. ಒಂದು ಕಾರಿಗೂ ಹಾನಿ ಆಗದಂತೆ ನೋಡಿಕೊಳ್ಳಬೇಕು. ಯಾಕೆಂದ್ರೆ ಈ ವಾಹನಗಳಿಗೆ ಬೆಲೆ ಕಟ್ಟೋಕಾಗಲ್ಲ. ಇಂಥ ಸಾಕಷ್ಟು ಚಾಲೆಂಜ್​ಗಳ ನಡುವೆಯೇ ‘ಕಬ್ಜ’ ಸಿನಿಮಾ ನಿರ್ಮಾಣ ಆಗಿದೆ. 1945ರಿಂದ 1987ರವರೆಗೆ ಸಾಗುವ ಕಥೆಯಲ್ಲಿ ಯಾವ ಯಾವ ರೀತಿ ವಾಹನಗಳು ಬರುತ್ತವೋ ಅದೆನ್ನೆಲ್ಲ ಕಷ್ಟಪಟ್ಟು ಸಂಗ್ರಹಿಸಿ ಶೂಟಿಂಗ್​ ಮಾಡಲಾಗಿದೆ. ಆರ್​. ಚಂದ್ರು ಅವರ ಈ ಪರಿಶ್ರಮದಿಂದಾಗಿ ಎಲ್ಲರೂ ಕಬ್ಜ ಚಿತ್ರದ ಬಗ್ಗೆ ಮಾತಾಡುವಂತಾಗಿದೆ. ಕ್ವಾಲಿಟಿ ಅಂದ್ರೆ ಕಬ್ಜ, ಕಬ್ಜ ಅಂದ್ರೆ ಕ್ವಾಲಿಟಿ ಅಂತ ಎಲ್ಲರೂ ಕಮೆಂಟ್​ ಮಾಡ್ತಿದ್ದಾರೆ. ಮೇಕಿಂಗ್​ ಸ್ಟೈಲ್​ ನೋಡಿ ಪರಭಾಷೆಯ ಮಂದಿ ಬಾಯಿ ಮೇಲೆ ಬೆರಳು ಇಟ್ಕೊಂಡಿದಾರೆ. ಕಬ್ಜ ಬ್ಲಾಕ್​ ಬಸ್ಟರ್​ ಹಿಟ್​ ಆಗೋದ್ರಲ್ಲಿ ಅನುಮಾನವೇ ಇಲ್ಲ ಎಂಬ ಟಾಕ್​ ಕ್ರಿಯೇಟ್​ ಆಗಿದೆ.

  • Kabzaa Trailer: ಕಬ್ಜ ಟ್ರೈಲರ್ ರಿಲೀಸ್ ಮಾಡಿದ ಬಿಗ್ ಬಿ – ಡಬಲ್ ಶೇಡ್‌ನಲ್ಲಿ‌ ರಿಯಲ್ ಸ್ಟಾರ್ ಉಪ್ಪಿ

    Kabzaa Trailer: ಕಬ್ಜ ಟ್ರೈಲರ್ ರಿಲೀಸ್ ಮಾಡಿದ ಬಿಗ್ ಬಿ – ಡಬಲ್ ಶೇಡ್‌ನಲ್ಲಿ‌ ರಿಯಲ್ ಸ್ಟಾರ್ ಉಪ್ಪಿ

    ಆರ್.ಚಂದ್ರು (R.Chandru) ನಿರ್ದೇಶನದ ಬಹುನಿರೀಕ್ಷಿತ `ಕಬ್ಜ’ (Kabzaa) ಸಿನಿಮಾದ ಟ್ರೈಲರ್ ಝಲಕ್ ಇದೀಗ ರಿಲೀಸ್ ಆಗಿದೆ. ಬಾಲಿವುಡ್‌ ನಟ ಅಮಿತಾಬ್ ಬಚ್ಚನ್ (Amitabh Bachchan) ಈ ಚಿತ್ರದ ಟ್ರೈಲರ್ ರಿಲೀಸ್ (Kabzaa Trailer) ಮಾಡುವ ಮೂಲಕ ಸಾಥ್ ನೀಡಿದ್ದಾರೆ. ಆ ಮೂಲಕ `ಕಬ್ಜ’ ಸಿನಿಮಾ ತಂಡಕ್ಕೆ ಬಿಗ್ ಬಿ ಶುಭಹಾರೈಸಿದ್ದಾರೆ.

    ಸುದೀಪ್ (Sudeep) ಮತ್ತು ಉಪೇಂದ್ರ (Upendra), ಶಿವಣ್ಣ (ShivaRajkumar) ನಟಿಸಿರುವ ‘ಕಬ್ಜ’ ಸಿನಿಮಾ ಈಗಾಗಲೇ ಚಿತ್ರದ ಟೀಸರ್, ಪೋಸ್ಟರ್‌ನಿಂದ ನಿರೀಕ್ಷೆ ಹುಟ್ಟುಹಾಕಿದೆ. ಇತ್ತೀಚಿಗಷ್ಟೇ `ಚುಮು ಚುಮು ಚಳಿ ಚಳಿ’ ಎನ್ನುವ ಸ್ಪೆಷಲ್ ಸಾಂಗ್‌ನಲ್ಲಿ ಉಪ್ಪಿ ಜೊತೆ ತಾನ್ಯ ಹೋಪ್ ಹೆಜ್ಜೆ ಹಾಕಿದ್ದರು. ಈ ಸಾಂಗ್ ಸೋಷಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಕ್ರಿಯೇಟ್ ಮಾಡಿತ್ತು. ಈ ಬೆನ್ನಲ್ಲೇ ಈ ಚಿತ್ರದ ಟ್ರೈಲರ್‌ನ್ನು ಬಿಗ್ ಬಿ ರಿಲೀಸ್ ಮಾಡಿದ್ದಾರೆ. ಇದನ್ನೂ ಓದಿ: Breaking- ‘ಕಬ್ಜ’ ಟ್ರೈಲರ್ ಬಿಡುಗಡೆ ಮಾಡಲಿದ್ದಾರೆ ಬಿಗ್ ಬಿ ಅಮಿತಾಬ್ ಬಚ್ಚನ್

    ಈ ಚಿತ್ರದಲ್ಲಿ ಬ್ರಿಟಿಷ್ ಕಾಲದ ಕಥೆ, ಸ್ವಾತಂತ್ರ್ಯ ಹೋರಾಟ, ಸ್ವಾತಂತ್ರ್ಯ ನಂತರದ ಕಥೆ ಇರುವ ಸುಳಿವನ್ನು ಟ್ರೈಲರ್ ನೀಡಿದೆ. ದೇಶಪ್ರೇಮ, ವ್ಯವಸ್ಥೆಯ ವಿರುದ್ಧ ಹೋರಾಟ, ಪಾತಕ ಲೋಕ, ತಾಯಿ ಸೆಂಟಿಮೆಂಟ್, ಬ್ರದರ್ ಸೆಂಟಿಮೆಂಟ್ ಎಲ್ಲವನ್ನೂ ‘ಕಬ್ಜ’ದಲ್ಲಿ ಆರ್.ಚಂದ್ರು ಕಟ್ಟಿಕೊಟ್ಟಿದ್ದಾರೆಂಬುದು ಟ್ರೈಲರ್​ನಿಂದ ತಿಳಿದು ಬರುತ್ತಿದೆ.

    ಟ್ರೈಲರ್​ನಲ್ಲಿ ಕುತೂಹಲ ಹುಟ್ಟಿಸಿರುವ ಸಂಗತಿಯೆಂದರೆ ಉಪೇಂದ್ರ ಪೊಲೀಸ್ ಧಿರಿಸಿನಲ್ಲಿ ಕಾಣಿಸಿಕೊಂಡಿರುವುದು. ‘ಕಬ್ಜ’ ಸಿನಿಮಾದ ಪೋಸ್ಟರ್, ಟೀಸರ್​ಗಳಲ್ಲಿ ಗ್ಯಾಂಗ್​ಸ್ಟರ್ ಅವತಾರದಲ್ಲಿ ಉಪೇಂದ್ರ ಕಾಣಿಸಿಕೊಂಡಿದ್ದರು. ಆದರೆ ಟ್ರೈಲರ್​ನಲ್ಲಿ ಪೊಲೀಸ್ ಸಮವಸ್ತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಜೊತೆಗೆ ಮಚ್ಚು ಹಿಡಿದು ವೈರಿಗಳ ರುಂಡವನ್ನೂ ಚೆಂಡಾಡುತ್ತಾರೆ. ನಟ ಸುದೀಪ್ ಸಹ ಪೊಲೀಸ್ ಸಮವಸ್ತ್ರದಲ್ಲಿ ಕಾಣಿಸಿಕೊಂಡು ಕುತೂಹಲ ಮೂಡಿಸಿದ್ದಾರೆ. ಟ್ರೈಲರ್​ನ ಆರಂಭದಲ್ಲಿಯೇ ವ್ಯಕ್ತಿಯೊಬ್ಬ ಗನ್ ಹಿಡಿದು ನಡೆಯುವ ದೃಶ್ಯವಿದೆ. ಆ ನಡಿಗೆಯೆಂದಲೇ ಗೊತ್ತಾಗುತ್ತದೆ ಅದು ಶಿವಣ್ಣನೆಂದು. ಆದರೆ ಟ್ರೈಲರ್​ನಲ್ಲಿ ಅವರ ಮುಖ ತೋರಿಸಿಲ್ಲ. ಇದನ್ನೂ ಓದಿ: ‘ಕಬ್ಜ’ ಸಿನಿಮಾದಲ್ಲಿ ಶಿವರಾಜ್ ಕುಮಾರ್ : ಬ್ರೇಕಿಂಗ್ ನ್ಯೂಸ್ ಕೊಟ್ಟ ಚಂದ್ರು

    ಉಪ್ಪಿ- ಕಿಚ್ಚ ಮಾತ್ರವಲ್ಲದೇ, ಇತರೆ ಪಾತ್ರಗಳ ಮೂಲಕ ನಟರು ಟ್ರೈಲರ್​ನಲ್ಲಿ ಮಿಂಚಿದ್ದಾರೆ. ಜನಪ್ರಿಯ ನಟ ಮುರಳಿ ಶರ್ಮಾ, ತೆಲುಗಿನ ಹಿರಿಯ ನಟ ಕೋಟ ಶ್ರೀನಿವಾಸ ರಾವ್ ಇನ್ನೂ ಕೆಲವರನ್ನು ವಿಲನ್ ಪಾತ್ರದಲ್ಲಿ ಭಯಾನಕವಾಗಿ ತೋರಿಸಿದ್ದಾರೆ. ರಕ್ತ ಹರಿಯುತ್ತಿರುವ, ಬಂದೂಕುಗಳು ಅಬ್ಬರಿಸುವ, ಬಾಂಬ್​ಗಳು ಸಿಡಿಯುವ ದೃಶ್ಯಗಳು ಸಾಕಷ್ಟಿವೆ. ನಾಯಕಿ ಶ್ರೀಯಾ ಮುದ್ದಾಗಿ ಕಾಣಿಸಿಕೊಂಡಿದ್ದಾರೆ.

    ಈ ಸಿನಿಮಾ‌‌ ಬಹುಭಾಷೆಗಳಲ್ಲಿ‌ ಮೂಡಿ ಬರುತ್ತಿದೆ. ಮಾರ್ಚ್ 17ಕ್ಕೆ ಕಬ್ಜ ಚಿತ್ರ ತೆರೆಗೆ ಅಬ್ಬರಿಸುತ್ತಿದೆ.‌ ಅಪ್ಪು ಹುಟ್ಟಿದ ಹಬ್ಬದಂದು ಸಿನಿಮಾ ರಿಲೀಸ್ ಆಗುತ್ತಿರೋದು ಮತ್ತೊಂದು ‌ವಿಶೇಷ. ಉಪ್ಪಿ, ಕಿಚ್ಚ ಮತ್ತು ಶಿವಣ್ಣ ನಟನೆಯ ಈ ಸಿನಿಮಾ, ಪ್ರೇಕ್ಷಕರನ್ನ ಮೋಡಿ ಮಾಡೋದ್ರಲ್ಲಿ ಗೆಲ್ಲುತ್ತಾ ಎಂಬುದನ್ನ ಕಾದುನೋಡಬೇಕಿದೆ. ಇದನ್ನೂ ಓದಿ: ಮಾರ್ಚ್ 4ಕ್ಕೆ ‘ಕಬ್ಜ’ ಸಿನಿಮಾ ಟ್ರೈಲರ್: ಕಾಯುತ್ತಿದ್ದ ಅಭಿಮಾನಿಗಳಲ್ಲಿ ಸಂಭ್ರಮ

  • Breaking- ‘ಕಬ್ಜ’ ಟ್ರೈಲರ್ ಬಿಡುಗಡೆ ಮಾಡಲಿದ್ದಾರೆ ಬಿಗ್ ಬಿ ಅಮಿತಾಬ್ ಬಚ್ಚನ್

    Breaking- ‘ಕಬ್ಜ’ ಟ್ರೈಲರ್ ಬಿಡುಗಡೆ ಮಾಡಲಿದ್ದಾರೆ ಬಿಗ್ ಬಿ ಅಮಿತಾಬ್ ಬಚ್ಚನ್

    ಬಾಲಿವುಡ್ ನ ಖ್ಯಾತ ನಟ ಅಮಿತಾಬ್ ಬಚ್ಚನ್ (Amitabh Bachchan) ಇಂದು ಸಂಜೆ 5 ಗಂಟೆ 2 ನಿಮಿಷಕ್ಕೆ ಮುಂಬೈನಲ್ಲಿ ಕಬ್ಜ (Kabzaa) ಸಿನಿಮಾದ ಟ್ರೈಲರ್ (Trailer) ಬಿಡುಗಡೆ ಮಾಡಲಿದ್ದಾರೆ. ಪ್ರಪಂಚದಾದ್ಯಂತ ಬಿಡುಗಡೆಗೂ ಮುಂಚೆಯೇ ಗಮನ ಸೆಳೆದಿರುವ ಈ ಸಿನಿಮಾ ಟ್ರೈಲರ್ ನೋಡಿ ಖುಷಿ ಪಟ್ಟಿರುವ ಅಮಿತಾಬ್, ನಿರ್ದೇಶಕರ ಆರ್.ಚಂದ್ರು ಅವರನ್ನು ಮುಂಬೈಗೆ ಕರೆಸಿಕೊಂಡು ಎಲ್ಲಾ ಭಾಷೆಗಳ ಟ್ರೈಲರ್ ಅನ್ನು ಬಿಡುಗಡೆ ಮಾಡುತ್ತಿದ್ದಾರೆ.

    ಮೊನ್ನೆಯಷ್ಟೇ ರಿಲೀಸ್ ಆಗಿರುವ ಹಾಡು ಈಗಾಗಲೇ ಕೋಟ್ಯಂತರ ಕೇಳುಗರನ್ನು ತಲುಪಿದೆ. ರಿಲೀಸ್ ಆದ ಅಷ್ಟೂ ಭಾಷೆಗಳಲ್ಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಬೆನ್ನಲ್ಲೇ ಟ್ರೈಲರ್ ರಿಲೀಸ್ ಮಾಡುತ್ತಿದ್ದಾರೆ ನಿರ್ದೇಶಕರು. ಇಂದು ಸಂಜೆ 5 ಗಂಟೆ 2 ನಿಮಿಷಕ್ಕೆ ಟ್ರೈಲರ್ ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ. ಏಕಕಾಲಕ್ಕೆ ಎಲ್ಲ ಭಾಷೆಯ ಟ್ರೈಲರ್ ಗಳು ರಿಲೀಸ್ ಆಗಲಿವೆ. ಇದನ್ನೂ ಓದಿ: ಹೃತಿಕ್ ರೋಷನ್- ಸಬಾ ಆಜಾದ್ ಮದುವೆ ನಿಜಾನಾ? ರಾಕೇಶ್ ರೋಷನ್ ಸ್ಪಷ್ಟನೆ

    ನಿರ್ದೇಶಕ ಆರ್.ಚಂದ್ರು, ರಿಯಲ್ ಸ್ಟಾರ್ ಉಪೇಂದ್ರ (Upendra) ಹಾಗೂ ಕಿಚ್ಚ ಸುದೀಪ್ ಕಾಂಬಿನೇಷನ್ ನ ಮೊದಲ ಸಿನಿಮಾ ಇದಾಗಿದ್ದು, ಶ್ರೀಯಾ ಶರಣ್ ನಾಯಕಿಯಾಗಿದ್ದಾರೆ. ಭಾರೀ ಬಜೆಟ್, ಅದ್ಧೂರಿ ತಾರಾಗಣ ಹೊಂದಿರುವ ಚಿತ್ರ ಇದಾಗಿದೆ. ಅಲ್ಲದೇ, ಅಚ್ಚರಿ ಮೂಡಿಸುವಂತ ಹೆಸರಾಂತ ಕಲಾವಿದರು ಈ ಚಿತ್ರದಲ್ಲಿ ನಟಿಸಿದ್ದಾರಂತೆ. ಯಾರೆಲ್ಲ ನಟಿಸಿದ್ದಾರೆ ಎನ್ನುವ ವಿಷಯವನ್ನು ಸದ್ಯಕ್ಕೆ ಹೇಳುವುದಿಲ್ಲ ಎನ್ನುತ್ತಾರೆ ಚಂದ್ರು.

    ಇದೊಂದು ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, ಸಾವಿರಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಸಿನಿಮಾ ರಿಲೀಸ್ ಮಾಡುವ ಯೋಜನೆ ನಿರ್ದೇಶಕರದ್ದು. ಅದಕ್ಕೆ ಬೇಕಿರುವ ಎಲ್ಲ ಸಿದ್ಧತೆಯನ್ನೂ ಅವರು ಮಾಡಿಕೊಂಡಿದ್ದಾರೆ. ದೊಡ್ಡಮಟ್ಟದಲ್ಲೇ ಸಿನಿಮಾ ರಿಲೀಸ್ ಆಗುತ್ತಿದ್ದು, ಕೇವಲ ಭಾರತದಲ್ಲಿ ಮಾತ್ರವಲ್ಲ ಹಲವು ದೇಶಗಳಲ್ಲೂ ಏಕಕಾಲಕ್ಕೆ ಕಬ್ಜ ಬಿಡುಗಡೆ ಆಗಲಿದೆ.

  • ‘ಕಬ್ಜ’ ಸಿನಿಮಾದಲ್ಲಿ ಶಿವರಾಜ್ ಕುಮಾರ್ : ಬ್ರೇಕಿಂಗ್ ನ್ಯೂಸ್ ಕೊಟ್ಟ ಚಂದ್ರು

    ‘ಕಬ್ಜ’ ಸಿನಿಮಾದಲ್ಲಿ ಶಿವರಾಜ್ ಕುಮಾರ್ : ಬ್ರೇಕಿಂಗ್ ನ್ಯೂಸ್ ಕೊಟ್ಟ ಚಂದ್ರು

    ಕನ್ನಡದ ಪ್ರತಿಭಾವಂತ ನಿರ್ದೇಶಕ ಆರ್.ಚಂದ್ರು (R. Chandru) ನಿರ್ದೇಶನದ ‘ಕಬ್ಜ’ (Kabzaa) ಸಿನಿಮಾದಲ್ಲಿ ಶಿವರಾಜಕುಮಾರ್ (Shivarajkumar)ನಟಿಸಿದ್ದಾರೆ ಎನ್ನುವ ವಿಚಾರ ಆಗಾಗ್ಗೆ ಸುದ್ದಿ ಆಗುತ್ತಲೇ ಇತ್ತು. ಚಂದ್ರು ಸಿನಿಮಾ ಎಂದರೆ ಅಲ್ಲಿ ಶಿವಣ್ಣ ಇರಲೇಬೇಕು ಎನ್ನುವಷ್ಟರ ಮಟ್ಟಿಗೆ ಇಬ್ಬರೂ ಹತ್ತಿರದವರು. ಹಾಗಾಗಿ ಈ ಸಿನಿಮಾದಲ್ಲೂ ಶಿವರಾಜಕುಮಾರ್ ಇರುವುದು ಪಕ್ಕಾ ಎಂದು ಹೇಳಲಾಗಿತ್ತು. ಅದಕ್ಕೀಗ ಉತ್ತರ ಸಿಕ್ಕಿದೆ. ಹೌದು, ಶಿವಣ್ಣ ಕಬ್ಜ ಸಿನಿಮಾದಲ್ಲಿ ನಟಿಸಿದ್ದಾರೆ. ಆ ಪೋಸ್ಟರ್ ಅನ್ನುವ ಚಂದ್ರು ಹಂಚಿಕೊಂಡಿದ್ದಾರೆ.

    ಈಗಾಗಲೇ ಟೀಸರ್ ಮತ್ತು ಹಾಡುಗಳ ಮೂಲಕ ಗಮನ ಸೆಳೆದಿರುವ ‘ಕಬ್ಜ’ ಸಿನಿಮಾ ಟೀಮ್ ಇದೀಗ ಮತ್ತೊಂದು ಮಹತ್ವದ ಹೆಜ್ಜೆ ಇಡುತ್ತಿದೆ. ಮಾರ್ಚ್ 4ರಂದು ಚಿತ್ರದ ಟ್ರೈಲರ್ (Trailer) ರಿಲೀಸ್ ಮಾಡುತ್ತಿದ್ದು, ಟ್ರೈಲರ್ ನೋಡುವುದಕ್ಕಾಗಿಯೇ ಹಲವು ತಿಂಗಳುಗಳಿಂದ ಅಭಿಮಾನಿಗಳು ಕಾದಿದ್ದಾರೆ. ಅಭಿಮಾನಿಗಳನ್ನು ಕಾಯಿಸಿ, ಕೊನೆಗೂ ಟ್ರೈಲರ್ ರಿಲೀಸ್ ಮಾಡುತ್ತಿದ್ದಾರೆ ನಿರ್ದೇಶಕ ಆರ್.ಚಂದ್ರು. ಇದನ್ನೂ ಓದಿ: ಮಾರ್ಚ್ 4ಕ್ಕೆ ‘ಕಬ್ಜ’ ಸಿನಿಮಾ ಟ್ರೈಲರ್: ಕಾಯುತ್ತಿದ್ದ ಅಭಿಮಾನಿಗಳಲ್ಲಿ ಸಂಭ್ರಮ

    ಮೊನ್ನೆಯಷ್ಟೇ ರಿಲೀಸ್ ಆಗಿರುವ ಹಾಡು ಈಗಾಗಲೇ ಕೋಟ್ಯಾಂತರ ಕೇಳುಗರನ್ನು ತಲುಪಿದೆ. ರಿಲೀಸ್ ಆದ ಅಷ್ಟೂ ಭಾಷೆಗಳಲ್ಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಬೆನ್ನಲ್ಲೇ ಟ್ರೈಲರ್ ರಿಲೀಸ್ ಮಾಡುತ್ತಿದ್ದಾರೆ ನಿರ್ದೇಶಕರು. ಶನಿವಾರ (ಮಾ.4) ಸಂಜೆ 5 ಗಂಟೆ 2 ನಿಮಿಷಕ್ಕೆ ಟ್ರೈಲರ್ ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ. ಏಕಕಾಲಕ್ಕೆ ಎಲ್ಲ ಭಾಷೆಯ ಟ್ರೈಲರ್ ಗಳು ರಿಲೀಸ್ ಆಗಲಿವೆ.

    ನಿರ್ದೇಶಕ ಆರ್.ಚಂದ್ರು, ರಿಯಲ್ ಸ್ಟಾರ್ ಉಪೇಂದ್ರ (Upendra) ಹಾಗೂ ಕಿಚ್ಚ ಸುದೀಪ್ (Sudeep) ಕಾಂಬಿನೇಷನ್ ನ ಮೊದಲ ಸಿನಿಮಾ ಇದಾಗಿದ್ದು, ಶ್ರೀಯಾ ಶರಣ್ (Shreya Sharan) ನಾಯಕಿಯಾಗಿದ್ದಾರೆ. ಭಾರೀ ಬಜೆಟ್, ಅದ್ಧೂರಿ ತಾರಾಗಣ ಹೊಂದಿರುವ ಚಿತ್ರ ಇದಾಗಿದೆ. ಅಲ್ಲದೇ, ಅಚ್ಚರಿ ಮೂಡಿಸುವಂತ ಹೆಸರಾಂತ ಕಲಾವಿದರು ಈ ಚಿತ್ರದಲ್ಲಿ ನಟಿಸಿದ್ದಾರಂತೆ. ಯಾರೆಲ್ಲ ನಟಿಸಿದ್ದಾರೆ ಎನ್ನುವ ವಿಷಯವನ್ನು ಸದ್ಯಕ್ಕೆ ಹೇಳುವುದಿಲ್ಲ ಎನ್ನುತ್ತಾರೆ ಚಂದ್ರು.

    ಇದೊಂದು ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, ಸಾವಿರಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಸಿನಿಮಾ ರಿಲೀಸ್ ಮಾಡುವ ಯೋಜನೆ ನಿರ್ದೇಶಕರದ್ದು. ಅದಕ್ಕೆ ಬೇಕಿರುವ ಎಲ್ಲ ಸಿದ್ಧತೆಯನ್ನೂ ಅವರು ಮಾಡಿಕೊಂಡಿದ್ದಾರೆ. ದೊಡ್ಡಮಟ್ಟದಲ್ಲೇ ಸಿನಿಮಾ ರಿಲೀಸ್ ಆಗುತ್ತಿದ್ದು, ಕೇವಲ ಭಾರತದಲ್ಲಿ ಮಾತ್ರವಲ್ಲ ಹಲವು ದೇಶಗಳಲ್ಲೂ ಏಕಕಾಲಕ್ಕೆ ಕಬ್ಜ ಬಿಡುಗಡೆ ಆಗಲಿದೆ.

  • ಮಾರ್ಚ್ 4ಕ್ಕೆ ‘ಕಬ್ಜ’ ಸಿನಿಮಾ ಟ್ರೈಲರ್: ಕಾಯುತ್ತಿದ್ದ ಅಭಿಮಾನಿಗಳಲ್ಲಿ ಸಂಭ್ರಮ

    ಮಾರ್ಚ್ 4ಕ್ಕೆ ‘ಕಬ್ಜ’ ಸಿನಿಮಾ ಟ್ರೈಲರ್: ಕಾಯುತ್ತಿದ್ದ ಅಭಿಮಾನಿಗಳಲ್ಲಿ ಸಂಭ್ರಮ

    ಗಾಗಲೇ ಟೀಸರ್ ಮತ್ತು ಹಾಡುಗಳ ಮೂಲಕ ಗಮನ ಸೆಳೆದಿರುವ ‘ಕಬ್ಜ’ (Kabzaa) ಸಿನಿಮಾ ಟೀಮ್ ಇದೀಗ ಮತ್ತೊಂದು ಮಹತ್ವದ ಹೆಜ್ಜೆ ಇಡುತ್ತಿದೆ. ಮಾರ್ಚ್ 4ರಂದು ಚಿತ್ರದ ಟ್ರೈಲರ್ (Trailer) ರಿಲೀಸ್ ಮಾಡುತ್ತಿದ್ದು, ಟ್ರೈಲರ್ ನೋಡುವುದಕ್ಕಾಗಿಯೇ ಹಲವು ತಿಂಗಳುಗಳಿಂದ ಅಭಿಮಾನಿಗಳು ಕಾದಿದ್ದಾರೆ. ಅಭಿಮಾನಿಗಳನ್ನು ಕಾಯಿಸಿ, ಕೊನೆಗೂ ಟ್ರೈಲರ್ ರಿಲೀಸ್ ಮಾಡುತ್ತಿದ್ದಾರೆ ನಿರ್ದೇಶಕ ಆರ್.ಚಂದ್ರು.

    ಮೊನ್ನೆಯಷ್ಟೇ ರಿಲೀಸ್ ಆಗಿರುವ ಹಾಡು ಈಗಾಗಲೇ ಕೋಟ್ಯಂತರ ಕೇಳುಗರನ್ನು ತಲುಪಿದೆ. ರಿಲೀಸ್ ಆದ ಅಷ್ಟೂ ಭಾಷೆಗಳಲ್ಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಬೆನ್ನಲ್ಲೇ ಟ್ರೈಲರ್ ರಿಲೀಸ್ ಮಾಡುತ್ತಿದ್ದಾರೆ ನಿರ್ದೇಶಕರು. ಶನಿವಾರ (ಮಾ.4) ಸಂಜೆ 5 ಗಂಟೆ 2 ನಿಮಿಷಕ್ಕೆ ಟ್ರೈಲರ್ ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ. ಏಕಕಾಲಕ್ಕೆ ಎಲ್ಲ ಭಾಷೆಯ ಟ್ರೈಲರ್ ಗಳು ರಿಲೀಸ್ ಆಗಲಿವೆ. ಇದನ್ನೂ ಓದಿ: ಸಾಲು ಸಾಲು ಸಿನಿಮಾಗಳ ಸೋಲಿನ ಬಗ್ಗೆ ಮೌನ ಮುರಿದ ಕನ್ನಡದ `ಗಿಲ್ಲಿ’ ನಟಿ ರಾಕುಲ್

    ನಿರ್ದೇಶಕ ಆರ್.ಚಂದ್ರು (R. Chandru), ರಿಯಲ್ ಸ್ಟಾರ್ ಉಪೇಂದ್ರ (Upendra) ಹಾಗೂ ಕಿಚ್ಚ ಸುದೀಪ್ (Sudeep) ಕಾಂಬಿನೇಷನ್ ನ ಮೊದಲ ಸಿನಿಮಾ ಇದಾಗಿದ್ದು, ಶ್ರೀಯಾ ಶರಣ್ (Shriya Sharan) ನಾಯಕಿಯಾಗಿದ್ದಾರೆ. ಭಾರೀ ಬಜೆಟ್, ಅದ್ಧೂರಿ ತಾರಾಗಣ ಹೊಂದಿರುವ ಚಿತ್ರ ಇದಾಗಿದೆ. ಅಲ್ಲದೇ, ಅಚ್ಚರಿ ಮೂಡಿಸುವಂತ ಹೆಸರಾಂತ ಕಲಾವಿದರು ಈ ಚಿತ್ರದಲ್ಲಿ ನಟಿಸಿದ್ದಾರಂತೆ. ಯಾರೆಲ್ಲ ನಟಿಸಿದ್ದಾರೆ ಎನ್ನುವ ವಿಷಯವನ್ನು ಸದ್ಯಕ್ಕೆ ಹೇಳುವುದಿಲ್ಲ ಎನ್ನುತ್ತಾರೆ ಚಂದ್ರು.

    ಇದೊಂದು ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, ಸಾವಿರಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಸಿನಿಮಾ ರಿಲೀಸ್ ಮಾಡುವ ಯೋಜನೆ ನಿರ್ದೇಶಕರದ್ದು. ಅದಕ್ಕೆ ಬೇಕಿರುವ ಎಲ್ಲ ಸಿದ್ಧತೆಯನ್ನೂ ಅವರು ಮಾಡಿಕೊಂಡಿದ್ದಾರೆ. ದೊಡ್ಡಮಟ್ಟದಲ್ಲೇ ಸಿನಿಮಾ ರಿಲೀಸ್ ಆಗುತ್ತಿದ್ದು, ಕೇವಲ ಭಾರತದಲ್ಲಿ ಮಾತ್ರವಲ್ಲ ಹಲವು ದೇಶಗಳಲ್ಲೂ ಏಕಕಾಲಕ್ಕೆ ಕಬ್ಜ ಬಿಡುಗಡೆ ಆಗಲಿದೆ.

  • Exclusive-‘ಕಬ್ಜ’ ನಿರ್ದೇಶಕ ಚಂದ್ರುಗೆ ಕನ್ನಡದಲ್ಲೇ ಪತ್ರ ಬರೆದ ಪವನ್ ಕಲ್ಯಾಣ್

    Exclusive-‘ಕಬ್ಜ’ ನಿರ್ದೇಶಕ ಚಂದ್ರುಗೆ ಕನ್ನಡದಲ್ಲೇ ಪತ್ರ ಬರೆದ ಪವನ್ ಕಲ್ಯಾಣ್

    ನ್ನಡದ ಮತ್ತೊಂದು ಸಿನಿಮಾ ರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಸ್ಯಾಂಡಲ್ ವುಡ್ ಹೆಸರಾಂತ ನಿರ್ದೇಶಕ ಆರ್.ಚಂದ್ರು ನಿರ್ದೇಶನದಲ್ಲಿ ಮೂಡಿ ಬಂದಿರುವ ಕಬ್ಜ ಚಿತ್ರವು ಕನ್ನಡವೂ ಸೇರಿದಂತೆ ಹಲವು ಭಾಷೆಗಳಲ್ಲಿ ತಯಾರಾಗಿದೆ. ಈ ಸಿನಿಮಾ ಕುರಿತು ದೇಶದ ನಾನಾ ಭಾಷೆಗಳ ಚಿತ್ರ ತಯಾರಕರು ಪ್ರಶಂಸೆ ವ್ಯಕ್ತ ಪಡಿಸುತ್ತಿದ್ದಾರೆ. ಅದರಲ್ಲೂ ತೆಲುಗಿನ ಪವರ್ ಸ್ಟಾರ್ ಪವನ್ ಕಲ್ಯಾಣ್ ಸಿನಿಮಾದ ಬಗ್ಗೆ ಮೆಚ್ಚಿ ಕನ್ನಡದಲ್ಲೇ ಪತ್ರವೊಂದನ್ನು ಬರೆದಿದ್ದಾರೆ.

    ಮೊನ್ನೆಯಷ್ಟೇ ಶಿಡ್ಲಘಟ್ಟದಲ್ಲಿ ಅದ್ದೂರಿಯಾಗಿ ಹಾಡೊಂದರ ಬಿಡುಗಡೆ ಮಾಡಲಾಗಿದೆ. ಈ ಕಾರ್ಯಕ್ರಮಕ್ಕೆ ಖ್ಯಾತ ನಟ ಪವನ್ ಕಲ್ಯಾಣ್ ಆಗಮಿಸಬೇಕಿತ್ತು. ಅವರಿಗೆ ಚಿತ್ರತಂಡ ಆಹ್ವಾನವನ್ನೂ ನೀಡಿತ್ತು. ಮೊದಲೇ ಅವರಿಗೆ ಹಲವು ಕಾರ್ಯಕ್ರಮಗಳು ನಿಗದಿ ಆಗಿದ್ದರಿಂದ ಬರಲು ಸಾಧ್ಯವಾಗುತ್ತಿಲ್ಲವೆಂದು ಪವನ್ ಕಲ್ಯಾಣ್ ಕನ್ನಡದಲ್ಲೇ ಪತ್ರ ಬರೆದಿದ್ದಾರೆ. ತಂಡಕ್ಕೆ ಶುಭ ಕೋರಿದ್ದಲ್ಲದೇ ಕನ್ನಡ ಸಿನಿಮಾ ಬಗ್ಗೆ ಕೊಂಡಾಡಿದ್ದಾರೆ. ಇದನ್ನೂ ಓದಿ: ನೆಟ್ಟಿಗರ ಕೆಂಗಣ್ಣಿಗೆ ಗುರಿಯಾದ ʻಜೊತೆ ಜೊತೆಯಲಿʼ ನಟಿಯ ಹೊಸ ಫೋಟೋಶೂಟ್‌

    ಪವನ್ ಕಲ್ಯಾಣ್ ಬರೆದ ಪತ್ರವು ಪಬ್ಲಿಕ್ ಟಿವಿ ಡಿಜಿಟಲ್ ಗೆ ಲಭ್ಯವಾಗಿದ್ದು, ಆ ಪತ್ರದಲ್ಲಿ ‘ಈ ಚಿತ್ರದ ನಾಯಕ ಉಪೇಂದ್ರ ಅವರಿಗೂ, ಸುದೀಪ್ ಅವರಿಗೂ ನನ್ನ ಹಾರ್ದಿಕ ಅಭಿನಂದನೆಗಳು. ಅವರಿಬ್ಬರ ಜೊತೆಗೂ ನನಗೆ ಸಾಕಷ್ಟು ಪರಿಚಯವಿದೆ. ಉಪೇಂದ್ರ ಅವರಾಗಲಿ, ಸುದೀಪ್ ಅವರಾಗಲಿ ತುಂಬಾ ಭಿನ್ನವಾದ ಪಾತ್ರಗಳಲ್ಲಿ ನಟಿಸಿದ್ದಾರೆ. ತಮ್ಮವೇ ಆದ ಹಾಭಾವಗಳಿಂದ ಎಲ್ಲ ಭಾಷೆಯ ಪ್ರೇಕ್ಷಕರ ಮನವನ್ನೂ ಸೂರೆಗೊಂಡಿದ್ದಾರೆ. ಕಬ್ಜಾ ಚಿತ್ರವು ಕನ್ನಡದ ಜೊತೆಗೆ ಎಲ್ಲ ಭಾಷೆಗಳಲ್ಲೂ ವಿಜಯವನ್ನು ಪಡೆಯಬೇಕೆಂದು ಬಯಸುತ್ತೇನೆ’ ಎಂದು ಬರೆದಿದ್ದಾರೆ.

    ಅಂದುಕೊಂಡಂತೆ ಆಗಿದ್ದರೆ ಮುಂಬೈನಲ್ಲಿ ನಾಳೆ ಸಿನಿಮಾದ ಹಾಡೊಂದು ಬಿಡುಗಡೆ ಆಗಬೇಕಿತ್ತು. ಆದರೆ, ಅನಿವಾರ್ಯ ಕಾರಣದಿಂದಾಗಿ ಎರಡ್ಮೂರು ದಿನಗಳ ಕಾಲ ಈ ಕಾರ್ಯಕ್ರಮವನ್ನು ಮುಂದಕ್ಕೆ ಹಾಕಿದ್ದಾರಂತೆ ನಿರ್ದೇಶಕ ಆರ್.ಚಂದ್ರು ಬಾಲಿವುಡ್ ನಲ್ಲಿ ಚಿತ್ರಕ್ಕೆ ಬಹುಬೇಡಿಕೆ ಬಂದಿರುವುದರಿಂದ ವಿಭಿನ್ನವಾಗಿ ಕಾರ್ಯಕ್ರವನ್ನು ಆಯೋಜನೆ ಮಾಡಲು ಅವರು ಯೋಜನೆಯೊಂದನ್ನು ರೂಪಿಸಿದ್ದಾರೆ.

  • ಕಲರ್ ಫುಲ್ ವೇದಿಕೆಯಲ್ಲಿ ಕಬ್ಜ : ಶಿಡ್ಲಘಟ್ಟ ಕಾರ್ಯಕ್ರಮ ಹೇಗಿತ್ತು?

    ಕಲರ್ ಫುಲ್ ವೇದಿಕೆಯಲ್ಲಿ ಕಬ್ಜ : ಶಿಡ್ಲಘಟ್ಟ ಕಾರ್ಯಕ್ರಮ ಹೇಗಿತ್ತು?

    ಸದ್ಯ ಪ್ಯಾನ್ ಇಂಡಿಯಾ ಹಂತದಲ್ಲಿ ಟ್ರೆಂಡಿಂಗ್‌ನಲ್ಲಿರುವ ಸಿನಿಮಾ ಎಂದರೆ ‘ಕಬ್ಜ’ (Kabzaa). ಈಗಾಗಲೇ ತನ್ನ ಟೀಸರ್, ಎರಡು ಹಾಡುಗಳಿಂದ ಜನರ ಮನ ಗೆದ್ದಿರುವ ‘ಕಬ್ಜ’ ಚಿತ್ರದಿಂದ ಇದೀಗ ಪಡ್ಡೆ ಹುಡುಗರ ಹೃದಯಕ್ಕೆ ಹತ್ತಿರವಾಗುವ ಹಾಡೊಂದು ಬಿಡುಗಡೆಯಾಗಿದೆ.  ಹೌದು ಇತ್ತೀಚೆಗೆ ಆರ್.ಚಂದ್ರು (R. Chandru) ಅವರ ತವರು ಶಿಡ್ಲಘಟ್ಟದಲ್ಲಿ “ಕಬ್ಜ” ಚಿತ್ರದ ‘ಚುಮ್ ಚುಮ್ ಚಳಿ ಚಳಿ . ತಬ್ಕೊ ಚಳುವಳಿ’ ಎಂಬ ಮಾಸ್ ಹಾಡು ಅಪಾರ ಜನಸಾಗರದ ನಡುವೆ ಬಿಡುಗಡೆಯಾಯಿತು. ಪ್ರಮೋದ್ ಮರವಂತೆ ಬರೆದಿರುವ ಈ ಹಾಡನ್ನು  ಐರಾ ಉಡುಪಿ, ಮನೀಶ್ ದಿನಕರ್ ಹಾಗೂ ಸಂತೋಷ್ ವೆಂಕಿ ಹಾಡಿದ್ದಾರೆ. ರವಿ ಬಸ್ರೂರ್ ಸಂಗೀತ ನೀಡಿರುವ ಈ ಹಾಡು ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ.

    ಶಿಡ್ಲಘಟ್ಟದ (Shidlaghatta) ಜೂನಿಯರ್ ಕಾಲೇಜ್ ನೆಹರು ಮೈದಾನದಲ್ಲಿ ನಡೆದ ಹಾಡು ಬಿಡುಗಡೆ ಕಾರ್ಯಕ್ರಮದಲ್ಲಿ ನಟ ಶಿವರಾಜ್‌ಕುಮಾರ್, ಗೀತಾ ಶಿವರಾಜ್‌ಕುಮಾರ್, ಆರೋಗ್ಯ ಸಚಿವ ಡಾಕ್ಟರ್ ಕೆ. ಸುಧಾಕರ್, ಶಿಡ್ಲಘಟ್ಟದ ಶಾಸಕರಾದ. ಮುನಿಯಪ್ಪ, ಸಮಾಜ ಸೇವಕ ರಾಮಚಂದ್ರ ಗೌಡರು, ಹೆಚ್.ಎಂ. ರೇವಣ್ಣ, ವಿತರಕ ಆನಂದ್ ಪಂಡಿತ್ ಸೇರಿದಂತೆ ಅನೇಕ ಗಣ್ಯರು ಹಾಗೂ ಚಿತ್ರತಂಡದ ಸದಸ್ಯರು ಭಾಗಿಯಾಗಿದ್ದರು.  ದೊಡ್ಡ ಪರದೆಯಲ್ಲಿ ಚಿತ್ರದ ಟೀಸರ್ ಗೀತೆಗಳನ್ನು ನೋಡಿದ ಜನಸಾಗರ ಮತ್ತೊಮ್ಮೆ ಮಗದೊಮ್ಮೆ ಕೇಳಿ, ನೋಡಿ ಸಂಭ್ರಮಿಸಿದರು. ಜೊತೆಗೆ ಗುರುಕಿರಣ್ ಗಾಯನ, ರೋಬೋ ಗಣೇಶ್ ಡ್ಯಾನ್ಸ್ ಮುಂತಾದ ಮನೋರಂಜನಾ ಕಾರ್ಯಕ್ರಮಗಳಿಗೆ ಜನ‌ ಚಪ್ಪಾಳೆಯ ಮಳೆ ಕರೆದರು.

    ಹಾಡು ಬಿಡುಗಡೆ ಮಾಡಿ ಮಾತನಾಡಿದ ಶಿವರಾಜಕುಮಾರ್ ಅವರು,  ನಾನು ಉಪೇಂದ್ರ ಅಭಿಮಾನಿ.  ಅವರು ‘ಓಂ’ ಸಿನಿಮಾ ಮೂಲಕ ಇಡೀ ಭಾರತಕ್ಕೆ ರೌಡಿಸಂ ಚಿತ್ರ ನೀಡಿದವರು. ಅವರ ಜೊತೆ ಕೆಲಸ ಮಾಡುವುದೆ ಖುಷಿ. ಆರ್.ಚಂದ್ರು ಕೂಡ ಅದ್ಭುತವಾದ ಸಿನಿಮಾಗಳನ್ನು ನೀಡುತ್ತಾ ಬರುತ್ತಿದ್ದಾರೆ’ ಎಂದು ತಂಡಕ್ಕೆ ಶುಭ ಹಾರೈಸಿ ಓಂ ಸಿನಿಮಾ ಡೈಲಾಗ್ ಹೇಳಿ,  “ಕಬ್ಜ”ದ “ಚುಮ್ ಚುಮ್” ಗೀತೆಗೆ ಹೆಜ್ಜೆ ಹಾಕಿದರು.  ಇದೇ ಸಂದರ್ಭದಲ್ಲಿ ಆರೋಗ್ಯ ಸಚಿವ ಕೆ. ಸುಧಾಕರ್ ಮಾತನಾಡಿ,  ‘ಇದು ‘ಕಬ್ಜ’ ಸಿನಿಮಾದ ಹಬ್ಬ. ಈ ಹಾಡು ಬಿಡುಗಡೆ ಸಮಾರಂಭವನ್ನು ಚಂದ್ರು ಅವರಿಗೆ ನಮ್ಮ ಚಿಕ್ಕಬಳ್ಳಾಪುರದಲ್ಲಿ ಮಾಡೋಣ ಎಂದಿದ್ದೆ. ಆದರೆ, ಅವರು ತಮ್ಮ ತವರಲ್ಲಿ ಮಾಡಿದ್ದಾರೆ. ಈ ಮೊದಲು ನಾನು “ಆರ್ ಆರ್ ಆರ್” ಚಿತ್ರದ ಆಡಿಯೋ ಲಾಂಚ್ ಮಾಡಿದ್ದೆ. ಅದು ಹಿಟ್ ಆಯ್ತು. ಅದಕ್ಕಿಂತ ದೊಡ್ಡ ಮಟ್ಟದಲ್ಲಿ ‘ಕಬ್ಜ’ ಗೆಲ್ಲಬೇಕು. ಇದೊಂದು ಸದಭಿರುಚಿಯ ಯುವಕರ ಸಿನಿಮಾ ಎನ್ನಬಹುದು. ಸಿನಿಮಾ ದೊಡ್ಡ ಮಟ್ಟದಲ್ಲಿ ಸೌಂಡ್ ಮಾಡಲಿ. ಇಂದು ಎಲ್ಲಾ ಕಡೆ ಕನ್ನಡ ಸಿನಿಮಾಗಳನ್ನು ಜನ ನೋಡಿ,‌ ಮೆಚ್ಚಿಕೊಳ್ಳುತ್ತಿದ್ದಾರೆ ಎಂದರು.

    ‘ಈಗಾಗಲೇ ನಾವು ಎರಡು ಗೀತೆಗಳನ್ನು ಹೈದರಾಬಾದ್, ಚೆನೈನಲ್ಲಿ ಬಿಡುಗಡೆ ಮಾಡಿದ್ದು. ಈ  ಹಾಡನ್ನು ನಮ್ಮೂರು ಶಿಡ್ಲಘಟ್ಟದಲ್ಲಿ ಬಿಡುಗಡೆ ಮಾಡಿದ್ದೇವೆ. ಎಲ್ಲಾ ಅಥಿತಿಗಳು ಬಂದಿರುವುದು ತುಂಬಾ ಖುಷಿಯಾಗಿದೆ. ಅದರಲ್ಲೂ ಗೀತಕ್ಕ ಅವರು ನಮ್ಮ ‘ಶ್ರೀ ಸಿದ್ದೇಶ್ವರ ಎಂಟರ್‌ ಪ್ರೈಸಸ್’ ಬ್ಯಾನರ್‌ ಅನ್ನು ಬಿಡುಗಡೆ ಮಾಡಿದ್ದರು. ಅವರು ಇಂದು ಈ ಸಮಾರಂಭಕ್ಕೆ ಬಂದಿರುವುದು ವಿಶೇಷ. ದೊಡ್ಡ ಮಟ್ಟದಲ್ಲಿ ಕನ್ನಡದ ಹೆಮ್ಮೆಯ ಪ್ಯಾನ್ ಇಂಡಿಯಾ ಸಿನಿಮಾ ‘ಕಬ್ಜ’ ಸದ್ದು ಮಾಡುತ್ತಿದೆ. ಬಾಲಿವುಡ್‌ನಲ್ಲಿ ಸುಮಾರು 1800 ಕ್ಕೂ ಹೆಚ್ಚು ಥಿಯೇಟರ್‌ನಲ್ಲಿ ನಮ್ಮ ‘ಕಬ್ಜ’ ಬಿಡುಗಡೆ ಆಗಲಿದೆ’ ಎಂದು ನಿರ್ದೇಶಕ – ನಿರ್ಮಾಪಕ ಆರ್ ಚಂದ್ರು ಹೇಳಿದರು.

    ನಂತರ ಚಿತ್ರದ ನಾಯಕ ರಿಯಲ್ ಸ್ಟಾರ್ ಉಪೇಂದ್ರ ಮಾತನಾಡಿ ‘ಆದಷ್ಟು ಬೇಗ ಶಿವಣ್ಣನ ಜೊತೆ ಸಿನಿಮಾ ಮಾಡುತ್ತೇನೆ. ಅಪ್ಪುಗೆ ಆ್ಯಕ್ಷನ್-ಕಟ್ ಹೇಳುವ ಆಸೆ ಇತ್ತು. ಅದು ಇಡೇರಲಿಲ್ಲ. “ಕಬ್ಜ” ಬಗ್ಗೆ ಹೇಳುವುದಾದರೆ, ಇಂದಿನ ಹೀರೋ ಸಂಗೀತ ನಿರ್ದೇಶಕ ರವಿ ಬಸ್ರೂರ್. ಈ ಚಿತ್ರದಲ್ಲಿ ಅವರು ಮಾಸ್, ಕ್ಲಾಸಿಕ್ ಹಾಗೂ ಮೆಲೋಡಿ ಗೀತೆಗಳನ್ನು ಕೊಟ್ಟಿದ್ದಾರೆ. ಚಂದ್ರು ಈ ಸಿನಿಮಾ ಮೂಲಕ ಪ್ರತಿಯೊಬ್ಬರ ಹೃದಯ “ಕಬ್ಜ” ಮಾಡಲಿದ್ದಾರೆ. ಚಿತ್ರದಲ್ಲಿ ತುಂಬಾ ಅದ್ಭುತಗಳಿದ್ದು, ಪ್ರೇಕ್ಷಕರಿಗೆ ನಿಜಕ್ಕೂ ಹಬ್ಬ .  ಚಂದ್ರು ಕಥೆಯನ್ನು ಎಲ್ಲೂ ಬಿಟ್ಟು ಕೊಟ್ಟಿಲ್ಲ. ಕಥೆಯೇ ಚಿತ್ರದ ಹೈಲೈಟ್ ಎನ್ನಬಹುದು’ ಎಂದರು.

    ‘ಇಡೀ ತಂಡ ಶ್ರಮದಿಂದ ಸಿನಿಮಾ ಮಾಡಿದ್ದು, “ಕಬ್ಜ”ದಲ್ಲಿ ನನಗೊಂದು ಒಳ್ಳೆ ಪಾತ್ರವಿದೆ’ ಎಂದು ಎನ್ನುತ್ತಾರೆ ನಾಯಕಿ ಶ್ರೇಯಾ ಶರಣ್. ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿರುವ ನಟ ಅನೂಪ್ ರೇವಣ್ಣ ಸಹ “ಕಬ್ಜ” ಬಗ್ಗೆ ತಮ್ಮ ಅನುಭವ ಹಂಚಿಕೊಂಡರು. ಅಂದ ಹಾಗೆ ಅಪ್ಪು ಹುಟ್ಟುಹಬ್ಬದ ಪ್ರಯುಕ್ತ ಪ್ಯಾನ್ ಇಂಡಿಯಾ ಸಿನಿಮಾ “ಕಬ್ಜ” ಇದೇ ಮಾರ್ಚ್ 17ರಂದು ವಿಶ್ವದಾದ್ಯಂತ ಬಿಡುಗಡೆಯಾಗುತ್ತಿದೆ.  ಈ ಚಿತ್ರದ ಮುಖ್ಯವಾದ ಪಾತ್ರವೊಂದರಲ್ಲಿ ಕಿಚ್ಚ ಸುದೀಪ್ ಅಭಿನಯ ಮಾಡಿದ್ದಾರೆ.  ಕಾರ್ಯಕಾರಿ ನಿರ್ಮಾಪಕರಾಗಿ ಅಲಂಕಾರ್ ಪಾಂಡ್ಯನ್ ಸಾಥ್ ನೀಡಿದ್ದಾರೆ.

  • ಬೇಸಿಗೆಯಲ್ಲಿ ಚುಮುಚುಮು ಚಳಿ ಎಂದ ತಾನ್ಯ ಹೋಪ್ : ‘ಕಬ್ಜ’ದಲ್ಲಿ ಹಾಟ್ ಹಾಟ್

    ಬೇಸಿಗೆಯಲ್ಲಿ ಚುಮುಚುಮು ಚಳಿ ಎಂದ ತಾನ್ಯ ಹೋಪ್ : ‘ಕಬ್ಜ’ದಲ್ಲಿ ಹಾಟ್ ಹಾಟ್

    ಬಸಣ್ಣಿ ಹಾಡಿಗೆ ಮೈಚಳಿ ಬಿಟ್ಟು ಕುಣಿದಿದ್ದ ನಟಿ ತಾನ್ಯ ಹೋಪ್ (Tanya Hope), ಇದೀಗ ಕಬ್ಜ (Kabzaa) ಸಿನಿಮಾದ ಹಾಡಿನಲ್ಲಿ ಇನ್ನೂ ಹಾಟ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ‘ಚುಮು ಚುಮು ಚಳಿ’ (Chalichali) ಎನ್ನುವ ಹಾಡಿನಲ್ಲಿ ಉಪೇಂದ್ರ (Upendra) ಜೊತೆ ಸಖತ್ ಸ್ಟೆಪ್ ಹಾಕಿರುವ ಅವರು, ಪಡ್ಡೆ ಹುಡುಗರಿಗೆ ಬಿಸಿ ಬಿಸಿ ತಾಗಿಸಿದ್ದಾರೆ. ತಾನ್ಯ ಹೋಪ್ ಜೊತೆ ಉಪ್ಪಿ ಕೂಡ ಮಜವಾಗಿ ಡಾನ್ಸ್ ಮಾಡಿದ್ದು ವಿಶೇಷ. ರವಿ ಬಸರೂರು ಸಂಗೀತ ಸಂಯೋಜನೆಯಲ್ಲಿ ಈ ಹಾಡು ಮೂಡಿ ಬಂದಿದೆ.

    ನಿನ್ನೆ ಶಿಡ್ಲಘಟ್ಟದಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಈ ಹಾಡನ್ನು ರಿಲೀಸ್ ಮಾಡಿದ್ದು, ಶಿವರಾಜ್ ಕುಮಾರ್, ಉಪೇಂದ್ರ ಸೇರಿದಂತೆ ಹಲವರು ಈ ಸಮಾರಂಭದಲ್ಲಿ ಭಾಗಿಯಾಗಿದ್ದರು. ಚಿತ್ರತಂಡ ಮೊದಲೇ ಘೋಷಿಸಿದಂತೆ ಸಾವಿರಾರು ಜನರ ಮಧ್ಯ ಈ ಹಾಡಿನ ಲೋಕಾರ್ಪಣೆ ಕಾರ್ಯಕ್ರಮ ನಡೆಯಿತು. ಸಂಗೀತ, ನೃತ್ಯ ಕಾರ್ಯಕ್ರಮಗಳು ಮತ್ತಷ್ಟು ಮೆರಗು ನೀಡಿದ್ದು ವಿಶೇಷ. ಇದನ್ನೂ ಓದಿ: ಪೃಥ್ವಿ ಶಾ ಯಾರು ಅಂತಾನೇ ಗೊತ್ತಿಲ್ಲ, ಆತ ಕುಡಿದು ಬಂದಿದ್ದ – ಸಪ್ನಾ ಗಿಲ್

    ಆರ್.ಚಂದ್ರು ನಿರ್ದೇಶನದಲ್ಲಿ ಕಬ್ಜ ಸಿನಿಮಾ ಮೂಡಿ ಬಂದಿದ್ದು, ಉಪೇಂದ್ರ ಮತ್ತು ಕಿಚ್ಚ ಸುದೀಪ್ ತೆರೆ ಹಂಚಿಕೊಂಡಿದ್ದಾರೆ. ಈ ಕಾಂಬಿನೇಷನ್ ಜೊತೆ ಶ್ರೀಯಾ ಶರಣ್ ನಾಯಕಿಯಾಗಿ ನಟಿಸಿದ್ದಾರೆ. ಹಲವು ಭಾಷೆಗಳಲ್ಲಿ ಈ ಸಿನಿಮಾ ತಯಾರಾಗಿದ್ದು, ಈಗಾಗಲೇ ನೋಡುಗರಲ್ಲಿ ಕ್ರೇಜ್ ಕ್ರಿಯೇಟ್ ಮಾಡಿದೆ. ಈ ವರ್ಷದ ಅತೀ ನಿರೀಕ್ಷಿತ ಸಿನಿಮಾಗಳ ಪಟ್ಟಿಯಲ್ಲೂ ಕಾಣಿಸಿಕೊಂಡಿದೆ.

    ಹಲವು ಅಚ್ಚರಿಗಳನ್ನು ಸಿನಿಮಾದಲ್ಲಿ ತೋರಿಸಲಿದ್ದಾರಂತೆ ನಿರ್ದೇಶಕ ಚಂದ್ರು. ಹೆಸರಾಂತ ತಾರಾಬಳಗ ಕೂಡ ಈ ಸಿನಿಮಾದಲ್ಲಿದೆ. ಪ್ಯಾನ್ ಇಂಡಿಯಾ ಕಾನ್ಸೆಪ್ಟ್ ಗೆ ಸಲ್ಲುವಂತೆ ಕಲಾವಿದರ ಆಯ್ಕೆ ಮಾಡಿದ್ದಾರಂತೆ. ಹಾಗಾಗಿ ಇದೊಂದು ಭಾರತೀಯ ಸಿನಿಮಾ ಎನ್ನುತ್ತಾರೆ ನಿರ್ದೇಶಕರು. ಈಗಾಗಲೇ ರಿಲೀಸ್ ಆಗಿರುವ ಟ್ರೈಲರ್ ಮತ್ತು ಟೀಸರ್ ಅಪಾರ ಮೆಚ್ಚುಗೆ ಪಡೆದಿವೆ.

  • ಫೆ.26ಕ್ಕೆ ಲಕ್ಷಾಂತರ ಜನರ ಮಧ್ಯೆ ಶಿಡ್ಲಘಟ್ಟದಲ್ಲಿ ‘ಕಬ್ಜ’ ಸಿನಿಮಾದ ಸಾಂಗ್ ರಿಲೀಸ್

    ಫೆ.26ಕ್ಕೆ ಲಕ್ಷಾಂತರ ಜನರ ಮಧ್ಯೆ ಶಿಡ್ಲಘಟ್ಟದಲ್ಲಿ ‘ಕಬ್ಜ’ ಸಿನಿಮಾದ ಸಾಂಗ್ ರಿಲೀಸ್

    ರಿಯಲ್ ಸ್ಟಾರ್ ಉಪೇಂದ್ರ (Upendra) ನಾಯಕರಾಗಿ, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ (Sudeep) ವಿಶೇಷ ಪಾತ್ರದಲ್ಲಿ ಅಭಿನಯಿಸಿರುವ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ಕಬ್ಜ (Kabzaa) ಸಿನಿಮಾದ ಕಮರ್ಷಿಯಲ್  ಹಾಡೊಂದನ್ನು ಬಿಡುಗಡೆ ಮಾಡಲು ಅದ್ಧೂರಿಯಾಗಿ ತಯಾರಿ ಮಾಡಿಕೊಂಡಿದ್ದಾರೆ ನಿರ್ದೇಶಕ ಆರ್. ಚಂದ್ರು (R. Chandru). ಇದೇ ಫೆಬ್ರವರಿ 26 ರಂದು  ಶಿಡ್ಲಘಟ್ಟದಲ್ಲಿ (Shidlaghatta) ಹಾಡು ಬಿಡುಗಡೆಯಾಗಲಿದೆ.

    ಈ ಕುರಿತು ಮಾತನಾಡಿರುವ ನಿರ್ದೇಶಕ ಚಂದ್ರು, ‘ಲಕ್ಷಾಂತರ ಅಭಿಮಾನಿಗಳ ಸಮ್ಮುಖದಲ್ಲಿ ಈ ಸಮಾರಂಭ ಅದ್ದೂರಿಯಾಗಿ ನಡೆಯಲಿದೆ. ಶಿಡ್ಲಘಟ್ಟ ನನ್ನ ತವರೂರು. ನಮ್ಮೂರಿನಲ್ಲಿ ಕಬ್ಜ ಚಿತ್ರದ ಅದ್ದೂರಿ ಸಮಾರಂಭ ಆಯೋಜಿಸಿರುವೆ. ಸಮಾರಂಭ ಯಶಸ್ವಿಯಾಗಿ ನಡೆಯಲು ಈಗಾಗಲೇ ತಯಾರಿ ಆರಂಭಿಸಿದ್ದೇನೆ’ ಎಂದಿದ್ದಾರೆ. ಇದನ್ನೂ ಓದಿ:ನಿರ್ದೇಶಕ ಭಗವಾನ್ ನಿಧನಕ್ಕೆ ಸಿಎಂ, ಮಾಜಿ ಸಿಎಂ ಸಂತಾಪ

    ಈ ಸಮಾರಂಭದಲ್ಲಿ ರಿಯಲ್ ಸ್ಟಾರ್ ಉಪೇಂದ್ರ, ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ದುನಿಯಾ ವಿಜಯ್, ಪ್ರೇಮ್, ಶ್ರೀಯಾ ಶರಣ್ ಹಾಗೂ ಆಂಧ್ರ, ತಮಿಳುನಾಡು, ಕೇರಳದಿಂದ ಸಹ ಪ್ರಮುಖ ಗಣ್ಯರು ಆಗಮಿಸುತ್ತಿದ್ದಾರೆ. ಇದೊಂದು ಐತಿಹಾಸಿಕ ಸಮಾರಂಭವನ್ನಾಗಿಸಲು ಎಲ್ಲ ಸಿದ್ಧತೆಯನ್ನು ಮಾಡಿಕೊಂಡಿದೆ ಚಿತ್ರತಂಡ.

    ಕಬ್ಜ ಹಲವು ಭಾಷೆಗಳಲ್ಲಿ ಬಿಡುಗಡೆ ಆಗುತ್ತಿರುವುದರಿಂದ ಚೆನ್ನೈ, ಹೈದರಾಬಾದ್, ಮುಂಬೈ, ಕೇರಳ ಹೀಗೆ ಹಲವು ಕಡೆಗಳಲ್ಲಿ ಸಮಾರಂಭಗಳನ್ನು ಮಾಡುವ ಕುರಿತು ಚಿತ್ರತಂಡ ಯೋಜನೆ ಹಾಕಿದೆ. ಈಗಾಗಲೇ ಚೆನ್ನೈ, ಹೈದರಾಬಾದ್ ನಲ್ಲಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿದ್ದಾರೆ.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಚೆನ್ನೈನಲ್ಲಿ ಕಬ್ಜ ಚಿತ್ರದ ‘ನಮಾಮಿ ನಮಾಮಿ’ ಹಾಡು ರಿಲೀಸ್

    ಚೆನ್ನೈನಲ್ಲಿ ಕಬ್ಜ ಚಿತ್ರದ ‘ನಮಾಮಿ ನಮಾಮಿ’ ಹಾಡು ರಿಲೀಸ್

    ಡೀ ಭಾರತಾದ್ಯಂತ ಬಿಡುಗಡೆಗೂ ಮುಂಚೆಯೇ ಎಲ್ಲರ ಗಮನ ಸೆಳೆದಿರುವ,  ಆರ್ ಚಂದ್ರು (R. Chandru) ನಿರ್ದೇಶನದಲ್ಲಿ ರಿಯಲ್ ಸ್ಟಾರ್ ಉಪೇಂದ್ರ (Upendra) ನಾಯಕರಾಗಿ ಹಾಗೂ  ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ (Sudeep) ವಿಶೇಷಪಾತ್ರದಲ್ಲಿ ಅಭಿನಯಿಸಿರುವ ಕನ್ನಡದ ಹೆಮ್ಮೆಯ ಪ್ಯಾನ್ ಇಂಡಿಯಾ ಸಿನಿಮಾ ‘ಕಬ್ಜ’ (Kabzaa) ಚಿತ್ರದಿಂದ ಮಹಾಶಿವರಾತ್ರಿಗೆ ಮಹಾಶಿವನನ್ನು ಕೊಂಡಾಡುವ ‘ನಮಾಮಿ ನಮಾಮಿ’ ಎಂಬ ಸುಮಧುರ ಗೀತೆ ಬಿಡುಗಡೆಯಾಗಿದೆ.

    ಕಿನಾಲ್ ರಾಜ್ ಬರೆದಿರುವ ಈ ಹಾಡನ್ನು ಖ್ಯಾತ ಗಾಯಕಿ ಐಶ್ವರ್ಯ ರಂಗರಾಜನ್ ಸುಶ್ರಾವ್ಯವಾಗಿ ಹಾಡಿದ್ದಾರೆ. ಖ್ಯಾತ ನಟಿ ಶ್ರೇಯಾ ಶರಣ್ (Shriya Sharan) ಈ ಹಾಡಿನಲ್ಲಿ ನಟಿಸಿದ್ದಾರೆ. ರವಿ ಬಸ್ರೂರ್ ಸಂಗೀತ ನೀಡಿರುವ ಈ ಹಾಡು ಐದು ಭಾಷೆಗಳಲ್ಲಿ ಬಿಡುಗಡೆಯಾಗಿದೆ.

    ಈ ಹಾಡಿನ ಬಿಡುಗಡೆ ಸಮಾರಂಭ ಇತ್ತೀಚೆಗೆ ಚೆನ್ನೈನಲ್ಲಿ ಅದ್ದೂರಿಯಾಗಿ ನಡೆಯಿತು. ಸಾಕಷ್ಟು ಗಣ್ಯರು ಈ ಸುಂದರ ಸಮಾರಂಭಕ್ಕೆ ಸಾಕ್ಷಿಯಾದರು.  ಚಿತ್ರ ಸಾಗಿ ಬಂದ ಬಗ್ಗೆ ಹಾಗೂ ಹಾಡಿನ ಕುರಿತು ಮಾಹಿತಿ ನೀಡಿದ ನಿರ್ದೇಶಕ ಆರ್ ಚಂದ್ರು, ‘ಕಬ್ಜ’  ಚಿತ್ರದ ಹಾಡುಗಳನ್ನು  ಹೈದರಾಬಾದ್, ಚೆನ್ನೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಬಿಡುಗಡೆ ಮಾಡುತ್ತಿದ್ದೇವೆ. ಹೋದ ಕಡೆ ಚಿತ್ರದ ಕುರಿತು ಕೇಳಿಬರುತ್ತಿರುವ ಪ್ರಶಂಸನೀಯ ಮಾತುಗಳಿಗೆ ಮನ ತುಂಬಿ ಬಂದಿದೆ. ನನ್ನ ತಂಡಕ್ಕೆ ಹಾಗೂ ಸಹಕಾರ ನೀಡುತ್ತಿರುವ ಪ್ರತಿಯೊಬ್ಬರಿಗೂ  ಧನ್ಯವಾದ ತಿಳಿಸಿದರು.

    ‘ಕಬ್ಜ’ ಚಿತ್ರದಲ್ಲಿ ನಟಿಸಿರುವುದು ಖುಷಿಯಾಗಿದೆ. ಶಿವನನ್ನು ಆರಾಧಿಸುವ ಈ ಹಾಡು ಬಹಳ ಮಧುರವಾಗಿದೆ. ನನ್ನ ಪಾತ್ರ ಕೂಡ ಚೆನ್ನಾಗಿದೆ.  ಸದ್ಯದಲ್ಲೇ ಚಿತ್ರ ಬಿಡುಗಡೆಯಾಗಲಿದೆ. ಎಲ್ಲರೂ ಪ್ರೋತ್ಸಾಹ ನೀಡಿ ಎಂದರು ನಟಿ ಶ್ರೇಯಾ ಶರಣ್. ಇದನ್ನೂ ಓದಿ: ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ `ಜೊತೆ ಜೊತೆಯಲಿ’ ಶಿಲ್ಪಾ ಅಯ್ಯರ್

    ಶ್ರೀಸಿದ್ದೇಶ್ವರ ಎಂಟರ್ ಪ್ರೈಸಸ್ ಮೂಲಕ ನಿರ್ಮಾಣವಾಗಿರುವ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ‘ಕಬ್ಜ’ ಚಿತ್ರದ  ಟೀಸರ್ ಹಾಗೂ ಹಾಡುಗಳ ಬಗ್ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಫೆಬ್ರವರಿ 26 ರಂದು ಶಿಡ್ಲಘಟ್ಟದಲ್ಲಿ ಲಕ್ಷಾಂತರ ಜನರ ಸಮ್ಮುಖದಲ್ಲಿ ನಡೆಯುವ ಅದ್ದೂರಿ ಸಮಾರಂಭದಲ್ಲಿ ಕಮರ್ಷಿಯಲ್ ಹಾಡೊಂದು ಲೋಕಾರ್ಪಣೆಯಾಗಲಿದೆ.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k