Tag: Kabzaa

  • ‘ಕಬ್ಜ’ ಸಿನಿಮಾಗಾಗಿ ಕುಣಿಯಲಿದ್ದಾರೆ ತಾನ್ಯಾ ಹೋಪ್

    ‘ಕಬ್ಜ’ ಸಿನಿಮಾಗಾಗಿ ಕುಣಿಯಲಿದ್ದಾರೆ ತಾನ್ಯಾ ಹೋಪ್

    ಗಾಗಲೇ ‘ಕಬ್ಜ’ (Kabzaa) ಸಿನಿಮಾದ ರಿಲೀಸ್ ದಿನಾಂಕವನ್ನು ಘೋಷಣೆ ಮಾಡಿರುವ ನಿರ್ದೇಶಕ ಆರ್.ಚಂದ್ರು, ಈ ನಡುವೆ ಮತ್ತೊಂದು ಅಚ್ಚರಿ ಸುದ್ದಿಯನ್ನೂ ನೀಡಿದ್ದಾರೆ. ಕಬ್ಜ ಸಿನಿಮಾಗಾಗಿ ಸ್ಪೆಷಲ್ ಸಾಂಗ್ (Special Song) ಚಿತ್ರೀಕರಣಕ್ಕೆ ಅವರು ಸಿದ್ಧತೆ ಮಾಡಿಕೊಂಡಿದ್ದು, ಈ ವಿಶೇಷ ಹಾಡಿಗೆ ತಾನ್ಯ ಹೋಪ್ (Tanya Hope) ಹೆಜ್ಜೆ ಹಾಕಲಿದ್ದಾರೆ ಎಂದು ಹೇಳಲಾಗುತ್ತಿದೆ. ಯಜಮಾನ ಸಿನಿಮಾಗಾಗಿ ‘ಬಸಣ್ಣಿ ಬಾ’ ಗೀತೆಗೆ ಸೊಂಟ ಬಳುಕಿಸಿದ್ದ ತಾನ್ಯ, ಕಬ್ಜ ಸಿನಿಮಾದ ಹಾಡಿನಲ್ಲೂ ಹಾಟ್ ಹಾಟ್ ಆಗಿ ಕಾಣಿಸಿಕೊಳ್ಳಲಿದ್ದಾರಂತೆ.

    ಈ ಹಾಡಿನ ಚಿತ್ರೀಕರಣಕ್ಕಾಗಿ ಅದ್ಧೂರಿ ಸೆಟ್ ಹಾಕಲಾಗುತ್ತಿದ್ದು, ಪೂರ್ತಿ ಹಾಡು ಇದೇ ಸೆಟ್ ನಲ್ಲೇ ಚಿತ್ರೀಕರಣವಾಗಲಿದೆ. ತಾನ್ಯ ಜೊತೆ ಸುದೀಪ್ ಹೆಜ್ಜೆ ಹಾಕುತ್ತಾರಾ ಅಥವಾ ಉಪೇಂದ್ರ ಇರಲಿದ್ದಾರೆ ಎನ್ನುವುದೇ ಸದ್ಯಕ್ಕಿರುವ ಕುತೂಹಲ. ಈ ಸಿನಿಮಾದಲ್ಲಿ ಇನ್ನೂ ಹಲವು ಅಚ್ಚರಿಯ ಕಲಾವಿದರು ಇರಲಿದ್ದಾರಂತೆ. ಆ ಕಲಾವಿದರ ಕುರಿತಂತೆ ಹೆಚ್ಚಿನ ಮಾಹಿತಿ ಸಿನಿಮಾದಲ್ಲೇ ಸಿಗಲಿದೆ ಎಂದಿದ್ದಾರೆ ಚಂದ್ರು. ಇದನ್ನೂ ಓದಿ:ಮದುವೆ ಫೋಟೋ ಹಂಚಿಕೊಂಡ ಬೆನ್ನಲ್ಲೇ ವೈರಲಾಯ್ತು ಸಿದ್- ಕಿಯಾರಾ ಆಮಂತ್ರಣ ಪತ್ರಿಕೆ

    ಕಿಚ್ಚ ಸುದೀಪ್ (Sudeep), ಉಪೇಂದ್ರ (Upendra) ಮತ್ತು ಆರ್.ಚಂದ್ರು ಕಾಂಬಿನೇಷನ್ ನ ಮೊದಲ ಸಿನಿಮಾ ಇದಾಗಿದ್ದು, ಈಗಾಗಲೇ ಬಹುತೇಕ ಚಿತ್ರೀಕರಣವನ್ನೂ ಮುಗಿಸಿಕೊಂಡಿದೆ. ಮಾರ್ಚ್ 17 ರಂದು ಪುನೀತ್ ರಾಜ್ ಕುಮಾರ್ ಹುಟ್ಟುಹಬ್ಬ. ಅಂದು ಈ ಸಿನಿಮಾವನ್ನು ಬಿಡುಗಡೆ ಮಾಡುವ ತಯಾರಿ ಕೂಡ ನಡೆದಿದೆ. ಆರೇಳು ಭಾಷೆಗಳಲ್ಲಿ ಈ ಸಿನಿಮಾವನ್ನು ಬಿಡುಗಡೆ ಮಾಡುವುದಾಗಿ ಈಗಾಗಲೇ ನಿರ್ದೇಶಕರು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಖ್ಯಾತ ನಟ ನಿತಿನ್ ಪಾಲಾದ  ‘ಕಬ್ಜ’ ಸಿನಿಮಾದ ಆಂಧ್ರ-ತೆಲಂಗಾಣ ಹಕ್ಕು

    ಖ್ಯಾತ ನಟ ನಿತಿನ್ ಪಾಲಾದ ‘ಕಬ್ಜ’ ಸಿನಿಮಾದ ಆಂಧ್ರ-ತೆಲಂಗಾಣ ಹಕ್ಕು

    ನ್ನಡದ ಮತ್ತೊಂದು ಭಾರೀ ಬಜೆಟ್ ಸಿನಿಮಾ ‘ಕಬ್ಜ’ (Kabzaa) ಇನ್ನೇನು ತೆರೆಗೆ ಬರಲು ಭರ್ಜರಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಫೆ.4 ರಂದು ಹೈದರಾಬಾದ್ ನಲ್ಲಿ ಈ ಸಿನಿಮಾದ ಹಾಡೊಂದನ್ನು ಬಿಡುಗಡೆ ಆಗುತ್ತಿದ್ದು, ಅದಕ್ಕೂ ಮುನ್ನ ಆಂಧ್ರ (Andhra Pradesh) ಮತ್ತು ತೆಲಂಗಾಣದ (Telangana) ವಿತರಣಾ ಹಕ್ಕು ಮಾರಾಟವಾಗಿದೆ. ತೆಲುಗಿನ ಖ್ಯಾತ ನಟ ನಿತಿನ್ (Nitin) ಈ ಸಿನಿಮಾವನ್ನು ಎರಡೂ ರಾಜ್ಯಗಳಿಗೆ ವಿತರಣೆ ಮಾಡುವ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಉಪೇಂದ್ರ (Upendra) ಮತ್ತು ಸುದೀಪ್ (Sudeep) ಅವರನ್ನು ನಿಮ್ಮ ಮುಂದೆ ತರಲು ಖುಷಿ ಆಗುತ್ತಿದೆ ಎಂದು ಬರೆದುಕೊಂಡಿದ್ದಾರೆ.

    ಕಬ್ಜ ಸಿನಿಮಾದ ಹಿಂದಿ ಹಕ್ಕುಗಳು ಈಗಾಗಲೇ ಭರ್ಜರಿಯಾಗಿಯೇ ಮಾರಾಟವಾಗಿವೆ. ಬಾಲಿವುಡ್ ನ ಪ್ರತಿಷ್ಠಿತ ಸಂಸ್ಥೆಯೇ ಹಿಂದಿಯಲ್ಲಿ ಸಿನಿಮಾ ರಿಲೀಸ್ ಮಾಡುತ್ತಿದೆ. ಅಲ್ಲದೇ, ಚಿತ್ರದ ಟ್ರೈಲರ್ ಬಿಡುಗಡೆಯನ್ನು ಮುಂಬೈನಲ್ಲಿ ಮಾಡಲು ಸಿದ್ಧತೆ ಕೂಡ ನಡೆಸಿದೆ. ಈ ಹೊತ್ತಿನಲ್ಲಿ ತೆಲುಗಿನ ಹಕ್ಕು ಮತ್ತೋರ್ವ ಖ್ಯಾತ ನಟನ ಸಂಸ್ಥೆಗೆ ಮಾರಾಟವಾಗಿದ್ದು, ಸಹಜವಾಗಿಯೇ ನಿರ್ದೇಶಕ ಆರ್.ಚಂದ್ರು ಅವರಿಗೆ ಸಂಭ್ರಮ ತಂದಿದೆ.  ನಟ ನಿತಿನ್ ಅವರಿಗೆ ಚಂದ್ರು (R. Chandru) ಕೂಡ ಧನ್ಯವಾದಗಳನ್ನು ಸಲ್ಲಿಸಿದ್ದಾರೆ. ಇದನ್ನೂ ಓದಿ: ನಟಿ ಲಾವಣ್ಯ ಜೊತೆ ಹಸೆಮಣೆ ಏರಲು ರೆಡಿಯಾದ ವರುಣ್‌ ತೇಜ್‌

    ಕಬ್ಜ ಕನ್ನಡದ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾವಾಗಿದ್ದು, ಒಂಬತ್ತಕ್ಕೂ ಹೆಚ್ಚು ಭಾಷೆಗಳಲ್ಲಿ ಬಿಡುಗಡೆ ಆಗುತ್ತಿದೆ. ಕೆಜಿಎಫ್ 2 ಸಿನಿಮಾದ ನಂತರ ಮತ್ತೊಂದು ಕನ್ನಡದ ಸಿನಿಮಾ ಭಾರೀ ಸದ್ದು ಮಾಡುತ್ತಿದ್ದು, ಈಗಾಗಲೇ ಭಾರತೀಯ ಸಿನಿಮಾ ರಂಗ ಮತ್ತೊಮ್ಮೆ ಸ್ಯಾಂಡಲ್ ವುಡ್ ನತ್ತ ತಿರುಗಿ ನೋಡುತ್ತಿದೆ. ಈಗಾಗಲೇ ಹಲವಾರು ಯಶಸ್ವಿ ಸಿನಿಮಾಗಳನ್ನು ನೀಡಿರುವ ಚಂದ್ರು, ಈಗ ಮತ್ತೊಂದು ಅದ್ಧೂರಿ ಸಿನಿಮಾವನ್ನೇ ನಿರ್ದೇಶನ ಮಾಡಿದ್ದಾರೆ. ಈ ಮೂಲಕ ಭಾರೀ ನಿರೀಕ್ಷೆ ಮೂಡಿಸಿದ್ದಾರೆ.

    ಉಪೇಂದ್ರ, ಸುದೀಪ್ ಮತ್ತು ಚಂದ್ರು ಕಾಂಬಿನೇಷನ್ ನ ಮೊದಲ ಸಿನಿಮಾ ಇದಾಗಿದ್ದು, ಮೇಕಿಂಗ್ ನಿಂದಾಗಿಯೇ ನಿರೀಕ್ಷೆ ಹೆಚ್ಚಿಸಿದೆ. ಅದ್ಧೂರಿ ಮೇಕಿಂಗ್, ಭರ್ಜರಿ ತಾರಾಗಣ, ಸೆಟ್, ಹಿನ್ನೆಲೆ ಸಂಗೀತ ಹೀಗೆ ಪ್ರತಿ ವಿಭಾಗದಲ್ಲೂ ಸಿನಿಮಾ ಶ್ರೀಮಂತಿಕೆಯನ್ನು ಹೊತ್ತು ತರುತ್ತಿದೆ. ಹಾಗಾಗಿ ಈ ಸಿನಿಮಾ ಕೂಡ ಮತ್ತೊಂದು ಇತಿಹಾಸ ಬರೆಯಲಿದೆ ಎಂದು ಬಣ್ಣಿಸಲಾಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಕನ್ನಡದ  ‘ಕಬ್ಜ’ ಸಿನಿಮಾಗೆ ಸಾಥ್ ನೀಡಲಿದ್ದಾರೆ ರಾಜಮೌಳಿ

    ಕನ್ನಡದ ‘ಕಬ್ಜ’ ಸಿನಿಮಾಗೆ ಸಾಥ್ ನೀಡಲಿದ್ದಾರೆ ರಾಜಮೌಳಿ

    ಆರ್.ಚಂದ್ರು (R. Chandru) ನಿರ್ದೇಶನದಲ್ಲಿ ಮೂಡಿ ಬಂದಿರುವ ‘ಕಬ್ಜ’ (Kabzaa) ಸಿನಿಮಾದ ಲಿರಿಕಲ್ ಸಾಂಗ್ ಅನ್ನು ಫೆ.4ರಂದು ಹೈದರಾಬಾದ್ ನಲ್ಲಿ ರಿಲೀಸ್ ಮಾಡಲು ಚಿತ್ರತಂಡ ನಿರ್ಧರಿಸಿದೆ. ಒಂಬತ್ತಕ್ಕೂ ಹೆಚ್ಚು ಭಾಷೆಗಳಲ್ಲಿ ಈ ಸಿನಿಮಾ ಬಿಡುಗಡೆ ಆಗುತ್ತಿದ್ದು, ದೇಶದ ನಾನಾ ಕಡೆ ಸಿನಿಮಾದ ಕಾರ್ಯಕ್ರಮವನ್ನು ಮಾಡಲು ನಿರ್ದೇಶಕರು ಹೊರಟಿದ್ದಾರೆ. ಅದರ ಮೊದಲ ಭಾಗವಾಗಿ ಹೈದರಾಬಾದ್ ನಲ್ಲಿ ಲಿರಿಕಲ್ ಸಾಂಗ್ ಬಿಡುಗಡೆ ಆಗುತ್ತಿದೆ. ಈ ಕಾರ್ಯಕ್ರಮಕ್ಕೆ ತೆಲುಗು ಸಿನಿಮಾ ರಂಗದ ದಿಗ್ಗಜರೇ ಬರುವ ಸಾಧ್ಯತೆ ಇದೆ.

    ಬಲ್ಲ ಮೂಲಗಳ ಪ್ರಕಾರ ಭಾರತೀಯ ಸಿನಿಮಾ ರಂಗದ ಹೆಸರಾಂತ ನಿರ್ದೇಶಕ, ತೆಲುಗಿನ ರಾಜಮೌಳಿ (Rajamouli), ನಟ ಚಿರಂಜೀವಿ ಸೇರಿದಂತೆ ತೆಲುಗಿನ ಹೆಸರಾಂತ ಕಲಾವಿದರು ಮತ್ತು ತಂತ್ರಜ್ಞರು ಈ ಕಾರ್ಯಕ್ರಮದಲ್ಲಿ ಭಾಗಿ ಆಗಲಿದ್ದಾರೆ ಎನ್ನಲಾಗುತ್ತಿದೆ. ತೆಲುಗು ಚಿತ್ರೋದ್ಯಮದಲ್ಲಿ ಉಪೇಂದ್ರ ಮತ್ತು ಸುದೀಪ್ ಅವರಿಗೆ ಅಪಾರ ಅಭಿಮಾನಿ ಬಳಗ ಇರುವುದರಿಂದ ಮೊದಲ ಇವೆಂಟ್ ಅನ್ನು ಅಲ್ಲಿ ಆಯೋಜನೆ ಮಾಡಲಾಗಿದೆ. ಇದನ್ನೂ ಓದಿ: ಚಂದ್ರಮುಖಿ – 2 ಡ್ಯಾನ್ಸ್ ಪ್ರಾಕ್ಟಿಸ್ ಶುರು ಮಾಡಿದ ಕಂಗನಾ ರಣಾವತ್

    ಹೈದರಾಬಾದ್ ನಲ್ಲಿ ನಡೆಯುವ ಕಾರ್ಯಕ್ರಮದ ಕುರಿತು ಮಾತನಾಡಲು ನಿರ್ದೇಶಕ ಆರ್.ಚಂದ್ರು ಪತ್ರಿಕಾಗೋಷ್ಠಿಯನ್ನು ಕರೆದಿದ್ದರು. ಅಲ್ಲಿ ಹಲವು ವಿಚಾರಗಳನ್ನು ಹಂಚಿಕೊಂಡರು. ಈ ಸಿನಿಮಾ ಕೇವಲ ಭಾರತದಲ್ಲಿ ಮಾತ್ರವಲ್ಲ, ಜಗತ್ತಿನಾದ್ಯಂತ ಬೇರೆ ಬೇರೆ ದೇಶಗಳಲ್ಲೂ ಬಿಡುಗಡೆ ಆಗುತ್ತಿದೆ. ಅಲ್ಲದೇ, ಒಳ್ಳೆಯ ಹಣಕ್ಕೆ ರೈಟ್ಸ್ ಕೂಡ ಸೇಲ್ ಆಗಿದೆಯಂತೆ. ಟೀಸರ್ ಸೂಪರ್ ಹಿಟ್ ಆದ ಕಾರಣದಿಂದಾಗಿಯೇ ಕಬ್ಜ ಸಿನಿಮಾಗೆ ಬೇಡಿಕೆಯಂತೂ ಹೆಚ್ಚಾಗಿದೆ. ಕನ್ನಡದ ಮತ್ತೊಂದು ಸಿನಿಮಾ ಜಗತ್ತಿನಾದ್ಯಂತ ಸುದ್ದಿ ಆಗಿದ್ದು ಸಹಜವಾಗಿಯೇ ಸಂಭ್ರಮ ತಂದಿದೆ.

    ಸುದೀಪ್ (Sudeep), ಉಪೇಂದ್ರ(Upendra) ಮತ್ತು ಆರ್.ಚಂದ್ರು ಕಾಂಬಿನೇಷನ್ ನ ಮೊದಲ ಸಿನಿಮಾವಿದು. ಈಗಾಗಲೇ ಸಾಕಷ್ಟು ಹವಾ ಕ್ರಿಯೇಟ್ ಮಾಡಿದೆ.  ಈ ಸಿನಿಮಾವನ್ನು ಕೆಜಿಎಫ್ 2 ಚಿತ್ರಕ್ಕೆ ಹೋಲಿಸಲಾಗುತ್ತಿದೆ. ಕನ್ನಡದ ಮತ್ತೊಂದು ಸಿನಿಮಾ ಭಾರತೀಯ ಚಿತ್ರರಂಗವನ್ನು ಕಾಯುವಂತೆ ಮಾಡಿದ್ದು ಚಿತ್ರರಂಗದ ಹೆಗ್ಗಳಿಕೆ ಕೂಡ. ಹೆಸರಾಂತ ಕಲಾವಿದರೇ ಈ ಸಿನಿಮಾದಲ್ಲಿದ್ದು ಪುನೀತ್ ರಾಜ್ ಕುಮಾರ್ ಹುಟ್ಟು ಹಬ್ಬದಂದು ಸಿನಿಮಾವನ್ನು ರಿಲೀಸ್ ಮಾಡುತ್ತಿದ್ದಾರೆ ನಿರ್ದೇಶಕರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಪಠಾಣ್ ಹಿಂದಿಕ್ಕಿ ಟ್ರೆಂಡಿಂಗ್ ನಲ್ಲಿ ನಂ.1 ಸ್ಥಾನ ಪಡೆದ ಕನ್ನಡದ ‘ಕಬ್ಜ’

    ಪಠಾಣ್ ಹಿಂದಿಕ್ಕಿ ಟ್ರೆಂಡಿಂಗ್ ನಲ್ಲಿ ನಂ.1 ಸ್ಥಾನ ಪಡೆದ ಕನ್ನಡದ ‘ಕಬ್ಜ’

    ಬಾಲಿವುಡ್ ನ ಅತೀ ನಿರೀಕ್ಷಿತ ಚಿತ್ರ ‘ಪಠಾಣ್’ (Pathan) ಹವಾ ಕಳೆದ ಎರಡು ವಾರಗಳಿಂದಲೂ ಜೋರಾಗಿದೆ. ಬಾಯ್ಕಾಟ್ ಸೇರಿದಂತೆ ನಾನಾ ರೀತಿಯ ಅಡೆತಡೆಗಳನ್ನು ದಾಟಿಕೊಂಡು ಕೊನೆಗೂ ರಿಲೀಸ್ ಆಗಿದೆ. ನಿನ್ನೆ ಪಠಾಣ್ ಸಿನಿಮಾದ ರಿಲೀಸ್ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡಿಂಗ್ ನಲ್ಲಿತ್ತು. ಉಪೇಂದ್ರ (Upendra) ಮತ್ತು ಸುದೀಪ್ (Sudeep) ಕಾಂಬಿನೇಷನ್ ನ ‘ಕಬ್ಜ’ (Kabzaa) ಸಿನಿಮಾದ ರಿಲೀಸ್ ಡೇಟ್ ಅನೌನ್ಸ್ ಆಗುತ್ತಿದ್ದಂತೆಯೇ ನಂ.1 ಸ್ಥಾನವನ್ನು ಕಬ್ಜ ಸಿನಿಮಾ ಪಡೆದುಕೊಂಡಿತು. ಅಲ್ಲದೇ ಈವರೆಗೂ ಕಬ್ಜ ಟ್ರೆಂಡಿಂಗ್ ನಲ್ಲಿಯೇ ಇದೆ.

    ಕರ್ನಾಟಕ ಮಾತ್ರವಲ್ಲದೆ, ಇಡೀ ಭಾರತಾದ್ಯಂತ ಬಿಡುಗಡೆಗೂ ಪೂರ್ವದಲ್ಲೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ ಕನ್ನಡಿಗರ ಹೆಮ್ಮೆಯ ಪ್ಯಾನ್ ಇಂಡಿಯಾ ಸಿನಿಮಾ ‘ಕಬ್ಜ’, 2023 ರ ಮಾರ್ಚ್ 17 ಅಂದರೆ, ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಹುಟ್ಟುಹಬ್ಬದ ದಿನ ವಿಶ್ವದಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ಇದೇ ಸಂದರ್ಭದಲ್ಲಿ ನಾಡಿನ ದೊಡ್ಡ ಹಬ್ಬವಾದ ಯುಗಾದಿ ಕೂಡ ಸಮೀಪದಲ್ಲಿರುವುದು ವಿಶೇಷ. ಇದನ್ನೂ ಓದಿ: ರಾಜಮೌಳಿ ಹತ್ಯೆಗೆ ಸ್ಕೆಚ್ ಹಾಕಿದ ಡೈರೆಕ್ಟರ್ಸ್ : ಬಾಯ್ಬಿಟ್ಟ ವರ್ಮಾ

    ಇಂಡಿಯನ್ ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಪ್ರಮುಖ ಪಾತ್ರದಲ್ಲಿ ಕಿಚ್ಚ ಸುದೀಪ್ ಅಭಿನಯಿಸಿರುವ ಹಾಗೂ ಆರ್ ಚಂದ್ರು (R. Chandru) ನಿರ್ದೇಶನದ ಪ್ಯಾನ್ ಇಂಡಿಯಾ ಸಿನಿಮಾ “ಕಬ್ಜ” ಚಿತ್ರಕ್ಕೆ ಪುನೀತ್ ರಾಜಕುಮಾರ್ ಅವರು ನೀಡುತ್ತಿದ್ದ ಪ್ರೋತ್ಸಾಹ ಅಪಾರ. ಚಿತ್ರದ ಕೆಲವು ತುಣುಕುಗಳನ್ನು ಅವರಿಗೆ ತೋರಿಸಿದ್ದಾಗ ಹಾಲಿವುಡ್ ಚಿತ್ರ ಇದ್ದ ಹಾಗೆ ಇದೆ ಎಂದು ಹೇಳಿ ಮೆಚ್ಚುಗೆ ಸೂಚಿಸಿದ್ದರು. ಸಹೃದಯಿ, ಅಭಿಮಾನಿಗಳ ಪಾಲಿಗಂತೂ ದೇವರೆ ಆಗಿರುವ ಪುನೀತ್ ರಾಜಕುಮಾರ್ ಅವರ ಹುಟ್ಟುಹಬ್ಬದ ದಿನ ನಮ್ಮ “ಕಬ್ಬ” ಚಿತ್ರವನ್ನು ಪ್ರೇಕ್ಷಕರ ಮಡಿಲಿಗೆ ಹಾಕುತ್ತಿದ್ದೇವೆ. ಪುನೀತ್ ರಾಜಕುಮಾರ್ ಅವರ ಹುಟ್ಟುಹಬ್ಬ ಹಾಗೂ ಹೊಸವರ್ಷದ ಮೊದಲ ದಿನವಾದ ಯುಗಾದಿ ಹಬ್ಬದ ಸಮೀಪದಲ್ಲೇ ನಮ್ಮ ಚಿತ್ರ ವಿಶ್ವದಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ ಎಂದು ಶ್ರೀಸಿದ್ದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆ ತಿಳಿಸಿದೆ‌.

    ಕಳೆದವರ್ಷ ಕನ್ನಡದ ಸಾಕಷ್ಟು ಚಿತ್ರಗಳು ಭರ್ಜರಿ ಯಶಸ್ವಿಯಾಗಿ ಇಡೀ ವಿಶ್ವವೇ ಕನ್ನಡ ಚಿತ್ರರಂಗದ ಕಡೆ ನೋಡುವಂತಾಗಿತ್ತು. ಈಗ ಎಲ್ಲೆಡೆ ಅಷ್ಟೇ ಕುತೂಹಲದಿಂದ ಕಾಯತ್ತಿರುವ ಹಾಗೂ ಐಎಂಡಿಬಿ 2023ರ ಬಹು ನಿರೀಕ್ಷಿತ ಸಿನಿಮಾಗಳ ಪಟ್ಟಿಯಲ್ಲಿ ಸ್ಥಾನ ಪಡಿದಿರುವ ಕನ್ನಡದ ಹೆಮ್ಮೆಯ ಪ್ಯಾನ್ ಇಂಡಿಯಾ ಚಿತ್ರ “ಕಬ್ಜ”ದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ.  ಆಭಿಮಾನಿಗಳ ಕಾತುರಕ್ಕೆ ಚಿತ್ರತಂಡದಿಂದ ಉತ್ತರ ಸಿಕ್ಕಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಬಾಲಿವುಡ್ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಪಾಲಾದ ‘ಕಬ್ಜ’ ವಿತರಣಾ ಹಕ್ಕು

    ಬಾಲಿವುಡ್ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಪಾಲಾದ ‘ಕಬ್ಜ’ ವಿತರಣಾ ಹಕ್ಕು

    ಪೇಂದ್ರ ಮತ್ತು ‘ಕಿಚ್ಚ’ ಸುದೀಪ್ ಅಭಿನಯದ ಬಹುನಿರೀಕ್ಷೆಯ ಪ್ಯಾನ್ ಇಂಡಿಯಾ ಚಿತ್ರ ‘ಕಬ್ಜ’ದ ಹಿಂದಿ ಅವತರಣಿಕೆಯ ಹಕ್ಕುಗಳನ್ನು ಬಾಲಿವುಡ್ನ ಪ್ರತಿಷ್ಠಿತ ನಿರ್ಮಾಣ ಮತ್ತು ವಿತರಣಾ ಸಂಸ್ಥೆಯಾದ ಆನಂದ್ ಮೋಷನ್ ಪಿಕ್ಚರ್ಸ್ ತನ್ನದಾಗಿಸಿಕೊಂಡಿದ್ದು, ಮೊದಲ ಹಂತವಾಗಿ ಇಂದು ಹಿಂದಿ ಟೀಸರ್ ಬಿಡುಗಡೆ ಮಾಡಿದೆ. ಶ್ರೀ ಸಿದ್ಧೇಶ್ವರ ಎಂಟರ್ಪ್ರೈಸಸ್ ಲಾಂಛನದಲ್ಲಿ ಆರ್. ಚಂದ್ರು ನಿರ್ಮಿಸಿ, ನಿರ್ದೇಶಿಸಿರುವ ‘ಕಬ್ಜ’ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಪ್ರಗತಿಯಲ್ಲಿದ್ದು, ಮುಂದಿನ ವರ್ಷ ಹಲವು ಭಾಷೆಗಳಲ್ಲಿ ಪ್ಯಾನ್ ಇಂಡಿಯಾ ಚಿತ್ರವಾಗಿ ಬಿಡುಗಡೆಯಾಗಲಿದೆ.

    ಸ್ವಾತಂತ್ರ್ಯ ಹೋರಾಟಗಾರ ಅಮರೇಶ್ವರನ ಮಗ ಅರ್ಕೇಶ್ವರ, 1960-1984 ರ ಅವಧಿಯಲ್ಲಿ ಭಾರತದಲ್ಲಿ ಭೂಗತ ಜಗತ್ತಿನ ರಾಜನಾಗುತ್ತಾನೆ ಮತ್ತು ಭಾರತೀಯ ಇತಿಹಾಸದಲ್ಲಿ ತನ್ನ ಛಾಪು ಮೂಡಿಸುತ್ತಾನೆ. ಇಂಥದ್ದೊಂದು ಕಥೆ ಇರುವ ‘ಕಬ್ಜ’ ಚಿತ್ರದ ಬಗ್ಗೆ ಬರೀ ಕನ್ನಡವಷ್ಟೇ ಅಲ್ಲ, ಇಡೀ ಭಾರತೀಯ ಚಿತ್ರರಂಗದಲ್ಲೇ ಸಾಕಷ್ಟು ಕುತೂಹಲ ಮತ್ತು ನಿರೀಕ್ಷೆಗಳಿವೆ. ‘ಕಬ್ಜ’ ಚಿತ್ರದ ವಿತರಣೆಯ ಹಕ್ಕುಗಳನ್ನು ಪಡೆದಿರುವ ಆನಂದ್ ಪಂಡಿತ್ ಮಾತನಾಡಿ, ಪ್ರೇಕ್ಷಕರ ಮನರಂಜಿಸುವುದೇ ನಮ್ಮ ಪ್ರಮುಖ ಉದ್ದೇಶ ಮತ್ತು ಕಬ್ಜ ಅಂತಹ ಒಂದು ಮನರಂಜನೆಯಾಗಲಿದೆ ಎಂದು ನಮಗೆ ಸಂಪೂರ್ಣ ನಂಬಿಕೆಯಿದೆ ಎಂದು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: `ಕೆಜಿಎಫ್’ ತಾತ ಕೃಷ್ಣ ಜಿ. ರಾವ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

    ಚಿತ್ರದ ಬಗ್ಗೆ ಮಾತನಾಡಿದ ನಾಯಕ ನಟ ಉಪೇಂದ್ರ, ‘ಭೂಗತಲೋಕದ ಹೊಸ ಅಧ್ಯಾಯವಾದ ಕಬ್ಜ ಚಿತ್ರೆದ ಹಿಂದಿ ಅವತರಣಿಕೆಯನ್ನು ಬಾಲಿವುಡ್‌ನ ಹೆಸರಾಂತ ನಿರ್ಮಾಪಕರಾದ ಆನಂದ್ ಪಂಡಿತ್ ಮೋಷನ್ ಪಿಕ್ಚರ್ಸ್ ಬಿಡುಗಡೆ ಮಾಡುತ್ತಿರುವುದು ತುಂಬಾ ಸಂತೋಷವಾಗಿದೆ. ಅವರ ಸಹಕಾರ ಹೀಗೆಯೇ ಮುಂದುವರೆಯಲಿ’ ಎಂದು ಹೇಳಿದ್ದಾರೆ.  ಕಿಚ್ಚ ಸುದೀಪ ಸಹ ಈ ಕುರಿತು ಮಾತನಾಡಿದ್ದು, ‘ದಕ್ಷಿಣ ಭಾರತೀಯ ಸಿನಿಮಾಗಳು ಭಾರತೀಯ ಸಿನಿಮಾ ಎಂದು ಗುರುತಿಸಿಕೊಳ್ಳುತ್ತಿರುವ ಈ ಅದ್ಭುತ ಸಂದರ್ಭದಲ್ಲಿ ಖ್ಯಾತ ವಿತರಕ ಆನಂದ್ ಪಂಡಿತ್ ಮೋಷನ್ ಪಿಕ್ಚರ್ಸ್ ನಮ್ಮ ‘ಕಬ್ಜ’ ಸಿನಿಮಾವನ್ನು ಬಿಡುಗಡೆ ಮಾಡುತ್ತಿದೆ. ಇದು ಚಿತ್ರತಂಡದ ಕಠಿಣ ಪರಿಶ್ರಮಕ್ಕೆ ಸಿಕ್ಕ  ಪ್ರತಿಫಲ’ ಎಂದಿದ್ದಾರೆ.

    ‘ಆನಂದ್ ಪಂಡಿತ್ ಮೋಷನ್ ಪಿಕ್ಚರ್ಸ್ ಸಂಸ್ಥೆಯು ಕೈ ಜೋಡಿಸಿರುವುದು ನಮ್ಮ ಬದ್ಧತೆ ಮತ್ತು ಪ್ರಯತ್ನಕ್ಕೆ ಸಿಕ್ಕ ಮನ್ನಣೆ’ ಎನ್ನುವ ಆರ್. ಚಂದ್ರು, ಸದ್ಯದಲ್ಲೇ ಚಿತ್ರದ ಬಿಡುಗಡೆ ದಿನಾಂಕ ಅಧಿಕೃತವಾಗಿ ಘೋಷಿಸುವುದಾಗಿ ಹೇಳುತ್ತಾರೆ. ‘ಕಬ್ಜ’ ಚಿತ್ರದಲ್ಲಿ ಉಪೇಂದ್ರ, ಸುದೀಪ್, ಶ್ರೀಯಾ ಶರಣ್ ಸೇರಿದಂತೆ ಪ್ರತಿಭಾವಂತರ ದೊಡ್ಡ ದಂಡೇ ಇದ್ದು, ಚಿತ್ರಕ್ಕೆ ‘ಕೆಜಿಎಫ್’ ಖ್ಯಾತಿಯ ರವಿ ಬಸ್ರೂರು ಚಿತ್ರಕ್ಕೆ ಸಂಗೀತ ಸಂಯೋಜಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕಾಂತಾರ ನಂತರ ‘ಕಬ್ಜ’ ಬಿಡುಗಡೆಗಾಗಿ ಕಾಯುತ್ತಿದೆ ಬಾಲಿವುಡ್

    ಕಾಂತಾರ ನಂತರ ‘ಕಬ್ಜ’ ಬಿಡುಗಡೆಗಾಗಿ ಕಾಯುತ್ತಿದೆ ಬಾಲಿವುಡ್

    ನ್ನಡ ಚಿತ್ರಗಳು ಈ ವರ್ಷ ರಾಷ್ಟ್ರಮಟ್ಟದಲ್ಲಿ ದೊಡ್ಡ ಹೆಸರು ಮಾಡಿವೆ. ‘ಕೆಜಿಎಫ್​ 2’ ಮತ್ತು ‘ಕಾಂತಾರ’ ಚಿತ್ರಗಳು ಬಾಲಿವುಡ್ (Bollywood)​ ಚಿತ್ರಗಳ ಗಳಿಕೆಯನ್ನೂ ಮೀರಿಸಿ ಹೊಸ ದಾಖಲೆಯನ್ನು ನಿರ್ಮಿಸಿವೆ. ಈ ಎರಡು ಚಿತ್ರಗಳ ನಂತರ ಬಾಲಿವುಡ್​ನ ಕಣ್ಣು ಇದೀಗ ಉಪೇಂದ್ರ (Upendra) ಮತ್ತು ಸುದೀಪ್​ (Sudeep) ಅಭಿನಯದ ಅದ್ಧೂರಿ ಚಿತ್ರ ‘ಕಬ್ಜ’ (Kabzaa) ಮೇಲೆ ಬಿದ್ದಿದೆ. ಇದನ್ನೂ ಓದಿ:ಡಿವೋರ್ಸ್ ವದಂತಿಗೆ ಬ್ರೇಕ್, ಪತ್ನಿ ಪೋಸ್ಟರ್‌ಗೆ ಪ್ಲೇನ್ ಕಿಸ್ ಕೊಟ್ಟ ರಣ್‌ವೀರ್

    ಸಚಿವ ಎಂ.ಟಿ.ಬಿ. ನಾಗರಾಜ್​ ಆಶೀರ್ವಾದದೊಂದಿಗೆ ಶ್ರೀ ಸಿದ್ಧೇಶ್ವರ ಎಂಟರ್​ಪ್ರೈಸಸ್​ ನಿರ್ಮಿಸಿರುವ ‘ಕಬ್ಜ’ ಚಿತ್ರದ ಚಿತ್ರೀಕರಣ ಮುಗಿದು, ಇತ್ತೀಚೆಗೆ ಟೀಸರ್​ ಸಹ ಬಿಡುಗಡೆಯಾಗಿದೆ. ಟೀಸರ್​ಗೆ ಎಲ್ಲಡೆಯಿಂದ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿದ್ದು, ಚಿತ್ರದ ಬಿಡುಗಡೆಗೆ ಪ್ರೇಕ್ಷಕರು ಕಾತುರದಿಂದ ಕಾಯುತ್ತಿದ್ದಾರೆ. ಬರೀ ಪ್ರೇಕ್ಷಕರಷ್ಟೇ ಅಲ್ಲ, ಬೇರೆ ಚಿತ್ರರಂಗಗಳು ಸಹ ಈ ಚಿತ್ರವನ್ನು ಎದುರು ನೋಡುತ್ತಿದ್ದು, ಇತ್ತೀಚೆಗೆ ಇದೇ ವಿಚಾರವಾಗಿ ಬಾಲಿವುಡ್​ನ ಖ್ಯಾತ ಸಿನಿಮಾ ವಿಶ್ಲೇಷಕ ತರಣ್​ ಆದರ್ಶ್​ ಸೋಷಿಯಲ್​ ಮೀಡಿಯಾದಲ್ಲಿ ಪೋಸ್ಟರ್​ ಹಂಚಿಕೊಳ್ಳುವುದರ ಜತೆಗೆ ಚಿತ್ರದ ಬಿಡುಗಡೆ ದಿನಾಂಕಕ್ಕೆ ಎದುರು ನೋಡುತ್ತಿರುವುದಾಗಿ ಹೇಳಿದ್ದಾರೆ. ಇದಕ್ಕೆ ಪೂರಕವಾಗಿ ಚಿತ್ರತಂಡದವರು ಇನ್ನಷ್ಟೇ ಚಿತ್ರದ ಬಿಡುಗಡೆಯ ದಿನಾಂಕವನ್ನು ಅಧಿಕೃತವಾಗಿ ಘೋಷಣೆ ಮಾಡಬೇಕಿದೆ.

    ಆರ್​. ಚಂದ್ರು (R. Chandru) ನಿರ್ದೇಶನದ ‘ಕಬ್ಜ’ ಚಿತ್ರವು ಪ್ಯಾನ್​ ಇಂಡಿಯಾ ಚಿತ್ರವಾಗಿದ್ದು ಏಳು ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಲಿದೆ. ಉಪೇಂದ್ರ ಜತೆಗೆಸುದೀಪ್​ ಸಹ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಶ್ರೀಯಾ ಶರಣ್​, ನವಾಬ್​ ಷಾ, ಕಬೀರ್​ ಸಿಂಗ್​ ದುಹಾನ್​, ಪ್ರಮೋದ್​ ಶೆಟ್ಟಿ, ಮುರಳಿ ಶರ್ಮ ಮುಂತಾದವರು ಅಭಿನಯಿಸಿದ್ದಾರೆ. ‘ಕೆಜಿಎಫ್​’ ಖ್ಯಾತಿಯ ಸಂಗೀತ ನಿರ್ದೇಶಕ ರವಿ ಬಸ್ರೂರು ಈ ಚಿತ್ರಕ್ಕೆ ಸಂಗೀತ ಸಂಯೋಜಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಅಮೆಜಾನ್ ತೆಕ್ಕೆಗೆ ಕಬ್ಜ: ಭಾರೀ ಮೊತ್ತಕ್ಕೆ ಸೇಲ್ ಆಯಿತು ಆರ್.ಚಂದ್ರು ನಿರ್ದೇಶನದ ಚಿತ್ರ

    ಅಮೆಜಾನ್ ತೆಕ್ಕೆಗೆ ಕಬ್ಜ: ಭಾರೀ ಮೊತ್ತಕ್ಕೆ ಸೇಲ್ ಆಯಿತು ಆರ್.ಚಂದ್ರು ನಿರ್ದೇಶನದ ಚಿತ್ರ

    ಕೆಜಿಎಫ್ ಸಿನಿಮಾದ ನಂತರ ಮತ್ತೊಂದು ಕನ್ನಡದ ಭಾರೀ ಬಜೆಟ್ ಸಿನಿಮಾ ಭಾರೀ ಮೊತ್ತಕ್ಕೆ ಸೇಲ್ ಆಗಿದೆ. ಆರ್.ಚಂದ್ರು ನಿರ್ದೇಶನದ ಕಬ್ಜ (Kabzaa) ಸಿನಿಮಾವನ್ನು ನೂರಾರು ಕೋಟಿ ಕೊಟ್ಟು ಅಮೆಜಾನ್ ಪ್ರೈಮ್ ಖರೀದಿಸಿದ್ದು, ಬಲ್ಲ ಮೂಲಗಳ ಪ್ರಕಾರ ಕೆಜಿಎಫ್ 2 ಸಿನಿಮಾವನ್ನು ಖರೀದಿಸಿದಷ್ಟೇ ಈ ಸಿನಿಮಾವನ್ನೂ ಕೊಂಡುಕೊಳ್ಳಲಾಗಿದೆ. ಹಾಗಾಗಿ ಕನ್ನಡದ ಮತ್ತೊಂದು ಸಿನಿಮಾಗೆ ಡಿಮಾಂಡ್ ಕ್ರಿಯೇಟ್ ಆಗಿದೆ.

    ಅಮೆಜಾನ್ ಪ್ರೈಮ್ ನಲ್ಲಿ ಭಾರತೀಯ ಸಿನಿಮಾ ರಂಗದಲ್ಲೇ ಅತೀ ಹೆಚ್ಚು ಹಣಕೊಟ್ಟು ಖರೀದಿಸಿದ ಸಿನಿಮಾ ಕೆಜಿಎಫ್ 2 ಎಂದು ಬಣ್ಣಿಸಲಾಗಿತ್ತು. ಇದೀಗ ಕಬ್ಜ ಕೂಡ ಅದೇ ಸಾಲಿಗೆ ಸೇರಿದೆ. ಈ ಪ್ರಮಾಣದ ಮೊತ್ತಕ್ಕೆ ಕಬ್ಜ ಸಿನಿಮಾ ಸೇಲ್ ಆಗಿದ್ದಕ್ಕೆ ಮೇಕಿಂಗ್ ಮತ್ತು ಸ್ಟಾರ್ ಗಳ ಕಾಂಬಿನೇಷನ್ ಕಾರಣ ಎಂದು ಹೇಳಲಾಗುತ್ತಿದೆ. ಟೀಸರ್ ಬಿಡುಗಡೆಗೂ ಮುನ್ನವೇ ಹಲವು ಓಟಿಟಿ ವೇದಿಕೆಗಳು ನಿರ್ದೇಶಕರನ್ನು ಸಂಪರ್ಕಿಸಿದ್ದವು. ಆಗ ಹೇಳಿದ ಮೊತ್ತಕ್ಕೂ ಟೀಸರ್ ಬಿಡುಗಡೆಯಾದ ನಂತರ ಆಗಿರುವ ವ್ಯಾಪಾರಕ್ಕೂ ಅಜಗಜಾಂತರ ವ್ಯತ್ಯಾಸವಿದೆ ಎಂದೂ ಹೇಳಲಾಗುತ್ತಿದೆ. ಇದನ್ನೂ ಓದಿ:ರೂಪೇಶ್‌ಗೆ ಕೊನೆಯುಸಿರು ಇರುವವರೆಗೂ ಪ್ರೀತಿ ಮಾಡುತ್ತೀನಿ ಎಂದ ಸಾನ್ಯ

    ಉಪೇಂದ್ರ (Upendra) ಮತ್ತು ಸುದೀಪ್ (Sudeep) ಕಾಂಬಿನೇಷನ್ ಕಬ್ಜ ಸಿನಿಮಾದ ಟೀಸರ್ ರಿಲೀಸ್ ಆದ ನಂತರ, ಈ ಸಿನಿಮಾವನ್ನೂ ಕೆಜಿಎಫ್ ಚಿತ್ರಕ್ಕೆ ಹೋಲಿಸಲಾಗುತ್ತಿದೆ. ಅದ್ಧೂರಿ ಮೇಕಿಂಗ್, ಸ್ಟಾರ್ ನಟರ ಸಮಾಗಮಾ, ಆರ್.ಚಂದ್ರು (R. Chandru) ಅವರ ಈವರೆಗೂ ಸಕ್ಸಸ್ ಮತ್ತು ಸಿನಿಮಾದ ಗುಣಮಟ್ಟದ ಕಾರಣದಿಂದಾಗಿ ದೇಶದಲ್ಲಿ ಮಾತ್ರವಲ್ಲ, ವಿದೇಶದಲ್ಲೂ ಕಬ್ಜಗೆ ಬೇಡಿಕೆ ಹೆಚ್ಚಾಗಿದೆ. ಈ ಕಾರಣದಿಂದಾಗಿಯೇ ಒಂಬತ್ತು ಭಾಷೆಗಳಲ್ಲಿ ಈ ಸಿನಿಮಾ ಮೂಡಿ ಬರಲಿದೆ.

    ಸಿನಿ ಪಂಡಿತರ ಲೆಕ್ಕಾಚಾರದಂತೆ ಕಬ್ಜ ಸಿನಿಮಾ ಕೂಡ ಭಾರತೀಯ ಸಿನಿಮಾ ರಂಗದಲ್ಲಿ ದಾಖಲೆ ಬರೆಯಲಿದೆ ಎಂದು ಅಂದಾಜಿಸಲಾಗಿದೆ. ದೇಶ ಮತ್ತು ವಿದೇಶಗಳಲ್ಲಿ ಸೇರಿ ಸಾವಿರಾರು ಚಿತ್ರಮಂದಿರಗಳಲ್ಲಿ ಈ ಸಿನಿಮಾ ಕೂಡ ರಿಲೀಸ್ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ಹಲವು ಅಚ್ಚರಿಗಳನ್ನು ಈ ಸಿನಿಮಾದಲ್ಲಿ ತೋರಿಸಲಿದ್ದಾರಂತೆ ನಿರ್ದೇಶಕರು. ಸಿನಿಮಾಗೆ ಭಾರೀ ಬೇಡಿಕೆ (Demand) ಬಂದ ಕಾರಣದಿಂದಾಗಿ ಸದ್ಯ ನಿರ್ದೇಶಕರು ಮುಂಬೈನಲ್ಲಿ ಬೀಡು ಬಿಟ್ಟಿದ್ದಾರಂತೆ.

    Live Tv
    [brid partner=56869869 player=32851 video=960834 autoplay=true]

  • ಕನ್ನಡದ ಮತ್ತೊಂದು ಸಿನಿಮಾ ಸಾವಿರ ಕೋಟಿ ಲೆಕ್ಕಾಚಾರ: ವಿದೇಶಗಳಿಂದಲೂ ‘ಕಬ್ಜ’ಗೆ ಬೇಡಿಕೆ

    ಕನ್ನಡದ ಮತ್ತೊಂದು ಸಿನಿಮಾ ಸಾವಿರ ಕೋಟಿ ಲೆಕ್ಕಾಚಾರ: ವಿದೇಶಗಳಿಂದಲೂ ‘ಕಬ್ಜ’ಗೆ ಬೇಡಿಕೆ

    ಉಪೇಂದ್ರ (Upendra) ಮತ್ತು ಕಿಚ್ಚ ಸುದೀಪ್ (Kiccha Sudeep) ಕಾಂಬಿನೇಷನ್ ನ ‘ಕಬ್ಜ’ (Kabzaa) ಸಿನಿಮಾದ ಟೀಸರ್ ಕೆಲವೇ ಗಂಟೆಗಳಲ್ಲಿ 25 ಮೀಲಿಯನ್ ದಾಟುತ್ತಿದ್ದಂತೆಯೇ ಸಿನಿಮಾದ ಲೆಕ್ಕಾಚಾರವೇ ಬದಲಾಗುತ್ತಿದೆ. ಈ ಸಿನಿಮಾ ಮೊದಲು ಐದು ಭಾಷೆಗಳಲ್ಲಿ ಬಿಡುಗಡೆ ಆಗಲಿದೆ ಎಂದು ಹೇಳಲಾಗಿತ್ತು. ಆದರೆ, ಇದೀಗ ಬರೋಬ್ಬರಿ ಒಂಬತ್ತು ಭಾಷೆಗಳಲ್ಲಿ ಈ ಚಿತ್ರವನ್ನು ಬಿಡುಗಡೆ ಮಾಡುವುದಾಗಿ ನಿರ್ದೇಶಕ ಆರ್.ಚಂದ್ರು ಘೋಷಣೆ ಮಾಡಿದ್ದಾರೆ. ಇದರ ಬೆನ್ನಲ್ಲೇ ಬಾಕ್ಸ್ ಆಫೀಸ್ ಲೆಕ್ಕಾಚಾರ ಕೂಡ ಬದಲಾಗಿದೆ.

    ಕಬ್ಜ ಸಿನಿಮಾದ ಟೀಸರ್ ರಿಲೀಸ್ ಆಗುತ್ತಿದ್ದಂತೆಯೇ ಈ ಸಿನಿಮಾದ ಮೇಕಿಂಗ್ ಮತ್ತು ಗುಣಮಟ್ಟವನ್ನು ಕೆಜಿಎಫ್ ಚಿತ್ರಕ್ಕೆ ಹೋಲಿಸಲಾಯಿತು. ಅದ್ಧೂರಿ ಮೇಕಿಂಗ್, ಕ್ಯಾಮೆರಾ ವರ್ಕ್, ಶೂಟಿಂಗ್ ಮಾಡಿರುವ ಶೈಲಿ, ಹಿನ್ನೆಲೆ ಸಂಗೀತ, ಭಾರೀ ಸೆಟ್ ಇದೆಲ್ಲವನ್ನೂ ಗಮನಿಸಿ ಕನ್ನಡದ ಮತ್ತೊಂದು ಕೆಜಿಎಫ್ (KGF 2) ಸಿನಿಮಾ ಎಂದು ಕಬ್ಜವನ್ನು ಬಣ್ಣಿಸಲಾಯಿತು. ಹೀಗಾಗಿ ಸಿನಿಮಾ ವಿದೇಶದಲ್ಲೂ ಡಿಮಾಂಡ್ ಕ್ರಿಯೇಟ್ ಮಾಡಿದೆ. ಕೆಜಿಎಫ್ ಚಿತ್ರವು ಯಾವೆಲ್ಲ ದೇಶಗಳಲ್ಲಿ ಬಿಡುಗಡೆ ಆಯಿತೋ ಅಷ್ಟು ದೇಶಗಳಿಂದ ಕಬ್ಜ ಸಿನಿಮಾಗೆ ಬೇಡಿಕೆ ಬಂದಿದೆ.

    ಕಬ್ಜ ಸಿನಿಮಾದ ಟೀಸರ್ (Teaser) ಮಾಡಿದ ಮೋಡಿಯಿಂದಾಗಿ ಭಾರತದಲ್ಲೂ ಚಿತ್ರಕ್ಕೆ ಸಖಯ್ ಡಿಮಾಂಡ್ ಕ್ರಿಯೇಟ್ ಆಗಿದೆ ಎನ್ನಲಾಗುತ್ತಿದೆ. ಬಾಲಿವುಡ್, ತಮಿಳು ಹಾಗೂ ತೆಲುಗು ಸಿನಿಮಾ ರಂಗದ ಖ್ಯಾತ ವಿತರಕ ಸಂಸ್ಥೆಗಳು ಈಗಾಗಲೇ ನಿರ್ದೇಶಕರೊಂದಿಗೆ ಮಾತುಕತೆ ನಡೆಸಿದ್ದಾರೆ ಎನ್ನುವ ಮಾಹಿತಿ ಸಿಕ್ಕಿದೆ. ಈ ಕುರಿತು ಮಾತನಾಡಿದ ನಿರ್ದೇಶಕ ಆರ್.ಚಂದ್ರು, (R. Chandru) ‘ಬೇರೆ ಬೇರೆ ಭಾಷೆಯಲ್ಲಿ ರಿಲೀಸ್ ಮಾಡಲು ವಿತರಕರು ಮುಂದೆ ಬಂದಿದ್ದಾರೆ. ಇನ್ನೂ ಅದು ಮಾತುಕತೆ ಹಂತದಲ್ಲಿದೆ. ನಾವು ಅಂದುಕೊಂಡಿದ್ದಕ್ಕಿಂತ ಹೆಚ್ಚೆ ಸಿನಿಮಾಗೆ ಡಿಮಾಂಡ್ ಕ್ರಿಯೆಟ್ ಆಗಿದೆ. ಅಲ್ಲದೇ, ಬೇರೆ ಬೇರೆ ದೇಶಗಳಿಂದಲೂ ಡಿಮಾಂಡ್ ಬರುತ್ತಿದೆ’ ಎನ್ನುತ್ತಾರೆ.

    ಈಗಾಗಲೇ ಕನ್ನಡದ ಕೆಜಿಎಫ್ 2 ಸಿನಿಮಾ ಸರ್ವ ರೀತಿಯಲ್ಲೂ ದಾಖಲೆ ಬರೆದಿದೆ. ಬಾಕ್ಸ್ ಆಫೀಸ್ (Box Office) ಅನ್ನೇ ನಡುಗಿಸಿದೆ. ಸಾವಿರಾರು ಕೋಟಿ ಬ್ಯುಸಿನೆಸ್ ಮಾಡುವ ಮೂಲಕ ಕನ್ನಡದ ಕೀರ್ತಿ ಪತಾಕೆಯನ್ನು ಹಾರಿಸಿದೆ. ಕಬ್ಜ ಸಿನಿಮಾದ ಲೆಕ್ಕಾಚಾರ ಕೂಡ ಇದೀಗ ಸಾವಿರ ಕೋಟಿಯಲ್ಲಿ ಶುರುವಾಗಿದೆ. ಬಾಲಿವುಡ್ ಚಿತ್ರ ವಿಮರ್ಶಕರು ಹಾಗೂ ಸಿನಿ ಟ್ರೇಡ್ ಅನಾಲಿಸಿಸ್ ಕೂಡ ಕೆಜಿಎಫ್ ಸಿನಿಮಾದೊಂದಿಗೆ ಕಬ್ಜವನ್ನು ಕಂಪೇರ್ ಮಾಡುತ್ತಿರುವುದರಿಂದ ಕಬ್ಜ ಕೂಡ ಮಾರುಕಟ್ಟೆಯನ್ನು ವಿಸ್ತರಿಸಬಹುದು ಎಂದು ವಿವರಿಸುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ‘ಕಬ್ಜ’ ಏಳು ಭಾಷೆಯಲ್ಲ, ಒಂಭತ್ತು ಭಾಷೆಗಳಲ್ಲಿ ಬಿಡುಗಡೆ ಮಾಡುತ್ತಾರಂತೆ ನಿರ್ದೇಶಕ ಆರ್.ಚಂದ್ರು

    ‘ಕಬ್ಜ’ ಏಳು ಭಾಷೆಯಲ್ಲ, ಒಂಭತ್ತು ಭಾಷೆಗಳಲ್ಲಿ ಬಿಡುಗಡೆ ಮಾಡುತ್ತಾರಂತೆ ನಿರ್ದೇಶಕ ಆರ್.ಚಂದ್ರು

    ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಕಿಚ್ಚ ಸುದೀಪ (Sudeep) ಅಭಿನಯದ, ಆರ್ ಚಂದ್ರು ನಿರ್ದೇಶಿಸಿರುವ, ಕನ್ನಡದ ಹೆಮ್ಮೆಯ ಪ್ಯಾನ್ ಇಂಡಿಯಾ ಸಿನಿಮಾ “ಕಬ್ಜ”ದ (Kabzaa) ಟೀಸರ್ ಇತ್ತೀಚಿಗೆ ಬಿಡುಗಡೆಯಾಗಿದೆ. ದಕ್ಷಿಣ ಭಾರತದ ಖ್ಯಾತ ನಟ ರಾಣಾ ದಗ್ಗುಬಾಟಿ  “ಕಬ್ಜ” ಚಿತ್ರದ ಟೀಸರ್ ಬಿಡುಗಡೆ ಮಾಡಿದರು. ಬಿಡುಗಡೆಯಾದ ಕ್ಷಣದಿಂದಲೇ ಟೀಸರ್ ಗೆ (Teaser) ಅಪಾರ ಮೆಚ್ಚುಗೆ ವ್ಯಕ್ತವಾಗಿದ್ದು, ವೀಕ್ಷಣೆಯಲ್ಲಿ ದಾಖಲೆ ನಿರ್ಮಿಸುತ್ತಿದೆ. ಉಪೇಂದ್ರ ಸರ್ ಮುಂದೆ ನಿಂತು  ಮಾತನಾಡುವುದಕ್ಕೆ ಭಯ ಆಗತ್ತೆ. ಅಂತಹ ಅದ್ಭುತ ನಟ ಅವರು. ಖ್ಯಾತ ನಟಿ ಶ್ರೀಯಾ ಶರಣ್ ಸಹ ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಆರ್ ಚಂದ್ರು ಮತ್ತು ತಂಡದ ಅದ್ಭುತ ಕೆಲಸ ಟೀಸರ್ ನಲ್ಲಿ ಕಾಣುತ್ತಿದೆ. “ಕಬ್ಜ” ಭರ್ಜರಿ ಯಶಸ್ಸು ಕಾಣಲಿ ಎಂದು ರಾಣಾ ದಗ್ಗುಬಾಟಿ ಹಾರೈಸಿದರು.

    ನನಗೆ ಆರ್ ಚಂದ್ರು ಅವರು ಕಥೆ ಹೇಳಲು ಬಂದಾಗ, ಕಥೆ ಕೇಳಿ,  ನಿಜವಾಗಿಯೂ ಈ ರೀತಿ ಮಾಡಲು ಆಗುವುದಾ? ಅಂತಾ ಕೇಳಿದ್ದೆ. ಚಿತ್ರೀಕರಣ ನಡೆಯುತ್ತಿರುವಾಗ ಚಂದ್ರು ಅವರ ಕಾರ್ಯ ವೈಖರಿ ನೋಡಿ ಆಶ್ಚರ್ಯವಾಯಿತು. ಈಗಂತೂ ಟೀಸರ್ ನೋಡಿ ಬಹಳ ಸಂತೋಷವಾಗಿದೆ. ಚಿತ್ರ ಬಿಡುಗಡೆಗೆ  ನಾನು ಕಾತುರದಿಂದ ಕಾಯುತ್ತಿದ್ದೇನೆ. ಹೆಚ್ಚಿನ ಕ್ರೆಡಿಟ್ ಚಂದ್ರು ಅವರಿಗೆ ಸೇರಬೇಕು. ಶ್ರೀಯಾ ಅವರು ಅಭಿನಯ ಕೂಡ ಚೆನ್ನಾಗಿದೆ. ಟೀಸರ್ ಬಿಡುಗಡೆ ಮಾಡಿಕೊಟ್ಟ ರಾಣಾ (Rana Daggubati) ಅವರಿಗೆ ಧನ್ಯವಾದ ಎಂದರು ರಿಯಲ್ ಸ್ಟಾರ್ ಉಪೇಂದ್ರ. ಇದನ್ನೂ ಓದಿಸೋನು ಶ್ರೀನಿವಾಸ್ ಗೌಡ ಸಂಬಳ ಕೇಳಿದ್ರೆ, ನೀವೂ ಅದೇ ಕೆಲಸ ಮಾಡ್ತೀರಿ

    ಈ ಚಿತ್ರದಲ್ಲಿ ಅಭಿನಯಿಸಿರುವುದಕ್ಕೆ ನನಗೆ ಖುಷಿಯಾಗಿದೆ. ಅದರಲ್ಲೂ ಸೂಪರ್ ಸ್ಟಾರ್ ಉಪೇಂದ್ರ (Upendra) ಅವರ ಜೊತೆ ನಟಿಸಿರುವುದು ಹೆಚ್ಚಿನ ಸಂತೋಷ ತಂದಿದೆ. ತುಂಬಾ ಸಹೃದಯಿ, ಸರಳವ್ಯಕ್ತಿ ಅವರು. ಚಂದ್ರು ಸರ್ ಅವರ ನಿರ್ದೇಶನದ ಬಗ್ಗೆ ಎಷ್ಟು ಹೇಳಿದರು ಕಡಿಮೆ. ನನ್ನ ಪಾತ್ರ‌ ಕೂಡ ತುಂಬಾ ಚೆನ್ನಾಗಿದೆ ಎಂದ ನಾಯಕಿ ಶ್ರೀಯಾ ಶರಣ್ (Shriya Saran), ಟೀಸರ್ ಬಿಡುಗಡೆ ಮಾಡಿದ ರಾಣಾ  ಅವರಿಗೆ ಧನ್ಯವಾದ ತಿಳಿಸಿದರು.

    “ಕಬ್ಜ” ನನ್ನ ಕನಸು. ಈ ಹಿಂದೆ “ತಾಜ್ ಮಹಲ್”, ” ಚಾರ್ ಮಿನಾರ್”, “ಮೈಲಾರಿ” ನಂತಹ‌ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದೇನೆ. ಆದರೆ ಇದು ಬೇರೆಯದೆ ತರಹದ ಸಿನಿಮಾ. “ಕಬ್ಜ” ಚಿತ್ರ ಉತ್ತಮವಾಗಿ ಮೂಡಿಬಂದಿದೆ ಅಂದರೆ ಅದು ನನ್ನೊಬ್ಬನಿಂದ ಅಲ್ಲ. ಇಡೀ ತಂಡದಿಂದ. ಅದರಲ್ಲೂ ಉಪೇಂದ್ರ ಸರ್ ಅವರ ಸಹಕಾರ ಅಪಾರ. ಈ ಸಮಯದಲ್ಲಿ ಕಿಚ್ಚ ಸುದೀಪ್ ಅವರನ್ನು ನೆನಪಿಸಿಕೊಳ್ಳಬೇಕು. ನಾನು ಈ ರೀತಿಯ ಪಾತ್ರವಿದೆ ಅಂತ ಹೇಳಿದೆ. ಅವರು ಒಪ್ಪಿಕೊಂಡು ಅಭಿನಯಿಸಿದ್ದಾರೆ.

    ಈಗಾಗಲೇ ಸಾಕಷ್ಟು ಹೆಸರು ಮಾಡಿರುವ ಶ್ರೀಯಾ ಶರಣ್ ಅವರು ಈ ಚಿತ್ರದಲ್ಲಿ ಅಭಿನಯಿಸಿರುವುದು ಹೆಚ್ಚಿನ ಖುಷಿ ತಂದಿದೆ.  ಟೀಸರ್ ಬಿಡುಗಡೆ ಮಾಡಿಕೊಡಲು ಕೇಳಿದಾಗ ಒಪ್ಪಿ ಬಂದು ಟೀಸರ್ ಬಿಡುಗಡೆ ಮಾಡಿಕೊಟ್ಟಿರುವುದಕ್ಕೆ ದಕ್ಷಿಣ ಭಾರತದ ಖ್ಯಾತ ನಟ ರಾಣಾ ದಗ್ಗುಬಾಟಿ ಅವರಿಗೆ ಹಾಗೂ ಇಂದಿನ ಸಮಾರಂಭಕ್ಕೆ ಆಗಮಿಸಿರುವ ಎಲ್ಲಾ ಅತಿಥಿಗಳಿಗೆತುಂಬು ಹೃದಯದ ಧನ್ಯವಾದ.  ನಮ್ಮ‌”ಕಬ್ಜ” ಚಿತ್ರ ಏಳು ಭಾಷೆಗಳ ಚಿತ್ರವಲ್ಲ. ಒಟ್ಟು ಒಂಭತ್ತು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಚಿತ್ರದ ಬಿಡುಗಡೆ ಸೇರಿದಂತೆ ಅನೇಕ ವಿಷಯಗಳನ್ನು ಮುಂದಿನ ದಿನಗಳಲ್ಲಿ ಹಂಚಿಕೊಳ್ಳುತ್ತೇನೆ‌ ಎಂದರು ನಿರ್ದೇಶಕ ಹಾಗೂ ನಿರ್ಮಾಪಕ ಆರ್ ಚಂದ್ರು. ಕಲಾ ನಿರ್ದೇಶಕ ಶಿವಕುಮಾರ್, ಛಾಯಾಗ್ರಾಹಕ ಎ ಜೆ ಶೆಟ್ಟಿ  ಸೇರಿದಂತೆ ಚಿತ್ರತಂಡದ ಸದಸ್ಯರು “ಕಬ್ಜ” ದ ಬಗ್ಗೆ ಮಾತನಾಡಿದರು. ಕಾರ್ಯಕ್ರಮಕ್ಕೆ ಆಗಮಿಸಿದ ಅತಿಥಿಗಳು ಚಿತ್ರಕ್ಕೆ ಶುಭ ಕೋರಿದರು.

    Live Tv
    [brid partner=56869869 player=32851 video=960834 autoplay=true]

  • ಮೂರು ವರ್ಷದಿಂದ ಕಾಯ್ತಿದ್ದ ಉಪ್ಪಿ  ಅಭಿಮಾನಿಗಳಿಗೆ ಈ ವರ್ಷ ಡಬಲ್ ಧಮಾಕಾ

    ಮೂರು ವರ್ಷದಿಂದ ಕಾಯ್ತಿದ್ದ ಉಪ್ಪಿ ಅಭಿಮಾನಿಗಳಿಗೆ ಈ ವರ್ಷ ಡಬಲ್ ಧಮಾಕಾ

    ನ್ನಡದ ರಿಯಲ್ ಸ್ಟಾರ್ ಉಪೇಂದ್ರ (Upendra) ಕೂಡ ಇಂದು ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ನಿನ್ನೆಯಷ್ಟೇ ಉಪ್ಪಿ ನಟನೆಯ ಕಬ್ಜ ಸಿನಿಮಾದ ಟೀಸರ್ ರಿಲೀಸ್ ಆಗಿದ್ದು, ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಅಲ್ಲದೇ, ಮೂರು ವರ್ಷದಿಂದ ಉಪ್ಪಿ ಹುಟ್ಟು ಹಬ್ಬವನ್ನು ಆಚರಿಸಲು ಅಭಿಮಾನಿಗಳು ಕಾಯುತ್ತಿದ್ದರು. ಅದು ಕೂಡ ಈ ವರ್ಷ ಈಡೇರಿದೆ. ಹೀಗಾಗಿ ಉಪ್ಪಿ ಮತ್ತು ಅಭಿಮಾನಿಗಳಿಗೆ ಈ ವರ್ಷ ಡಬಲ್ ಸಂಭ್ರಮ ತಂದಿದೆ. ಬೆಂಗಳೂರಿನ ಉಪ್ಪಿ ಮನೆಮುಂದೆ ಸಾವಿರಾರು ಅಭಿಮಾನಿಗಳು ನೆರೆದಿದ್ದು, ನೆಚ್ಚಿನ ನಟನ ಜೊತೆ ಫೋಟೋ ತೆಗೆಸಿಕೊಳ್ಳುತ್ತಿದ್ದಾರೆ.

    ಹುಟ್ಟು ಹಬ್ಬಕ್ಕೆ (Birthday) ಬರುವಾಗ ಹಾರ, ತುರಾಯಿ, ಕೇಕ್ ಏನೂ ತರಬಾರದು ಎಂದು ಈ ಹಿಂದೆಯೇ ಅಭಿಮಾನಿಗಳಿಗೆ ಉಪ್ಪಿ ಹೇಳಿದ್ದರು. ಉಡುಗೊರೆಯನ್ನು ಕಡ್ಡಾಯವಾಗಿ ನಿಷೇಧಿಸಿದ್ದರು. ಎಲ್ಲರೊಂದಿಗೆ ಫೋಟೋ ತಗೆಸಿಕೊಳ್ಳುವ ಕುರಿತು ಮಾತನಾಡಿದ್ದರು. ಅಲ್ಲದೇ, ಸಮಾಜದ ಬಗ್ಗೆ 18 ಪದ ಮೀರದಂತೆ ಬರೆದುಕೊಂಡು ಬನ್ನಿ ಎಂದು ತಿಳಿಸಿದ್ದರು. ಉಪ್ಪಿ ಹೇಳಿದಂತೆ ಅಭಿಮಾನಿಗಳು ಈ ಕೆಲಸವನ್ನು ಮಾಡಿದ್ದಾರೆ. ಇದನ್ನೂ ಓದಿ:ಟಿವಿ ಬಿಗ್ ಬಾಸ್‌ಗೆ ಈ ಕಿರುತೆರೆ ನಟಿ ಬರೋದು ಪಕ್ಕಾ

    ಈ ಕುರಿತು ಮಾತನಾಡಿರುವ ಉಪೇಂದ್ರ, ಮೂರು ವರ್ಷದಿಂದ ನಾನೂ ಕೂಡ ಅಭಿಮಾನಿಗಳನ್ನು ಮಿಸ್ ಮಾಡಿಕೊಳ್ಳುತ್ತಿದ್ದೆ. ಈ ಬಾರಿ ಅವರ ಜೊತೆ ಸೆಲೆಬ್ರೇಟ್ ಮಾಡುತ್ತಿರುವೆ. ಕಬ್ಜ ಸಿನಿಮಾದ ಟೀಸರ್, ಯುಐ ಚಿತ್ರ ಕ್ಯಾಮೆರಾದೊಳಗೆ ಕ್ಯಾಮೆರಾ ಇರೋ ಗ್ಲಿಂಪ್ಸ್ ರಿಲೀಸ್ ಮಾಡಿದ್ದೇವೆ. ಅಭಿಮಾನಿಗಳು ಮತ್ತು ಪ್ರಜಾಕೀಯ ಫಾಲೋ ಮಾಡುತ್ತಿರುವವರು ಸೇರಿದ್ದಾರೆ. ಎಲ್ಲರನ್ನೂ ನೋಡಿ ಖುಷಿ ಆಗುತ್ತಿದೆ’ ಎಂದಿದ್ದಾರೆ ಉಪ್ಪಿ.

    ಕಬ್ಜ (Kabzaa) ಸಿನಿಮಾವನ್ನು ಕೆಜಿಎಫ್  ಚಿತ್ರಕ್ಕೆ ಹೋಲಿಸುತ್ತಿರುದು ಖುಷಿ ಆಗುತ್ತಿದೆ ಎಂದಿರುವ ಉಪೇಂದ್ರ, ಕೆಜಿಎಫ್ ತರಹ ಇನ್ನೊಂದು ಸಿನಿಮಾ ಬರ್ತಿದೆ ಅಂದರೆ, ಅದು ಹೆಮ್ಮೆ ಅಲ್ಲವೆ? ಆದರೂ, ಈ ಸಿನಿಮಾ ಬೇರೆ ರೀತಿ ಇದೆ. ಕಬ್ಜ ಸಿನಿಮಾ ನೋಡಿದಾಗ ಗೊತ್ತಾಗುತ್ತದೆ. ಅಲ್ಲಿವರೆಗೂ ಕಾಯ್ತಾ ಇರಬೇಕು ಎನ್ನುತ್ತಾರೆ ಉಪೇಂದ್ರ.

    Live Tv
    [brid partner=56869869 player=32851 video=960834 autoplay=true]