Tag: Kabzaa

  • ಶ್ರೀಯಾ ಶರಣ್ ಜೊತೆ ನಾಳೆ ಬೆಂಗಳೂರಿಗೆ ಬರಲಿದ್ದಾರೆ ‘ಬಾಹುಬಲಿ’ ಖ್ಯಾತಿಯ ನಟ ರಾಣಾ ದಗ್ಗುಬಾಟಿ

    ಶ್ರೀಯಾ ಶರಣ್ ಜೊತೆ ನಾಳೆ ಬೆಂಗಳೂರಿಗೆ ಬರಲಿದ್ದಾರೆ ‘ಬಾಹುಬಲಿ’ ಖ್ಯಾತಿಯ ನಟ ರಾಣಾ ದಗ್ಗುಬಾಟಿ

    ತೆಲುಗಿನ ಖ್ಯಾತ ನಟ ರಾಣಾ ದುಗ್ಗುಬಾಟಿ (Rana Daggubati)ನಾಳೆ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ನಾಳೆ ಸಂಜೆ 4.30ಕ್ಕೆ ಬೆಂಗಳೂರಿನ ಮಾಲ್ ವೊಂದರಲ್ಲಿ ಉಪೇಂದ್ರ (Upendra) ಮತ್ತು ಕಿಚ್ಚ ಸುದೀಪ್ ಕಾಂಬಿನೇಷನ್ ನ ‘ಕಬ್ಜ’ (Kabzaa) ಸಿನಿಮಾದ ಟೀಸರ್ (Teaser) ಬಿಡುಗಡೆ ಆಗುತ್ತಿದ್ದು, ಈ ಸಮಾರಂಭಕ್ಕೆ ರಾಣಾ ಅತಿಥಿಯಾಗಿ ಆಗಮಿಸುತ್ತಿದ್ದಾರೆ. ಇವರೊಂದಿಗೆ ಶ್ರೀಯಾ ಶರಣ್  (Shriya Sharan) ಕೂಡ ಕಾರ್ಯಕ್ರಮಕ್ಕೆ ಸಾಥ್ ನೀಡುತ್ತಿದ್ದಾರೆ.

    ಐದು ಭಾಷೆಗಳಲ್ಲಿ ಕಬ್ಜ ಸಿನಿಮಾದ ಟೀಸರ್ ಬಿಡುಗಡೆ ಆಗುತ್ತಿದ್ದು, ಉಪೇಂದ್ರ ಅವರ ಹುಟ್ಟು ಹಬ್ಬಕ್ಕಾಗಿ ಈ ಉಡುಗೊರೆಯ‍ನ್ನು ನೀಡುತ್ತಿದ್ದಾರೆ ನಿರ್ದೇಶಕ ಆರ್.ಚಂದ್ರು. ಈವರೆಗೂ ಫಸ್ಟ್ ಲುಕ್, ಪೋಸ್ಟರ್ ಮಾತ್ರ ರಿಲೀಸ್ ಆಗಿದ್ದು ,ಇದೇ ಮೊದಲ ಬಾರಿಗೆ ಕಬ್ಜ ಸಿನಿಮಾದ ಟೀಸರ್ ಅಭಿಮಾನಿಗಳಿಗೆ ನೋಡಲು ಸಿಗುತ್ತಿದೆ. ಹಾಗಾಗಿ ಸಹಜವಾಗಿಯೇ ಉಪ್ಪಿ ಮತ್ತು ಸುದೀಪ್ ಅಭಿಮಾನಿಗಳಿಗೆ ಕಾಯುವಂತಾಗಿದೆ. ಇದನ್ನೂ ಓದಿ:ಬಂಧನದ ಭೀತಿಯಿಂದ ಕೇರಳಕ್ಕೆ ಎಸ್ಕೇಪ್ ಆದ್ರಾ ನಟಿ ಶ್ರೀಲೀಲಾ ತಾಯಿ?: ಮನೆಗೆ ಬೀಗ, ಮೊಬೈಲ್ ಆಫ್

    ಕನ್ನಡದ ಸಿನಿಮಾವೊಂದು ಭಾರತೀಯ ಸಿನಿಮಾ ರಂಗದಲ್ಲಿ ಮತ್ತೆ ಸದ್ದು ಮಾಡುತ್ತಿದ್ದು, ಈಗಾಗಲೇ ಕಬ್ಜ ಸಿನಿಮಾ ಪ್ಯಾನ್ ಇಂಡಿಯಾ ಲೇವಲ್ ನಲ್ಲಿ ಹವಾ ಕ್ರಿಯೇಟ್ ಮಾಡಿದೆ. ನಿರ್ದೇಶಕ ಚಂದ್ರು, (R. Chandru) ಕಿಚ್ಚ ಸುದೀಪ್ (Sudeep) ಮತ್ತು ಉಪೇಂದ್ರ ಇದೇ ಮೊದಲ ಬಾರಿಗೆ ಒಟ್ಟಾಗಿ ಕೆಲಸ ಮಾಡಿದ್ದು, ಕೆಜಿಎಫ್ 2 ಸಿನಿಮಾದಲ್ಲಿದ್ದ ತಾಂತ್ರಿಕ ತಂಡ ಕೂಡ ಈ ಚಿತ್ರಕ್ಕಾಗಿ ಕೆಲಸ ಮಾಡಿದೆ. ಹಾಗಾಗಿ ಕೆಜಿಎಫ್ 2 ಸಿನಿಮಾಗೆ ಕಬ್ಜವನ್ನು ಹೋಲಿಕೆ ಮಾಡಲಾಗುತ್ತಿದೆ.

    ಉಪ್ಪಿ ಹುಟ್ಟು ಹಬ್ಬವನ್ನು ಮತ್ತಷ್ಟು ರಂಗಾಗಿಸಲು ಕಬ್ಜ ನಿರ್ದೇಶಕ ಆರ್.ಚಂದ್ರು ಸಜ್ಜಾಗಿದ್ದು, ಉಪ್ಪಿ ಅಭಿಮಾನಿಗಳಿಗೆ ಭರ್ಜರಿ ಬಹುಮಾನವನ್ನೇ ಕೊಡಲಿದ್ದಾರಂತೆ. ‘ಕೆಜಿಎಫ್ 2’ ಚಿತ್ರಕ್ಕೆ ಸಂಗೀತ ನೀಡಿದ್ದ ರವಿ ಬಸ್ರೂರ್ ಅವರೇ ಈ ಸಿನಿಮಾಗೂ ಸಂಗೀತ ನೀಡುತ್ತಿದ್ದು, ಟೀಸರ್ ಹೇಗೆ ಇರಲಿದೆ ಎನ್ನುವ ಕುತೂಹಲವಂತೂ ಮೂಡಿದೆ. ಚಂದ್ರು ಅವರು ಸೆರೆ ಹಿಡಿದಿರುವ ವಿಷ್ಯುವೆಲ್ಸ್, ರವಿ ಬಸ್ರೂರ್ ಮ್ಯೂಸಿಕ್ ಅಭಿಮಾನಿಗಳನ್ನು ಮೋಡಿ ಮಾಡುವದಂತೂ ಕಂಡಿತ.

    Live Tv
    [brid partner=56869869 player=32851 video=960834 autoplay=true]

  • ಉಪೇಂದ್ರ ಬರ್ತಡೇ ಮತ್ತು ‘ಕಬ್ಜ’ ಸಿನಿಮಾದ ಟೀಸರ್ ಗಾಗಿ ಕಿಚ್ಚ ಸುದೀಪ್ ಕೂಡ ಕಾಯ್ತಿದ್ದಾರಂತೆ

    ಉಪೇಂದ್ರ ಬರ್ತಡೇ ಮತ್ತು ‘ಕಬ್ಜ’ ಸಿನಿಮಾದ ಟೀಸರ್ ಗಾಗಿ ಕಿಚ್ಚ ಸುದೀಪ್ ಕೂಡ ಕಾಯ್ತಿದ್ದಾರಂತೆ

    ನಾಳೆಯೊಂದು ದಿನ ಕಳೆದರೆ ನಾಡಿದ್ದು (ಸೆ.17) ಉಪೇಂದ್ರ ಮತ್ತು ಕಿಚ್ಚ ಸುದೀಪ್ ಕಾಂಬಿನೇಷನ್ ನ ‘ಕಬ್ಜ’ (Kabzaa) ಸಿನಿಮಾದ ಟೀಸರ್ ರಿಲೀಸ್ ಆಗುತ್ತಿದೆ. ಈವರೆಗೂ ಕೇವಲ ಪೋಸ್ಟರ್, ಮೋಷನ್ ಪೋಸ್ಟರ್ ಅಷ್ಟನ್ನೇ ಬಿಡುಗಡೆ ಮಾಡಿದ್ದ ನಿರ್ದೇಶಕ ಆರ್.ಚಂದ್ರು ಇದೀಗ ಮೊದಲ ಬಾರಿಗೆ ಟೀಸರ್ (Teaser) ರಿಲೀಸ್ ಮಾಡುತ್ತಿದ್ದಾರೆ. ಈ ಟೀಸರ್ ಅನ್ನು ನೋಡಲು ಸ್ವತಃ ಕಿಚ್ಚ ಸುದೀಪ್ ಕಾಯುತ್ತಿದ್ದಾರಂತೆ. ಅಭಿಮಾನಿಗಳಿಗೂ ಕಡ್ಡಾಯವಾಗಿ ಈ ಟೀಸರ್ ನೋಡಿ ಎಂದು ವಿಡಿಯೋ ಮೂಲಕ ಸಂದೇಶ ನೀಡಿದ್ದಾರೆ ಸುದೀಪ್ (Sudeep).

    ಕಬ್ಜ ಸಿನಿಮಾದ ಟೀಸರ್ ಉಪೇಂದ್ರರ ಹುಟ್ಟು ಹಬ್ಬದ ದಿನಕ್ಕಾಗಿ ಬಿಡುಗಡೆ ಆಗುತ್ತಿದ್ದು, ಟೀಸರ್ ನೋಡಲು ನಾನಂತೂ ಎಕ್ಸೈಟ್ ಆಗಿದ್ದೇನೆ. ಎಲ್ಲರೂ ಈ ಸಿನಿಮಾಗೆ ಪ್ರೋತ್ಸಾಹಿಸಿ ಎಂದು ಕಿಚ್ಚ ಸುದೀಪ್ (Kiccha) ವಿಡಿಯೋ ಸಂದೇಶ ಕಳುಹಿಸಿದ್ದಾರೆ. ಈ ಸಿನಿಮಾದಲ್ಲಿ ಸ್ವತಃ ಸುದೀಪ್ ಕೂಡ ಹೊಸ ಬಗೆಯ ಪಾತ್ರ ಮಾಡಿದ್ದರಿಂದ ಸುದೀಪ್ ಮತ್ತು ಉಪೇಂದ್ರ ಅಭಿಮಾನಿಗಳು ಈ ಸಿನಿಮಾದ ಟೀಸರ್ ಗಾಗಿ ಕಾಯುತ್ತಿದ್ದಾರೆ. ಕೆಜಿಎಫ್ 2 ಸಿನಿಮಾದ ನಂತರ ಭಾರೀ ಬಜೆಟ್ ನಲ್ಲಿ ನಿರ್ಮಾಣ ಆಗಿರುವ ಮತ್ತೊಂದು ಕನ್ನಡ ಸಿನಿಮಾ ಇದಾಗಿದ್ದು, ಪ್ಯಾನ್ ಇಂಡಿಯಾ ಲೇವಲ್ ನಲ್ಲೇ ರಿಲೀಸ್ ಮಾಡಲು ಪ್ಲ್ಯಾನ್ ಮಾಡಿದ್ದಾರೆ. ಇದನ್ನೂ ಓದಿ:‘ಥ್ಯಾಂಕ್ ಗಾಡ್’ ಚಿತ್ರದಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ: ನಟ ಅಜಯ್ ದೇವಗನ್ ವಿರುದ್ಧ ದೂರು ದಾಖಲು

    ಒಟ್ಟು ಐದು ಭಾಷೆಗಳಲ್ಲಿ ಟೀಸರ್ ರಿಲೀಸ್ ಆಗುತ್ತಿದ್ದು, ಕನ್ನಡದ ಸಿನಿಮಾವೊಂದು ಭಾರತೀಯ ಸಿನಿಮಾ ರಂಗದಲ್ಲಿ ಮತ್ತೆ ಸದ್ದು ಮಾಡುತ್ತಿದೆ. ಈಗಾಗಲೇ ಕಬ್ಜ ಸಿನಿಮಾ ಪ್ಯಾನ್ ಇಂಡಿಯಾ ಲೇವಲ್ ನಲ್ಲಿ ಹವಾ ಕ್ರಿಯೇಟ್ ಮಾಡಿದೆ. ನಿರ್ದೇಶಕ ಚಂದ್ರು, ಕಿಚ್ಚ ಸುದೀಪ್ ಮತ್ತು ಉಪೇಂದ್ರ (Upendra) ಇದೇ ಮೊದಲ ಬಾರಿಗೆ ಒಟ್ಟಾಗಿ ಕೆಲಸ ಮಾಡಿದ್ದು, ಕೆಜಿಎಫ್ 2 ಸಿನಿಮಾದಲ್ಲಿದ್ದ ತಾಂತ್ರಿಕ ತಂಡ ಕೂಡ ಈ ಚಿತ್ರಕ್ಕಾಗಿ ಕೆಲಸ ಮಾಡಿದೆ. ಹಾಗಾಗಿ ಕೆಜಿಎಫ್ 2 ಸಿನಿಮಾಗೆ ಕಬ್ಜವನ್ನು ಹೋಲಿಕೆ ಮಾಡಲಾಗುತ್ತಿದೆ.

    ಉಪ್ಪಿ ಹುಟ್ಟು ಹಬ್ಬವನ್ನು ಮತ್ತಷ್ಟು ರಂಗಾಗಿಸಲು ಕಬ್ಜ ನಿರ್ದೇಶಕ ಆರ್.ಚಂದ್ರು (R. Chandru) ಸಜ್ಜಾಗಿದ್ದು, ಉಪ್ಪಿ ಅಭಿಮಾನಿಗಳಿಗೆ ಭರ್ಜರಿ ಬಹುಮಾನವನ್ನೇ ಕೊಡಲಿದ್ದಾರಂತೆ. ‘ಕೆಜಿಎಫ್ 2’ (KGF 2) ಚಿತ್ರಕ್ಕೆ ಸಂಗೀತ ನೀಡಿದ್ದ ರವಿ ಬಸ್ರೂರ್ ಅವರೇ ಈ ಸಿನಿಮಾಗೂ ಸಂಗೀತ ನೀಡುತ್ತಿದ್ದು, ಟೀಸರ್ ಹೇಗೆ ಇರಲಿದೆ ಎನ್ನುವ ಕುತೂಹಲವಂತೂ ಮೂಡಿದೆ. ಚಂದ್ರು ಅವರು ಸೆರೆ ಹಿಡಿದಿರುವ ವಿಷ್ಯುವೆಲ್ಸ್, ರವಿ ಬಸ್ರೂರ್ ಮ್ಯೂಸಿಕ್ ಅಭಿಮಾನಿಗಳನ್ನು ಮೋಡಿ ಮಾಡುವದಂತೂ ಕಂಡಿತ.

    Live Tv
    [brid partner=56869869 player=32851 video=960834 autoplay=true]

  • ಕನ್ನಡದ ಮತ್ತೊಂದು ಪ್ಯಾನ್ ಇಂಡಿಯಾ ಟೀಸರ್ ಬಿಡುಗಡೆಗೆ ದಿನಗಣನೆ: ಉಪ್ಪಿ ಬರ್ತಡೇಗೆ ‘ಕಬ್ಜ’ ಝಲಕ್

    ಕನ್ನಡದ ಮತ್ತೊಂದು ಪ್ಯಾನ್ ಇಂಡಿಯಾ ಟೀಸರ್ ಬಿಡುಗಡೆಗೆ ದಿನಗಣನೆ: ಉಪ್ಪಿ ಬರ್ತಡೇಗೆ ‘ಕಬ್ಜ’ ಝಲಕ್

    ಕೆಜಿಎಫ್ 2 ಸಿನಿಮಾದ ನಂತರ ಕನ್ನಡದಲ್ಲಿ ಮತ್ತೊಂದು ಪ್ಯಾನ್ ಇಂಡಿಯಾ ಚಿತ್ರ ‘ಕಬ್ಜ’ ತಯಾರಾಗಿದ್ದು, ಈಗಾಗಲೇ ಹಲವು ಲುಕ್ ಗಳಿಂದ ಗಮನ ಸೆಳೆದಿದೆ. ಇದೇ ಮೊದಲ ಬಾರಿಗೆ ಈ ಚಿತ್ರದ ಟೀಸರ್ (Teaser) ರೆಡಿಯಾಗಿದ್ದು, ಚಿತ್ರದ ನಾಯಕ ಉಪೇಂದ್ರ (Upendra) ಅವರ ಹುಟ್ಟು ಹಬ್ಬದ ದಿನದಂದು ಬಿಡುಗಡೆ ಆಗುತ್ತಿರುವುದು ವಿಶೇಷ. ಕನ್ನಡದ ಹೆಸರಾಂತ ನಿರ್ದೇಶಕ ಆರ್.ಚಂದ್ರು (R. Chandru) ಈಗಾಗಲೇ ಟೀಸರ್ ರೆಡಿ ಮಾಡುತ್ತಿದ್ದು ಕನ್ನಡ, ತಮಿಳು, ತೆಲುಗು, ಮಲಯಾಳಂ, ಹಿಂದಿ ಹೀಗೆ ಐದು ಭಾಷೆಗಳಲ್ಲಿ ಟೀಸರ್ ರಿಲೀಸ್ ಆಗುತ್ತಿರುವುದು ವಿಶೇಷ.

    ಸೆಪ್ಟಂಬರ್ 18ಕ್ಕೆ ಉಪ್ಪಿ ಹುಟ್ಟು ಹಬ್ಬ. ಈ ಹುಟ್ಟು ಹಬ್ಬವನ್ನು ಮತ್ತಷ್ಟು ರಂಗಾಗಿಸಲು ಕಬ್ಜ ನಿರ್ದೇಶಕ ಆರ್.ಚಂದ್ರು ಸಜ್ಜಾಗಿದ್ದು, ಉಪ್ಪಿ ಅಭಿಮಾನಿಗಳಿಗೆ ಭರ್ಜರಿ ಬಹುಮಾನವನ್ನೇ ಕೊಡಲಿದ್ದಾರಂತೆ. ‘ಕೆಜಿಎಫ್ 2’ ಚಿತ್ರಕ್ಕೆ ಸಂಗೀತ ನೀಡಿದ್ದ ರವಿ ಬಸ್ರೂರ್ (Ravi Basrur) ಅವರೇ ಈ ಸಿನಿಮಾಗೂ ಸಂಗೀತ ನೀಡುತ್ತಿದ್ದು, ಟೀಸರ್ ಹೇಗೆ ಇರಲಿದೆ ಎನ್ನುವ ಕುತೂಹಲವಂತೂ ಮೂಡಿದೆ. ಚಂದ್ರು ಅವರು ಸೆರೆ ಹಿಡಿದಿರುವ ವಿಷ್ಯುವೆಲ್ಸ್, ರವಿ ಬಸ್ರೂರ್ ಮ್ಯೂಸಿಕ್ ಅಭಿಮಾನಿಗಳನ್ನು ಮೋಡಿ ಮಾಡುವದಂತೂ ಕಂಡಿತ. ಇದನ್ನೂ ಓದಿ:‘ಮದುವೆ’ ನಂತರ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟಿವ್ ಆದ ಮಹಾಲಕ್ಷ್ಮಿ ರವೀಂದರ್

    ಕನ್ನಡ ಸಿನಿಮಾ ರಂಗಕ್ಕೆ (Sandalwood) ಅನೇಕ ಹಿಟ್ ಚಿತ್ರಗಳನ್ನು ನೀಡಿರುವ ನಿರ್ದೇಶಕ ಆರ್.ಚಂದ್ರು ‘ಕಬ್ಜ’ (Kabzaa) ಸಿನಿಮಾವನ್ನು ಮತ್ತೊಂದು ಲೇವಲ್ ಗೆ ತಗೆದುಕೊಂಡು ಹೋಗಿದ್ದು, ಯಾವುದೇ ರೀತಿಯಲ್ಲಿ ಕಾಂಪ್ರಮೈಸ್ ಮಾಡಿಕೊಳ್ಳದೇ ಅದ್ಧೂರಿಯಾಗಿ ಚಿತ್ರ ಮಾಡಿದ್ದು, ಭಾರತೀಯ ಸಿನಿಮಾ ರಂಗದಲ್ಲಿ ‘ಕಬ್ಜ’ ಮತ್ತೊಂದು ಇತಿಹಾಸವನ್ನು ನಿರ್ಮಿಸಲಿದೆ ಎಂದು ಅಂದಾಜಿಸಲಾಗಿದೆ. ಚಿತ್ರಕ್ಕೆ ಭಾರೀ ಬೇಡಿಕೆ ಕೂಡ ಬರುತ್ತಿದ್ದು, ಸಿನಿಮಾ ರಿಲೀಸ್ ಗೂ ಮುನ್ನವೇ ಸೇಫ್ ಆಗಲಿದೆ ಎನ್ನುವ ಲೆಕ್ಕಾಚಾರವೂ ಶುರುವಾಗಿದೆ.

    ಹೊಸ ರೀತಿಯಲ್ಲಿ ಆಲೋಚಿಸುವ ನಿರ್ದೇಶಕ ಚಂದ್ರು, ಸೂಪರ್ ಸ್ಟಾರ್ ಉಪೇಂದ್ರ ಮತ್ತು ಕಿಚ್ಚ ಸುದೀಪ್ (Sudeep) ಕಾಂಬಿನೇಷನ್ ನ ಮೊದಲ ಸಿನಿಮಾ ಇದಾಗಿದ್ದು, ಹೀಗಾಗಿ ಪ್ಯಾನ್ ಇಂಡಿಯಾ ಲೇವಲ್ ನಲ್ಲಿ ಸುದ್ದಿ ಆಗುತ್ತಿದೆ. ಕೆಜಿಎಫ್ 2 ಸಿನಿಮಾದಲ್ಲಿ ಕೆಲಸ ಮಾಡಿರುವ ಅನೇಕ ತಂತ್ರಜ್ಞರು ಈ ಸಿನಿಮಾಗೂ ಕೆಲಸ ಮಾಡಿದ್ದಾರೆ. ಹಾಗಾಗಿ ಕೆಜಿಎಫ್ 2 ಚಿತ್ರದ ಜೊತೆಗೆ ಕಬ್ಜ ಸಿನಿಮಾವನ್ನು ಹೋಲಿಕೆ ಮಾಡಲಾಗುತ್ತಿದೆ. ಹಾಗಾಗಿ ಭಾರತೀಯ ಸಿನಿಮಾ ರಂಗದಲ್ಲಿ ಕನ್ನಡದ ಮತ್ತೊಂದು ಸಿನಿಮಾ ಗೆಲುವಿನ ಬಾವುಟ ಹಾರಿಸಲು ರೆಡಿ ಆಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಉಪ್ಪಿ ಹುಟ್ಟು ಹಬ್ಬಕ್ಕೆ ‘ಕಬ್ಜ’ ಸಿನಿಮಾ ಟೀಮ್ ನಿಂದ ಭರ್ಜರಿ ಗಿಫ್ಟ್: ಸೆ.17ಕ್ಕೆ ಚಿತ್ರದ ಟೀಸರ್ ರಿಲೀಸ್

    ಉಪ್ಪಿ ಹುಟ್ಟು ಹಬ್ಬಕ್ಕೆ ‘ಕಬ್ಜ’ ಸಿನಿಮಾ ಟೀಮ್ ನಿಂದ ಭರ್ಜರಿ ಗಿಫ್ಟ್: ಸೆ.17ಕ್ಕೆ ಚಿತ್ರದ ಟೀಸರ್ ರಿಲೀಸ್

    ನ್ನಡದ ಹೆಮ್ಮೆಯ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ  “ಕಬ್ಜ” (Kabzaa)ದ ಟೀಸರ್ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಸೆಪ್ಟೆಂಬರ್ 17 ರ ಸಂಜೆ 5 ಗಂಟೆಗೆ ಆನಂದ್ ಆಡಿಯೋ ಮೂಲಕ ಬಹು ನಿರೀಕ್ಷಿತ ಈ ಚಿತ್ರದ ಟೀಸರ್ (Teaser) ಬಿಡುಗಡೆಯಾಗಲಿದೆ. ರಿಯಲ್ ಸ್ಟಾರ್ ಉಪೇಂದ್ರ (Upendra) ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ (Kiccha Sudeep) ಅಭಿನಯದ ಈ ಚಿತ್ರ ಆರಂಭದಿಂದಲೂ ಭಾರತದಾದ್ಯಂತ ಮನೆಮಾತಾಗಿದೆ.

    ಈ ಚಿತ್ರದ ಟೀಸರ್ ಯಾವಾಗ ಬರಬಹುದೆಂದು ಕರ್ನಾಟಕ ಮಾತ್ರವಲ್ಲದೆ, ದೇಶದೆಲ್ಲೆಡೆಯಿರುವ ಅಭಿಮಾನಿ ಸಮೂಹ ಕಾತುರದಿಂದ ಕಾಯುತ್ತಿತ್ತು. ಈಗ ಆ ಸಮಯ ನಿಗದಿಯಾಗಿದೆ. ಚಿತ್ರದ ನಾಯಕ ಉಪೇಂದ್ರ ಅವರ ಹುಟ್ಟುಹಬ್ಬದ (Birthday) ಸಂದರ್ಭದಲ್ಲಿ “ಕಬ್ಜ” ಚಿತ್ರದ ಟೀಸರ್ ಬಿಡುಗಡೆಯಾಗುತ್ತಿದೆ.

    ಕನ್ನಡಿಗರ ಹೆಮ್ಮೆಯ “ಕೆ.ಜಿ.ಎಫ್ 2”  (KGF 2) ಚಿತ್ರ ಈಗಾಗಲೇ ವಿಶ್ವದಾದ್ಯಂತ ವಿಜಯ ಪತಾಕೆ ಹಾರಿಸಿದೆ‌. ಕನ್ನಡಿಗರ ಮತ್ತೊಂದು ಹೆಮ್ಮೆಯ “ಕಬ್ಜ” ಚಿತ್ರ ಕೂಡ ಗೆಲ್ಲಲೇಬೇಕು. ಚಿತ್ರತಂಡದ ಅಪಾರ ಶ್ರಮದಿಂದ ನಿರ್ಮಾಣವಾಗಿರುವ “ಕಬ್ಜ” ಚಿತ್ರ ಗೆದ್ದರೆ ಕನ್ನಡ ಚಿತ್ರ ಗೆದ್ದಂತೆ. ಈ ಚಿತ್ರ ಗೆದ್ದರೆ ಮತ್ತೊಮ್ಮೆ ಬಾಲಿವುಡ್ ನಲ್ಲಿ ನಾವೇ ನಂಬರ್ ಒನ್ ಆಗಲಿದ್ದೇವೆ ಎನ್ನುತ್ತಿರುವ ಕನ್ನಡ ಕಲಾಭಿಮಾನಿಗಳು, “ಕಬ್ಜ”  ಪ್ಯಾನ್ ಇಂಡಿಯಾ ಚಿತ್ರ ಪ್ರಪಂಚದಾದ್ಯಂತ ಪ್ರಚಂಡ ಯಶಸ್ಸು ಸಾಧಿಸಲಿ ಎಂದು ತುಂಬು ಮನಸ್ಸಿನಿಂದ ಹಾರೈಸುತ್ತಿದ್ದಾರೆ.

    ಆರ್ ಚಂದ್ರು  (R. Chandru) ನಿರ್ಮಿಸಿ, ನಿರ್ದೇಶಿಸಿರುವ ಈ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ.  ಸೆಪ್ಟೆಂಬರ್ ಹದಿನೇಳರಂದು ಟೀಸರ್ ಬಿಡುಗಡೆಯಾಗಲಿದ್ದು, ಶೀಘ್ರದಲ್ಲೇ ಚಿತ್ರದ ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡುವುದಾಗಿ ಆರ್ ಚಂದ್ರು ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]