Tag: Kadalekai Parishe

  • ಬೆಂಗಳೂರಿನ ಪ್ರಸಿದ್ಧ ಬಸವನಗುಡಿ, ಮಲ್ಲೇಶ್ವರಂ ಕಡಲೆಕಾಯಿ ಪರಿಷೆಗೆ ದಿನಾಂಕ ನಿಗದಿ

    ಬೆಂಗಳೂರಿನ ಪ್ರಸಿದ್ಧ ಬಸವನಗುಡಿ, ಮಲ್ಲೇಶ್ವರಂ ಕಡಲೆಕಾಯಿ ಪರಿಷೆಗೆ ದಿನಾಂಕ ನಿಗದಿ

    -ನ.25, 26ರಂದು ಬಸವನಗುಡಿಯಲ್ಲಿ ಪರಿಷೆ, 3 ಲಕ್ಷ ಜನ ಭಾಗಿ ಸಾಧ್ಯತೆ

    ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಪ್ರಸಿದ್ಧ ಬಸವನಗುಡಿ ಮತ್ತು ಮಲ್ಲೇಶ್ವರಂ ಕಡಲೆಕಾಯಿ ಪರಿಷೆಯ (Kadalekai Parishe) ದಿನಾಂಕವನ್ನ ಮುಜರಾಯಿ ಇಲಾಖೆ (Muzrai Department) ಘೋಷಣೆ ಮಾಡಿದೆ. ಎರಡು ದಿನಗಳ ಕಾಲ ಈ ಪರಿಷೆ ನಡೆಸಲು ನಿರ್ಧರಿಸಿದೆ. ಈ ಬಾರಿಯ ಕಡಲೆಕಾಯಿ ಪರಿಷೆ ಹಲವು ವಿಶೇಷತೆಗಳಿಂದ ಕೂಡಿರಲಿದೆ.

    ಪ್ರತಿ ವರ್ಷದಂತೆ ಈ ವರ್ಷವೂ ಬಸವನಗುಡಿ ಕಡಲೆಕಾಯಿ ಪರಿಷೆ ಮಾಡಲು ಮುಜರಾಯಿ ಇಲಾಖೆ ನಿರ್ಧರಿಸಿದೆ. ನವೆಂಬರ್ 25 ಮತ್ತು 26ರಂದು ಎರಡು ದಿನಗಳ ಕಾಲ ಬಸವನಗುಡಿಯಲ್ಲಿ ಕಡಲೆಕಾಯಿ ಪರಿಷೆ ನಡೆಯಲಿದೆ. ಈ ಸಂಬಂಧ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅಧಿಕಾರಿಗಳ ಜೊತೆ ಸಭೆ ಮಾಡಿ ಹಲವಾರು ಸಲಹೆ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ನಮ್ಮ ಪಕ್ಷದ 50 ಶಾಸಕರಿಗೆ ಬಿಜೆಪಿಯಿಂದ ತಲಾ 50 ಕೋಟಿ ಆಫರ್‌ ಬಂದಿತ್ತು: ಸಿಎಂ ಬಾಂಬ್‌

    ಇನ್ನೂ ಮಲ್ಲೇಶ್ವರಂ ಕಡಲೆಕಾಯಿ ಪರಿಷೆ ನವೆಂಬರ್ 15 ರಿಂದ 3 ದಿನಗಳ ಕಾಲ ನಡೆಯಲಿದೆ. ಪರಿಷೆಯನ್ನು ಪ್ಲಾಸ್ಟಿಕ್ ಮುಕ್ತವಾಗಿ ಮಾಡಲು ನಿರ್ಧರಿಸಲಾಗಿದೆ. ಪರಿಷೆಗೆ ಬರುವವರು ಮತ್ತು ವ್ಯಾಪಾರಸ್ಥರು ಪ್ಲಾಸ್ಟಿಕ್ ಬಿಟ್ಟು, ಬಟ್ಟೆ ಚೀಲವನ್ನೆ ಬಳಸಬೇಕು ಎಂಬ ನಿಯಮ ಜಾರಿ ಮಾಡಲಾಗುತ್ತದೆ. ಇನ್ನು ಈ ಪರಿಷೆಯಲ್ಲಿ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳು ಕೂಡ ನಡೆಯಲಿವೆ. ಈ ಬಾರಿ ಮೂರು ಲಕ್ಷಕ್ಕೂ ಅಧಿಕ ಜನ ಭಾಗವಹಿಸುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ. ಇದನ್ನೂ ಓದಿ: ರಝಾಕರು ಮುಸ್ಲಿಮರಲ್ಲ, ಸುಟ್ಟಿದ್ದು ನಮ್ಮನೆ, ಹೋಗಿದ್ದು ನಮ್ಮವರ ಜೀವ, ಯೋಗಿಗೆ ಏನಾಗಬೇಕು? – ಪ್ರಿಯಾಂಕ್ ತಿರುಗೇಟು

    ಕಳೆದ ಬಾರಿ ಕಡಲೆಕಾಯಿ ಪರಿಷೆಯಲ್ಲಿ ವ್ಯಾಪಾರಸ್ಥರಿಂದ ಸುಂಕ ವಸೂಲಿ ಮಾಡಿರೋ ಆರೋಪ ಎದ್ದಿತ್ತು. ಹೀಗಾಗಿ ಈ ಬಾರಿ ಆ ರೀತಿ ಅಕ್ರಮಗಳು ನಡೆಯದಂತೆ ಕ್ರಮವಹಿಸಿ ಯಶಸ್ವಿಗೊಳಿಸಲು ಪ್ಲ್ಯಾನ್ ಮಾಡಲಾಗಿದೆ. ಇದನ್ನೂ ಓದಿ: ಗುರುವಾರ ಬಿಎಸ್‌ವೈ, ರಾಮುಲುಗೆ ಬಿಗ್‌ ಡೇ!

  • ಪಬ್ಲಿಕ್ ಟಿವಿ ಇಂಪ್ಯಾಕ್ಟ್ – ಕಡಲೆಕಾಯಿ ಪರಿಷೆಯಲ್ಲಿ ಹಣ ವಸೂಲಿ ಮಾಡುತ್ತಿದ್ದವರ ಮೇಲೆ ಕ್ರಮ: ರಾಮಲಿಂಗಾ ರೆಡ್ಡಿ ಭರವಸೆ

    ಪಬ್ಲಿಕ್ ಟಿವಿ ಇಂಪ್ಯಾಕ್ಟ್ – ಕಡಲೆಕಾಯಿ ಪರಿಷೆಯಲ್ಲಿ ಹಣ ವಸೂಲಿ ಮಾಡುತ್ತಿದ್ದವರ ಮೇಲೆ ಕ್ರಮ: ರಾಮಲಿಂಗಾ ರೆಡ್ಡಿ ಭರವಸೆ

    ಬೆಂಗಳೂರು: ಕಡಲೆಕಾಯಿ ಪರಿಷೆ (Kadalekai Parishe) ಹೆಸರಿನಲ್ಲಿ ನಿಯಮ ಮೀರಿ ಸುಂಕ ವಸೂಲಿ ಮಾಡುತ್ತಿರುವ ಆರೋಪದ ಬಗ್ಗೆ `ಪಬ್ಲಿಕ್ ಟಿವಿ’ ಪ್ರಸಾರ ಮಾಡಿದ ವರದಿ ಫಲಶೃತಿ ನೀಡಿದೆ.

    ದೇವಾಲಯದ ಆವರಣದ ಹೊರಗೆ ಕಡಲೆಕಾಯಿ ಮಾರಾಟ ಮಾಡುತ್ತಿದ್ದ ವ್ಯಾಪಾರಿಗಳ ಬಳಿ 500 ರೂ. ಹಣ ಪಡೆದು ರಶೀದಿ ನೀಡಲಾಗಿತ್ತು. ಈ ಬಗ್ಗೆ ನಿರಂತರ ವರದಿಯ ಬಳಿಕ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಕ್ರಮಕೈಗೊಳ್ಳುವುದಾಗಿ ಭರವಸೆ ಕೊಟ್ಟಿದ್ದಾರೆ. ಇದನ್ನೂ ಓದಿ: ಅಶೋಕ್ ಹೆಸರಿನ ನಾಮಫಲಕ ಇರೋವರೆಗೂ ಆ ಕೊಠಡಿಗೆ ಹೋಗಲ್ಲ: ಎಸ್‌ಆರ್ ವಿಶ್ವನಾಥ್ ಮುನಿಸು

    ರಶೀದಿಯ ಮೇಲೆ ದೊಡ್ಡ ಬಸವನಗುಡಿ (Basavanagudi) ದೇವಸ್ಥಾನ, ಕಡಲೆಕಾಯಿ ಪರಿಷೆ ಎಂದು ಮುದ್ರಣಗೊಂಡಿದೆ. ಈ ಬಗ್ಗೆ ವಿಚಾರಿಸಿದಾಗ ಪ್ರಸಾದ್ ಎಂಬವರಿಗೆ 2-3 ಲಕ್ಷಕ್ಕೆ ಬಿಡ್ ನೀಡಲಾಗಿದೆ. ಒಂದು ದಿನ ಮಾತ್ರ ಹಣ ವಸೂಲಿಗೆ ಅವಕಾಶ ಇದ್ದು, ಬಿಡ್ ನೀಡಿದ ಮಾತ್ರಕ್ಕೆ 500, 200 ರೂ. ಕಲೆಕ್ಟ್ ಮಾಡುವ ಹಾಗಿಲ್ಲ. ಈ ಬಗ್ಗೆ ಪರಿಶೀಲನೆ ಮಾಡಿ ಕ್ರಮಕೈಗೊಳ್ಳುವುದಾಗಿ ದೊಡ್ಡ ಗಣಪತಿ ದೇವಸ್ಥಾನದ ಕಾರ್ಯನಿರ್ವಾಹಣಾಧಿಕಾರಿ ಅರವಿಂದ್ ಬಾಬು ಮಾಹಿತಿ ನೀಡಿದ್ದಾರೆ.

    ಬೆಳಗ್ಗೆಯಿಂದ ದುಡಿದರೂ 500 ರೂ. ದುಡಿಮೆ ಆಗುವುದಿಲ್ಲ. ಹೀಗಿರುವಾಗ 500 ರೂ. ಕೊಡಬೇಕು ಎಂದು ಬರುತ್ತಾರೆ. ನೂಕುವ ಗಾಡಿಯಲ್ಲಿ ವ್ಯಾಪಾರ ಮಾಡುವವನಿಗೆ 200 ರೂ. ವಸೂಲಿ ಮಾಡುತ್ತಾರೆ ಎಂದು ವ್ಯಾಪಾರಿಗಳು `ಪಬ್ಲಿಕ್ ಟಿವಿ’ ಮುಂದೆ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

    ಈ ವರದಿ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ, ಸುಂಕ ವಸೂಲಿ ಮಾಡಲು ಅವರ್ಯಾರು? ಉಚಿತವಾಗಿ ವ್ಯಾಪಾರ ಮಾಡಲು ಅವಕಾಶ ಇದೆ. ಹಣ ವಸೂಲಿ ಮಾಡಿದವರನ್ನು ಅಮಾನತು ಮಾಡ್ತೇನೆ. ಕಡಲೆಕಾಯಿ ಪರೀಷೆ ವಿಚಾರವಾಗಿ ಇಓ ಬಳಿ ಮಾತಾಡಿ ಕ್ರಮ ತೆಗೆದುಕೊಳ್ಳುತ್ತೇನೆ ಎಂದು ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಮೋದಿ ವಿರುದ್ಧ ಆಕ್ಷೇಪಾರ್ಹ ಲೇಖನ – ಸಂಜಯ್‌ ರಾವತ್‌ ವಿರುದ್ಧ ದೇಶದ್ರೋಹದ ಕೇಸ್‌

  • ಐತಿಹಾಸಿಕ ಕಡಲೆಕಾಯಿ ಪರಿಷೆಗೆ ಚಾಲನೆ- 3 ದಿನಗಳ ಕಾಲ ಬೆಂಗಳೂರಲ್ಲಿ ಗ್ರಾಮೀಣ ವೈಭವ

    ಐತಿಹಾಸಿಕ ಕಡಲೆಕಾಯಿ ಪರಿಷೆಗೆ ಚಾಲನೆ- 3 ದಿನಗಳ ಕಾಲ ಬೆಂಗಳೂರಲ್ಲಿ ಗ್ರಾಮೀಣ ವೈಭವ

    ಬೆಂಗಳೂರು: ಇತಿಹಾಸ ಪ್ರಸಿದ್ಧ ಬಸವನಗುಡಿ ಕಡಲೆಕಾಯಿ ಪರಿಷೆ (Kadalekai Parishe)  ಇಂದಿನಿಂದ ಆರಂಭವಾಗಿದೆ. ಬಸವನಗುಡಿಯ ದೊಡ್ಡ ಗಣೇಶ ದೇವಾಲಯದ ಬಳಿ ಸುಗ್ಗಿಯ ವೈಭವ ಜೋರಾಗಿದ್ದು, ಎತ್ತ ನೋಡಿದ್ರು ಜಾತ್ರಾ ಮೆರುಗು ಸಿಟಿಯ ಮಧ್ಯೆ ಗ್ರಾಮೀಣ ಸೊಬಗನ್ನ ರಂಗೇರಿಸುತ್ತಿದೆ.

    ತನ್ನದೇ ಆದ ಇತಿಹಾಸ ಹೊಂದಿರೋ ಬೆಂಗಳೂರಿನ ಬಸವನಗುಡಿ ಕಡಲೆಕಾಯಿ ಪರಿಷೆಗೆ ಅಧಿಕೃತ ಚಾಲನೆ ಸಿಕ್ಕಿದೆ. ದೊಡ್ಡ ಗಣೇಶನ ದೇವಾಲಯದಲ್ಲಿ ಬಸವಣ್ಣನಿಗೆ ಕಡಲೆಕಾಯಿ ತುಲಾಭಾರ ಮಾಡುವ ಮೂಲಕ ಪರಿಷೆಗೆ ಚಾಲನೆ ನೀಡಲಾಯ್ತು. ಸಂಸದ ತೇಜಸ್ವಿಸೂರ್ಯ, ಸ್ಥಳೀಯ ಶಾಸಕ ರವಿ ಸುಬ್ರಹ್ಮಣ್ಯ, ಉದಯ್ ಗರುಡಾಚಾರ್ ಅಧಿಕೃತ ಚಾಲನೆ ನೀಡಿದ್ರು.

    ಹಿಂದಿನಿಂದಲೂ ಸಂಪ್ರದಾಯದಂತೆ ಕಡಲೆಕಾಯಿ ಉತ್ಸವ ಮಾಡಿಕೊಂಡು ಬರಲಾಗಿದ್ದು, ಈ ಹಿಂದೆ ಜಮೀನುಗಳಿಂದ ಕಡಲೆಕಾಯಿ ತಂದು ಇಲ್ಲಿ ಮಾರಾಟ ಮಾಡಲಾಗ್ತಿತ್ತು. ಆದರೆ 2008ರಿಂದ ಪರಿಷೆಗೆ ಹೊಸ ಆಯಾಮ ಕೊಡಲಾಗಿದೆ. ವಿಶೇಷವಾಗಿ 1 ವಾರದವರೆಗೂ ಜಾತ್ರೆ ನಡೆಯಲಿದ್ದು, ವರ್ಷದಿಂದ ವರ್ಷಕ್ಕೆ ಹೆಚ್ಚು ಜನ ಪರಿಷೆಯಲ್ಲಿ ಭಾಗಿಯಾಗುತ್ತಿದ್ದಾರೆ. ಈ ಬಾರಿ ಕೂಡ ಸುಮಾರು 7 ಲಕ್ಷಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ ಇದ್ದು, ಭ್ರದತೆ ದೃಷ್ಟಿಯಿಂದ 500ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ, ಮಹಿಳೆಯರ ಸೇಫ್ಟಿ ದೃಷ್ಟಿಯಿಂದ ಅನೌನ್ಸ್ ಮೆಂಟ್ ಸೇರಿದಂತೆ 50ಕ್ಕೂ ಹೆಚ್ಚು ಸಿಸಿ ಕ್ಯಾಮರಾ ಅಳವಡಿಕೆ ಮಾಡಲಾಗಿದೆ. ಇನ್ನೂ ಇಂದು ಸಂಜೆ ಕೆಂಪಾಂಬುಧಿ ಕೆರೆಯಲ್ಲಿ ತೆಪ್ಪೋತ್ಸವ ನೆರವೇರಿದೆ.

    ಪರಿಷೆಗೆ ಬಗ್ಗೆ ಸಂಸದ ತೇಜಸ್ವಿ ಸೂರ್ಯ (Tejaswi Surya) ಮಾತನಾಡಿ, ಕಡಲೆಕಾಯಿ ಪರಿಷೆ ವಿಜೃಂಭಣೆಯಿಂದ ನಡೆದುಕೊಂಡು ಬಂದಿದೆ. ನಮ್ಮ ನೆಲದ ಸಂಸ್ಕೃತಿ ಇಂದಿಗೂ ಜೀವಂತವಾಗಿರೋದು ಈ ರೀತಿಯ ಆಚರಣೆಯಿಂದಗಳಿಂದಲೇ. ಈ ವರ್ಷವೂ ಲಕ್ಷಾಂತರ ಜನರು ಭಾಗಿಯಾಗ್ತಿದ್ದಾರೆ. ಪ್ರಧಾನ ಮಂತ್ರಿಗಳು ಸ್ಥಳೀಯ ವ್ಯಾಪಾರಿಗಳಿಗೆ ಆರ್ಥಿಕತೆ ಉತ್ತೇಜನ ನೀಡುವಲ್ಲಿ ಮುಂದಾಗಿದ್ದಾರೆ. ಅದೇ ರೀತಿ ಕಡಲೆಕಾಯಿ ಪರಿಷೆ ಸಾಕಷ್ಟು ವ್ಯಾಪಾರಿಗಳಿಗೆ ಆದಾಯ ಆಗಲಿದೆ. ಕೋಟ್ಯಂತರ ರೂಪಾಯಿ ವ್ಯಾಪಾರ ವಹಿವಾಟು ನಡೆಯಲಿದೆ. ತಂದೆ ತಾಯಿಗಳು ತಮ್ಮ ಮಕ್ಕಳನ್ನು ಕರೆ ತನ್ನಿ ಎಂದ್ರು.

    ಇಂದಿನಿಂದ ಆರಂಭವಾಗಿರೋ ಪರಿಷೆ ಇನ್ನೂ ಮೂರು ದಿನ ನಗರದ ಮಧ್ಯ ಭಾಗದಲ್ಲಿ ಹಳ್ಳಿ ಸೊಬಗನ್ನ ಸೃಷ್ಟಿಸಿರೊದಂತು ಸುಳ್ಳಲ್ಲ. ನೀವು ಭೇಟಿ ಕೊಡಿ, ವೈಭವವನ್ನ ಆನಂದಿಸಿ.

  • 2 ವರ್ಷಗಳ ಬಳಿಕ ಕಡಲೇಕಾಯಿ ಪರಿಷೆ – ಬುಲ್ ಟೆಂಪಲ್ ರಸ್ತೆಯಲ್ಲಿ ಕಟ್ಟೆಚ್ಚರ

    2 ವರ್ಷಗಳ ಬಳಿಕ ಕಡಲೇಕಾಯಿ ಪರಿಷೆ – ಬುಲ್ ಟೆಂಪಲ್ ರಸ್ತೆಯಲ್ಲಿ ಕಟ್ಟೆಚ್ಚರ

    ಬೆಂಗಳೂರು: ಕಳೆದ ಎರಡು ವರ್ಷಗಳಿಂದ ಕೊರೋನಾ ಕಾಟದ ಹಿನ್ನೆಲೆಯಲ್ಲಿ ನಿಂತಿದ್ದ ಷರಿಷೆ ರಂಗು ಮತ್ತೆ ಬಂದಿದೆ. ಸಿಲಿಕಾನ್ ಸಿಟಿ ಬೆಂಗಳೂರಿನ ಬಸವನಗುಡಿ ಇಂದು ಕಲರ್ ಫುಲ್ ಆಗಿತು.

    ಬಣ್ಣ – ಬಣ್ಣದ ಅಟಿಕೆ, ರುಚಿ ರುಚಿಯಾದ ಬಡವರ ಬಾದಾಮಿ ಕಡಲೆ ಕಾಯಿ, ಲೈಟಿಂಗ್ ನಲ್ಲಿ ಕಂಗೊಳಿಸುವ ಜಾತ್ರೆ ತಿನ್ನಿಸುಗಳು ಹಾಗೂ ಕಲರ್ ಫುಲ್ ದುನಿಯಾ ಅನಾವರಣ. ಬಸವನಗುಡಿ ಸಂಪ್ರದಾಯಿಕ ಕಡಲೆ ಕಾಯಿ ಪರಿಷೆಯ ಪ್ರಯುಕ್ತ ಹಬ್ಬದ ವಾತಾವರಣ ಮನೆ ಮಾಡಿದೆ. ಇದನ್ನೂ ಓದಿ: 9 ದೇಶಗಳಲ್ಲಿ ಓಮಿಕ್ರಾನ್ ಪತ್ತೆ

    ನಾಳೆಯಿಂದ ಡಿಸೆಂಬರ್ 1ರವರೆಗೆ ಅಂದರೆ 3 ದಿನ ಈ ಕಡ್ಲೇಕಾಯಿ ಪರಿಷೆ ನಡೆಯಲಿದೆ. ಸಾವಿರಕ್ಕೂ ಹೆಚ್ಚು ಕಡಲೆ ಕಾಯಿ ಮಳಿಗೆಗಳು ಓಪನ್ ಆಗಿದ್ದು. 50 ರೂ.ಗೆ ಸೇರು ಮಾರಾಟವಾಗ್ತಿದೆ. ಭಾನುವಾರವಾದ ಇವತ್ತೇ ಪರಿಷೆ ಸಂಭ್ರಮ ಮನೆ ಮಾಡಿತ್ತು. ಕುಟುಂಬ ಸಮೇತರಾಗಿ ಬಂದು ಕೊರೋನಾ ನಿಯಮವನ್ನೇ ಮರೆತಿದ್ದಾರೆ. ನಾಳೆ ಬೆಳಗ್ಗೆ ಸಂಪ್ರಾಯಿಕವಾಗಿ ಕಡಲೆ ಕಾಗಿ ಪರಿಷೆಗೆ ಚಾಲನೆ ಸಿಗಲಿದೆ. ಇದನ್ನೂ ಓದಿ: ನಾಳೆಯಿಂದ ಚಳಿಗಾಲದ ಅಧಿವೇಶನ – ಆಡಳಿತ ಪಕ್ಷ ವಿರುದ್ಧ ಮುಗಿಬೀಳಲು ವಿಪಕ್ಷ ತಯಾರಿ

  • ಕಡಲೆಕಾಯಿ ಪರಿಷೆಗೆ ಚಾಲನೆ ನೀಡಿದ ಆದಿಚುಂಚನಗಿರಿ ನಿರ್ಮಲಾನಂದನಾಥ ಶ್ರೀಗಳು

    ಕಡಲೆಕಾಯಿ ಪರಿಷೆಗೆ ಚಾಲನೆ ನೀಡಿದ ಆದಿಚುಂಚನಗಿರಿ ನಿರ್ಮಲಾನಂದನಾಥ ಶ್ರೀಗಳು

    ಚಿಕ್ಕಬಳ್ಳಾಪುರ: ವಿಜೃಂಭಣೆಯಿಂದ ನೇರವೇರಿದ ಶ್ರೀ ವೀರಾಂಜನೇಯಸ್ವಾಮಿ ಜಾತ್ರಾ ಮಹೋತ್ಸವ ಹಾಗೂ ಕಡಲೆಕಾಯಿ ಪರಿಷೆಗೆ, ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಶ್ರೀಗಳು ಭಕ್ತರಿಗೆ ಕಡಲೆಕಾಯಿ ವಿತರಿಸುವ ಮೂಲಕ ಚಾಲನೆ ನೀಡಿದರು.

    ನಗರ ಹೊರವಲಯದ ಸೂಲಾಲಪ್ಪನದಿನ್ನೆ ಬಳಿಯ ಶ್ರೀ ಆದಿಚುಂಚನಗಿರಿ ಶಾಖಾಮಠ ಉಸ್ತುವಾರಿಯಲ್ಲಿರುವ ಶ್ರೀ ವಿರಾಂಜನೇಯ ಸ್ವಾಮಿ ದೇಗುಲದ ಬಳಿ ಜಾತ್ರಾ ಮಹೋತ್ಸವ ಹಾಗೂ ಕಡಲೆಕಾಯಿ ಪರಿಷೆ ವಿಜೃಂಭಣೆಯಿಂದ ನೇರವೇರಿತು. ಪ್ರತಿ ವರ್ಷ ನಡೆಯುವ ಈ ಜಾತ್ರಾ ಮಹೋತ್ಸವ ಹಾಗೂ ಕಡಲೆಕಾಯಿ ಪರಿಷೆಯಲ್ಲಿ ಶ್ರೀ ಗಳಿಂದ ಕಡಲೆಕಾಯಿ ಪಡೆಯಬೇಕೆಂಬುವುದು ಭಕ್ತರ ಅಭಿಲಾಷೆ. ಹೀಗಾಗಿ ಶ್ರೀ ನಿರ್ಮಲಾನಂದನಾಥ ಶ್ರೀಗಳಿಂದ ಕಡಲೆಕಾಯಿ ಪಡೆದುಕೊಳ್ಳೋಕೆ ಭಕ್ತರು ನಾ ಮುಂದು ತಾ ಮುಂದು ಅಂತ ಮುಗಿಬಿದ್ದು ಕಡಲೆಕಾಯಿ ಪಡೆದುಕೊಂಡರು.

    ಜಾತ್ರಾ ಮಹೋತ್ಸವದ ಅಂಗವಾಗಿ ಶ್ರೀ ವಿರಾಂಜನೇಯಸ್ವಾಮಿಗೆ ವಿಶೇಷ ಅಲಂಕಾರ ಹಾಗೂ ಇಡೀ ದೇವಾಲಯವನ್ನ ಹೂಗಳಿಂದ ಅಲಂಕಾರ ಮಾಡಿದ್ದು ಭಕ್ತರ ಕಣ್ಮನ ಸೆಳೆಯಿತು. ಸಾವಿರಾರು ಭಕ್ತರು ಜಾತ್ರಾ ಮಹೋತ್ಸವದಲ್ಲಿ ಭಾಗಿಯಾಗಿದ್ದು, ಆದಿಚುಂಚನಗಿರಿ ಶಾಖಾ ಮಠ ಹಾಗೂ ದೇವಾಲಯದಲ್ಲಿ ಹಬ್ಬದ ವಾತಾವರಣವೇ ನಿರ್ಮಾಣವಾಗಿತ್ತು. ಭಕ್ತರಿಗೆ ಕಡಲೆಕಾಯಿ ಸೇರಿದಂತೆ ಪಾನಕ ಮಜ್ಜಿಗೆ ವಿತರಣೆ ಮಾಡಿದ್ದು ದೇವರ ದರ್ಶನ ಪಡೆದು ಪುನೀತರಾದ ಭಕ್ತರು ಶ್ರೀ ಗಳಿಂದ ಕಡಲೆಕಾಯಿ ಪಡೆದು ಸಂಭ್ರಮಿಸಿದರು.

  • ಕಡಲೆಕಾಯಿ ಪರಿಷೆಯಲ್ಲಿ ಕಳ್ಳಿಯರ ಕೈಚಳಕ

    ಕಡಲೆಕಾಯಿ ಪರಿಷೆಯಲ್ಲಿ ಕಳ್ಳಿಯರ ಕೈಚಳಕ

    ಚಿಕ್ಕಬಳ್ಳಾಪುರ: ಸೂಲಾಲಪ್ಪನ ದಿನ್ನೆ ವಿರಾಂಜನೇಯ ದೇಗುಲದ ಕಡಲೆಕಾಯಿ ಪರಿಷೆಯ ಜನಜಂಗುಳಿಯನ್ನು ಬಂಡವಾಳ ಮಾಡಿಕೊಂಡ ಖತರ್ನಾಕ್ ಕಳ್ಳಿಯರು ಕೈ ಚಳಕ ತೋರಿ, ಮಾಂಗಲ್ಯ ಸರ, ಚಿನ್ನಾಭರಣ ಕಳವು ಮಾಡಿದ್ದಾರೆ.

    ನಗರ ಹೊರವಲಯದ ಸೂಲಾಲಪ್ಪನ ದಿನ್ನೆ ಸಮೀಪದ ಆದಿಚುಂಚನಗಿರಿ ಶಾಖಾ ಮಠದ ಉಸ್ತುವಾರಿಯ ಶ್ರೀ ವಿರಾಂಜನೇಯ ದೇಗುಲದ ರಥೋತ್ಸವ ಹಾಗೂ ಕಡಲೆಕಾಯಿ ಪರಿಷೆ ವಿಜೃಂಭಣೆಯಿಂದ ನೆರವೇರಿತು. ಅದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ನಿರ್ಮಲನಂದನಾಥ ಸ್ವಾಮೀಜಿ ಭಕ್ತರ ಮೇಲೆ ಕಡಲೆಕಾಯಿ ಎರಚುವ ಮೂಲಕ ಪರಿಷೆಗೆ ಚಾಲನೆ ನೀಡಿದರು.

    ಈ ಕಡಲೆಕಾಯಿ ಪರಿಷೆಯಲ್ಲಿ ಐವರು ಮಹಿಳೆಯರು ಚಿನ್ನಾಭರರಣ ಕಳೆದುಕೊಂಡಿದ್ದಾರೆ. ಕೊಳವನಹಳ್ಳಿ ಗ್ರಾಮದ ರತ್ನಮ್ಮ ಎಂಬವರ 65 ಗ್ರಾಂ, ಸೊಪ್ಪಹಳ್ಳಿ ಗ್ರಾಮದ ಸರಸ್ವತಮ್ಮ ಅವರ 75 ಗ್ರಾಂ, ಕಂದವಾರ ಬಾಗಿಲಿನ ಮುನಿರತ್ನಮ್ಮ ಎಂಬವರ 35 ಗ್ರಾಂಮ ಹಾಗೂ ಮಂಜುಳಮ್ಮ ಎಂಬವರ 45 ಗ್ರಾಂ ಚಿನ್ನದ ಸರಗಳನ್ನು ಕಳ್ಳಿಯರು ಕದ್ದು ಪರಾರಿಯಾಗಿದ್ದಾರೆ.

    ಅಯ್ಯೋ ಆಂಜನೇಯ ನಿನ್ನ ಪೂಜೆಗೆ ಬಂದು ಹೀಗೆ ಆಗೋಯ್ತಲ್ಲ ಅಂತ ಚಿನ್ನಾಭರಣ ಕಳೆದುಕೊಂಡ ಮಹಿಳೆಯರು ಮನೆಯಲ್ಲಿ ಏನಪ್ಪಾ ಹೇಳೋದು ಅಂತ ಅಸಹಾಯಕರಾಗಿ ಕಣ್ಣೀರಿಟ್ಟರು. ಅದೃಷ್ಟವಶಾತ್ ಜಯಮ್ಮ ಎಂಬವರ ಸರವನ್ನು ಕಳ್ಳಿಯರು ಕತ್ತರಿಸಿದ್ದಾರೆ. ತಕ್ಷಣವೇ ಎಚ್ಚೆತ್ತುಕೊಂಡ ಜಯಮ್ಮ ಸರ ನೋಡಿಕೊಂಡಿದ್ದಾರೆ. ಈ ವೇಳೆ ಸರ ಕೈಗೆ ಸಿಕ್ಕಿದ್ದು, ಗದ್ದಲದಿಂದ ಹೊರಬಂದಿದ್ದಾರೆ.

    ನಂದಿಗಿರಿಧಾಮ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಕಳ್ಳಿಯರ ಖತರ್ನಾಕ್ ಕೆಲಸ ಈಗ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv