Tag: Kadamba Naval base

  • ಕದಂಬ ನೌಕಾನೆಲೆಗಾಗಿ ಭೂಮಿ ಕೊಟ್ಟವರಿಗೆ 30 ವರ್ಷದ ನಂತರ ಸಿಕ್ತು ಪರಿಹಾರ

    ಕದಂಬ ನೌಕಾನೆಲೆಗಾಗಿ ಭೂಮಿ ಕೊಟ್ಟವರಿಗೆ 30 ವರ್ಷದ ನಂತರ ಸಿಕ್ತು ಪರಿಹಾರ

    ಕಾರವಾರ: ಕದಂಬ ನೌಕಾನೆಲೆಗಾಗಿ ಭೂಮಿ ಕೊಟ್ಟವರಿಗೆ 30 ವರ್ಷಗಳ ನಂತರ ಕೊನೆಗೂ ಪರಿಹಾರ ಸಿಕ್ಕಿದೆ.

    ಎಷ್ಯಾದಲ್ಲೇ ಅತಿದೊಡ್ಡ ನೌಕಾನೆಲೆ ನಿರ್ಮಾಣಕ್ಕೆ, ಮನೆ, ಭೂಮಿ ಬಿಟ್ಟು ಕೊಟ್ಟು, ಬೇರೆಡೆ ವಾಸಿಸುತ್ತಿರುವ ಸಾವಿರಾರು ಕುಟುಂಬಗಳ ಪೈಕಿ, 443 ಕ್ಕೂ ಹೆಚ್ಚು ಕುಟುಂಬಗಳಿಗೆ ಇದುವರೆಗೂ ಸೂಕ್ತ ಪರಿಹಾರ ಸಿಕ್ಕಿರಲಿಲ್ಲ. ಅನೇಕ ಕುಟುಂಬಗಳು ನಾಲ್ಕೈದು ಎಕರೆ ಭೂಮಿ, ಕನಸಿನ ಮನೆ ಕಳೆದುಕೊಂಡು, ಕೂಲಿ ನಾಲಿ ಮಾಡುತ್ತ. ನೌಕಾ ನೆಲೆಯಲ್ಲಿ ಸಿ ಹಾಗೂ ಡಿ ದರ್ಜೆಯ ಕೆಲಸ ಮಾಡುತ್ತ ಜೀವನ ಮಾಡುತ್ತಿದ್ದರು. ತಮ್ಮ ನಿತ್ಯದ ಜೀವನ ಹಾಗೂ ಮಕ್ಕಳ ಭವಿಷ್ಯಕ್ಕಾಗಿ, ಸೂಕ್ತ ಪರಿಹಾರ ಕೊಡಬೇಕೆಂದು 1995 ರಿಂದ ಇಲ್ಲಿಯವರೆಗೂ ಹೋರಾಟ ನಡೆಸಿದ್ರು. ಕೊನೆಗೂ ಅವರ ಹೋರಾಟಕ್ಕೆ ಫಲ ಸಿಕ್ಕಿದ್ದು, ಪ್ರತಿ ಗುಂಟೆಗೆ 11,500 ರೂಪಾಯಿಯಂತೆ ಬಡ್ಡಿ ಸಮೇತ ಸುಮಾರು 57 ಕುಟುಂಬಗಳಿಗೆ 10.38 ಕೋಟಿ ರೂಪಾಯಿ ಹಣ, ನೇರವಾಗಿ ಅವರ ಅಕೌಂಟ್‌ಗೆ ಜಮೆ ಆಗಿದೆ.

    1985 ರಲ್ಲಿ ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದಿಂದ 5 ಕಿ.ಮೀ ಅಂತರದಲ್ಲಿರುವ ಜಾಗದಲ್ಲಿ ಅಂದಿನ ಪ್ರಧಾನಿ ರಾಜೀವ ಗಾಂಧಿ ಅಡಿಗಲ್ಲು ಹಾಕಿದ್ದರು. 1995 ರಲ್ಲಿ ಸುಮಾರು 14 ಗ್ರಾಮಗಳ 4800 ಕುಟುಂಬಗಳನ್ನು ಬೇರೆ ಕಡೆ ಸ್ಥಳಾಂತರಿಸಲಾಗಿತ್ತು. ಅಂದು ಪ್ರತಿ ಗುಂಟೆ ಭೂಮಿಗೆ ಕೇವಲ 1,500 ರೂಪಾಯಿ ಪರಿಹಾರ ಕೊಡಲಾಗಿತ್ತು. 2008 ರ ಸುಪ್ರಿಂ ಕೊರ್ಟ್ ತೀರ್ಪಿನ ಪ್ರಕಾರ ಪ್ರತಿ ಗುಂಟೆಗೆ 11,500 ರೂಪಾಯಿ ಪರಿಹಾರ ಕೊಡಬೇಕೆಂದು ಆದೇಶ ಮಾಡಲಾಯ್ತು. ಆಗ ಸಾವಿರಾರು ಕುಟುಂಬಗಳಿಗೆ ಗುಂಟೆಗೆ 11,500 ರೂಪಾಯಿಯಂತೆ ಪರಿಹಾರ ಸಿಕ್ಕಿತ್ತು. ಆದರೆ, ಸುಮಾರು 443 ಪ್ರಕರಣಗಳು ಕಾರವಾರ ಎಸಿ ಕೋರ್ಟ್‌ನಲ್ಲಿ ಪೆಂಡಿಂಗ್ ಇದ್ದವು. ಆ ಪೈಕಿ 333 ಪ್ರಕರಣಗಳ ಕಳೆದ ಆರು ತಿಂಗಳ ಹಿಂದೆ ಕ್ಲಿಯರ್ ಆಗಿ, ಕೇಂದ್ರ ರಕ್ಷಣಾ ಇಲಾಖೆಯಿಂದ ಸದ್ಯ 57 ಪ್ರಕರಣಗಳಿಗೆ ಒಟ್ಟು 10.38 ಕೋಟಿ ರೂಪಾಯಿ ಸಿಕ್ಕಿದ್ದು, ಇನ್ನುಳಿದ ಪ್ರಕರಣಗಳಿಗೆ ಸಂಬಂಧಪಟ್ಟಂತೆ 60 ಕೋಟಿ ರೂಪಾಯಿ ಪರಿಹಾರ ಹಣ ಬಾಕಿ ಉಳಿದಿದೆ.

    ಕಳೆದ 30 ವರ್ಷಗಳಿಂದ ದೇಶಕ್ಕಾಗಿ ಭೂಮಿ ಕಳೆದುಕೊಂಡು ಸೂಕ್ತ ಪರಿಹಾರಕ್ಕೆ ಪರಿತಪಿಸುತ್ತಿದ್ದ ಸುಮಾರು 57 ಕುಟುಂಬಗಳಿಗೆ ಕೊನೆಗೂ ಪರಿಹಾರ ಕೊಡಿಸುವುದರಲ್ಲಿ ಉತ್ತರ ಕನ್ನಡ ಜಿಲ್ಲಾಡಳಿತ ಯಶಸ್ವಿ ಆಗಿದೆ. ಇನ್ನುಳಿದ ಕುಟುಂಬಗಳಿಗೂ ಪರಿಹಾರ ಕೊಡಬೇಕಿದೆ.

  • ಕಾರವಾರ ಬಂದರು, ನೌಕಾನೆಲೆಯಲ್ಲಿ ಹೈ ಅಲರ್ಟ್ – ಕ್ರೂಶಿಪ್‌ನಲ್ಲಿ ಚೀನಾ, ಪಾಕಿಸ್ತಾನ ಸಿಬ್ಬಂದಿಗೆ ನಿರ್ಬಂಧ

    ಕಾರವಾರ ಬಂದರು, ನೌಕಾನೆಲೆಯಲ್ಲಿ ಹೈ ಅಲರ್ಟ್ – ಕ್ರೂಶಿಪ್‌ನಲ್ಲಿ ಚೀನಾ, ಪಾಕಿಸ್ತಾನ ಸಿಬ್ಬಂದಿಗೆ ನಿರ್ಬಂಧ

    ಕಾರವಾರ: ಪಾಕಿಸ್ತಾನದ ಉಗ್ರರ ನೆಲೆಯ ಮೇಲೆ ಭಾರತ ಆಪರೇಷನ್ ಸಿಂಧೂರ (Operation Sindoor) ಕಾರ್ಯಾಚರಣೆ ಬೆನ್ನಲ್ಲೇ ಕಾರವಾರದಲ್ಲಿ (Karwar) ಕದಂಬ ನೌಕಾನೆಲೆ (Kadamba Naval Base) ಹಾಗೂ ಬಂದರಿನಲ್ಲಿ ಭದ್ರತೆ ಹೆಚ್ಚಿಸಲಾಗಿದೆ.

    ಭಾರತೀಯ ತಟರಕ್ಷಕ ದಳ ಕೂಡ ಅರಬ್ಬಿ ಸಮುದ್ರದಲ್ಲಿ ಕೂಂಬಿಗ್ ಕಾರ್ಯಾಚರಣೆ ಹೆಚ್ಚಿಸಿದ್ದು, ಕಾರವಾರದ ಬಂದರಿಗೆ ಬರುವ ಅನ್ಯ ದೇಶದ ಕ್ರೂಶಿಪ್‌ನಲ್ಲಿ ಪಾಕಿಸ್ತಾನ, ಚೀನಾ ದೇಶದ ಸಿಬ್ಬಂದಿಗಳಿದ್ದರೆ ಅಂತಹ ಹಡಗುಗಳಿಗೂ ನಿರ್ಬಂಧ ವಿಧಿಸಲಾಗಿದೆ. ಇದನ್ನೂ ಓದಿ: ರಾಷ್ಟ್ರಪತಿ ಭೇಟಿಯಾಗಿ ‘ಆಪರೇಷನ್‌ ಸಿಂಧೂರ’ ಬಗ್ಗೆ ವಿವರಿಸಿದ ಮೋದಿ

    ಕರಾವಳಿ ಕಾವಲು ಪಡೆ ಪೊಲೀಸರು ಬಂದರಿಗೆ ಬಂದ ಹಡಗಿನಲ್ಲಿ ತೀವ್ರ ತಪಾಸಣೆ ನಡೆಸುತ್ತಿದ್ದಾರೆ. ಅಲ್ಲದೇ ಮೀನುಗಾರಿಕಾ ಬೋಟ್‌ಗಳನ್ನು ಸಹ ತಪಾಸಣೆ ಮಾಡಲಾಗುತ್ತಿದೆ. 12 ನಾಟಿಕಲ್ ಮೈಲೂ ದೂರದಿಂದ ಹೊರ ಹೋಗದಂತೆ ಮೀನುಗಾರರಿಗೆ ಸೂಚನೆ ನೀಡಲಾಗಿದೆ. 12 ನಾಟಿಕಲ್ ಮೈಲು ದೂರದಲ್ಲೇ ಮೀನುಗಾರಿಕೆ ನಡೆಸಲು ಮೀನುಗಾರಿಕಾ ಇಲಾಖೆ ಸೂಚನೆ ನೀಡಿದ್ದು, ಆಳ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳದಂತೆ ಸೂಚನೆ ಕೊಟ್ಟಿದೆ. ಇದನ್ನೂ ಓದಿ: ಭಾರತದ ವಿರುದ್ಧ ಪ್ರತಿದಾಳಿಗೆ ಪಾಕ್‌ ಕುತಂತ್ರ – ಸೇನೆಗೆ ಪರಮಾಧಿಕಾರ ನೀಡಿದ ಪ್ರಧಾನಿ ಶೆಹಬಾಜ್ ಶರೀಫ್

  • ಪಾಕಿಸ್ತಾನದ ಬೇಹುಗಾರಿಕಾ ಏಜೆನ್ಸಿಯಿಂದ ಕದಂಬ ನೌಕಾ ನೆಲೆಯ ಯುದ್ಧ ಹಡಗುಗಳ ಮಾಹಿತಿ ಪಡೆಯಲು ಯತ್ನ!

    ಪಾಕಿಸ್ತಾನದ ಬೇಹುಗಾರಿಕಾ ಏಜೆನ್ಸಿಯಿಂದ ಕದಂಬ ನೌಕಾ ನೆಲೆಯ ಯುದ್ಧ ಹಡಗುಗಳ ಮಾಹಿತಿ ಪಡೆಯಲು ಯತ್ನ!

    – ಇಬ್ಬರು ನೌಕಾ ನೆಲೆಯ ಸಿಬ್ಬಂದಿಗೆ ಕರೆ

    ಕಾರವಾರ: ಪಹಲ್ಗಾಮ್‌ ದಾಳಿಯ (Pahalgam Terrorist Attack) ಬಳಿಕ ಕೇಂದ್ರ ಸರ್ಕಾರ ತೆಗೆದುಕೊಂಡ ನಿರ್ಧಾರಗಳು ಪಾಕಿಸ್ತಾನವನ್ನು ತತ್ತರಿಸುವಂತೆ ಮಾಡಿದೆ. ಆದರೀಗ ಕುತಂತ್ರಿ ಪಾಕಿಸ್ತಾನ ತನ್ನ ಬೇಹುಗಾರಿಕಾ ಏಜಂಟರನ್ನು ಬಳಸಿ ಕಾರವಾರದ ಕದಂಬ ನೌಕಾನೆಲೆಯ (Kadamba Naval Base) ಯುದ್ಧ ನೌಕೆಗಳು ಹಾಗೂ ವಿಶಾಖಪಟ್ಟಣಂ ನಲ್ಲಿರುವ ನೌಕೆಗಳ ಮಾಹಿತಿ ಪಡೆಯಲು ಯತ್ನಿಸಿದೆ ಎಂಬ ಮಾಹಿತಿ ಬೆಳಕಿಗೆ ಬಂದಿದೆ.

    ಭಾರತೀಯ ನೌಕಾದಳದ ಅಧಿಕಾರಿಗಳ ಹೆಸರು ಬಳಸಿ ಕರೆ ಮಾಡುವ ಮೂಲಕ ಐಎನ್‌ಎಸ್ ವಿಕ್ರಾಂತ್ (INS Vikrant) ಹಾಗೂ ಇತರ ಯುದ್ಧನೌಕೆಯ ಮಾಹಿತಿ ಪಡೆಯಲು ಯತ್ನ ನಡೆಸುತ್ತಿರುವುದು ಉನ್ನತ ಮೂಲಗಳಿಂದ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಯುರೋಪಿಯನ್ ದೇಶಗಳಿಂದ ಪಾಕ್‌ಗೆ ಶಾಕ್ – ಪಾಕಿಸ್ತಾನ ವಾಯು ಪ್ರದೇಶದಲ್ಲಿ ವಿಮಾನ ಹಾರಾಟಕ್ಕೆ ಹಿಂದೇಟು

    ಕಾರವಾರ (Karwar) ಹಾಗೂ ವಿಶಾಖಪಟ್ಟಣಂ ನಲ್ಲಿ ಕೆಲಸ ಮಾಡುವ ಇಬ್ಬರು ನೌಕಾದಳದ ಸಿಬ್ಬಂದಿಗೆ ಪಾಕಿಸ್ತಾನದ ಏಜೆಂಟರು (Pakistan Agent) ಕರೆ ಮಾಡಿ ತಾವು ನೌಕಾದಳದ ಅಧಿಕಾರಿಗಳು ಎಂದು ಹೇಳಿ ಐಎನ್‌ಎಸ್ ವಿಕ್ರಾಂತ್, ಐಎನ್‌ಎಸ್ ವಿಕ್ರಮಾದಿತ್ಯ, ಐಎನ್‌ಎಸ್ ಸುಭದ್ರ ಮುಂತಾದವುಗಳ ಮಾಹಿತಿ ಪಡೆಯಲು ಯತ್ನಿಸಿದ್ದಾರೆ. ಈ ಬಗ್ಗೆ ನೌಕಾದಳದ ಸಿಬ್ಬಂದಿ ಮೇಲಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಅರ್ಜೆಂಟೀನಾದಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ – ಸುನಾಮಿ ಎಚ್ಚರಿಕೆ

    ಇನ್ನೂ ಕೆಲ ಅಧಿಕಾರಿಗಳನ್ನು ಹನಿಟ್ರ್ಯಾಪ್‌ ಮಾಡಲು ಸಹ ಪ್ರಯತ್ನ ಪಟ್ಟಿರುವುದು ಬೆಳಕಿಗೆ ಬಂದಿದೆ. ಎಚ್ಚೆತ್ತ ಅಧಿಕಾರಿಗಳು ನೌಕಾದಳದ ಯಾವ ಮಾಹಿತಿಯನ್ನೂ ನೀಡದಂತೆ ಸಂಬಂಧಪಟ್ಟ ನೌಕಾ ಸಿಬ್ಬಂದಿಗೆ ಸೂಚನೆ ನೀಡಿದ್ದಾರೆ. ಅಲ್ಲದೇ ಈ ಬಗ್ಗೆ ಕಾರವಾರದ ನೌಕಾದಳದ ಅಧಿಕಾರಿಗಳ ಗ್ರೂಪ್‌ನಲ್ಲಿ ಸಂದೇಶ ಹಾಕಿದ್ದು ಎಚ್ಚರಿಕೆಯಿಂದ ಇರಲು ತಿಳಿಸಲಾಗಿದೆ.

    2024ರ ಆಗಸ್ಟ್‌ನಲ್ಲಿ ಹಣಕ್ಕಾಗಿ ಕದಂಬ ನೌಕಾನೆಲೆಯ ಹಾಗೂ ವಿಕ್ರಮಾಧಿತ್ಯ ನೌಕೆಯ ಮಾಹಿತಿ ಹಾಗೂ ಫೋಟೋ ಹಂಚಿಕೊಂಡಿದ್ದ ಕಾರವಾರ ತಾಲೂಕಿನ ತೋಡೂರು ಗ್ರಾಮದ ಸುನೀಲ್ ನಾಯ್ಕ್, ಮುದ್ಗಾ ಗ್ರಾಮದ ವೇತನ್ ರಂಡೇಲ್ ಮತ್ತು ಹಳವಳ್ಳಿ ಗ್ರಾಮದ ಅಕ್ಷಯ್ ರವಿ ನಾಯ್ಕ್ ಎಂಬ ಮೂರು ಜನರನ್ನು ಎನ್‌ಐಎ ಬಂಧಿಸಿತ್ತು. ಇದನ್ನೂ ಓದಿ: ವಿದೇಶಿ ಕಂಪನಿಗಳಿಂದಲೂ ಶಾಕ್‌ – ಭಾರತಕ್ಕೆ ಬಿಸಿ ಮುಟ್ಟಿಸಲು ಹೋಗಿ ಕೈ ಸುಟ್ಟುಕೊಂಡ ಪಾಕ್‌!

    ಈ ಘಟನೆ ನಂತರ ಕದಂಬ ನೌಕಾನೆಲೆಯ ವ್ಯಾಪ್ತಿಯೊಳಗೆ ಮೊಬೈಲ್ ನನ್ನು ಸಂಪೂರ್ಣ ನಿಷೇಧ ಮಾಡಲಾಗಿದೆ.

  • ಕದಂಬ ನೌಕಾನೆಲೆ ವ್ಯಾಪ್ತಿಯಲ್ಲಿ ಟ್ರ‍್ಯಾಕರ್ ಅಳವಡಿಸಿದ ರಣಹದ್ದು ಪತ್ತೆ – ಕೊನೆಗೂ ಸತ್ಯ ಬಯಲು

    ಕದಂಬ ನೌಕಾನೆಲೆ ವ್ಯಾಪ್ತಿಯಲ್ಲಿ ಟ್ರ‍್ಯಾಕರ್ ಅಳವಡಿಸಿದ ರಣಹದ್ದು ಪತ್ತೆ – ಕೊನೆಗೂ ಸತ್ಯ ಬಯಲು

    ಕಾರವಾರ: ನಗರದ ಕದಂಬ ನೌಕಾನೆಲೆ ವ್ಯಾಪ್ತಿಯಲ್ಲಿ ಬೇಹುಗಾರಿಕೆ ಆತಂಕ ಸೃಷ್ಠಿಸಿದ್ದ ಜಿ.ಪಿ.ಎಸ್ ಟ್ರಾನ್ಸ್‌ಮೀಟರ್‌, ಟ್ಯಾಗ್ ಹೊಂದಿದ್ದ ರಣಹದ್ದಿನ ರಹಸ್ಯ ಕೊನೆಗೂ ಬಯಲಾಗಿದೆ.

    ಉತ್ತರ ಕನ್ನಡ (Uttara Kannada) ಜಿಲ್ಲೆಯ ಕಾರವಾರದ (Karwar) ಕದಂಬ ನೌಕಾನೆಲೆಯ ವ್ಯಾಪ್ತಿಯಲ್ಲಿ ಈ ಹಿಂದೆ ರಾತ್ರಿ ವೇಳೆ ಡ್ರೋನ್ ಕ್ಯಾಮೆರಾ ಬಳಸಿ ನೌಕಾನೆಲೆಯ ಚಿತ್ರಗಳನ್ನು ಆಗುಂತಕರು ಸೆರೆಹಿಡಿದ ಪ್ರಕರಣ ಬೆಳಕಿಗೆ ಬಂದಿತ್ತು. ಇದರ ಬೆನ್ನಲ್ಲೇ ಕೋಡಿಭಾಗ್‌ನ ನದಿಭಾಗ್ ನೌಕಾನೆಲೆ ಸರಹದ್ದು ಸುತ್ತಲೂ ಹಾರಾಡುತ್ತಿದ್ದ ರಣಹದ್ದು ಬೆನ್ನಲ್ಲೇ ಟ್ರ‍್ಯಾಕರ್ ಅಳವಡಿಸಲಾಗಿರುವುದು ಪತ್ತೆಯಾಗಿತ್ತು. ಇದೀಗ ಅದರ ಸತ್ಯ ಕೊನೆಗೂ ಬಯಲಾಗಿದೆ.ಇದನ್ನೂ ಓದಿ: ಬೆಂಗಳೂರು | ಬಿಎಂಟಿಸಿ ಚಾಲಕನ ಮೇಲೆ ಬೈಕ್ ಸವಾರನಿಂದ ಹಲ್ಲೆ

    ಕೈಗಾ ಹಾಗೂ ನೌಕಾದಳ ಇರುವ ಭೀತಿಯಿಂದ ಪೊಲೀಸರು ಹಾಗೂ ಗುಪ್ತಚರ ಇಲಾಖೆಯವರು ಇದರ ಬಗ್ಗೆ ಮಾಹಿತಿ ಕಲೆಹಾಕಲು ಹದ್ದು ಇದ್ದ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ಮಾಡಿದ್ದರು. ಇನ್ನು ತಾವು ತಂದ ಕ್ಯಾಮೆರಾ ಮೂಲಕ ಝೂಮ್ ಮಾಡಿದಾಗ ಟ್ರಾನ್ಸ್‌ಮೀಟರ್‌ ಮೇಲೆ Mahaforest.gov.in ಎಂದು ಬರೆದಿದ್ದು, ಬಾಂಬೆ ನ್ಯಾಚುರಲ್ ಹಿಸ್ಟರಿ ಸೊಸೈಟಿಯ ಹೆಸರು ಸಿಕ್ಕಿದೆ.

    ಸಂಶೋಧನೆ ಉದ್ದೇಶದಿಂದ ಬಳಸಲಾದ ರಣಹದ್ದು ಇದಾಗಿದ್ದು, ತಾಡೋಬಾ-ಅಂಧೇರಿ ಟೈಗರ್ ರಿಸರ್ವ್ನಿಂದ ಈ ಹದ್ದನ್ನು ಹಾರಿಸಲಾಗಿದೆ. ರಣಹದ್ದು ಜೀವನದ ಬಗ್ಗೆ ಅಧ್ಯಯನ ಉದ್ದೇಶದಿಂದ ಟ್ರ‍್ಯಾಕರ್ ಟ್ರಾನ್ಸ್‌ಮೀಟರ್‌ ಇಟ್ಟು ಹಾರಿಸಲಾಗಿತ್ತು. ಸದ್ಯ ರಣಹದ್ದಿಗೆ ಅರಣ್ಯ ಇಲಾಖೆ ಆಹಾರ ನೀಡಲು ಮುಂದಾಗಿದ್ದು, ಸುರಕ್ಷಿತವಾಗಿದೆ.

    ಈ ಹಿಂದೆ ಕದಂಬ ನೌಕಾನೆಲೆಯಲ್ಲಿ ಅಧಿಕಾರಿಗಳು ಹಾಗೂ ಸ್ಥಳೀಯ ಕಾರ್ಮಿಕರನ್ನು ಬಳಸಿ ಶತ್ರು ರಾಷ್ಟ್ರವು ಕದಂಬ ನೌಕಾನೆಲೆಯ 2ನೇ ಹಂತದ ಕಾಮಗಾರಿ ಹಾಗೂ ಯುದ್ಧ ಹಡಗುಗಳ ಬಗ್ಗೆ ಮಾಹಿತಿ ಪಡೆದಿದ್ದರು. ಈ ಪ್ರಕರಣ ಸಂಬಂಧ 5 ಜನರನ್ನು ಬಂಧಿಸಲಾಗಿತ್ತು. ನಂತರ ರಾತ್ರಿ ನಿಷೇಧಿತ ನೌಕಾನೆಲೆಯ ಪ್ರದೇಶದಲ್ಲಿ ಡ್ರೋನ್ ಕ್ಯಾಮೆರಾ ಹಾರಿಸಿದ್ದು, ಇದರ ಬೆನ್ನಲ್ಲೇ ಟ್ರ‍್ಯಾಕರ್ ಅಳವಡಿಸಿದ ಹದ್ದು ಹಾರಾಟ ಮಾಡಿರುವುದು ಸಾಕಷ್ಟು ಅನುಮಾನಕ್ಕೆ ಎಡೆಮಾಡಿಕೊಟ್ಟಿತ್ತು.ಇದನ್ನೂ ಓದಿ: ಮನೆ ಮನೆಗಳಿಂದ ಕಸ ಸಂಗ್ರಹಕ್ಕೆ ಶುಲ್ಕ ವಸೂಲಿ – ರಾಜ್ಯ ಸರ್ಕಾರಕ್ಕೆ ಬಿಬಿಎಂಪಿಯಿಂದ ಪ್ರಸ್ತಾವನೆ

  • ಕಾರವಾರ ಕದಂಬ ನೌಕಾನೆಲೆ ವ್ಯಾಪ್ತಿಯಲ್ಲಿ ಟ್ರ್ಯಾಕರ್‌ ಅಳವಡಿಸಿದ ರಣ ಹದ್ದು ಪತ್ತೆ!

    ಕಾರವಾರ ಕದಂಬ ನೌಕಾನೆಲೆ ವ್ಯಾಪ್ತಿಯಲ್ಲಿ ಟ್ರ್ಯಾಕರ್‌ ಅಳವಡಿಸಿದ ರಣ ಹದ್ದು ಪತ್ತೆ!

    ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕದಂಬ ನೌಕಾನೆಲೆಯ (Kadamba Naval Base) ವ್ಯಾಪ್ತಿಯಲ್ಲಿ ಈ ಹಿಂದೆ ರಾತ್ರಿ ವೇಳೆ ದ್ರೋಣ್ ಕ್ಯಾಮರಾ ಬಳಸಿ ನೌಕಾನೆಲೆಯ ಚಿತ್ರಗಳನ್ನು ಆಗುಂತಕರು ಸೆರೆಹಿಡಿದ ಪ್ರಕರಣ ಬೆಳಕಿಗೆ ಬಂದಿತ್ತು. ಈ ಬೆನ್ನಲ್ಲೇ ನೌಕಾ ನೆಲೆಯ ಸರಹದ್ದು ವ್ಯಾಪ್ತಿಯಲ್ಲಿ ಟ್ರ್ಯಾಕರ್‌ ಅಳವಡಿಸಿದ ರಣ ಹದ್ದು (War Eagle) ಪ್ರತ್ಯಕ್ಷವಾಗಿದೆ.

    ಕಾರವಾರದ ನದಿ ದಡದಲ್ಲಿ ಸ್ಥಳೀಯರು ಇದರ ಫೋಟೋ ತೆಗೆದು ನೌಕಾದಳದ ಅಧಿಕಾರಿಗಳಿಗೆ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ರಣಹದ್ದಿ‌ನ ದೇಹದ ಮೇಲೆ ಟ್ರ್ಯಾಕರ್‌ (Tracker) ಅಳವಡಿಸಲಾಗಿದ್ದು, ಕಾಲುಗಳಿಗೆ ಟೇಪ್‌ಗಳ ಬಳೆಗಳನ್ನು ಅಳವಡಿಸಲಾಗಿದೆ. ಹೀಗಾಗಿ ರಣಹದ್ದಿ‌ನ ಮೂಲಕ ಬೇಹುಗಾರಿಕೆಯನ್ನು ಶತ್ರು ರಾಷ್ಟ್ರಗಳು ನಡೆಸುತ್ತಿರಬಹುದೇ ಎಂಬ ಸಂಶಯ ವ್ಯಕ್ತವಾಗಿದೆ. ಈ ಹದ್ದನ್ನು ಹಿಡಿಯಲು ಪ್ರಯತ್ನಿಸಿದರೂ ಸಿಗದೇ ಹಾರಿ ಹೋಗಿದೆ. ಇದನ್ನೂ ಓದಿ: ಅಬಕಾರಿಯಲ್ಲಿ 700 ಕೋಟಿ ಹಣ ಪಡೆಯೋಕಾಗುತ್ತಾ? ಸುಳ್ಳಿ ಹೇಳೋದು ಪ್ರಧಾನಿಗೆ ಅಗೌರವ – ಸಿಎಂ

    ಈ ಹಿಂದೆ ಕದಂಬ ನೌಕಾನೆಲೆಯಲ್ಲಿ ಅಧಿಕಾರಿಗಳು ಹಾಗೂ ಸ್ಥಳೀಯ ಕಾರ್ಮಿಕರನ್ನು ಬಳಸಿ ಶತ್ರು ರಾಷ್ಟ್ರವು ಕದಂಬ ನೌಕಾನೆಲೆಯ 2ನೇ ಹಂತದ ಕಾಮಗಾರಿ ಹಾಗೂ ಯುದ್ಧ ಹಡಗುಗಳ ಬಗ್ಗೆ ಮಾಹಿತಿ ಪಡೆದಿದ್ದರು. ಈ ಪ್ರಕರಣ ಸಂಬಂಧ 5 ಜನರನ್ನು ಬಂಧಿಸಲಾಗಿತ್ತು. ನಂತರ ರಾತ್ರಿ ನಿಷೇಧಿತ ನೌಕಾನೆಲೆಯ ಪ್ರದೇಶದಲ್ಲಿ ದ್ರೋಣ್‌ ಕ್ಯಾಮೆರಾ ಹಾರಿಸಿದ್ದು ಇದರ ಬೆನ್ನಲ್ಲೇ ಟ್ರ್ಯಾಕರ್‌ ಅಳವಡಿಸಿದ ಹದ್ದು ಹಾರಾಟ ಮಾಡಿರುವುದು ಸಾಕಷ್ಟು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.

    ಕೆಲವರು ಸಂಶೋಧಕರು ಗಣತಿಗಾಗಿ ಈ ರೀತಿ ಟ್ರ್ಯಾಕರ್‌ ಹಾಕಿರಬಹುದಾ ಅಥವಾ ಇನ್ಯಾವುದೇ ಕಾರಣಕ್ಕಾ ಎಂಬುದರ ಬಗ್ಗೆ ತನಿಖೆ ನಡೆಯುತಿದ್ದು ಹೆಚ್ಚಿನ ಮಾಹಿತಿ ಹೊರಬರಬೇಕಿದೆ. ಇದನ್ನೂ ಓದಿ: 25 ಲಕ್ಷ ಉದ್ಯೋಗಾವಕಾಶ, 1 ಟ್ರಿಲಿಯನ್ ಡಾಲರ್‌ ಆರ್ಥಿಕ ಗುರಿ, ಉದ್ಯಮಿಗಳಿಗೆ ಬೆಂಬಲ – ಮಹಾರಾಷ್ಟ್ರಕ್ಕೆ ಬಿಜೆಪಿ 25 ಗ್ಯಾರಂಟಿ

  • ಕದಂಬ ನೌಕಾನೆಲೆ ನಿಷೇಧಿತ ಪ್ರದೇಶದಲ್ಲಿ ರಾತ್ರಿ ಡ್ರೋನ್ ಹಾರಾಟ – ಗುಪ್ತಚರ ಇಲಾಖೆಯಿಂದ ತನಿಖೆ

    ಕದಂಬ ನೌಕಾನೆಲೆ ನಿಷೇಧಿತ ಪ್ರದೇಶದಲ್ಲಿ ರಾತ್ರಿ ಡ್ರೋನ್ ಹಾರಾಟ – ಗುಪ್ತಚರ ಇಲಾಖೆಯಿಂದ ತನಿಖೆ

    ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕದಂಬ ನೌಕಾನೆಲೆಯ (Kadamba Naval Base) ಭಾಗದಲ್ಲಿ ರಾತ್ರಿ ಅಪರಿಚಿತ ಡ್ರೋನ್ ಕ್ಯಾಮೆರಾ (Drone Camera) ಹಾರಿಸಲಾಗಿದೆ.

    ನೌಕಾನೆಲೆಯ ಸರಹದ್ದಿನ ಭಾಗದಲ್ಲಿ ನಿಷೇಧವಿದ್ದರೂ ಡ್ರೋನ್ ಹಾರಿಸಿರುವುದು ಹಲವು ಅನುಮಾನ ಮೂಡಿಸಿದೆ.

    ಇತ್ತೀಚೆಗೆ ಹನಿಟ್ರಾಪ್ (Honey Trap) ಮೂಲಕ ಕದಂಬ ನೌಕಾನೆಲೆಯ ಫೋಟೋ ಮತ್ತು ಮಾಹಿತಿಯನ್ನು ಹೊರ ದೇಶದ ಗುಪ್ತಚರ ಸಂಸ್ಥೆಗೆ ನೀಡಿರುವ ಆರೋಪದಡಿ ರಾಷ್ಟ್ರೀಯ ತನಿಖಾ ದಳ(NIA) ಮೂವರನ್ನು ವಶಕ್ಕೆ ಪಡೆದು ತನಿಖೆ ನಡೆಸಿತ್ತು. ಇದರ ಬೆನ್ನಲ್ಲೇ ವಕ್ಕನಳ್ಳಿ ಭಾಗದಿಂದ ಐಎನ್ಎಸ್ ಪತಾಂಜಲಿ ಆಸ್ಪತ್ರೆ ಹಿಂಬದಿಯಿಂದ ಬಿಣಗಾ ಚತುಷ್ಪಥ ಹೆದ್ದಾರಿಯ ಸುರಂಗ ಮಾರ್ಗದವರೆಗೂ ಡ್ರೋನ್ ಹಾರಿದ್ದು ಬೈಕ್ ಅಥವಾ ಸನ್ ರೂಫ್ ಕಾರಿನ ಮೂಲಕ ತೆರಳುತ್ತಾ ಈ ಡ್ರೋನ್ ನಿಯಂತ್ರಣ ಮಾಡಿರುವ ಸಂಶಯ ವ್ಯಕ್ತವಾಗಿದೆ.

    ಡ್ರೋನ್ ಹಾರಿಸಿದ ಕುರಿತು ಸ್ಥಳೀಯರೊಬ್ಬರ ಮೊಬೈಲಿನಲ್ಲಿ ಈ ದೃಶ್ಯ ಸೆರೆಯಾಗಿದ್ದು, ಅದನ್ನು ನೌಕಾಪಡೆ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಸುಮಾರು 2-3 ಕಿ.ಮೀ ದೂರದಿಂದ ಸೆರೆಯಾಗುವ ನೈಟ್ ವಿಶನ್ ಡ್ರೋನ್ ಬಳಕೆ ಮಾಡಿರುವುದು ದೃಢಪಟ್ಟಿದೆ. ಇದನ್ನೂ ಓದಿ: ಪಾಕ್‌ ಸೇರಿ ಇತರ ವಿದೇಶಿ ಏಜೆಂಟರಿಗೆ ನೌಕಾದಳದ ರಹಸ್ಯ ಫೋಟೋ ಹಂಚಿಕೆ – NIAಯಿಂದ ಮೂವರು ವಶಕ್ಕೆ

    ಹೆಚ್ಚಿನದಾಗಿ 600 ಮೀ. ಅಥವಾ 1,200 ಮೀ. ದೂರದವರೆಗೆ ಹಾರಾಡುವ ಸಾಮರ್ಥ್ಯದ ಡ್ರೋನ್ ಸ್ಥಳೀಯವಾಗಿ ಬಳಕೆಯಾಗುವುದು ಸಾಮಾನ್ಯ. ಆದರೆ ಈ ಡ್ರೋನ್ ಸುಮಾರು 3 ಕಿ.ಮೀ.ಗೂ ಹೆಚ್ಚು ದೂರ ಹಾರಿದ್ದು ನೌಕಾದಳ ಅಧಿಕಾರಿಗಳು, ಸ್ಥಳೀಯ ಪೊಲಿಸರು ಹಾಗೂ ಗುಪ್ತಚರ ಸಂಸ್ಥೆ ತನಿಖೆಗಿಳಿದಿದೆ.

    ಕೇಂದ್ರ ಗುಪ್ತಚರ ಇಲಾಖೆ ಅಧಿಕಾರಿಗಳು ಹಾಗೂ ನೌಕಾದಳದ ಅಧಿಕಾರಿಗಳು ಅರಣ್ಯ ಇಲಾಖೆ, ಹೆದ್ದಾರಿ ಕಾಮಗಾರಿ ನಡೆಸುತ್ತಿರುವ ಐಆರ್‌ಬಿ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವನ್ನು ಸಂಪರ್ಕಿಸಿದಾಗ ನಾವು ಡ್ರೋನ್‌ ಬಳಸಿಲ್ಲ ಎಂದು ಹೇಳಿವೆ. ಹೀಗಾಗಿ ಈಗ ನೈಟ್ ವಿಷನ್ ಡ್ರೋನ್ ಬಳಸಿದವರು ಯಾರು ಎನ್ನುವ ಬಗ್ಗೆ ತನಿಖೆ ಆರಂಭಿಸಲಾಗಿದೆ.

    ನೌಕಾದಳದ 3ನೇ ಹಂತದ ಕಾಮಗಾರಿ ಮುಗಿಯುವ ಹಂತದಲ್ಲಿದ್ದು, ಈಗ ನಿಷೇಧಿತ ಪ್ರದೇಶದಲ್ಲಿ ಡ್ರೋನ್ ಹಾರಿರುವುದು ಹಲವು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.

  • ನೌಕಾನೆಲೆ ನಿರಾಶ್ರಿತರನ್ನು ರಾಷ್ಟ್ರೀಯ ಸಂತ್ರಸ್ತರೆಂದು ಘೋಷಿಸಿ: ರಾಜನಾಥ್ ಸಿಂಗ್‍ಗೆ ಶಾಸಕಿ ರೂಪಾಲಿ ನಾಯ್ಕ ಮನವಿ

    ನೌಕಾನೆಲೆ ನಿರಾಶ್ರಿತರನ್ನು ರಾಷ್ಟ್ರೀಯ ಸಂತ್ರಸ್ತರೆಂದು ಘೋಷಿಸಿ: ರಾಜನಾಥ್ ಸಿಂಗ್‍ಗೆ ಶಾಸಕಿ ರೂಪಾಲಿ ನಾಯ್ಕ ಮನವಿ

    – ಕುಟುಂಬಕ್ಕೆ ಉದ್ಯೋಗ ನೀಡಿ

    ಕಾರವಾರ: ಕಾರವಾರದ ಅರಗಾದಲ್ಲಿರುವ ಕದಂಬ ನೌಕಾನೆಲೆಗೆ ತಮ್ಮ ಜಮೀನನ್ನು ನೀಡಿದ ನಿರಾಶ್ರಿತರನ್ನು ರಾಷ್ಟ್ರೀಯ ಸಂತ್ರಸ್ತರು ಎಂದು ಘೋಷಣೆ ಮಾಡಿ. ಪ್ರತಿ ಕುಟುಂಬಕ್ಕೆ ಒಂದು ಉದ್ಯೋಗ ಹಾಗೂ ಸ್ಥಳೀಯರಿಗೆ ಉದ್ಯೋಗಾವಕಾಶ ಒದಗಿಸಲು ಶಿಪ್ ಯಾರ್ಡ ನಿರ್ಮಿಸಲು ಕ್ರಮ ಕೈಗೊಳ್ಳುವಂತೆ ಇಂದು ಕಾರವಾರದ ಕದಂಬಾ ನೌಕಾನೆಲೆಗೆ ಆಗಮಿಸಿದ್ದ ರಕ್ಷಣಾ ಸಚಿವ ರಾಜನಾಥ ಸಿಂಗ್ ರವರಿಗೆ ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದ ಶಾಸಕಿ ರೂಪಾಲಿ ಎಸ್.ನಾಯ್ಕ ಮನವಿ ಮಾಡಿದ್ದಾರೆ.

    ಕಾರವಾರ ಮತ್ತು ಅಂಕೋಲಾ ಈ ಎರಡೂ ತಾಲೂಕಿನಲ್ಲಿ 4,604 ಕುಟುಂಬಗಳು ನೌಕಾನೆಲೆಯಲ್ಲಿ ನಿರಾಶ್ರಿತರಾಗಿದ್ದಾರೆ. ಈ ಕುಟುಂಬಗಳು ನಿರಾಶ್ರಿತವಾಗಿ 3 ದಶಕಗಳಾದರೂ ಸಮಾಜದಲ್ಲಿ ಗೌರವಯುತ ಬದುಕು ಕಂಡುಕೊಳ್ಳುವಲ್ಲಿ ಇದುವರೆಗೂ ಸಾಧ್ಯವಾಗಿಲ್ಲ. ಸದ್ಯ ಕೇವಲ 968 ಕುಟುಂಬಗಳಿಗೆ ಮಾತ್ರ ಉದ್ಯೋಗ ನೀಡಲಾಗಿದೆ.

    ನೌಕಾನೆಲೆ ನಿರಾಶ್ರಿತರು ದೇಶಕ್ಕಾಗಿ, ದೇಶದ ರಕ್ಷಣೆಗಾಗಿ ತಮ್ಮ ಮನೆ, ಭೂಮಿ ಎಲ್ಲವನ್ನೂ ತ್ಯಾಗ ಮಾಡಿದ್ದಾರೆ. ಈ ಕಾರಣದಿಂದ ನಿರಾಶ್ರಿತರು ಉದ್ಯೋಗ, ಗೌರವಯುತ ಬದುಕಿಗೆ ಅಗತ್ಯವಾದ ಎಲ್ಲ ಸೌಲಭ್ಯಗಳನ್ನೂ ಹೊಂದಿ ಸಮಾಜದ ಮುಖ್ಯ ವಾಹಿನಿಯಲ್ಲಿ ಸೇರ್ಪಡೆಯಾಗುವಂತಾಗಬೇಕು.

    ಇದಕ್ಕಾಗಿ ನೌಕಾನೆಲೆ ನಿರಾಶ್ರಿತರನ್ನು ರಾಷ್ಟ್ರೀಯ ಸಂತ್ರಸ್ತರು ಎಂದು ಘೋಷಣೆ ಮಾಡಬೇಕು. ನಾಲ್ಕು ಸಾವಿರಕ್ಕೂ ಹೆಚ್ಚು ನಿರಾಶ್ರಿತ ಪ್ರತಿ ಕುಟುಂಬದ ಓರ್ವ ಸದಸ್ಯನಿಗೆ ಒಂದು ಉದ್ಯೋಗ ಕೊಡಬೇಕು. ಅವರಿಗೆ ಅಗತ್ಯವಾದ ಎಲ್ಲ ಸೌಲಭ್ಯಗಳನ್ನೂ ದೊರಕಿಸಿಕೊಡುವ ಮೂಲಕ ದೇಶಕ್ಕಾಗಿ ತ್ಯಾಗ ಮಾಡಿದವರ ಬದುಕು ಹಸನಾಗುವಂತೆ ವ್ಯವಸ್ಥೆ ಕಲ್ಪಿಸಬೇಕೆಂದು ಶಾಸಕಿ ರೂಪಾಲಿ ನಾಯ್ಕ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಗಾಯಾಳುಗಳನ್ನ ಶಾಸಕರೇ ಕರೆತಂದ್ರೂ ಸರ್ಕಾರಿ ಆಸ್ಪತ್ರೆಯಲ್ಲಿ ಸಿಗದ ಚಿಕಿತ್ಸೆ – ವೈದ್ಯರನ್ನ ತರಾಟೆ ತೆಗದುಕೊಂಡ ಶಾಸಕಿ ರೂಪಾಲಿ ನಾಯ್ಕ

    ಇನ್ನು ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದಲ್ಲಿ ನೌಕಾನೆಲೆ, ಕೈಗಾ ಅಣು ವಿದ್ಯುತ್ ಸ್ಥಾವರ, ಕೊಂಕಣ ರೈಲ್ವೆ, ಚತುಷ್ಪಥ ಹೆದ್ದಾರಿ, ಕದ್ರಾ, ಕೊಡಸಳ್ಳಿ ಜಲ ವಿದ್ಯುತ್ ಯೋಜನೆಗಳು ಹೀಗೆ ವಿವಿಧ ಕಾರಣಗಳಿಂದ ನಿರಾಶ್ರಿತರಾದ ಕುಟುಂಬಗಳ ಸಂಖ್ಯೆ ಹೆಚ್ಚಿದೆ. ಸೀಬರ್ಡ್ ನೌಕಾನೆಲೆಯ ವಿಸ್ತರಣೆ ಕಾಮಗಾರಿ ನಡೆಯುತ್ತಿದೆ. ನೌಕಾನೆಲೆಗೆ ಅಗತ್ಯ ಸಾಮಗ್ರಿಗಳ ತಯಾರಿಕೆಗೆ ಇಲ್ಲಿ ಯಾವುದೆ ಕೈಗಾರಿಕೆಗಳಿಲ್ಲ. ಸ್ಥಳೀಯ ಜನತೆಗೆ ಉದ್ಯೋಗ ಕೊಡುವ ಕೈಗಾರಿಕೆಗಳೂ ಇಲ್ಲಿಲ್ಲ. ಈ ಕಾರಣಕ್ಕಾಗಿ ಸರ್ಕಾರಿ ಸ್ವಾಮ್ಯದಲ್ಲಿ ರಕ್ಷಣಾ ಇಲಾಖೆ ನೌಕಾನೆಲೆಯಲ್ಲಿ ಶಿಪ್ ಯಾರ್ಡ ಹಾಗೂ ಪೂರಕ ಕೈಗಾರಿಕೆಗಳನ್ನು ಸ್ಥಾಪನೆ ಮಾಡಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ಶಾಸಕಿ ರೂಪಾಲಿ ನಾಯ್ಕರವರು ರಕ್ಷಣಾ ಸಚಿವರಲ್ಲಿ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಕದಂಬ ನೌಕಾನೆಲೆಯ ವೈಮಾನಿಕ ಸಮಿಕ್ಷೆ ನಡೆಸಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

  • ಕಾರವಾರ ಬಂದರಿನಲ್ಲಿ ಮಿಂಚಿದ ವಿಕ್ರಮಾದಿತ್ಯ- ಕೊರೊನಾ ವಾರಿಯರ್ಸ್‍ಗೆ ಸೆಲ್ಯೂಟ್

    ಕಾರವಾರ ಬಂದರಿನಲ್ಲಿ ಮಿಂಚಿದ ವಿಕ್ರಮಾದಿತ್ಯ- ಕೊರೊನಾ ವಾರಿಯರ್ಸ್‍ಗೆ ಸೆಲ್ಯೂಟ್

    – ಕೇರಳ, ಮುಂಬೈ ಬಂದರುಗಳಲ್ಲೂ ನಮನ

    ನವದೆಹಲಿ: ದೇಶಾದ್ಯಂತ ಭಾರತೀಯ ಮೂರು ಪಡೆಯ ಯೋಧರಿಂದ ಕೊರೊನಾ ವಾರಿಯರ್ಸ್ ಗೆ ಗೌರವ ಸಲ್ಲಿಸಲಾಗಿದ್ದು, ವಾಯು ಸೇನೆಯಿಂದ ಹೆಲಿಕಾಪ್ಟರ್ ಮೂಲಕ ಪುಷ್ಪವೃಷ್ಠಿಗೈದರೆ, ಅತ್ತ ಇಂಡಿಯನ್ ನೇವಿ ಹಡಗುಗಳು ದೀಪಾಲಂಕಾರದಿಂದ ಕಂಗೊಳಿಸುವ ಮೂಲಕ ಗೌರವ ಸಲ್ಲಿಸಿದವು. ಕಾರವಾರದ ನೌಕಾ ನೆಲೆಯಲ್ಲಿ ವಿಕ್ರಮಾದಿತ್ಯ ಸಹ ದೀಪಾಲಂಕಾರದಿಂದ ಕಂಗೊಳಿಸುತ್ತಿತ್ತು.

    ಕೊರೊನಾ ವಾರಿಯರ್ಸ್ ಗೆ ಗೌರವ ಸಲ್ಲಿಸುವ ಸಲುವಾಗಿ ಇಂದು ಐಎನ್‍ಎಸ್ ವಿಕ್ರಮಾದಿತ್ಯ ಹಡಗಿನಲ್ಲಿ ಬಣ್ಣದ ಲೈಟುಗಳನ್ನು ಅಲಂಕಾರ ಮಾಡಿ ಪಟಾಕಿ ರಾಕೆಟ್ ಮೂಲಕ ಬಾನಂಗಳದಲ್ಲಿ ಚಿತ್ತಾರ ಮೂಡಿಸುವ ಮೂಲಕ ಕೃತಜ್ಞತೆ ಸಲ್ಲಿಸಲಾಯಿತು. ಕಾರವಾರದ ಅರಗಾದ ಕದಂಬ ನೌಕಾ ನೆಲೆಯಲ್ಲಿ ದೇಶದ ಅತಿದೊಡ್ಡ ಯುದ್ಧ ನೌಕೆ ವಿಕ್ರಮಾದಿತ್ಯ ಹಡಗಿನಲ್ಲಿ ಕೊರೊನಾ ವೈರಸ್ ವಿರುದ್ಧ ಹೋರಾಟಡುತ್ತಿರುವ ಕೊರೊನಾ ಯೋಧರಾದ ವೈದ್ಯರು, ಶುಶ್ರೂಷಕರು, ಪೊಲೀಸರು ಹಾಗೂ ನೈರ್ಮಲ್ಯ ಕೆಲಸಗಾರರಿಗೆ ಗೌರವ ಸಲ್ಲಿಸಲಾಯಿತು.

    ಕೊರೊನಾ ವಾರಿಯರ್ಸ್‍ಗಳಾದ ವೈದ್ಯರು, ಶುಶ್ರೂಷಕರು, ಪೊಲೀಸರು ಹಾಗೂ ನೈರ್ಮಲ್ಯ ಕೆಲಸಗಾರರಿಗೆ ಗೌರವ ಸಲ್ಲಿಸುವ ಸಲುವಾಗಿ ಕೇಂದ್ರ ಸರ್ಕಾರ ಈ ಕಾರ್ಯವನ್ನು ಹಮ್ಮಿಕೊಂಡಿತ್ತು. ಬೆಳಗ್ಗೆ ಭಾರತೀಯ ವಾಯು ಸೇನೆಯ ಹೆಲಿಕಾಪ್ಟರ್‍ಗಳು ಪುಷ್ಪವೃಷ್ಠಿಗೈದರೆ, ಸಂಜೆ ಇಂಡಿಯನ್ ನೇವಿ ಹಡಗುಗಳಲ್ಲಿ ದೀಪಾಲಂಕಾರ ಮಾಡಲಾಗಿತ್ತು.

    ದೇಶದಲ್ಲೆಡೆ ಅಭಿನಂದನೆ ಸಲ್ಲಿಸಲಾಗಿದ್ದು, ಭಾರತೀಯ ಮೂರು ಪಡೆಯ ಯೋಧರು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಕೊರೊನಾ ವಾರಿಯರ್ಸ್ ಮೇಲೆ ಪುಷ್ಪವೃಷ್ಠಿ ಮಾಡಿದರು. ಚೆನ್ನೈ ರಾಜೀವ್ ಗಾಂಧಿ ಆಸ್ಪತ್ರೆ, ಬೆಂಗಳೂರಿನಲ್ಲಿ ಕಮಾಂಡ್, ವಿಕ್ಟೋರಿಯಾ ಆಸ್ಪತ್ರೆ, ದೆಹಲಿಯ ಏಮ್ಸ್, ರಾಜಸ್ಥಾನದ ಸಾವಾಯಿ ಮಾನ್‍ಸಿಂಗ್ ಆಸ್ಪತ್ರೆ, ಚಂಡೀಗಢ, ಗುವಾಹತಿ, ಪಾಟ್ನಾ, ಲೇಹ್‍ಗಳಲ್ಲಿ ಆಸ್ಪತೆಗಳ ಮೇಲೆ ಪುಷ್ಪವೃಷ್ಠಿ ಮಾಡಲಾಯಿತು.

    ಕಾರವಾರ, ಕೇರಳದ ಕೊಚ್ಚಿ ಬಂದರು, ಮುಂಬೈ ಹಾಗೂ ಇತರೆಡೆಗಳಲ್ಲಿ ಹಡಗುಗಳನ್ನು ದೀಪಾಲಂಕಾರದಿಂದ ಕಂಗೊಳಿಸುವಂತೆ ಮಾಡುವ ಮೂಲಕ ವಾರಿಯರ್ಸ್‍ಗೆ ಮನಮ ಸಲ್ಲಿಸಲಾಯಿತು.

  • ಕೊರೊನಾ ಭೀತಿಗೆ ಕಾರವಾರ ಬಂದರಿನಲ್ಲಿ ಹೈ ಅಲರ್ಟ್ – ಜಿಲ್ಲಾಸ್ಪತ್ರೆಗೆ ಕದಂಬ ನೌಕಾ ನೆಲೆಯಿಂದ 100 ಹಾಸಿಗೆ

    ಕೊರೊನಾ ಭೀತಿಗೆ ಕಾರವಾರ ಬಂದರಿನಲ್ಲಿ ಹೈ ಅಲರ್ಟ್ – ಜಿಲ್ಲಾಸ್ಪತ್ರೆಗೆ ಕದಂಬ ನೌಕಾ ನೆಲೆಯಿಂದ 100 ಹಾಸಿಗೆ

    ಕಾರವಾರ: ವಿಶ್ವದೆಲ್ಲೆಡೆ ಹರಡುತ್ತಿರುವ ಮಹಾಮಾರಿ ಕೊರೊನಾ ವೈರಸ್ ಕರ್ನಾಟಕಕ್ಕೂ ಕಾಲಿಟ್ಟಿದೆ. ಕೊರೊನಾ ಭೀತಿಗೆ ಮುಂಜಾಗೃತ ಕ್ರಮವಾಗಿ ಕಾರವಾರ ಬಂದರು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ಪ್ರವಾಸಿ ಸ್ಥಳಗಳಲ್ಲಿ ಕಟ್ಟೆಚ್ಚರ ವಹಿಸಬೇಕೆಂದು ಜಿಲ್ಲಾಧಿಕಾರಿ ಡಾ. ಹರೀಶ್ ಕುಮಾರ್ ಕೆ. ಸೂಚಿಸಿದ್ದಾರೆ.

    ಜಿಲ್ಲಾಧಿಕಾರಿ ಕಚೇರಿ ಕೋರ್ಟ್ ಹಾಲ್‍ನಲ್ಲಿ ಕೊರೊನಾ ಸೋಂಕು ತಡೆಗಟ್ಟುವಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ, ಜಿಲ್ಲಾ ಆಸ್ಪತ್ರೆ ಮುಖ್ಯಸ್ಥರು, ವೈದ್ಯಕೀಯ ಕಾಲೇಜು ಮುಖ್ಯಸ್ಥರು, ನೌಕಾ ನೆಲೆ ಮತ್ತು ಬಂದರು ಇಲಾಖೆಯ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಡಾ.ಹರೀಶ್ ಕುಮಾರ್‍ರವರು ಸಭೆ ನಡೆಸಿದರು. ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿ ಸಮನ್ವಯ ಸಾದಿಸಿ ಕೊರೊನಾ ಸೋಂಕು ಜಿಲ್ಲೆಗೆ ಯಾವುದೇ ಮಾರ್ಗದಲ್ಲಿ ಬರದಂತೆ ಸೂಕ್ತ ಕ್ರಮ ಕೈಗೊಂಡು ಕಟ್ಟೆಚ್ಚರಿಕೆ ವಹಿಸಬೇಕು ಎಂದು ಹೇಳಿದರು.

    ಕಾರವಾರ ಬಂದರಿನಲ್ಲಿ ವಿದೇಶಿ ಹಡಗುಗಳು ಆಗಮಿಸುವುದರಿಂದ ಮುಖ್ಯವಾಗಿ ಅಲ್ಲಿ ತೀವ್ರ ನೀಗಾ ಇರಿಸಬೇಕು. ಆಗಮಿಸಿದ ಹಡಗುಗಳಲ್ಲಿ ವೈದ್ಯಕೀಯ ತಪಾಸಣೆಯನ್ನು ಮಾಡುವುದು ಕಡ್ಡಾಯವಾಗಿದ್ದು, ಇದರ ಮಾಹಿತಿಯನ್ನು ಪ್ರತಿ ದಿನ ಜಿಲ್ಲಾ ಆರೋಗ್ಯ ಅಧಿಕಾರಿಗಳು ಪಡೆದು ರಾಜ್ಯ ಸರ್ಕಾರಕ್ಕೆ ಮಾಹಿತಿ ನೀಡಬೇಕು ಎಂದು ತಿಳಿಸಿದರು.

    ಈ ಬಗ್ಗೆ ಕದಂಬ ನೌಕಾ ನೆಲೆ ಅಧಿಕಾರಿ ಮಾತನಾಡಿ, ನೌಕಾ ನೆಲೆಯಲ್ಲಿ ರೋಗಿಗಳ ಆರೈಕೆಗಾಗಿ ಸಾಕಷ್ಟು ಹಾಸಿಗೆಗಳ ವ್ಯವಸ್ಥೆ ಇರುವುದರಿಂದ ಜಿಲ್ಲಾಸ್ಪತ್ರೆಗೆ 100 ಹಾಸಿಗೆಗಳನ್ನು ನೀಡಲು ನಿರ್ಧರಿಸಿದ್ದೇವೆ. ಅಲ್ಲದೆ ಈಗಾಗಲೇ ಸಾಕಷ್ಟು ಮುಂಜಾಗೃತ ಕ್ರಮಗಳನ್ನು ಕೈಗೊಳ್ಳಲಾಗಿದೆ ಮತ್ತು ವಿದೇಶದಿಂದ ಬರುವ ಹಡಗುಗಳಲ್ಲಿರುವ ಪ್ರಯಾಣಿಕರು ಮತ್ತು ನಾವಿಕರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗುತ್ತಿದೆ. ಮುಂಚಿತವಾಗಿಯೇ ಎಲ್ಲ ಹಡಗುಗಳಲ್ಲಿ ವೈದ್ಯಕೀಯ ತಂಡವನ್ನು ಇರಿಸಲಾಗಿದೆ ಎಂದು ಮಾಹಿತಿ ನೀಡಿದರು.

    ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಮಾತನಾಡಿ, ಪ್ರಮುಖವಾಗಿ ಗೋಕರ್ಣದಲ್ಲಿ ವಿದೇಶಿ ಪ್ರವಾಸಿಗರು ಆಗಮಿಸುವುದರಿಂದ ಅಲ್ಲಿ ವೈದ್ಯರ ತಂಡ ರಚಿಸಿಕೊಂಡು ಮನೆ ಮನೆಗೆ ಭೇಟಿ ನೀಡಿ, ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಮಾಡಬೇಕೆಂದರು.

    ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಾತನಾಡಿ, ಪೊಲೀಸ್ ಇಲಾಖೆಯಿಂದ ತೆಗೆದುಕೊಳ್ಳಬಹುದಾದ ಎಲ್ಲಾ ಮುಂಜಾಗೃತ ಕ್ರಮಗಳನ್ನು ಈಗಾಗಲೇ ಕೈಗೊಂಡಿದ್ದು, ಗೋವಾ ಮತ್ತು ಮಂಗಳೂರು ವಿಮಾನ ನಿಲ್ದಾಣದಿಂದ ಬರುವ ಪ್ರಯಾಣಿಕರನ್ನು ವೈದ್ಯರ ಸಹಾಯದೊಂದಿಗೆ ತಪಾಸಣೆ ಮಾಡುವ ಮೂಲಕ ಹೆಚ್ಚಿನ ಜಾಗೃತಿ ವಹಿಸಲಾಗುವುದು ಎಂದರು.

    ಸಭೆಯಲ್ಲಿ ಜಿಲ್ಲಾಸ್ಪತ್ರೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವೈದ್ಯಾಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದು, ಕೊರೊನಾ ವೈರಸ್ ಹರಡದಂತೆ ತಡೆಗಟ್ಟಲು ಕ್ರಮ ಕೈಗೊಂಡಿದ್ದಾರೆ.

    ಕಾರವಾರ ಜಿಲ್ಲಾಸ್ಪತ್ರೆಯಲ್ಲಿ 10 ಹಾಸಿಗೆ ಮೀಸಲು:
    ಕಾರವಾರ ಗಡಿ ಪ್ರದೇಶವಾಗಿರುವ ಹಿನ್ನೆಲೆ ನೆರೆಯ ಗೋವಾ, ಮುಂಬೈನಿಂದ ವಿದೇಶಿ ಪ್ರಜೆಗಳು ಈ ಭಾಗಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ. ಇದರ ಜೊತೆಗೆ ಸಮುದ್ರದ ಮೂಲಕವು ಹಡಗುಗಳು ಬರುವುದರಿಂದ ತೀವ್ರ ನಿಗಾ ಬಹಿಸಲಾಗಿದ್ದು, ಜಿಲ್ಲಾಸ್ಪತ್ರೆಯಲ್ಲಿ ಪ್ರತ್ಯೇಕ ಕಟ್ಟಡವನ್ನು ಮೀಸಲಿಡಲಾಗಿದೆ. 5 ಮಹಿಳೆಯರು, 5 ಪುರುಷರಿಗಾಗಿ ಪ್ರತ್ಯೇಕ ಹಾಸಿಗೆ ವ್ಯವಸ್ಥೆ ಮಾಡಲಾಗಿದ್ದು, ಪ್ರತ್ಯೇಕ ಸಿಬ್ಬಂದಿಗಳನ್ನು ಆರೋಗ್ಯ ಇಲಾಖೆ ನೇಮಿಸಿದೆ.

  • ದೇಶದ ಅತಿದೊಡ್ಡ ವಿಮಾನ ವಾಹಕ ವಿಕ್ರಮಾದಿತ್ಯ ನೌಕೆ ವೀಕ್ಷಿಸಲು ಸಾರ್ವಜನಿಕರಿಗೆ ಅವಕಾಶ

    ದೇಶದ ಅತಿದೊಡ್ಡ ವಿಮಾನ ವಾಹಕ ವಿಕ್ರಮಾದಿತ್ಯ ನೌಕೆ ವೀಕ್ಷಿಸಲು ಸಾರ್ವಜನಿಕರಿಗೆ ಅವಕಾಶ

    ಕಾರವಾರ: ದೇಶದ ಏಕೈಕ ವಿಮಾನ ವಾಹಕ ಯುದ್ದ ನೌಕೆಯನ್ನು ವೀಕ್ಷಿಸಲು ಸಾರ್ವಜನಿಕರಿಗೆ ಡಿಸೆಂಬರ್ 22 ರಂದು ಭಾರತೀಯ ನೌಕಾದಳ ಅವಕಾಶ ಮಾಡಿ ಕೊಟ್ಟಿದೆ.

    ಕಾರವಾರದ ಅರಗಾದಲ್ಲಿರುವ ಕದಂಬ ನೌಕಾನೆಲೆಗೆ ವಿಕ್ರಮಾದಿತ್ಯ ಯುದ್ಧ ಹಡಗು ಈ ತಿಂಗಳ ಕೊನೆಯಲ್ಲಿ ಆಗಮಿಸಲಿದ್ದು ನೌಕಾ ನೆಲೆಯ ವೀಕ್ಲಿ ಸೆಲೆಬ್ರೇಶನ್ -2019 ಅಂಗವಾಗಿ ನೌಕಾದಳದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಹಾಗೂ ಮಾಹಿತಿ ನೀಡುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಮುಕ್ತ ಅವಕಾಶ ಮಾಡಿಕೊಟ್ಟಿದೆ.

    ಸಾರ್ವಜನಿಕರಿಗೆ ಅವಕಾಶ ಹೇಗೆ?
    ಕಾರವಾರ ತಾಲೂಕಿನ ಅರಗಾ ಗ್ರಾಮದ ಕದಂಬ ನೌಕಾನೆಲೆಯ ಮುಖ್ಯ ದ್ವಾರದಲ್ಲಿ ಅವಕಾಶ ಕಲ್ಪಿಸಲಾಗಿದೆ. ಸಾರ್ವಜನಿಕರು, ವಿದ್ಯಾರ್ಥಿಗಳಿಗೆ ಅವಕಾಶ ಮಾಡಿಕೊಟ್ಟಿದ್ದು ಡಿ.22 ರ ಭಾನುವಾರ ಹಡಗನ್ನು ವೀಕ್ಷಿಸುವವರು ತಮ್ಮ ಗುರುತಿನ ಚೀಟಿಯಾದ ಆಧಾರ್ ಕಾರ್ಡ್ ಅಥವಾ ವೋಟರ್ ಐಡಿಯನ್ನು ಕಡ್ಡಾಯವಾಗಿ ತರಬೇಕು. ನಂತರ ಮುಖ್ಯ ದ್ವಾರದಲ್ಲಿ ನೊಂದಣಿ ಮಾಡಿಸಿ ಒಳಗೆ ಪ್ರವೇಶ ನೀಡಲಾಗುತ್ತದೆ. ಖಾಸಗಿ ವಾಹನಗಳಿಗೆ ಪ್ರವೇಶವಿರುವುದಿಲ್ಲ.

    ಹಡಗಿನ ವಿಶೇಷವೇನು?
    1978 ರಲ್ಲಿ ಈ ಹಡಗು ನಿರ್ಮಾಣಗೊಂಡು ರಷ್ಯಾದ ನೌಕಾನೆಲೆಯಲ್ಲಿ ಸೇವೆ ಸಲ್ಲಿಸಿ ನಂತರ 1996 ರಲ್ಲಿ ಇದಕ್ಕೆ ನಿವೃತ್ತಿ ನೀಡಲಾಯಿತು. ನಂತರ ಅಂದಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ರವರು 2004 ರಲ್ಲಿ ಒಪ್ಪಂದದ ಮೂಲಕ 97.4 ಕೋಟಿ ರೂಗಳನ್ನು ನೀಡಿ ಖರೀದಿಸಲು ಮಾತುಕತೆ ನಡೆದಿತ್ತು. ಇದೇ ಸಂದರ್ಭದಲ್ಲಿ ಇದರ ನವೀಕರಣ ನಡೆಸಿ ರಷ್ಯಾದ ಹೆಚ್ಚುವರಿ ಬೇಡಿಕೆಯಂತೆ ಯುಪಿಎ ಸರ್ಕಾರ 235 ಕೋ.ಡಾಲರ್(10,575 ಕೋ.ರೂಪಾಯಿ 2010ರ ದರದಲ್ಲಿ) ನೀಡಿ ನವೀಕರಣಗೊಂಡು 2013ರ ನವೆಂಬರಿನಲ್ಲಿ ಭಾರತೀಯ ನೌಕಾಪಡೆ ಸೇವೆಗೆ ಸಮರ್ಪಿಸಲಾಗಿತ್ತು.

    44,500 ಟನ್ ತೂಕ, 284 ಮೀಟರ್ ಉದ್ದ, 60 ಮೀಟರ್ ಎತ್ತರ, 34 ಯುದ್ಧ ವಿಮಾನ ಮತ್ತು ಹೆಲಿಕಾಪ್ಟರ್ ಗಳನ್ನು ಹೊರುವ ಸಾಮರ್ಥ್ಯ ಹೊಂದಿದೆ. 1,600 ಸಿಬ್ಬಂದಿಗಳು, 22 ಅಂತಸ್ತುಗಳಿರುವ ನೌಕೆಗೆ ಒಮ್ಮೆ ಇಂಧನ ಭರ್ತಿಯಾದರೆ 13 ಸಾವಿರ ಕಿ.ಮೀ ಕ್ರಮಿಸುವ ಸಾಮರ್ಥ್ಯ ಹೊಂದಿದೆ. ಸದ್ಯ ಅರಬ್ಬಿ ಸಮುದ್ರದ ಗಡಿಯಲ್ಲಿ ಕಾವಲುಗಾರನಾಗಿ ಸೇವೆ ಸಲ್ಲಿಸುತ್ತಿದ್ದು ಕಾರವಾರದ ಕದಂಬ ನೌಕಾ ನೆಲೆ ಇದರ ತಂಗುದಾಣವಾಗಿದೆ.

    ಎಂಟು ತಿಂಗಳ ಹಿಂದೆ ನಡೆದಿತ್ತು ದುರಂತ!
    ಕಳೆದ ಎಂಟು ತಿಂಗಳ ಹಿಂದೆ ವಿಕ್ರಮಾದಿತ್ಯ ಹಡಗಿನಲ್ಲಿ ಬಾಯ್ಲರ್ ಸಿಡಿದು ಉತ್ತರ ಪ್ರದೇಶ ಮೂಲದ ಲೆಫ್ಟಿನೆಂಟ್ ಕಮಾಂಡರ್ ಚೌಹಾಣ್ ಮೃತಪಟ್ಟು 7 ಮಂದಿ ಗಂಭೀರವಾಗಿ ಗಾಯಗೊಂಡಿದ್ದರು. ಇದರ ನಂತರ ಮುಂಬೈನಲ್ಲಿ ತಾಂತ್ರಿಕ ಸಮಸ್ಯೆಯನ್ನು ಸರಿಪಡಿಸಿ ಗಡಿಯಲ್ಲಿ ಪಹರೆಗೆ ತೆರಳಿತ್ತು. ಈ ಘಟನೆ ನಂತರ ಸಾರ್ವಜನಿಕರಿಗೆ ವಿಕ್ರಮಾದಿತ್ಯ ಹಡಗು ವೀಕ್ಷಣೆಗೆ ಅವಕಾಶವನ್ನು ನಿರ್ಬಂಧಿಸಲಾಗಿತ್ತು.