Tag: Kadri Manjunatha Temple Mangaluru

  • ಕದ್ರಿ ಮಂಜುನಾಥ ಸ್ವಾಮಿ ದೇವಸ್ಥಾನಕ್ಕೆ ಅಭಿಷೇಕ್ ಅಂಬರೀಶ್ ಭೇಟಿ

    ಕದ್ರಿ ಮಂಜುನಾಥ ಸ್ವಾಮಿ ದೇವಸ್ಥಾನಕ್ಕೆ ಅಭಿಷೇಕ್ ಅಂಬರೀಶ್ ಭೇಟಿ

    ‘ಬ್ಯಾಡ್ ಮ್ಯಾನರ್ಸ್’ (Bad Manners) ಸಿನಿಮಾ ರಿಲೀಸ್‌ಗೆ ತಯಾರಿ ನಡೆಯುತ್ತಿರೋ ಬೆನ್ನಲ್ಲೇ, ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನಕ್ಕೆ ಅಭಿಷೇಕ ಅಂಬರೀಶ್ (Abhishek Ambareesh) ಭೇಟಿ ನೀಡಿದ್ದಾರೆ. ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

    ‘ಬ್ಯಾಡ್ ಮ್ಯಾನರ್ಸ್’ ಸಿನಿಮಾ ರಿಲೀಸ್ ಮತ್ತು ಅಭಿಷೇಕ್- ಮಹೇಶ್ ಕುಮಾರ್ (Mahesh Kumar) ನಟನೆಯ ಮುಂದಿನ ಸಿನಿಮಾ ಶೂಟಿಂಗ್ ಶುರು ಮಾಡುವ ಮುನ್ನ, ಕದ್ರಿ ಮಂಜುನಾಥ ಸ್ವಾಮಿ ಸನ್ನಿಧಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಅಭಿಷೇಕ್ ಜೊತೆ ನಿರ್ದೇಶಕ ಮಹೇಶ್ ಕುಮಾರ್, ಬಿಗ್ ಬಾಸ್ ವಿನ್ನರ್ ರೂಪೇಶ್ ಶೆಟ್ಟಿ (Roopesh Shetty) ಕೂಡ ಭಾಗಿಯಾಗಿದ್ದರು. ಇದನ್ನೂ ಓದಿ:ನಮಗೇ ನೀರಿಲ್ಲ, ತಮಿಳುನಾಡಿಗೆ ನೀರು ಬಿಡೋದು ಹೇಗೆ? ರಾಗಿಣಿ ದ್ವಿವೇದಿ ಪ್ರತಿಕ್ರಿಯೆ

    ಅಭಿಷೇಕ್- ರಚಿತಾ ರಾಮ್ (Rachita Ram) ನಟನೆಯ ‘ಬ್ಯಾಡ್ ಮ್ಯಾನರ್ಸ್’ ಸಿನಿಮಾಗೆ ದುನಿಯಾ ಸೂರಿ ನಿರ್ದೇಶನ ಮಾಡಿದ್ದಾರೆ. ಸಿನಿಮಾದ ಫಸ್ಟ್ ಲುಕ್ ಮತ್ತು ಹಾಡುಗಳು ಅಭಿಮಾನಿಗಳ ಗಮನ ಸೆಳೆದಿದೆ. ಸದ್ಯದಲ್ಲೇ ಚಿತ್ರದ ರಿಲೀಸ್ ಬಗ್ಗೆ ಚಿತ್ರತಂಡ ಮಾಹಿತಿ ನೀಡಲಿದೆ.

    ಯಂಗ್ ರೆಬೆಲ್ ಅಭಿಷೇಕ್ 4ನೇ ಸಿನಿಮಾಗೆ ‘ಮದಗಜ’ ಮಹೇಶ್ ಕುಮಾರ್ ನಿರ್ದೇಶನ ಮಾಡಲಿದ್ದಾರೆ. ಸದ್ಯದಲ್ಲೇ ಈ ಸಿನಿಮಾದ ಶೂಟಿಂಗ್ ಶುರುವಾಗಲಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಬಹಿಷ್ಕಾರದ ಬ್ಯಾನರ್ ಹಾಕಿದ ಹಿಂದೂ ಸಂಘಟನೆ

    ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಬಹಿಷ್ಕಾರದ ಬ್ಯಾನರ್ ಹಾಕಿದ ಹಿಂದೂ ಸಂಘಟನೆ

    ಮಂಗಳೂರು: ಕರಾವಳಿಯಲ್ಲಿ ಇದೀಗ ಎಲ್ಲೆಡೆ ಜಾತ್ರೆಯ ಸಂಭ್ರಮ. ದೇವಸ್ಥಾನ, ದೈವಸ್ಥಾನಗಳ ವಾರ್ಷಿಕ ಜಾತ್ರೋತ್ಸವದ ಸಡಗರ. ಈ ನಡುವೆ ಪ್ರತೀ ಜಾತ್ರೆಯಲ್ಲೂ ಮುಸ್ಲಿಂ ವ್ಯಾಪಾರಿಗಳಿಗೆ (Muslim Traders) ಬಹಿಷ್ಕಾರ (Boycott) ಹಾಕಲಾಗುತ್ತಿದೆ.

    ಹಿಂದೂಗಳ ಪುಣ್ಯಕ್ಷೇತ್ರಗಳಲ್ಲಿ ಅನ್ಯ ಧರ್ಮೀಯರು ವ್ಯಾಪಾರ ಮಾಡಬಾರದೆಂದು ವಿಶ್ವ ಹಿಂದೂ ಪರಿಷತ್, ಭಜರಂಗದಳ ಎಲ್ಲೆಡೆ ಬ್ಯಾನರ್‌ಗಳನ್ನು ಹಾಕಿ ಮುಸ್ಲಿಂ ವ್ಯಾಪಾರಿಗಳಿಗೆ ಬಹಿಷ್ಕಾರ ಹಾಕುತ್ತಿದ್ದಾರೆ. ಈ ವರ್ಷವೂ ಹಲವೆಡೆ ಈ ಅಭಿಯಾನ ನಡೆದಿದ್ದು, ಜ.19ರಂದು ಮಂಗಳೂರು ನಗರದ ಕದ್ರಿ ಶ್ರೀಮಂಜುನಾಥ ದೇವಸ್ಥಾನದ ಜಾತ್ರೆಯಲ್ಲೂ ಬ್ಯಾನರ್ (Banner) ಕಾಣಿಸಿಕೊಂಡಿದೆ. ಇದನ್ನೂ ಓದಿ: ಹಿಂದಿನ ಸರ್ಕಾರದಿಂದ ನಿರ್ಲಕ್ಷ್ಯ, ನಾವು ಬಂಜಾರ ಸಮುದಾಯದವರಿಗೆ ಹಕ್ಕು ಕೊಟ್ಟಿದ್ದೇವೆ: ಮೋದಿ

    ಜ.21 ರವರೆಗೆ ನಡೆಯಲಿರುವ ಕದ್ರಿ ದೇವಸ್ಥಾನದ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳು ವ್ಯಾಪಾರ ಮಾಡದಂತೆ ವಿಎಚ್‍ಪಿ-ಭಜರಂಗದಳ ಬ್ಯಾನರ್ ಹಾಕಿದೆ. ಅದರಲ್ಲಿ ಕುಕ್ಕರ್ ಬಾಂಬ್ ಸ್ಫೋಟವನ್ನೂ ಉಲ್ಲೇಖ ಮಾಡಲಾಗಿದೆ. ಕುಕ್ಕರ್ ಬಾಂಬ್ ಸ್ಫೋಟದ ಆರೋಪಿ ಮೊದಲು ಟಾರ್ಗೆಟ್ ಮಾಡಿದ್ದೇ ಕದ್ರಿ ಮಂಜುನಾಥ ದೇವಸ್ಥಾನವನ್ನು. ಅಂತಹ ಮನಸ್ಥಿತಿ ಉಳ್ಳವರಿಗೆ ಹಾಗೂ ವಿಗ್ರಹಾರಾಧನೆ ಹರಾಂ ಎಂದು ನಂಬಿರುವ ಯಾರಿಗೂ ಈ ಜಾತ್ರೆಯಲ್ಲಿ ವ್ಯಾಪಾರಕ್ಕೆ ಅವಕಾಶವಿಲ್ಲ. ಸನಾತನ ಧರ್ಮದ ಆಚರಣೆ ಹಾಗೂ ನಂಬಿಕೆಯಲ್ಲಿ ವಿಶ್ವಾಸವುಳ್ಳ ಹಿಂದೂ ವ್ಯಾಪಾರಿಗಳಿಗೆ ಮಾತ್ರ ಅವಕಾಶ ಎಂದು ಬ್ಯಾನರ್ ಹಾಕಲಾಗಿದೆ. ಈ ಬ್ಯಾನರ್ ಹಾಕಿರೋದನ್ನು ಹಿಂದೂ ಸಂಘಟನೆಗಳು ಸಮರ್ಥಿಸಿಕೊಂಡಿದೆ. ಇದನ್ನೂ ಓದಿ: ಮುಂದಿನ 10 ವರ್ಷ ನೀರಾವರಿ ದಶಕ – ಬೊಮ್ಮಾಯಿ ಘೋಷಣೆ

    ಈ ದೇವಸ್ಥಾನದ ಜಾತ್ರಾ ಸಂದರ್ಭದಲ್ಲಿ ಹಲವು ವರ್ಷಗಳಿಂದಲೂ ಮುಸ್ಲಿಂ ವ್ಯಾಪಾರಿಗಳು ವ್ಯಾಪಾರ ಮಾಡುತ್ತಿದ್ದರು. ಆದ್ರೆ ಈ ಬಾರಿ ಎಲ್ಲೆಡೆ ಬಹಿಷ್ಕಾರಗಳು ಆರಂಭಗೊಂಡಿದ್ದರಿಂದ ಮುಸ್ಲಿಂ ವ್ಯಾಪಾರಿಗಳು ವ್ಯಾಪಾರಕ್ಕೆ ಬಂದಿಲ್ಲ. ಒಂದೆರಡು ಮಂದಿ ಮುಸ್ಲಿಂ ವ್ಯಾಪಾರಿಗಳು ಜಾತ್ರೆಯಲ್ಲಿ ವ್ಯಾಪಾರ ನಡೆಸಲು ಬಂದಿದ್ದು, ಅವರನ್ನು ಹಿಂದೂ ಸಂಘಟನೆಗಳು ಮನವೊಲಿಸಿ ವಾಪಸ್ ಕಳುಹಿಸಿದ್ದಾರೆ. ಈ ಕ್ಷೇತ್ರ ಧಾರ್ಮಿಕ ದತ್ತಿ ಇಲಾಖೆಗೆ ಸೇರಿದ ದೇವಸ್ಥಾನವಾಗಿರೋದ್ರಿಂದ ಕ್ಷೇತ್ರದ ಆಡಳಿತ ಮಂಡಳಿಯೂ ಈ ಬ್ಯಾನರ್ ಅಳವಡಿಕೆಗೆ ಸಮ್ಮತಿ ಸೂಚಿಸಿಲ್ಲ. ಹೀಗಾಗಿ ಶಾಂತಿ ಸುವ್ಯವಸ್ಥೆ ಕಾಪಾಡೋ ನಿಟ್ಟಿನಲ್ಲಿ ಪೊಲೀಸರು ಬ್ಯಾನರ್‌ಅನ್ನು ತೆರವುಗೊಳಿಸಿದ್ದಾರೆ.

    ಇಂದು ಬೆಳಗ್ಗೆ ಬ್ಯಾನರ್ ಹಾಕಿದ್ದ ಬಗ್ಗೆ ಪೊಲೀಸರ ಗಮನಕ್ಕೆ ಬಂದಿದ್ದು, ತಕ್ಷಣ ತೆರವುಗೊಳಿಸಿದ್ದಾರೆ. ಎರಡು ದಿನಗಳ ಕಾಲ ಜಾತ್ರೆ ಇರೋದ್ರಿಂದ ಆ ವೇಳೆ ಮುಸ್ಲಿಂ ವ್ಯಾಪಾರಿಗಳು ಬಂದ್ರೂ ಅವರನ್ನು ಮನವೊಲಿಸಿ ವಾಪಸ್ ಕಳುಹಿಸಲು ಹಿಂದೂ ಸಂಘಟನೆಯ ಕಾರ್ಯಕರ್ತರು ಮುಂದಾಗಿದ್ದಾರೆ. ಒಟ್ಟಿನಲ್ಲಿ ಕರಾವಳಿಯಲ್ಲಿನ ಜಾತ್ರೆಗಳಲ್ಲಿ ಸಾಮರಸ್ಯದೊಂದಿಗೆ ಎಲ್ಲರೂ ವ್ಯಾಪಾರ ನಡೆಸುತ್ತಿದ್ದು ಮುಂದಿನ ದಿನದಲ್ಲಿ ಹಿಂದೂ ಧಾರ್ಮಿಕ ಕ್ಷೇತ್ರಗಳಲ್ಲಿ ಮುಸ್ಲಿಂ ವರ್ತಕರ ವ್ಯಾಪಾರ ಸಂಪೂರ್ಣ ನಿಲ್ಲುವ ಸಾಧ್ಯತೆ ಇದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k