Tag: Kaginale

  • ಟಗರು ಹೆಜ್ಜೆ ಹಿಂದಕ್ಕೆ ಇಟ್ಟಿದೆ ಅಂದ್ರೆ ಮುಂದೆ ಹೆಜ್ಜೆ ಇಡಲು ಸಿದ್ಧವಾಗುತ್ತಿದೆ ಎಂದರ್ಥ: ಸಿದ್ದು ಪರ ಕಾಗಿನೆಲೆ ಶ್ರೀ ಬ್ಯಾಟಿಂಗ್

    ಟಗರು ಹೆಜ್ಜೆ ಹಿಂದಕ್ಕೆ ಇಟ್ಟಿದೆ ಅಂದ್ರೆ ಮುಂದೆ ಹೆಜ್ಜೆ ಇಡಲು ಸಿದ್ಧವಾಗುತ್ತಿದೆ ಎಂದರ್ಥ: ಸಿದ್ದು ಪರ ಕಾಗಿನೆಲೆ ಶ್ರೀ ಬ್ಯಾಟಿಂಗ್

    ದಾವಣಗೆರೆ: ಟಗರು ಕಾಳಗದಲ್ಲಿ ಹೆಜ್ಜೆ ಹಿಂದಕ್ಕೆ ಇಟ್ಟಿದೆ ಎಂದರೆ ಅದು ಹೆದರಿ ಅಂತಾ ಅಲ್ಲ. ಮುಂದೆ ಹೆಜ್ಜೆ ಇಡಲು ಸಿದ್ಧವಾಗುತ್ತಿದೆ ಎಂದು ಸಿನಿಮೀಯ ಸ್ಟೈಲ್ ನಲ್ಲಿ ಹರಿಹರ ತಾಲ್ಲೂಕಿನ ಕಾಗಿನೆಲೆ ಮಠದ ನಿರಂಜನಾನಂದ ಪುರಿ ಸ್ವಾಮೀಜಿ ಹೇಳಿದ್ದಾರೆ.

    ಬೆಳ್ಳೂಡಿಯ ಕಾಗಿನೆಲೆ ಕನಕ ಗುರು ಪೀಠದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸ್ವಾಮೀಜಿ, ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮೌನವಾಗಿರುವುದನ್ನು ಶ್ರೀಗಳು, ಟಗರು ಕಾಳಗಕ್ಕೆ ಹೋಲಿಸಿದ್ದು, ಟಗರು ಕಾಲು ಕೆದರಿ ಮುನ್ನುಗ್ಗಿ ಹೊಡೆದರೆ ಎಲ್ಲಾ ಛಿದ್ರ ಛಿದ್ರವಾಗುತ್ತದೆ ಎಂದು ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದರು.

     

    ಸಮ್ಮಿಶ್ರ ಸರ್ಕಾರ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಸಂಪೂರ್ಣವಾಗಿ ಕಡೆಗಣಿಸಿದೆ. ಇದೇ ಪರಿಸ್ಥಿತಿ ಮುಂದುವರಿದರೆ ಕಾಂಗ್ರೆಸ್ ಪಕ್ಷಕ್ಕೆ ನಷ್ಟವಾಗುತ್ತದೆ. ಅಲ್ಲದೇ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 15 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವುದು ಕಷ್ಟವಾಗುತ್ತದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಅವರಿಗೆ ಶ್ರೀಗಳು ಎಚ್ಚರಿಕೆ ನೀಡಿದರು.

    ಸಾಕಷ್ಟು ಅಧಿಕಾರಿಗಳು ನನ್ನ ಬಳಿ ಬಂದು ವರ್ಗಾವಣೆ ಮಾಡುತ್ತಿರುವ ಕುರಿತು ಅಳಲು ತೊಡಿಕೊಂಡಿದ್ದಾರೆ. ಆದರೆ ಅಧಿಕಾರಿಗಳ ಹೆಸರನ್ನು ಬಹಿರಂಗ ಪಡಿಸುವುದಿಲ್ಲ. ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಆರ್.ಶಂಕರ್ ಅವರಿಗೆ ಮಂತ್ರಿಗಿರಿ ನೀಡಿದ್ದು, ಪಕ್ಷೇತರ ಎಂಬ ಉದ್ದೇಶಕ್ಕೆ ಹೊರತು ಕುರುಬರ ಸಮಾಜದವರು ಅಂತಾ ಅಲ್ಲ. ನಮ್ಮ ಸಮಾಜಕ್ಕೆ ಎರಡು ಸಚಿವ ಸ್ಥಾನ ಕೊಡಬೇಕಾಗಿತ್ತು. ಸಮ್ಮಿಶ್ರ ಸರ್ಕಾರದಲ್ಲಿ ಗೌಡರು, ಲಿಂಗಾಯತರ ಪ್ರಾಬಲ್ಯ ಹೆಚ್ಚಾಗಿದೆ. ಕುರುಬ ಸಮುದಾಯಕ್ಕೆ ಉತ್ತಮ ಸ್ಥಾನ ಮಾನ ಒದಗಿಸಿಕೊಡಬೇಕು ಇಲ್ಲದಿದ್ದರೇ ಉಗ್ರ ಹೋರಾಟ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಶ್ರೀಗಳು ಎಚ್ಚರಿಕೆ ನೀಡಿದರು.

  • ಸಿಎಂ ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದ ಕಾಗಿನೆಲೆ ಶ್ರೀ

    ಸಿಎಂ ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದ ಕಾಗಿನೆಲೆ ಶ್ರೀ

    ಬೆಂಗಳೂರು: ಸಮ್ಮಿಶ್ರ ಸರ್ಕಾರದ ಪರ ಹಾಗೂ ವಿರೋಧ ಹೇಳಿಕೆ ನೀಡುವ ಮೂಲಕ ಸ್ವಾಮೀಜಿಗಳು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗುತ್ತಿದ್ದಾರೆ. ನಂಜಾವಧೂತ ಸ್ವಾಮೀಜಿ ಎಚ್‍ಡಿಕೆಯನ್ನು ಬೆಂಬಲಿಸಿದ ಬೆನ್ನಲ್ಲೇ ಕಾಗಿನೆಲೆ ಪೀಠಾಧ್ಯಕ್ಷ ನಿರಂಜನಾನಂದಪುರಿ ಸ್ವಾಮೀಜಿ ವಿರೋಧ ವ್ಯಕ್ತಪಡಿಸಿದ್ದಾರೆ.

    ಮಾಧ್ಯಮದೊಂದಿಗೆ ಮಾತನಾಡಿದ ನಿರಂಜನಾನಂದಪುರಿ ಸ್ವಾಮೀಜಿ, ಸಮ್ಮಿಶ್ರ ಸರ್ಕಾರ ಸಂಪುಟದಲ್ಲಿ ಕುರುಬ ಸಮುದಾಯಕ್ಕೆ ಹೆಚ್ಚಿನ ಸ್ಥಾನಮಾನ ನೀಡಿಲ್ಲ. ಅಷ್ಟೇ ಅಲ್ಲದೇ ಈಗ ಕುರುಬ ಸಮುದಾಯದ ಅಧಿಕಾರಿಗಳನ್ನು ಹತ್ತಿಕ್ಕಲು ಮುಖ್ಯಮಂತ್ರಿ ಸಮ್ಮಿಶ್ರ ಸರ್ಕಾರ ಮಾಡುತ್ತಿದೆ ಎಂದು ಅವರು ಕಿಡಿಕಾರಿದರು.

    ಸಮ್ಮಿಶ್ರ ಸರ್ಕಾರವು ಒಂದು ಜಾತಿ, ಸಮುದಾಯದ ಅಧಿಕಾರಿಗಳ ವಿರುದ್ಧ ದ್ವೇಷ ಸಾಧಿಸುತ್ತಿದೆ. ಇಂತಹ ಬೆಳವಣಿಗೆಯನ್ನು ಕೂಡಲೇ ಕುಮಾರಸ್ವಾಮಿಯವರು ನಿಲ್ಲಿಸಬೇಕು. ಇಲ್ಲವೇ ಪರಿಣಾಮ ಎದುರಿಸಲು ಸಜ್ಜಾಗಬೇಕು ಎಂದು ಎಚ್ಚರಿಕೆ ನೀಡಿದರು.

    ಸರ್ಕಾರ ಸಮುದಾಯದ ದ್ವೇಷ ಸಾಧನೆ ಮಾಡುತ್ತಿದೆಯೇ ಹೊರತು, ರೈತರ ಆತ್ಮಹತ್ಯೆ ತಡೆಯುವ ಯಾವುದೇ ಕ್ರಮಕ್ಕೆ ಮುಂದಾಗುತ್ತಿಲ್ಲ ಎಂದು ಶ್ರೀಗಳು ಸಮ್ಮಿಶ್ರ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದರು.

    ಸರ್ಕಾರಕ್ಕೆ ಎಚ್ಚರಿಕೆ: ಆರಂಭದಲ್ಲಿ ಕುರುಬ ಸಮಾಜದ ಮುಖಂಡರಾದ ಸಿದ್ದರಾಮಯ್ಯರನ್ನು ಸರ್ಕಾರ ಕಡೆಗಣಿಸಿದ್ದ ಸರ್ಕಾರ ಈಗ ಕುರುಬ ಜನಾಂಗದ ಅಧಿಕಾರಿಗಳನ್ನು ವರ್ಗಾವಣೆ ಮಾಡುತ್ತಿದೆ. ಈ ಸರ್ಕಾರ ಅಸ್ತಿತ್ವಕ್ಕೆ ಬರಲು ಕುರುಬ ಸಮಾಜ ಬಹಳ ಮಹತ್ವದ ಪಾತ್ರ ವಹಿಸಿದೆ. ನಮ್ಮ ಸಮಾಜ ಕಡೆಗಣಿಸಿದರೆ ಹೋರಾಟ ಮಾಡಬೇಕಾದೀತು ಎಂದು ಕುರುಬ ಸಮಾಜದ ಮುಖಂಡ ಸಣ್ಣಕ್ಕಿ ಮೈತ್ರಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

    ಬೆಂಗಳೂರಿನಲ್ಲಿ ಬುಧವಾರ ನಡೆದಿದ್ದ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಶ್ರೀ ಗುರುಗುಂಡಾ ಬ್ರಹ್ಮೇಶ್ವರ ಸ್ವಾಮಿ ಮಹಾ ಸಂಸ್ಥಾನದ ಪೀಠಾಧ್ಯಕ್ಷ ನಂಜಾವಧೂತ ಸ್ವಾಮೀಜಿ ಅವರು ಸಮ್ಮಿಶ್ರ ಸರ್ಕಾರದ ಪರವಾಗಿ ಮಾತನಾಡಿದ್ದರು. ಅಲ್ಲದೇ ಸರ್ಕಾರ ಉಳಿಸಿಕೊಂಡು ಹೋಗುವಂತೆ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಸಲಹೆ ನೀಡಿರುವುದಾಗಿ ಹೇಳಿಕೆ ನೀಡಿದ್ದರು. ಆದರೆ ಈಗ ಸಮ್ಮಿಶ್ರ ಸರ್ಕಾರ ಎರಡು ಸಮುದಾಯಗಳ ನಡುವೆ ದ್ವೇಷಕ್ಕೆ ಕಾರಣವಾಯಿತೇ ಎನ್ನುವ ಪ್ರಶ್ನೆ ರಾಜಕೀಯ ವಲಯದಲ್ಲಿ ಸದ್ದು ಮಾಡುತ್ತಿದೆ.