Tag: kairana

  • UP Election – ಅಮಿತ್ ಶಾ ಮನೆ-ಮನೆ ಪ್ರಚಾರ

    UP Election – ಅಮಿತ್ ಶಾ ಮನೆ-ಮನೆ ಪ್ರಚಾರ

    ಲಕ್ನೋ: ವಿಧಾನಸಭೆ ಚುನಾವಣೆಗೆ ಫೆ.10 ರಿಂದ ಮತದಾನ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮನೆ-ಮನೆ ಪ್ರಚಾರ ಮಾಡಿದ್ದಾರೆ.

    ಕೊರೊನಾ ಹಿನ್ನೆಲೆಯಲ್ಲಿ ಬಹಿರಂಗ ರ‍್ಯಾಲಿ, ಪ್ರಚಾರ, ಸಭೆಗಳಿಗೆ ಚುನಾವಣಾ ಆಯೋಗವು ನಿಷೇಧ ಹೇರಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಕೆಲವು ಹಳ್ಳಿಗಳಿಗೆ ಹೋಗಿದ್ದಾರೆ. ಕಾಲ್ನಡಿಗೆಯಲ್ಲೇ ಮನೆ- ಮನೆ ಬಾಗಿಲಿಗೆ ಹೋಗಿ ಮತ ಯಾಚಿಸಿದ್ದಾರೆ. ಇದನ್ನೂ ಓದಿ: UP Election: ಭಾರತದ ಅತಿ ಎತ್ತರದ ಮನುಷ್ಯ ಸಮಾಜವಾದಿ ಪಕ್ಷ ಸೇರ್ಪಡೆ

    ಸಮಾಜವಾದಿ ಪಕ್ಷಗಳ ಆಡಳಿತಾವಧಿಯಲ್ಲಿ ಸಾವಿರಾರು ಹಿಂದೂ ಕುಟುಂಬಗಳು ಗುಳೆ ಹೋಗಿದ್ದ ಉತ್ತರಪ್ರದೇಶ ಕೈರಾನಕ್ಕೆ ಅಮಿತ್ ಶಾ ಅವರು ಶನಿವಾರ ಭೇಟಿ ನೀಡಿದ್ದಾರೆ. ಸಂತ್ರಸ್ತ ಕುಟುಂಬಗಳಿಗೆ ಧೈರ್ಯ ತುಂಬಿ, ಬಿಜೆಪಿ ಅಭ್ಯರ್ಥಿಗಳ ಪರವಾಗಿ ಶಾ ಮನೆ-ಮನೆ ಪ್ರಚಾರ ಮಾಡಿದ್ದಾರೆ.

    2017ರ ವಿಧಾನಸಭೆ ಚುನಾವಣೆಯಲ್ಲೂ ಕೈರಾನಾದಿಂದ ಸಾವಿರಾರು ಹಿಂದೂ ಕುಟುಂಬಗಳನ್ನು ಗುಳೆ ಹೋಗುವಂತೆ ಮಾಡಿದ್ದ ಅಂಶವನ್ನು ರಾಜಕೀಯ ತಂತ್ರವಾಗಿ ಬಿಜೆಪಿ ಬಳಸಿಕೊಂಡಿದೆ. ಇದೀಗ ಚುನಾವಣಾ ಘೋಷಣೆ ಬಳಿಕ ಇದೇ ಮೊದಲ ಬಾರಿಗೆ ಶಾ ಕೈರಾನಾಕ್ಕೆ ಭೇಟಿ ನೀಡಿರುವುದು ಮಹತ್ವ ಪಡೆದುಕೊಂಡಿದೆ.