Tag: Kajal Argawal

  • ನಟಿ ಕಾಜಲ್ ಅಗರ್ವಾಲ್ ಗೆ 2 ಪುಟ ಪತ್ರ ಬರೆದ ಪ್ರಧಾನಿ ಮೋದಿ

    ನಟಿ ಕಾಜಲ್ ಅಗರ್ವಾಲ್ ಗೆ 2 ಪುಟ ಪತ್ರ ಬರೆದ ಪ್ರಧಾನಿ ಮೋದಿ

    ನವದೆಹಲಿ: ತೆಲುಗು, ತಮಿಳು ಹಾಗೂ ಹಿಂದಿ ಚಿತ್ರರಂಗದಲ್ಲಿ ಹೆಸರು ಮಾಡಿರುವ ನಟಿ ಕಾಜಲ್ ಅಗರ್ವಾಲ್ ಗೆ ಪ್ರಧಾನಿ ನರೇಂದ್ರ ಮೋದಿ ಪತ್ರವೊಂದನ್ನು ಬರೆದಿದ್ದಾರೆ.

    ಮೋದಿ ಮಾರ್ಚ್ 7ರಂದು ಪತ್ರ ಬರೆದಿದ್ದು, ಈ ಬಗ್ಗೆ ಕಾಜಲ್ ಅಗರ್ವಾಲ್ ಟ್ವೀಟ್ ಮಾಡಿದ್ದಾರೆ. ಪತ್ರದಲ್ಲಿ ಕೇಂದ್ರ ಸರ್ಕಾರದ `ಬೇಟಿ ಬಚಾವೋ, ಬೇಟಿ ಪಡಾವೋ’ ಹಾಗೂ ಮಕ್ಕಳ ಮತ್ತು ಮಹಿಳಾ ಅಭಿವೃದ್ಧಿಗೆ ನ್ಯಾಷನಲ್ ನ್ಯೂಟ್ರಿಷನ್ ಮಿಷನ್ ಯೋಜನೆಗಳ ಯಶಸ್ಸಿಗೆ ಸಹಕರಿಸುವಂತೆ ಮನವಿ ಮಾಡಿದ್ದಾರೆ.

    ಕಾಜಲ್ ಅಗರ್ವಾಲ್ ಟ್ವಿಟ್ಟರ್ ನಲ್ಲಿ ಮೋದಿ ಬರೆದ ಪತ್ರವನ್ನು ಶೇರ್ ಮಾಡಿದ್ದಾರೆ. ಮಹಿಳಾ ದಿನಾಚರಣೆಗೆ ಶುಭ ಕೋರಿದ ಪ್ರಧಾನಿಗೆ ಧನ್ಯವಾದ ಹೇಳಿದ್ದಾರೆ. ಅಷ್ಟೇ ಅಲ್ಲದೇ ಮಹಿಳಾ ಸಬಲೀಕರಣಕ್ಕಾಗಿ ಕೇಂದ್ರ ಸರ್ಕಾರ ಕೈಗೊಂಡಿರುವ ಯೋಜನೆಗಳನ್ನು ಮೆಚ್ಚಿಕೊಂಡಿರುವ ನಟಿ, ತಾವು ಕೂಡ ಬೆಂಬಲ ನೀಡುವುದಾಗಿ ಪ್ರತಿಕ್ರಿಯಿಸಿದ್ದಾರೆ.

    ಪ್ರಧಾನಿ ಬರೆದ ಪತ್ರದ ಜೊತೆ ” ಈ ಮಸೂದೆಗಳು ಮತ್ತು ಯೋಜನೆಗೆಳು ತುಂಬಾ ಪ್ರೋತ್ಸಾಹದಾಯಕವಾಗಿದ್ದು, ನಿಜಕ್ಕೂ ನಮ್ಮ ವ್ಯವಸ್ಥೆಗಳಲ್ಲಿ ಬದಲಾವಣೆ ತರುತ್ತದೆ ಎಂದು ನಾನು ನಂಬಿದ್ದೇನೆ” ಎಂದು ಬರೆದು ಟ್ವೀಟ್ ಮಾಡಿದ್ದಾರೆ.

    ಮಾರ್ಚ್ 8ರಂದು ಮಹಿಳಾ ದಿನಾಚರಣೆ ನಿಮಿತ್ತ ಪ್ರಧಾನಿ ಮೋದಿ ನ್ಯಾಷನಲ್ ನ್ಯೂಟಿಷನ್ ಮಿಷನ್ ಯೋಚನೆಗೆ ಚಾಲನೆ ನೀಡಿದ್ದರು. ನಟಿ ಕಾಜಲ್ ಅಗರ್ವಾಲ್ ಸದ್ಯ ಕ್ವೀನ್ ಚಿತ್ರದ ತಮಿಳು ರಿಮೇಕ್ `ಪ್ಯಾರಿಸ್ ಪ್ಯಾರಿಸ್’ ಚಿತ್ರದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ.