ಭೀಮಾ ನದಿ ಒಳಹರಿವು ಹೆಚ್ಚುತ್ತಿದ್ದು, ನದಿ ತೀರದ ಗ್ರಾಮಸ್ಥರಲ್ಲಿ ಪ್ರವಾಹ ಆತಂಕ ಸೃಷ್ಟಿಯಾಗಿದೆ. ಅಲ್ಲದೇ ಅಕ್ಕಪಕ್ಕದ ಊರುಗಳಿಗೆ ನದಿ ನೀರು ನುಗ್ಗುವ ಭೀತಿ ಉಂಟಾಗಿದ್ದು, ನದಿ ತೀರದ ಪ್ರದೇಶಗಳಲ್ಲಿ ತೀವ್ರ ಕಟ್ಟೆಚ್ಚರದಿಂದ ಇರುವಂತೆ ಕಲಬುರಗಿ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ
ಕಲಬುರಗಿ: ಬೇಸಿಗೆ ಆರಂಭವಾದ್ದರಿಂದ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಎಚ್ಚರ ವಹಿಸಬೇಕೆಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ (Sharanaparakash Patil) ತಾಲೂಕಿನ ಪಿಡಿಓಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಸೇಡಂ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ತಾಲೂಕು ಮಟ್ಟದ `ಟಾಸ್ಕ್ ಪೋರ್ಸ್’ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪಂಚಾಯತ್ ಮಟ್ಟದಲ್ಲಿ ಪಿಡಿಓಗಳು ಬೋರ್ವೆಲ್ಗಳು ಹಾಗೂ ಜಲ ಮೂಲಗಳನ್ನು ಪರೀಕ್ಷಿಸಿ ಕ್ರಮಕೈಗೊಂಡು ವರದಿ ಸಲ್ಲಿಸಬೇಕು. ಹೆಚ್ಚು ನೀರಿನ ಸಮಸ್ಯೆ ಇರುವ ಗ್ರಾಮಗಳಲ್ಲಿ ಶಾಶ್ವತ ಬೋರ್ವೆಲ್ ಕೊರೆಸಿ, ಇತರೆ ಬೋರ್ವೆಲ್ಗಳನ್ನು ಫ್ಲಶಿಂಗ್ ಮಾಡಿಸಿ ಜನರ ಅನುಕೂಲಕ್ಕೆ ತಕ್ಕಂತೆ ನೀರು ಪೂರೈಕೆ ಮಾಡಬೇಕು ಎಂದು ತಿಳಿಸಿದರು. ಇದನ್ನೂ ಓದಿ: ಮೈಸೂರಿನಲ್ಲಿ ಯು ಡಿಜಿಟಲ್ ಐದನೇ ವರ್ಷದ ವಾರ್ಷಿಕೋತ್ಸವ
ಸೇಡಂ ತಾಲೂಕಿನಲ್ಲಿ ನೀರಿನ ಪೂರೈಕೆಯಲ್ಲಿ ಎಲ್ಲಿಯೂ ಲೋಪಗಳಾಗದಂತೆ ಎಚ್ಚರಿಕೆ ವಹಿಸಿ ಎಂದು ಸೂಚಿಸಿ, ಅನುದಾನದ ಬಳಕೆಯಲ್ಲಿ ಕುಡಿಯುವ ನೀರಿನ ಸರಬರಾಜಿಗೆ ಆದ್ಯತೆ ನೀಡಿ ಎಂದರು. ಇದನ್ನೂ ಓದಿ: ನಮ್ಮ ಪಕ್ಷದ ಗಾಡಿ ಫುಲ್ ಇದೆ: ಸತೀಶ್ ಜಾರಕಿಹೊಳಿ
ಕಲಬುರಗಿ: ಬಹುಮನಿ ಕೋಟೆಯಲ್ಲಿರುವ ಸೋಮೇಶ್ವರ ದೇವಸ್ಥಾನವನ್ನ (Someshwara Temple) ಪುನರ್ ನಿರ್ಮಾಣ ಮಾಡುವಂತೆ ಹಿಂದೂ ಸಂಘಟನೆಗಳು (Hindu Organisations) ಜಿಲ್ಲಾಡಳಿತಕ್ಕೆ ಆಗ್ರಹಿಸಿವೆ.
ಜ್ಞಾನವಾಪಿ ಮಸೀದಿಯ (Gnanavapi Masjid) ನಂತರ ಕಾಲಗರ್ಭದಲ್ಲಿ ಅಡಗಿ ಹೋಗಿದ್ದ ಮತ್ತೊಂದು ದೇವಸ್ಥಾನದ ವಿಚಾರದ ಚರ್ಚೆ ಮುನ್ನೆಲೆಗೆ ಬಂದಿದೆ. ಕಲಬುರಗಿಯ ಬಹುಮನಿ ಕೋಟೆಯಲ್ಲಿರುವ (Bahumani Fort) ಸೋಮೇಶ್ವರ ದೇವಸ್ಥಾನವನ್ನ ಪುನರ್ ನಿರ್ಮಾಣ ಮಾಡುವಂತೆ ಹಿಂದೂ ಸಂಘಟನೆಗಳು ಜಿಲ್ಲಾಡಳಿತಕ್ಕೆ ಆಗ್ರಹಿಸಿವೆ. ಇದನ್ನು ಓದಿ: ದೆಹಲಿಯಲ್ಲಿ ಅನುದಾನ ಕದನ – ಇಂದು ಕೇಂದ್ರದ ವಿರುದ್ಧ ರಾಜ್ಯ ಸರ್ಕಾರದಿಂದ ಪ್ರತಿಭಟನೆ
ಬಹುಮನಿ ಸುಲ್ತಾನರ ಕೋಟೆಯಲ್ಲಿ ಸೋಮೇಶ್ವರ ದೇವಸ್ಥಾನವಿದ್ದು, ಅದು ಸಂಪೂರ್ಣವಾಗಿ ನಶಿಸಿ ಹೋಗಿದೆ. ಬಹುಮನಿ ಸುಲ್ತಾನರ ಆಳ್ವಿಕೆ ಸಂದರ್ಭದಲ್ಲಿ ಕೋಟೆಯಲ್ಲಿದ್ದ ಸೋಮೇಶ್ವರ ದೇವಸ್ಥಾನವನ್ನು ಕೆಡವಿ ಬಿಟ್ಟಿದ್ದಾರೆ. ಆದರೆ ಅಲ್ಲಿ ದೇವಸ್ಥಾನ ಇತ್ತು ಎನ್ನುವುದಕ್ಕೆ ಸಾಕಷ್ಟು ಸಾಕ್ಷಿ ಪುರಾವೆಗಳು ಸಿಕ್ಕಿವೆ. ಹಾಗಾಗಿ ಶಿವರಾತ್ರಿ ಹಬ್ಬಕ್ಕೂ ಮೊದಲೇ ಅ ದೇವಸ್ಥಾನವನ್ನು ಸ್ವಚ್ಛಗೊಳಿಸಿ ಶಿವಲಿಂಗ ಪ್ರತಿಷ್ಠಾಪನೆ ಮಾಡಿ ಪೂಜೆಗೆ ಅವಕಾಶ ಕಲ್ಪಿಸುವಂತೆ ಆಗ್ರಹ ಕೇಳಿಬಂದಿದೆ. ಇದನ್ನು ಓದಿ:ಪ್ರೀತಿಸಿ ಮದ್ವೆಯಾಗಿ ತಿಂಗಳೊಳಗೆ ತಾಳಿ ಬಿಚ್ಚಿಟ್ಟು ಹೋದ ಪತ್ನಿ – ರಾಷ್ಟ್ರ ಮಟ್ಟದ ಕಬಡ್ಡಿ ಆಟಗಾರ ಆತ್ಮಹತ್ಯೆ
ಈ ಕುರಿತು ಹಿಂದೂ ಜಾಗೃತಿ ಸೇನೆಯ ಲಕ್ಷ್ಮಿಕಾಂತ್ ಸ್ವಾಧಿ ಮಾತನಾಡಿ, ಇನ್ನೂ ಬಹುಮನಿ ಕೋಟೆಯಲ್ಲಿರುವ ಸೋಮೇಶ್ವರ ದೇವಸ್ಥಾನದ ಅಭಿವೃದ್ಧಿಗಾಗಿ ಹಿಂದೂ ಜಾಗೃತಿ ಸೇನೆ ಕಳೆದ ಎರಡು ವರ್ಷಗಳಿಂದ ಹೋರಾಟ ನಡೆಸಿದೆ. ಆದರೆ ಇದೀಗ ಅದಕ್ಕೆ ಮತ್ತೆ ಕೂಗು ಹೆಚ್ಚಾಗಿದೆ. ಕೋಟೆಯಲ್ಲಿ ಶಿವಲಿಂಗ ಸ್ಥಾಪನೆ ಮಾಡುವಂತೆ ಮತ್ತೊಂದು ಬಾರಿ ಜಿಲ್ಲಾಡಳಿತದ ಜೊತೆ ಮನವಿ ಮಾಡಿದ್ದೇವೆ. ಜಿಲ್ಲಾಡಳಿತವೇ ಶಿವಲಿಂಗ ಸ್ಥಾಪನೆ ಮಾಡಿ ಪೂಜೆ ಮಾಡಲಿ. ಇಲ್ಲದೆ ಇದ್ದರೇ ನಾವೇ ದೇವಸ್ಥಾನ ಸ್ವಚ್ಛಗೊಳಿಸಿ ಶಿವಲಿಂಗ ಸ್ಥಾಪನೆ ಮಾಡಿ ಪೂಜೆ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ. ಇದನ್ನು ಓದಿ: ಕಾಸ್ಮೆಟಿಕ್ ಸರ್ಜರಿಗೆ ಬಂದವಳಿಂದ ಲೂಟಿ – ವೈದ್ಯನಿಗೆ 6 ಕೋಟಿ ಪಂಗನಾಮ
ಕಲಬುರಗಿ: ಮದುವೆ ಮಾಡಿಲ್ಲ ಎಂದು ಹೆತ್ತ ತಾಯಿಯನ್ನೇ ಮಗ (Son) ಬರ್ಬರವಾಗಿ ಕೊಲೆ (Murder) ಮಾಡಿರುವ ಘಟನೆ ಜಿಲ್ಲೆಯ ಚಿಂಚೋಳಿ (Chincholi) ತಾಲ್ಲೂಕಿನ ಪೋಚಾವರಂನಲ್ಲಿ ನಡೆದಿದೆ.
ಶೋಭಾ (45) ಮಗನಿಂದ ಕೊಲೆಯಾದ ತಾಯಿ. ಮಗ ಅನಿಲ್ ಮನೆಗೆ ಕುಡಿದು ಬಂದಿದ್ದು, ಕುಡಿದ ನಶೆಯಲ್ಲಿ ಮದುವೆ ಬಗ್ಗೆ ಮಾತನಾಡಿ ತಾಯಿಯೊಂದಿಗೆ ಜಗಳವಾಡಿದ್ದಾನೆ. ಇನ್ನಷ್ಟು ಕೋಪಗೊಂಡ ಅನಿಲ್ ತನಗೆ ಏಕೆ ಮದುವೆ ಮಾಡಿಸಿಲ್ಲ ಎಂದು ತಾಯಿಗೆ ಪ್ರಶ್ನೆ ಮಾಡಿದ್ದಾನೆ. ಬಳಿಕ ಕುಡಿದ ನಶೆಯಲ್ಲಿ ಅಲ್ಲೇ ಇದ್ದ ಕಟ್ಟಿಗೆಯಿಂದ ಕೊಡೆದು ಕೊಲೆ ಮಾಡಿದ್ದಾನೆ. ಇದನ್ನೂ ಓದಿ: ಸ್ನೈಪರ್ ಬಳಸಿ ಅಟ್ಯಾಕ್ – ಪಾಕ್ನಲ್ಲಿ ಉಗ್ರರ ದಾಳಿಗೆ 10 ಮಂದಿ ಪೊಲೀಸ್ ಅಧಿಕಾರಿಗಳು ಬಲಿ
ಕಲಬುರಗಿ: ಅಣ್ಣ-ತಂಗಿ ವರಸೆಯ ಪ್ರೀತಿಗೆ ಪೋಷಕರು (Parents) ನಿರಾಕರಿಸಿದ ಹಿನ್ನೆಲೆ ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ (Suicide) ಶರಣಾಗಿರುವ ಘಟನೆ ಜಿಲ್ಲೆಯ ಯಡ್ರಾಮಿ (Yadrami) ತಾಲೂಕಿನ ಮಾಗಣಗೇರೆ ಗ್ರಾಮದಲ್ಲಿ ನಡೆದಿದೆ.
ಗೊಲ್ಲಾಳಪ್ಪ ಪ್ರೀತಿಯನ್ನು ನಿರಾಕರಿಸಿ ಶಶಿಕಲಾಗೆ ಬೇರೆ ಮದುವೆ ಮಾಡಲು ಕುಟುಂಬಸ್ಥರು ಮುಂದಾಗಿದ್ದರು. ಅದರಂತೆ ವಿಜಯಪುರ ಜಿಲ್ಲೆಯ ಸಿಂಧಗಿ ಗ್ರಾಮದ ಯುವಕನ ಜೊತೆ ನಿಶ್ಚಿತಾರ್ಥ ಮಾಡಿಸಿದ್ದರು. ಮುಂದಿನ ತಿಂಗಳು ಮದುವೆ ಕೂಡ ನಿಶ್ಚಯವಾಗಿತ್ತು ಎನ್ನಲಾಗಿದೆ. ಇದನ್ನೂ ಓದಿ: ನಡು ರಸ್ತೆಯಲ್ಲಿ ಕೊಲೆ ಮಾಡಿ ಪೊಲೀಸರಿಗೆ ಶರಣಾದ ಆರೋಪಿ
ಪ್ರೇಯಸಿಗೆ ಮದುವೆ ನಿಶ್ಚಯ ಆಗಿರುವ ವಿಷಯ ತಿಳಿದ ಗೊಲ್ಲಾಳಪ್ಪ ನಿನ್ನೆ ರಾತ್ರಿ ಶಶಿಕಲಾಳನ್ನು ಮನೆಯಿಂದ ಕರೆದುಕೊಂಡು ಹೋಗಿದ್ದಾನೆ. ನಂತರ ಮಾಗಣಪುರ ಗ್ರಾಮದ ದೇವಸ್ಥಾನದಲ್ಲಿ ಜೋಡಿ ಮದುವೆ ಮಾಡಿಕೊಂಡಿದ್ದಾರೆ. ಬಳಿಕ ಅದೇ ಗ್ರಾಮದ ಹೊರವಾಲಯದ ತೋಟದ ಜಮೀನಿನಲ್ಲಿ ಇಬ್ಬರು ನೇಣಿಗೆ ಶರಣಾಗಿದ್ದಾರೆ. ಪ್ರೇಮಿಗಳಿಬ್ಬರು ನೇಣಿಗೆ ಶರಣಾಗುವ ಮುನ್ನ ತಾವು ಮದುವೆ ಮಾಡಿಕೊಂಡಿರುವುದರ ಬಗ್ಗೆ ಸೆಲ್ಫಿ ಫೋಟೋ ತೆಗೆದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದನ್ನೂ ಓದಿ: ಪೊಲೀಸ್ ಠಾಣೆಯಲ್ಲೇ ಮಹಾರಾಷ್ಟ್ರ ಸಿಎಂ ಪಕ್ಷದ ನಾಯಕನ ಮೇಲೆ ಗುಂಡು ಹಾರಿಸಿದ ಬಿಜೆಪಿ ಶಾಸಕ
ತ್ರಿಮೂರ್ತಿ ಸಹೋದರನಿಗೆ PSI ಹಗರಣದ ಕಿಂಗ್ಪಿನ್ ಆರ್.ಡಿ ಪಾಟೀಲ್ ಗ್ಯಾಂಗ್ ಕೀ ಆನ್ಸರ್ ಒದಗಿಸಿತ್ತು. ಹೀಗಾಗಿ ಆರ್.ಡಿ ಪಾಟೀಲ್ ವಿರುದ್ಧ ಪೊಲೀಸರು FIR ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ. ಇನ್ನು, ಬಂಧಿತರಲ್ಲಿ ಬಹುತೇಕರು ಅಫ್ಜಲಪುರದ ಸೊನ್ನ ಗ್ರಾಮದವರಾಗಿದ್ದಾರೆ. ಇದನ್ನೂ ಓದಿ: ವಿಜಯಪುರದ 40 ಸರ್ಕಾರಿ ಆಸ್ಪತ್ರೆಗಳಿಗೆ ಕಾಯಕಲ್ಪ ಪ್ರಶಸ್ತಿ – ಡಿಸಿ ಮೆಚ್ಚುಗೆ
ಈ ಸಂಬಂಧ ಕಲಬುರಗಿಯಲ್ಲಿ ನಗರ ಪೋಲಿಸ್ ಆಯುಕ್ತ ಆರ್.ಚೇತನ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ಕಲಬುರಗಿ ನಗರದ ಶ್ರೀ ಶರಣಬಸವೇಶ್ವರ ವಿಶ್ವವಿದ್ಯಾಲಯ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ (Kalaburgi Examination Center) ಅಕ್ರಮ ನಡೆದಿದ್ದು, ಅಭ್ಯರ್ಥಿ ತ್ರಿಮೂರ್ತಿ ಹಾಗೂ ಅಭ್ಯರ್ಥಿ ಸಹೋದರ ಅಂಬರೀಷ್ ಮತ್ತು ಆರ್.ಡಿ.ಪಾಟೀಲ್ ವಿರುದ್ಧ ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ ಎಂದು ತಿಳಿಸಿದ್ದಾರೆ.
ಅಭ್ಯರ್ಥಿ ತ್ರಿಮೂರ್ತಿ ತನ್ನ ಎಡ ಕಿವಿಯಲ್ಲಿ ಬ್ಲೂಟೂತ್ ಇಟ್ಟುಕೊಂಡು ಪರೀಕ್ಷೆಯಲ್ಲಿ ಅಕ್ರಮವೆಸಗಿದ್ದಾನೆ. ಪರೀಕ್ಷಾ ಕೇಂದ್ರದ ಹೊರಗಡೆ ಕಾರ್ನಲ್ಲಿ ಕುಳಿತುಕೊಂಡು ಆತನ ಸಹೋದರ ಅಂಬರೀಷ್, ಕೀ ಉತ್ತರ ಹೇಳುತ್ತಿದ್ದದ್ದು ಕಂಡುಬಂದಿದೆ. ಅಂಬರೀಷ್ಗೆ ಆರ್.ಡಿ ಪಾಟೀಲ್ ಹಾಗೂ ಆತನ ಸಂಗಡಿಗರಿಂದ ಕೀ ಉತ್ತರಗಳು ದೊರೆಯುತ್ತಿದ್ದವು ಎಂದು ಮಾಹಿತಿ ಬಂದಿದೆ. ಇದನ್ನೂ ಓದಿ: ಬಿಜೆಪಿ ಕಳೆದ ಹತ್ತು ವರ್ಷಗಳಲ್ಲಿ 2,500 ಶಾಸಕರನ್ನು ಖರೀದಿ ಮಾಡಿದೆ: ಸಂತೋಷ್ ಲಾಡ್
ಪರೀಕ್ಷಾ ಕೇಂದ್ರದ ಮೇಲ್ವಿಚಾರಕರಾದ ಶಿಲ್ಪಾ ಚನ್ನವೀರ ಚಕ್ಕಿ ಅವರು ನೀಡಿ ದೂರಿನ ಅಡಿಯಲ್ಲಿ ಐಪಿಸಿ ಸೆಕ್ಷನ್ 420, 120ಬಿ, 109, 114, 36, 37, 34 ಅಡಿಯಲ್ಲಿ ಕೇಸ್ ದಾಖಲಿಸಲಾಗಿದ್ದು, ಸಂಪೂರ್ಣ ತನಿಖೆ ನಂತರವೇ ಸತ್ಯಾಂಶ ತಿಳಿಯಲಿದೆ ಎಂದು ತಿಳಿಸಿದ್ದಾರೆ.
ಹಾವೇರಿ: ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿ ಕ್ರಾಸ್ ಬಳಿ ನಿನ್ನೆ ನಡೆದ ಕಾರು ಅಪಘಾತದಲ್ಲಿ ಮೃತಪಟ್ಟಿದ್ದ ವಿಜಯಪುರ ಜಿಲ್ಲೆ ಸಿಂದಗಿ ಪೊಲೀಸ್ ಠಾಣೆ ಸಿಪಿಐ ರವಿ ಉಕ್ಕುಂದ ಅಂತ್ಯಕ್ರಿಯೆ ಇಂದು ಅವರ ಹುಟ್ಟೂರು ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಅರಳೀಕಟ್ಟಿ ಗ್ರಾಮದಲ್ಲಿ ನಡೆಯಿತು.
ನಿನ್ನೆ ಕಾರಿನಲ್ಲಿ ಸಿಂದಗಿಯಿಂದ ಪತ್ನಿಯೊಂದಿಗೆ ಕಲಬುರಗಿಗೆ ಹೊರಟಿದ್ದರು. ಈ ವೇಳೆ ಕಂಟೇನರ್ ಲಾರಿಗೆ ಕಾರು ಡಿಕ್ಕಿ ಹೊಡೆದು ಸ್ಥಳದಲ್ಲೇ ಸಿಪಿಐ ರವಿ ಉಕ್ಕುಂದ ಮತ್ತು ಅವರ ಪತ್ನಿ ಮಧು ಮೃತಪಟ್ಟಿದ್ದರು. ಸುಮಾರು 6 ವರ್ಷಗಳ ಕಾಲ ಕೊಪ್ಪಳ ಜಿಲ್ಲೆಯಲ್ಲಿ ಸಿಪಿಐ ಆಗಿ ಕೆಲಸ ನಿರ್ವಹಿಸಿ ಪ್ರಸ್ತುತ ವಿಜಯಪುರ ಜಿಲ್ಲೆಯ ಸಿಂದಗಿ ಪೊಲೀಸ್ ಠಾಣೆಯ ಸಿಪಿಐ ಆಗಿ ರವಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇದನ್ನೂ ಓದಿ: ಗುಜರಾತ್ ಚುನಾವಣೆ – AAP ಸಿಎಂ ಅಭ್ಯರ್ಥಿಗೆ ಸೋಲು
ಸಿಪಿಐ ರವಿ ಸಾವಿಗೆ ಅರಳೀಕಟ್ಟಿ, ಕೊಪ್ಪಳ, ವಿಜಯಪುರ ಜಿಲ್ಲೆಯ ಜನರು ಕಂಬನಿ ಮಿಡಿದಿದ್ದಾರೆ. ಮೃತ ದಂಪತಿಯ ಅಂತ್ಯಕ್ರಿಯೆ ಅರಳೀಕಟ್ಟಿ ಗ್ರಾಮದಲ್ಲಿ ನಡೆಯಿತು. ಮೃತ ದಂಪತಿಗೆ ಓರ್ವ ಪುತ್ರ ಮತ್ತು ಓರ್ವ ಪುತ್ರಿ ಇದ್ದಾರೆ. ಇನ್ನೂ ಚಿಕ್ಕ ವಯಸ್ಸಿನಲ್ಲಿರುವ ಇಬ್ಬರು ಮಕ್ಕಳನ್ನು ಬಿಟ್ಟು ಸಿಪಿಐ ರವಿ ಮತ್ತು ಅವರ ಪತ್ನಿ ಮಧು ಬಾರದ ಲೋಕಕ್ಕೆ ತೆರಳಿದ್ದಕ್ಕೆ ನೆರೆದಿದ್ದ ಜನ ಕಂಬನಿ ಮಿಡಿದರು. ಇದನ್ನೂ ಓದಿ: 1 ತಿಂಗಳ ಹಿಂದೆ ಪಿಯೂಷ್ ಗೋಯಲ್ ಹೇಳಿದ್ದ ಭವಿಷ್ಯ ನಿಜವಾಯ್ತು – ವೀಡಿಯೋ ವೈರಲ್
Live Tv
[brid partner=56869869 player=32851 video=960834 autoplay=true]
ಹುಬ್ಬಳ್ಳಿ: ಸ್ನಾನ ಮಾಡುವಾಗ ಬಾತ್ರೂಮ್ನಲ್ಲಿ ಕಾಲು ಜಾರಿ ಬಿದ್ದು ಶಾಸಕರೊಬ್ಬರು ಕಾಲು ಮುರಿದುಕೊಂಡಿರುವ ಹುಬ್ಬಳ್ಳಿಯಲ್ಲಿ ನಡದಿದೆ.
ಕಲಬುರಗಿಯ ಅಫಜಲಪುರ ಶಾಸಕ ಎಮ್.ವೈ ಪಾಟೀಲ್ ಕಾಲು ಮುರಿದುಕೊಂಡರು. ನಿನ್ನೆ ಸಿದ್ದರಾಮೋತ್ಸವದಲ್ಲಿ ಪಾಲ್ಗೊಂಡಿದ್ದ ಎಂ.ವೈ.ಪಾಟೀಲ್, ವಾಪಸ್ಸು ಊರಿಗೆ ತೆರಳಲು ತಡವಾದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಸರ್ಕಿಟ್ ಹೌಸ್ನಲ್ಲಿ ಉಳಿದುಕೊಂಡಿದ್ದರು. ಇಂದು ಬೆಳಗ್ಗೆ ಸ್ನಾನ ಮಾಡಲು ಹೋದಾಗ ಜಾರಿ ಬಿದ್ದು ಕಾಲು ಮುರಿದುಕೊಂಡಿದ್ದಾರೆ. ಇದನ್ನೂ ಓದಿ: 750 ಶಾಲಾ ವಿದ್ಯಾರ್ಥಿನಿಯರಿಂದ ತಯಾರಾಯ್ತು ಆಜಾದಿ ಸ್ಯಾಟಲೈಟ್
ಕೂಡಲೇ ಜೊತೆಗಿದ್ದ ಅವರ ಆಪ್ತರು ಅಂಬ್ಯುಲೆನ್ಸ್ ಮೂಲಕ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಸದ್ಯ ಶಾಸಕ ಎಂ.ವೈ ಪಾಟೀಲ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಭೂ ಹಗರಣ ಪ್ರಕರಣ – ಸಂಜಯ್ ರಾವತ್ ಪತ್ನಿಗೆ ಇಡಿ ಸಮನ್ಸ್
Live Tv
[brid partner=56869869 player=32851 video=960834 autoplay=true]