ತ್ರಿಮೂರ್ತಿ ಸಹೋದರನಿಗೆ PSI ಹಗರಣದ ಕಿಂಗ್ಪಿನ್ ಆರ್.ಡಿ ಪಾಟೀಲ್ ಗ್ಯಾಂಗ್ ಕೀ ಆನ್ಸರ್ ಒದಗಿಸಿತ್ತು. ಹೀಗಾಗಿ ಆರ್.ಡಿ ಪಾಟೀಲ್ ವಿರುದ್ಧ ಪೊಲೀಸರು FIR ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ. ಇನ್ನು, ಬಂಧಿತರಲ್ಲಿ ಬಹುತೇಕರು ಅಫ್ಜಲಪುರದ ಸೊನ್ನ ಗ್ರಾಮದವರಾಗಿದ್ದಾರೆ. ಇದನ್ನೂ ಓದಿ: ವಿಜಯಪುರದ 40 ಸರ್ಕಾರಿ ಆಸ್ಪತ್ರೆಗಳಿಗೆ ಕಾಯಕಲ್ಪ ಪ್ರಶಸ್ತಿ – ಡಿಸಿ ಮೆಚ್ಚುಗೆ
ಈ ಸಂಬಂಧ ಕಲಬುರಗಿಯಲ್ಲಿ ನಗರ ಪೋಲಿಸ್ ಆಯುಕ್ತ ಆರ್.ಚೇತನ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ಕಲಬುರಗಿ ನಗರದ ಶ್ರೀ ಶರಣಬಸವೇಶ್ವರ ವಿಶ್ವವಿದ್ಯಾಲಯ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ (Kalaburgi Examination Center) ಅಕ್ರಮ ನಡೆದಿದ್ದು, ಅಭ್ಯರ್ಥಿ ತ್ರಿಮೂರ್ತಿ ಹಾಗೂ ಅಭ್ಯರ್ಥಿ ಸಹೋದರ ಅಂಬರೀಷ್ ಮತ್ತು ಆರ್.ಡಿ.ಪಾಟೀಲ್ ವಿರುದ್ಧ ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ ಎಂದು ತಿಳಿಸಿದ್ದಾರೆ.
ಅಭ್ಯರ್ಥಿ ತ್ರಿಮೂರ್ತಿ ತನ್ನ ಎಡ ಕಿವಿಯಲ್ಲಿ ಬ್ಲೂಟೂತ್ ಇಟ್ಟುಕೊಂಡು ಪರೀಕ್ಷೆಯಲ್ಲಿ ಅಕ್ರಮವೆಸಗಿದ್ದಾನೆ. ಪರೀಕ್ಷಾ ಕೇಂದ್ರದ ಹೊರಗಡೆ ಕಾರ್ನಲ್ಲಿ ಕುಳಿತುಕೊಂಡು ಆತನ ಸಹೋದರ ಅಂಬರೀಷ್, ಕೀ ಉತ್ತರ ಹೇಳುತ್ತಿದ್ದದ್ದು ಕಂಡುಬಂದಿದೆ. ಅಂಬರೀಷ್ಗೆ ಆರ್.ಡಿ ಪಾಟೀಲ್ ಹಾಗೂ ಆತನ ಸಂಗಡಿಗರಿಂದ ಕೀ ಉತ್ತರಗಳು ದೊರೆಯುತ್ತಿದ್ದವು ಎಂದು ಮಾಹಿತಿ ಬಂದಿದೆ. ಇದನ್ನೂ ಓದಿ: ಬಿಜೆಪಿ ಕಳೆದ ಹತ್ತು ವರ್ಷಗಳಲ್ಲಿ 2,500 ಶಾಸಕರನ್ನು ಖರೀದಿ ಮಾಡಿದೆ: ಸಂತೋಷ್ ಲಾಡ್
ಪರೀಕ್ಷಾ ಕೇಂದ್ರದ ಮೇಲ್ವಿಚಾರಕರಾದ ಶಿಲ್ಪಾ ಚನ್ನವೀರ ಚಕ್ಕಿ ಅವರು ನೀಡಿ ದೂರಿನ ಅಡಿಯಲ್ಲಿ ಐಪಿಸಿ ಸೆಕ್ಷನ್ 420, 120ಬಿ, 109, 114, 36, 37, 34 ಅಡಿಯಲ್ಲಿ ಕೇಸ್ ದಾಖಲಿಸಲಾಗಿದ್ದು, ಸಂಪೂರ್ಣ ತನಿಖೆ ನಂತರವೇ ಸತ್ಯಾಂಶ ತಿಳಿಯಲಿದೆ ಎಂದು ತಿಳಿಸಿದ್ದಾರೆ.