Tag: Kalaghatgi

  • ಅನಾರೋಗ್ಯದಿಂದ ಬಿಜೆಪಿ ಮಾಜಿ ಶಾಸಕ ಸಿಎಂ ನಿಂಬಣ್ಣವರ್ ನಿಧನ

    ಅನಾರೋಗ್ಯದಿಂದ ಬಿಜೆಪಿ ಮಾಜಿ ಶಾಸಕ ಸಿಎಂ ನಿಂಬಣ್ಣವರ್ ನಿಧನ

    ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಬಿಜೆಪಿ ಮಾಜಿ (BJP) ಶಾಸಕ ಸಿ.ಎಂ ನಿಂಬಣ್ಣವರ್ (77) (CM Nimbannavar) ಬನ್ನೇರುಘಟ್ಟದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.

    ಕಲಘಟಗಿ (Kalaghatgi) ಕ್ಷೇತ್ರದ ಮಾಜಿ ಶಾಸಕರಾಗಿದ್ದ ಅವರು, ಕಾಲು ನೋವು ಎಂದು ಆಸ್ಪತ್ರೆಗೆ ದಾಖಲಾಗಿದ್ದರು. ಭಾನುವಾರ ಬೆಳಗ್ಗೆ 11:10 ರ ಸಮಯಕ್ಕೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಪಾರ್ಥಿವ ಶರೀರವನ್ನು ಕಲಘಟಗಿಗೆ ಕೊಂಡೊಯ್ಯಲು ಸಿದ್ಧತೆ ನಡೆಸಲಾಗಿದೆ. ಸೋಮವಾರ ಮಧ್ಯಾಹ್ನ 3 ಗಂಟೆಗೆ ಅಂತ್ಯ ಸಂಸ್ಕಾರ ನೆರವೇರಲಿದೆ. ಇದನ್ನೂ ಓದಿ: ಮಂಗಳೂರಿನಲ್ಲಿ ಕಾರ್ಮಿಕನನ್ನು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಂದ ಅಂಗಡಿ ಮಾಲೀಕ

    ಧಾರವಾಡ ಜಿಲ್ಲೆ ಕಲಘಟಗಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾಗಿದ್ದ ಅವರು ಸಾಕಷ್ಟು ಜನಪ್ರಿಯತೆಯನ್ನು ಹೊಂದಿದ್ದರು. 2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದರು. ಆದರೆ, ಈ ಬಾರಿ ಚುನಾವಣೆಯಲ್ಲಿ ಅವರಿಗೆ ಬಿಜೆಪಿಯಿಂದ ಟಿಕೆಟ್ ನಿರಾಕರಿಸಲಾಗಿತ್ತು.

    ಇಂಗ್ಲಿಷ್ ವಿಷಯದಲ್ಲಿ ಬಿಎ ಪದವಿ, ಕರ್ನಾಟಕ ವಿಶ್ವವಿದ್ಯಾಲಯದಿಂದ ರಾಜ್ಯಶಾಸ್ತ್ರದಲ್ಲಿ ಎಂಎ ಹಾಗೂ ಎಲ್‍ಎಲ್‍ಬಿ ಪದವಿಗಳನ್ನು ಅವರು ಪಡೆದಿದ್ದರು. ಅಲ್ಲದೇ ಮೈಸೂರು ವಿಶ್ವವಿದ್ಯಾಲಯದಿಂದ ಬಿ.ಇಡಿ ಪದವಿಯನ್ನೂ ಪಡೆದಿದ್ದ ಅವರು ಶಿಕ್ಷಕರಾಗಿಯೂ ಸೇವೆ ಸಲ್ಲಿಸಿದ್ದರು. ಕಲಘಟಗಿ ತಾಲೂಕಿನ ಮಿಶ್ರಿಕೋಟಿಯಲ್ಲಿರುವ ಸಹಕಾರಿ ಶಿಕ್ಷಣ ಸಂಸ್ಥೆಯ ಪ್ರೌಢಶಾಲೆಯಲ್ಲಿ 1970ರಲ್ಲಿ ಇಂಗ್ಲಿಷ್ ಶಿಕ್ಷಕರಾಗಿದ್ದರು. ಬಳಿಕ ಇಲ್ಲಿಯೇ ಮುಖ್ಯೋಪಾಧ್ಯಾಯರಾಗಿ ಪದೋನ್ನತಿ ಹೊಂದಿದ್ದರು. ಮುಂದೆ ಇದೇ ಸಂಸ್ಥೆಯ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯರಾಗಿಯೂ ಕಾರ್ಯನಿರ್ವಹಿಸಿದ್ದರು. ಇವರಿಗೆ ಶಿಕ್ಷಣ ಇಲಾಖೆಯಿಂದ ಅತ್ಯತ್ತಮ ಶಿಕ್ಷಕ ಪ್ರಶಸ್ತಿ ಸಹ ಲಭಿಸಿತ್ತು. 10 ವರ್ಷಗಳ ಸೇವಾವಧಿ ಬಾಕಿ ಇರುವಾಗಲೇ (1994 ಸೆಪ್ಟೆಂಬರ್ 30ರಂದು) ಸ್ವಯಂ ನಿವೃತ್ತಿ ತೆಗೆದುಕೊಂಡಿದ್ದರು.

    ಬಳಿಕ ವಕೀಲ ವೃತ್ತಿಯನ್ನು ಆರಂಭಿಸಿದ್ದ ಅವರು, ಕಲಘಟಗಿ ತಾಲೂಕಿನ ಗ್ರಾಮೀಣ ಭಾಗದಲ್ಲಿನ ಅನೇಕ ಮೊಕದ್ದಮೆಗಳನ್ನು ಕೈಗೆತ್ತಿಕೊಂಡು ರಾಜಿ ಮೂಲಕ ಬಗೆಹರಿಸಿದ್ದರು. ಇದು ಅವರಿಗೆ ಈ ಭಾಗದಲ್ಲಿ ಸಾಕಷ್ಟು ಜನಪ್ರಿಯತೆಯನ್ನು ತಂದುಕೊಟ್ಟಿತ್ತು. ವಕೀಲರ ಸಂಘದ ಅಧ್ಯಕ್ಷರಾಗಿ ಎರಡು ಅವಧಿಗೆ ಕಾರ್ಯ ನಿರ್ವಹಿಸಿದ್ದರು. ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಕಲಘಟಗಿ ತಾಲೂಕಿನ ಮಿಶ್ರಿಕೋಟಿ ಸಹಕಾರಿ ಶಿಕ್ಷಣ ಸಂಸ್ಥೆ ಆಡಳಿತ ಮಂಡಳಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

    ಸಿ.ಎಂ. ನಿಂಬಣ್ಣವರ್ 1995ರಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು. 27 ವರ್ಷಗಳಿಂದ ಸಕ್ರಿಯ ರಾಜಕಾರಣದಲ್ಲಿದ್ದ ಅವರು, ಕಲಘಟಗಿ ತಾಲೂಕು ಬಿಜೆಪಿ ಅಧ್ಯಕ್ಷರಾಗಿ ಪಕ್ಷ ಸಂಘಟನೆಯನ್ನು ಮಾಡಿದ್ದರು. 2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಇವರು ಗೆಲುವು ಸಾಧಿಸಿದ್ದರು. ಆದರೆ, 2023ರ ವಿಧಾನಸಭಾ ಚುನಾವಣೆಯಲ್ಲಿ ಇವರು ಟಿಕೆಟ್ ಆಕಾಂಕ್ಷಿಯಾಗಿದ್ದರು. ಹಾಲಿ ಶಾಸಕರಾಗಿದ್ದರೂ ಈ ಬಾರಿ ಬಿಜೆಪಿ ಅವರಿಗೆ ಟಿಕೆಟ್ ನಿರಾಕರಿಸಿತ್ತು. ಕೆಲವೇ ತಿಂಗಳ ಹಿಂದೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ನಾಗರಾಜ ಛಬ್ಬಿಗೆ ಬಿಜೆಪಿ ಟಿಕೆಟ್ ಕೊಟ್ಟಿತ್ತು. ಆದರೆ ಅವರು ಈ ಬಾರಿ ಸೋಲು ಕಂಡಿದ್ದರು. ತಮಗೆ ಟಿಕೆಟ್ ಕೈತಪ್ಪಿದ್ದರ ಬಗ್ಗೆ ಸಿ.ಎಂ. ನಿಂಬಣ್ಣವರ್ ಹಲವಾರು ಬಾರಿ ತೀವ್ರ ಅಸಮಾಧಾನವನ್ನು ವ್ಯಕ್ತಪಡಿಸಿದ್ದರು. ಇದನ್ನೂ ಓದಿ: ಚಿಕ್ಕೋಡಿಯ ಜೈನಮುನಿ ಹತ್ಯೆ ಖಂಡನೀಯ – ಸಮಗ್ರ ತನಿಖೆ ಆಗಲಿ: ಕಟೀಲ್ ಒತ್ತಾಯ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಾರು, ಟ್ಯಾಂಕರ್ ನಡುವೆ ಭೀಕರ ಅಪಘಾತ – ಪ್ರವಾಸಕ್ಕೆ ತೆರಳುತ್ತಿದ್ದ ಮೂವರು ಮಸಣಕ್ಕೆ

    ಕಾರು, ಟ್ಯಾಂಕರ್ ನಡುವೆ ಭೀಕರ ಅಪಘಾತ – ಪ್ರವಾಸಕ್ಕೆ ತೆರಳುತ್ತಿದ್ದ ಮೂವರು ಮಸಣಕ್ಕೆ

    ಹುಬ್ಬಳ್ಳಿ: ಕಾರು (Car) ಮತ್ತು ಟ್ಯಾಂಕರ್ (Tanker) ನಡುವೆ ಭೀಕರ ಅಪಘಾತ (Accident) ಸಂಭವಿಸಿದ ಪರಿಣಾಮ ಪ್ರವಾಸಕ್ಕೆ ತೆರಳುತ್ತಿದ್ದ ಮೂವರು ಯುವಕರು ಸಾವನ್ನಪ್ಪಿರುವ ಘಟನೆ ಧಾರವಾಡ (Dharwad) ಜಿಲ್ಲೆಯಲ್ಲಿ ನಡೆದಿದೆ.

    ಕಲಘಟಗಿ (Kalaghatgi) ತಾಲೂಕಿನ ಸಂಗಟಿಕೊಪ್ಪ ಬಳಿ ಈ ಭೀಕರ ಅಪಘಾತ ಸಂಭವಿಸಿದೆ. ಪ್ರವಾಸಕ್ಕೆ ಹೊರಟಿದ್ದ ಮೊಹಮ್ಮದ್ ಇಶಾನ್, ಮೊಹಮ್ಮದ್ ಸೈಫ್ ಹಾಗೂ ಇಸ್ಮಾಯಿಲ್ ಸಾವನ್ನಪ್ಪಿದ್ದಾರೆ. ಮೃತ ಯುವಕರನ್ನು ಹುಬ್ಬಳ್ಳಿ ನಿವಾಸಿಗಳೆಂದು ಗುರುತಿಸಲಾಗಿದೆ.

    ಒಟ್ಟು 6 ಯುವಕರು ಹುಬ್ಬಳ್ಳಿಯಿಂದ ತಮ್ಮ ಕಾರಿನಲ್ಲಿ ಕಾರವಾರದ ಕಡೆ ಪ್ರವಾಸಕ್ಕೆ ತೆರಳುತ್ತಿದ್ದರು. ಈ ವೇಳೆ ಸಂಗಟಿಕೊಪ್ಪದಲ್ಲಿ ಟ್ಯಾಂಕರ್ ಹಾಗೂ ಕಾರಿನ ನಡುವೆ ಅಪಘಾತ ಉಂಟಾಗಿದೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದರೆ, ಓರ್ವ ಯುವಕ ಚಿಕಿತ್ಸೆ ಫಲಕಾರಿಯಾಗದೇ ಕಿಮ್ಸ್‌ನಲ್ಲಿ ಕೊನೆಯುಸಿರೆಳೆದ್ದಾನೆ. ಇದನ್ನೂ ಓದಿ: ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಘಟನೆ – ಮೃತದೇಹವನ್ನು ಹಲವು ಕಿ.ಮೀ ಎಳೆದೊಯ್ದ ಕಾರು

    ಯುವಕರು ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದಾಗ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋಗಳನ್ನು ಕೂಡಾ ಅಪ್ಲೋಡ್ ಮಾಡಿದ್ದರು. ಘಟನೆ ಬಗ್ಗೆ ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: 13ರ ಬಾಲಕಿಗೆ 114 ಬಾರಿ ಇರಿದು ಕೊಂದ ಸಹಪಾಠಿ ತಪ್ಪೊಪ್ಪಿಗೆ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಆಹಾರ ಕಿಟ್‍ಗಾಗಿ ಬಿಜೆಪಿ ಶಾಸಕನ ಮನೆ ಮುಂದೆ ಜಮಾಯಿಸಿದ ಜನ

    ಆಹಾರ ಕಿಟ್‍ಗಾಗಿ ಬಿಜೆಪಿ ಶಾಸಕನ ಮನೆ ಮುಂದೆ ಜಮಾಯಿಸಿದ ಜನ

    ಹುಬ್ಬಳ್ಳಿ: ಆಹಾರ ಕಿಟ್ ನೀಡುವಂತೆ ಆಗ್ರಹಿಸಿ ಬಿಜೆಪಿ ಶಾಸಕರ ಮನೆ ಮುಂದೆ ಜನಸ್ತೋಮವೇ ನೆರೆದಿದ್ದ ಪ್ರಸಂಗ ಇಂದು ಧಾರವಾಡ ಜಿಲ್ಲೆಯ ಕಲಘಟಗಿಯಲ್ಲಿ ಕಂಡು ಬಂದಿತು.

    ಕಲಘಟಗಿ ಮತಕ್ಷೇತ್ರದ ಶಾಸಕ ಸಿ.ಎಂ.ನಿಂಬಣ್ಣವರ ಮನೆ ಮುಂದೆ ಕಲಘಟಗಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮದ ನೂರಾರು ಜನರು ಆಹಾರ ಕಿಟ್ ನೀಡುವಂತೆ ಆಗ್ರಹಿಸಿ ಜಮಾಯಿಸಿದ್ದರು. ಈ ವೇಳೆ ಮಹಿಳೆಯರು ಯಾವುದೇ ಸಾಮಾಜಿಕ ಕಾಯ್ದುಕೊಳ್ಳಲೇ ಇಲ್ಲ.

    ಕಾರ್ಮಿಕ ಇಲಾಖೆಯಿಂದ ಕಾರ್ಮಿಕರಿಗೆ ವಿತರಣೆ ಮಾಡಲು ನೀಡಿದ ಕಿಟ್‍ಗಳನ್ನು ಶಾಸಕರು ಬಿಜೆಪಿ ಕಾರ್ಯಕರ್ತರಿಗೆ ನೀಡಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿತ್ತು. ಇದರಿಂದಾಗಿ ಸಾರ್ವಜನಿಕರು ನೂರಾರು ಸಂಖ್ಯೆಯಲ್ಲಿ ಶಾಸಕರ ಮನೆಗೆ ಮುತ್ತಿಗೆ ಹಾಕಿದರು. “ರಾಜ್ಯದ ವಿವಿಧೆಡೆ ಬಡವರಿಗೆ ಆಹಾರ ಕಿಟ್ ವಿತರಿಸುತ್ತಿದ್ದಾರೆ. ನಮಗೂ ಆಹಾರದ ಕಿಟ್‍ಗಳನ್ನು ಕೊಡಿ” ಎಂದು ಆಗ್ರಹಿಸಿದರು.

    ಪ್ರತಿಭಟನೆಗೆ ಮುಂದಾಗಿದ್ದ ಮಹಿಳೆಯರನ್ನು ಶಾಸಕರ ಸಹಾಯರು ತಡೆದು ವಾಪಸ್ ಕಳುಹಿಸಿದರು. ಇದರಿಂದಾಗಿ ಕೋಪಗೊಂಡ ಮಹಿಳೆಯರು, ಬಡವರಿಗೆ ವಿತರಿಸಲು ಸರ್ಕಾರ ಕೊಟ್ಟ ಆಹಾರದ ಕಿಟ್‍ಗಳನ್ನು ಇವರೇ ಹಂಚಿಕೊಂಡಿದ್ದಾರೆ. ಇವರಿಗೆ ಸರಿಯಾಗಿ ಪಾಠ ಕಲಿಸಬೇಕು ಎಂದು ಅಸಮಾಧಾನ ಹೊರಹಾಕಿ ತಮ್ಮ ಮನೆಗಳಿಗೆ ಹಿಂತಿರುಗಿದರು.

  • ದೇವಸ್ಥಾನದ ವಿಚಾರಕ್ಕೆ ಗ್ರಾ.ಪಂ ಮಾಜಿ ಅಧ್ಯಕ್ಷ, ಪುತ್ರನ ಬರ್ಬರ ಹತ್ಯೆ

    ದೇವಸ್ಥಾನದ ವಿಚಾರಕ್ಕೆ ಗ್ರಾ.ಪಂ ಮಾಜಿ ಅಧ್ಯಕ್ಷ, ಪುತ್ರನ ಬರ್ಬರ ಹತ್ಯೆ

    – ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡಿದ್ರೂ ಕ್ಯಾರೇ ಎನ್ನಲಿಲ್ಲ ಕ್ರೂರಿಗಳು

    ಧಾರವಾಡ: ದೇವಸ್ಥಾನದ ವಿಚಾರವಾಗಿ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಹಾಗೂ ಆತನ ಮಗನನ್ನು ಬರ್ಬರವಾಗಿ ಕೊಲೆಗೈದ ಅಮಾನವೀಯ ಘಟನೆ ಕಲಘಟಗಿ ತಾಲೂಕಿನ ಜಮ್ಮಿಹಾಳ ಗ್ರಾಮದಲ್ಲಿ ನಡೆದಿದೆ.

    ಜಮ್ಮಿಹಾಳ ಗ್ರಾಮದ ವೀರಭದ್ರಪ್ಪ ಸತ್ತೂರು (55) ಹಾಗೂ ರವಿಕುಮಾರ್ ಸತ್ತೂರು (29) ಕೊಲೆಯಾದ ತಂದೆ-ಮಗ. ಅದೇ ಗ್ರಾಮದ ಅಕ್ಕಿ ಕುಟುಂಬದ ಕೆಲವರು ಕೃತ್ಯ ಎಸಗಿದ ಆರೋಪಿಗಳು. ಗ್ರಾಮದ ಹೊರ ವಲಯದಲ್ಲಿ ಸೋಮವಾರ ರಾತ್ರಿ ಘಟನೆ ನಡೆದಿದೆ.

    ಜಮೀನು ಹಾಗೂ ಬೂದನಗುಡ್ಡದ ಬಸವೇಶ್ವರ ದೇವಸ್ಥಾನ ವಿಚಾರವಾಗಿ ಈ ಹಿಂದೆ ಸುತ್ತೂರು ಹಾಗೂ ಅಕ್ಕಿ ಕುಟುಂಬಗಳ ನಡುವೆ ಜಗಳವಾಗಿತ್ತು. ಸೋಮವಾರ ರಾತ್ರಿ 11 ಗಂಟೆ ಸುಮಾರು ಎರಡೂ ಕುಟುಂಬಗಳ ಸದಸ್ಯರ ಮಧ್ಯೆ ಮಾತಿಗೆ ಮಾತು ಬೆಳೆದು ಕೈ ಕೈ ಮಿಲಾಯಿಸಿದ್ದಾರೆ. ವೀರಭದ್ರಪ್ಪ ಅವರ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಅಷ್ಟೇ ಅಲ್ಲ ಕೆಲವರ ಮೇಲೆ ಹಲ್ಲೆ ಮಾಡಲಾಗಿದ್ದು, ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದವರ ಬಗ್ಗೆ ಆರೋಪಿಗಳು ಕಿಂಚಿತ್ತು ಕರುಣೆ ತೋರಲಿಲ್ಲ ಎಂದು ಸ್ಥಳೀಯರು ದೂರಿದ್ದಾರೆ.

    ಈ ಕುರಿತು ಪ್ರತಿಕ್ರಿಯೆ ನೀಡಿರುವ ಧಾರವಾಡ ಎಸ್‍ಪಿ ವರ್ತಿಕಾ ಕಟಿಯಾರ್, ವೀರಭದ್ರಪ್ಪ ಸ್ಥಳದಲ್ಲೇ ಸಾವನ್ನಪಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ರವಿಕುಮಾರ್ ನನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ಬೆಳಗ್ಗೆ 7 ಗಂಟೆ ಸುಮಾರು ಮೃತಪಟ್ಟಿದ್ದಾನೆ. ಉಳಿದಂತೆ 5 ಜನ ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

    ಈ ಸಂಬಂಧ ಕಲ್ಲಪ್ಪ ಸತ್ತೂರು ಅವರು ಕಲಘಟಗಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ನಮ್ಮ ಸಿಬ್ಬಂದಿ 17 ಜನ ಆರೋಪಿಗಳ ಪೈಕಿ 13 ಮಂದಿಯನ್ನು ಬಂಧಿಸಿದ್ದಾರೆ. ಈಗಾಗಲೇ ವಿಚಾರಣೆ ಕೂಡ ನಡೆಸುತ್ತಿದ್ದಾರೆ. ಅಷ್ಟೇ ಅಲ್ಲದೆ ಜಮ್ಮಿಹಾಳ ಗ್ರಾಮದಲ್ಲಿ ಸದ್ಯ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ ಎಂದು ತಿಳಿಸಿದರು.