ಕಲಬುರಗಿ: ಊಟ ಕೇಳಿದ 4 ವರ್ಷದ ಮುಗ್ಧ ಮಗುವಿನ ಕೈಯನ್ನು ಕೆಂಡದ ಕಿಡಿಯಿಂದ ಮಲತಾಯಿ ಮನಬಂದಂತೆ ಸುಟ್ಟಿರುವ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ನಾಲವಾರ ತಾಂಡಾ ಗ್ರಾಮದಲ್ಲಿ ನಡೆದಿದೆ.
ತಾಲೂಕಿನ ನಾಲವಾರ ತಾಂಡಾದ ತಿಪ್ಪಣ್ಣ ಎಂಬುವರು ಪತ್ನಿ ಮರಣ ನಂತರ ಪುತ್ರಿ ಸೋನಾಲಿಕಾಗೆ ಅಮ್ಮನ ಪ್ರೀತಿ ಸಿಗಬೇಕೆಂದು ಮರೆಮ್ಮಳನ್ನು 2ನೇ ಮದುವೆ ಆಗಿದ್ದರು. ಆದರೆ, ಕೆಲಸದ ನಿಮಿತ್ತ ತಿಪ್ಪಣ್ಣ ಪೂನಾಗೆ ಹೋಗಿದ್ದು, ಇತ್ತ ಸೋನಾಲಿಕಾಗೆ ಮರೆಮ್ಮ ಮನಬಂದಂತೆ ಹಿಂಸಿಸುತ್ತಿದ್ದಾಳೆ. ಇದನ್ನೂ ಓದಿ: ಧರ್ಮ ದಂಗಲ್‌ಗೆ ತೆರೆ ಎಳೆಯಲು ಮುಂದಾದ ಬಿಜೆಪಿ – ರಾಜ್ಯ ಘಟಕಗಳಿಗೆ ಹೈಕಮಾಂಡ್ ವಾರ್ನಿಂಗ್
ನಾಲ್ಕು ವರ್ಷ ಸೋನಲಿಕ ಮಲತಾಯಿಗೆ ಊಟ ಕೇಳಿದರೆ ಹೊಡೆಯುವುದು, ಬಡಿಯುವುದು, ಮಂಚಕ್ಕೆ ಕಟ್ಟಿ ಹಾಕುವುದು, ಮೈ ಕೈ ಸುಡುವುದು ಮಾಡಿದ್ದಾಳೆ. ದಿನನಿತ್ಯ ಹೀಗೆ ಕಿರುಕುಳ ನೀಡುತ್ತಿದ್ದನ್ನು ನೋಡುತ್ತಿದ್ದ ಜನ ಕಳೆದ 3-4 ದಿನಗಳಿಂದ ಆಟವಾಡಲು ಮಗು ಹೊರಗೆ ಬರದೇ ಇರುವುದರಿಂದ ಸಂಶಯಗೊಂಡು ಮನೆಗೆ ಹೋಗಿದ್ದಾರೆ. ಇದನ್ನೂ ಓದಿ: ಭಾರತ ಮತಾಂಧರನ್ನು ಪ್ರಶಂಸಿಸುವುದಿಲ್ಲ: ಪಾಕ್ ಪ್ರಧಾನಿಗೆ ಭಾರತ ಸರ್ಕಾರ ತೀವ್ರ ತರಾಟೆ
ಈ ವೇಳೆ ಮಂಚಕ್ಕೆ ಮಗುವನ್ನು ಕಟ್ಟಿ ಹಾಕಿರುವುದನ್ನು ಗಮನಿಸಿ ನಂತರ ಕಟ್ಟಿದ್ದ ಹಗ್ಗವನ್ನು ಬಿಚ್ಚಿ ಮಗುವನ್ನು ಎತ್ತಿಕೊಂಡು ಹೊರಗೆ ಬಂದಾಗ ಮಗುವಿನ ಎರಡು ಕೈಗಳನ್ನು ಕೆಂಡದ ಕಿಡಿಯಿಂದ ಸುಟ್ಟಿರುವುದು ಬೆಳಕಿಗೆ ಬಂದಿದೆ. ನಂತರ ಮಲತಾಯಿಯನ್ನು ತರಾಟೆಗೆ ತೆಗೆದುಕೊಂಡ ಸ್ಥಳೀಯರು ಇದೀಗ ಈ ಸಂಬಂಧ ವಾಡಿ ಠಾಣೆಗೆ ಮರೆಮ್ಮ ವಿರುದ್ಧ ದೂರು ಕೊಟ್ಟಿದ್ದಾರೆ.
ಕಲಬುರಗಿ: ಶಹಬಾದ ತಾಲೂಕಿನ ಮರತೂರ ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು, ಇದೀಗ ಪೊಲೀಸರ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ.
ಮಂಜುನಾಥ್ ಅಲಿಯಾಸ್ ಮನೋಜ್ ಸಿಂದೆ (32) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಮನೋಜ್ ಅವರ ಪತ್ನಿಯ ಅಣ್ಣ ಮತ್ತು ಆತನ ಪತ್ನಿಯ ನಡುವೆ ಕೌಟುಂಬಿಕ ಕಲಹ ಇದೆ ಎನ್ನಲಾಗಿದೆ. ಈ ನಡುವೆ ಅಣ್ಣನ ಮಗು ಕಾಣೆಯಾಗಿದೆ. ಮಗು ಕಾಣೆಯಾಗಲು ನೀವೇ ಕಾರಣ ಅಂತ ಮನೋಜ್ ಹಾಗೂ ಅವರ ಪತ್ನಿ ಹೆಸರಿನಲ್ಲಿ ಠಾಣೆಗೆ ದೂರು ನೀಡಲಾಗಿತ್ತು. ಇದನ್ನೂ ಓದಿ: ತೃತೀಯ ರಂಗ ರಚನೆಗೆ ದೇವೇಗೌಡರ ಜೊತೆ ಚಂದ್ರಶೇಖರ್ ರಾವ್ ಚರ್ಚೆ
ದೂರಿನ ಹಿನ್ನೆಲೆ ಆತನನ್ನು ಠಾಣೆಗೆ ಎಳೆದೊಯ್ದ ಪೊಲೀಸರು, ಎರಡು ದಿನ ಠಾಣೆಯಲ್ಲಿ ಕೂಡಿ ಹಾಕಿ ಮನಬಂದಂತೆ ಥಳಿಸಿದ್ದಾರೆ. ಈ ವೇಳೆ ವ್ಯಕ್ತಿಯು ಮಗುವಿನ ನಾಪತ್ತೆಯಲ್ಲಿ ನಮ್ಮ ಕೈವಾಡ ಇಲ್ಲ ಅಂತ ಹೇಳಿದರೂ ಕೇಳದ ಪೊಲೀಸರು ಇವತ್ತು ನಿನ್ನನ್ನು ಮಾತ್ರ ಎಳೆದು ತಂದಿದ್ದೇವೆ. ನಾಳೆ ನಿನ್ನ ಹೆಂಡತಿಯನ್ನೂ ಕೂಡ ಎಳೆದು ತರುತ್ತೇವೆ ಅಂತ ಅವಾಜ್ ಹಾಕಿದ್ದಾರೆ. ಪೊಲೀಸರ ದೌರ್ಜನ್ಯ, ಹೊಡೆತದಿಂದ ಮಾನಸಿಕ ಹಾಗೂ ದೈಹಿಕ ಹಿಂಸೆ ಅನುಭವಿಸಿದ ಮನೋಜ್ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಇದನ್ನೂ ಓದಿ: ತಲೆಗೆ 25 ಲಕ್ಷ ಬಹುಮಾನ ಘೋಷಣೆಗೆಯಾಗಿದ್ದ ನಕ್ಸಲ್ ನಾಯಕ ಶವವಾಗಿ ಪತ್ತೆ
ವಿನಾಕಾರಣ ನನ್ನ ಹಾಗೂ ನನ್ನ ಹೆಂಡತಿ ಮೇಲೆ ಪೊಲೀಸ್ ಠಾಣೆಗೆ ದೂರು ನೀಡಿ ಮರ್ಯಾದೆ ಹರಾಜು ಮಾಡಿದ್ದಾರೆ. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಡೆತ್‍ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ. ಸಾಯಬಣ್ಣಾ ಜೋಗುರ, ಶರಣಮ್ಮ ನಾಟೀಕರ್, ಪ್ರತಿಭಾ ನಾಗೇಶ್ ಹಾಗೂ ಪ್ರತಿಭಾಳ ತಾಯಿ ನಾಲ್ವರ ಹೆಸರು ಡೆತ್‍ನೋಟ್‍ನಲ್ಲಿ ಬರೆದಿದ್ದಾರೆ.
ಘಟನೆಯ ಕುರಿತು ಮನೋಜ್ ಶವವನ್ನು ಶಹಬಾದ್ ಪೊಲೀಸ್ ಠಾಣೆ ಎದುರಿಗಿಟ್ಟು ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.
ಕಲಬುರಗಿ: ಪಿಎಸ್‍ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಪ್ರಮುಖ ಆರೋಪಿ ಎನ್ನಲಾದ ಬಿಜೆಪಿ ಮಹಿಳಾ ಘಟಕದ ಮಾಜಿ ನಾಯಕಿ ದಿವ್ಯಾ ಹಾಗರಗಿ ಬಂಧನ ಯಾವಾಗ? ಅನ್ನೋ ಪ್ರಶ್ನೆ ಎಲ್ಲಕಡೆ ಹರಿದಾಡುತ್ತಿದೆ. ದಿವ್ಯಾ ತೆಲೆ ಮರೆಸಿಕೊಂಡು 14 ದಿನ ಕಳೆದರು ಇನ್ನೂ ಪತ್ತೆ ಆಗದಿರುವುದು ಹಲವು ಚರ್ಚೆಗಳಿಗೆ ಕಾರಣವಾಗಿದೆ.
ಪಿಎಸ್‍ಐ ನೇಮಕಾತಿ ಅಕ್ರಮದ ಕೇಂದ್ರ ಸ್ಥಾನವಾದ ಜ್ಞಾನಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ ಕಾರ್ಯದರ್ಶಿ, ಬಿಜೆಪಿ ಮಹಿಳಾ ಘಟಕದ ಮಾಜಿ ಅಧ್ಯಕ್ಷೆ ದಿವ್ಯಾ ಹಾಗರಗಿ, ಶಾಲೆಯ ಹೆಡ್‍ಮಾಸ್ಟರ್ ಕಾಶಿನಾಥ್ ಸೇರಿ ಐವರು ತೆಲೆ ಮರೆಸಿಕೊಂಡು ಇಂದಿಗೆ 14 ದಿನಗಳು ಕಳೆದಿದೆ. ಸಿಐಡಿ ಎಷ್ಟೇ ಶೋಧ ಮಡೆಸಿದ್ರು ಐವರಲ್ಲಿ ಯಾರು ಪತ್ತೆಯಾಗಿಲ್ಲ. ರಾಜ್ಯದ ಪ್ರಭಾವಿ ಮುಖಂಡರು ದಿವ್ಯಾಳ ರಕ್ಷಣೆಗೆ ನಿಂತಿದ್ದಾರಾ? ಅವರ ಶ್ರೀರಕ್ಷೆಯಿಂದ ದಿವ್ಯಾ ಬಂಧನ ಆಗ್ತಿಲ್ವಾ? ಎಂಬ ಚರ್ಚೆ ಜೋರಾಗಿ ನಡೆದಿವೆ. ಇದನ್ನೂ ಓದಿ: ರೇವಣ್ಣನಿಗೆ ಶಿಕ್ಷಣ ಅಂದರೆ ಏನು ಅಂತ ಗೊತ್ತಿಲ್ಲ: ಅಶ್ವತ್ಥ್ ನಾರಾಯಣ್
ಅಜ್ಞಾತ ಸ್ಥಳದಿಂದಲೇ ನೀರಿಕ್ಷಣಾ ಜಾಮೀನು ಕೋರಿ ದಿವ್ಯಾ ಮತ್ತು ಸಹಚರರು ಸಲ್ಲಿಸಿದ್ದ ನೀರಿಕ್ಷಣಾ ಜಾಮೀನು ಜಿಲ್ಲಾ ನ್ಯಾಯಾಲಯ ತೀರಸ್ಕರಿಸಿದೆ. ದಿವ್ಯಾ ಮತ್ತು ಅವರ ತಂಡ ಸಿಐಡಿಗೆ ಶರಣಾಗುವುದು ಬಿಟ್ಟರೆ ಬೇರೆ ದಾರಿಯಿಲ್ಲ. ಹೀಗಿದ್ರು ದಿವ್ಯಾ ಪತ್ತೆ ಆಗಿಲ್ಲದಿರುವುದು ಸಿಐಡಿಗೆ ತೆಲೆ ನೋವಾಗಿ ಕಾಡುತ್ತಿದೆ.
ಸಿಐಡಿ ಆರು ಪ್ರತ್ಯೇಕ ತಂಡ ರಚನೆ
ದಿವ್ಯಾ ಹಾಗರಗಿ ಮತ್ತು ಸಹಚರರ ಬಂಧನಕ್ಕೆ ಸಿಐಡಿ ತೀವ್ರ ಶೋಧ ಕಾರ್ಯ ಆರಂಭಿಸಿದೆ. ಡಿಜಿಪಿ, ಎಸ್‍ಪಿ ಕಲಬುರಗಿಯಲ್ಲಿ ಬೀಡಾರ ಹೂಡಿ ಬಂಧನಕ್ಕೆ ಆರು ಪ್ರತ್ಯೇಕ ತಂಡಗಳನ್ನು ರಚಿಸಿದ್ದಾರೆ. ಹಗಲಿರುಳು ಎನ್ನದೆ ದಿವ್ಯಾಗೆ ತೀವ್ರ ತಲಾಶ್‍ಗೆ ಕಾರ್ಯ ಸಿಐಡಿಯ ಆರು ತಂಡಗಳು ಮಾಡುತ್ತಿವೆ.
ತೀವ್ರ ತನಿಖೆ ನಡೆಸುತ್ತಿದ್ರೂ ಇಲ್ಲಿವರೆಗೆ ದಿವ್ಯಾ ಇರುವ ಸ್ಥಳದ ಸುಳಿವು ಸಿಕ್ಕಿಲ್ಲ. ಇಷ್ಟರಲ್ಲೆ ದಿವ್ಯಾ ಮತ್ತು ತಂಡ ಬಂಧನ ಮಾಡಿಯೇ ತಿರುತ್ತೇವೆ ಎಂಬ ಆತ್ಮವಿಶ್ವಾದಲ್ಲಿ ಸಿಐಡಿ ತಂಡ ಕಾರ್ಯನಿರ್ವಹಿಸುತ್ತಿದೆ. ಇದನ್ನೂ ಓದಿ: ಬಾತ್‌ರೂಮ್ ಗೋಡೆಯಲ್ಲಿ ಸಿಕ್ತು 60 ವರ್ಷದ ಮೆಕ್‍ಡೊನಾಲ್ಡ್ಸ್ ಊಟ!
ಕಲಬುರಗಿ: ಮಸೀದಿಗಳ ಮೇಲಿನ ಧ್ವನಿವರ್ಧಕ ವಿಚಾರದಲ್ಲಿ ಕೋರ್ಟ್ ಆದೇಶ ಪಾಲಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಮೇ 9 ರಿಂದ ಶ್ರೀರಾಮ ಸೇನೆ ಆಜಾನ್ ಸೇ ಆಜಾದಿ ಅಭಿಯಾನ ಪ್ರಾರಂಭಿಸಲು ಸಿದ್ದತೆ ನಡೆಸಿದ ಹಿನ್ನೆಲೆ ರಾಜ್ಯದಲ್ಲಿ ಮಸೀದಿಗಳ ಮೇಲಿನ ಧ್ವನಿವರ್ಧಕ ತೆರುವುಗೊಳಿಸುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಆಜಾನ್ ಬಗ್ಗೆ ಸುಪ್ರೀಂಕೋರ್ಟ್, ಹೈಕೋರ್ಟ್ ಆದೇಶ ಇದೆ ಎಂದರು. ಇದನ್ನೂ ಓದಿ : ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ನಿರ್ದೇಶಕನ ವಿರುದ್ಧ ಕಿಡಿಕಾರಿದ ಸಿಖ್ ಸಂಘ
ಯಾವ ಯಾವ ಸಂದರ್ಭದಲ್ಲಿ ಎಷ್ಟು ಶಬ್ದದ ಡೆಸಿಬಲ್ ಇರಬೇಕು ಅಂತಾ ಸ್ಪಷ್ಟವಾಗಿ ಹೇಳಿದೆ. ಡಿಜಿ ಅವರು ಕೂಡ ಸಕ್ರ್ಯೂಲರ್ ಪಾಸ್ ಮಾಡಿದ್ದಾರೆ. ಠಾಣೆಯಲ್ಲಿ ಶಾಂತಿ ಸಭೆ ನಡೆಸುವುದಕ್ಕೆ ಸೂಚಿಸಲಾಗಿದೆ. ಮಹಾ ಮಂಗಳಾರತಿ ಮಾಡುವುದರ ಬಗ್ಗೆ ಮುಂದೆ ನೋಡೊಣ ಎಂದು ಹೇಳಿದರು. ಇದನ್ನೂ ಓದಿ : ನಟಿ ಮಂದನಾ ಕರೀಮಿಗೆ ಮೋಸ ಮಾಡಿದ್ರಾ ನಿರ್ದೇಶಕ ಅನುರಾಗ್ ಕಶ್ಯಪ್?
ಇನ್ನೂ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಹೆಸರು ಇಡುವುದಕ್ಕೆ ಭಿನ್ನಾಭಿಪ್ರಾಯದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಹೆಸರು ಇಡುವ ವಿಚಾರದಲ್ಲಿ ಯಾವ ಭಿನ್ನಾಭಿಪ್ರಾಯ ಇಲ್ಲ ಎಂದು ಹೇಳಿದರು. ಇದೇ ವೇಳೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಿಜೆಪಿಯ ಅಸಮಾಧಾನದ ಬಗ್ಗೆ ಕೇಳಿದ ಪ್ರಶ್ನೆಗೆ ಯಾವುದೇ ಅಸಮಾಧಾನ ಇಲ್ಲ ಅಂತ ಹೇಳಿದರು.
ಕಲಬುರಗಿ: ಆಕಸ್ಮಿಕವಾಗಿ ಧಗಧಗಿಸಿದ ಬೆಂಕಿಗೆ ರೈತರು ಬೆಳೆದ ಲಕ್ಷಾಂತರ ಮೌಲ್ಯದ ಕಬ್ಬು ಬೆಳೆ ಸುಟ್ಟು ಭಸ್ಮವಾಗಿರುವ ಘಟನೆ ಚಿತ್ತಾಪುರ ತಾಲೂಕಿನ ಮುತ್ತಗಾ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ರೈತ ತಿಪ್ಪಣ್ಣ ಮುದಬುಳ, ಬಸವರಾಜ ಪಂಚಾಳ, ಚಂದ್ರಕಾಂತ ಸೇರಿದಂತೆ ಹಲವು ರೈತರು ಬೆಳೆದ ಹತ್ತಾರು ಎಕ್ಕರೆಯ ಕಬ್ಬು ಬೆಂಕಿಗಾಹುತಿ ಆಗಿದೆ. ಸಮೃದ್ಧವಾಗಿ ಬೆಳೆದು ನಿಂತಿದ್ದ ಕಬ್ಬು ಹೊತ್ತಿ ಉರಿಯುವುದನ್ನು ಕಣ್ಣಾರೆ ಕಂಡ ರೈತರು ಬೆಂಕಿ ನಂದಿಸಲು ಹರಸಾಹಸ ಪಟ್ಟು ಪರದಾಡಿದರು. ಕಣ್ಣಮುಂದೆಯೇ ಸುಟ್ಟು ಹೋದ ಕಬ್ಬು ಬೆಳೆ ಕಂಡು ಅನ್ನದಾತರು ಮರುಗುತ್ತಿದ್ದಾರೆ. ಇದನ್ನೂ ಓದಿ: ಅಪ್ಪು ಹುಟ್ಟುಹಬ್ಬಕ್ಕೆ ಕನಸಿನ ‘ಗಂಧದಗುಡಿ’ ಫಸ್ಟ್ ಲುಕ್ ರಿಲೀಸ್
ಬೆಳೆದ ಕಬ್ಬು ಕಳೆದುಕೊಂಡು ನಷ್ಟಕ್ಕೆ ಸಿಲುಕಿರುವ ಅನ್ನದಾತರು ಪರಿಹಾರ ನೀಡುವಂತೆ ಅಂಗಲಾಚುತ್ತಿದ್ದಾರೆ. ಸರಿಯಾದ ಸಮಯಕ್ಕೆ ಕಬ್ಬು ಕಟಾವು ಮಾಡದೇ ಕೆಪಿಆರ್ ಸಕ್ಕರೆ ಫ್ಯಾಕ್ಟರಿ ಮೋಸ ಮಾಡಿದೆ. ಇದೀಗ ಆಕಸ್ಮಿಕ ಬೆಂಕಿ ಅನ್ನದಾತರ ಹೊಟ್ಟೆ ಮೇಲೆ ಬರೆ ಎಳೆದಿದೆ ಅಂತ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಲಬುರಗಿ: ವಿದ್ಯುತ ಶಾರ್ಟ್ ಸರ್ಕ್ಯೂಟ್‌ನಿಂದ ಗದ್ದೆಯಲ್ಲಿ ಬೆಳೆದ ಕಬ್ಬು ಸುಟ್ಟು ಭಸ್ಮವಾದ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಅವರಳ್ಳಿ ಗ್ರಾಮದಲ್ಲಿ ನಡೆದಿದೆ.
ಯಲ್ಲಾಲಿಂಗ ಪಾಟೀಲ್ ಮತ್ತು ಮಲ್ಲಮ್ಮಾ ಪಾಟೀಲ್‌ಗೆ ಸೇರಿದ ಕಬ್ಬಿನ ಗದ್ದೆ ಇದಾಗಿದೆ. ೭ ಎಕರೆ ೧೯ ಗುಂಟೆಯಲ್ಲಿ ಬೆಳೆದಿದ್ದ ಕಬ್ಬು ಬೆಂಕಿಗಾಹುತಿಯಾಗಿದೆ. ಲಕ್ಷಾಂತರ ರೂ ಮೌಲ್ಯದ ಸುಮಾರು ೫೦೦ ಟನ್ ಕಬ್ಬು ಸುಟ್ಟು ಕರಕಲಾಗಿದೆ. ಇದನ್ನೂ ಓದಿ : ಮಹಿಳಾ ದಿನಾಚರಣೆಗಾಗಿ ವಿಶೇಷ ಪೋಸ್ಟರ್ ರಿಲೀಸ್ ಮಾಡಿದ ಕೆಜಿಎಫ್ 2 ತಂಡ
ಕಲಬುರಗಿ: ಯಾರು ಕಾಂಗ್ರೆಸ್ ಬಿಟ್ಟು ಹೋಗುತ್ತಾರೆ ಅವರಿಗೆ ಬೂಸ್ಟರ್ ಡೋಸ್ ಬೇಕಾಗಿದೆ ಎಂದು ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್‍ಗೆ ಕೊರೊನಾ ಬಂದಿದೆ ಎಂಬ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಹೇಳಿಕೆ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೆಲ ಕಾಂಗ್ರೆಸ್ ನಾಯಕರಿಗೆ ಕಾಂಗ್ರೆಸಿಗೆ ಹಿನ್ನಡೆ ಅನ್ನುವ ಭ್ರಮೆಯಿದೆ. ಆದರೆ ಅವರಿಗೆ ಬೂಸ್ಟರ್ ಡೋಸ್ ನೀಡಬೇಕಾಗಿದೆ. ಬಿಜೆಪಿ ವೈರಸ್‍ಗೆ ಕಾಂಗ್ರೆಸ್ ಮಾತ್ರ ವ್ಯಾಕ್ಸಿನ್ ಇದ್ದಂತೆ ಎಂದರು. ಇದನ್ನೂ ಓದಿ: ಮುಗಿದ ಅಧ್ಯಾಯ – ಕಾಂಗ್ರೆಸ್‍ಗೆ ಸಿಎಂ ಇಬ್ರಾಹಿಂ ಗುಡ್‍ಬೈ
ಯಾರು ಪಕ್ಷ ಬಿಟ್ಟು ಹೋಗುತ್ತಿದ್ದಾರೆ ಅವರಿಗೆ ಬೂಸ್ಟರ್ ಡೋಸ್ ಬೇಕಾಗಿದೆ. ಕಾಂಗ್ರೆಸ್ ಪಕ್ಷವೇ ಎಲ್ಲರಿಗೂ ಎಲ್ಲದಕ್ಕೂ ವ್ಯಾಕ್ಸಿನ್ ಇದ್ದ ಹಾಗೇ. ಬಡವರಿಗೆ ದೀನ ದಲಿತರಿಗೆ ಎಲ್ಲರಿಗೂ ಕಾಂಗ್ರೆಸ್ ಬೇಕಾಗಿದೆ. ನಮ್ಮ ಪಕ್ಷಕ್ಕೆ ಯಾವುದೇ ಡೋಸ್ ಬೇಕಾಗಿಲ್ಲ ಎಂದು ಸಿಡಿದರು.
ವಿಧಾನ ಪರಿಷತ್‍ನ ವಿಪಕ್ಷ ನಾಯಕ ಸ್ಥಾನ ಕೈತಪ್ಪಿದ ಹಿನ್ನೆಲೆ ಸಿಎಂ ಇಬ್ರಾಹಿಂ ಕಾಂಗ್ರೆಸ್‍ಗೆ ಗುಡ್ ಬೈ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಐಸಿಸಿ ನಿರ್ಧಾರ ನೋಡಿ ನನಗೆ ಸಂತೋಷ ಆಯಿತು. ಇದರಿಂದ ಶಿವಕುಮಾರ್ ಹಾಗೂ ಹರಿಪ್ರಸಾದ್ ಅವರಿಗೆ ಕೆಲಸ ಮಾಡಲು ಅನುಕೂಲವಾಗುತ್ತದೆ. ಅವರಿಬ್ಬರ ವಿಚಾರಧಾರೆ ಒಂದೇ ಆಗಿರುವುದರಿಂದ ಕೆಲಸ ಮಾಡಲು ಅನುಕೂಲವಾಗುತ್ತದೆ ಎಂದು ವ್ಯಂಗ್ಯವಾಡಿದ್ದರು. ಇದನ್ನೂ ಓದಿ: ಅಶ್ಲೀಲ ಫೋಟೋ ವಾಟ್ಸಪ್ ಗ್ರೂಪ್‍ಗೆ ಹಾಕಿ ಪೇಚೆಗೆ ಸಿಲುಕಿದ ಬಿಜೆಪಿ ಮುಖಂಡ
ಚಾಮುಂಡೇಶ್ವರಿ ಸೋಲುತ್ತಾರೆ ಎಂದು ಬಾದಾಮಿಗೆ ಕರೆದೊಯ್ದಿದ್ದೇನೆ. ಅದಕ್ಕೆ ಅವರು ಒಳ್ಳೆ ಉಡುಗೊರೆ ಕೊಟ್ಟಿದ್ದಾರೆ. ಪಾದಯಾತ್ರೆಯಿಂದ ಕಾಂಗ್ರೆಸ್‍ಗೆ ಕೋವಿಡ್ ಸೋಂಕು ಬಂದಿದೆ. ಯಾವ ಡೋಸ್‍ನಿಂದಲೂ ಸೋಂಕು ಇಳಿತಿಲ್ಲ. ನಾನು ಕೊಡುವ ಡೋಸ್‍ನಿಂದ ಸೋಂಕು ಇಳಿಯುತ್ತಾ ನೋಡೋಣ ಎಂದು ಕಿಡಿಕಾರಿದ್ದರು.
ಕಲಬುರಗಿ: ಬಿಜೆಪಿಯನ್ನ ಬಿಜೆಪಿ ಅಂತಾ ಕರೆಯಬೇಕಾ ಅಥವಾ ಮೋದಿ ಪಕ್ಷ ಅಂತಾ ಕರೆಯಬೇಕಾ ಗೊತ್ತಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಹೇಳಿದರು.
ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲಬುರಗಿಯಲ್ಲಿ ಜೆಡಿಎಸ್ ಪಕ್ಷಕ್ಕೆ ಇನ್ನೂ ಶಕ್ತಿ ತುಂಬಬೇಕು. 2023 ಕ್ಕೆ ಬಿಜೆಪಿ ಹಾಗೂ ಕಾಂಗ್ರೆಸ್‍ನವರು ಜೆಡಿಎಸ್ ಪಕ್ಷವನ್ನ ಸಂಪೂರ್ಣ ನಾಶ ಮಾಡುತ್ತೇವೆ ಅಂತಾ ಹೇಳುತ್ತಿದ್ದಾರೆ. ಎರಡು ರಾಷ್ಟ್ರೀಯ ಪಕ್ಷಗಳಲ್ಲಿ ಒಂದಕ್ಕೆ ಶಕ್ತಿ ಕಡಿಮೆ ಇದೆ. ಕಾಂಗ್ರೆಸ್ ಎರಡು ರಾಜ್ಯದಲ್ಲಿ ಮಾತ್ರ ಅಧಿಕಾರದಲ್ಲಿ ಇದೆ. 5 ರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಎಷ್ಟು ಬೆಳೆಯುತ್ತೆ ಅನ್ನೋದು ಹೇಳೋಕೆ ಆಗುವುದಿಲ್ಲ. ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ರಾಷ್ಟ್ರೀಯ ಪಕ್ಷ ಕಾಂಗ್ರೆಸ್, ಈಗ ಯಾವ ರಾಜ್ಯದಲ್ಲಿಯೂ ಇಲ್ಲ. ಇದಕ್ಕೆ ಕಾರಣ ಯಾರು ಅಂತಾ ಅವರೇ ಹುಡುಕಬೇಕು ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ಹುಟ್ಟೂರಿಗೆ ನೆರವಾದ ಸೋನು ಸೂದ್-1,000 ವಿದ್ಯಾರ್ಥಿನಿಯರಿಗೆ ಸೈಕಲ್ ವಿತರಣೆ
ಇವತ್ತು ಬಿಜೆಪಿಯನ್ನ ಬಿಜೆಪಿ ಅಂತಾ ಕರೆಯಬೇಕಾ ಅಥವಾ ಮೋದಿ ಪಕ್ಷ ಅಂತಾ ಕರೆಯಬೇಕಾ ಗೊತ್ತಿಲ್ಲ. ಯಾಕೆಂದರೆ ಬಿಜೆಪಿ ಪಕ್ಷದಲ್ಲಿದ್ದವರು ಮೋದಿ ಹೆಸರಿನಲ್ಲೇ ಚುನಾವಣೆ ಮಾಡುತ್ತಿದ್ದಾರೆ. ಅದಕ್ಕಾಗಿ ನಾನು ಮೋದಿ ಪಾರ್ಟಿ ಅಂತಾ ಕರೆಯುತ್ತೇನೆ. ಒಬ್ಬ ವ್ಯಕ್ತಿಯ ಸಕ್ಸಸ್ ನಲ್ಲಿ ಪಾರ್ಟಿ ನಡೆಯುತ್ತಿದೆ. ಆದರೆ ಮುಂದೇನು ಆಗುತ್ತೋ ಅದು ನನಗೆ ಗೊತ್ತಿಲ್ಲ ಎಂದು ಟಾಂಗ್ ನೀಡಿದರು.
ಜೆಡಿಎಸ್‍ನ ಪಂಚರತ್ನ ಕಾರ್ಯಕ್ರಮ ಎಲ್ಲರ ಒಳ್ಳೆಯದಕ್ಕಾಗಿ ರೂಪಿಸಿದ್ದಾರೆ. ಆದರೆ ಮಾಜಿ ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಅವರು ಮಾಡಿರುವ ಭಾಗ್ಯ ಯೋಜನೆಗಳಿಗೆ ಟಚ್ ಮಾಡಬಾರದು ಅಂತಾ ಹೇಳಿದ್ದರು. ಈ ಯೋಜನೆಗಳಿಗೂ ಹಣ ಒದಗಿಸಿ ಸಾಲಮನ್ನಾ ಮಾಡಿದ್ದರು ಎಂದರು.
ರಾಮನಗರದಲ್ಲಿ ಬಿಜೆಪಿ ಸಚಿವ ಹಾಗೂ ಕಾಂಗ್ರೆಸ್ ಸಂಸದರ ಜಟಾಪಟಿ ಹಿನ್ನೆಲೆ ಪ್ರತಿಕ್ರಿಯೆ ನೀಡಿದ ಅವರು, ಈ ರೀತಿಯ ಘಟನೆ ಆಗಬಾರದಿತ್ತು. ಎರಡು ರಾಷ್ಟ್ರೀಯ ಪಕ್ಷಗಳು ಈ ಮಟ್ಟಕ್ಕೆ ಇಳಿಯಬಾರದಿತ್ತು ಎಂದು ಹೇಳಿದರು.
ಮೇಕೆದಾಟು ಕಾಂಗ್ರೆಸ್ ಪಾದಯಾತ್ರೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಸುಪ್ರಿಂಕೋರ್ಟ್ ನಲ್ಲಿ ಈ ಕುರಿತು ದಿನಾಂಕ ನಿಗದಿ ಮಾಡಿದ್ದಾರೆ ಅಂತಾ ಕೇಳಿದ್ದೀನಿ. ಕುಮಾರಸ್ವಾಮಿ ಸಿಎಂ ಆಗಿದ್ದಾಗ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಪ್ರಾವಿಜನಲ್ ಕ್ಲಿಯರೆನ್ಸ್ ಮಾಡಿದ್ದರು. ಅದಾದ ಮೇಲೆ ತಮಿಳುನಾಡಿನವರು ಖ್ಯಾತೆ ತೆಗೆದಿದ್ದರು. ನಾಲ್ಕು ರಾಜ್ಯಗಳ ನೀಲುವು ತೆಗೆದುಕೊಂಡು ಅಂತಿಮ ಜಡ್ಜ್‍ಮೆಂಟ್ ಬರಲಿ. ಅದು ಏನು ಬರುತ್ತೆ ಅನ್ನೋದು ಗೊತ್ತಿಲ್ಲ ಎಂದು ನುಡಿದರು.
ಕೊರೊನಾ ಸಂದರ್ಭದಲ್ಲಿ ಕಾಂಗ್ರೆಸ್‍ನ ಪಾದಯಾತ್ರೆ ಹೋರಾಟ ಎಷ್ಟು ಯಶಸ್ವಿಯಾಗುತ್ತೋ ಗೊತ್ತಿಲ್ಲ. ಈ ಹೋರಾಟದಲ್ಲಿ ಬಿಜೆಪಿಯವರು ಕಾಂಗ್ರೆಸ್ ಮುಗಿಸಬೇಕು ಅಂತಾ ನಿಂತಿದ್ದಾರೆ. ಕಾಂಗ್ರೆಸ್ ಕಳೆದು ಹೋಗಿರುವ ವರ್ಚಸ್ಸು ಬೆಳೆಸಬೇಕು ಅಂತಾ ನಿಂತಿದ್ದಾರೆ ಎಂದು ಹೇಳಿದರು.
ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿದ್ದಾಗ ಏನ್ ಆಯ್ತು? ನಾವು ಬಿಜೆಪಿಯ ಬಿ ಟೀಮ್ ಅಂತಾ ಆರು ತಿಂಗಳ ಕಾಲ ಹೇಳಿದ್ದರು. 130 ಕ್ಕಿದ್ದ ಕಾಂಗ್ರೆಸ್ ಈಗ 78 ಕ್ಕೆ ಬಂತು ನಿಂತಿದೆ. ಇವರ ಹೋರಾಟದಿಂದ ಫಲ ಸಿಗುತ್ತದೆ ಅಂದರೆ ಅದಷ್ಟು ಸುಲಭವಲ್ಲ. ಜೆಡಿಎಸ್‍ಗೂ 20% ಮತಗಳು ಇವೆ. 2024 ರಲ್ಲಿ ಲೋಕಸಭೆಯಲ್ಲಿ ತೃತೀಯ ರಂಗ ಅಧಿಕಾರಕ್ಕೆ ಬರುವುದು ಕಷ್ಟ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಹಳ ಸ್ಟ್ರಾಂಗ್ ಲೀಡರ್ ಇದ್ದು, ಮೈನಸ್ ಕಾಂಗ್ರೆಸ್ ನಾವು ಮಾಡಬೇಕು ಅಂತಾ ಹೇಳುತ್ತಾರೆ ಎಂದು ನುಡಿದರು. ಇದನ್ನೂ ಓದಿ: ಓಮಿಕ್ರಾನ್ ಶ್ವಾಸಕೋಶಕ್ಕೆ ಹೋಗಲ್ಲ, ಗಂಟಲಲ್ಲಿ ಮಾತ್ರ ಇರುತ್ತೆ: ಸುಧಾಕರ್
ಮಲ್ಲಿಕಾರ್ಜುನ ಖರ್ಗೆಯವರು ಮೊದಲ ಬಾರಿಗೆ ಲೋಕಸಭೆಯಲ್ಲಿ ಗೆಲ್ಲಲಿಲ್ಲ. ಹಾಗಾಗಿ ಕಾಂಗ್ರೆಸ್ ಸ್ಥಿತಿಗತಿ ಏನಿದೆ ಅಂತಾ ಯೋಚನೆ ಮಾಡಲಿ ಎಂದರು.
ಕಲಬುರಗಿ: ಸಂಸದ ಉಮೇಶ್ ಜಾಧವ್ ಅವರು ಪಿಡಿಓರನ್ನು ಹೆದರಿಸಿ ಬಿಲ್ ಮಾಡಿಸಿಕೊಂಡಿದ್ದಾರೆ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗುತ್ತಿಗೆದಾರರ ಸಂಘ 40% ಸರ್ಕಾರದ ಬಗ್ಗೆ ಮಾತನಾಡುತ್ತಿದ್ದಾರೆ. ಆದರೆ ನಮ್ಮ ಕಲಬುರಗಿ ಜಿಲ್ಲೆಯಲ್ಲಿ ವಸೂಲಿ 40% ಅನ್ನೂ ದಾಟಿ ಹೋಗಿದೆ. ಗ್ರಾಪಂ ಸದಸ್ಯರು ಉದ್ಯೋಗ ಖಾತ್ರಿಯಲ್ಲಿ ಆಗದ ಕೆಲಸಕ್ಕೆ ಸಂಸದರ ಮುಖಾಂತರ ಬಿಲ್ ಮಾಡಿಸಿಕೊಂಡಿದ್ದಾರೆ. ಬಿಲ್ ಹಾಕಿಸಿಕೊಳ್ಳುವುದಕ್ಕಾಗಿ ಚಿತ್ತಾಪುರ ತಾಲೂಕಿನ ಬಿಳಗೆರೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಬೆದರಿಕೆ ಹಾಕಿರುವ ವೀಡಿಯೋ ಇದೆ. ಆದರೆ ಅದು ನನ್ನ ಕ್ಷೇತ್ರದ್ದು ಎನ್ನುವ ಕಾರಣಕ್ಕೆ ವೀಡಿಯೋವನ್ನು ಬಿಡುಗಡೆ ಮಾಡುತ್ತಿಲ್ಲ ಎಂದರು.
ಸಂಸದ ಉಮೇಶ್ ಜಾಧವ್ ಅವರ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಪ್ರಿಯಾಂಕ್ ಖರ್ಗೆ ಹಿಂದೆ ದೊಡ್ಡ ಬ್ಯಾನರ್ ಇದೆ. ಮಲ್ಲಿಕಾರ್ಜುನ್ ಖರ್ಗೆಯವರ ಮಗ ಎನ್ನುತ್ತಾರೆ. ಖರ್ಗೆಯವರ ಮನೆಯಲ್ಲಿ ಹುಟ್ಟಬೇಕು ಎಂದು ನಾನು ಅರ್ಜಿ ಹಾಕಿದ್ದೇನಾ ಎಂದು ಪ್ರಶ್ನಿಸಿದ ಅವರು, ಹಾಗಾದರೆ ಅವಿನಾಶ್ ಜಾಧವ್ ಅವರು ಉಮೇಶ್ ಜಾಧವ್ ಮನೆಯಲ್ಲಿ ಅರ್ಜಿ ಹಾಕಿ ಹುಟ್ಟಿದ್ದಾರೆ ಎಂದಾಯ್ತು. ಅವಿನಾಶ್ ಜಾಧವ್ ಕೂಡ ಜಾಧವ್ ಬ್ಯಾನರ್‌ನಲ್ಲೆ ಬಂದಿದ್ದಾರೆ ಎಂದು ಟೀಕಿಸಿದರು. ಇದನ್ನೂ ಓದಿ: ಬೇಡಿಕೆ ಈಡೇರಿಸುವಂತೆ ಪ್ರತಿಭಟಸಿದ 100ಕ್ಕೂ ಹೆಚ್ಚು ಆದಿವಾಸಿಗಳು ಪೊಲೀಸರ ವಶಕ್ಕೆ
ಕಲಬುರಗಿ: ಐಎಎಸ್ ಅಧಿಕಾರಿಯೊಬ್ಬರು ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚಿಸಿರುವ ಗಂಭೀರ ಆರೋಪ ಕೇಳಿಬಂದಿದೆ.
ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತರೂ ಆಗಿರುವ ಐಎಎಸ್ ಅಧಿಕಾರಿ ಸ್ನೇಹಲ್ ಲೋಖಂಡೆ ಮದುವೆಯಾಗುವುದಾಗಿ ನಂಬಿಸಿ ಆಕೆಗೆ ವಂಚನೆ ಮಾಡಿರುವುದಾಗಿ ಯುವತಿ ಗಂಭೀರವಾಗಿ ಆರೋಪಿಸಿದ್ದಾಳೆ.
ಯುವತಿ ದೆಹಲಿ ಮೂಲದವಳಾಗಿದ್ದು, ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವ ಮುರುಗೇಶ್ ನಿರಾಣಿ ಅವರಿಗೆ ಟ್ವಿಟ್ಟರ್ ಮೂಲಕ ಪತ್ರ ಬರೆದು ಲಗತ್ತಿಸಿದ್ದಾಳೆ. ಆ ಪತ್ರದಲ್ಲಿ 2017ರ ಬ್ಯಾಚ್‍ನ ಐಎಎಸ್ ಅಧಿಕಾರಿ ಲೋಖಂಡೆಯು ತನ್ನ ಜೊತೆಗೆ ಹೋಟೆಲ್‍ಗಳಲ್ಲಿ ಕಾಲ ಕಳೆದ, ಹೊರಗಡೆ ಸುತ್ತಾಡಿದ, ವಾಟ್ಸಾಪ್‍ಗಳಲ್ಲಿ ಚಾಟ್ ಮಾಡಿದ್ದ ಬಗ್ಗೆ ದಿನಾಂಕ, ಸ್ಥಳ ಸಮೇತ ವಿವರಿಸಿದ್ದು, ವಾಟ್ಸಾಪ್ ಚಾಟ್‍ನ್ನು ತನ್ನ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾಳೆ.
ಯುವತಿ ಬರೆದಿರುವ ಪತ್ರದಲ್ಲಿ ಏನಿದೆ:
`ಯುಪಿಎಸ್‍ಸಿ ಪರೀಕ್ಷೆ ಬರೆಯುತ್ತಿದ್ದಾಗ ಫೇಸ್‍ಬುಕ್‍ನಲ್ಲಿ ಪರಿಚಯವಾಗಿದ್ದ ಸ್ನೇಹಲ್ ಲೋಖಂಡೆ ನನ್ನ ಮೇಲೆ ಆಸಕ್ತಿ ತೋರಿಸಿದರು. ಮೇ 26, 2019ರಂದು ದೆಹಲಿಯಲ್ಲಿ ನನ್ನನ್ನು ಭೇಟಿ ಆಗಿದ್ದ ಸ್ನೇಹಲ್ ಮೂರು ದಿನ ನನ್ನ ಜೊತೆಗೆ ಇದ್ದರಲ್ಲದೇ ನನ್ನ ಮದ್ವೆ ಆಗುವುದಾಗಿ ಮಾತುಕೊಟ್ಟಿದ್ದರು. ನನ್ನ ಜೊತೆಗೆ ಇರುವ ಸಲುವಾಗಿಯೇ ಟ್ರೈನಿಂಗ್‍ಗಾಗಿ ದೆಹಲಿಗೆ ಬಂದಿದ್ದ ಸ್ನೇಹಲ್ ಬಸ್ ಮಿಸ್ ಮಾಡ್ಕೊಂಡು ದೆಹಲಿಯಲ್ಲೇ ನನ್ನ ಒಂದು ದಿನ ಇದ್ದರು. ನನ್ನ ಹುಟ್ಟುಹಬ್ಬ ಆಚರಿಸಲು ನನ್ನ ತಾಯಿಯ ಅನುಮತಿ ಪಡೆದು ಜುಲೈ 8ರಂದು ಹೌನ್ಜ್ ಖಾಸ್‍ಗೆ ಮಧ್ಯರಾತ್ರಿ ಹೋಗಿದ್ದೆವು. ಜುಲೈ 20, 2019ರಂದು ನನ್ನನ್ನು ಮದ್ವೆ ಆಗುವುದಾಗಿ ಹೇಳಿದ್ದ ಅವರು, ಕೆ ಜಿ ಮಾರ್ಗ್‍ನಲ್ಲಿರುವ ತನ್ನ ಹಾಸ್ಟೆಲ್‍ಗೆ ಬರುವಂತೆ ಹೇಳಿ ಅಲ್ಲಿ ನಾವಿಬ್ಬರೂ ಒಂದು ರಾತ್ರಿ ಜೊತೆಯಾಗಿ ಕಳೆದಿದ್ವಿ. ಮರು ದಿನ ನನ್ನನ್ನು ಭೇಟಿ ಆಗಿದ್ದ ಅವರು ಐ-ಪಿಲ್ ಮಾತ್ರೆ ತೆಗೆದುಕೊಳ್ಳುವಂತೆ ಹೇಳಿದ್ದರು.
ಆಗಸ್ಟ್ 4ರಂದು ರಾಯಲ್ ಪ್ಲಾಜಾದಲ್ಲಿ ಅವರು ರೂಂ ಬುಕ್ ಮಾಡಿದ್ದರು, ಅವತ್ತು ಅಲ್ಲಿ ಒಟ್ಟಿಗೆ ಉಳಿದುಕೊಂಡೆವು. ದೆಹಲಿಯಲ್ಲಿ ತರಬೇತಿಗೆ ಬಂದಿದ್ದ ವೇಳೆ ಅವರು ನನ್ನನ್ನು ಪ್ರತಿನಿತ್ಯ ಭೇಟಿ ಆಗುತ್ತಿದ್ದರು. ನಾನು ಎಲ್ಲವನ್ನೂ ನನ್ನ ತಾಯಿಗೆ ಹೇಳಿದ ಬಳಿಕ ನನ್ನ ತಾಯಿ ಅವರ ಹಾಸ್ಟೆಲ್‍ನಲ್ಲಿ ಭೇಟಿ ಆಗಿ ಮದ್ವೆ ಬಗ್ಗೆ ಮಾತಾಡಿದರು ಮತ್ತು ಆಗ ಮದುವೆಗೆ ನನಗೆ ಸ್ವಲ್ಪ ಟೈಂ ಬೇಕು ಎಂದು ಹೇಳಿದ್ದರು. ಕರ್ನಾಟಕದ ಇಂಡಿಯಲ್ಲಿ ಅಪರ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಆದ ಬಳಿಕ ಅವರು ನನ್ನನ್ನು ದೂರವಿರಿಸಲು ಶುರು ಮಾಡಿದರು, ನಾನು ಕರೆ ಮಾಡಿದಾಗಲೆಲ್ಲ ಬ್ಯುಸಿ ಇರುವುದಾಗಿ ಹೇಳುತ್ತಿದ್ದರು. 2020ರ ಜನವರಿ 26ರಂದು ನನ್ನ ಹೆತ್ತವರು ಇಂಡಿಗೆ ತೆರಳಿ ಅವರ ತಂದೆ ಸುಧಾಕರ್ ಲೋಖಂಡೆ ಜೊತೆಗೆ ಮಾತಾಡಿದರು ಮತ್ತು ಅವರು ನಾಗ್ಪುರದಲ್ಲಿರುವ ತಮ್ಮ ಸಹೋದರನ ಜೊತೆಗೆ ಆದಷ್ಟು ಬೇಗ ಮಾತಾಡುವುದಾಗಿಯೂ ಮತ್ತು ಶೀಘ್ರವೇ ದೆಹಲಿಗೆ ಬರುವುದಾಗಿಯೂ ಹೇಳಿದ್ದರು. 15 ದಿನಗಳ ಬಳಿಕ ನನ್ನ ತಂದೆ ಸುಧಾಕರ್ ಲೋಖಂಡೆಗೆ ಕರೆ ಮಾಡಿದಾಗ ಅವರು ಕೆಟ್ಟದಾಗಿ ಮಾತಾಡಿದರು ಮತ್ತು ನಿಮ್ಮ ಮಗಳು ನನ್ನ ಮಗನ ಎದುರು ನಿಲ್ಲಲು ಯೋಗ್ಯಳಲ್ಲ ಎಂದರು. ಆ ಬಳಿಕ ಸ್ನೇಹಲ್ ಲೋಖಂಡೆಯಾಗಲೀ ಅವರ ತಂದೆಯಾಗಲೀ ನಮಗೆ ಕರೆ ಮಾಡಿಲ್ಲ. ನನ್ನನ್ನು ಬಳಸಿಕೊಂಡು ನನ್ನ ಜೀವನ ಹಾಳು ಮಾಡಿರುವುದು ಇದರಿಂದ ಸ್ಪಷ್ಟವಾಗುತ್ತದೆ. ಇದನ್ನೂ ಓದಿ: ಒಳ್ಳೆ ಬುದ್ಧಿ ಕಲಿಯಿರಿ ಎಂದಿದ್ದಕ್ಕೆ ಸಾಮಾಜಿಕ ಕಾರ್ಯಕರ್ತನ ಕೊಲೆಗೈದ ಬಾಲಕರು!
ಅವರಿಗೆ (ಸ್ನೇಹಲ್‍ಗೆ) ಈ ಮೊದಲು ಒಂದು ಸಂಬಂಧವಿತ್ತು ಮತ್ತು ಅವರ ಸ್ನೇಹಿತೆ ಆ ಸಂಬಂಧದ ಅವಧಿಯಲ್ಲಿ ಐ-ಪಿಲ್ ಮಾತ್ರೆಗಳನ್ನು ತೆಗೆದುಕೊಳ್ಳುತ್ತಲೇ ಇದ್ದರು. ಆಕೆ ಮದುವೆ ಆಗುವಂತೆ ಕೇಳಿದಾಗ ಆಕೆಯಿಂದ ದೂರ ಆಗಿದ್ದಾಗಿ ಅವರೇ ನನಗೆ ಆರಂಭದಲ್ಲಿ ಹೇಳಿದ್ದರು. ಹುದ್ದೆ ಮತ್ತು ಪ್ರತಿಷ್ಠೆ ಬಳಸಿಕೊಂಡು ಹುಡುಗಿಯರನ್ನು ಆಕರ್ಷಿಸಿ ಅವರನ್ನು ಬಳಸಿಕೊಳ್ಳುತ್ತಿದ್ದಾರೆ. ನನ್ನ ಜೊತೆಗೆ 2 ವರ್ಷ ಸಂಬಂಧದಲ್ಲಿದ್ದ ನನಗೂ ಹಾಗೇ ಮಾಡಿದ್ದಾರೆ. ಮದ್ವೆಯ ನೆಪದಲ್ಲಿ ನನ್ನನ್ನು ಬಳಸಿಕೊಂಡಿದ್ದಾರೆ. ಇತರ ವೈಯಕ್ತಿಕ, ದೈಹಿಕ ಮತ್ತು ಮಾನಸಿಕ ಜೀವನದಲ್ಲಿ ಆಟ ಆಡುವ ಈ ವ್ಯಕ್ತಿಯನ್ನು ಶಿಕ್ಷಿಸಬೇಕು. ಅವರು ಜೈಲಿನಲ್ಲಿರಬೇಕು, ಇಲ್ಲವಾದರೆ ಅವರು ಇಂತಹ ಕೆಲಸಗಳನ್ನು ಮಾಡುತ್ತಲೇ ಇರುತ್ತಾರೆ. ಇಂತಹ ಅಪರಾಧಕ್ಕಾಗಿ ಅವರು ಜೈಲಿನಲ್ಲಿರಬೇಕು.
ಈ ಹಿನ್ನೆಲೆಯಲ್ಲಿ ನಾನು ಗೌರವಾನ್ವಿತ ಪ್ರಾಧಿಕಾರದಿಂದ ನ್ಯಾಯವನ್ನು ನಿರೀಕ್ಷಿಸುತ್ತಿದ್ದೇನೆ ಮತ್ತು ಪ್ರಾಧಿಕಾರ ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ಯುವತಿ ಮನವಿ ಮಾಡಿದ್ದಾಳೆ.