Tag: kali swamy

  • ಮಸಿ ಬಳಿದು ನನ್ನನ್ನು ದೂರವಿಡಲು ಸಾಧ್ಯವಿಲ್ಲ, ನಾನೂ ಯಾವತ್ತು ಹಿಂದೂಪರ ಹೋರಾಟಗಾರ: ಕಾಳಿ ಸ್ವಾಮಿ

    ಮಸಿ ಬಳಿದು ನನ್ನನ್ನು ದೂರವಿಡಲು ಸಾಧ್ಯವಿಲ್ಲ, ನಾನೂ ಯಾವತ್ತು ಹಿಂದೂಪರ ಹೋರಾಟಗಾರ: ಕಾಳಿ ಸ್ವಾಮಿ

    ಬೆಂಗಳೂರು: ಮಸಿ ಬಳಿದು ನನ್ನನ್ನು ದೂರವಿಡಲು ಆಗಲ್ಲ. ನಾನು ಯಾವಾಗಲೂ ಹಿಂದೂ ಪರ ಹೋರಾಟ ಮಾಡುತ್ತಲೇ ಇರುತ್ತೇನೆ ಎಂದು ಕಾಳಿ ಸ್ವಾಮಿ ಗುಡುಗಿದ್ದಾರೆ.

    ಮಲ್ಲೇಶ್ವರಂ ಗಂಗಮ್ಮ ದೇವಾಲಯದ ಹೊರಗೆ ಮಸಿ ಬಳಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನ್ನ ಮೇಲೆ ಇಲ್ಲಸಲ್ಲದ ಆರೋಪ ಮಾಡಿದ್ದಾರೆ. ಸರ್ವಜನಾಂಗದ ಶಾಂತಿಯ ತೋಟದಲ್ಲಿ ಕಲ್ಲು, ಮುಳ್ಳು ಇದೆ ಎಂದಿದ್ದೆ. ಕುವೆಂಪು ಅವರನ್ನು ಅನುಸರಿಸುವವರನ್ನು ಗುಂಡಿಟ್ಟು ಕೊಲ್ಲಿ ಎಂದಿಲ್ಲ. ಶಿವರಾಮೇಗೌಡ್ರು ಯಾಕೆ ನನ್ನ ಮೇಲೆ ಹಗೆ ಸಾಧಿಸ್ತಿದ್ದಾರೆ? ಕುವೆಂಪುರ ವಿರುದ್ಧ ನಾನು ಮಾತಾಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ಪೂಜೆ ಮುಗಿಸಿ ಬರುತ್ತಿದ್ದ ಕಾಳಿ ಸ್ವಾಮಿ ಮುಖಕ್ಕೆ ಮಸಿ

    ನನ್ನ ಮೇಲೆ ಆರೋಪ ಮಾಡಿದವರಿಗೆ ನಾನು ಚಾಲೇಂಜ್ ಮಾಡ್ತೀನಿ. ಕುವೆಂಪು ಅವರ ರಾಮಾಯಣ ದರ್ಶನಂ ಬಗ್ಗೆ ಬನ್ನಿ ಚರ್ಚೆ ಮಾಡೋಣ. ನಾನು ಮಸಿ ಬಳಿದ ಪ್ರಕರಣದಿಂದ ಹಿಂದೆ ಸರಿಯಲ್ಲ. ನನಗೆ ಪ್ರತಿದಿನ ಕೊಲೆ ಬೆದರಿಕೆ ಕರೆಗಳು ಬರ್ತಿವೆ. ಆದ್ದರಿಂದ ನಾನು ಇಂದು ಬಂದು ಕಂಪ್ಲೇಂಟ್ ನೀಡಿದ್ದೇನೆ ಎಂದಿದ್ದಾರೆ.

    ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ದೂರು ನೀಡಲು ಬಂದ ಕಾಳಿ ಸ್ವಾಮಿಗೆ ಪ್ರಶಾಂತ್ ಸಂಬರಗಿ, ಪುನೀತ್ ಕೆರೆಹಳ್ಳಿ ಸಾಥ್ ನೀಡಿದರು. ಇದನ್ನೂ ಓದಿ: ಮಸಿ ಬಳಿದವರ ವಿರುದ್ಧ ಕಾನೂನು ಹೋರಾಟ ಮಾಡುತ್ತೇನೆ: ಕಾಳಿಸ್ವಾಮಿ

    ಏನಿದು ಘಟನೆ?
    ಮಲ್ಲೇಶ್ವರಂ ಗಂಗಮ್ಮ ದೇವಾಲಯದಲ್ಲಿ ಪೂಜೆ ಮುಗಿಸಿ ಹೊರಬರುತ್ತಿದ್ದ ಕಾಳಿ ಸ್ವಾಮಿಗೆ ಗುಂಪೊಂದು ಏಕಾಏಕಿ ಮಸಿ ಬಳಿದ ಘಟನೆ ಕೆಲದಿನಗಳ ಹಿಂದೆ ನಡೆದಿತ್ತು. ಕಾಳಿಕಾ ಸೇನೆಯ ವತಿಯಿಂದ ಮಲ್ಲೇಶ್ವರಂನ ಗಂಗಮ್ಮ ದೇವಾಲಯದಲ್ಲಿ ವಿಶೇಷ ಪೂಜೆ ಆಯೋಜಿಸಲಾಗಿತ್ತು. ಪೂಜೆ ಮುಗಿಸಿ ಕಾಳಿ ಸ್ವಾಮಿ ಹೊರಬರುತ್ತಿದ್ದರು. ಈ ವೇಳೆ ಅವರಿಗೆ ಎದುರಾದ ಗುಂಪೊಂದು ನೀವು ಕುವೆಂಪು ಅವರನ್ನು ಮತ್ತು ಕನ್ನಡಪಡೆಗಳನ್ನು ನಿಂದಿಸಿದ್ದೀರಾ ಎಂದು ಜಗಳವಾಡಿ ಏಕಾಏಕಿ ಮಸಿ ಬಳಿದಿತ್ತು.

  • ಪೂಜೆ ಮುಗಿಸಿ ಬರುತ್ತಿದ್ದ ಕಾಳಿ ಸ್ವಾಮಿ ಮುಖಕ್ಕೆ ಮಸಿ

    ಪೂಜೆ ಮುಗಿಸಿ ಬರುತ್ತಿದ್ದ ಕಾಳಿ ಸ್ವಾಮಿ ಮುಖಕ್ಕೆ ಮಸಿ

    ಬೆಂಗಳೂರು: ದೇವಾಲಯದಲ್ಲಿ ಪೂಜೆ ಮುಗಿಸಿ ಹೊರಬರುತ್ತಿದ್ದ ಕಾಳಿ ಸ್ವಾಮಿಗೆ ಗುಂಪೊಂದು ಏಕಾಏಕಿ ಮಸಿ ಬಳಿದಿರುವ ಘಟನೆ ನಡೆದಿದೆ.

    ಕಾಳಿಕಾ ಸೇನೆಯ ವತಿಯಿಂದ ಮಲ್ಲೇಶ್ವರಂನ ಗಂಗಮ್ಮ ದೇವಾಲಯದಲ್ಲಿ ವಿಶೇಷ ಪೂಜೆ ಆಯೋಜಿಸಲಾಗಿತ್ತು. ಪೂಜೆ ಮುಗಿಸಿ ಕಾಳಿ ಸ್ವಾಮಿ ಹೊರಬರುತ್ತಿದ್ದರು. ಈ ವೇಳೆ ಅವರಿಗೆ ಎದುರಾದ ಗುಂಪೊಂದು ಏಕಾಏಕಿ ಮಸಿ ಬಳಿದಿದೆ. ಇದನ್ನೂ ಓದಿ: ಬೆಂಗಳೂರಿನ ಬಿಜೆಪಿ ಮುಖಂಡ ನೇಣಿಗೆ ಶರಣು

    ಕಾಳಿ ಸ್ವಾಮಿ ಸ್ಪಷ್ಟನೆ
    ಗಂಗಮ್ಮ ದೇವಾಲಯದಲ್ಲಿ ಪೂಜೆ ಇತ್ತು. ಪೂಜೆ ಬಹಳ ಚೆನ್ನಾಗಿ ಆಯ್ತು, ನನಗೆ ಬಹಳ ಖುಷಿಯೂ ಆಯ್ತು. ಪೂಜೆ ಮುಗಿಸಿ ಹೊರ ಬರುವ ವೇಳೆ ಕೆಲವರು ಬಂದು, `ನೀವು ಕುವೆಂಪು ಅವರನ್ನು ಮತ್ತು ಕನ್ನಡಪಡೆಗಳನ್ನು ನಿಂದಿಸಿದ್ದೀರಾ’ ಎಂದು ನನ್ನ ಬಳಿ ಜಗಳ ತೆಗೆದರು. ನಂತರ ಮುಖಕ್ಕೆ ಕಪ್ಪು ಮಸಿ ಬಳಿದಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

    ಕುವೆಂಪು ಅವರು ಮತ್ತು ಕನ್ನಡಪಡೆಗಳನ್ನು ನಾನು ಯಾವತ್ತಿಗೂ ನಿಂದಿಸಿಲ್ಲ. ನಿಮ್ಮ ಬಳಿ ದಾಖಲೆಗಳಿದ್ದರೆ ಅದನ್ನು ತೋರಿಸಬೇಕು. ಅದನ್ನು ಬಿಟ್ಟು ಏಕಾಏಕಿ ಕಪ್ಪು ಮಸಿ ಬಳಿದರೆ? ನಾನು ನನ್ನನ್ನು ಕನ್ನಡಿಯಲ್ಲಿ ನೋಡಿಕೊಂಡಾಗ ಬಹಳ ಖುಷಿ ಆಯ್ತು. ನೀವು ಮಸಿ ಬಳಿಯುವ ಮೂಲಕ ಕಾಳಿಯ ರುದ್ರಾವತಾರ ತೋರಿಸಿದ್ದೀರಿ. ಕಾಳಿ ಇರೋದೆ ಕಪ್ಪು, ಅದನ್ನು ನೀವು ನನಗೆ ಹಾಕಿದ್ದೀರಾ ಅಷ್ಟೇ ಎಂದು ಕೃತ್ಯ ಎಸಗಿದವರಿಗೆ ಚಾಟಿ ಬೀಸಿದ್ದಾರೆ. ಇದನ್ನೂ ಓದಿ: ಬಿರುಗಾಳಿ ಎಬ್ಬಿಸಿದ ಬಿಜೆಪಿ ಶಾಸಕ ಶಿವರಾಜ್ ಪಾಟೀಲ್ ಹೇಳಿಕೆ: ತೆಲಂಗಾಣದಲ್ಲಿ ಟಿಆರ್‌ಎಸ್ ಭರ್ಜರಿ ಪ್ರಚಾರ

    ಇದನ್ನು ನಾನು ಮಸಿ ಎಂದು ತಿಳಿದುಕೊಳ್ಳುತ್ತಿಲ್ಲ. ಇದನ್ನು ಒಂದು ಮೆಟ್ಟಿಲು ಎಂದು ತಿಳಿದುಕೊಳ್ಳುತ್ತೇನೆ. ನಮ್ಮ ಹೋರಾಟದ ದಿಕ್ಕು ವೇಗವಾಗಿ ನುಗ್ಗಿದ್ದರಿಂದ ನಿಮಗೆಲ್ಲ ಆತಂಕವಾಗಿದೆ. ಖುಷಿ ಆಗಿದೆಯಾ ನಿಮಗೆಲ್ಲ? ಮಸಿ ಬಳಿದವರು ಯಾರೋ ಹಿಂದೂಗಳಂತೆ. ಈಗ ಖುಷಿ ಮುಸ್ಲಿಮರಿಗೆ ಅಲ್ವ? ಮಸಿ ಹಾಕಿರೋ ಎಡಚರು ಖುಷಿ ಪಡಬೇಡಿ. ಇದರಿಂದ ನನಗೂ ಖುಷಿ ಆಗಿದೆ. ನೀವು ನನ್ನ ಮೇಲೆ ಮಸಿ ಹಾಕ್ತಿದ್ದೀರಾ ಅಂದರೆ, ನಿಮ್ಮನ್ಮು ನಾನು ತಲುಪಿದ್ದೀನಿ ಎಂದರ್ಥ ಎಂದು ತಿಳಿಸಿದ್ದಾರೆ.

    ಕೈಯಲ್ಲಿ ಆಗದೆ ಮಸಿ ಬಳಿಯುತ್ತೀರಾ? ನಿಮಗೆ ಧಮ್ ಇದ್ರೆ ನಾನು ಕುವೆಂಪು ಅವರನ್ನು, ಕನ್ನಡಪಡೆಗಳನ್ನು ನಿಂದಿಸಿದ್ದನ್ನು ನ್ಯಾಯಾಲಯದಲ್ಲಿ ಸಾಬೀತು ಮಾಡಿ. ನೀವು ಗಂಡಸರಾಗಿದ್ರೆ ಎಂದು ಸವಾಲು ಹಾಕಿದ್ದಾರೆ.

  • ಶ್ರೀರಂಗಪಟ್ಟಣದಲ್ಲಿ ಹರ್ಷನ ಅಸ್ಥಿ ವಿಸರ್ಜಿಸಿದ ಪ್ರಮೋದ್ ಮುತಾಲಿಕ್, ಕಾಳಿ ಸ್ವಾಮಿ

    ಶ್ರೀರಂಗಪಟ್ಟಣದಲ್ಲಿ ಹರ್ಷನ ಅಸ್ಥಿ ವಿಸರ್ಜಿಸಿದ ಪ್ರಮೋದ್ ಮುತಾಲಿಕ್, ಕಾಳಿ ಸ್ವಾಮಿ

    ಮಂಡ್ಯ: ಶ್ರೀರಂಗಪಟ್ಟಣದ ಕಾವೇರಿ ನದಿಯಲ್ಲಿ ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹಾಗೂ ಕಾಳಿ ಸ್ವಾಮಿ ಶಿವಮೊಗ್ಗದಲ್ಲಿ ಹತ್ಯೆಯಾಗಿದ್ದ ಬಜರಂಗದಳ ಕಾರ್ಯಕರ್ತ ಹರ್ಷನ ಅಸ್ಥಿಯನ್ನು ವಿಸರ್ಜನೆ ಮಾಡಿದರು.

    ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಪಶ್ಚಿಮವಾಹಿನಿಯಲ್ಲಿ ಅಸ್ಥಿ ವಿಸರ್ಜನೆ ಕಾರ್ಯಕ್ರಮ ನಡೆದಿದೆ. ಕಾಳಿ ಸ್ವಾಮಿ ಮೃತ ಹರ್ಷನ ಅಸ್ಥಿಯನ್ನು ಸೇತುವೆ ಬಳಿಯಿಂದ ಪೂಜಾ ಸ್ಥಳಕ್ಕೆ ತಲೆ ಮೇಲೆ ಹೊತ್ತು ತಂದಿದ್ದಾರೆ. ನಂತರ ಮುತಾಲಿಕ್‍ರಿಂದ ಪಶ್ಚಿಮವಾಹಿನಿಯ ಅರಳಿ ಕಟ್ಟೆ ಬಳಿ ಅಸ್ಥಿ ವಿಸರ್ಜನಾ ಕಾರ್ಯ ಆರಂಭವಾಯಿತು.

    ಪ್ರಧಾನ ಅರ್ಚಕರಾದ ಸಂದೀಪ್ ನೇತೃತ್ವದಲ್ಲಿ ಪೂಜಾ ಕೈಂಕರ್ಯ ನಡೆದಿದೆ. ಧುರುಮತಿ ನಾರಾಯಣ ಹೋಮ, ಅಸ್ಥಿ ಸಂಚಯನ, ವಿಸರ್ಜನೆ, ಪಂಚಾಮೃತ ಅಭಿಷೇಕ, ದಶದಾನ, ಪುಣ್ಯಃ ಸೇರಿದಂತೆ ಹಲವು ಪೂಜಾ ವಿಧಿ ವಿಧಾನ ನಡೆದಿದೆ. ಈ ವೇಳೆ ಕಾವೇರಿ ನದಿಗೆ ಅಸ್ಥಿ ವಿಸರ್ಜನೆ ಮೂಲಕ ಹರ್ಷ ಆತ್ಮಕ್ಕೆ ಸದ್ಗತಿ ನೀಡಲಿ ಎಂದು ಪ್ರಾರ್ಥಿಸಿದರು. ಪೂಜೆ ಮುಗಿದ ಬಳಿಕ ಕಾವೇರಿ ನದಿಯಲ್ಲಿ ಅಸ್ಥಿ ವಿಸರ್ಜನೆ ಮಾಡಿದರು. ಇದನ್ನೂ ಓದಿ: ಮಣಪ್ಪುರಂ ಗೋಲ್ಡ್ ಲೋನ್ ಸಿಬ್ಬಂದಿಯ ಎಡವಟ್ಟು- ಯಾರದೋ ಬಂಗಾರ ಮತ್ಯಾರಿಗೋ

    ಹರ್ಷನ ಕೊಲೆ ಪ್ರಕರಣದಿಂದಾಗಿ ಶಿವಮೊಗ್ಗವೇ ಹೊತ್ತಿ ಉರಿದಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ 144 ಸೆಕ್ಷನ್‍ನ್ನು ಹಾಕಲಾಗಿತ್ತು. ಹರ್ಷನ ಶವ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿತ್ತು. ಈಗಾಗಲೇ ಕೊಲೆಗೆ ಸಂಬಂಧಿಸಿದಂತೆ 8 ಆರೋಪಿಗಳನ್ನು ಬಂಧಿಸಲಾಗಿದೆ. ಇದನ್ನೂ ಓದಿ: ಉಕ್ರೇನ್‍ನಲ್ಲಿ ಸಿಲುಕಿರುವ ರಾಜ್ಯದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಸೂಕ್ತ ಕ್ರಮ : ಬೊಮ್ಮಾಯಿ