Tag: Kalicharan Maharaj

  • 3 ತಿಂಗಳ ನಂತರ ಕಾಳಿಚರಣ್ ಮಹಾರಾಜ್‍ಗೆ ಸಿಕ್ತು ಜಾಮೀನು

    3 ತಿಂಗಳ ನಂತರ ಕಾಳಿಚರಣ್ ಮಹಾರಾಜ್‍ಗೆ ಸಿಕ್ತು ಜಾಮೀನು

    ರಾಯ್‍ಪುರ: ದ್ವೇಷ ಭಾಷಣ ಮಾಡಿದ ಪ್ರಕರಣದ ಹಿನ್ನೆಲೆ ಹಿಂದೂ ಧಾರ್ಮಿಕ ಮುಖಂಡ ಕಾಳಿಚರಣ್ ಮಹಾರಾಜ್ ಕಳೆದ ಮೂರು ತಿಂಗಳಿಂದ ಸೆರೆವಾಸ ಅನುಭವಿಸುತ್ತಿದ್ದರು. ಆದರೆ ಈಗ ಛತ್ತೀಸ್‍ಗಢ ಹೈಕೋರ್ಟ್ ಕಾಳಿಚರಣ್ ಅವರಿಗೆ ಜಾಮೀನು ನೀಡಿದೆ.

    Kalicharan Maharaj: Kali devotee, who claimed a 'vision' | India News,The Indian Express

    ರಾಜ್ಯ ರಾಜಧಾನಿ ರಾಯ್‍ಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಹಾತ್ಮ ಗಾಂಧಿ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಮತ್ತು ಹಂತಕ ನಾಥೂರಾಂ ಗೋಡ್ಸೆಯನ್ನು ಹೊಗಳಿದ್ದಕ್ಕಾಗಿ ಹಿಂದೂ ಧಾರ್ಮಿಕ ಮುಖಂಡ ಕಾಳಿಚರಣ್ ಅವರನ್ನು ಬಂಧನಕ್ಕೊಳಪಡಿಸಲಾಗಿತ್ತು. ಈ ಕುರಿತು ಭಾರೀ ಚರ್ಚೆಯಾಗುತ್ತಿತ್ತು. ಕಾಳಿಚರಣ್ ವಕೀಲರು ಜಾಮೀನಿಗಾಗಿ ಓಡಾಡುತ್ತಿದ್ದರೂ ಸಿಕ್ಕಿರಲಿಲ್ಲ. ಆದರೆ ಮೂರು ತಿಂಗಳ ನಂತರ ಛತ್ತೀಸ್‍ಗಢ ಹೈಕೋರ್ಟ್ ಶುಕ್ರವಾರ ಜಾಮೀನು ನೀಡಿದೆ. ಇದನ್ನೂ ಓದಿ: ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಪೊಲೀಸರ ಮಸ್ತ್ ಡ್ಯಾನ್ಸ್: ಪರ,ವಿರೋಧ ಚರ್ಚೆ

    ಡಿಸೆಂಬರ್ 30 ರಂದು ಮಧ್ಯಪ್ರದೇಶದ ರಾಯ್‍ಪುರ ಕಾರ್ಯಕ್ರಮದಲ್ಲಿ ಕಾಳಿಚರಣ್ ಅವರು ಮುಖ್ಯ ಅತಿಥಿಗಳಾಗಿ ಬಂದಿದ್ದರು. ಈ ವೇಳೆ ಕಾಳಿಚರಣ್ ಅವರು ಗಾಂಧಿ ದೇಶವನ್ನು ನಾಶಮಾಡುತ್ತಿದ್ದಾರೆ ಎಂದು ಆರೋಪಿಸಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.

    ಈ ವೀಡಿಯೋದಲ್ಲಿ ಅವರು, ನಾನು ನಾಥೂರಾಂ ಗೋಡ್ಸೆಗೆ ನಮನ ಸಲ್ಲಿಸುತ್ತೇನೆ ಎಂದು ಹೇಳಿದ್ದರು. ಈ ಹೇಳಿಕೆ ಚರ್ಚೆಗೆ ಕಾರಣವಾಗಿತ್ತು. ವಿಚಾರಣೆಯಲ್ಲಿ ಕಾಳಿಚರಣ್ ಪರ ವಕೀಲ ಕಿಶೋರ್ ಭಾದುರಿ ಅವರು, ತಮ್ಮ ಕಕ್ಷಿದಾರರು ನಿರಪರಾಧಿಯಾಗಿದ್ದು, ರಾಜಕೀಯ ಪೈಪೋಟಿಯಿಂದಾಗಿ ಈ ಪ್ರಕರಣದಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಹೈಕೋರ್ಟ್‍ಗೆ ತಿಳಿಸಿದ್ದರು. ಇದನ್ನೂ ಓದಿ: ಬಾಲ್ಯ ವಿವಾಹ ಮಾಡಿ ತಾಳಿ ಬಿಚ್ಚಿಸಿ ಪರೀಕ್ಷೆಗೆ ಕಳುಹಿಸಿದ್ರು

  • ರಾಷ್ಟ್ರಪಿತನ ಬಗ್ಗೆ ಅವಹೇಳನಕಾರಿ ಹೇಳಿಕೆ – ಕಾಳಿಚರಣ್ ಮಹಾರಾಜ್ ಬಂಧನ

    ರಾಷ್ಟ್ರಪಿತನ ಬಗ್ಗೆ ಅವಹೇಳನಕಾರಿ ಹೇಳಿಕೆ – ಕಾಳಿಚರಣ್ ಮಹಾರಾಜ್ ಬಂಧನ

    ಮುಂಬೈ: ಮಹಾತ್ಮಾ ಗಾಂಧಿಯವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಪೊಲೀಸರು ಹಿಂದೂ ಧಾರ್ಮಿಕ ಮುಖಂಡ ಕಾಳಿಚರಣ್ ಮಹಾರಾಜ್‌ನನ್ನು ಬಂಧಿಸಿದ್ದಾರೆ.

    ಮಹಾರಾಷ್ಟ್ರದ ಥಾಣೆ ನಗರದ ಪೊಲೀಸರು ಮಹಾತ್ಮ ಗಾಂಧಿಯವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಮೇಲೆ ಕಾಳಿಚರಣ್ ಅವರನ್ನು ಛತ್ತೀಸ್‌ಗಢದಲ್ಲಿ ಬಂಧಿಸಲಾಗಿದೆ ಎಂದು ಗುರುವಾರ ತಿಳಿಸಿದ್ದಾರೆ.

    ಕಳೆದ ವರ್ಷ ಡಿಸೆಂಬರ್ 26 ರಂದು ಛತ್ತೀಸ್‌ಗಢದ ರಾಜಧಾನಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕಾಳಿಚರಣ್ ಮಹಾತ್ಮಾ ಗಾಂಧಿಯವರ ವಿರುದ್ಧ ಹೇಳಿಕೆಯನು ನೀಡಿದ್ದರು. ಇದನ್ನು ಹೊರತಪಡಿಸಿಯೂ ಕಾಳಿಚರಣ್ ಇಂತಹ ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ಜೈಲು ವಾಸ ಅನುಭವಿಸಿದ್ದರು. ಇದೀಗ ಮತ್ತೆ ಪೊಲೀಸರು ಕಾಳಿಚರಣ್‌ನನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಲತಾ ಮಂಗೇಶ್ಕರ್‌ಗೆ ಐಸಿಯುನಲ್ಲೇ ಚಿಕಿತ್ಸೆ ಮುಂದುವರಿಕೆ

    ಎನ್‌ಸಿಪಿ ನಾಯಕ ಹಾಗೂ ಮಹಾರಾಷ್ಟ್ರದ ಸಚಿವ ಜಿತೇಂದ್ರ ಅವ್ಹಾದ್ ಕಾಳಿಚರಣ್‌ರ ವಿರುದ್ಧ ದೂರು ನೀಡಿದ್ದರು. ಪ್ರಕರಣವನ್ನು ದಾಖಲಿಸಿಕೊಂಡ ನೌಪಾದ ಪೊಲೀಸ್ ಠಾಣೆ ಎಂಟು ಸಿಬ್ಬಂದಿ ತಂಡ ರಾಯ್‌ಪುರಕ್ಕೆ ತೆರಳಿ ಕಾಳಿಚರಣ್ ಮಹಾರಾಜ್‌ನನ್ನು ಬಂಧಿಸಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರೆಮೋ ಡಿಸೋಜಾ ಸೋದರ ಮಾವ ಸಾವು – ಆತ್ಮಹತ್ಯೆ ಶಂಕೆ