ತೆಲುಗು ನಟ ನಾನಿ (Actor Nani) ಸದ್ಯ ‘ಸೂರ್ಯನ ಸಾಟರ್ಡೆ’ ಸಿನಿಮಾದ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ಕಲ್ಕಿ ಸೀಕ್ವೆಲ್‌ನಲ್ಲಿ ನಾನಿ ನಟಿಸುತ್ತಾರೆ ಎಂದು ಹಬ್ಬಿದ ಸುದ್ದಿಗೆ ನಾನಿ ಕ್ಲ್ಯಾರಿಟಿ ನೀಡಿದ್ದಾರೆ. ‘ಕಲ್ಕಿ 2’ನಲ್ಲಿ ನಾನು ನಟಿಸುತ್ತಿಲ್ಲ ಎಂದು ನಾನಿ ಮಾತನಾಡಿದ್ದಾರೆ.
ಸಂದರ್ಶನವೊಂದರಲ್ಲಿ ನಾನಿ ಮಾತನಾಡಿ, ನಾನು ‘ಕಲ್ಕಿ 2’ ಸಿನಿಮಾದಲ್ಲಿ ನಟಿಸುತ್ತಿಲ್ಲ. ಚಿತ್ರತಂಡ ನನಗೆ ಅಪ್ರೋಚ್ ಕೂಡ ಮಾಡಿಲ್ಲ. ಇದೆಲ್ಲಾ ಸುಳ್ಳು ಸುದ್ದಿ. ಇದೆಲ್ಲಾ ಹೇಗೆ ವೈರಲ್ ಆಯ್ತು ಎಂಬುದು ನನಗೆ ತಿಳಿಯುತ್ತಿಲ್ಲ. ನಿಜಕ್ಕೂ ಈ ಸುದ್ದಿ ಕೇಳಿ ನಾನು ಶಾಕ್ ಆದೆ ಎಂದು ಮಾತನಾಡಿದ್ದಾರೆ. ಇದನ್ನೂ ಓದಿ:‘ಭೀಮ’ ಸಕ್ಸಸ್ ಬೆನ್ನಲ್ಲೇ ಹೊಸ ಸಿನಿಮಾ ಘೋಷಿಸಿದ ದುನಿಯಾ ವಿಜಯ್
ಅಂದಹಾಗೆ, ಪ್ರಭಾಸ್, ದೀಪಿಕಾ ಪಡುಕೋಣೆ (Deepika Padukone) ನಟನೆಯ ‘ಕಲ್ಕಿ 2898 ಎಡಿ’ (Kalki 2898 AD) ಸಿನಿಮಾ ಯಶಸ್ಸು ಕಂಡಿದೆ. ‘ಕಲ್ಕಿ 2’ ಬರೋದಾಗಿ ಚಿತ್ರತಂಡ ಸುಳಿವು ನೀಡಿದೆ. ಕೆಲದಿನಗಳಿಂದ ‘ಕಲ್ಕಿ 2’ನಲ್ಲಿ ನಾನಿ ಕ್ಯಾಮಿಯೋ ರೋಲ್ ಮಾಡುತ್ತಾರೆ ಎಂಬ ಸುದ್ದಿ ಸಿಕ್ಕಾಪಟ್ಟೆ ಸದ್ದು ಮಾಡಿತ್ತು. ಅದಕ್ಕೀಗ ಉತ್ತರ ಸಿಕ್ಕಿದೆ.
ಇನ್ನೂ ಆ.29ಕ್ಕೆ ಸೂರ್ಯನ ಸಾಟರ್ಡೆ ಸಿನಿಮಾ ಬಹುಭಾಷೆಗಳಲ್ಲಿ ರಿಲೀಸ್ ಆಗುತ್ತಿದೆ. ನಾನಿಗೆ ಹೀರೋಯಿನ್ ಆಗಿ ಕನ್ನಡತಿ ಪ್ರಿಯಾಂಕಾ ಮೋಹನ್ (Priyanka Mohan) ನಟಿಸಿದ್ದಾರೆ.
‘ಕಲ್ಕಿ 2898 ಎಡಿ’ (Kalki 2898 AD) ಸಿನಿಮಾ ಸಕ್ಸಸ್ ಕಂಡಿದೆ. ಈ ಬೆನ್ನಲ್ಲೇ ಚಿತ್ರತಂಡಕ್ಕೆ ಸಂಕಷ್ಟ ಎದುರಾಗಿದೆ. ಈ ಚಿತ್ರದಲ್ಲಿ ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ಚಿತ್ರದ ನಿರ್ಮಾಪಕರಿಗೆ, ನಟರಾದ ಅಮಿತಾಭ್ (Amitabh Bachchan), ಪ್ರಭಾಸ್‌ಗೆ (Prabhas) ಕಲ್ಕಿಧಾಮ ಪೀಠಾಧೀಶ್ವರ ಆಚಾರ್ಯ ಪ್ರಮೋದ್ ಕೃಷ್ಣಂ ಲೀಗಲ್ ನೋಟಿಸ್ ನೀಡಿದ್ದಾರೆ. ಇದನ್ನೂ ಓದಿ:ದರ್ಶನ್ ನೋಡಲು ದಿನಕರ್ ತೂಗುದೀಪ್ ಜೊತೆ ಜೈಲಿಗೆ ಬಂದ ವಿಜಯಲಕ್ಷ್ಮಿ
ನಿಮ್ಮ ಚಲನಚಿತ್ರವು ಭಗವಾನ್ ಕಲ್ಕಿಯ ಪರಿಕಲ್ಪನೆಯನ್ನು ಬದಲಾಯಿಸಿರುವಂತೆ ಇದೆ. ಹಿಂದೂ ಪುರಾಣ ಗ್ರಂಥಗಳಲ್ಲಿ ಬರೆದ ಮತ್ತು ವಿವರಿಸಿದ ಕಾರಣಗಳಿಗಾಗಿ, ಭಗವಾನ್ ಕಲ್ಕಿಯ ಕಥೆಯ ಚಿತ್ರಣ ಮತ್ತು ಚಿತ್ರಣವು ಸಂಪೂರ್ಣವಾಗಿ ತಪ್ಪಾಗಿದೆ. ಹಾಗಾಗಿ ಈ ಪವಿತ್ರ ಗ್ರಂಥಗಳಿಗೆ ಅಗೌರವವಾಗಿದೆ. ಕಲ್ಕಿಯ ಕಥೆಯನ್ನು ಸಂಪೂರ್ಣವಾಗಿ ತಪ್ಪಾಗಿ ನಿರೂಪಿಸಲಾಗಿದೆ. ಇದು ಪವಿತ್ರ ಗ್ರಂಥಗಳಿಗೆ ಅಪಮಾನ ಮಾಡಿದಂತಾಗುತ್ತದೆ ಎಂದು ಆರೋಪಿಸಿ ಚಿತ್ರತಂಡಕ್ಕೆ ಆಚಾರ್ಯ ಪ್ರಮೋದ್ ಕೃಷ್ಣಂ ಪರವಾಗಿ ಸುಪ್ರೀಂ ಕೋರ್ಟ್ ವಕೀಲ ಉಜ್ಜವಲ್ ಆನಂದ್ ಶರ್ಮಾ ಅವರು ನೋಟಿಸ್ ನೀಡಿದ್ದಾರೆ.
Ghaziabad: “If you cannot respect our faith, at least do not disrespect it. Kalki Bhagwan is considered the final incarnation of Vishnu. The details of his incarnation where, when, and how it will occur are all described in the scriptures. Why is there a violation of this? If you… pic.twitter.com/1B31KIEfpO
ಕಲ್ಕಿ ಅವತಾರವು ವಿಷ್ಣುವಿನ ಕೊನೆಯ ಅವತಾರವಾಗಿದೆ. ಪ್ರಧಾನಿ ಮೋದಿ ಅವರು ಫೆಬ್ರವರಿ 19ರಂದು ಯುಪಿಯ ಸಂಭಾಲ್‌ನಲ್ಲಿ ಶ್ರೀ ಕಲ್ಕಿ ಧಾಮ್ ದೇವಾಲಯದ ಉದ್ಘಾಟನೆ ಮಾಡಿದರು. ಅಲ್ಲಿ ಭಗವಾನ್ ಕಲ್ಕಿ ಜನಿಸಲಿದ್ದಾರೆ. ಇಡೀ ಜಗತ್ತು ಅವನಿಗಾಗಿ ಕಾಯುತ್ತಿದೆ. ಆದರೆ ಈ ಚಿತ್ರವು ಜನರಿಗೆ ತಪ್ಪು ಸಂದೇಶವನ್ನು ನೀಡುತ್ತಿದೆ ಎಂದು ಎಂದು ಮಾಜಿ ಕಾಂಗ್ರೆಸ್ ನಾಯಕ ಆಚಾರ್ಯ ಪ್ರಮೋದ್ ಕೃಷ್ಣಂ ಹೇಳಿಕೆ ನೀಡಿದ್ದಾರೆ.
ಅಂದಹಾಗೆ, ‘ಕಲ್ಕಿ 2898 ಎಡಿ’ ಸಿನಿಮಾ ಬಹುಭಾಷೆಗಳಲ್ಲಿ ರಿಲೀಸ್ ಆಗಿ ಹೌಸ್‌ಫುಲ್ ಪ್ರದರ್ಶನ ಕಾಣುತ್ತಿದೆ. ಚಿತ್ರದಲ್ಲಿ ಅಮಿತಾಬ್, ಪ್ರಭಾಸ್ ಜೊತೆ ದೀಪಿಕಾ ಪಡುಕೋಣೆ, ಕಮಲ್ ಹಾಸನ್ ಸೇರಿದಂತೆ ಅನೇಕರು ನಟಿಸಿದ್ದಾರೆ. 2ಡಿ ಜೊತೆಗೆ 3ಡಿಯಲ್ಲೂ ಸಿನಿಮಾ ವೀಕ್ಷಿಸಲು ಲಭ್ಯವಿದೆ.
ತೆಲುಗಿನ ಸ್ಟಾರ್ ನಟ ಪ್ರಭಾಸ್ (Prabhas) ಸದ್ಯ ‘ಕಲ್ಕಿ 2898 ಎಡಿ’ (Kalki 2898 AD) ಸಿನಿಮಾದ ಸಕ್ಸಸ್ ಖುಷಿಯಲ್ಲಿದ್ದಾರೆ. ಇದರ ಮಧ್ಯೆ ಮತ್ತೆ ಪ್ರಭಾಸ್ ಮದುವೆ ಮ್ಯಾಟರ್ ಚರ್ಚೆಗೆ ಗ್ರಾಸವಾಗಿದೆ. ಈಗ ಸಂದರ್ಶನವೊಂದರಲ್ಲಿ ದೊಡ್ಡಮ್ಮ ಶ್ಯಾಮಲಾ ದೇವಿ ಪ್ರಭಾಸ್ ಮದುವೆ ಸೂಚನೆ ಕೊಟ್ಟಿದ್ದಾರೆ. ಇದನ್ನೂ ಓದಿ:‘ಫೈರ್ ಫ್ಲೈ’ ತಂಡದಿಂದ ಹೊಸ ಸುದ್ದಿ- ಶಿವಣ್ಣನ ಪುತ್ರಿ ಜೊತೆ ಕೈಜೋಡಿಸಿದ ಅಚ್ಯುತ್ ಕುಮಾರ್
ಕಲ್ಕಿ ಯಶಸ್ಸಿನ ಕುರಿತು ಮಾತನಾಡಿರುವ ಅವರು, ಒಳ್ಳೆಯತನ ಮನುಷ್ಯನನ್ನು ಎಲ್ಲಿಯವರೆಗೆ ಕರೆದುಕೊಂಡು ಹೋಗಲಿದೆ ಎಂಬುದು ಸಾಬೀತಾಗಿದೆ. ಬಾಹುಬಲಿ ಬಳಿಕ ಪ್ರಭಾಸ್ ದೊಡ್ಡ ಯಶಸ್ಸು ಕಾಣುವುದಿಲ್ಲ ಎಂದು ಅನೇಕರು ಹೇಳಿದ್ದರು. ಆದರೆ ಈಗ ಏನಾಯ್ತು ಎಂದು ಪ್ರಶ್ನಿಸಿದ್ದಾರೆ. ಅದೇ ರೀತಿ ಪ್ರಭಾಸ್ ಮದುವೆ ವಿಚಾರದಲ್ಲೂ ಹೀಗೆಯೇ ಆಗುತ್ತದೆ ಎಂದಿದ್ದಾರೆ ಶ್ಯಾಮಲಾ ದೇವಿ. ಈ ಮೂಲಕ ಪ್ರಭಾಸ್ ಮದುವೆ ಆಗಲ್ಲ ಎನ್ನುವವರ ಬಾಯಿ ಮುಚ್ಚಿಸಿದ್ದಾರೆ. ಈಗ ಪ್ರಭಾಸ್ ಮದುವೆ ಕುರಿತು ದೊಡ್ಡಮ್ಮ ಸೂಚನೆ ಕೊಟ್ಟಿದ್ದಾರೆ.
ಅಂದಹಾಗೆ, ಚಿತ್ರರಂಗದಲ್ಲಿ ಗಾಸಿಪ್ ಕಾಮನ್. ಅನುಷ್ಕಾ ಶೆಟ್ಟಿ, ಕೃತಿ ಸನೋನ್ ಇನ್ನೂ ಅನೇಕರ ಜೊತೆ ಪ್ರಭಾಸ್ ಹೆಸರು ಸದ್ದು ಮಾಡಿತ್ತು. ಈ ನಟಿಯರಲ್ಲಿ ಯಾರನ್ನಾದರೂ ಪ್ರಭಾಸ್ ಮದುವೆ ಆಗುತ್ತಾರೆ ಎಂದೇ ಭಾವಿಸಿದ್ದರು. ಆದರೆ ಆಗಿದ್ದೇ ಬೇರೆ. ಸಿಂಗಲ್ ಆಗಿರುವ 44 ವರ್ಷದ ಪ್ರಭಾಸ್ ಬೇಗ ಮದುವೆ ಆಗಲಿ ಎಂದು ಫ್ಯಾನ್ಸ್ ಆಶಿಸುತ್ತಿದ್ದಾರೆ.
ವೈಜಯಂತಿ ಬ್ಯಾನರ್‌ನಲ್ಲಿ ನಿರ್ಮಾಣವಾಗಿರುವ ಬಹುಕೋಟಿ ವೆಚ್ಚದ ‘ಕಲ್ಕಿ 2898 ಎಡಿ’ (Kali 2898 AD) ಸಿನಿಮಾ ಬಾಕ್ಸ್ಆಫೀಸ್‌ನಲ್ಲಿ ಗಳಿಕೆಯ ನಾಗಾಲೋಟ ಮುಂದುವರಿಸಿದೆ. ಸಾಹಸ ದೃಶ್ಯಗಳಿಗೆ ಪ್ರೇಕ್ಷಕ ವರ್ಗ ಮೂಕವಿಸ್ಮಿತನಾಗಿದ್ದ. ನಿರ್ದೇಶಕ ನಾಗ್ ಅಶ್ವಿನ್ ಅವರ ಕೈ ಚಳಕಕ್ಕೂ ಬಹುಪರಾಕ್ ಸಿಕ್ಕಿತ್ತು. ಅಭಿಮಾನಿಗಳಿಂದಲೂ ಪ್ರಭಾಸ್ ಹೊಸ ಅವತಾರಕ್ಕೆ ಮೆಚ್ಚುಗೆಯ ಮಹಾಪೂರವೇ ಸಿಕ್ಕಿತ್ತು. ಸಲಾರ್‌ಗೂ ಮುನ್ನ ಸರಣಿ ಸೋಲು ಅನುಭವಿಸಿದ್ದ ಪ್ರಭಾಸ್‌ಗೀಗ ‘ಕಲ್ಕಿ’ ಸಿನಿಮಾ ಮೂಲಕ ಮತ್ತೆ ಮರು ಜೀವ ಸಿಕ್ಕಿದೆ.
ಪ್ಯಾನ್ ಇಂಡಿಯಾ ಸ್ಟಾರ್ ಎಂಬ ಹಣೆಪಟ್ಟಿಯನ್ನು ಮತ್ತಷ್ಟು ಗಟ್ಟಿಯಾಗಿಯೇ ಅಚ್ಚೊತ್ತಿಕೊಂಡಿದ್ದಾರೆ ಪ್ರಭಾಸ್. ಕಲ್ಕಿ ಸಿನಿಮಾ ಅಂಥದ್ದೊಂದು ದೊಡ್ಡ ಗೆಲುವನ್ನು ಪ್ರಭಾಸ್ (Prabhas) ಅವರಿಗೆ ನೀಡಿದೆ. ಫ್ಯಾಂಟಸಿ ಸಿನಿಮಾ ಮೂಲಕ, ಕಣ್ಣಿಗೆ ಅಚ್ಚರಿ ಎನಿಸುವ ದೃಶ್ಯಾವಳಿಗಳನ್ನೇ ನೋಡುಗರಿಗೆ ನೀಡಿ, ಮಾಸ್ ಆ್ಯಕ್ಷನ್ ಸೀನ್‌ಗಳಿಂದ ಸಮೃದ್ಧವಾದ ಚಿತ್ರವನ್ನೇ ಪ್ರೇಕ್ಷಕನ ತಟ್ಟೆಗೆ ಬಡಿಸಿದ್ದಾರೆ ಪ್ರಭಾಸ್. ತಮ್ಮ ಗಮನಾರ್ಹವಾದ ಪಾತ್ರದಿಂದಲೇ ಗಮನ ಸೆಳೆದ ಪ್ರಭಾಸ್, ಜಾಗತಿಕ ಅಭಿಮಾನಿಗಳಿಗೂ ಹಬ್ಬದೂಟ ಹಾಕಿಸಿದ್ದಾರೆ.
ಪ್ರಭಾಸ್ ಅವರ ಕಟ್ಟಾ ಅಭಿಮಾನಿಗಳ ತಂಡವೊಂದು ಇತ್ತೀಚೆಗೆ ಅವರ ‘ಕಲ್ಕಿ 2898 ಎಡಿ’ ಸಿನಿಮಾ ವೀಕ್ಷಿಸಲು ಜಪಾನ್‌ನಿಂದ (Japan) ಹೈದರಾಬಾದ್‌ಗೆ ಆಗಮಿಸಿತ್ತು. ಈ ಅದ್ಭುತ ಗೆಸ್ಚರ್ ಸೂಪರ್‌ಸ್ಟಾರ್‌ನ ಜಾಗತಿಕ ಸ್ಟಾರ್‌ಡಮ್‌ಗೆ ಹಿಡಿದ ಸಾಕ್ಷಿ. ಇದನ್ನೂ ಓದಿ:ದರ್ಶನ್ ಘಟನೆ ಕೇಳಿದ್ಮೇಲೆ ಶಾಕ್ ಆಯ್ತು: ‘ತಾರಕ್’ ನಟಿ ಶಾನ್ವಿ ಶ್ರೀವಾತ್ಸವ್
ಚಿತ್ರದ ಅಧಿಕೃತ ಇನ್ಸ್ಟಾಗ್ರಾಂ ಹ್ಯಾಂಡಲ್, ಹೈದರಾಬಾದ್‌ನ ಪ್ರಸಾದ್ಸ್ ಮಲ್ಟಿಪ್ಲೆಕ್ಸ್‌ನಲ್ಲಿ ಐಕಾನಿಕ್ ರೆಬೆಲ್ ಟ್ರಕ್ ಪಕ್ಕದಲ್ಲಿ ನಿಂತಿರುವ ಮೂವರು ಜಪಾನಿ ಅಭಿಮಾನಿಗಳ ಫೋಟೋಗಳನ್ನು ಹಂಚಿಕೊಂಡಿದೆ. ಪ್ರಭಾಸ್ ಪಾತ್ರದ ಭೈರವ ಮತ್ತು ಬುಜ್ಜಿ ವಾಹನದ ಫೋಟೋ ಇರುವ ವಿಶೇಷ ಬಾವುಟ ಹಿಡಿದು ‘ಕಲ್ಕಿ 2898 ಎಡಿ’ ಚಿತ್ರ ಬಿಡುಗಡೆಗೆ ಅಭಿನಂದನೆಗಳು ಎಂದು ಜಪಾನಿನ ಫ್ಯಾನ್ಸ್ ಖುಷಿ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ:ಶಿವರಾಜ್‌ಕುಮಾರ್, ಹೇಮಂತ್ ರಾವ್ ಹೊಸ ಚಿತ್ರಕ್ಕೆ ಟೈಟಲ್ ಫಿಕ್ಸ್
‘ಸಲಾರ್’ ನಂತರ ಬಿಡುಗಡೆಯಾದ ಕಲ್ಕಿ ಸಿನಿಮಾ ಮೂಲಕ ಪ್ರಭಾಸ್ ಚಿತ್ರೋದ್ಯಮದಲ್ಲಿ ಮತ್ತೊಂದು ಹೊಸ ಮೈಲಿಗಲ್ಲು ತಲುಪಿದ್ದಾರೆ. ಗಲ್ಲಾಪೆಟ್ಟಿಗೆಯಲ್ಲಿ ದೊಡ್ಡ ಮಟ್ಟದ ಓಪನಿಂಗ್ ಪ್ರಭಾಸ್ ಸಿನಿಮಾಗಳಿಗೆ ಸಿಗುತ್ತಿವೆ. ಇದೀಗ ‘ಕಲ್ಕಿ 2898 ಎಡಿ’ ಸಿನಿಮಾ ಸಹ ಇದಕ್ಕೆ ಹೊರತಾಗಿಲ್ಲ, ಇದು ಭಾರತೀಯ ಚಿತ್ರರಂಗದಲ್ಲಿ ಅವರ ಮೂರನೇ ಅತಿದೊಡ್ಡ ಕಲೆಕ್ಷನ್ ಮಾಡಿದ ಸಿನಿಮಾವಾಗಿದೆ.
‘ಬಾಹುಬಲಿ’ಯಿಂದ ‘ಸಲಾರ್’, ‘ಕಲ್ಕಿ 2898 ಎಡಿ’ ವರೆಗೆ ಪ್ರಭಾಸ್ ತಮ್ಮ ಸ್ಟಾರ್ ಪವರ್‌ಗೆ ಸಾಟಿಯಿಲ್ಲ ಎಂಬುದನ್ನು ಸಾಬೀತುಪಡಿಸುತ್ತಲೇ ಬಂದಿದ್ದಾರೆ. ಸಮಕಾಲೀನ ಸಿನಿಮಾರಂಗದಲ್ಲಿ ಅತ್ಯಂತ ಅಪ್ರತಿಮ ಮತ್ತು ಪ್ರಭಾವಶಾಲಿ ನಟರಲ್ಲಿ ಒಬ್ಬರಾಗಿ ಹೊರಹೊಮ್ಮುತ್ತಿದ್ದಾರೆ ಪ್ರಭಾಸ್. ನಾಗ್ ಅಶ್ವಿನ್ ನಿರ್ದೇಶಿಸಿದ ಈ ಸಿನಿಮಾದಲ್ಲಿ ಅಮಿತಾಭ್ ಬಚ್ಚನ್ ಮತ್ತು ಕಮಲ್ ಹಾಸನ್ ಅವರಂತಹ ಲೆಜಂಡರಿ ಕಲಾವಿದರಿದ್ದಾರೆ. ದೀಪಿಕಾ ಪಡುಕೋಣೆ (Deepika Padukone) ಮತ್ತು ದಿಶಾ ಪಟಾನಿ ಸೇರಿ ಸಾಕಷ್ಟು ಕಲಾವಿದರು ಬಣ್ಣ ಹಚ್ಚಿದ್ದಾರೆ.
ಪ್ರಭಾಸ್ (Prabhas), ದೀಪಿಕಾ ಪಡುಕೋಣೆ (Deepika Padukone) ನಟನೆಯ ‘ಕಲ್ಕಿ 2898 ಎಡಿ’ ಇಂದು (ಜೂನ್ 27) ಸಿನಿಮಾ ರಿಲೀಸ್ ಆಗಿದೆ. ಫಸ್ಟ್ ಡೇ, ಫಸ್ಟ್ ಶೋಗೆ ಪ್ರೇಕ್ಷಕರಿಂದ ಸಿನಿಮಾಗೆ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ.
ಪ್ರಭಾಸ್, ಕಮಲ್ ಹಾಸನ್, ದೀಪಿಕಾ ಪಡುಕೋಣೆ, ಅಮಿತಾಭ್ ಬಚ್ಚನ್ ಅವರು ‘ಕಲ್ಕಿ 2898 ಎಡಿ’ (Kalki 2898 AD) ಸಿನಿಮಾದಲ್ಲಿ ನಟಿಸಿದ್ದಾರೆ. ಕಲ್ಕಿ ಚಿತ್ರಕ್ಕೆ ಐತಿಹಾಸಿಕದ ಟಚ್ ಕೊಟ್ಟಿದ್ದು, ಸಹಕಾರಿ ಆಗಿದೆ. ಕೊನೆಯ 30 ನಿಮಿಷ ಥ್ರಿಲ್ಲಿಂಗ್ ಆಗಿದೆ ಎಂದು ಫ್ಯಾನ್ಸ್ ಕೊಂಡಾಡಿದ್ದಾರೆ. ಇದನ್ನೂ ಓದಿ:ಕೀರ್ತಿ ಸುರೇಶ್ ನಟನೆಯ ಮೊದಲ ಬಾಲಿವುಡ್ ಸಿನಿಮಾ ರಿಲೀಸ್‌ಗೆ ಮುಹೂರ್ತ ಫಿಕ್ಸ್
ಇನ್ನೂ ಚಿತ್ರದಲ್ಲಿ ಭೂತ, ವರ್ತಮಾನ ಹಾಗೂ ಭವಿಷ್ಯದ ಕಥೆಯನ್ನು ಡೈರೆಕ್ಟರ್ ನಾಗ್ ಅಶ್ವೀನ್ ಕಟ್ಟಿಕೊಟ್ಟಿದ್ದಾರೆ. ಚಿತ್ರದ ಟ್ರೈಲರ್ ಝಲಕ್‌ನಲ್ಲೇ ಆ ಸುಳಿವು ಬಿಟ್ಟು ಕೊಟ್ಟಿದ್ದಾರೆ. ಜಗತ್ತಿನ ಮೊದಲ ಪ್ರದೇಶ ಮತ್ತು ಕೊನೆಯ ಪ್ರದೇಶ ಕಾಶಿ ಎನ್ನುವ ಮೂಲಕ ಕಲ್ಕಿ ಟ್ರೈಲರ್ ಶುರುವಾಗಿತ್ತು.
ಜಗತ್ತಿನಿಂದ ಎಲ್ಲವನ್ನೂ ಕಿತ್ತುಕೊಂಡರೆ ಎಲ್ಲವೂ ಇರುತ್ತದೆ ಎನ್ನುವ ಕುತೂಹಲಕರ ಸಂಭಾಷೆಯಣೆಯಿದೆ. 6000 ಹಿಂದಿನ ಶಕ್ತಿ ಮತ್ತೆ ಬಂದಿದೆ. ಅಳಿವು- ಉಳಿವಿಗಾಗಿ ಹೋರಾಡುವವರ ದೃಶ್ಯ ತೋರಿಸಲಾಗಿದೆ. ಭೈರವನಾಗಿ ಯುದ್ಧಕ್ಕೆ ಪ್ರಭಾಸ್ ಸಜ್ಜಾಗಿದ್ದಾರೆ. 2 ಜಗತ್ತಿನ ಹೋರಾಟವನ್ನು ಸೈನ್ಸ್ ಫಿಕ್ಷನ್ ಮೂಲಕ ಅದ್ಭುತವಾಗಿ ತೋರಿಸಿದ್ದಾರೆ. ಟ್ರೈಲರ್‌ನಿಂದ ಕುತೂಹಲ ಕೆರಳಿದ್ದ ಈ ಚಿತ್ರ, ರಿಲೀಸ್ ಬಳಿಕ ಪ್ರೇಕ್ಷಕರಿಗೆ ಉತ್ತರ ಸಿಕ್ಕಿದೆ. ಸಿನಿಮಾ ನೋಡಿ ಫ್ಯಾನ್ಸ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.