Tag: kalladka prabhara bhat

  • ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಅವಹೇಳನಕಾರಿ ಹೇಳಿಕೆ- ರೈ ವಿರುದ್ಧ ಬಿಜೆಪಿ ದೂರು

    ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಅವಹೇಳನಕಾರಿ ಹೇಳಿಕೆ- ರೈ ವಿರುದ್ಧ ಬಿಜೆಪಿ ದೂರು

    ಮಂಗಳೂರು: ಕರಾವಳಿಯ ಆರ್‍ಎಸ್‍ಎಸ್ ಮುಖಂಡ ಕಲ್ಲಡ್ಕ ಡಾ. ಪ್ರಭಾಕರ್ ಭಟ್ ಅವರನ್ನು ಅವಹೇಳನ ಮಾಡಿದ ಸಚಿವ ರಮಾನಾಥ ರೈ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

    ಸ್ಥಳೀಯ ಬಿಜೆಪಿ ಮುಖಂಡ ದಿನೇಶ್ ಅಮ್ಟೂರ್ ಸಚಿವರ ವಿರುದ್ಧ ದೂರು ನೀಡಿದ್ದು ಕ್ರಮಕ್ಕೆ ಒತ್ತಾಯಿಸಿದ್ದಾರೆ. ಶನಿವಾರ ರಾತ್ರಿ ಬಂಟ್ವಾಳ ಪ್ರವಾಸಿ ಮಂದಿರದಲ್ಲಿ ರಮಾನಾಥ ರೈ ಅವರು ಜಿಲ್ಲಾ ಎಸ್ಪಿ ಭೂಷಣ್ ಜಿ ಬೊರಸೆಯವರನ್ನು ಪಕ್ಷದ ಕಾರ್ಯಕರ್ತರ ನಡುವೆ ಕೂರಿಸಿ ಪ್ರಭಾಕರ್ ಭಟ್ ಅವರನ್ನು ಬಂಧಿಸುವಂತೆ ಕ್ಲಾಸ್ ತೆಗೆದುಕೊಂಡಿದ್ದರು. ಅಲ್ಲದೇ ಪ್ರಭಾಕರ್ ಭಟ್ ರನ್ನು ಏಕವಚನದಲ್ಲಿ ನಿಂದಿಸಿದ್ದರು. ರೈ ಹೇಳಿಕೆಗೆ ಇದೀಗ ತೀವ್ರ ವಿರೋಧ ಕಂಡುಬಂದಿದ್ದು ಸಚಿವರ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹ ವ್ಯಕ್ತವಾಗಿದೆ.

    ಏನಿದು ಪ್ರಕರಣ: ದಕ್ಷಿಣ ಕನ್ನಡ ಜಿಲ್ಲೆಯ ಕಲ್ಲಡ್ಕದಲ್ಲಿ ಇತ್ತೀಚೆಗೆ ನಡೆದ ಗಲಭೆಯ ಹಿನ್ನಲೆಯಲ್ಲಿ ಉಸ್ತುವಾರಿ ಸಚಿವ ರಮಾನಾಥ ರೈ ಕೊನೆಯ ಗಳಿಗೆಯಲ್ಲಿ ಪೊಲೀಸರ ಮೇಲೆಯೇ ಕಿಡಿಕಾರಿದ್ದರು. ಶನಿವಾರ ರಾತ್ರಿ ಜಿಲ್ಲಾ ಎಸ್‍ಪಿಯನ್ನು ಬಂಟ್ವಾಳ ಪ್ರವಾಸಿ ಮಂದಿರಕ್ಕೆ ಕರೆಸಿಕೊಂಡ ಸಚಿವ ರೈ ಎಸ್‍ಪಿಯನ್ನು ತರಾಟೆಗೆ ತೆಗೆದುಕೊಂಡು ಯಾರೇ ದೂರು ಕೊಟ್ಟರು ಕ್ರಮಕೈಗೊಳ್ಳಬೇಕು. ಮಾತ್ರವಲ್ಲ ಆಎರ್‍ಎಸ್‍ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರ ವಿರುದ್ಧ ಯಾರೇ ದೂರು ನೀಡಿದರೂ ಪ್ರಕರಕಣ ದಾಖಲಿಸಿಕೊಂಡು ಆತನನ್ನು ಬಂಧಿಸಬೇಕು. ಬಂಧನ ಬಳಿಕ ಆತನ ಪವರ್ ಏನೆಂಬುದು ಗೊತ್ತಾಗುತ್ತದೆ. ಇದೇನು ಮಂಡ್ಯ ಅಲ್ಲ ಇದು ಇಂಡಿಯಾ ಎಂದು ಎಸ್‍ಪಿಯನ್ನು ತರಾಟೆಗೆ ತೆಗೆದುಕೊಂಡಿದ್ದರು.

    ಕಲ್ಲಡ್ಕ ಪ್ರಭಾಕರ ಭಟ್ ಆರ್‍ಎಸ್‍ಎಸ್ ಮುಖಂಡರಾಗಿದ್ದು, ಕಳೆದ ಹಲವಾರು ವರ್ಷಗಳಿಂದ ಕೋಮು ಪ್ರಚೋದನಕಾರಿ ಭಾಷಣಗಳನ್ನು ಮಾಡುತ್ತಿದ್ದಾರೆ. ಇದರಿಂದ ಸಾಕಷ್ಟು ದೂರುಗಳು ದಾಖಲಾಗಿತ್ತು. ಆದರೆ ಯಾವುದೇ ಪ್ರಕರಣದಲ್ಲೂ ಕಲ್ಲಡ್ಕ ಪ್ರಭಾಕರ್ ಭಟ್ ಅವರ ಬಂಧನವಾಗಿಲ್ಲ. ಇದೀಗ ಮೊನ್ನೆ ನಡೆದ ಗಲಭೆಯಲ್ಲೂ ಭಟ್ ಕೈವಾಡ ಇದೆ ಎಂದು ಸ್ಥಳೀಯರು ಆರೋಪಿಸಿದ್ದು, ದೂರು ದಾಖಲಿಸಲು ಹೋದವರ ದೂರನ್ನು ಪೊಲೀಸರು ಸ್ವೀಕರಿಸಿಲ್ಲ ಅನ್ನುವ ಆರೋಪ ಕೇಳಿಬಂದಿತ್ತು.

    https://www.youtube.com/watch?v=0TjehsPe2VA