Tag: Kalyan

  • ಸೇಡು ತೀರಿಸಿಕೊಳ್ಳಲು ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ 15ರ ಬಾಲಕ

    ಸೇಡು ತೀರಿಸಿಕೊಳ್ಳಲು ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ 15ರ ಬಾಲಕ

    ಮುಂಬೈ: 9 ವರ್ಷದ ಬಾಲಕಿಯ (Girl) ಮೇಲೆ 15 ವರ್ಷದ ಬಾಲಕನೊಬ್ಬ (Boy) ಅತ್ಯಾಚಾರ (Rape) ನಡೆಸಿ, ಕೊಲೆಗೈದಿರುವ (Murder) ಆಘಾತಕಾರಿ ಘಟನೆ ಮಹಾರಾಷ್ಟ್ರದ (Maharashtra) ಕಲ್ಯಾಣ್‌ನಲ್ಲಿ (Kalyan) ನಡೆದಿದೆ. ಮೃತ ಬಾಲಕಿಯ ತಂದೆಯ ಮೇಲಿನ ಸೇಡಿಗೆ ಅಪ್ರಾಪ್ತ ಆರೋಪಿ ಈ ಕೃತ್ಯ ನಡೆಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

    ಗುರುವಾರ ಮುಂಜಾನೆ ಕಲ್ಯಾಣ್ ರೈಲ್ವೇ ನಿಲ್ದಾಣದ ಬಳಿಯ ಕಲ್ಯಾಣಿ ಪಶ್ಚಿಮ ಪ್ರದೇಶದ ವಸತಿ ಪ್ರದೇಶದ ಆವರಣದಲ್ಲಿ 9 ವರ್ಷದ ಬಾಲಕಿಯ ಶವ ಪತ್ತೆಯಾಗಿತ್ತು. ಘಟನೆ ಕುರಿತು ಮಾಹಿತಿ ಪಡೆದ ಪೊಲೀಸ್ ತಂಡ ಸ್ಥಳಕ್ಕೆ ಆಗಮಿಸಿದೆ.

    ಪೊಲೀಸರು ಈ ಬಗ್ಗೆ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಘಟನಾ ಸ್ಥಳದ ಸಿಸಿಟಿವಿ ದೃಶ್ಯಾವಳಿಗಳ ಮೂಲಕ ಅಪ್ರಾಪ್ತ ಆರೋಪಿಯನ್ನು ಪೊಲೀಸರು ಗುರುತಿಸಿದ್ದಾರೆ. ಬಾಲಕನ ಬಗ್ಗೆ ಸ್ಥಳೀಯರಲ್ಲಿ ವಿಚಾರಣೆ ಮಾಡಲಾಗಿದ್ದು, ಬಳಿಕ ಆತನನ್ನು ಪೊಲೀಸರು ವಶಕ್ಕೆ ಪಡೆದು ಮಹಾತ್ಮ ಫುಲೆ ಪೊಲೀಸ್ ಠಾಣೆಗೆ ಕರೆತಂದಿದ್ದಾರೆ. ಇದನ್ನೂ ಓದಿ: ನನಗೆ ಸರ್ವಿಸ್‌ ಕೊಡ್ತೀರಾ, ದಿನಕ್ಕೆ 50 ಸಾವಿರ ರೂ. ಕೊಡ್ತೀನಿ – ಲೆಟರ್ ಬರೆದು ಮಹಿಳೆಗೆ ಲೈಂಗಿಕ ಕಿರುಕುಳ

    ವಿಚಾರಣೆ ವೇಳೆ ಅಪ್ರಾಪ್ತ ಆರೋಪಿ ನಡೆದ ಘಟನೆಯನ್ನು ತಿಳಿಸಿದ್ದಾನೆ. 2 ದಿನಗಳ ಹಿಂದೆ ಆತ ಬಾಲಕಿಯ ತಂದೆಯೊಂದಿಗೆ ಜಗಳವಾಡಿದ್ದು, ಹಲ್ಲೆಗೆ ಒಳಗಾಗಿದ್ದ. ಇದಕ್ಕೆ ಪ್ರತಿಕಾರ ತೀರಿಸಿಕೊಳ್ಳಲು ಬಾಲಕ ಆತನ ಅಪ್ರಾಪ್ತ ಮಗಳನ್ನು ಅಪಹರಿಸಿ, ಅತ್ಯಾಚಾರ ನಡೆಸಿ ಬ್ಲೇಡ್‌ನಿಂದ ಕತ್ತು ಸೀಳಿರುವುದಾಗಿ ತಿಳಿಸಿದ್ದಾನೆ.

    STOP RAPE

    ಪೊಲೀಸರು ಲೈಂಗಿಕ ಅಪರಾಧಗಳಿಗೆ ಮಕ್ಕಳ ಸಂರಕ್ಷಣಾ ಕಾಯ್ದೆಯಡಿ (POCSO)ಪ್ರಕರಣ ದಾಖಲಿಸಿಕೊಂಡಿದ್ದು, ಬಾಲಕನನ್ನು ವೀಕ್ಷಣಾಲಯಕ್ಕೆ ಕಳುಹಿಸಿದ್ದಾರೆ. ಘಟನೆಯ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ. ಇದನ್ನೂ ಓದಿ: ಗಂಡನ ಅಕ್ರಮ ಸಂಬಂಧಕ್ಕೆ ಬೇಸತ್ತು ಮೂರು ಮಕ್ಕಳಿಗೆ ವಿಷ ಹಾಕಿ ಮಹಿಳೆ ನೇಣಿಗೆ ಶರಣು

    Live Tv
    [brid partner=56869869 player=32851 video=960834 autoplay=true]

  • ಮುಂಬೈನ ವಸತಿ ಪ್ರದೇಶಕ್ಕೆ ನುಗ್ಗಿ, ಕಟ್ಟಡದೊಳಗೆ ಓಡಾಡಿದ ಚಿರತೆ – ಮೂವರ ಮೇಲೆ ದಾಳಿ

    ಮುಂಬೈನ ವಸತಿ ಪ್ರದೇಶಕ್ಕೆ ನುಗ್ಗಿ, ಕಟ್ಟಡದೊಳಗೆ ಓಡಾಡಿದ ಚಿರತೆ – ಮೂವರ ಮೇಲೆ ದಾಳಿ

    ಮುಂಬೈ: ಮಹಾರಾಷ್ಟ್ರದ (Maharashtra) ರಾಜಧಾನಿ ಮುಂಬೈ (Mumbai) ಸಮೀಪದ ಕಲ್ಯಾಣ್ (Kalyan) ನಗರದಲ್ಲಿ ವಸತಿ ಪ್ರದೇಶಕ್ಕೆ ಗುರುವಾರ ಚಿರತೆಯೊಂದು (Leopard) ನುಗ್ಗಿದೆ. ಕಟ್ಟಡವೊಂದರೊಳಗೆ ಪ್ರವೇಶಿಸಿದ ಚಿರತೆ ಸಿಕ್ಕ ಸಿಕ್ಕವರ ಮೇಲೆ ದಾಳಿ ನಡೆಸಿದ್ದು, ಘಟನೆಯಲ್ಲಿ ಮೂವರಿಗೆ ಗಾಯಗಳಾಗಿವೆ ಎಂದು ವರದಿಗಳು ತಿಳಿಸಿವೆ.

    ವಸತಿ ಪ್ರದೇಶದಲ್ಲಿ ಚಿರತೆಯನ್ನು ಕಂಡು ನಿವಾಸಿಗಳು ಭಯಭೀತರಾಗಿದ್ದಾರೆ. ಚಿರತೆ ಕೆಲ ಕಟ್ಟಡದ ಮಹಡಿಗಳಲ್ಲಿ ಕಿಟಕಿಗಳನ್ನು ಜಿಗಿದು ಸಾಗಿರುವ ವೀಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿವೆ. ಅರಣ್ಯಾಧಿಕಾರಿಗಳು ಸ್ಥಳಕ್ಕಾಗಮಿಸಿ, ಚಿರತೆಯನ್ನು ಸೆರೆಹಿಡಿಯುವ ಪ್ರಯತ್ನ ಮಾಡಿದ್ದಾರೆ.

    ನಾನು ಮೊದಲ ಮಹಡಿಯಲ್ಲಿ ಚಿರತೆಯನ್ನು ನೋಡಿದೆ. ಜನರು ಸಹಾಯಕ್ಕಾಗಿ ಕಿರುಚುತ್ತಿದ್ದರು. ಒಬ್ಬರಿಗೆ ಕಟ್ಟಡದೊಳಗೆ ಹೋಗದಂತೆ ಎಚ್ಚರಿಕೆಯನ್ನು ನೀಡಲಾಯಿತು. ಆದರೂ ಅವರು ಮಾತು ಕೇಳದೇ ಕಟ್ಟಡದೊಳಗೆ ಪ್ರವೇಶಿಸಿದರು ಹಾಗೂ ಚಿರತೆ ದಾಳಿಗೊಳಗಾದರು. ನಮ್ಮಲ್ಲಿ ಕೆಲವರು ಕೈಯಲ್ಲಿ ದೊಣ್ಣೆಗಳನ್ನು ಹಿಡಿದುಕೊಂಡು ಅದನ್ನು ಹೆದರಿಸಿ ಓಡಿಸಲು ಪ್ರಯತ್ನಿಸಿದ್ದಾರೆ ಎಂದು ಸ್ಥಳೀಯರೊಬ್ಬರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಗೆಳತಿಯನ್ನು ಮೆಚ್ಚಿಸಲು ಕಾರ್ ಕದ್ದು ಪೊಲೀಸರಿಗೆ ಸಿಕ್ಕಿಬಿದ್ದ

    ಬುಧವಾರ ಮಹಾರಾಷ್ಟ್ರದ ನಾಸಿಕ್‌ನ ಜನನಿಬಿಡ ಪ್ರದೇಶದಲ್ಲಿ ಚಿರತೆಯೊಂದು ಕಾಣಿಸಿಕೊಂಡಿತ್ತು. ಅದನ್ನು ಬಂಧಿಸಲು ಮಧ್ಯರಾತ್ರಿಯ ವೇಳೆಗೆ ಪಂಜರಗಳನ್ನು ಇಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯನವರ ಸ್ಥಿತಿ ಅಂಡು ಸುಟ್ಟ ಬೆಕ್ಕಿನಂತಾಗಿದೆ – ಯತ್ನಾಳ್‌ ಲೇವಡಿ

    Live Tv
    [brid partner=56869869 player=32851 video=960834 autoplay=true]

  • ಮಹಾರಾಷ್ಟ್ರದಲ್ಲಿ ಒಂದೇ ದಿನ 13 ಸಾವು- ಮೃತರ ಸಂಖ್ಯೆ 45ಕ್ಕೆ ಏರಿಕೆ

    ಮಹಾರಾಷ್ಟ್ರದಲ್ಲಿ ಒಂದೇ ದಿನ 13 ಸಾವು- ಮೃತರ ಸಂಖ್ಯೆ 45ಕ್ಕೆ ಏರಿಕೆ

    ಮುಂಬೈ: ಹೆಮ್ಮಾರಿ ಕೊರೋನಾದಿಂದಾಗಿ ನೆರೆಯ ರಾಜ್ಯ ಮಹಾರಾಷ್ಟ್ರ ಅಕ್ಷರಶಃ ಮುದ್ದೆ ಮುದ್ದೆಯಾಗುತ್ತಿದೆ. ಭಾನುವಾರ ಒಂದೇ ದಿನದಲ್ಲಿ 13 ಜನರ ಸಾವನ್ನಪ್ಪಿದ್ದು, ಈ ಮೂಲಕ ರಾಜ್ಯದಲ್ಲಿ ಮೃತರ ಸಂಖ್ಯೆ 45ಕ್ಕೆ ಏರಿಕೆ ಕಂಡಿದೆ.

    ಈ ಕುರಿತು ಮಾಹಿತಿ ನೀಡಿರುವ ಮಹಾರಾಷ್ಟ್ರ ಆರೋಗ್ಯ ಇಲಾಖೆ, ರಾಜ್ಯದಲ್ಲಿ ಇಂದು 13 ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ. ಹೀಗಾಗಿ ಈವರೆಗೂ ಕೊರೊನಾಗೆ ಒಟ್ಟು 45 ಜನರ ಬಲಿಯಾಗಿದ್ದಾರೆ. ಇಂದು ಮುಂಬೈನಲ್ಲಿ 8 ಮಂದಿ, ಪುಣೆಯಲ್ಲಿ ಮೂವರು, ಕಲ್ಯಾಣ್, ಡೊಂಬಿವಾಲಿ ಹಾಗೂ ಔರಂಗಬಾದ್‍ನಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿಸಿದೆ.

    ರಾಜ್ಯದಲ್ಲಿ ಭಾನುವಾರ ಒಂದೇ ದಿನದಲ್ಲಿ 113 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರಿಂದಾಗಿ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 478ಕ್ಕೆ ಏರಿಕೆ ಕಂಡಿದೆ. ಈ ಪೈಕಿ 56 ಜನರು ಗುಣಮುಖರಾಗಿದ್ದು ಅವರನ್ನು ಡಿಸ್ಚಾರ್ಜ್ ಮಾಡಲಾಗಿದೆ ಎಂದು ಮಹಾರಾಷ್ಟ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

    ಮಧ್ಯಪ್ರದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 193ಕ್ಕೆ ಏರಿಕೆ ಕಂಡಿದೆ. ಇಂದು ಓರ್ವ ಕೊರೊನಾ ಸೋಂಕಿತ ಮೃತಪಟ್ಟಿದ್ದು, ಸಾವನ್ನಪ್ಪಿದವರ ಸಂಖ್ಯೆ 12ಕ್ಕೆ ಏರಿದೆ ಎಂದು ಮಧ್ಯಪ್ರದೇಶದ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಪಲ್ಲವಿ ಜೈನ್ ಗೋವಿಲ್ ತಿಳಿಸಿದ್ದಾರೆ.

    ದೇಶಾದ್ಯಂತ ಡೆಡ್ಲಿ ಕೊರೊನಾ ಅಟ್ಟಹಾಸ ಮುಂದುವರಿದಿದೆ. ಈವರೆಗೆ ದೆಹಲಿಯಲ್ಲಿ 445 ಪ್ರಕರಣಗಳು ದಾಖಲಾಗಿದ್ದು ಸದ್ಯದವರೆಗೆ 6 ಮಂದಿ ಕೊರೊನಾಗೆ ಬಲಿ ಆಗಿದ್ದಾರೆ. ತಬ್ಲಿಘಿಯಲ್ಲಿ ಭಾಗಿಯಾಗಿದ್ದವರ ಪತ್ತೆಗೆ ಮೊಬೈಲ್ ನಂಬರ್ ಗಳನ್ನು ದೆಹಲಿ ಪೊಲೀಸರು ಬೆನ್ನತ್ತಿದ್ದಾರೆ. ಇದರ ಮಧ್ಯೆ ದೆಹಲಿ ಇಂದಿರಾ ಗಾಂಧಿ ವಿಮಾನ ನಿಲ್ದಾಣದಲ್ಲಿ ಪಲಾಯನಕ್ಕೆ ಯತ್ನಿಸ್ತಿದ್ದ 8 ಮಂದಿ ಮಲೇಷ್ಯನ್ನರನ್ನು ಬಂಧಿಸಲಾಗಿದೆ. ಇವರು ಸಹ ಜಮಾತ್ ಕಾರ್ಯಕಮ್ರದಲ್ಲಿ ಭಾಗಿಯಾಗಿದ್ದರು ಎಂದು ಶಂಕಿಸಲಾಗಿದೆ.

    ರಾಜದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಲ್, ರಾಜ್ಯದಲ್ಲಿ ಕೊರೊನಾ ಹೆಚ್ಚುತ್ತಿರುವ ಹಿನ್ನೆಲೆ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗಳನ್ನು ಗುರುತಿಸುವಂತೆ ತಿಳಿಸಿದ್ದಾರೆ. ಆಂಧ್ರ ಪ್ರದೇಶದಲ್ಲಿ ಇಂದು 34 ಹೊಸ ಪ್ರಕರಣಗಳು ಪತ್ತೆ ಆಗಿದ್ದು, ಸೋಂಕಿತರ ಸಂಖ್ಯೆ 226ಕ್ಕೇರಿದೆ. ಕರ್ನೂಲ್‍ನಲ್ಲಿ 23, ಚಿತ್ತೂರಿನಲ್ಲಿ 7, ನೆಲ್ಲೂರು, ಪ್ರಕಸಂನಲ್ಲಿ ತಲಾ 2 ಕೇಸ್‍ಗಳು ಪತ್ತೆ ಆಗಿದೆ. ಇವುಗಳಲ್ಲಿ ಬಹುತೇಕರಿಗೆ ಜಮಾತ್ ನಂಟಿದೆ ಎನ್ನಲಾಗಿದೆ.

  • ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಜಾರಿ ಬಿದ್ದ ಮಹಿಳೆ-ವಿಡಿಯೋ ನೋಡಿ

    ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಜಾರಿ ಬಿದ್ದ ಮಹಿಳೆ-ವಿಡಿಯೋ ನೋಡಿ

    ಮುಂಬೈ: ಚಲಿಸುತ್ತಿದ್ದ ರೈಲನ್ನು ಹತ್ತಲು ಹೋಗಿ ಸ್ಲಿಪ್ ಆಗಿ ರೈಲಿನ ಅಡಿಗೆ ಸಿಲುಕುತ್ತಿದ್ದ ಮಧ್ಯ ವಯಸ್ಸಿನ ಮಹಿಳೆಯನ್ನು ಪ್ಲಾಟ್ ಫಾರಂ ನಲ್ಲಿದ್ದ ಕೆಲ ಪ್ರಯಾಣಿಕರು ರಕ್ಷಿಸಿದ್ದಾರೆ.

    ಈ ಘಟನೆಯು ಬೆಳಗ್ಗೆ ಸುಮಾರು 11:45ಕ್ಕೆ ಮುಂಬೈ ನಗರದ ಕುರ್ಲಾ ನಿಲ್ದಾಣದ ಪ್ಲಾಟ್ ಫಾರಂ 1 ರಲ್ಲಿ ನಡೆದಿದೆ.

    ಮಹಿಳೆ ತಮ್ಮ ಮಗನ ಜೊತೆ ಬಂದಿದ್ದರು. ಚಲಿಸುತ್ತಿದ್ದ ರೈಲಲ್ಲಿ ಮೊದಲಿಗೆ ಮಗನನ್ನು ಬೋಗಿಗೆ ಹತ್ತಿಸಿದ್ದಾರೆ. ನಂತರ ತಾವು ಸಹ ಹತ್ತಲು ಹೋದಾಗ ಆಯ ತಪ್ಪಿ ರೈಲಿನ ಮೆಟ್ಟಿಲಿಗೂ ಪ್ಲಾಟ್ ಫಾರಂಗೂ ನಡುವೆ ಇರುವ ಗ್ಯಾಪ್ ಗೆ ಜಾರಿದ್ದಾರೆ. ಇದನ್ನೂ ಓದಿ:ರೈಲಿನಡಿ ಸಿಲುಕುತ್ತಿದ್ದ ಬಾಲಕಿಯನ್ನ ರಕ್ಷಿಸಿದ್ರು ಭಾರತೀಯ ಯೋಧ – ವಿಡಿಯೋ ವೈರಲ್

    ಮಹಿಳೆ ಜಾರಿ ರೈಲಿನಡಿ ಸಿಲುಕುವಷ್ಟರಲ್ಲಿಯೇ ಪ್ಲಾಟ್ ಫಾರಂನಲ್ಲಿದ್ದ ಕೆಲವರು ರಕ್ಷಣೆ ಮಾಡಿದ್ದಾರೆ. ಈ ಎಲ್ಲ ದೃಶ್ಯಗಳು ನಿಲ್ದಾಣದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ರೈಲಿನಲ್ಲಿ ಹತ್ತಿದ್ದ ಮಹಿಳೆಯ ಮಗನನ್ನು ಆರ್ ಪಿಎಫ್ ಪೊಲೀಸರು ತಾಯಿಯೊಂದಿಗೆ ಸೇರಿಸಿದ್ದಾರೆ.