Tag: Kalyana Karnataka

  • ನಾಳೆಯಿಂದ ಎರಡು ದಿನ ಕಲ್ಯಾಣ ಕರ್ನಾಟಕಕ್ಕೆ ನಿರ್ಮಲಾ ಸೀತಾರಾಮನ್ ಪ್ರವಾಸ

    ನಾಳೆಯಿಂದ ಎರಡು ದಿನ ಕಲ್ಯಾಣ ಕರ್ನಾಟಕಕ್ಕೆ ನಿರ್ಮಲಾ ಸೀತಾರಾಮನ್ ಪ್ರವಾಸ

    ಬೆಂಗಳೂರು: ನಾಳೆಯಿಂದ ಎರಡು ದಿನ ಕಲ್ಯಾಣ ಕರ್ನಾಟಕ ಜಿಲ್ಲೆಗಳಿಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ (Niramala Sitharaman) ಅವರು  ಪ್ರವಾಸ ಕೈಗೊಂಡಿದ್ದಾರೆ.

    ಅ.15ರಿಂದ ಎರಡು ದಿನ ಕಲ್ಯಾಣ ಕರ್ನಾಟಕದ ಜಿಲ್ಲೆಗಳಾದ ಕಲಬುರಗಿ, ಬೀದರ್, ಕೊಪ್ಪಳ, ಬಳ್ಳಾರಿ, ರಾಯಚೂರು ಹಾಗೂ ಯಾದಗಿರಿಯಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ನಿರ್ಮಲಾ ಸೀತಾರಾಮನ್ ಭಾಗಿಯಾಗಲಿದ್ದಾರೆ.ಇದನ್ನೂ ಓದಿ: ಬೆಂಗಳೂರು | ಕಿರುತೆರೆ ನಟ, ನಟಿಯರು ಸೇರಿ 139 ಜನಕ್ಕೆ ಸೈಟ್‌ ಕೊಡಿಸೋದಾಗಿ ವಂಚನೆ

    ಈ ವೇಳೆ ರೈತ ಪ್ರಮುಖರು, ರೈತ ಕೇಂದ್ರಗಳು, ಕೃಷಿ ತರಬೇತಿ ಕೇಂದ್ರಗಳು, ಕೃಷಿ ಉತ್ಪನ್ನಗಳ ಸಂಸ್ಕರಣಾ ಕೇಂದ್ರಗಳಿಗೆ ಭೇಟಿ ನೀಡಿ, ಸಂವಾದ ನಡೆಸಲಿದ್ದಾರೆ. ಕೇಂದ್ರಕ್ಕೆ ಎನ್‌ಡಿಆರ್‌ಎಫ್ ನೆರೆ ಪರಿಹಾರ ಕೋರಿ ರಾಜ್ಯದಿಂದ ಪತ್ರ ಬರೆಯಲು ಸಿದ್ಧತೆ ಬೆನ್ನಲ್ಲೇ ವಿತ್ತ ಸಚಿವೆ ರಾಜ್ಯ ಭೇಟಿ ಕೈಗೊಂಡಿದ್ದಾರೆ.

    ಇನ್ನೂ ಈ ಕುರಿತು ನಿರ್ಮಲಾ ಸೀತಾರಾಮನ್ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ನಾಳೆಯಿಂದ ಕಲ್ಯಾಣ ಕರ್ನಾಟಕ ಪ್ರದೇಶದ ಪ್ರವಾಸಕ್ಕೆ ಹೊರಡುತ್ತಿದ್ದೇನೆ. ಅಲ್ಲಿ ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಘಟಕಗಳನ್ನು ಸ್ಥಾಪಿಸಲಾಗಿದ್ದು, ಸದರಿ ರೈತರ ತರಬೇತಿ ಕೇಂದ್ರ ಮತ್ತು ಕಾಮನ್ ಫೆಸಿಲಿಟಿ ಸೆಂಟರ್‌ಗಳನ್ನು ಭೇಟಿಯಾಗಿ ಅವುಗಳ ಉತ್ಪಾದನಾ ಚಟುವಟಿಕೆಗಳನ್ನು ವೀಕ್ಷಿಸಲಿದ್ದೇನೆ.

    ನನ್ನ ಸಂಸದರ ಸ್ಥಳೀಯ ಪ್ರದೇಶ ಅಭಿವೃದ್ಧಿ ನಿಧಿ ಬಳಸಿ ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ತಲಾ ಒಂದು ಘಟಕವನ್ನು ಸ್ಥಾಪಿಸಲಾಗಿದೆ.

    1. ವಿಜಯನಗರ: ಕಡಲೆ ಬೇಳೆ, ಹುರಿದ ಕಡಲೆ, ಕಡಲೆ ಚಿಕ್ಕಿ, ಬೀಜ ತೆಗೆಯಲ್ಪಟ್ಟ ಹುಣಸೆ ಬ್ಲಾಕ್ ಮತ್ತು ಹುಣಸೆ ಪಲ್ಪ್ (ಕಡಲೆ – 200 ಕೆ.ಜಿ/ಗಂ.; ಹುಣಸೆ – 100 ಕೆ.ಜಿ/ಗಂ.)
    2. ಬಳ್ಳಾರಿ: ಮೆಣಸಿನ ಪುಡಿ ಮತ್ತು ಮೆಣಸಿನ ಫ್ಲೇಕ್ಸ್ (250 ಕೆ.ಜಿ/ಗಂ.)
    3. ಕೊಪ್ಪಳ: ಹಣ್ಣಿನ ಪಲ್ಪ್, ಹಣ್ಣಿನ ಜ್ಯೂಸ್ ಮತ್ತು ಅಮಚೂರ್ ಪುಡಿ (500 ಕೆ.ಜಿ/ಗಂ.)
    4. ರಾಯಚೂರು: ಚಿಲಾ ಪ್ರೀಮಿಕ್ಸ್,ಕಡ್ಲೆ ಬೇಳೆ ಹಾಗೂ ತೊಗರಿ ದಾಲ್ ಮಿಲ್ (350 ಕೆ.ಜಿ/ಗಂ.)
    5. ಯಾದಗಿರಿ: ಕಡಲೆ ಬೆಣ್ಣೆ, ಹುರಿದ ಕಡಲೆ ಮತ್ತು ಕಡಲೆ ಎಣ್ಣೆ (300 ಕೆ.ಜಿ/ಗಂ.)
    6. ಕಲಬುರಗಿ: ಸಿರಿಧಾನ್ಯ ಫ್ಲೇಕ್ಸ್, ಪಾಪ್ಸ್, ಹಿಟ್ಟು ಮತ್ತು ಸಂಪೂರ್ಣ ಸಿರಿಧಾನ್ಯಗಳು (500 ಕೆ.ಜಿ/ಗಂ.)
    7. ಬೀದರ್: ಸೋಯಾಬೀನ್ ಟೋಫು ಮತ್ತು ಸೋಯಾ ಹಾಲು (300 ಕೆ.ಜಿ/ಗಂ.)

    ಈ ಪ್ರವಾಸದ ಸಮಯದಲ್ಲಿ ವಿಜಯನಗರ, ಬಳ್ಳಾರಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಘಟಕಗಳ ಉದ್ಘಾಟನೆ ಮಾಡಲಾಗುತ್ತದೆ. ಈ ಕೃಷಿ ಸಂಸ್ಕರಣೆ ಕೇಂದ್ರಗಳಿಂದ ತರಬೇತಿ ಪಡೆದ ರೈತರು ಮತ್ತು ಲಾಭ ಪಡೆಯುವ ರೈತರು ಹಾಗೂ ರೈತರ ಉತ್ಪಾದಕರ ಸಂಘಗಳು ಮತ್ತು ಅವರ ಕುಟುಂಬಗಳನ್ನು ಭೇಟಿಯಾಗಲು ಉತ್ಸುಕನಾಗಿದ್ದೇನೆ ಎಂದು ಬರೆದುಕೊಂಡಿದ್ದಾರೆ.

    ಇನ್ನೂ ಮಂಗಳವಾರ (ಅ.14) ಧಾರವಾಡದಲ್ಲಿ ನಡೆಯಲಿರುವ ಉದ್ಘಾಟನೆಯೊಂದರಲ್ಲಿ ಭಾಗಿಯಾಗಲಿದ್ದಾರೆ. ಇದನ್ನೂ ಓದಿ: ಬೀದರ್‌ನಲ್ಲಿ ಏಕಕಾಲಕ್ಕೆ 4 ಕಡೆ ಲೋಕಾಯುಕ್ತ ದಾಳಿ – ಭ್ರಷ್ಟ ಅಧಿಕಾರಿಗೆ ಶಾಕ್ ಶಾಕ್‌

  • ಅವಶ್ಯಕತೆ ಬಿದ್ದರೆ ದೆಹಲಿಗೆ ಹೋಗಿ ಪ್ರಧಾನಿ ಮೋದಿ ಬಳಿ ಪ್ರವಾಹ ಪರಿಹಾರ ಕೇಳ್ತೀನಿ: ದೇವೇಗೌಡ

    ಅವಶ್ಯಕತೆ ಬಿದ್ದರೆ ದೆಹಲಿಗೆ ಹೋಗಿ ಪ್ರಧಾನಿ ಮೋದಿ ಬಳಿ ಪ್ರವಾಹ ಪರಿಹಾರ ಕೇಳ್ತೀನಿ: ದೇವೇಗೌಡ

    ಬೆಂಗಳೂರು: ಕಲ್ಯಾಣ ಕರ್ನಾಟಕ (Kalyana Karnataka) ಭಾಗದಲ್ಲಿ ಪ್ರವಾಹದಿಂದ ಆಗಿರೋ ಅನಾಹುತಕ್ಕೆ ಅವಶ್ಯಕತೆ ಬಿದ್ದರೆ ನಾನೇ ದೆಹಲಿಗೆ ಹೋಗಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಭೇಟಿಯಾಗಿ, ಪರಿಹಾರಕ್ಕೆ ಮನವಿ ಮಾಡೋದಾಗಿ ಮಾಜಿ ಪ್ರಧಾನಿ ದೇವೇಗೌಡ (H D Deve Gowda) ತಿಳಿಸಿದ್ದಾರೆ.

    ಪ್ರವಾಹ (Flood) ವಿಚಾರ ಕುರಿತು ಜೆಪಿ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿಎಂ ಮೊನ್ನೆ ನೆರೆ ಹಾನಿ ಪ್ರದೇಶಗಳ ವೈಮಾನಿಕ ಸರ್ವೆ ಮಾಡಿದ್ದಾರೆ. ನಾನು ಅವರು ಮಾಡಿದ ಸರ್ವೆ ನೋಡಿದೆ. ನಾನು ಸಿಎಂ ಮೇಲೆ ಆಪಾದನೆ ಮಾಡೊಲ್ಲ. ವೈಮಾನಿಕ ಸರ್ವೆ ಮಾಡಿ 3 ದಿನ ಆಗಿದೆ. 6 ಜಿಲ್ಲೆಯಲ್ಲಿ ಬೆಳೆ ನಾಶ ಆಗಿದೆ. 50ಕ್ಕೂ ಹೆಚ್ಚು ಜನರು, ಜಾನುವಾರುಗಳು ಸತ್ತು ಹೋಗಿವೆ. ರೈತರ ಬೆಳೆ ಸಂಪೂರ್ಣವಾಗಿ ನಾಶವಾಗಿದೆ. ಅವ್ರು ಎಕ್ರೆಗೆ ಇಷ್ಟು ಹಣ ಅಂತ ಘೋಷಣೆ ಮಾಡಿದ್ರು. ಆದರೆ ಫೀಲ್ಡ್ಗೆ ಹೋಗಿ ಎಷ್ಟು ಪ್ರದೇಶ ಹಾನಿಯಾಗಿದೆ ಅಂತ ನೋಡಿ ಸಂಬಂಧಪಟ್ಟವರ ನೋವಿಗೆ ಸ್ಪಂದಿಸುವ ಕೆಲಸವನ್ನು ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾ ಆಡಳಿತವೂ ಮಾಡಿಲ್ಲ. ಅವರ ನೋವಿಗೆ ಸ್ಪಂದಿಸುವ ಕೆಲಸವನ್ನು ಸರ್ಕಾರ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: 3 ತಿಂಗಳು ನನ್ನ ಮನೆಮುಂದೆ ಮಾಧ್ಯಮಗಳು ಕಾಯೋ ಹಾಗೇ ಮಾಡಿದ್ದು ಯಾರ ಪ್ರೇರಣೆಯಿಂದ – HDD ಕಿಡಿ

    48 ಗಂಟೆ ಒಳಗೆ ಡಿಸಿಗಳು, ಜಿಲ್ಲಾ ಉಸ್ತುವಾರಿಗಳು ಜಾಗಕ್ಕೆ ಹೋಗಿ ಸ್ಥಳ ಪರಿಶೀಲನೆ ಮಾಡಬೇಕು. ನೋವಿನಲ್ಲಿ ಇರೋ ರೈತರಿಗೆ ಪರಿಹಾರ ಕೊಟ್ಟಿದ್ದಾರಾ ಇಲ್ವಾ ಅಂತ ನೋಡಿ ಮಾತಾಡಬೇಕು. ಮೂರ್ನಾಲ್ಕು ದಿನ ಆದ ಮೇಲೆ ಕಲಬುರಗಿಗೆ ವಿಮಾನದಲ್ಲಿ ಬಂದಿದ್ದಾರೆ. ನಾನೇ ಪ್ರವಾಹ ಪೀಡಿತ ಪ್ರದೇಶಕ್ಕೆ ಹೋಗ್ತೀನಿ. ಸ್ಥಳ ಪರಿಶೀಲನೆ ಮಾಡಿ ಸರ್ಕಾರ ಏನು ಕ್ರಮ ಕೈಗೊಂಡಿದೆ ಎಂದು ಮಾತಾಡ್ತೀನಿ ಎಂದಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಮುಂದೆ ಬರುವ ಎಲ್ಲಾ ಚುನಾವಣೆಗಳಿಗೂ ಬಿಜೆಪಿ-ಜೆಡಿಎಸ್ ಮೈತ್ರಿ: ಹೆಚ್‌ಡಿಡಿ ಘೋಷಣೆ

    ಈಗಾಗಲೇ ಪರಿಹಾರ ಕೊಡಿ ಅಂತ ಪ್ರಧಾನಿ ಮೋದಿ, ಅಮಿತ್ ಶಾಗೆ ಕುಮಾರಸ್ವಾಮಿ ಪತ್ರ ಬರೆದು ಮನವಿ ಮಾಡಿದ್ದಾರೆ. ನಾನು ಅವಶ್ಯಕತೆ ಬಿದ್ದರೆ ಮೋದಿ, ಅಮಿತ್ ಶಾಗೆ ಪತ್ರ ಬರೆಯುತ್ತೇನೆ. ನಾನೇ ದೆಹಲಿಗೆ ಹೋಗಿ ಪ್ರಧಾನಿ ಅವರ ಬಳಿ ಪರಿಹಾರಕ್ಕಾಗಿ ಮನವಿ ಮಾಡ್ತೀನಿ ಎಂದು ಹೇಳಿದ್ದಾರೆ.

    ಬೇರೆ ರಾಜ್ಯದ ಪ್ರವಾಹಕ್ಕೆ ಕೇಂದ್ರ ಹಣ ಕೊಟ್ಟಿದೆ. ಕರ್ನಾಟಕಕ್ಕೆ ಕೊಟ್ಟಿಲ್ಲ ಎಂಬ ಕಾಂಗ್ರೆಸ್ ನಾಯಕರ ಆರೋಪದ ಪ್ರತಿಕ್ರಿಯಿಸಿದ ಅವರು, ನಾನು ಇದರಲ್ಲಿ ರಾಜಕೀಯ ಬೆರೆಸಲು ಹೋಗಲ್ಲ. ಕಾಂಗ್ರೆಸ್‌ನ ಶಾಸಕರು ಗ್ಯಾರಂಟಿ ಕಾರ್ಯಕ್ರಮವನ್ನ ಅನುಷ್ಠಾನಕ್ಕೆ ತರಲು ಹೋಗಿ, ಇವತ್ತು ರಾಜ್ಯ ಬರಡಾಗಿದೆ. ಹಣಕಾಸಿನ ಸ್ಥಿತಿ ಹದಗೆಟ್ಟಿದೆ ಅಂತ ಹೇಳ್ತಿದ್ದಾರೆ. ಇದನ್ನ ನಾನು ಹೇಳ್ತಿಲ್ಲ. ಕಾಂಗ್ರೆಸ್ ಶಾಸಕರು ಹೇಳ್ತಿದ್ದಾರೆ. ರಾಜ್ಯದ ಬೊಕ್ಕಸದಲ್ಲಿ ದುಡ್ಡು ಇದೆಯೋ? ಇಲ್ಲವೋ ಅಂತ ಅವರಲ್ಲೇ ಗೊಂದಲವಿದೆ. ರಾಜ್ಯ ಸರ್ಕಾರ ಪ್ರವಾಹದಿಂದ ಸಮಸ್ಯೆಗೊಳಗಾದ ಜನರಿಗೆ ತನ್ನ ಸಂಪನ್ಮೂಲದಿಂದ ಶಕ್ತಿ ಮೀರಿ ಸಹಾಯ ಮಾಡಬೇಕು ಎಂದಿದ್ದಾರೆ.

  • ಕಲ್ಯಾಣ ಕರ್ನಾಟಕ ದಸರಾ ಎಂದೇ ಖ್ಯಾತಿಯಾದ ಹೇಮಗುಡ್ಡದಲ್ಲಿ ರಂಗೇರಿದ ಜಂಬೂಸವಾರಿ

    ಕಲ್ಯಾಣ ಕರ್ನಾಟಕ ದಸರಾ ಎಂದೇ ಖ್ಯಾತಿಯಾದ ಹೇಮಗುಡ್ಡದಲ್ಲಿ ರಂಗೇರಿದ ಜಂಬೂಸವಾರಿ

    – ಮೈಸೂರು ದಸರಾಗೆ ಪ್ರೇರಣೆಯಾದ ಹೇಮಗುಡ್ಡ ದಸರಾ

    ಕೊಪ್ಪಳ: ಜಂಬೂಸವಾರಿ ಅಂದ ಕೂಡಲೇ ಎಲ್ಲರಿಗೂ ನೆನಪಾಗೋದು ಮೈಸೂರು. ದಸರಾ ಹಬ್ಬದ ದಿನ ಜಗತ್ತಿನ ಕಣ್ಣು ಮೈಸೂರು ಅಂಬಾರಿಯ ಮೇಲಿರುತ್ತದೆ. ಆದರೆ, ಆ ಜಂಬೂ ಸವಾರಿಗೆ ಕಲ್ಯಾಣ ಕರ್ನಾಟಕದಲ್ಲಿ ಪ್ರೇರಣೆ ಸಿಕ್ಕಿತ್ತು ಎಂಬ ಮಾಹಿತಿ ಇದೆ. ಅದರಂತೆ ಕೊಪ್ಪಳದ (Koppal) ಹೇಮಗುಡ್ಡದಲ್ಲಿ ಅದ್ದೂರಿಯಾಗಿ ಜಂಬೂಸವಾರಿ ನಡೆದಿದೆ.

    ಮೈಸೂರು ದಸರಾ ಜಂಬೂಸವಾರಿಯಂತೆಯೇ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೇಮಗುಡ್ಡದಲ್ಲಿ ಪ್ರತಿ ವರ್ಷ ಜಂಬೂಸವಾರಿ ನಡೆಯುತ್ತದೆ. 11ನೇ ಶತಮಾನದಲ್ಲಿ ಶುರುವಾದ ದಸರಾ ಜಂಬೂಸವಾರಿ, ಇಂದು ವಿಶ್ವವಿಖ್ಯಾತ ಮೈಸೂರು ದಸರಾ ಆಗಿ ಪ್ರಸಿದ್ಧಿ ಪಡೆದಿದೆ.ಇದನ್ನೂ ಓದಿ: ಮುಂದಿನ ವರ್ಷ ಅಂಬಾರಿ ಹೊತ್ತರೆ ʻಅಭಿಮನ್ಯು ಯುಗʼ ಮುಗಿಯಿತು – ಮುಂದಿನ ಸಾರಥಿ ಯಾರು?

    11ನೇ ಶತಮಾನದಲ್ಲಿ ಕುಮಾರರಾಮನ ಸಾಮ್ರಾಜ್ಯದ ದೇವತೆಯಾದ ದುರ್ಗಾಪರಮೇಶ್ವರಿ ದೇವಿಗೆ ಪ್ರತಿ ವರ್ಷ ಗಜಪಡೆಯ ಮೇಲೆ ಜಂಬೂಸವಾರಿ ನಡೆಸಲಾಗುತ್ತಿತ್ತು. ಬಳಿಕ ಈ ಪರಂಪರೆಯನ್ನು 14ನೇ ಶತಮಾನದಲ್ಲಿ ವಿಜಯನಗರ ಅರಸರು ಮುಂದುವರೆಸಿಕೊಂಡು ಬಂದಿದ್ದರು. ನಂತರ ಅದು ಮೈಸೂರು ಅರಸರ ಕಾಲದಲ್ಲಿ ಚಿನ್ನದ ಅಂಬಾರಿಯ ಮೇಲೆ ಜಂಬೂಸವಾರಿ ನಡೆಯುತ್ತಾ ಇಂದು ವಿಶ್ವವಿಖ್ಯಾತಿ ಪಡೆದಿದೆ. ಆದರೆ, ಮೈಸೂರು ಜಂಬೂಸವಾರಿಯ ಮೂಲ ಸ್ಥಾನ ಅಂದಿನ ಕುಮ್ಮಟದುರ್ಗ ಇಂದಿನ ಹೇಮಗುಡ್ಡದಲ್ಲಿದೆ. ಮೈಸೂರು ದಸರಾಗೂ ಒಂದು ದಿನ ಮೊದಲು ಆಯುಧ ಪೂಜೆಯ ದಿನ ದುರ್ಗಾಪರಮೇಶ್ವರಿ ದೇವಿಗೆ ಆನೆಯ ಮೇಲೆ ಅದ್ಧೂರಿಯಾಗಿ ಜಂಬೂ ಸವಾರಿ ನೆರವೇರುತ್ತದೆ.

    ಮೈಸೂರು ದಸರಾಗೆ ಪ್ರೇರಣೆಯಾದ ಹೇಮಗುಡ್ಡ ದಸರಾ ಅನಾದಿಕಾಲದಿಂದಲೂ ಕೂಡ ಪ್ರತಿ ವರ್ಷ ಕಟ್ಟಿಗೆಯ ಅಂಬಾರಿಯಲ್ಲಿ ದೇವಿಯ ಮೆರವಣಿಗೆ ನಡೆಸಲಾಗುತ್ತದೆ, ಮೆರವಣಿಗೆಯಲ್ಲಿ ಕೊಪ್ಪಳ, ಗಂಗಾವತಿ ಸುತ್ತಲಿನ ಜನರು ಭಾಗವಹಿಸಿ, ದಸರಾ ವೈಭೋಗವನ್ನ ಕಣ್ತುಂಬಿಕೊಳ್ಳುತ್ತಾರೆ. ಮೈಸೂರು ದಸರಾ ಮಾದರಿಯಲ್ಲೇ ನಡೆಯುವ ದುರ್ಗಾಪರಮೇಶ್ವರಿ ದೇವಿಯ ಜಂಬೂಸವಾರಿ ಕಲ್ಯಾಣ ಕರ್ನಾಟಕ ಭಾಗದ ದಸರಾ ಎಂದೇ ಖ್ಯಾತಿ ಪಡೆದಿದೆ.

    ಶರನ್ನವರಾತ್ರಿ ಅಂಗವಾಗಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಗಳು, ಸಾಮೂಹಿಕ ವಿವಾಹ ಸಹ ಹೇಮಗುಡ್ಡದಲ್ಲಿ ನಡೆಯುತ್ತವೆ.ಇದನ್ನೂ ಓದಿ: ಜಂಬೂಸವಾರಿಗೆ ಕ್ಷಣಗಣನೆ – ಮೆರವಣಿಗೆಯಲ್ಲಿ 58 ಸ್ತಬ್ಧಚಿತ್ರ ಸೇರಿ 150ಕ್ಕೂ ಹೆಚ್ಚು ಕಲಾತಂಡಗಳು ಭಾಗಿ

  • ಪ್ರವಾಹ ಪೀಡಿತ ಕಲ್ಯಾಣ ಕರ್ನಾಟಕದಲ್ಲಿ ಸಿದ್ದರಾಮಯ್ಯ ವೈಮಾನಿಕ ಸಮೀಕ್ಷೆ

    ಪ್ರವಾಹ ಪೀಡಿತ ಕಲ್ಯಾಣ ಕರ್ನಾಟಕದಲ್ಲಿ ಸಿದ್ದರಾಮಯ್ಯ ವೈಮಾನಿಕ ಸಮೀಕ್ಷೆ

    ಕಲಬುರಗಿ: ಪ್ರವಾಹ ಪೀಡಿತ ಕಲ್ಯಾಣ ಕರ್ನಾಟಕ (Kalyana Karnataka) ಭಾಗಗಳಾದ ಕಲಬುರಗಿ, ವಿಜಯಪುರ, ಬೀದರ್, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಅವರಿಂದು ವೈಮಾನಿಕ ಸಮೀಕ್ಷೆ ನಡೆಸಿದರು.

     

    ಮಂಗಳವಾರ (ಸೆ.30) ಬೆಳಗ್ಗೆ 10:45ರ ಸುಮಾರಿಗೆ ಸಿಎಂ ಸಿದ್ದರಾಮಯ್ಯ ಅವರು ಕಲಬುರಗಿ ವಿಮಾನ ನಿಲ್ದಾಣಕ್ಕೆ (Kalaburagi Airport) ಆಗಮಿಸಿ, ಬಳಿಕ ವಿಮಾನ ನಿಲ್ದಾಣದಲ್ಲೇ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದರು. ನಂತರ ಹೆಲಿಕಾಪ್ಟರ್ ಮೂಲಕ ವೈಮಾನಿಕ ಸಮೀಕ್ಷೆಗೆ ತೆರಳಿದರು. ಈ ವೇಳೆ ನಾಲ್ಕು ಜಿಲ್ಲೆಗಳ ಹನ್ನೊಂದು ಪಾಯಿಂಟ್‌ನಲ್ಲಿ ಸಮೀಕ್ಷೆ ನಡೆಸಿದರು. ಸಿಎಂ ಜೊತೆ ವೈಮಾನಿಕ ಸಮೀಕ್ಷೆಯಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ, ಈಶ್ವರ್ ಖಂಡ್ರೆ ಹಾಗೂ ಎಂ.ಬಿ ಪಾಟೀಲ್, ಶರಣಪ್ರಕಾಶ್ ಪಾಟೀಲ್ ಭಾಗಿಯಾಗಿದ್ದರು.ಇದನ್ನೂ ಓದಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಹ ಬಂದ್ರು ಸರ್ಕಾರ ಪರಿಹಾರ ಬಿಡುಗಡೆ ಮಾಡಿಲ್ಲ – ಸಿಸಿ ಪಾಟೀಲ್

    ಸಮೀಕ್ಷೆ ಬಳಿಕ ಸಂಜೆ 4:30ಕ್ಕೆ ಕಲಬುರಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಸುದ್ದಿಗೋಷ್ಠಿ ನಡೆಸಲಿದ್ದು, ಪರಿಹಾರ ವಿತರಣೆ ಬಗ್ಗೆ ಮಾಹಿತಿ ನೀಡಲಿದ್ದಾರೆ.

  • ಯುದ್ಧೋಪಾದಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಪ್ರವಾಹಕ್ಕೆ ಸರ್ಕಾರ ಸ್ಪಂದಿಸಬೇಕು: ಸಿ.ಟಿ ರವಿ

    ಯುದ್ಧೋಪಾದಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಪ್ರವಾಹಕ್ಕೆ ಸರ್ಕಾರ ಸ್ಪಂದಿಸಬೇಕು: ಸಿ.ಟಿ ರವಿ

    ಬೆಂಗಳೂರು: ಕಲ್ಯಾಣ ಕರ್ನಾಟಕ (Kalyana Karnataka) ಭಾಗದಲ್ಲಿ ಆಗುತ್ತಿರುವ ಪ್ರವಾಹಕ್ಕೆ (Flood) ಸರ್ಕಾರ ಯುದ್ಧೋಪಾದಿಯಾಗಿ ಪರಿಹಾರ ತೆಗೆದುಕೊಳ್ಳಬೇಕು ಎಂದು ಬಿಜೆಪಿ ನಾಯಕ ಸಿಟಿ ರವಿ (CT Ravi) ಸರ್ಕಾರವನ್ನ ಆಗ್ರಹಿಸಿದ್ದಾರೆ.

    ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಹ ಆಗುತ್ತಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸಿಎಂ ಅವರು ಪ್ರವಾಹ ಸಮಯವನ್ನ ಫಿಲ್ಮ್ ಶೂಟಿಂಗ್ ರೀತಿ ಅಂದುಕೊಂಡಿದ್ದಾರೆ. ಪ್ರವಾಹ ಅನ್ನೋದು ಪಿಕ್ಚರ್ ಶೂಟಿಂಗ್ ಅಲ್ಲ. ಈ ಮೂವಿ ಶೂಟಿಂಗ್ ಟೈಂನಲ್ಲಿ ಮುಂಚೆಯೇ ಎಲ್ಲಾ ಲೋಕೇಶನ್ ನೋಡಿ, ಅಮೇಲೆ ಅಲ್ಲಿಗೆ ಕ್ಯಾಮೆರಾ ಕಳಿಸಿ ಅಲ್ಲಿ ಡೈರಕ್ಟರ್ ಎಲ್ಲಾ ತಯಾರಿ ಮಾಡಿಕೊಂಡು ಅಲ್ಲಿಗೆ ಹೋಗುತ್ತಾರೆ. ಆಕ್ಷನ್ ಕಟ್ ಹೇಳೋ ರೀತಿಯಲ್ಲಾ ಇದು. ಇದಕ್ಕೆ ಸಂವೇದನೆ ಇರಬೇಕು. ಸಿಎಂಗೆ ಸಂವೇದನೆ ಇದ್ದಿದ್ದರೆ ಮುಳುಗಿರೋ ಪ್ರದೇಶಕ್ಕೆ ಹೋಗಬೇಕಿತ್ತು. ಸಿದ್ದರಾಮಯ್ಯ ಅವರು ಎರಡನೇ ಬಾರಿ ಸಿಎಂ ಆದ ಮೇಲೆ ಸಂವೇದನೆ ಸತ್ತು ಹೋಗಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಚಿಕ್ಕಮಗಳೂರು | ಮದ್ಯ ಕುಡಿದು ನನ್ನ ಬಳಿ ಬರಬೇಡಿ – ವಾಹನ ಸವಾರರಿಗೆ ಯಮರಾಜನ ಎಚ್ಚರಿಕೆ!

    ಸರ್ಕಾರದಲ್ಲೂ ಸಂವೇದನೆ ಸತ್ತು ಹೋಗಿದೆ. ಎಲ್ಲಾ ಕೆಲಸ ಬದಿಗೊತ್ತಿ ಆದ್ಯತೆ ವಿಷಯ ಆಗಬೇಕಿತ್ತು. ನಾನು ನೀವು ಮಾಡಿದ ಬೆಂಗಳೂರು ಸಿಟಿ ರೌಂಡ್ಸ್ ನೋಡಿದೆ. ನೀವು ಹಾಕಿದ್ದ ಬಿಳಿ ಪಂಚೆ, ಜುಬ್ಬ ಕೊಳೆ ಆಗದ ರೀತಿ ರೌಂಡ್ಸ್ ಮಾಡಿದ್ದೀರಿ. ಚಪ್ಪಲಿಗೆ ನೀರು ತಾಗದ ರೀತಿ ಮುಗಿಸಿದ್ರಿ. ಇದು ಹಾಗೇನಾ? ಇದು ಪಿಕ್ಚರ್ ಶೂಟಿಂಗ್ ಅಲ್ಲ. ಜನರ ಕಷ್ಟಕ್ಕೆ ಸ್ಪಂದನೆ ಮಾಡಬೇಕು. ಜನರ ಬವಣೆಗೆ ಸ್ಪಂದಿಸೋ ಕೆಲಸ ಮಾಡಬೇಕಿತ್ತು. ಸರ್ಕಾರದ ಸಂವೇದನೆ ಸತ್ತು ಹೋಗಿದೆ. ತಕ್ಷಣ ಯುದ್ಧೋಪಾದಿಯಲ್ಲಿ ಪರಿಹಾರ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಜಾತಿಗಣತಿಗೆ ಬಿಜೆಪಿ ವಿರೋಧ ಮಾಡೋದಿಲ್ಲ: ಸಿ.ಟಿ ರವಿ

  • ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಹ ಬಂದ್ರು ಸರ್ಕಾರ ಪರಿಹಾರ ಬಿಡುಗಡೆ ಮಾಡಿಲ್ಲ – ಸಿಸಿ ಪಾಟೀಲ್

    ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಹ ಬಂದ್ರು ಸರ್ಕಾರ ಪರಿಹಾರ ಬಿಡುಗಡೆ ಮಾಡಿಲ್ಲ – ಸಿಸಿ ಪಾಟೀಲ್

    ಬೆಂಗಳೂರು: ಕಲ್ಯಾಣ ಕರ್ನಾಟಕದಲ್ಲಿ (Kalyana Karnataka) ಕಂಡು ಕೇಳರಿಯದ ರೀತಿ ಮಳೆ ಬೀಳುತ್ತಿದ್ದರೂ ಸರ್ಕಾರ ಪರಿಹಾರ ಬಿಡುಗಡೆ ಮಾಡಿಲ್ಲ ಎಂದು ಮಾಜಿ ಸಚಿವ ಸಿಸಿ ಪಾಟೀಲ್ (CC Patil) ಕಿಡಿಕಾರಿದ್ದಾರೆ.

    ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಹ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕಲ್ಯಾಣ ಕರ್ನಾಟಕ ಮಾತ್ರವಲ್ಲ, ಉತ್ತರ ಕರ್ನಾಟಕದಲ್ಲೂ ಮಳೆ ಜಾಸ್ತಿ ಬಂದಿತ್ತು. ಮಳೆಗೆ ಹೆಸರು ಬೆಳೆ, ಮೆಕ್ಕೆಜೋಳ ನಾಶವಾಗಿದೆ. ತಹಶೀಲ್ದಾರರಿಗೆ ಲಿಮಿಟ್ ಏರಿಯಾ ಸರ್ವೇ ಮಾಡಿ ಅಂತ ಸರ್ಕಾರದಿಂದ ಸೂಚನೆ ಬಂದಿದೆ ಅಂತ ಹೇಳಲಾಗ್ತಿದೆ. ಸರ್ಕಾರ ಹೀಗೆ ಮಾಡಬಾರದು. ಎಲ್ಲಿ ಮಳೆ ಹಾನಿಯಾಗಿದೆ ಅಲ್ಲಿ ಸರ್ವೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.ಇದನ್ನೂ ಓದಿ: ವಿಜಯ್‌ ರ‍್ಯಾಲಿಯಲ್ಲಿ ಕಾಲ್ತುಳಿತಕ್ಕೆ 41 ಸಾವು ಕೇಸ್‌ – ಟಿವಿಕೆ ನಾಯಕ ಅರೆಸ್ಟ್‌

    ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಂಡು ಕೇಳರಿಯದ ಭೀಕರ ಪ್ರವಾಹ ಬಂದಿದೆ. ಸಿಎಂ ಸಿದ್ದರಾಮಯ್ಯ ಅವರು ಇವತ್ತು ಹೋಗ್ತಾ ಇದ್ದಾರೆ. ಈ ಸರ್ಕಾರದಿಂದ ರೈತರಿಗೆ ನ್ಯಾಯ ಸಿಗೋ ವಿಶ್ವಾಸ ಇಲ್ಲ. ಮಳೆ ಹಾನಿಗೆ ಇನ್ನೂ ಪರಿಹಾರ ಬಿಡುಗಡೆಯಾಗಿಲ್ಲ. ಕಳೆದ ಬಾರಿ ಅರ್ಧ ಜನರಿಗೆ ಪರಿಹಾರ ಬಿಡುಗಡೆ ಆಗಿಲ್ಲ. ಇನ್ನು ಹಾನಿಯ ಸರ್ವೆಯೇ ಮಾಡಿಲ್ಲ. ಹಾನಿಯಾದ ಎಲ್ಲಾ ಭಾಗದ ಸರ್ವೆಯನ್ನ ಸರ್ಕಾರ ಮಾಡಲು ಸೂಚನೆ ಕೊಡಬೇಕು ಎಂದು ಆಕ್ರೋಶ ಹೊರಹಾಕಿದ್ದಾರೆ.

  • ರೈತರ ವಿಚಾರದಲ್ಲಿ ತಾತ್ಸಾರ ಬೇಡ, ಸಿಎಂ ಬೆಂಗಳೂರಿಗೆ ಸೀಮಿತರಾಗಿದ್ದಾರೆ – ಬಿವೈವಿ ಕಿಡಿ

    ರೈತರ ವಿಚಾರದಲ್ಲಿ ತಾತ್ಸಾರ ಬೇಡ, ಸಿಎಂ ಬೆಂಗಳೂರಿಗೆ ಸೀಮಿತರಾಗಿದ್ದಾರೆ – ಬಿವೈವಿ ಕಿಡಿ

    ಬೀದರ್: ರೈತರ ವಿಚಾರದಲ್ಲಿ ತಾತ್ಸಾರ ಬೇಡ, ಸಿಎಂ ಸಿದ್ದರಾಮಯ್ಯ (CM Siddaramaiah) ಬೆಂಗಳೂರಿಗೆ (Bengaluru) ಮಾತ್ರ ಸೀಮಿತರಾಗಿದ್ದಾರೆ ಎಂದು ಬಿಜೆಪಿ ರಾಜಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಕಿಡಿಕಾರಿದ್ದಾರೆ.

    ಬೀದರ್ (Bidar) ಸೇರಿದಂತೆ ಕಲ್ಯಾಣ ಕರ್ನಾಟಕದಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾದ ಹಿನ್ನೆಲೆ ಬಿವೈ ವಿಜಯೇಂದ್ರ ಸೇರಿದಂತೆ ಬಿಜೆಪಿ ತಂಡ ನೆರೆ ವೀಕ್ಷಣೆ ಮಾಡಿದರು. ಈ ವೇಳೆ ಮಾತನಾಡಿದ ಅವರು, ಸಿಎಂಗೆ ಕಲ್ಯಾಣ ಕರ್ನಾಟಕದ ಬಗ್ಗೆ ಕಾಳಜಿ ಇಲ್ಲ, ಈ ಭಾಗದಲ್ಲಿ ರೈತರ ಬೆಳೆಗಳು ಸಂಪೂರ್ಣವಾಗಿ ಸರ್ವನಾಶವಾಗಿದೆ. ಕಳೆದ ಒಂದು ತಿಂಗಳಿಂದ ಮಳೆಯಾಗಿ ಎಲ್ಲಾ ಬೆಳೆಗಳು ನಾಶವಾಗಿದೆ. ರೈತರ ವಿಚಾರದಲ್ಲಿ ಸಿಎಂ ತಾತ್ಸಾರ ಬೇಡ, ಸಿಎಂ ಸಿದ್ದರಾಮಯ್ಯ ಬೆಂಗಳೂರಿಗೆ ಸೀಮಿತರಾಗಿದ್ದಾರೆ. ಇಂತಹ ಸಮಯದಲ್ಲಿ ಸಿಎಂ ಹಾಗೂ ಸಚಿವರ ಹುಡುಗಾಟ ಬೇಡ ಎಂದು ವಾಗ್ದಾಳಿ ನಡೆಸಿದ್ದಾರೆ.ಇದನ್ನೂ ಓದಿ: ಸರ್ಕಾರದಿಂದ ಉತ್ತರ ಕರ್ನಾಟಕಕ್ಕೆ 3,000 ಕೋಟಿ ಪ್ರವಾಹ ಪರಿಹಾರ ನೀಡಬೇಕು – ಅಶೋಕ್ ಆಗ್ರಹ

    ರಾಜ್ಯ ಸರ್ಕಾರ ತಮ್ಮ ಜವಾಬ್ದಾರಿ ನಿರ್ವಹಿಸುತ್ತಿಲ್ಲ. ಬಿಎಸ್‌ವೈ ಮನೆ ಕಳೆದುಕೊಂಡವರಿಗೆ ಕೇಂದ್ರದ ಕಡೆ ನೋಡದೆ ಪರಿಹಾರ ಕೊಟ್ಟಿದ್ದರು. ಇನ್ನು ತಡಮಾಡದೇ ನೀವು, ನಿಮ್ಮ ಸಚಿವರು ಇಲ್ಲಿಗೆ ಧಾವಿಸಿ ಎಂದು ಆಕ್ರೋಶ ಹೊರಹಾಕಿದ್ದಾರೆ.

  • ರಾಜ್ಯದಲ್ಲಿ ನಿಲ್ಲದ ವರುಣಾರ್ಭಟ – ನಿರಂತರ ಮಳೆಗೆ ಕಲ್ಯಾಣ ಕರ್ನಾಟಕ ತತ್ತರ

    ರಾಜ್ಯದಲ್ಲಿ ನಿಲ್ಲದ ವರುಣಾರ್ಭಟ – ನಿರಂತರ ಮಳೆಗೆ ಕಲ್ಯಾಣ ಕರ್ನಾಟಕ ತತ್ತರ

    ಬೆಂಗಳೂರು: ಕಲ್ಯಾಣ ಕರ್ನಾಟಕದಲ್ಲಿ ವರುಣನ ಅಬ್ಬರ ಜೋರಾಗಿದೆ. ಕಲಬುರಗಿ, ಯಾದಗಿರಿ ಜಿಲ್ಲೆಯಲ್ಲಂತೂ ಧಾರಾಕಾರ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯ÷ಸ್ತವಾಗಿದ್ದು, ನಿರಂತರ ಮಳೆಗೆ ಕಲ್ಯಾಣ ಕರ್ನಾಟಕ ತತ್ತರಿಸಿದೆ.

    ಕಾಗಿಣಾ ನದಿ ಪ್ರವಾಹಕ್ಕೆ ಸೇಡಂ ತಾಲೂಕಿನ ಮಳಖೇಡ ತಾಂಡಾದ ಹಲವು ಮನೆಗಳಿಗೆ ನೀರು ನುಗ್ಗಿದೆ. ಒಂದು ತಿಂಗಳ ಕಂದಮನನ್ನು ಹೊತ್ತು ಎರಡು ದಿನಗಳಿಂದ ಛಾವಣಿ ಮೇಲೆ ತಾಯಿ ಆಶ್ರಯ ಪಡೆದಿದ್ದಾಳೆ. ಜೇವರ್ಗಿ ತಾಲೂಕಿನ ಮಾಹೂರ ಗ್ರಾಮ ನಡುಗಡ್ಡೆಯಾಗಿದೆ. ಶಾಸಕ ಡಾ.ಅಜಯ್ ಸಿಂಗ್ ಬೋಟ್‌ನಲ್ಲಿ ಮಾಹೂರ ಗ್ರಾಮಕ್ಕೆ ಭೇಟಿ ನೀಡಿ, ಶಾಶ್ವತ ಪರಿಹಾರ ಕಲ್ಪಿಸುವ ಭರವಸೆ ನೀಡಿದ್ದಾರೆ. ಚಿಂಚೋಳಿ ತಾಲೂಕಿನ ಜೆಟ್ಟೂರ್ ಗ್ರಾಮದಲ್ಲಿ ಹಳ್ಳದ ನೀರು ಕೊಟ್ಟಿಗೆ ನುಗ್ಗಿ 42 ಎತ್ತುಗಳು ಮೃತಪಟ್ಟಿದ್ದು, 5 ಜಾನುವಾರು ನೀರು ಪಾಲಾಗಿವೆ.ಇದನ್ನೂ ಓದಿ:ಬಾಗಲ ಕೋಟೆ| ಭಾರೀ ಮಳೆಗೆ ಜಿಲ್ಲೆಯಲ್ಲಿ 321 ಮನೆ ಕುಸಿತ

    ಭೀಮಾ ನದಿಯ ಅಬ್ಬರಕ್ಕೆ ಯಾದಗಿರಿ ನಗರದಲ್ಲಿನ ರಸ್ತೆಗಳ ಸಂಪರ್ಕ ಕಡಿತಗೊಂಡಿದೆ. ನಗರದ ಹಲವು ಪ್ರಮುಖ ರಸ್ತೆಗಳು ಬಂದ್ ಆಗಿರುವುದರಿಂದ ಜನ ಪರದಾಟ ನಡೆಸಿದ್ದಾರೆ. ಹೀರೇಹಳ್ಳದ ಸೇತುವೆ ಮುಳುಗಡೆಯಿಂದ ಯಾದಗಿರಿ-ಕಲಬುರಗಿ ರಸ್ತೆ ಮಾರ್ಗ ಬಂದ್ ಆಗಿದೆ. ಇನ್ನೂ ಗಡಿಜಿಲ್ಲೆ ಬೀದರ್‌ನಲ್ಲಿ ಭಾರೀ ಮಳೆಯಾಗಿದೆ. ಭಾಲ್ಕಿಯ ಎಡದಂಡೆಯಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದ್ದು, ಸಾವಿರಾರು ಎಕರೆ ಬೆಳೆ ನೀರುಪಾಲಾದ್ರೆ ಕಟ್ಟಿತೂಗಾಂವ್ ಗ್ರಾಮದ ಮಹಾದೇವ ದೇವಸ್ಥಾನ ಸಂಪೂರ್ಣವಾಗಿ ನೀರಿನಲ್ಲಿ ಮುಳುಗಡೆಯಾಗಿದೆ.

    ವಿಜಯಪುರ ಜಿಲ್ಲೆಯಲ್ಲೂ ಪ್ರವಾಹ ಸೃಷ್ಟಿಸಿದೆ. `ಪಬ್ಲಿಕ್ ಟಿವಿ’ ವರದಿ ಬೆನ್ನಲ್ಲೆ ಪ್ರವಾಹ ಪೀಡಿತ ಪ್ರದೇಶಕ್ಕೆ ಸಚಿವ ಎಂ.ಬಿ.ಪಾಟೀಲ್ ಭೇಟಿ ನೀಡಿದ್ದಾರೆ. ಆಲಮೇಲ ತಾಲೂಕಿನ ಕುಮಸಗಿ ಗ್ರಾಮದ ಗಂಜಿ ಕೇಂದ್ರಕ್ಕೆ ಭೇಟಿ ನೀಡಿ, ಸಾಂತ್ವನ ಹೇಳಿದ್ದಾರೆ. ಮಳೆ ಸಂಬಂಧ ಭಾನುವಾರ (ಸೆ.28) ಸಿಎಂ ಸಿದ್ದರಾಮಯ್ಯ ಸಭೆ ಮಾಡಿದ್ದಾರೆ. ಕೃಷ್ಣೆ ಮತ್ತು ಭೀಮಾ ನದಿ ತೀರದಲ್ಲಿ ಪ್ರವಾಹದ ಸ್ಥಿತಿ ಹಿನ್ನೆಲೆ ತೀವ್ರ ರಕ್ಷಣಾ ಮತ್ತು ಪರಿಹಾರ ಕಾರ್ಯಕ್ಕೆ ಸಿಎಂ ಸೂಚನೆ ನೀಡಿದ್ದಾರೆ.ಇದನ್ನೂ ಓದಿ: ರಾಯಚೂರು | ಜಾತಿಗಣತಿ ಸಮೀಕ್ಷಾ ಕಾರ್ಯಕ್ಕೆ ನಿರ್ಲಕ್ಷ್ಯ ತೋರಿದ ಅಧಿಕಾರಿ ಅಮಾನತು

  • ಕಲ್ಯಾಣ ಕರ್ನಾಟಕದ ಮಳೆ ಅವಾಂತರ – ಪ್ರಕೃತಿಯ ನಿಯಮ ಎಂದ ಡಿಕೆಶಿ

    ಕಲ್ಯಾಣ ಕರ್ನಾಟಕದ ಮಳೆ ಅವಾಂತರ – ಪ್ರಕೃತಿಯ ನಿಯಮ ಎಂದ ಡಿಕೆಶಿ

    ಬೆಂಗಳೂರು: ಕಲ್ಯಾಣ ಕರ್ನಾಟಕದಲ್ಲಿ ಮಳೆ ಅವಾಂತರ ಪ್ರಕೃತಿಯ ನಿಯಮ ಯಾರು ಏನೂ ಮಾಡೋಕೆ ಆಗಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ.

    ಬೆಂಗಳೂರಿನಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಮಳೆಯ ಅವಾಂತರ ವಿಚಾರವಾಗಿ ಮಾತನಾಡಿದ ಅವರು, ಈ ವಿಚಾರ ಗೊತ್ತಿದೆ. ನಮ್ಮ ಸಿಎಂ ಅವರು ಸಂಬಂಧಪಟ್ಟಂತಹ ಮಂತ್ರಿಗಳಿಗೆ ತಿಳಿಸಿದ್ದಾರೆ. ಮಹಾರಾಷ್ಟ್ರದಿಂದ ವಿಪರೀತ ನೀರು ಬರುತ್ತಿದೆ. ಮೊದಲ ಬಾರಿಗೆ ನ್ಯಾಷನಲ್ ಹೈವೆ ಮುಚ್ಚಬೇಕಾದಂತಹ ಅನಿವಾರ್ಯತೆ ಬಂದಿದೆ. ಪ್ರಕೃತಿಯ ನಿಯಮ ಇದು. ನಾವೇನು ಮಾಡೋಕೆ ಆಗಲ್ಲ ಎಂದಿದ್ದಾರೆ.ಇದನ್ನೂ ಓದಿ: ದೊಡ್ಡ ನಗರಗಳಲ್ಲಿ ಗುಂಡಿ ಇದ್ದೇ ಇರುತ್ತದೆ: ಡಿಕೆಶಿ

    ಜನರನ್ನು ರಕ್ಷಣೆ ಮಾಡಲಿಕ್ಕೆ, ಜನರನ್ನು ಕಾಪಾಡಲಿಕ್ಕೆ, ಯಾರಿಗೆ ತೊಂದರೆ ಆಗದ ರೀತಿಯಲ್ಲಿ ನಮ್ಮ ಸರ್ಕಾರದ ಎಲ್ಲಾ ಅಧಿಕಾರಿಗಳು ಸಹಕಾರ ಕೊಡುತ್ತಾರೆ. ಇದಕ್ಕೆ ಸಾರ್ವಜನಿಕರು ಸಹಕಾರ ಕೊಡಬೇಕು ಎಂದು ವಿನಂತಿ ಮಾಡುತ್ತೇನೆ ಎಂದು ಹೇಳಿದ್ದಾರೆ.

  • ಕಲ್ಯಾಣ ಕರ್ನಾಟಕ ಪ್ರತ್ಯೇಕ ಸಚಿವಾಲಯಕ್ಕೆ ರಾಜ್ಯ ಸರ್ಕಾರ ಅಸ್ತು

    ಕಲ್ಯಾಣ ಕರ್ನಾಟಕ ಪ್ರತ್ಯೇಕ ಸಚಿವಾಲಯಕ್ಕೆ ರಾಜ್ಯ ಸರ್ಕಾರ ಅಸ್ತು

    ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವದ ದಿನದಂದೇ ರಾಜ್ಯ ಸರ್ಕಾರ ಕಲ್ಯಾಣ ಕರ್ನಾಟಕಕ್ಕೆ (Kalyana Karnataka) ಪ್ರತ್ಯೇಕವಾಗಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಇಲಾಖೆ ಸೃಜಿಸಿ ಆದೇಶ ಹೊರಡಿಸಿದೆ.

    ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿಗಾಗಿ ಪ್ರತ್ಯೇಕ ಇಲಾಖೆಯನ್ನು ಸೃಜಿಸಿ ಆದೇಶಿಸಿದಲ್ಲದೆ ಇಲಾಖೆಯು ಯೋಜನೆ ಮತ್ತು ಸಾಂಖ್ಯಿಕ ಸಚಿವರ ಅಧೀನದಲ್ಲಿ ಕಾರ್ಯನಿರ್ವಹಿಸಬೇಕು. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಕಾರ್ಯದರ್ಶಿಯವರು ಈ ನೂತನ ಇಲಾಖೆಯ ಕಾರ್ಯದರ್ಶಿಯಾಗಿ ಮತ್ತು ಮಂಡಳಿಯ ಎಲ್ಲಾ ಅಧಿಕಾರಿ ಸಿಬ್ಬಂದಿಗಳನ್ನೊಳಗೊಂಡ ಇಲಾಖೆಯು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮತ್ತು ಅನುಚ್ಛೇಧ 371(ಜೆ) ಗೆ ಸಂಬಂಧಿಸಿದ ವಿಷಯಗಳನ್ನು ನಿರ್ವಹಿಸಬೇಕೆಂದು ಆದೇಶಿಸಲಾಗಿದೆ. ಇದನ್ನೂ ಓದಿ: ಬಿಪಿಎಲ್ ಕಾರ್ಡ್‌ನಲ್ಲಿ ಬಿಟ್ಟು ಹೋದ ಅರ್ಹರ ಹೆಸರನ್ನು ಹೊಸದಾಗಿ ಸೇರ್ಪಡೆ: ಸಿದ್ದರಾಮಯ್ಯ

    ಪ್ರದೇಶದಲ್ಲಿನ ಕಾಮಗಾರಿಗಳನ್ನು ಅನುಷ್ಠಾನಗೊಳಿಸುವಲ್ಲಿ ಸಿಬ್ಬಂದಿಗಳ ಕೊರತೆ ಇರುವ ಕಾರಣ ಸದರಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ಹಾಗೂ ಆ ಪ್ರದೇಶ 7 ಜಿಲ್ಲಾಧಿಕಾರಿಗಳ ಕಚೇರಿಗಳಿಗೆ ಹೆಚ್ಚುವರಿ ಹುದ್ದೆಗಳನ್ನು ಮಂಜೂರು ಮಾಡಿ ಬಲಪಡಿಸಲು ಸಹ ನಿರ್ಧರಿಸಿದೆ.

    ಕಳೆದ ವರ್ಷ ಕಲಬುರಗಿಯಲ್ಲಿ ಸೆ.17 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿಗಾಗಿ ಕೆಲಸಗಳನ್ನು ಇನ್ನೂ ಹೆಚ್ಚಿನ ಪರಿಣಾಮಕಾರಿಯಾಗಿ ಜಾರಿಗೊಳಿಸಲು ಮತ್ತು ಅಭಿವೃದ್ಧಿ ಕಾಮಗಾರಿಗಳ ಮೇಲುಸ್ತುವಾರಿ ಮಾಡಲು ಒಂದು ಪ್ರತ್ಯೇಕ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಸಚಿವಾಲಯವನ್ನು ಸ್ಥಾಪಿಸುವ ನಿರ್ಧಾರವನ್ನು ಸರ್ಕಾರ ತೆಗೆದುಕೊಂಡಿದೆ.