Tag: Kalyana Karnataka

  • ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಬೊಮ್ಮಾಯಿಗೆ ಕಪ್ಪುಪಟ್ಟಿ ಪ್ರದರ್ಶನ

    ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಬೊಮ್ಮಾಯಿಗೆ ಕಪ್ಪುಪಟ್ಟಿ ಪ್ರದರ್ಶನ

    ಕಲಬುರಗಿ: ಈ ಹಿಂದೆ ಹೈದರಾಬಾದ್ ಕರ್ನಾಟಕ ಪ್ರದೇಶ ಎಂದು ಕರೆಯಲ್ಪಡುತ್ತಿದ್ದ ಕಲ್ಯಾಣ ಕರ್ನಾಟಕ (Kalyana Karnataka) ಭಾಗಕ್ಕೆ ಸ್ವಾತಂತ್ರ್ಯ ಸಿಕ್ಕಿ ಇಂದಿಗೆ 75 ವರ್ಷಗಳು ಕಳೆದಿದೆ. ಈ ಹಿನ್ನೆಲೆ ಕಲ್ಯಾಣ ಕರ್ನಾಟಕ ಭಾಗದ ಎಲ್ಲಾ ಜಿಲ್ಲೆಗಳಲ್ಲಿ ಕಲ್ಯಾಣ ಕರ್ನಾಟಕ ಸ್ವಾತಂತ್ರ್ಯ ಅಮೃತ ಮಹೋತ್ಸವವನ್ನು (Amrutha Mahotsav) ಅದ್ಧೂರಿಯಾಗಿ ಆಚರಿಸಲಾಗುತ್ತಿದೆ. ಇಂದು ಕಲಬುರಗಿಗೆ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಭೇಟಿ ನೀಡಿ ಕಾರ್ಯಕ್ರಮದಲ್ಲಿ ಭಾಗಿಯಾಗಲು ಬರುತ್ತಿದ್ದಂತೆ ತಳವಾರ ಸಮುದಾಯದ ಜನ ಕಪ್ಪುಪಟ್ಟಿ (Black Flag) ಪ್ರದರ್ಶಿಸಿ ಪ್ರತಿಭಟನೆ ನಡೆಸಿದ್ದಾರೆ.

    ಬೊಮ್ಮಾಯಿ ಕಲಬುರಗಿ ನಗರದ ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತಕ್ಕೆ ಆಗಮಿಸಿ ವಲ್ಲಭಬಾಯ್ ಪಟೇಲ್ ಪ್ರತಿಮೆಗೆ ಮಾಲಾರ್ಪಣೆ ಮಾಡುತ್ತಿದ್ದಂತೆ ಅಲ್ಲಿಗೆ ಆಗಮಿಸಿದ ತಳವಾರ ಸಮುದಾಯದ ಜನ ಕಪ್ಪುಪಟ್ಟಿ ಪ್ರದರ್ಶಿಸಿದರು. ತಳವಾರ ಸಮುದಾಯಕ್ಕೆ ಎಸ್‍ಟಿ (ST) ಪ್ರಮಾಣ ಪತ್ರ ನೀಡುವಂತೆ ಆಗ್ರಹಿಸಿ ಹೋರಾಟ ನಡೆಯುತ್ತಿದೆ. ಈ ಹೋರಾಟಕ್ಕೆ ಸರ್ಕಾರ ಸ್ಪಂದಿಸದ ಹಿನ್ನೆಲೆಯಲ್ಲಿ ಸಿಎಂಗೆ ಕಪ್ಪುಪಟ್ಟಿ ಪ್ರದರ್ಶನ ಮಾಡಿದ್ದಾರೆ. ಬಳಿಕ ಪೊಲೀಸರು (Police) ಕಪ್ಪುಪಟ್ಟಿ ಪ್ರದರ್ಶಿಸಿದ 25ಕ್ಕೂ ಅಧಿಕ ಜನರನ್ನು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಕಲ್ಯಾಣ ಕರ್ನಾಟಕಕ್ಕೆ ಅಮೃತ ಮಹೋತ್ಸವ ಸಂಭ್ರಮ – ಸಿಎಂ ಬೊಮ್ಮಾಯಿ ಭಾಗಿ

    ಕಲ್ಯಾಣ ಕರ್ನಾಟಕ ಸ್ವಾತಂತ್ರ್ಯ ಅಮೃತ ಮಹೋತ್ಸವ ಹಿನ್ನೆಲೆ ಇಂದು ಕಲಬುರಗಿ ನಗರದ ಪ್ರಮುಖ ಬೀದಿಗಳಲ್ಲಿ ಬ್ಯಾನರ್ ಕಟೌಟ್‍ಗಳು ರಾರಾಜಿಸುತ್ತಿದ್ದು 2 ದಿನ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿವೆ. ನಗರದ ನಗರೇಶ್ವರ ಶಾಲೆಯಿಂದ ಕೇಂದ್ರ ಬಸ್ ನಿಲ್ದಾಣದವರೆಗೆ 24 ಕಲಾ ತಂಡಗಳು ಮತ್ತು 200 ಕಲಾವಿದರು ಮೆರವಣಿಗೆ ಮಾಡಲಿದ್ದಾರೆ. ಇದನ್ನೂ ಓದಿ: ಸಿದ್ದು, ಡಿಕೆಶಿ ಮಧ್ಯೆ ಮತ್ತೆ ಪವರ್ ವಾರ್ – ಅತ್ತ ಭಾರತ್ ಜೋಡೋ, ಇತ್ತ ರಾಜ್ಯದಲ್ಲಿ ಕಾಂಗ್ರೆಸ್ ಜೋಡೋ ಸ್ಥಿತಿ!

    Live Tv
    [brid partner=56869869 player=32851 video=960834 autoplay=true]

  • ಕಲ್ಯಾಣ ಕರ್ನಾಟಕಕ್ಕೆ ಅಮೃತ ಮಹೋತ್ಸವ ಸಂಭ್ರಮ – ಸಿಎಂ ಬೊಮ್ಮಾಯಿ ಭಾಗಿ

    ಕಲ್ಯಾಣ ಕರ್ನಾಟಕಕ್ಕೆ ಅಮೃತ ಮಹೋತ್ಸವ ಸಂಭ್ರಮ – ಸಿಎಂ ಬೊಮ್ಮಾಯಿ ಭಾಗಿ

    ಕಲಬುರಗಿ: ಈ ಹಿಂದೆ ಹೈದರಾಬಾದ್ ಕರ್ನಾಟಕ ಪ್ರದೇಶ ಎಂದು ಕರೆಯಲ್ಪಡುತ್ತಿದ್ದ ಕಲ್ಯಾಣ ಕರ್ನಾಟಕ (Kalyana Karnataka) ಭಾಗಕ್ಕೆ ಸ್ವಾತಂತ್ರ್ಯ ಸಿಕ್ಕಿ ಇಂದಿಗೆ 75 ವರ್ಷಗಳು ಕಳೆದಿದೆ. ಈ ಹಿನ್ನೆಲೆ ಕಲ್ಯಾಣ ಕರ್ನಾಟಕ ಭಾಗದ ಎಲ್ಲಾ ಜಿಲ್ಲೆಗಳಲ್ಲಿ ಕಲ್ಯಾಣ ಕರ್ನಾಟಕ ಸ್ವಾತಂತ್ರ್ಯ ಅಮೃತ ಮಹೋತ್ಸವವನ್ನು (Amrutha Mahotsav) ಅದ್ಧೂರಿಯಾಗಿ ಆಚರಿಸಲಾಗುತ್ತಿದೆ.

    ಇಂದು ಕಲಬುರಗಿ ನಗರದ ಪ್ರಮುಖ ಬೀದಿಗಳಲ್ಲಿ ಬ್ಯಾನರ್ ಕಟೌಟ್‍ಗಳು ರಾರಾಜಿಸುತ್ತಿದ್ದು 2 ದಿನ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿವೆ. ನಗರದ ನಗರೇಶ್ವರ ಶಾಲೆಯಿಂದ ಕೇಂದ್ರ ಬಸ್ ನಿಲ್ದಾಣದವರೆಗೆ 24 ಕಲಾ ತಂಡಗಳು ಮತ್ತು 200 ಕಲಾವಿದರು ಮೆರವಣಿಗೆ ಮಾಡಲಿದ್ದಾರೆ. ಇಂದು ಸಿಎಂ ಬಸವರಾಜ ಬೊಮ್ಮಾಯಿ (Basavarj Bommai) ಕೂಡ ಜಿಲ್ಲೆಗೆ ಬರಲಿದ್ದು ಕಾರ್ಯಕ್ರಮದಲ್ಲಿ ಭಾಗಿ ಆಗಲಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಇನ್ನೂ 7,030 ಹುದ್ದೆಗಳು ಸರ್ಕಾರದ ನಿರ್ಲಕ್ಷ್ಯದಿಂದ ಭರ್ತಿಯಾಗದೇ ಉಳಿದಿವೆ. ಹೀಗಾಗಿ ನಿರುದ್ಯೋಗ ಸಮಸ್ಯೆ ಪರಿಹಾರದ ದಿಸೆಯಲ್ಲಿ ಯುವ ಸಮೂಹ ಕಾತುರದಿಂದ ಕಾಯುತ್ತಿದ್ದಾರೆ. ಇದನ್ನೂ ಓದಿ: ಪ್ರಧಾನಿ ಮೋದಿ ಅವರಿಗೆ 72ರ ಸಂಭ್ರಮ – ನಮೀಬಿಯಾದಿಂದ ಭಾರತಕ್ಕೆ 8 ಚಿರತೆಗಳು

    ಅಮೃತ ಮಹೋತ್ಸವಕ್ಕೆ ಕಲಬುರಗಿಗೆ ಬೊಮ್ಮಾಯಿ ಆಗಮಿಸುತ್ತಿದ್ದು, ಬೆಂಗಳೂರಿನ ಎಚ್‍ಎಎಲ್ (HAL) ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದಲ್ಲಿ ಸಿಎಂ ಕಲಬುರಗಿಗೆ ತೆರಳುತ್ತಿದ್ದಾರೆ. ಬೆಳಗ್ಗೆ 8:15ರ ಸುಮಾರಿಗೆ ಕಲಬುರಗಿಗೆ ಸಿಎಂ ಬಂದಿಳಿಯಲಿದ್ದಾರೆ. 8:30ಕ್ಕೆ ಸರ್ದಾರ್ ವಲ್ಲಭಭಾಯ್ ಪಟೇಲ್  (Vallabhbhai Patel) ಪುತ್ಥಳಿಗೆ ಸಿಎಂ ಮಾಲಾರ್ಪಣೆ ಮಾಡಲಿದ್ದು, 9 ಗಂಟೆಗೆ ಡಿಎಆರ್ ಪೊಲೀಸ್ ಮೈದಾನದಲ್ಲಿ ರಾಷ್ಟ್ರ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದೆ. 11 ಗಂಟೆಗೆ ನೂತನ ನಗರ ಪೊಲೀಸ್ ಆಯುಕ್ತರ ಕಟ್ಟಡ ಉದ್ಘಾಟನೆ. 11:30 ಗಂಟೆಗೆ ಎನ್‍ವಿ ಕಾಲೇಜು ಮೈದಾನದಲ್ಲಿ ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ಉದ್ಘಾಟನೆ ಕಾರ್ಯಕ್ರಮದ ನಂತರ ನಗರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಚಾಲನೆ ನೀಡಲಿದ್ದಾರೆ. ಇದನ್ನೂ ಓದಿ:
    ಮಹಾಗಣಪತಿ ವಿಸರ್ಜನೆ – ಶಾಲಾ-ಕಾಲೇಜ್‍ಗಳಿಗೆ ರಜೆ, 4 ಲಕ್ಷಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ

    Live Tv
    [brid partner=56869869 player=32851 video=960834 autoplay=true]

  • ಕಲ್ಯಾಣ ಕರ್ನಾಟಕ ಅಲ್ಲ, ಇಡೀ ಕರ್ನಾಟಕ ಕಲ್ಯಾಣ ಆಗಬೇಕಿದೆ: ಜನಾರ್ದನ ರೆಡ್ಡಿ

    ಕಲ್ಯಾಣ ಕರ್ನಾಟಕ ಅಲ್ಲ, ಇಡೀ ಕರ್ನಾಟಕ ಕಲ್ಯಾಣ ಆಗಬೇಕಿದೆ: ಜನಾರ್ದನ ರೆಡ್ಡಿ

    ಕೊಪ್ಪಳ: ಸಚಿವ ಶ್ರೀರಾಮುಲು ಅವರು ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿದ್ದಾರೆ. ರಾಜಕೀಯ ವಿಚಾರದಲ್ಲಿ ಶ್ರೀರಾಮುಲು ಅವರಿಗೆ ನಾನೂ ಬೆಂಬಲವಾಗಿ ಇರುತ್ತೇನೆ ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ ಹೇಳಿದರು.

    ಪಂಪಾ ಸರೋವರದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆನೆಗೊಂದಿ, ಪಂಪಾಸರೋವರ ಹಾಗೂ ಹಂಪಿ ಎಂದರೆ ನನಗೆ ಬಹಳ ಪ್ರೀತಿ. ರಾಮುಲು ಒಳ್ಳೆ ಅಭಿವೃದ್ಧಿ ಮಾಡುತ್ತಿದ್ದಾರೆ. ಇದು ರಾಜಕೀಯದ ಕುರಿತು ಬೇರೆ ವಿಷಯ ಮಾತಾನಾಡುವ ಸಮಯ ಅಲ್ಲ. ಇಡೀ ರಾಜ್ಯಕ್ಕೆ ಒಳ್ಳೆಯದಾಗಬೇಕಿದ್ದು, ಕಲ್ಯಾಣ ಕರ್ನಾಟಕ ಅಲ್ಲ ಇಡೀ ಕರ್ನಾಟಕ ಕಲ್ಯಾಣ ಆಗಬೇಕಿದೆ ಎಂದು ಆಶಯ ವ್ಯಕ್ತಪಡಿಸಿದರು. ಇದನ್ನೂ ಓದಿ: ಕಾಂಗ್ರೆಸ್ ಬಿಡೋರ ಲಿಸ್ಟ್, ಬಿಜೆಪಿ ಬಿಡೋರ ಲಿಸ್ಟ್ ನನ್ನ ಬಳಿ ಇದೆ: ಯತ್ನಾಳ್

    ರಾಮುಲು ಅವರೊಟ್ಟಿಗೆ ನಾನೂ ಹೆಜ್ಜೆ ಹಾಕುತ್ತಿದ್ದೇನೆ. ರಾಜಕೀಯ ವಿಚಾರದಲ್ಲಿ ಬರುವ ದಿನಗಳಲ್ಲಿ ನಾನು ಅವರೊಂದಿಗೆ ನಡೆಯಲಿದ್ದೇನೆ. ಹಿರಿಯರು ಹೇಳಿದಂತೆ ನಾನು ಕೇಳುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ: ಶಿವರಾಮೇಗೌಡಗೆ ಜೆಡಿಎಸ್‍ನಿಂದ ಗೇಟ್ ಪಾಸ್: ಎಚ್‍ಡಿಕೆ

  • ಅಧಿವೇಶನದಲ್ಲಿ ಉ.ಕ, ಕಲ್ಯಾಣ ಕರ್ನಾಟಕದ ಬಗ್ಗೆ ಚರ್ಚೆ ಆಗಿಲ್ಲ: ಈಶ್ವರ ಖಂಡ್ರೆ

    ಅಧಿವೇಶನದಲ್ಲಿ ಉ.ಕ, ಕಲ್ಯಾಣ ಕರ್ನಾಟಕದ ಬಗ್ಗೆ ಚರ್ಚೆ ಆಗಿಲ್ಲ: ಈಶ್ವರ ಖಂಡ್ರೆ

    ಕಲಬುರಗಿ: ಜನ ವಿರೋಧಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಮೊದಲ ಬಾರಿಗೆ ಬೆಳಗಾವಿಯಲ್ಲಿ ಅಧಿವೇಶನ ಕರೆದಿದ್ದರೂ, ಅಧಿವೇಶನದಲ್ಲಿ ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ಮಾಡುವುದನ್ನು ಬಿಟ್ಟು ಜನರಿಗೆ ಮಾರಕವಾದ ವಿಧೇಯಕ (ಮತಾಂತರ ನಿಷೇಧ ಮಸೂದೆ) ತಂದಿದ್ದಾರೆ ಎಂದು ಕೆಪಿಸಿಸಿ ಕಾರ್ಯಧ್ಯಕ್ಷ ಈಶ್ವರ ಖಂಡ್ರೆ ಆರೋಪಿಸಿದ್ದಾರೆ‌.

    ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡುವ ಉದ್ದೇಶದಿಂದಲೇ ಬೆಳಗಾವಿಯ ಸುವರ್ಣಸೌಧದಲ್ಲಿ ಅಧಿವೇಶನ ಏರ್ಪಡಿಸಲಾಗಿತ್ತು. ಆದರೆ ಜನ ವಿರೋಧಿ ಬಿಜೆಪಿ ಸರ್ಕಾರವು ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಕುರಿತು ಚರ್ಚೆಗೆ ಅವಕಾಶ ನೀಡಲಿಲ್ಲ. ಅಧಿವೇಶನ ವಿಸ್ತರಣೆ ಮಾಡುವಂತೆ ಸರ್ಕಾರಕ್ಕೆ ಪತ್ರ ಬರೆದರೂ ಯಾವುದೇ ನಿರ್ಧಾರ ತಿಳಿಸಿಲ್ಲ. ಸರ್ಕಾರದ ವೈಫಲ್ಯಗಳನ್ನು ಮರೆಮಾಚಿ ಜನರ ಗಮನ‌ವನ್ನು ಬೇರೆಡೆಗೆ ಸೆಳೆಯುವ ಪ್ರಯತ್ನ ನಡೆದಿದೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಸದಸ್ಯರ ವರ್ತನೆಯಿಂದ ರಾಜೀನಾಮೆಗೆ ಮುಂದಾಗಿದ್ದೆ: ಹೊರಟ್ಟಿ ಬೇಸರ

    ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಮಾತನಾಡಿ, ಬಿಜೆಪಿಯಲ್ಲಿ ಅಸ್ಥಿರತೆ ಇದೆ. ಅಲ್ಲಿ ಬಹಳಷ್ಟು ಅತೃಪ್ತಿ ಇದೆ. ಮುಖ್ಯಮಂತ್ರಿ ಬದಲಾವಣೆ ಆಗೋದು ಬಿಡೋದು ಅವರ ಪಕ್ಷಕ್ಕೆ‌ ಬಿಟ್ಟ ವಿಚಾರ. ಬಿಜೆಪಿ ಸರ್ಕಾರ ಇದ್ದೂ ಇಲ್ಲದಂತಿದೆ‌. ಆಡಳಿತ ವೈಫಲ್ಯವಾದ ಮೇಲೆ ಇಂತಹ ಸರ್ಕಾರ ಇದ್ದರೆಷ್ಟು ಬಿಟ್ಟರೆಷ್ಟು. ಮುಖ್ಯಮಂತ್ರಿ ಬದಲಾವಣೆ ವಿಚಾರ ಬಿಜೆಪಿಯವರ ತೀರ್ಮಾನ ಎಂದು ಮಾತನಾಡಿದ್ದಾರೆ.

    ಎಂಇಎಸ್‌ ಗಲಭೆ ಕುರಿತು ಪ್ರತಿಕ್ರಿಯಿಸಿ, ಗಡಿ ಸಮಸ್ಯೆ ಮುಗಿದು ಹೋಗಿರುವ ವಿಚಾರ. ಇದರಲ್ಲಿ ಎಂಇಎಸ್ ಕೂಡ ಪುಂಡಾಟಿಕೆ ಮಾಡಬಾರದು‌. ನಮ್ಮ ಭಾಷೆ, ನಾಡು-ನುಡಿ ರಕ್ಷಣೆ ಮಾಡುವುದಕ್ಕೆ‌ ನಾವು ಬದ್ಧರಾಗಿದ್ದೇವೆ. ಎಂ‌ಇ‌ಎಸ್ ಪುಂಡಾಟಿಕೆ ಇಲ್ಲಿ ನಡೆಯುವುದಿಲ್ಲ. ಪುಂಡಾಟಿಕೆ ಮಾಡಿದರೆ ಮುಂದೆ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ಮತಾಂತರ ನಿಷೇಧ ಕಾಯ್ದೆಯ ವಿರುದ್ಧ ಕಾನೂನು ಹೋರಾಟಕ್ಕೆ SDPI ನಿರ್ಧಾರ

  • ಕಲ್ಯಾಣ ಕರ್ನಾಟಕ ಉತ್ಸವ: ಧ್ವಜಾರೋಹಣ ನೆರವೇರಿಸಿದ ಪ್ರಭು ಚವ್ಹಾಣ್

    ಕಲ್ಯಾಣ ಕರ್ನಾಟಕ ಉತ್ಸವ: ಧ್ವಜಾರೋಹಣ ನೆರವೇರಿಸಿದ ಪ್ರಭು ಚವ್ಹಾಣ್

    ಬೀದರ್ : ಇಂದು ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಹಿನ್ನೆಲೆ ಗಡಿ ಜಿಲ್ಲೆ ಬೀದರ್ ನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ಧ್ವಜಾರೋಹಣ ಮಾಡಿದರು.

    ಕೊವೀಡ್ ನಿಯಮಗಳ ಪಾಲನೆಯೊಂದಿಗೆ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಧ್ವಜಾರೋಹಣ ವನ್ನು ಬೀದರ್ ನ ಪೊಲೀಸ್ ಪೇರೆಡ್ ಮೈದಾನದಲ್ಲಿ ಸಚಿವ ಪ್ರಭು ಚವ್ಹಾಣ್ ನೆರವೇರಿಸಿದರು. ಧ್ವಜಾರೋಹಣದ ಬಳಿಕ ತೆರದ ವಾಹನದಲ್ಲಿ ಗೌರವ ವಂದನೆ ಸ್ವೀಕಾರ ಮಾಡಿದರು. ಬಳಿಕ ಕಾರ್ಯಕ್ರಮದಲ್ಲಿ ವಿವಿಧ ಪೊಲೀಸ್ ತಂಡಗಳಿಂದ ಕವಾಯತು ನಡೆಯಿತು. ಇದನ್ನೂ ಓದಿ: ಕಲ್ಯಾಣ ಕರ್ನಾಟಕ ಉತ್ಸವ- ರಾಯಚೂರಿನಲ್ಲಿ ಜನಪ್ರತಿನಿಧಿಗಳು ಗೈರು

    ಧ್ವಜಾರೋಹಣದ ವೇಳೆ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ಮಾಸ್ಕ್ ಹಾಕದೆ ಕೊವೀಡ್ ನಿಯಮಗಳ ಉಲ್ಲಂಘನೆ ಮಾಡಿದರು. ಶಾಸಕ ರಹೀಂಖಾನ್, ಎಂ.ಎಲ್.ಸಿ ವಿಜಯ್ ಸಿಂಗ್, ಡಿಸಿ ರಾಮಚಂದ್ರನ್ ಆರ್, ಎಸ್ಪಿ ನಾಗೇಶ್ ಭಾಗಿಯಾಗಿದ್ದರು.  ಇದನ್ನೂ ಓದಿ: ಹಟ್ಟಿ ಗಣಿ ಅಧ್ಯಕ್ಷ ಮಾನಪ್ಪ ವಜ್ಜಲ್ ಪುತ್ರನ ಗುಂಡಾಗಿರಿ, ಎಫ್‍ಐಆರ್ ದಾಖಲು

  • ಕಲ್ಯಾಣ ಕರ್ನಾಟಕದಲ್ಲಿ ಪಕ್ಷ ಬಲಪಡಿಸಲು ಕಾಂಗ್ರೆಸ್ ಸಿದ್ಧತೆ

    ಕಲ್ಯಾಣ ಕರ್ನಾಟಕದಲ್ಲಿ ಪಕ್ಷ ಬಲಪಡಿಸಲು ಕಾಂಗ್ರೆಸ್ ಸಿದ್ಧತೆ

    – ರಾಯಚೂರಿನಲ್ಲಿ ಮಂಗಳವಾರ ರಾಜ್ಯ ಮುಖಂಡರ ಸಭೆ

    ರಾಯಚೂರು: ಕಾಂಗ್ರೆಸ್ ಪಕ್ಷವನ್ನ ಕಲ್ಯಾಣ ಕರ್ನಾಟಕ ಭಾಗದಲ್ಲಿ ಕೆಳಮಟ್ಟದಿಂದ ಬಲಪಡಿಸಲು ರಾಜ್ಯ ಮುಖಂಡರ ಸಭೆ ನಾಳೆ ರಾಯಚೂರಿನಲ್ಲಿ ನಡೆಯಲಿದೆ. ಕೆಪಿಸಿಸಿ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ, ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ವಿಧಾನ ಪರಿಷತ್ ವಿಪಕ್ಷ ನಾಯಕ ಎಸ್.ಆರ್ ಪಾಟೀಲ್, ಮಾಜಿ ಸಂಸದ ಕೆ.ಎಸ್.ಮುನಿಯಪ್ಪ ಸೇರಿ ಹಲವಾರು ರಾಜ್ಯ ಮುಖಂಡರು ಭಾಗವಹಿಸಲಿದ್ದಾರೆ ಅಂತ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಹೇಳಿದ್ದಾರೆ.

    ಕಲ್ಯಾಣ ಕರ್ನಾಟಕ ಭಾಗದ ಶಾಸಕರು, ಸಂಸದರು, ಜಿಲ್ಲಾಧ್ಯಕ್ಷರು ಸಭೆಯಲ್ಲಿ ಇರಲಿದ್ದಾರೆ. 220 ಕ್ಕೂ ಹೆಚ್ಚು ಮುಖಂಡರು ಸಭೆಯಲ್ಲಿ ಭಾಗವಹಿಸಲಿದ್ದಾರೆ. ರಾಯಚೂರು, ಬಳ್ಳಾರಿ, ಕಲಬುರ್ಗಿ, ಕೊಪ್ಪಳ, ಯಾದಗಿರಿ ಜಿಲ್ಲೆಯ ಕಾಂಗ್ರೆಸ್ ಮುಖಂಡರೊಂದಿಗೆ ನಾಳೆ ಬೆಳಗ್ಗೆ 11ಕ್ಕೆ ಖಾಸಗಿ ಹೋಟೆಲ್ ನಲ್ಲಿ ಸಭೆ ನಡೆಯಲಿದೆ. ಮುಂಬರುವ ಜಿ.ಪಂ. ಹಾಗೂ ತಾ.ಪಂ. ಚುನಾವಣೆ ಗಮನದಲ್ಲಿಟ್ಟುಕೊಂಡು ಸಭೆ ನಡೆಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಕೆಪಿಸಿಸಿ ಹೊಸ ಘಟಕ ರೆಡಿಯಾಗುತ್ತೆ ಅದರ ಸಿದ್ಧತೆ ನಡೆದಿವೆ ಅಂತ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ತಿಳಿಸಿದ್ದಾರೆ.

    ಇನ್ನೂ ಇದೇ ವೇಳೆ ಮಾತನಾಡಿದ ಸಲೀಂ ಅಹ್ಮದ್, ಬಿಜೆಪಿ ಸರ್ಕಾರ ಹೃದಯ ಇಲ್ಲದ ಸರ್ಕಾರ, ಆಡಳಿತ ಮಾಡಲು ಯೋಗ್ಯವಿಲ್ಲದ ಸರ್ಕಾರ. ಈ ಸರ್ಕಾರದ ಮೇಲೆ ಜನರಿಗೆ ಹೆಚ್ಚು ನಂಬಿಕೆ ಇಲ್ಲ. ಬೊಮ್ಮಾಯಿ ಬಿ.ಎಸ್ ಯಡಿಯೂರಪ್ಪ ನೆರಳು ಇದ್ದಂತೆ. ಯಡಿಯೂರಪ್ಪ ಅವಧಿಯ ಭ್ರಷ್ಟಾಚಾರ ಬೊಮ್ಮಾಯಿ ನಿವಾರಿಸುತ್ತಾರಾ ಕಾದುನೋಡಬೇಕು. ಬೊಮ್ಮಾಯಿ ಮಂತ್ರಿಮಂಡಲದಲ್ಲಿ ಯಡಿಯೂರಪ್ಪ ಬಣ ಇದೆ ಅಂತ ಸಲೀಂ ಅಹ್ಮದ್ ಹೇಳಿದರು. ಇದನ್ನೂ ಓದಿ: ಮಿತ್ರಮಂಡಳಿಯಲ್ಲಿ ಬಿರುಕು: ಎಸ್‍ಟಿಎಸ್ ವಿರುದ್ಧ ಹೆಚ್. ವಿಶ್ವನಾಥ್ ಬಹಿರಂಗ ಅಸಮಾಧಾನ

  • ಸಿಎಂ ಬಿಎಸ್‍ವೈಗೆ ಕರೆ ಮಾಡಿ ಪ್ರವಾಹ ಪರಿಸ್ಥಿತಿ ಮಾಹಿತಿ ಪಡೆದ ಪ್ರಧಾನಿ ಮೋದಿ

    ಸಿಎಂ ಬಿಎಸ್‍ವೈಗೆ ಕರೆ ಮಾಡಿ ಪ್ರವಾಹ ಪರಿಸ್ಥಿತಿ ಮಾಹಿತಿ ಪಡೆದ ಪ್ರಧಾನಿ ಮೋದಿ

    ಬೆಂಗಳೂರು: ಮಹಾ ಜಲಪ್ರಳಯಕ್ಕೆ ಭೀಮಾ, ಕೃಷ್ಣಾ ನದಿ ಪಾತ್ರದ ಬಹುತೇಕ ಕಲ್ಯಾಣ ಕರ್ನಾಟಕದ ಜಿಲ್ಲೆಗಳು ಮುಳುಗಿವೆ. ರಾಜ್ಯದಲ್ಲಿ ಉಂಟಾಗಿರುವ ಪ್ರವಾಹ ಸ್ಥಿತಿಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಕರೆ ಮಾಡಿ ಮಾಹಿತಿ ಪಡೆದಿದ್ದಾರೆ.

    ಈ ಕುರಿತು ಮಾಹಿತಿ ನೀಡಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಕರ್ನಾಟಕದ ಮಳೆ, ನೆರೆ ಪರಿಸ್ಥಿತಿ ಬಗ್ಗೆ ಸಿಎಂ ಯಡಿಯೂರಪ್ಪ ಜೊತೆ ಮಾತನಾಡಿ ಮಾಹಿತಿ ಪಡೆದಿದ್ದೇನೆ. ಪ್ರವಾಹ ಬಾಧಿತ ಜಿಲ್ಲೆಗಳ ಸಹೋದರ-ಸಹೋದರಿಯರ ಜೊತೆ ನಾವಿದ್ದೇವೆ. ರಕ್ಷಣೆ ಮತ್ತು ಪರಿಹಾರ ಕಾರ್ಯಕ್ಕೆ ಕೇಂದ್ರದಿಂದ ಅಗತ್ಯ ಇರುವ ಎಲ್ಲಾ ಸಹಾಯ ಸಿಗಲಿದೆ ಎಂದು ಭರವಸೆ ನೀಡಿದ್ದಾರೆ.


    ಆದರೆ ಇದಕ್ಕೂ ಮುನ್ನ ಕನ್ನಡಿಗರು ಅಂದರೇ ಇಷ್ಟ ಇಲ್ವಾ, ನಮ್ಮ ಸಿಎಂ ಬಿಎಸ್ ಯಡಿಯೂರಪ್ಪ ಅಂದರೇ ನಿಮಗೆ ಇಷ್ಟ ಇಲ್ವಾ? ಆಂಧ್ರಪ್ರದೇಶ, ತೆಲಂಗಾಣದ ಸಿಎಂಗಳ ಜೊತೆ ಮಾತನಾಡಿ ಪರಿಹಾರದ ಭರವಸೆ ನೀಡಿದ್ದೀರಾ? ಕರ್ನಾಟಕದ ಬಗ್ಗೆ ನಿರ್ಲಕ್ಷ್ಯ ಯಾಕೆ ಎಂದು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡಿ, ಪ್ರಧಾನಿಗೆ ಟ್ಯಾಗ್ ಮಾಡಿದ್ದರು.

  • ಸಿದ್ದರಾಮಯ್ಯ ಉರ್ದು ದಿವಸ್ ಆಚರಿಸಿ, ಹಿಂದಿ ದಿವಸ್‍ಗೆ ವಿರೋಧ ಮಾಡ್ತಾರೆ: ಸಿಟಿ ರವಿ

    ಸಿದ್ದರಾಮಯ್ಯ ಉರ್ದು ದಿವಸ್ ಆಚರಿಸಿ, ಹಿಂದಿ ದಿವಸ್‍ಗೆ ವಿರೋಧ ಮಾಡ್ತಾರೆ: ಸಿಟಿ ರವಿ

    – ಕಾಂಗ್ರೆಸ್ಸಿಗರು ಗುಲಾಮಗಿರಿಯ ಮಾನಸಿಕತೆಯಿಂದ ಹೊರಬಂದಿಲ್ಲ

    ಚಿಕ್ಕಮಗಳೂರು: ಸಿದ್ದರಾಮಯ್ಯ ಉರ್ದು ದಿವಸ್ ಆಚರಣೆ ಮಾಡಿ, ಹಿಂದಿ ದಿವಸ್‍ಗೆ ವಿರೋಧ ಮಾಡುತ್ತಾರೆ ಎಂದು ಪ್ರವಾಸೋದ್ಯಮ ಸಚಿವ ಸಿಟಿ ರವಿ ಅವರು ವ್ಯಂಗ್ಯ ಮಾಡಿದ್ದಾರೆ.

    ಇಂದು ನಗರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಒಲ್ಲದ ಗಂಡನಿಗೆ ಮೊಸರಲ್ಲಿ ಕಲ್ಲು. ದಾಸ್ಯದ ನೆನಪು ಅಳಿಸೋದಕ್ಕೆ ಕಾಂಗ್ರೆಸ್ ಹೈದ್ರಾಬಾದ್ ಕರ್ನಾಟಕ ಎಂದೇ ಹೇಳುತ್ತಿದ್ದರು. ಕಾಂಗ್ರೆಸ್ಸಿಗರು ಗುಲಾಮಗಿರಿಯ ಮಾನಸಿಕತೆಯಿಂದ ಹೊರಬಂದಿರಲಿಲ್ಲ, ಅದಕ್ಕೆ ಬಿಜೆಪಿ ಕಲ್ಯಾಣ ಕರ್ನಾಟಕ ಎಂದು ಹೆಸರಿಟ್ಟಿತ್ತು ಎಂದು ಕಾಂಗ್ರೆಸ್ ಮೇಲೆ ವಾಗ್ದಾಳಿ ಮಾಡಿದರು.

    ಇದೇ ವೇಳೆ ಸಿದ್ದರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡ ಸಿಟಿ ರವಿ, ಸಿದ್ದರಾಮಯ್ಯ ಉರ್ದು ದಿವಸ್ ಆಚರಣೆ ಮಾಡಿ ಬರುತ್ತಾರೆ. ಆದರೆ ಹಿಂದಿ ದಿವಸ್‍ಗೆ ವಿರೋಧ ಮಾಡುತ್ತಾರೆ ಇದು ನಾಟಕ ಅಲ್ವಾ? ಟಿಪ್ಪು ಜಯಂತಿಯ್ನ ಕಾಂಗ್ರೆಸ್ ವೈಭವಿಸಕರಿಸಿ ಆಚರಿಸುತ್ತೆ. ಕಾಂಗ್ರೆಸ್‍ಗೆ ಕನ್ನಡದ ಬಗ್ಗೆ ಮಾತನಾಡೋ ನೈತಿಕತೆ ಎಲ್ಲಿದೆ. ಕನ್ನಡದ ಉಳಿವಿಗಾಗಿ ಮಾಡುವ ಎಲ್ಲಾ ಪ್ರಯತ್ನಕ್ಕೂ ನಮ್ಮ ಬೆಂಬಲವಿದೆ. ಕಾಂಗ್ರೆಸ್ ಹೋರಾಟ ಕನ್ನಡದ ಉಳಿವಿಗೋ, ಹಿಂದಿ ದ್ವೇಷಕ್ಕೋ ಎಂದು ಸಿಟಿ ರವಿ ಪ್ರಶ್ನೆ ಮಾಡಿದ್ದಾರೆ.

    ಹಿಂದಿ ಕಾರಣಕ್ಕೆ ರಾಜ್ಯದಲ್ಲಿ ಒಂದೇ ಒಂದು ಕನ್ನಡ ಶಾಲೆ ಬಂದ್ ಆಗಿಲ್ಲ. ಇಂಗ್ಲಿಷ್ ಕಾರಣಕ್ಕೆ ಸಾವಿರಾರು ಶಾಲೆ ಬಂದ್ ಆಗಿವೆ. ಇಂಗ್ಲಿಷ್ ಓಕೆ ಎಂದು ಹಿಂದಿ ದ್ವೇಷಿಸುವ ನಿಮ್ಮ ಉದ್ದೇಶವೇನು? ಹಿಂದಿಯನ್ನು ವಿರೋಧಿಸುವವರು ಸಂವಿಧಾನ, ಅಂಬೇಡ್ಕರ್ ಅವರನ್ನು ವಿರೋಧ ಮಾಡುತ್ತಾರೆ. ಅವತ್ತು ಒಪ್ಪಿಕೊಂಡ ಕಾಂಗ್ರೆಸ್ ಇವತ್ತು ಬಣ್ಣ ಬದಲಿಸಿದೆ ಅಂದರೆ ಅದು ಗೋಸುಂಬೆತನ ಎಂದು ಕಿಡಿಕಾರಿದ್ದಾರೆ.

  • ಅಧಿವೇಶನಕ್ಕೂ ಮುನ್ನ ಸಂಪುಟ ವಿಸ್ತರಣೆಗೆ ನಿರ್ಧಾರ, ಕೇಂದ್ರ ನಾಯಕರೊಂದಿಗೆ ಚರ್ಚೆ: ಸಿಎಂ

    ಅಧಿವೇಶನಕ್ಕೂ ಮುನ್ನ ಸಂಪುಟ ವಿಸ್ತರಣೆಗೆ ನಿರ್ಧಾರ, ಕೇಂದ್ರ ನಾಯಕರೊಂದಿಗೆ ಚರ್ಚೆ: ಸಿಎಂ

    – ಕಲ್ಯಾಣ ಕರ್ನಾಟಕ ಧ್ವಜಾರೋಹಣ ನೆರವೇರಿಸಿದ ಸಿಎಂ
    – ಇಂದು ದೆಹಲಿಗೆ ತೆರಳಲಿರುವ ಬಿಎಸ್‍ವೈ

    ಕಲಬುರಗಿ: ಅಧಿವೇಶನಕ್ಕೂ ಮುನ್ನ ಸಚಿವ ಸಂಪುಟ ವಿಸ್ತರಣೆ ಮಾಡಬೇಕು ಎಂದುಕೊಂಡಿದ್ದೇನೆ. ಕೇಂದ್ರದ ನಾಯಕರು ಯಾವ ರೀತಿಯಾಗಿ ಸೂಚನೆ ನೀಡುತ್ತಾರೆ ನೋಡಬೇಕಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

    ಕಲ್ಯಾಣ ಕರ್ನಾಟಕ ಉತ್ಸವ ಅಂಗವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಸರ್ದಾರ್ ವಲ್ಲಭಾಯಿ ಪಟೇಲ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಧ್ವಜಾರೋಹಣ ನೆರವೇರಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ದೆಹಲಿಗೆ ಹೊರಟಿದ್ದು, ಪ್ರಧಾನಿ ಮೋದಿ ಮತ್ತು ಸಚಿವರನ್ನು ಭೇಟಿಯಾಗುತ್ತಿದ್ದೇನೆ. ಸಚಿವ ಸಂಪುಟ ವಿಸ್ತರಣೆ ಬಗ್ಗೆ ಪ್ರಧಾನಿ ಮೋದಿ ಸೇರಿದಂತೆ ಅನೇಕರ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

    ಸಚಿವ ಸಂಪುಟ ವಿಸ್ತರಣೆ ಬಗ್ಗೆ ಕೇಂದ್ರ ನಾಯಕರ ಅಭಿಪ್ರಾಯ ತೆಗೆದುಕೊಂಡು ನಂತರ ವಿಸ್ತರಣೆ ಮಾಡಲಾಗುವುದು. ದೆಹಲಿಗೆ ಹೋದ ಮೇಲೆ ನಾಳೆ ಈ ಕುರಿತು ಚರ್ಚೆ ನಡೆಯಲಿದೆ. ಈ ವೇಳೆ ಹಳಬರನ್ನು ಕೈ ಬಿಟ್ಟು, ಹೊಸಬರನ್ನು ಸೇರಿಸಿಕೊಳ್ಳುವ ಬಗ್ಗೆ ಚರ್ಚಿಸಲಾಗುವುದು. ಇದನ್ನು ಕೇಂದ್ರ ನಾಯಕರು ನಿರ್ಧರಿಸುತ್ತಾರೆ. ಅಲ್ಲದೆ ನಾಳೆ ಪ್ರಧಾನಿ ಮೋದಿ, ಕೇಂದ್ರ ಸಚಿವರನ್ನು ಭೇಟಿ ಮಾಡಿ ರಾಜ್ಯದ ಅಭಿವೃದ್ಧಿ ಬಗ್ಗೆ ಚರ್ಚೆ ಮಾಡುತ್ತೇನೆ ಎಂದರು.

    ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಬೇಕಾದ ಎಲ್ಲ ವ್ಯವಸ್ಥೆ ಮಾಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಇದೇ ವೇಳೆ ಅವರು ತಿಳಿಸಿದರು. ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿಗಳು ಹಾಗೂ ಕಲಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ, ಕೆಕೆಆರ್ ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ್ ರೇವೂರ್, ಎನ್.ಇ.ಕೆ.ಎಸ್.ಆರ್.ಟಿ.ಸಿ. ಅಧ್ಯಕ್ಷ ರಾಜಕುಮಾರ ಪಾಟೀಲ ತೇಲ್ಕೂರ, ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಮತ್ತು ಸಾಂಸ್ಕೃತಿಕ ಸಂಘದ ಅಧ್ಯಕ್ಷ ಹಾಗೂ ಮಾಜಿ ಸಂಸದ ಡಾ. ಬಸವರಾಜ ಪಾಟೀಲ ಸೇಡಂ, ಸಂಸದ ಡಾ. ಉಮೇಶ ಜಾಧವ್, ಶ್ರೀ ನಿಜಶರಣ ಅಂಬಿಗರ ಚೌಡಯ್ಯ ನಿಗಮದ ಅಧ್ಯಕ್ಷ ಬಾಬುರಾವ್ ಚಿಂಚನಸೂರ್, ಶಾಸಕರಾದ ಬಸವರಾಜ್ ಮತ್ತಿಮೂಡ ಡಾ.ಅವಿನಾಶ್ ಜಾಧವ್, ವಿಧಾನ ಪರಿಷತ್ತಿನ ಶಾಸಕ ಬಿ.ಜಿ.ಪಾಟೀಲ್ ಉಪಸ್ಥಿತರಿದ್ದರು.

  • ಸಿಎಂ ಕಲ್ಯಾಣ ಕರ್ನಾಟಕದ ಅಭಿವೃದ್ಧಿಯ ಕನಸುಗಾರ: ಡಿಸಿಎಂ ಗೋವಿಂದ ಕಾರಜೋಳ

    ಸಿಎಂ ಕಲ್ಯಾಣ ಕರ್ನಾಟಕದ ಅಭಿವೃದ್ಧಿಯ ಕನಸುಗಾರ: ಡಿಸಿಎಂ ಗೋವಿಂದ ಕಾರಜೋಳ

    ಕಲಬುರಗಿ: ಬಡವರು, ಗುಳೆಹೋಗುವವರು ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚಾಗಿದ್ದಾರೆ. ಹೀಗಾಗಿ ಈ ಪ್ರದೇಶದ ಅಭಿವೃದ್ಧಿಗೆ ನಮ್ಮ ಸರ್ಕಾರ ವಿಶೇಷ ಒತ್ತು ನೀಡಿದೆ ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಡಿಸಿಎಂ ಗೋವಿಂದ ಕಾರಜೋಳ ಹೇಳಿದ್ದಾರೆ.

    ಕಲಬುರಗಿಯಲ್ಲಿ ಇಂದು ನಡೆದ ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಅವರು ಹಿಂದಿನ ಅವಧಿಯಲ್ಲಿ ಕಲಬುರಗಿಯಲ್ಲಿ ಸಂಪುಟ ಸಭೆ ನಡೆಸಿ, ಈ ಭಾಗದ ಯೋಜನೆಗಳಿಗೆ ಅನುದಾನ ನೀಡಿದ್ದರು. ಗುಲಾಮಗಿರಿಯ ಸಂಕೇತ ಕಳಚಲು ಈ ಭಾಗಕ್ಕೆ ಕಲ್ಯಾಣ ಕರ್ನಾಟಕ ಎಂದು ವರ್ಷದ ಹಿಂದೆ ನಾಮಕರಣ ಮಾಡಿದ್ದಾರೆ. ಅವರು ಕಲ್ಯಾಣ ಕರ್ನಾಟಕದ ಅಭಿವೃದ್ಧಿಯ ಕನಸುಗಾರ ಎಂದು ಬಣ್ಣಿಸಿದರು.

    ಸಮಾಜ ಕಲ್ಯಾಣ ಇಲಾಖೆಯಿಂದ ಈ ಭಾಗದಲ್ಲಿ 30 ಕೋಟಿ ವೆಚ್ಚದಲ್ಲಿ ವಸತಿ ನಿಲಯ ನಿರ್ಮಿಸಿದ್ದು, ಕೆಲವೊಂದು ಪೂರ್ಣಗೊಂಡಿವೆ. ಅವುಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆಯನ್ನು ಮುಖ್ಯಮಂತ್ರಿ ನೆರವೇರಿಸಿದರು. ಕಳೆದ ವರ್ಷ ರಾಜ್ಯದಲ್ಲಿ ಬರ, ನೆರೆ ಮತ್ತು ಪ್ರವಾಹದ ಸಂಕಷ್ಟ ಇತ್ತು. ಈ ವರ್ಷ ನೆರೆ ಮತ್ತು ಕೊರೊನಾ ಸಂಕಷ್ಟ ಎದುರಾಗಿದೆ. ಈ ಸಂಕಷ್ಟಗಳ ಮಧ್ಯೆಯೂ ನಮ್ಮ ಸರ್ಕಾರ ಅಭಿವೃದ್ಧಿಗೆ ಒತ್ತು ನೀಡುತ್ತಿದೆ ಎಂದು ಹೇಳಿದರು.

    ಕಲ್ಯಾಣ ಕರ್ನಾಟಕ ಪ್ರದೇಶ ಸೇರಿದಂತೆ ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ರಾಜ್ಯ ಸರ್ಕಾರ ಶ್ರಮಿಸುತ್ತಿದೆ. ಈ ಭಾಗದ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ ಎಂದು ತಿಳಿಸಿದರು. ಮಾನ್ಯ ಮುಖ್ಯಮಂತ್ರಿಗಳು ಇಂದು ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ಕಲಬುರಗಿಯಲ್ಲಿರುವ ಸರ್ದಾರ್ ವಲ್ಲಭಭಾಯಿ ಪಟೇಲ್ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು.