Tag: Kamal Haasan

  • ದಿ ಕೇರಳ ಸ್ಟೋರಿ ಕೆಟ್ಟ ಯಶಸ್ಸಿನ ಟ್ರೆಂಡ್: ನಟ ನಾಸಿರುದ್ದೀನ್ ಶಾ

    ದಿ ಕೇರಳ ಸ್ಟೋರಿ ಕೆಟ್ಟ ಯಶಸ್ಸಿನ ಟ್ರೆಂಡ್: ನಟ ನಾಸಿರುದ್ದೀನ್ ಶಾ

    ಬಾಲಿವುಡ್ ನ ಖ್ಯಾತ ನಟ ನಾಸಿರುದ್ದೀನ್ ಶಾ (Naseeruddin Shah) ‘ದಿ ಕೇರಳ ಸ್ಟೋರಿ’ ಬಗ್ಗೆ ಕಾಮೆಂಟ್ ಮಾಡಿದ್ದಾರೆ. ಈ ಸಿನಿಮಾವನ್ನು ತಾವು ಯಾವತ್ತೂ ನೋಡುವುದಿಲ್ಲ ಎಂದಿರುವ ಅವರು,  ಸಿನಿಮಾ ಗೆದ್ದಿದೆ ಎಂದ ಮಾತ್ರಕ್ಕೆ ಅದು ಒಳ್ಳೆಯ ಗೆಲುವಲ್ಲ. ಅದೊಂದು ಕೆಟ್ಟ ಟ್ರೆಂಡಿನ ಗೆಲುವು ಎಂದು ಪ್ರತಿಕ್ರಿಯಿಸಿದ್ದಾರೆ. ದ್ವೇಷವನ್ನು ಹಂಚುತ್ತಿರುವ ಕುರಿತು ಅವರು ಕಳವಳವನ್ನು  ವ್ಯಕ್ತಪಡಿಸಿದ್ದು, ಸಮಾಜದಲ್ಲಿ ಇನ್ನೆಷ್ಟು ದಿನ ಈ ದ್ವೇಷವನ್ನು ಹಂಚುತ್ತೀರಿ ಎಂದು ಪ್ರಶ್ನೆ ಮಾಡಿದ್ದಾರೆ.

    ಬಾಕ್ಸ್ ಆಫೀಸಿನಲ್ಲಿ ಇನ್ನೂರಕ್ಕೂ ಹೆಚ್ಚು ಕೋಟಿ ರೂಪಾಯಿ ಕಲೆಕ್ಷನ್ ಮಾಡಿ, ಇನ್ನೂ ಹಲವಾರು ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿರುವ ದಿ ಕೇರಳ ಸ್ಟೋರಿ ಬಗ್ಗೆ ಈ ಹಿಂದೆ ಕಮಲ್ ಹಾಸನ್ (Kamal Haasan) ಕೂಡ ಮಾತನಾಡಿದ್ದರು. ಅದೊಂದು ಪ್ರೊಪಗಾಂಡ ಸಿನಿಮಾ ಎಂದು ಟೀಕಿಸಿದ್ದರು. ಸತ್ಯವನ್ನು ಹೇಳದೇ ಅಸತ್ಯವನ್ನೇ ತುಂಬಿರುವಂತಹ ಚಿತ್ರವದು ಎಂದು ಮಾತನಾಡಿದ್ದರು. ಇದನ್ನೂ ಓದಿ:‘ಬಾಹುಬಲಿ’ ಪ್ರಭಾಸ್‌ಗೆ ಸ್ಟಾರ್ ನಟ ಕಮಲ್ ಹಾಸನ್ ವಿಲನ್

    ಅಬುಧಾಬಿಯಲ್ಲಿ ನಡೆದ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗಿಯಾಗಿದ್ದ ಕಮಲ್ ಹಾಸನ್,  ಈ ಸಂದರ್ಭದಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ, ‘ನಾನು ದಿ ಕೇರಳ ಸ್ಟೋರಿ ಸಿನಿಮಾವನ್ನು ವಿರೋಧಿಸುತ್ತಲೇ ಬಂದಿದ್ದೇನೆ. ಅದಕ್ಕಾಗಿ ನನ್ನನ್ನೂ ವಿರೋಧಿಸಿದ್ದಾರೆ. ಸಿನಿಮಾದಲ್ಲಿ ಸತ್ಯ ಘಟನೆ ಆಧರಿಸಿದ ಸಿನಿಮಾ ಎಂದು ಹೇಳಿದರೆ ಸಾಲದು. ಅದರಲ್ಲಿ ಸತ್ಯ ಇರಬೇಕು’ ಎಂದು ಪ್ರತಿಕ್ರಿಯಿಸಿದ್ದರು.

    ‘ದಿ ಕೇರಳ ಸ್ಟೋರಿ’ (The Kerala Story) ಸಿನಿಮಾದ ಕಥೆಯೇ ಬೋಗಸ್ ಎಂದು ಹಲವರು ಈಗಾಗಲೇ ಹಲವರು ವಾದ ಮಾಡಿದ್ದಾರೆ. ಅವರು ಹೇಳಿದ ಪ್ರಮಾಣದಲ್ಲಿ ಮಹಿಳೆಯರು ಇಸ್ಲಾಂ ಮೂಲಭೂತವಾದಕ್ಕೆ ಸಿಲುಕಿಲ್ಲ ಎಂದು ಚರ್ಚೆ ಮಾಡಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಸಿನಿಮಾ ಟೀಮ್ ಮಾಧ್ಯಮಗೋಷ್ಠಿ ನಡೆಸಿ, ಅಲ್ಲಿಗೆ ಸಂತ್ರಸ್ತರನ್ನು ಕರೆತಂದಿದ್ದರು. ಒಬ್ಬೊಬ್ಬರ ಕಥೆಯನ್ನು ಸಿನಿಮಾ ಟೀಮ್ ಮಾಧ್ಯಮಗಳ ಮುಂದೆ ಬಿಚ್ಚಿಟ್ಟಿದೆ.

     

    ದಿ ಕೇರಳ ಸ್ಟೋರಿಯ ಟ್ರೈಲರ್ ರಿಲೀಸ್ ಆದ ಸಂದರ್ಭದಲ್ಲಿ ಒಟ್ಟು 32 ಸಾವಿರ ಯುವತಿಯರ ಮತಾಂತರ ಮಾಡಲಾಗಿದೆ ಎಂದು ಹೇಳಿತ್ತು. ಅಂಕಿ ಸಂಖ್ಯೆಯ ಕುರಿತು ವ್ಯಾಪಕ ಟೀಕೆ ಬಂದ ಬೆನ್ನಲ್ಲೇ ಸಂಖ್ಯೆಯ ವಿಚಾರವನ್ನು ಸಿನಿಮಾದಿಂದಲೇ ಕೈ ಬಿಡಲಾಯಿತು. ಆದರೆ, ಸಾಕಷ್ಟು ಸಂಖ್ಯೆಲ್ಲಿ ಮತಾಂತರ ನಡೆದಿದೆ ಎಂದು ಚಿತ್ರತಂಡ ಹೇಳಿಕೊಂಡಿತ್ತು. ಕೆಲ ದಿನಗಳ ಹಿಂದೆ ನಡೆದ ಮಾಧ್ಯಮ ಗೋಷ್ಠಿಗೆ 26 ಯುವತಿಯರನ್ನು ಕರೆತಂದಿದ್ದರು ನಿರ್ದೇಶಕ ಸುದೀಪ್ತೋ ಸೇನ್.

  • ಒಂದೇ ಸಿನಿಮಾದಲ್ಲಿ ರಜನಿಕಾಂತ್-ಕಮಲ್ ಹಾಸನ್

    ಒಂದೇ ಸಿನಿಮಾದಲ್ಲಿ ರಜನಿಕಾಂತ್-ಕಮಲ್ ಹಾಸನ್

    ಮಿಳು ಸಿನಿಮಾ ರಂಗದಿಂದ ಭರ್ಜರಿ ಸುದ್ದಿಯೊಂದು ಸಿಕ್ಕಿದೆ. ಇಬ್ಬರು ಹೆಸರಾಂತ ಸ್ಟಾರ್ ನಟರು ಒಂದೇ ಸಿನಿಮಾಗಾಗಿ ಕೆಲಸ ಮಾಡುತ್ತಿದ್ದಾರೆ. ಈ ಸುದ್ದಿ ಅಭಿಮಾನಿಗಳ ಪಾಲಿಗೆ ಹಬ್ಬದಂತಿದೆ. ಹೌದು, ಸೂಪರ್ ಸ್ಟಾರ್ ರಜನಿಕಾಂತ್ (Rajinikanth) ಹಾಗೂ ಹೆಸರಾಂತ ಸ್ಟಾರ್ ನಟ ಕಮಲ್ ಹಾಸನ್ (Kamal Haasan) ಒಂದೇ ಸಿನಿಮಾದಲ್ಲಿ ಕೆಲಸ ಮಾಡುತ್ತಿದ್ದಾರೆ. ಆದರೆ, ಒಬ್ಬರು ನಟರಾಗಿದ್ದರೆ ಮತ್ತೊಬ್ಬರು ನಿರ್ಮಾಪಕರಾಗಲಿದ್ದಾರೆ.

    ಹೌದು, ಮೊನ್ನೆಯಷ್ಟೇ ಇಂಥದ್ದೊಂದು ಸಿಹಿ ಸುದ್ದಿಯನ್ನು ಕಮಲ್ ಹಾಸನ್ ಹಂಚಿಕೊಂಡಿದ್ದು, ರಜನಿಕಾಂತ್ ಆಗಿ ಸಿನಿಮಾವೊಂದನ್ನು ನಿರ್ಮಾಣ ಮಾಡಬೇಕಿದೆ. ಈ ಕುರಿತು ಮಾತುಕತೆ ನಡೆಯುತ್ತಿದೆ ಎಂದು ಹೇಳಿಕೊಂಡಿದ್ದಾರೆ. ತಲೈವ ಸದ್ಯ ಜೈಲರ್ ಸಿನಿಮಾದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ. ಈ ನಡುವೆ ಅವರ 170ನೇ ಸಿನಿಮಾ ಅನೌನ್ಸ್ ಕೂಡ ಆಗಿದೆ. ಈ ಸಂಭ್ರಮದಲ್ಲಿ ಮತ್ತೊಂದು ಸಿಹಿ ಸುದ್ದಿ ನೀಡಿದ್ದಾರೆ ಕಮಲ್.

    ಒಂದು ಕಡೆ ಕಮಲ್ ಹಾಸನ್ ಮತ್ತು ರಜನಿಕಾಂತ್ ಒಂದು ಗೂಡುತ್ತಿದ್ದರೆ, ಮತ್ತೊಂದು ಕಡೆ  ಕಾಲಿವುಡ್ ಸೂಪರ್ ಸ್ಟಾರ್ ತಲೈವಾ ಮುಂದೆ ಅಬ್ಬರಿಸಲು ಸ್ಟಾರ್ ನಟನಿಗೆ ಮಣೆ ಹಾಕಿದ ಸುದ್ದಿಯೂ ಬಂದಿದೆ. ರಜನಿ 170ನೇ ಚಿತ್ರಕ್ಕೆ ಚಿಯಾನ್ ವಿಕ್ರಮ್ (Vikram Chian)  ಎಂಟ್ರಿ ಕೊಡುತ್ತಿದ್ದಾರೆ. ತಲೈವಾಗೆ ವಿಲನ್ ಆಗಿ ಖಡಕ್ ಆಗಿ ನಟಿಸಲಿದ್ದಾರೆ. ಇದನ್ನೂ ಓದಿ:ಪಿಎಚ್‌ಡಿ ಪ್ರವೇಶ ಪರೀಕ್ಷೆ ಬರೆದ ನಟಿ ಪವಿತ್ರಾ ಲೋಕೇಶ್

    ವಿಕ್ರಮ್ ಅವರು ಕಾಲಿವುಡ್‌ನ ಬೇಡಿಕೆಯ ಹೀರೋ. ವೃತ್ತಿ ಜೀವನದಲ್ಲಿ ಅವರು ಹಲವು ಡಿಫರೆಂಟ್ ರೋಲ್‌ಗಳನ್ನು ಮಾಡಿ ಭೇಷ್ ಎನಿಸಿಕೊಂಡಿದ್ದಾರೆ. ಹಾಗಾಗಿ ವಿಲನ್ (Villain) ಪಾತ್ರ ಮಾಡಲು ತಲೈವಾ ಚಿತ್ರಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಅದಕ್ಕಾಗಿ 50 ಕೋಟಿ ರೂಪಾಯಿ ಪೇಮೆಂಟ್ ಪಡೆದಿದ್ದಾರೆ ಎನ್ನಲಾಗುತ್ತಿದೆ.

     

    ‘ತಲೈವರ್ 170’ನೇ ಚಿತ್ರಕ್ಕೆ ಟಿಜಿ ಜ್ಞಾನವೇಲ್ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಲೈಕಾ ಪ್ರೊಡಕ್ಷನ್ (Lyca Productions)  ಬಂಡವಾಳ ಹೂಡುತ್ತಿದೆ. ತಮಿಳುನಾಡಿನಲ್ಲಿ ಹಲವು ಬಿಗ್ ಬಜೆಟ್ ಚಿತ್ರಗಳನ್ನು ನಿರ್ಮಿಸಿದ ಖ್ಯಾತಿ ಲೈಕಾ ಈಗ ರಜನಿಕಾಂತ್ 170ನೇ ಚಿತ್ರ ನಿರ್ಮಾಣ¨ ಮಾಡ್ತಿದ್ದಾರೆ.

  • ‘ಬಾಹುಬಲಿ’ ಪ್ರಭಾಸ್‌ಗೆ ಸ್ಟಾರ್ ನಟ ಕಮಲ್ ಹಾಸನ್ ವಿಲನ್

    ‘ಬಾಹುಬಲಿ’ ಪ್ರಭಾಸ್‌ಗೆ ಸ್ಟಾರ್ ನಟ ಕಮಲ್ ಹಾಸನ್ ವಿಲನ್

    ಬಾಹುಬಲಿ ಸೂಪರ್ ಸ್ಟಾರ್ ಪ್ರಭಾಸ್ (Prabhas)- ದೀಪಿಕಾ ಪಡಕೋಣೆ (Deepika Padukone) ನಟನೆಯ ಬಹುನಿರೀಕ್ಷಿತ ಸಿನಿಮಾ ‘ಪ್ರಾಜೆಕ್ಟ್ ಕೆ’ ಚಿತ್ರಕ್ಕೆ ತಮಿಳಿನ ಸ್ಟಾರ್ ನಟ ಸಾಥ್ ನೀಡುತ್ತಿದ್ದಾರೆ. ‘ವಿಕ್ರಮ್’ ಸಿನಿಮಾದ ಹೀರೋ ಕಮಲ್ ಹಾಸನ್, ಪ್ರಭಾಸ್ ಮುಂದೆ ಅಬ್ಬರಿಸಲಿದ್ದಾರೆ.

    ಪ್ರಭಾಸ್ ಮತ್ತು ಕನ್ನಡತಿ ದೀಪಿಕಾ ಪಡುಕೋಣೆ ನಟನೆಯ ‘ಪ್ರಾಜೆಕ್ಟ್ ಕೆ’ (Project K) ಸಿನಿಮಾದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಪ್ರಭಾಸ್, ದೀಪಿಕಾ ಜೊತೆ ಬಾಲಿವುಡ್ ಸ್ಟಾರ್ ನಟ ಅಮಿತಾಭ್ ಬಚ್ಚನ್ ಕೂಡ ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದಾರೆ. ಬಿಗ್ ಬಿ ಬೆನ್ನಲ್ಲೇ ಕಮಲ್ ಹಾಸನ್ (Kamal Haasan) ಕೂಡ ಎಂಟ್ರಿ ಕೊಡಲಿದ್ದಾರೆ ಎಂದು ಹೇಳಲಾಗುತ್ತಿದೆ.

    ‘ಪ್ರಾಜೆಕ್ಟ್ ಕೆ’ ಸಿನಿಮಾ ಈಗಾಗಲೇ 70ರಷ್ಟು ಚಿತ್ರೀಕರಣವಾಗಿದೆ. ಚಿತ್ರತಂಡದವರು ಕಮಲ್ ಹಾಸನ್ ಅವರನ್ನ ಸಂಪರ್ಕಿಸಿ ಅವರ ಪಾತ್ರದ ಬಗ್ಗೆ ಕಥೆ ಹೇಳಲಾಗಿದೆ. ಒಂದು ಸುತ್ತಿನ ಮಾತುಕತೆ ಕೂಡ ನಡೆದಿದೆ. ಆದರೆ ಕಮಲ್ ಹಾಸನ್ ಚಿತ್ರಕ್ಕೆ ಓಕೆ ಎಂದಿರೋದರ ಬಗ್ಗೆ ಅಧಿಕೃತ ಅಪ್‌ಡೇಟ್ ಸಿಕ್ಕಿಲ್ಲ. ಎಲ್ಲಾ ಓಕೆ ಆದರೆ, ಪ್ರಭಾಸ್ ಮುಂದೆ ಖಡಕ್ ವಿಲನ್ ಆಗಿ ಕಮಲ್ ಹಾಸನ್ ಅಬ್ಬರಿಸಲಿದ್ದಾರೆ. ಅವರ ಪಾತ್ರಕ್ಕೂ ಬಹಳಷ್ಟು ಪ್ರಾಮುಖ್ಯತೆ ಇದೆ. ಇದನ್ನೂ ಓದಿ:ಸಮಂತಾ ನಟನೆಯ ಹಾಲಿವುಡ್ ಸಿನಿಮಾಗೆ ಟೈಟಲ್ ಫಿಕ್ಸ್

    ನಾಗ್‌ ಅಶ್ವೀನ್‌ (Nag Ashwin) ನಿರ್ದೇಶನದ ಈ ಸಿನಿಮಾದಲ್ಲಿ ನಟಿಸಲು 150 ಕೋಟಿ ರೂಪಾಯಿ ಸಂಭಾವನೆಯನ್ನ ಕಮಲ್ ಹಾಸನ್ ಡಿಮ್ಯಾಂಡ್ ಮಾಡಿದ್ದಾರಂತೆ. ಎಲ್ಲವೂ ಸರಿಹೋದಲ್ಲಿ ಕಮಲ್ ಹಾಸನ್ ಕೂಡ ಈ ಚಿತ್ರದ ಭಾಗವಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಅಧಿಕೃತ ಅಪ್‌ಡೇಟ್‌ಗಾಗಿ ಕಾದುನೋಡಬೇಕಿದೆ.

  • `ಕರ್ಣನ್, ಜೈ ಭೀಮ್’ ಸಿನಿಮಾ ಜಾತಿ ವಿರೋಧಿ ಪ್ರಾಪಗಾಂಡ ಎಂದು ಪರಿಗಣಿಸಬಹುದಲ್ಲವೇ? – ನಟ ಚೇತನ್‌ ಪ್ರಶ್ನೆ

    `ಕರ್ಣನ್, ಜೈ ಭೀಮ್’ ಸಿನಿಮಾ ಜಾತಿ ವಿರೋಧಿ ಪ್ರಾಪಗಾಂಡ ಎಂದು ಪರಿಗಣಿಸಬಹುದಲ್ಲವೇ? – ನಟ ಚೇತನ್‌ ಪ್ರಶ್ನೆ

    ಬೆಂಗಳೂರು: ʻದಿ ಕೇರಳ ಸ್ಟೋರಿʼ (The Kerala Story) ಅದೊಂದು ಪ್ರಾಪಗಾಂಡ ಸಿನಿಮಾ ಎಂದು ಟೀಕಿಸಿದ್ದ ನಟ ಕಮಲ್‌ ಹಾಸನ್‌ (Kamal Haasan) ಹೇಳಿಕೆಗೆ ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್‌ (Chetan Kumar) ಪ್ರತಿಕ್ರಿಯಿಸಿದ್ದಾರೆ.

    ಈ ಕುರಿತು ತಮ್ಮ ಫೇಸ್‌ಬುಕ್‌ ವಾಲ್‌ನಲ್ಲಿ ಬರೆದುಕೊಂಡಿರುವ ನಟ, ‘ದಿ ಕೇರಳ ಸ್ಟೋರಿ’ಗೆ ಪ್ರತಿಕ್ರಿಯಿಸಿರುವ ನಟ ಕಮಲ್ ಹಾಸನ್, ‘ನಾನು ಪ್ರಾಪಗಾಂಡ ಚಿತ್ರಗಳ ವಿರುದ್ಧ ಇದ್ದೇನೆ’ ಎಂದಿದ್ದಾರೆ. ನಾವು ರಾಜಕೀಯವಾಗಿ/ಸೈದ್ಧಾಂತಿಕವಾಗಿ ವಿರೋಧಿಸುವುದನ್ನು ಪ್ರಾಪಗಾಂಡ ಎಂದು ಕರೆಯುತ್ತೇವೆ. ‘ಕರ್ಣನ್’ ಮತ್ತು ‘ಜೈ ಭೀಮ್’ ಅನ್ನು ಜಾತಿ ವಿರೋಧಿ ಅಥವಾ ಪೊಲೀಸ್ ವಿರೋಧಿ ಪ್ರಾಪಗಾಂಡ ಎಂದು ಪರಿಗಣಿಸಬಹುದಲ್ಲವೇ? ಬಲವಾದ ಪ್ರಜಾಪ್ರಭುತ್ವಕ್ಕಾಗಿ, ವಿಭಿನ್ನ ಸಿದ್ಧಾಂತಗಳು ಕೂಡ ಅಸ್ತಿತ್ವದಲ್ಲಿ ಇರಬೇಕು/ ಇರುತ್ತವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ದಿ ಕೇರಳ ಸ್ಟೋರಿ ವಿರೋಧಿಸಿ ಮಾತನಾಡಿದ ಕಮಲ್ ಹಾಸನ್

    ಅಬುಧಾಬಿಯಲ್ಲಿ ನಡೆದ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗಿಯಾಗಿದ್ದ ನಟ ಕಮಲ್‌ ಹಾಸನ್‌, ‘ನಾನು ದಿ ಕೇರಳ ಸ್ಟೋರಿ ಸಿನಿಮಾವನ್ನು ವಿರೋಧಿಸುತ್ತಲೇ ಬಂದಿದ್ದೇನೆ. ಅದಕ್ಕಾಗಿ ನನ್ನನ್ನೂ ವಿರೋಧಿಸಿದ್ದಾರೆ. ಸಿನಿಮಾದಲ್ಲಿ ಸತ್ಯ ಘಟನೆ ಆಧರಿಸಿದ ಸಿನಿಮಾ ಎಂದು ಹೇಳಿದರೆ ಸಾಲದು. ಅದರಲ್ಲಿ ಸತ್ಯ ಇರಬೇಕು’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: ಅಭಿ-ಅವಿ ಮ್ಯಾರೇಜ್ : ಬೆಂಗಳೂರಿನಲ್ಲಿ ಮದುವೆ, ಮಂಡ್ಯದಲ್ಲಿ ಬೀಗರ ಊಟ

    ‘ದಿ ಕೇರಳ ಸ್ಟೋರಿ’ ಸಿನಿಮಾದ ಕಥೆಯೇ ಬೋಗಸ್ ಎಂದು ಹಲವರು ಈಗಾಗಲೇ ವಾದ ಮಾಡಿದ್ದಾರೆ. ಅವರು ಹೇಳಿದ ಪ್ರಮಾಣದಲ್ಲಿ ಮಹಿಳೆಯರು ಇಸ್ಲಾಂ ಮೂಲಭೂತವಾದಕ್ಕೆ ಸಿಲುಕಿಲ್ಲ ಎಂದು ಚರ್ಚೆ ಮಾಡಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಸಿನಿಮಾ ಟೀಮ್ ಮಾಧ್ಯಮಗೋಷ್ಠಿ ನಡೆಸಿ, ಅಲ್ಲಿಗೆ ಸಂತ್ರಸ್ತರನ್ನು ಕರೆತಂದಿದ್ದರು. ಒಬ್ಬೊಬ್ಬರ ಕಥೆಯನ್ನು ಸಿನಿಮಾ ಟೀಮ್ ಮಾಧ್ಯಮಗಳ ಮುಂದೆ ಬಿಚ್ಚಿಟ್ಟಿತು.

    ದಿ ಕೇರಳ ಸ್ಟೋರಿಯ ಟ್ರೈಲರ್ ರಿಲೀಸ್ ಆದ ಸಂದರ್ಭದಲ್ಲಿ ಒಟ್ಟು 32 ಸಾವಿರ ಯುವತಿಯರ ಮತಾಂತರ ಮಾಡಲಾಗಿದೆ ಎಂದು ಹೇಳಿತ್ತು. ಅಂಕಿ ಸಂಖ್ಯೆಯ ಕುರಿತು ವ್ಯಾಪಕ ಟೀಕೆ ಬಂದ ಬೆನ್ನಲ್ಲೇ ಸಂಖ್ಯೆಯ ವಿಚಾರವನ್ನು ಸಿನಿಮಾದಿಂದಲೇ ಕೈ ಬಿಡಲಾಯಿತು. ಆದರೆ, ಸಾಕಷ್ಟು ಸಂಖ್ಯೆಯಲ್ಲಿ ಮತಾಂತರ ನಡೆದಿದೆ ಎಂದು ಚಿತ್ರತಂಡ ಹೇಳಿಕೊಂಡಿತ್ತು. ಎರಡು ದಿನಗಳ ಹಿಂದೆ ನಡೆದ ಮಾಧ್ಯಮ ಗೋಷ್ಠಿಗೆ 26 ಯುವತಿಯರನ್ನು ಕರೆತಂದಿದ್ದರು ನಿರ್ದೇಶಕ ಸುದೀಪ್ತೋ ಸೇನ್.

  • ದಿ ಕೇರಳ ಸ್ಟೋರಿ ವಿರೋಧಿಸಿ ಮಾತನಾಡಿದ ಕಮಲ್ ಹಾಸನ್

    ದಿ ಕೇರಳ ಸ್ಟೋರಿ ವಿರೋಧಿಸಿ ಮಾತನಾಡಿದ ಕಮಲ್ ಹಾಸನ್

    ಬಾಕ್ಸ್ ಆಫೀಸಿನಲ್ಲಿ ಇನ್ನೂರಕ್ಕೂ ಹೆಚ್ಚು ಕೋಟಿ ರೂಪಾಯಿ ಕಲೆಕ್ಷನ್ ಮಾಡಿ, ಇನ್ನೂ ಹಲವಾರು ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿರುವ ದಿ ಕೇರಳ ಸ್ಟೋರಿ ಬಗ್ಗೆ ಕಮಲ್ ಹಾಸನ್ (Kamal Haasan) ಮಾತನಾಡಿದ್ದಾರೆ. ಅದೊಂದು ಪ್ರೊಪಗಾಂಡ ಸಿನಿಮಾ ಎಂದು ಟೀಕಿಸಿದ್ದಾರೆ. ಸತ್ಯವನ್ನು ಹೇಳದೇ ಅಸತ್ಯವನ್ನೇ ತುಂಬಿರುವಂತಹ ಚಿತ್ರವದು ಎಂದು ಮಾತನಾಡಿದ್ದಾರೆ.

    ಸದ್ಯ ಕಮಲ್ ಹಾಸನ್ ಅಬುಧಾಬಿಯಲ್ಲಿ ನಡೆಯುತ್ತಿರುವ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗಿಯಾಗಿದ್ದಾರೆ. ಈ ಸಂದರ್ಭದಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಅವರು, ‘ನಾನು ದಿ ಕೇರಳ ಸ್ಟೋರಿ ಸಿನಿಮಾವನ್ನು ವಿರೋಧಿಸುತ್ತಲೇ ಬಂದಿದ್ದೇನೆ. ಅದಕ್ಕಾಗಿ ನನ್ನನ್ನೂ ವಿರೋಧಿಸಿದ್ದಾರೆ. ಸಿನಿಮಾದಲ್ಲಿ ಸತ್ಯ ಘಟನೆ ಆಧರಿಸಿದ ಸಿನಿಮಾ ಎಂದು ಹೇಳಿದರೆ ಸಾಲದು. ಅದರಲ್ಲಿ ಸತ್ಯ ಇರಬೇಕು’ ಎಂದು ಪ್ರತಿಕ್ರಿಯಿಸಿದ್ದಾರೆ.

    ದಿ ಕೇರಳ ಸ್ಟೋರಿ’ (The Kerala Story) ಸಿನಿಮಾದ ಕಥೆಯೇ ಬೋಗಸ್ ಎಂದು ಹಲವರು ಈಗಾಗಲೇ ಹಲವರು ವಾದ ಮಾಡಿದ್ದಾರೆ. ಅವರು ಹೇಳಿದ ಪ್ರಮಾಣದಲ್ಲಿ ಮಹಿಳೆಯರು ಇಸ್ಲಾಂ ಮೂಲಭೂತವಾದಕ್ಕೆ ಸಿಲುಕಿಲ್ಲ ಎಂದು ಚರ್ಚೆ ಮಾಡಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಸಿನಿಮಾ ಟೀಮ್ ಮಾಧ್ಯಮಗೋಷ್ಠಿ ನಡೆಸಿ, ಅಲ್ಲಿಗೆ ಸಂತ್ರಸ್ತರನ್ನು ಕರೆತಂದಿದ್ದರು. ಒಬ್ಬೊಬ್ಬರ ಕಥೆಯನ್ನು ಸಿನಿಮಾ ಟೀಮ್ ಮಾಧ್ಯಮಗಳ ಮುಂದೆ ಬಿಚ್ಚಿಟ್ಟಿತು. ಇದನ್ನೂ ಓದಿ:ಹುಟ್ಟುಹಬ್ಬದ ಸಂಭ್ರಮದಲ್ಲಿ ‘ಹೊಯ್ಸಳ’ ಬಲಿ- ಫ್ಯಾನ್ಸ್‌ಗೆ ಸಿಕ್ತು ಸಿಹಿಸುದ್ದಿ

    ದಿ ಕೇರಳ ಸ್ಟೋರಿಯ ಟ್ರೈಲರ್ ರಿಲೀಸ್ ಆದ ಸಂದರ್ಭದಲ್ಲಿ ಒಟ್ಟು 32 ಸಾವಿರ ಯುವತಿಯರ ಮತಾಂತರ ಮಾಡಲಾಗಿದೆ ಎಂದು ಹೇಳಿತ್ತು. ಅಂಕಿ ಸಂಖ್ಯೆಯ ಕುರಿತು ವ್ಯಾಪಕ ಟೀಕೆ ಬಂದ ಬೆನ್ನಲ್ಲೇ ಸಂಖ್ಯೆಯ ವಿಚಾರವನ್ನು ಸಿನಿಮಾದಿಂದಲೇ ಕೈ ಬಿಡಲಾಯಿತು. ಆದರೆ, ಸಾಕಷ್ಟು ಸಂಖ್ಯೆಲ್ಲಿ ಮತಾಂತರ ನಡೆದಿದೆ ಎಂದು ಚಿತ್ರತಂಡ ಹೇಳಿಕೊಂಡಿತ್ತು. ಎರಡು ದಿನಗಳ ಹಿಂದೆ ನಡೆದ ಮಾಧ್ಯಮ ಗೋಷ್ಠಿಗೆ 26 ಯುವತಿಯರನ್ನು ಕರೆತಂದಿದ್ದರು ನಿರ್ದೇಶಕ ಸುದೀಪ್ತೋ ಸೇನ್.

    ಸಂತ್ರಸ್ತೆ (Victim) ಯುವತಿಯೊಬ್ಬಳು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿ , ‘ದಿ ಕೇರಳ ಸ್ಟೋರಿ ಸಿನಿಮಾದಲ್ಲಿ ಅದಾ ಶರ್ಮಾ (Adah Sharma) ಮಾಡಿದ ಪಾತ್ರಕ್ಕೂ ನನ್ನ ಜೀವನಕ್ಕೂ ಅಷ್ಟೇನೂ ವ್ಯತ್ಯಾಸವಿಲ್ಲ. ಅದಾ ಶರ್ಮಾ ಮಾಡಿದ ಪಾತ್ರ ನೂರಕ್ಕೂ ನೂರು ನನ್ನನ್ನೇ ಹೋಲುತ್ತದೆ. ಮನೆಯಲ್ಲಿ ಕೆಳಗೆ ಪೂಜೆ ನಡೆಯುತ್ತಿದ್ದರೆ, ಟೆರೇಸ್ ಮೇಲೆ ನಾನು ನಮಾಜ್ ಮಾಡುತ್ತಿದ್ದೆ. ಅಷ್ಟರ ಮಟ್ಟಿಗೆ ಪರಿವರ್ತನೆ ಮಾಡಿದ್ದರುಎಂದು ಹೇಳಿಕೊಂಡರು.

  • ಸಿದ್ದು-ಡಿಕೆ ಪಟ್ಟಾಭಿಷೇಕಕ್ಕೆ ತಾರಾ ಮೆರುಗು

    ಸಿದ್ದು-ಡಿಕೆ ಪಟ್ಟಾಭಿಷೇಕಕ್ಕೆ ತಾರಾ ಮೆರುಗು

    ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಮತ್ತು ಜಿ. ಪರಮೇಶ್ವರ್ ಸೇರಿದಂತೆ ಎಂಟು ಜನರು ಮಂತ್ರಿಗಳಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದರು. ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಡೆದ ವರ್ಣರಂಜಿತ ಕಾರ್ಯಕ್ರಮದಲ್ಲಿ ಸ್ಯಾಂಡಲ್ ವುಡ್ ತಾರೆಯರು ಪಾಲ್ಗೊಂಡು, ತಾರಾ ಮೆರುಗು ನೀಡಿದರು.

    ನಟ ಶಿವರಾಜ್ ಕುಮಾರ್, ತಮಿಳಿನ ಖ್ಯಾತ ನಟ ಕಮಲ್ ಹಾಸನ್,  ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ, ನಟಿ ನಿಶ್ವಿಕಾ ನಾಯ್ಡು, ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು, ನಟರಾದ ಸಾಧು ಕೋಕಿಲಾ, ದುನಿಯಾ ವಿಜಯ್, ಹಿರಿಯ ನಟಿ ಉಮಾಶ್ರೀ ಸೇರಿದಂತೆ ಹಲವರು ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದ್ದರು. ಇದನ್ನೂ ಓದಿ: ಹಳ್ಳಿಗಾಡಿನ ಜೀವನ, ದನ ಕಾಯುತ್ತಿದ್ದ ಹುಡುಗನಿಂದ ಮುಖ್ಯಮಂತ್ರಿ ಗಾದಿವರೆಗೆ; ಸಿದ್ದರಾಮಯ್ಯ ಸಾಗಿಬಂದ ಹಾದಿ..

    ಈ ಬಾರಿ ಚುನಾವಣೆಯಲ್ಲೂ ಶಿವರಾಜ್ ಕುಮಾರ್, ದುನಿಯಾ ವಿಜಯ್, ಸಾಧುಕೋಕಿಲಾ, ನಿಶ್ವಿಕಾ ನಾಯ್ಡು, ರಮ್ಯಾ ಸೇರಿದಂತೆ ಹಲವರು ಪ್ರಚಾರದಲ್ಲೂ ಪಾಲ್ಗೊಂಡಿದ್ದರು. ಕೆಲವರು ಸಿದ್ದರಾಮಯ್ಯನವರ ಪರವಾಗಿ ಪ್ರಚಾರದಲ್ಲಿ ತೊಡಗಿದ್ದರೆ, ಇನ್ನೂ ಹಲವರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಿದ್ದರು.

    ಇಂತಹ ಐತಿಹಾಸಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕಮಲ್ ಹಾಸನ್ ಬಂದಿದ್ದು ವಿಶೇಷವಾಗಿತ್ತು. ಈ ಹಿಂದೆ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಭಾರತ್ ಜೋಡೋ ಯಾತ್ರೆಯಲ್ಲೂ ಕಮಲ್ ಭಾಗಿಯಾಗಿದ್ದರು. ಈ ಯಾತ್ರೆಗೆ ಅವರು ಬೆಂಬಲವನ್ನೂ ಸೂಚಿಸಿದ್ದರು.

  • ತಮಿಳು ನಟ ಸಿಂಬುಗೆ ಜೋಡಿಯಾಗಲಿದ್ದಾರೆ ದೀಪಿಕಾ ಪಡುಕೋಣೆ

    ತಮಿಳು ನಟ ಸಿಂಬುಗೆ ಜೋಡಿಯಾಗಲಿದ್ದಾರೆ ದೀಪಿಕಾ ಪಡುಕೋಣೆ

    ಮಿಳು (Tamil) ಚಿತ್ರೋದ್ಯಮದಿಂದ ಅಚ್ಚರಿ ಪಡುವಂತಹ ಸುದ್ದಿಯೊಂದು ಬಂದಿದೆ. ಬಾಲಿವುಡ್ ನ ಖ್ಯಾತ ನಟಿ ದೀಪಿಕಾ ಪಡುಕೋಣೆ (Deepika Padukone) ತಮಿಳು ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ. ಸಿಂಬು (Simbu) ಜೋಡಿಯಾಗಿ ಅವರು ನಟಿಸುತ್ತಿದ್ದು, ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ.

    ಈ ಸಿನಿಮಾದ ಮತ್ತೊಂದು ವಿಶೇಷವೆಂದರೆ, ತಮಿಳಿನ ಖ್ಯಾತ ನಟ ಕಮಲ್ ಹಾಸನ್ (Kamal Haasan) ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ಕಮಲ್ ಪ್ರೊಡಕ್ಷನ್ ಹೌಸ್ ಈ ಚಿತ್ರವನ್ನು ನಾಡಿಗೆ ಅರ್ಪಿಸುತ್ತಿದೆ. ಇದೇ ಮೊದಲ ಬಾರಿಗೆ ದೀಪಿಕಾ ಪಡುಕೋಣೆ ಮತ್ತು ಸಿಂಬು ತೆರೆಯ ಮೇಲೆ ಕಾಣಿಸಿಕೊಳ್ಳಲಿದ್ದು, ಈ ಜೋಡಿ ಸಖತ್ ಮೋಡಿ ಮಾಡಲಿದೆ ಎಂದು ಅಭಿಮಾನಿಗಳು ಕಾಮೆಂಟ್ ಮಾಡುತ್ತಿದ್ದಾರೆ.

    ಮತ್ತೊಂದು ಮೂಲಗಳ ಪ್ರಕಾರ ಸಿಂಬುಗಿಂತಲೂ ದೀಪಿಕಾ ಪಡುಕೋಣೆಗೆ ಹೆಚ್ಚು ಸಂಭಾವನೆ ನೀಡಲಾಗಿದೆಯಂತೆ. ಇದೊಂದು ಪ್ಯಾನ್ ಇಂಡಿಯಾ ಸಿನಿಮಾವಾಗಿದ್ದರಿಂದ ಅತೀ ಹೆಚ್ಚು ಸಂಭಾವನೆಯನ್ನು ಅವರು ಪಡೆಯಲಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ಈ ಕುರಿತು ಚಿತ್ರತಂಡವಾಗಲಿ ಅಥವಾ ದೀಪಿಕಾವಾಗಲಿ ಅಧಿಕೃತವಾಗಿ ಹೇಳಿಕೆ ನೀಡಿಲ್ಲ. ಇದನ್ನೂ ಓದಿ:ಮಗಳ ಭವಿಷ್ಯಕ್ಕಾಗಿ ದೇಶ ಬಿಡಲು ಸಿದ್ಧ ಎಂದ ಪ್ರಿಯಾಂಕಾ ಚೋಪ್ರಾ

    ಸದ್ಯ ದೀಪಿಕಾ ಪಡುಕೋಣೆ ಪ್ರಾಜೆಕ್ಟ್ ಕೆ ಸಿನಿಮಾದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದು, ಈ ಸಿನಿಮಾದಲ್ಲಿ ಪ್ರಭಾಸ್ (Prabhas) ಜೊತೆ ದೀಪಿಕಾ ನಟಿಸುತ್ತಿದ್ದಾರೆ. ಇದು ಕೂಡ ಪ್ಯಾನ್ ಇಂಡಿಯಾ ಸಿನಿಮಾವಾಗಿದ್ದು, ಅದ್ಧೂರಿಯಾಗಿ ತಯಾರಾಗುತ್ತಿದೆ. ಈ ಸಿನಿಮಾದಲ್ಲಿ ಪ್ರಭಾಸ್ ಜೊತೆ ದೀಪಿಕಾ ಮೊದಲ ಬಾರಿಗೆ ತೆರೆ ಹಂಚಿಕೊಂಡಿದ್ದಾರೆ.

  • ವಿಧಾನಸಭೆ ಚುನಾವಣೆ: ಕಾಂಗ್ರೆಸ್ ಗೆಲುವಿಗೆ ಸ್ಯಾಂಡಲ್ ವುಡ್ ಜೈ ಹೋ

    ವಿಧಾನಸಭೆ ಚುನಾವಣೆ: ಕಾಂಗ್ರೆಸ್ ಗೆಲುವಿಗೆ ಸ್ಯಾಂಡಲ್ ವುಡ್ ಜೈ ಹೋ

    ಬಾರಿಯ ವಿಧಾನಸಭೆ ಚುನಾವಣೆಯಲ್ಲಿ 135 ಸೀಟುಗಳನ್ನು ಗೆಲ್ಲಿಸುವ ಮೂಲಕ ಮತದಾರ ಕಾಂಗ್ರೆಸ್ (Congress) ಪಕ್ಷಕ್ಕೆ ಬಹುಮತ ಘೋಷಣೆ ಮಾಡಿದ್ದಾನೆ. ಐದು ವರ್ಷದ ಮಹಾ ಅಜ್ಞಾತವಾಸವನ್ನು ಮುಗಿಸಿಕೊಂಡು ಕಾಂಗ್ರೆಸ್ ನಾಯಕರು ಅಧಿಕಾರದ ಗದ್ದುಗೆ ಏರಲು ಸಜ್ಜಾಗಿದ್ದಾರೆ. ಬಿಜೆಪಿ ಪರವಾಗಿ ಸ್ಟಾರ್ ನಟರು ಕ್ಯಾಂಪೇನ್ ಮಾಡಿದರೂ, ಅಂದುಕೊಂಡಷ್ಟು ಸೀಟು ಗೆಲ್ಲಲಿಲ್ಲ ಎನ್ನುವ ನೋವಿನ ನಡುವೆಯೂ ಕೆಲ ನಟ ನಟಿಯರು ಹಾಗೂ ನಿರ್ದೇಶಕರು ಕಾಂಗ್ರೆಸ್ ಪಕ್ಷದ ಗೆಲುವಿನ ಬಗ್ಗೆ ತಮ್ಮದೇ ಆದ ರೀತಿಯಲ್ಲಿ ಕಾಮೆಂಟ್ ಮಾಡಿದ್ದಾರೆ.

    ರಾಜಕಾರಣದಲ್ಲಿ ಗುರುತಿಸಿಕೊಂಡಿರುವ ಪ್ರಕಾಶ್ ರಾಜ್ ಮೊದಲಿನಿಂದಲೂ ಬಿಜೆಪಿ ವಿರೋಧಿ ಹೇಳಿಕೆಗಳನ್ನು ಕೊಡುತ್ತಾ ಬಂದಿದ್ದಾರೆ. ಆದರೆ, ಅಚ್ಚರಿ ಎನ್ನುವಂತೆ ಬಿಜೆಪಿ ಸರಕಾರದ ವಿರುದ್ಧ ಕೆಲ ಸ್ಯಾಂಡಲ್ ವುಡ್ ಸೆಲೆಬ್ರಿಟಿಗಳು ಕಿಡಿಕಾರಿದ್ದಾರೆ. ಇನ್ನೂ ಕೆಲವರು ಕಾಂಗ್ರೆಸ್ ಪಕ್ಷದ ಗೆಲುವನ್ನು ಸಂಭ್ರಮಿಸಿದ್ದಾರೆ.

    ಗೂಗ್ಲಿ ಸೇರಿದಂತೆ ಸಾಕಷ್ಟು ಹಿಟ್ ಚಿತ್ರಗಳನ್ನು ಕೊಟ್ಟಿರುವ ನಿರ್ದೇಶಕ ಪವನ್ ಒಡೆಯರ್ (Pawan Wodeyar), ಟ್ವೀಟ್ ಮಾಡಿ, ‘ಸಿಎಂ ಬಸವರಾಜ್ ಬೊಮ್ಮಾಯಿ ಅವರದ್ದು ದುರಹಂಕಾರದ ವ್ಯಕ್ತಿತ್ವ’ ಎಂದಿದ್ದಾರೆ. ‘ಡೊಳ್ಳು ಚಿತ್ರಕ್ಕೆ ರಾಷ್ಟ್ರೀಯ ಪ್ರಶಸ್ತಿ ಬಂದಾಗ ಬೊಮ್ಮಾಯಿ ಮಾಮಗೆ ಚಿತ್ರ ವೀಕ್ಷಿಸಲು ಕೊರಿದ್ದೆವು. ಮಾಮ ತೋರಿದ ದುರಹಂಕಾರ ನನ್ನ ಕಣ್ಣಿನಲ್ಲಿ ಇನ್ನೂ ಹಾಗೆ ಇದೆ. ತೆಲುಗು ಚಿತ್ರದ ಕಾರ್ಯಕ್ರಮಕ್ಕೆ ಮಾಮ 3 ತಾಸು ಕುಳಿತುಕೊಳ್ಳುವಷ್ಟು ಸಮಯವಿದೆ. ಕನ್ನಡಿಗರು ಮುಟ್ಟಾಳರಲ್ಲ’ ಎಂದು ಟ್ವೀಟ್ ಮಾಡಿದ್ದಾರೆ.

    ಕನ್ನಡದಲ್ಲಿ ‘ರಾಮ ಬಾಮಾ ಶ್ಯಾಮ’ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿರುವ ಕಮಲ್ ಹಾಸನ್ (Kamal Haasan) ಕೂಡ ಕಾಂಗ್ರೆಸ್ ಪಕ್ಷಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. ‘ರಾಹುಲ್ ಗಾಂಧಿ ಅವರೆ, ಈ ಅದ್ಭುತ ವಿಜಯಕ್ಕೆ ನಿಮಗೆ ಅಭಿನಂದನೆಗಳು. ಗಾಂಧೀಜಿಯವರಂತೆ ನೀವು ಜನರ ಹೃದಯದೊಳಗೆ ನಡೆದುಕೊಂಡು ಹೋದಿರಿ’ ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.  ಇದನ್ನೂ ಓದಿ: ಸಿದ್ಧಾಂತದ ಸೋಲಲ್ಲ, ವೈಯಕ್ತಿಕ ಸೋಲು: ಸಿ.ಟಿ ರವಿ

    ನಟ ದುನಿಯಾ ವಿಜಯ್ (Dunia Vijay) ಕೂಡ ಟ್ವೀಟ್ ಮಾಡಿದ್ದು, ‘ತಾವು ಪ್ರಜ್ಞಾವಂತ ಮತದಾರರು ಎಂಬುದನ್ನು ಸಾಬೀತುಪಡಿಸಿದ್ದೀರಿ. ಗೆದ್ದವರಿಗೆ ಶುಭಾಶಯಗಳು. ಸೋತವರು ಆತ್ಮವಿಮರ್ಶೆ ಮಾಡಿಕೊಳ್ಳುವ ಕಾಲ. ಸಂಪೂರ್ಣ ಬಹುಮತ ಪಡೆದುಕೊಂಡ ಕಾಂಗ್ರೆಸ್ ಪಕ್ಷಕ್ಕೆ ಶುಭಾಶಯಗಳು. ಸಾಮಾನ್ಯ ಜನ ನೆಮ್ಮದಿಯಿಂದ ಜೀವನ ನಡೆಸುವಂತೆ ಉತ್ತಮ ಆಡಳಿತ ನೀಡಿ’ ಎಂದು ಬರೆದುಕೊಂಡಿದ್ದಾರೆ.

    ನಟ ಶಿವರಾಜ್ ಕುಮಾರ್, ಕಾರುಣ್ಯ ರಾಮ್, ನಿರ್ದೇಶಕ ಮಂಸೋರೆ ಸೇರಿದಂತೆ ಅನೇಕರು ಕಾಂಗ್ರೆಸ್ ಪಕ್ಷದ ಗೆಲುವನ್ನು ಸಂಭ್ರಮಿಸಿದ್ದಾರೆ. ಜೊತೆಗೆ ಉತ್ತಮ ಆಡಳಿತ ಕೊಡಲಿ ಎಂದು ಹಾರೈಸಿದ್ದಾರೆ. ನಿನ್ನೆಯಿಂದಲೂ ಸಾಮಾಜಿಕ ಜಾಲತಾಣಗಳಲ್ಲಿ ಅನೇಕರು ಶುಭಾಶಯಗಳನ್ನು ಹೇಳಿದ್ದು, ಚಿತ್ರೋದ್ಯಮಕ್ಕೂ ಪಕ್ಷ ಸಹಕಾರ ನೀಡಲಿ ಎಂದು ಆಶಿಸಿದ್ದಾರೆ.

  • ಕಮಲ್ ಹಾಸನ್ ನಿರ್ಮಾಣದ ಚಿತ್ರಕ್ಕೆ ಸಾಯಿ ಪಲ್ಲವಿ ನಾಯಕಿ

    ಕಮಲ್ ಹಾಸನ್ ನಿರ್ಮಾಣದ ಚಿತ್ರಕ್ಕೆ ಸಾಯಿ ಪಲ್ಲವಿ ನಾಯಕಿ

    ಸೂಪರ್ ಸ್ಟಾರ್ ಕಮಲ್ ಹಾಸನ್ (Kamal Haasan) ಸಾರಥ್ಯದ ರಾಜ್ ಕಮಲ್ ಫಿಲ್ಮ್ಸ್ಇಂಟರ್ನ್ಯಾಷನಲ್ (RKFI) ನಡಿ ಮೂಡಿ ಬಂದಿದ್ದ ‘ವಿಕ್ರಮ್’ ಸಿನಿಮಾ ಬ್ಲಾಕ್ ಬಸ್ಟರ್ ಹಿಟ್ ಸೇರಿದೆ. ಇದು ರಾಜ್ ಕಮಲ್ ಫಿಲ್ಮ್ಸ್ ಇಂಟರ್ ನ್ಯಾಷನಲ್ ನ 50 ಚಿತ್ರ. ಲೋಕೇಶ್ ಕನಗರಾಜ್ ನಿರ್ದೇಶನದ ಹಾಗೂ ಕಮಲ್ ನಟನೆಯ ವಿಕ್ರಮ್ ಅದ್ಧೂರಿ ಸಕ್ಸಸ್ ಕಂಡಿದೆ. ಈ ಸಕ್ಸಸ್ ಬಳಿಕ ಈ ನಿರ್ಮಾಣ ಸಂಸ್ಥೆಯಡಿ 51 ಚಿತ್ರ ಸೆಟ್ಟೇರಿದೆ. ಮೇಜರ್ ಚಿತ್ರ ನಿರ್ಮಿಸಿದ್ದ ರಾಜ್ ಕಮಲ್ ಫಿಲ್ಮ್ಸ್ ಹಾಗೂ ಸೋನಿ ಪಿಕ್ಚರ್ಸ್ ಇಂಟರ್ನ್ಯಾಷನಲ್ ಪ್ರೊಡಕ್ಷನ್ಸ್ (SPIP) ಮತ್ತೊಂದು ಜೊತೆಗೂಡಿ ಹೊಸ ಸಿನಿಮಾಗೆ ಮುನ್ನುಡಿ ಬರೆದಿದ್ದಾರೆ.

    ತಮಿಳು ಚಿತ್ರರಂಗದ ಖ್ಯಾತ ನಟ ಶಿವ ಕಾರ್ತಿಕೇಯನ್ (Siva Karthikeyan) ನಟಿಸುತ್ತಿರುವ #SK21 ಚಿತ್ರದ ಸಮಾರಂಭ ಚೆನ್ನೈನಲ್ಲಿ ಅದ್ಧೂರಿಯಾಗಿ ನೆರವೇರಿದೆ. ಕಮಲ್ ಹಾಸನ್ ಈ ಸಿನಿಮಾಗೆ ಕ್ಲಾಪ್ ಮಾಡಿ ಶುಭ ಹಾರೈಸಿದ್ದಾರೆ. ಆರ್. ಮಹೇಂದ್ರನ್, ಶಿವಕಾರ್ತಿಕೇಯನ್, ಎಂಎಸ್ ಸಾಯಿ ಪಲ್ಲವಿ, ರಾಜ್ ಕುಮಾರ್ ಪೆರಿಯಸಾಮಿ, ಜಿ.ವಿ ಪ್ರಕಾಶ್, ಸಹ ನಿರ್ಮಾಪಕ ವಕೀಲ್ ಖಾನ್, ಲಾಡಾ ಗುರುಡೆನ್ ಸಿಂಗ್  ಮುಂತಾದವರು ಮುಹೂರ್ತ ಸಮಾರಂಭದಲ್ಲಿ ಉಪಸ್ಥಿತರಿದ್ದರು,

    ರಾಜ್ ಕುಮಾರ್ ಪೆರಿಯಸಾಮಿ (Rajkumar Periasamy) ಕಥೆ ಬರೆದು ನಿರ್ದೇಶಿಸಿದ್ದು, ಶಿವಕಾರ್ತಿಕೇಯನ್ ಅವರನ್ನು ಅವರ ಅಭಿಮಾನಿಗಳು ಹಿಂದೆಂದೂ ನೋಡಿರದ ರೀತಿಯಲ್ಲಿ ದೊಡ್ಡ ಪರದೆಯ ಮೇಲೆ ತರುವ ಪ್ರಯತ್ನದಲ್ಲಿದ್ದಾರೆ. #SK21 ಚಿತ್ರಕ್ಕೆ ಸಾಯಿ ಪಲ್ಲವಿ (Sai Pallavi) ನಾಯಕಿಯಾಗಿ ನಟಿಸ್ತಿದ್ದು, ಕಾಶ್ಮೀರದಲ್ಲಿ ಎರಡು ತಿಂಗಳುಗಳ ಕಾಲ ಶೂಟಿಂಗ್ ನಡೆಸಲು ಚಿತ್ರತಂಡ ಪ್ಲಾನ್ ಹಾಕಿಕೊಂಡಿದೆ. ಇದನ್ನೂ ಓದಿ:ಸಿದ್ದರಾಮಯ್ಯನವರು ಮತ್ತೆ ಸಿಎಂ ಆಗ್ಬೇಕು – ದುನಿಯಾ ವಿಜಯ್

    ಜಿ ವಿ ಪ್ರಕಾಶ್ ಸಂಗೀತ ನಿರ್ದೇಶನ, , ಸಿಎಚ್ ಸಾಯಿ ಛಾಯಾಗ್ರಹಣ, ಆರ್. ಕಲೈವನನ್ ಸಂಕಲನಕಾರ ಮತ್ತು ಸ್ಟೀಫನ್ ರಿಕ್ಟರ್ ಸಾಹಸ ನಿರ್ದೇಶಕ ಚಿತ್ರಕ್ಕಿದೆ. ಗಾಡ್ ಬ್ಲೆಸ್ ಎಂಟರ್‌ಟೈನ್‌ಮೆಂಟ್‌ನ ಸಹ-ನಿರ್ಮಾಣದಲ್ಲಿದೆ ಕೈ ಜೋಡಿಸಿದೆ.

  • ಪ್ರಚಾರಕ್ಕೆ ಬರುವಂತೆ ಕನಿಮೋಳಿ, ಕಮಲ್‌ ಹಾಸನ್‌ಗೆ ಕಾಂಗ್ರೆಸ್‌ ಆಹ್ವಾನ

    ಪ್ರಚಾರಕ್ಕೆ ಬರುವಂತೆ ಕನಿಮೋಳಿ, ಕಮಲ್‌ ಹಾಸನ್‌ಗೆ ಕಾಂಗ್ರೆಸ್‌ ಆಹ್ವಾನ

    ಬೆಂಗಳೂರು: ಕರ್ನಾಟಕ ಚುನಾವಣಾ (Karnataka Election) ಪ್ರಚಾರಕ್ಕೆ ತಮಿಳುನಾಡಿನ ಇಬ್ಬರು ನಾಯಕರಿಗೆ ಕಾಂಗ್ರೆಸ್ ಆಹ್ವಾನ ನೀಡಿದೆ.

    ಡಿಎಂಕೆ ಸಂಸದೆ ಕನಿಮೋಳಿ (Kanimozhi) ಮತ್ತು ತಮಿಳು ಚಿತ್ರ ರಂಗದ ಸೂಪರ್ ಸ್ಟಾರ್ ಕಮಲ್‌ ಹಾಸನ್ (Kamal Haasan) ಅವರಿಗೂ ಆಹ್ವಾನ ನೀಡಿದೆ. ಇದನ್ನೂ ಓದಿ: ರೈತರ ಶೇ.85ರಷ್ಟು ಹಣವನ್ನ ಕಾಂಗ್ರೆಸ್ಸಿನವರೇ ನುಂಗಿ ನೀರು ಕುಡಿದಿದ್ದಾರೆ – ಮೋದಿ ಸಿಡಿಮಿಡಿ

    ತಮಿಳು (Tamil) ಪ್ರಾಬಲ್ಯದ ಬೆಂಗಳೂರು, ಶಿವಮೊಗ್ಗ ಹಾಗೂ ಕೋಲಾರ ಜಿಲ್ಲೆಯಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಬರುವಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಇವರಿಗೆ ಆಹ್ವಾನ ನೀಡಿದ್ದಾರೆ.

    ಬಿಜೆಪಿ ಅಭ್ಯರ್ಥಿಗಳ ಪರ ಈಗಾಗಲೇ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಪ್ರಚಾರ ನಡೆಸುತ್ತಿದ್ದಾರೆ. ಈಗ ಕಾಂಗ್ರೆಸ್‌ ತಮಿಳುನಾಡು ನಾಯಕರ ಮೂಲಕ ಪ್ರಚಾರ ನಡೆಸಲು ಮುಂದಾಗಿದೆ.