Tag: Kamal Haasan

  • ಗೋಡ್ಸೆ ದೇಶಭಕ್ತ, ದೇಶಭಕ್ತರಾಗಿಯೇ ಇರುತ್ತಾರೆ: ಪ್ರಜ್ಞಾಸಿಂಗ್

    ಗೋಡ್ಸೆ ದೇಶಭಕ್ತ, ದೇಶಭಕ್ತರಾಗಿಯೇ ಇರುತ್ತಾರೆ: ಪ್ರಜ್ಞಾಸಿಂಗ್

    ಭೋಪಾಲ್: ನಾಥೂರಾಮ್ ಗೋಡ್ಸೆ ದೇಶಭಕ್ತರು. ಅವರು ದೇಶಭಕ್ತರಾಗಿಯೇ ಜನರ ಮನದಲ್ಲಿ ಇರುತ್ತಾರೆ ಎಂದು ಮಧ್ಯಪ್ರದೇಶದ ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾಸಿಂಗ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

    ಭೋಪಾಲ್‍ನಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿ ಅವರು, ನಾಥೂರಾಮ್ ಗೋಡ್ಸೆ ಬಗ್ಗೆ ಕೆಲವರು ಹಗುರವಾಗಿ ಮಾತನಾಡುತ್ತಿದ್ದಾರೆ. ಅವರನ್ನು ಭಯೋತ್ಪಾದಕ ಎಂದು ಕರೆಯುತ್ತಿದ್ದಾರೆ. ಅಂತವರಿಗೆ ಈ ಚುನಾವಣೆ ಮೂಲಕ ಉತ್ತರ ನೀಡಲಾಗುತ್ತದೆ ಎಂದು ನಟ ಕಮಲ್ ಹಾಸನ್ ವಿರುದ್ಧ ಕಿಡಿಕಾರಿದ್ದಾರೆ.

    ಸಾಧ್ವಿ ಪ್ರಜ್ಞಾಸಿಂಗ್ ಅವರು ಏಪ್ರಿಲ್‍ನಲ್ಲಿ ನಾಥೂರಾಮ್ ಗೋಡ್ಸೆ ವಿಚಾರವಾಗಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಮಹಾತ್ಮ ಗಾಂಧಿ ಅವರನ್ನು ಹತ್ಯೆ ಮಾಡಿದ್ದ ಗೋಡ್ಸೆ ಬದುಕಿದ್ದರೆ ಅವರಿಗೂ ಬಿಜೆಪಿ ಟಿಕೆಟ್ ನೀಡುತಿತ್ತು ಎಂದು ಹೇಳಿದ್ದರು. ಈ ವಿಚಾರವಾಗಿ ಅನೇಕರು ಅಸಮಾಧಾನ ಹೊರ ಹಾಕಿದ್ದರು.

    ಕಮಲ್ ಹಾಸನ್ ಹೇಳಿದ್ದೇನು?:
    ಅಲ್ಪಸಂಖ್ಯಾತರ ಕಾರ್ಯಕ್ರಮದಲ್ಲಿ ಮಾತನಾಡಿದ್ದ ನಟ, ಮಕ್ಕಳ್ ನೀಧಿ ಮಯ್ಯಂ ಪಕ್ಷದ ಸಂಸ್ಥಾಪಕ ಕಮಲ್ ಹಾಸನ್ ಅವರು, ಭಾರತದ ಮೊದಲ ಭಯೋತ್ಪಾದಕ ಹಿಂದೂ. ಆತನ ಹೆಸರು ನಾಥೂರಾಮ್ ಗೋಡ್ಸೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹೇಳಿಕೆ ವಿರುದ್ಧ ದೇಶದಾದ್ಯಂತ ಪರ ವಿರೋಧ ಚರ್ಚೆ ಆರಂಭವಾಗಿದೆ.

    ತಮಿಳುನಾಡಿನ ತಿರುಪ್ಪರಂಕುಂಡ್ರಂ ವಿಧಾನಸಭಾ ಕ್ಷೇತ್ರದಲ್ಲಿ ಬುಧವಾರ ಕಮಲ್ ಹಾಸನ್ ಪ್ರಚಾರ ನಡೆಸುತ್ತಿದ್ದರು. ಈ ವೇಳೆ ಕೆಲ ದುಷ್ಕರ್ಮಿಗಳು ಚಪ್ಪಲಿ ತೂರಿದ್ದಾರೆ. ಅದೃಷ್ಟವಶಾತ್ ಕಮಲ್ ಹಾಸನ್ ಇದ್ದ ವೇದಿಕೆಯವರೆಗೂ ಚಪ್ಪಲಿ ತೂರಿ ಬರದೇ ಅಲ್ಲೇ ಜನರ ಮೇಲೆ ಬಿದ್ದಿದೆ ಎಂದು ವರದಿಯಾಗಿತ್ತು.

    ವಿವಾದಿತ ಹೇಳಿಕೆ ಸಂಬಂಧ ಕಮಲ್‍ಹಾಸನ್ ವಿರುದ್ಧ ಈಗಾಗಲೇ ಪ್ರಕರಣ ದಾಖಲಾಗಿದೆ. ಆದರೆ ಅವರು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದು, ನಾನು ಹೇಳಿದ್ದು ‘ಐತಿಹಾಸಿಕ ಸತ್ಯ’. ಸತ್ಯ ಯಾವಾಗಲೂ ಕಹಿಯಾಗಿರುತ್ತದೆ. ಈ ಕಹಿಯೇ ಔಷಧವಾಗಿ ಬದಲಾಗಿ ಜನರ ರೋಗವನ್ನು ಗುಣಪಡಿಸಬಹುದು ಎಂದು ಹೇಳಿದ್ದರು.

    ಬಿಜೆಪಿ ನಾಯಕ ಹಾಗೂ ಹಿರಿಯ ವಕೀಲ ಅಶ್ವಿನಿ ಉಪಾಧ್ಯಾಯ ಅವರು, ಕಮಲ್ ಹಾಸನ್ ಹೇಳಿಕೆ ವಿರುದ್ಧ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಿದ್ದರು. ಧರ್ಮವನ್ನು ಚುನಾವಣಾ ಕಣದಲ್ಲಿ ಲಾಭಕ್ಕಾಗಿ ಬಳಸುವುದನ್ನು ತಡೆಯಬೇಕು ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಆದರೆ ದೆಹಲಿ ಹೈಕೋರ್ಟ್ ಈ ವಿಚಾರಣೆಯನ್ನು ಕೈಗೆತ್ತಿಕೊಳ್ಳುವುದಿಲ್ಲ ಎಂದು ಹೇಳಿದೆ. ಕಮಲ್ ಹೇಳಿಕೆ ಕೋರ್ಟ್‍ನ ವ್ಯಾಪ್ತಿಗೆ ಬರುವುದಿಲ್ಲ. ಬೇಕಾದರೆ ಚುನಾವಣಾ ಆಯೋಗ ನಿರ್ಧಾರ ಕೈಗೊಳ್ಳಲಿ ಎಂದು ನ್ಯಾ. ಜಿ.ಎಸ್. ಸಿಸ್ತಾನಿ ಮತ್ತು ನ್ಯಾ. ಜ್ಯೋತಿ ಸಿಂಗ್ ಅವರಿದ್ದ ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

  • ಸ್ವತಂತ್ರ ಭಾರತದ ಮೊದಲ ಉಗ್ರ `ಹಿಂದೂ’: ಕಮಲ್ ಹಾಸನ್

    ಸ್ವತಂತ್ರ ಭಾರತದ ಮೊದಲ ಉಗ್ರ `ಹಿಂದೂ’: ಕಮಲ್ ಹಾಸನ್

    ಚೆನ್ನೈ: ಸ್ವತಂತ್ರ ಭಾರತದ ಮೊದಲ ಉಗ್ರ ಒಬ್ಬ `ಹಿಂದೂ’ ಆಗಿದ್ದ ಎಂದು ನಟ, ರಾಜಕಾರಣಿ ಕಮಲ್ ಹಾಸನ್ ಹೇಳುವ ಮೂಲಕ ಹೊಸ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.

    ಮೇ 19ರಂದು ಅರವಕುರುಚ್ಚಿ ವಿಧಾನಸಭಾ ಉಪಚುನಾವಣೆ ನಡೆಯಲಿದ್ದು, ಮಕ್ಕಳ್ ನೀದಿಮೈಯ್ಯಂ ಪಕ್ಷದ ಪರವಾಗಿ ಉಪಚುನಾವಣೆ ರ‍್ಯಾಲಿಯಲ್ಲಿ ಭಾಗಿಯಾಗಿ ಈ ಹೇಳಿಕೆ ನೀಡಿದ್ದಾರೆ. ಅರವಕುರುಚ್ಚಿ ವಿಧಾನಸಭಾ ಉಪಚುನಾವಣೆಗೆ ತಮ್ಮ ಎಂಎನ್‍ಎಂ ಪಕ್ಷದ ಅಭ್ಯರ್ಥಿಯ ಪ್ರಚಾರದ ರ್ಯಾಲಿಯಲ್ಲಿ ಜನರನ್ನುದ್ದೇಶಿಸಿ ಮಾತನಾಡುತ್ತಾ ವಿವಾದವನ್ನು ಸೃಷ್ಟಿಸಿದ್ದಾರೆ.

    ಮುಸ್ಲಿಂ ಪ್ರಾಬಲ್ಯ ಹೊಂದಿರುವ ಪ್ರದೇಶ ಎಂಬ ಕಾರಣಕ್ಕೆ ನಾನು ಈ ಮಾತು ಹೇಳುತ್ತಿಲ್ಲ. ಗಾಂಧಿ ಪ್ರತಿಮೆಯ ಮುಂದೆ ನಿಂತು ಈ ಮಾತು ಹೇಳುತ್ತಿದ್ದೇನೆ. ಸ್ವತಂತ್ರ ಭಾರತದ ಮೊದಲ ಉಗ್ರ ಒಬ್ಬ ಹಿಂದೂ ಆಗಿದ್ದನು. ಆತನ ಹೆಸರು ನಾಥೂರಾಮ್ ಗೋಡ್ಸೆ ಎಂದು ಹೇಳಿದ್ದಾರೆ.

    ತಮಿಳುನಾಡಿನಲ್ಲಿ ಬಾಬ್ರಿ ಮಸೀದ್ ಬಗ್ಗೆ ಮೊದಲು ಧ್ವನಿ ಎತ್ತಿದ್ದು ನಾನು. ಅಲ್ಲದೆ ಒಳ್ಳೆಯ ಹೃದಯವಿರುವ ಮುಸಲ್ಮಾನರು ಎಂದಿಗೂ ಭಯೋತ್ಪಾದನೆಗೆ ಬೆಂಬಲ ನೀಡಲ್ಲ. ಈ ಬಗ್ಗೆ ಅವರು ಅವರ ಶ್ರೇಷ್ಠ ಗ್ರಂಥವನ್ನು ಮುಟ್ಟಿ ಹೇಳುತ್ತಾರೆ. ತ್ರಿವರ್ಣ ಧ್ವಜವೇ ಎಲ್ಲಕ್ಕಿಂತ ಶ್ರೇಷ್ಠವಾದದ್ದು. ಆದರೆ ತ್ರಿವರ್ಣದಲ್ಲಿ ಕೇವಲ ಒಂದು ಬಣ್ಣ ಉಳಿದ ಬಣ್ಣಗಳ ಮೇಲೆ ತನ್ನ ಹಿಡಿತವನ್ನು ಸಾಧಿಸುವಂತೆ ಆಗಬಾರದು. ಒಂದು ವೇಳೆ ಈ ರೀತಿಯಾದಲ್ಲಿ ನಾವು ಅದನ್ನು ತಡೆಯಬೇಕು. ದೇಶವನ್ನು ಒಡೆಯಲು ಪ್ರಯತ್ನಿಸುವ ಗುಂಪನ್ನು ಅಥವಾ ವ್ಯಕ್ತಿಯನ್ನು ಅಧಿಕಾರದಿಂದ ಇಳಿಸಬೇಕು ಎಂದರು.

    ಕಮಲ್‍ಹಾಸನ್ ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಿರುವುದು ಇದೇ ಮೊದಲಲ್ಲ. ಇತ್ತೀಚೆಗೆ ಪುಲ್ವಾಮಾದಲ್ಲಿ ನಡೆದ ದಾಳಿಯಲ್ಲಿ 40 ಮಂದಿ ಸಿಆರ್ ಪಿಎಫ್ ಯೋಧರು ಹುತಾತ್ಮರಾದಾಗ ಪಾಕ್ ಆಕ್ರಮಿತ ಕಾಶ್ಮೀರವನ್ನು ಆಜಾದ್ ಕಾಶ್ಮೀರ, ಅಲ್ಲಿ ಜನಮತಗಣನೆ ನಡೆಯಲಿ ಎಂದು ಆಗ್ರಹಿಸುವ ಮೂಲಕ ವಿವಾದ ಸೃಷ್ಟಿಸಿದ್ದರು. ಬಳಿಕ ಎಲ್ಲ ರಾಜಕಾರಣಿಗಳಂತೆ, ತಮ್ಮ ಹೇಳಿಕೆಯನ್ನು ತಿರುಚಲಾಗಿದೆ ಎಂದು ಆರೋಪಿಸಿದ್ದರು.

  • ಸೈನಿಕರು ಕಾಶ್ಮೀರಕ್ಕೆ ತೆರಳೋದೇ ಸಾಯೋದಕ್ಕೆ: ಕಮಲ್ ಹಾಸನ್

    ಸೈನಿಕರು ಕಾಶ್ಮೀರಕ್ಕೆ ತೆರಳೋದೇ ಸಾಯೋದಕ್ಕೆ: ಕಮಲ್ ಹಾಸನ್

    – ಕಾಶ್ಮೀರವನ್ನು ಅಜಾದ್ ಕಾಶ್ಮೀರ ಎಂದು ಘೋಷಿಸಿ
    – ವಿವಾದಾತ್ಮಕ ಹೇಳಿಕೆ ವಿರುದ್ಧ ಭಾರೀ ಆಕ್ರೋಶ

    ಚೆನ್ನೈ: ಸೈನಿಕರು ಕಾಶ್ಮೀರಕ್ಕೆ ತೆರಳೋದೇ ಸಾಯುವುದಕ್ಕೆ ಎಂದು ಬಹುಭಾಷಾ ನಟ, ರಾಜಕಾರಣಿ ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

    ನಗರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪಾಕ್ ಆಕ್ರಮಿತ ಪ್ರದೇಶವನ್ನು ಆಜಾದ್ ಕಾಶ್ಮೀರ್ ಎಂದು ಪರಿಗಣಿಸಿ. ಕಣಿವೆ ನಾಡಿನಲ್ಲಿ ಜನಮತ ಗಣನೆಗೆ ಕೇಂದ್ರ ಸರ್ಕಾರ ಹೆದರುತ್ತಿರೋದು ಯಾಕೆ ಎಂದು ಪ್ರಶ್ನಿಸಿದ್ದಾರೆ. ಈ ಮೂಲಕ ಜನಮತಕ್ಕೆ ಅನುಗುಣವಾಗಿ ಕಾಶ್ಮೀರ ಪ್ರದೇಶದ ವಿವಾದ ಇತ್ಯರ್ಥವಾಗಬೇಕು ಎನ್ನುವ ಹಳೇಯ ಹೇಳಿಕೆಯನ್ನು ಪುನಾರುಚ್ಚರಿಸಿದ್ದಾರೆ.

    ಜಗತ್ತು ಬದಲಾಗಿದೆ. ನಮ್ಮ ಸೈನ್ಯ ಇನ್ನೂ ಯಾಕೆ ಬದಲಾಗುತ್ತಿಲ್ಲ. ಲೈನ್ ಆಫ್ ಕಂಟ್ರೋಲ್‍ನಲ್ಲಿ ಇದ್ದರೆ ಒಬ್ಬ ಸೈನಿಕ ಕೂಡ ಹುತಾತ್ಮರಾಗುವುದಿಲ್ಲ. ಸೈನ್ಯವನ್ನು ಗಡಿ ರೇಖೆ ದಾಟಿ ಮುಂದೆ ಹೋಗುವಂತೆ ಮಾಡುವುದು ಸರಿಯಲ್ಲ. ಈ ಮಾತನ್ನು 70 ವರ್ಷಗಳ ಹಿಂದೆಯೇ ಪತ್ರಿಕೆಯಲ್ಲಿ ಹೇಳಲಾಗಿದೆ. ಅದನ್ನು ನಾನು ಈಗ ನೆನಪಿಸುತ್ತಿರುವೆ. ಹಳೇ ಪದ್ಧತಿಯನ್ನೇ ಸೈನ್ಯ ಮುಂದುವರಿಸುತ್ತಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

    ಇಡೀ ಕಾಶ್ಮೀರವು ಭಾರತದ ಅವಿಭಾಜ್ಯ ಅಂಗವಾಗಿದೆ. ನಮ್ಮ ಸಶಸ್ತ್ರ ಪಡೆಗಳು, ಪ್ಯಾರಾ-ಮಿಲಿಟರಿ ಮತ್ತು ಕೇಂದ್ರ ಪೊಲೀಸ್ ಪಡೆಗಳಿಂದ ನಾವು ನಿಸ್ವಾರ್ಥವಾಗಿ ರಕ್ಷಿಸಿಕೊಳ್ಳುತ್ತೇವೆ ಎಂದು ಕಮಲ್ ಹಾಸನ್ ಹೇಳಿದ್ದಾರೆ.

    ಭಾರತ ಉಳಿದ ಎಲ್ಲ ರಾಷ್ಟ್ರಗಳಿಗಿಂತ ಅತ್ಯುತ್ತಮವೆಂದು ತರಿಸಬೇಕಿದೆ ಎನ್ನುವ ಮೂಲಕ ಪುಲ್ವಾಮಾ ದಾಳಿಯ ಪ್ರತಿಕಾರವನ್ನು ಕೈಬಿಡುವಂತೆ ಕಮಲ್ ಹಾಸನ್ ಪರೋಕ್ಷವಾಗಿ ಹೇಳಿದ್ದಾರೆ. ಅವರ ಹೇಳಿಕೆಯಿಂದಾಗಿ ದೇಶ ವ್ಯಾಪಿ ಖಂಡನೆ ವ್ಯಕ್ತವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕರ್ನಾಟಕದ ಬೆಳವಣಿಗೆ ಪ್ರಜಾಪ್ರಭುತ್ವಕ್ಕೆ ಸಿಕ್ಕ ವಿಜಯ: ರಜನಿಕಾಂತ್

    ಕರ್ನಾಟಕದ ಬೆಳವಣಿಗೆ ಪ್ರಜಾಪ್ರಭುತ್ವಕ್ಕೆ ಸಿಕ್ಕ ವಿಜಯ: ರಜನಿಕಾಂತ್

    ಚೆನ್ನೈ: ಬಹುಮತ ಸಾಬೀತು ಪಡಿಸದೇ ಬಿ.ಎಸ್.ಯಡಿಯೂರಪ್ಪ ಅವರು ರಾಜೀನಾಮೆ ನೀಡಿರುವುದು ಪ್ರಜಾಪ್ರಭುತ್ವಕ್ಕೆ ಸಿಕ್ಕ ವಿಜಯವಾಗಿದೆ ಎಂದು ಚಿತ್ರನಟ ರಜನಿಕಾಂತ್ ಹೇಳಿದ್ದಾರೆ.

    ಮಕ್ಕಳಂ ಮದ್ರಂ ಸಂಘಟನೆಯ ಮಹಿಳಾ ಘಟಕದ ಸಭೆಯಲ್ಲಿ ಭಾಗವಹಿಸಿ, ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರು ಬಹುಮತ ಸಾಬೀತುಪಡಿಸಲು ಬಿಜೆಪಿಗೆ 15 ದಿನ ಕಾಲಾವಕಾಶ ನೀಡಿದ್ದು ಸೂಕ್ತ ಕ್ರಮವಲ್ಲ. ಕರ್ನಾಟಕ ರಾಜಕೀಯದಲ್ಲಿ ಮಧ್ಯ ಪ್ರವೇಶಿಸಿದ ಸುಪ್ರೀಂ ಕೋರ್ಟ್ ರಾಜ್ಯಪಾಲರ ನಡೆಯನ್ನು ಬದಿಗಿಟ್ಟು, ನ್ಯಾಯ ದೊರಕಿಸಿಕೊಟ್ಟಿದ್ದಕ್ಕೆ ಧನ್ಯವಾದ ಎಂದು ತಿಳಿಸಿದರು.

    ಕಾವೇರಿ ನೀರು ಹರಿಸಿ:
    ಕರ್ನಾಟಕದಲ್ಲಿ ಯಾವುದೇ ಪಕ್ಷ ಆಡಳಿತಕ್ಕೆ ಬಂದರೂ ಸರಿ, ಕಾವೇರಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡಿದ ನಿರ್ದೇಶನವನ್ನು ಅನುಷ್ಟಾನಕ್ಕೆ ತರಬೇಕು. ಕೋರ್ಟ್ ಸ್ಪಷ್ಟ ಆದೇಶ ನೀಡಿದ್ದು, ನಿರ್ವಹಣಾ ಮಂಡಳಿ ಅಥವಾ ಪ್ರಾಧಿಕಾರವೆಂಬ ತಾಂತ್ರಿಕ ಚೌಕಟ್ಟನ್ನು ಪ್ರದರ್ಶಿಸಬಾರದು ಎಂದು ಅವರು ಹೇಳಿದರು.

    ಮಹಿಳೆಯರು ಇರುವ ಕಡೆಗೆ ಗೆಲುವು ಇರುತ್ತದೆ ಎಂದ ಹೇಳಿದರು. ಈ ವೇಳೆ ಪತ್ರಕರ್ತರೊಬ್ಬರು, ನೀವು ಕಮಲ್ ಹಾಸನ್ ಅವರ ಮಕ್ಕಳ ನೀದಿ ಮಯ್ಯಂ ಪಕ್ಷದ ಜತೆ ಮೈತ್ರಿ ಮಾಡಿಕೊಳ್ಳುತ್ತಿರಾ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದರು.

    ಕಳೆದ ಎರಡು ವಾರಗಳಿಂದ ರಜನಿಕಾಂತ್ ಅವರು ಮಕ್ಕಳಂ ಮದ್ರಂ ಮಹಿಳಾ ಘಟಕದ ಜಿಲ್ಲಾ ಕಾರ್ಯದರ್ಶಿಗಳು ಹಾಗೂ ಯುವಜನರೊಂದಿಕೆ ಸಭೆ ನಡೆಸಿದ್ದಾರೆ.

  • ನೆಚ್ಚಿನ ನಟನನ್ನು ಭೇಟಿ ಮಾಡಿ ತಬ್ಬಿಕೊಂಡ ಮೇಲೆ ಮೂರು ದಿನ ಸ್ನಾನ ಮಾಡಿಲ್ಲ: ಶಿವಣ್ಣ

    ನೆಚ್ಚಿನ ನಟನನ್ನು ಭೇಟಿ ಮಾಡಿ ತಬ್ಬಿಕೊಂಡ ಮೇಲೆ ಮೂರು ದಿನ ಸ್ನಾನ ಮಾಡಿಲ್ಲ: ಶಿವಣ್ಣ

    ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಂದರೆ ಎಲ್ಲರಿಗೂ ಇಷ್ಟ. ಅವರಿಗೆ ಅಪಾರ ಅಭಿಮಾನಿಗಳು ಇದ್ದಾರೆ. ಲಾಂಗ್ ಹಿಡಿದು ಮಾಸ್ ಆಡಿಯನ್ಸ್ ನ ರಂಜಿಸುವ ಶಿವಣ್ಣ, ಕ್ಲಾಸ್ ಆಡಿಯನ್ಸ್ ಗೂ ಅಷ್ಟೇ ಅಚ್ಚುಮೆಚ್ಚು. ಸ್ಯಾಂಡಲ್ ವುಡ್ ನಲ್ಲಿ ಸೆಂಚುರಿ ಬಾರಿಸಿರುವ ಶಿವಣ್ಣನಿಗೆ ಅಸಂಖ್ಯಾತ ಅಭಿಮಾನಿಗಳಿದ್ದಾರೆ. ಅಂತಹ ಶಿವಣ್ಣ ಅವರು ಒಬ್ಬರ ಮಹಾನ್ ಫ್ಯಾನ್ ಆಗಿದ್ದಾರೆ.

    ಹೌದು. ಶಿವರಾಜ್ ಕುಮಾರ್ ಅವರು ಸಕಲ ಕಲಾವಲ್ಲಭ ಕಮಲ್ ಹಾಸನ್ ಅವರ ಅಭಿಮಾನಿಯಾಗಿದ್ದಾರೆ. ಶಿವಣ್ಣ ಅವರು ಕಮಲ್ ಹಾಸನ್ ರವರ ಎಲ್ಲ ಚಿತ್ರಗಳನ್ನೂ ಮಿಸ್ ಮಾಡದೆ ಫಸ್ಟ್ ಡೇ ಫಸ್ಟ್ ಶೋ ನೋಡುತ್ತಿದ್ದರು. ತಮ್ಮ ಅಚ್ಚುಮೆಚ್ಚಿನ ನಟ ಕಮಲ್ ಹಾಸನ್ ರನ್ನ ಒಮ್ಮೆ ಭೇಟಿ ಆಗಿ ತಬ್ಬಿಕೊಂಡ ಮೇಲೆ, ಮೂರು ದಿನ ಸ್ನಾನ ಮಾಡಿರಲಿಲ್ಲ ಎಂದು ಸ್ವತಃ ಶಿವಣ್ಣ ಅವರೇ `ನಂ.1 ಯಾರಿ ವಿತ್ ಶಿವಣ್ಣ’ ಕಾರ್ಯಕ್ರಮದಲ್ಲಿ ಹೇಳಿಕೊಂಡಿದ್ದಾರೆ.

    ಶಿವಣ್ಣ ಕಮಲ್ ಹಾಸನ್ ಅವರ ಸಿನಿಮಾಗಳನ್ನ ಫಸ್ಟ್ ಡೇ ಫಸ್ಟ್ ಶೋ ನೋಡುತ್ತಿದ್ದೆ. ಓಪನಿಂಗ್ ಡೇ ಅವರ ಆಫೀಸ್ ಗೆ ಫೋನ್ ಮಾಡಿ, ರಾಜ್ ಕುಮಾರ್ ಮನೆಗೆ ಟಿಕೆಟ್ ಬೇಕು ಅಂತ ಸುಳ್ಳು ಹೇಳಿ ಹದಿನೈದು ಟಿಕೆಟ್ ತರಿಸಿಕೊಂಡು ಸಿನಿಮಾ ನೋಡುತ್ತಿದ್ದೆ. ಆಗ ನನಗಿನ್ನೂ 14-15 ವರ್ಷ ಇರಬಹುದು ಎಂದು ಹೇಳಿಕೊಂಡಿದ್ದಾರೆ.

  • ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನಿಂದ ಎಂದೂ ಭಿಕ್ಷೆ ಬೇಡಿಲ್ಲ: ವಾಟಾಳ್

    ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನಿಂದ ಎಂದೂ ಭಿಕ್ಷೆ ಬೇಡಿಲ್ಲ: ವಾಟಾಳ್

    -ಏ.12ರಂದು ಕರ್ನಾಟಕ ಬಂದ್

    ಬೆಂಗಳೂರು: ನನಗೂ ಕೆಲಸವಿದೆ ರಾಜ್ಯದ ಕಳಕಳಿಯಿಂದ ಕೆಲಸ ಮಾಡುತ್ತಾ ಇದ್ದೀನಿ. ನಾನು ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ನಿಂದ ಎಂದೂ ಭಿಕ್ಷೆ ಬೇಡಿಲ್ಲ. ತಮಿಳುನಾಡು ಬಂದ್ ಬಗ್ಗೆ ಮಾಧ್ಯಮದವರು ಮಾತಾನಾಡುವುದಿಲ್ಲ ಎಂದು ಮಾಧ್ಯಮದವರ ವಿರುದ್ಧ ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಕಿಡಿಕಾರಿದರು.

    ಏಪ್ರಿಲ್ 12 ರಂದು ಕರೆ ಕೊಟ್ಟಿರುವ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಬಂದ್ ಮಾಡಿದಾಗ ಮಾಧ್ಯಮದಲ್ಲಿ ನನ್ನ ಬಗ್ಗೆ ನೆಗೆಟಿವ್ ಸುದ್ದಿಯಾಗುತ್ತದೆ. ಆದ್ರೆ ತಮಿಳುನಾಡು ಬಂದ್ ಬಗ್ಗೆ ಮಾಧ್ಯಮದವರು ಮಾತಾನಾಡುವುದಿಲ್ಲ. ಬಂದ್ ದಿನ ಟೌನ್ ಹಾಲ್‍ನಿಂದ ಫ್ರೀಡಂ ಪಾರ್ಕ್‍ವರೆಗೆ ಮೆರವಣಿಗೆ ಇರುತ್ತದೆ. ಹೀಗಾಗಿ ಬಸ್ ಸಂಚಾರ ಮಾಡದಂತೆ ಎಚ್ಚರಿಕೆ ನೀಡಿದರು. ನೀತಿ ಸಂಹಿತೆಗೂ ಬಂದ್‍ಗೂ ಸಂಬಂಧವಿಲ್ಲ. ಅನ್ಯಾಯವಾಗಿದೆ ಬಂದ್ ಮಾಡುತ್ತಿದ್ದೇವೆ. ಮೊನ್ನೆ ಗಡಿ ಬಂದ್ ಮಾಡಲಿಲ್ಲವಾ ಚುನಾವಣೆ ನಿಲ್ಲುವವರಿಗೆ ತೊಂದರೆಯಾಗಬಹುದು. ಚುನಾವಣೆ ನೀತಿ ಸಂಹಿತೆ ಅಂತಾ ಬಾಯಿಗೆ ಬಟ್ಟೆ ಹಾಕಿಕೊಂಡು ಇರುವುದಕ್ಕೆ ಆಗುತ್ತಾ ಎಂದು ಪ್ರಶ್ನೆ ಮಾಡಿದರು.

    ಕಮಲ ಹಾಸನ್, ರಜನೀಕಾಂತ್ ಯಾರು ನೀವು? ಕನ್ನಡಿಗರ ಋಣ ನಿಮ್ಮ ಮೇಲಿದೆ. ಕನ್ನಡದ ನೆಲದಲ್ಲಿ ಕೋಟಿ ಕೋಟಿ ಸಂಪಾದನೆ ಮಾಡಿದ್ದೀರಾ. ರಜನೀಕಾಂತ್, ಕಮಲ್ ಹಾಸನ್ ಕನ್ನಡದ ನೆಲಕ್ಕೆ ಇನ್ನು ಮುಂದೆ ಕಾಲಿಡಬಾರದು ಎಂದು ನೇರ ಎಚ್ಚರಿಕೆ ನೀಡಿದ ಅವರು, ಕಮಲ್ ಹಾಸನ್ ಮರಾಠಿಯವನು. ಅಲ್ಲಿ ಎಲ್ಲರೂ ಒಗ್ಗಟ್ಟಾಗಿದ್ದಾರೆ. ಆದರೆ ಕನ್ನಡದಲ್ಲಿ ಮಾತ್ರ ಯಾರಿಲ್ಲ, ಯಾರು ಧ್ವನಿಯೆತ್ತುವುದಿಲ್ಲ. ನಾರಾಯಣ ಗೌಡರಿಗೂ ಮನವಿ ಮಾಡುತ್ತೇನೆ, ಕೈ ಮುಗಿದು ಪ್ರಾರ್ಥನೆ ಮಾಡುತ್ತೇನೆ ಬಂದ್‍ಗೆ ಬೆಂಬಲ ಕೊಡಿ ಎಂದು ಕೇಳಿಕೊಂಡರು.

    ಸ್ಟಾಲಿನ್ ಬಂಧನ ಮಾಡಬೇಕಾಗಿತ್ತು. ನರೇಂದ್ರ ಮೋದಿಗೆ ಮರ್ಯಾದೆ ಇಲ್ಲ, ಅವರಿಗೆ ತಮಿಳುನಾಡಿನಲ್ಲಿ ರಾಜಕೀಯ ಮಾಡಬೇಕಾಗಿದೆ. ರಾಜ್ಯದಲ್ಲಿ ಬಿಜೆಪಿ ಇಲ್ಲವೇ ಇಲ್ಲ ಎಂದು ಸಂಸದರನ್ನು ಹಾಗೂ ಕೇಂದ್ರ ಸರ್ಕಾರವನ್ನು ದೂರಿದ ಅವರು, ಹೈಕೋರ್ಟ್ ಗೆ ಹೋಗಿ ಕಿತಾಪತಿ ಮಾಡುವವರು. ಮೋಸ ಮಾಡುವವರು ಕರ್ನಾಟಕದಲ್ಲಿ ಮಾತ್ರ. ಬಂದ್ ಬೇಡ ಅಂತಾ ಕೋರ್ಟ್ ಗೆ ಹೋಗುವವರು ಕನ್ನಡ ದ್ರೋಹಿಗಳು ಅಂತ ಗರಂ ಆದ್ರು.

    ಇದೇ ವೇಳೆ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ ಗೋವಿಂದ್ ಮಾತನಾಡಿ, ನಮಗೆ ಬಂದ್ ಕರೆಯುವ ಉದ್ದೇಶವಿರಲಿಲ್ಲ, ಆದರೆ ತಮಿಳುನಾಡು ಇದಕ್ಕೆ ದಾರಿ ಮಾಡಿಕೊಟ್ಟಿದೆ. ತಮಿಳುನಾಡು ರಾಜಕೀಯ ನಾಯಕರಿಗೆ, ಅಲ್ಲಿನ ಸಿನಿಮಾ ರಂಗದ ರಜನೀಕಾಂತ್, ಕಮಲ್ ಹಾಸನ್ ಯಾರಿಗೂ ಸೌಹಾರ್ದಯುತವಾಗಿ ಕರ್ನಾಟಕದ ಜೊತೆ ಮಾತುಕತೆ ಮಾಡುವ ಉದ್ದೇಶವಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

    ನಮಗೆ ಈ ಬಾರಿಯೂ ಜೂನ್ ಜುಲೈ ತಿಂಗಳ ಬೆಳಗ್ಗೆ ಹೋಗ್ಲಿ ಕುಡಿಯೋದಕ್ಕೆ ನೀರು ಇರುವುದಿಲ್ಲ. ರಾಜ್ಯದ ರಾಜಕೀಯ ಪಕ್ಷಗಳು ಒಂದಾಗಬೇಕು. ತಮಿಳುನಾಡು ಕೇಂದ್ರದ ಮೇಲೆ ಒತ್ತಡ ಹೇರುತ್ತಿದೆ. ತಮಿಳುನಾಡಿನ ನಿಲುವಿಗೆ ವಿರೋಧ ವ್ಯಕ್ತಪಡಿಸಬೇಕಾಗಿದೆ ಎಂದರು.

    ನಮ್ಮ ಸಂಸದರು ರಾಜೀನಾಮೆ ಹೋಗಲಿ, ಬಾಯಿಬಿಡುವುದು ಇಲ್ಲ. ತಮಿಳುನಾಡು ಕರೆ ಕೊಟ್ಟ ಬಂದ್‍ಗೆ ವಿರೋಧಿಸಿ ನಾವು ಪ್ರತಿಯಾಗಿ ಕರ್ನಾಟಕ ಬಂದ್ ಕರೆ ಕೊಡುತ್ತೇವೆ. ಏಪ್ರಿಲ್ 12 ರಂದು ಕರ್ನಾಟಕ ಬಂದ್. ಇದರಿಂದ ನಾವು ಹಿಂದೆ ಸರಿಯುವ ಪ್ರಶ್ನೆಯಿಲ್ಲ. ಆದ್ರೆ ಏ.9ರಂದು ತೀರ್ಪು ನೋಡುತ್ತೇವೆ. ಅದರಲ್ಲಿ ನಮ್ಮ ಪರವಾಗಿ ತೀರ್ಪು ಬಂದರೆ ಪ್ರತಿಭಟನೆ ಕೈ ಬಿಡುತ್ತೇವೆ ಎಂದು ಹೇಳಿದರು.

    ಕೆಎಸ್‍ಆರ್ ಟಿಸಿ ನೌಕರರ ಸಂಘ, ಲಾರಿ ಮಾಲೀಕರ ಸಂಘ, ಆಟೋ ಚಾಲಕರ ಸಂಘ ನಮ್ಮ ಬಂದ್‍ಗೆ ಬೆಂಬಲ ಕೊಡುವುದಾಗಿ ಘೋಷಿಸಿದ್ದಾರೆ ಎಂದು ತಿಳಿಸಿದರು. ಕರವೇ ಅಧ್ಯಕ್ಷ ಗಿರೀಶ್ ಗೌಡ ಹಾಗೂ ವಿವಿಧ ಕನ್ನಡ ಪರ ಸಂಘಟನೆಗಳ ಮುಖಂಡರು ಭಾಗಿಯಾಗಿದ್ದರು.

  • ತಮಿಳುನಾಡಿಗೆ ಒಬ್ಬರೇ ಎಂಜಿಆರ್, ಒಬ್ಬರೇ ಅಮ್ಮ : ಟಿಟಿವಿ ದಿನಕರನ್

    ತಮಿಳುನಾಡಿಗೆ ಒಬ್ಬರೇ ಎಂಜಿಆರ್, ಒಬ್ಬರೇ ಅಮ್ಮ : ಟಿಟಿವಿ ದಿನಕರನ್

    ಚೆನ್ನೈ: ತಮಿಳುನಾಡಿಗೆ ಒಬ್ಬರೇ ಎಂಜಿಆರ್, ಒಬ್ಬರೇ ಅಮ್ಮ ಅದು ಜಯಲಲಿತಾ. ರಜನಿ ಮೇನಿಯಾ ಎಂಬುವುದು ಕೇವಲ ಮಾಧ್ಯಮಗಳ ಸೃಷ್ಟಿಯಾಗಿದ್ದು, ಇಲ್ಲಿ ಇವೆಲ್ಲ ನಡೆಯುವುದಿಲ್ಲ ಎಂದು ಎಐಡಿಎಂಕೆ ಪಕ್ಷದ ಉಚ್ಛಾಟಿತ ನಾಯಕ ಟಿಟಿವಿ ದಿನಕರನ್ ಹೇಳಿದ್ದಾರೆ.

    ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶ ಸಂಬಂಧ ಘೋಷಣೆ ಮಾಡಿದ ನಂತರ ಪ್ರತಿಕ್ರಿಯೆ ನೀಡಿರುವ ದಿನಕರನ್, ತಮಿಳುನಾಡಿನಲ್ಲಿ ರಜನಿ ಮೇನಿಯಾ ನಡೆಯುವುದಿಲ್ಲ. ತಮಿಳುನಾಡಿಗೆ ಒಬ್ಬರೇ ಎಂಜಿಆರ್, ಒಬ್ಬರೇ ಅಮ್ಮ. ಅಲ್ಲದೇ ಎಂಜಿಆರ್ ಮತ್ತು ಅಮ್ಮ ಅವರೊಂದಿಗೆ ನೀವು ಯಾರನ್ನು ಬೇಕಾದರೂ ಹೋಲಿಕೆ ಮಾಡಬಾರದು. ಜಯಲಲಿತ ಅವರ ನಿಷ್ಠಾವಂತ ಬೆಂಬಲಿಗ ಮುಂದೆ ಯಾರು ಗೆಲ್ಲಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

    ಇತ್ತೀಚೆಗೆ ಜಯಲಲಿತಾ ಸಾವಿನಿಂದ ತೆರವಾಗಿದ್ದ ರಾಧಾಕೃಷ್ಣ ನಗರ ಕ್ಷೇತ್ರದ ಉಪ ಚುನಾವಣೆಯಲ್ಲಿ ದಿನಕರನ್, ಎಐಎಡಿಎಂಕೆ ಪಕ್ಷದ ಅಭ್ಯರ್ಥಿಯ ವಿರುದ್ಧ ಭರ್ಜರಿ ಜಯ ದಾಖಲಿಸಿದ್ದರು.

    ರಜನಿ ನಿರ್ಧಾರ ಖುಷಿ ತಂದಿದೆ: ತಮಿಳುನಾಡಿನಲ್ಲಿ ರಜನಿಕಾಂತ್ ರಾಜಕೀಯ ಪ್ರವೇಶ ಅವರ ಅಭಿಮಾನಿಗಳಲ್ಲಿ ಹರುಷವನ್ನು ಮೂಡಿಸಿದೆ. ರಜನಿ ಅವರ ಸಮಕಾಲೀನ ನಟ ಕಮಲ್ ಹಾಸನ್ ಈ ಕುರಿತು ತಮ್ಮ ಅಭಿಪ್ರಾಯವನ್ನು ಟ್ವೀಟ್ ಮಾಡಿದ್ದು, ರಜನಿ ಅವರ ರಾಜಕೀಯ ಪ್ರವೇಶ ಖುಷಿ ತಂದಿದೆ. ಸಹೋದರ ರಜನಿಕಾಂತ್ ಅವರ ಸಾಮಾಜಿಕ ಪ್ರಜ್ಞೆ ಬಗ್ಗೆ ನನಗೆ ತಿಳಿದಿದೆ. ಹೀಗಾಗಿ ಅವರಿಗೆ ನಾನು ಶುಭ ಕೋರುತ್ತೇನೆ ಎಂದು ಹೇಳಿದ್ದಾರೆ.

  • ಶೃತಿ ಹಾಸನ್, ಬಾಯ್ ಫ್ರೆಂಡ್ ಮೈಕಲ್ ಕೊರ್ಸೇಲ್ ಫೋಟೋ ವೈರಲ್

    ಶೃತಿ ಹಾಸನ್, ಬಾಯ್ ಫ್ರೆಂಡ್ ಮೈಕಲ್ ಕೊರ್ಸೇಲ್ ಫೋಟೋ ವೈರಲ್

    ಮುಂಬೈ: ನಟಿ ಶೃತಿ ಹಾಸನ್ ಗೆಳೆಯ ಮೈಕಲ್ ಕೊರ್ಸೇಲ್ ಜೊತೆ ಇರುವ ರಿಲೇಷನ್‍ಶಿಪ್ ಬಗ್ಗೆ ಮುಂದಿನ ಹಂತಕ್ಕೆ ಹೋಗಲು ಯೋಚಿಸಿದ್ದಾರೆಂದು ಕಾಣುತ್ತದೆ. ಲಂಡನ್ ಗೆಳೆಯ ಮೈಕಲ್ ಕೊರ್ಸೇಲ್ ರೊಂದಿಗೆ ಶೃತಿ ರಿಲೇಷನ್‍ಶಿಪ್‍ನಲ್ಲಿ ಇದ್ದಾರೆ ಎಂಬುದಕ್ಕೆ ಮತ್ತೊಂದು ಸಾಕ್ಷಿ ಎಂಬಂತೆ ಈ ಜೋಡಿ ಜೊತೆಯಾಗಿ ಕಾಣಿಸಿಕೊಂಡ ಮದುವೆ ಸಮಾರಂಭದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

    ಮೈಕಲ್ ಕೊರ್ಸೇಲ್ ಈ ಹಿಂದೆ ಶೃತಿ ಅವರ ತಾಯಿ ಸಾರಿಕಾರನ್ನು ಭೇಟಿ ಮಾಡಿದ್ದು ಸುದ್ದಿಯಾಗಿತ್ತು. ಇತ್ತೀಚೆಗೆ ಚೆನ್ನೈನಲ್ಲಿ ತಮಿಳು ನಟ ಆಧವ್ ಕಣ್ಣದಾಸನ್ ಮತ್ತು ವಿನೋದ್ನಿ ಸುರೇಶ್ ಅವರ ಮದುವೆ ಸಮಾರಂಭಕ್ಕೆ ಶೃತಿ ಮತ್ತು ಮೈಕಲ್ ಜೊತೆಯಾಗಿ ಹೋಗಿದ್ದಾರೆ. ಇನ್ನೂ ಆಶ್ಚರ್ಯ ಎಂಬಂತೆ ಶೃತಿ ತಂದೆ ಕಮಲ್ ಹಾಸನ್ ಕೂಡ ಇವರ ಜೊತೆಯಲ್ಲಿದ್ದರು.

    ಮದುವೆ ಸಮಾರಂಭಕ್ಕೆ ಶೃತಿ ಸಾಂಪ್ರದಾಯಕವಾಗಿ ದಕ್ಷಿಣ ಶೈಲಿಯ ಕೆಂಪು ಬಣ್ಣದ ಸೀರೆ ಮತ್ತು ಗೋಲ್ಡನ್ ಬ್ಲೌಸ್ ಧರಿಸಿ ಸಮಾರಂಭದಲ್ಲಿ ಎಲ್ಲರ ಕಣ್ಮನ ಸೆಳೆದಿದ್ದಾರೆ. ಮೈಕಲ್ ಕೂಡ ರೇಷ್ಮೆ ಪಂಚೆ ಮತ್ತು ಬಿಳಿ ಬಣ್ಣದ ಶರ್ಟ್ ಧರಿಸಿದ್ದು, ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ. ಈ ಜೋಡಿ ಸಂಗೀತ್, ಮೆಹೆಂದಿ ಮತ್ತು ಆರತಕ್ಷತೆಯಲ್ಲೂ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ.

    ಈ ಮುದ್ದಾದ ಜೋಡಿಯ ಫೋಟೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಶೃತಿ ಹಾಸನ್ ತಮ್ಮ ರಿಲೇಷನ್‍ಶಿಪ್ ಬಗ್ಗೆ ಅಧಿಕೃತವಾಗಿ ಹೇಳುವರೆಗೂ ಅಭಿಮಾನಿಗಳು ಕಾಯಬೇಕಾಗಿದೆ.

     

  • ಕೈ ಕೊಡಲು ಬಂದ ಅಭಿಮಾನಿಗೆ ಬಹುಭಾಷಾ ನಟ ಕಮಲ್ ಹಾಸನ್ ಕಪಾಳಮೋಕ್ಷ

    ಕೈ ಕೊಡಲು ಬಂದ ಅಭಿಮಾನಿಗೆ ಬಹುಭಾಷಾ ನಟ ಕಮಲ್ ಹಾಸನ್ ಕಪಾಳಮೋಕ್ಷ

    ಬೆಂಗಳೂರು: ರಾಜಕೀಯಕ್ಕೆ ಬರುವ ತಯಾರಿ ಮಾಡಿಕೊಳ್ಳುತ್ತಿರುವ ಹೊತ್ತಲ್ಲೇ ಬಹುಭಾಷಾ ನಟ ಕಮಲ್ ಹಾಸನ್ ವಿವಾದವೊಂದರಲ್ಲಿ ಸಿಲುಕಿಕೊಂಡಿದ್ದಾರೆ. ಅಭಿಮಾನಿವೊಬ್ಬರು ನಟ ಎಂದು ಕೈ ಕೊಡಲು ಬಂದರೆ ಅವರ ಕಪಾಳಕ್ಕೆ ಹೊಡೆದಿರುವ ಘಟನೆ ನಗರದಲ್ಲಿ ನಡೆದಿದೆ.

    ಕೆಲವು ದಿನಗಳ ಹಿಂದೆಯಷ್ಟೇ ಬೆಂಗಳೂರಿಗೆ ಭೇಟಿ ನೀಡಿದ್ದ ಕಮಲ್ ಹಾಸನ್, ಖಾಸಗಿ ಸಮಾರಂಭವೊಂದರಲ್ಲಿ ನಟ ರಮೇಶ್ ಜೊತೆ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಸಮಾರಂಭ ಮುಗಿಸಿ ರಮೇಶ್ ಮೊದಲು ಹೊರಬಂದಿದ್ದಾರೆ. ಅವರ ಹಿಂಂದೆಯೇ ಕಮಲ್ ಹಾಸನ್ ಹೊರಬರುತ್ತಿದ್ದಂತೆ ಅಭಿಮಾನಿಗಳು ಇವರನ್ನು ನೋಡಲು, ಶೇಕ್‍ಹ್ಯಾಂಡ್ ಮಾಡಲು ಮುಂದಾಗಿದ್ದಾರೆ. ಇದರಿಂದ ನೂಕುನುಗ್ಗಲು ಉಂಟಾಗಿದ್ದು, ಸಿಟ್ಟಿಗೆದ್ದ ಕಮಲ್ ಹಾಸನ್ ಕೈ ಕುಲುಕಲು ಮುಂದೆ ಬಂದ ಅಭಿಮಾನಿಯೊಬ್ಬರ ಕೆನ್ನೆಗೆ ಬಾರಿಸಿದ್ದಾರೆ.

    ಈ ದೃಶ್ಯವನ್ನು ಕ್ಯಾಮೆರಾದಲ್ಲಿ ಸೆರೆ ಹಿಡಿಯಲಾಗಿದ್ದು, ಸದ್ಯಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಸ್ಯಾಂಡಲ್‍ವುಡ್‍ನ ನಟ ರಮೇಶ್ ಅರವಿಂದ್ ಕೂಡ ಇದ್ದಾರೆ.

     

     

     

  • ನೋಟ್ ಬ್ಯಾನ್ ಬೆಂಬಲಿಸಿದ್ದಕ್ಕೆ ಕ್ಷಮೆ ಕೇಳಿದ ಕಮಲ್ ಹಾಸನ್

    ನೋಟ್ ಬ್ಯಾನ್ ಬೆಂಬಲಿಸಿದ್ದಕ್ಕೆ ಕ್ಷಮೆ ಕೇಳಿದ ಕಮಲ್ ಹಾಸನ್

    -ಮೋದಿ ಸಹ ತಮ್ಮ ತಪ್ಪನ್ನು ಒಪ್ಪಿಕೊಳ್ಳಬೇಕು

    ಚೆನೈ: 500 ಮತ್ತು 1000 ರೂ. ಮುಖಬೆಲೆ ನೋಟು ಬ್ಯಾನ್ ಮಾಡಿದ್ದ ವೇಳೆ ನಾನು ಮೋದಿಯವರನ್ನು ಬೆಂಬಲಿಸಿದ್ದಕ್ಕೆ ನಟ ಕಮಲ್ ಹಾಸನ್ ಕ್ಷಮೆ ಕೇಳಿದ್ದಾರೆ. ಒಂದು ವೇಳೆ ಮೋದಿ ಅವರು ಅಂದು ತಾವು ತೆಗೆದುಕೊಂಡಿದ್ದ ನಿರ್ಧಾರ ತಪ್ಪು ಎಂದು ಒಪ್ಪಿಕೊಂಡರೆ ನಾನು ಅವರನ್ನು ಬೆಂಬಲಿಸುತ್ತೇನೆಂದು ತಿಳಿಸಿದ್ದಾರೆ.

    ಆನಂದವಿಕಟನ್ ಎಂಬ ತಮಿಳು ಮ್ಯಾಗ್‍ಜಿನ್ ನಲ್ಲಿ ಕಮಲ್ ಹಾಸನ್ ಈ ರೀತಿಯಾಗಿ ಬರೆದುಕೊಂಡಿದ್ದಾರೆ. ಮಹಾತ್ಮ ಗಾಂಧಿ ಅಂತಹ ದೊಡ್ಡ ವ್ಯಕ್ತಿಗಳು ತಮ್ಮ ತಪ್ಪುಗಳನ್ನು ಸರಿಪಡಿಸಿಕೊಳ್ಳುವುದನ್ನು ತೋರಿಸಿದ್ದಾರೆ.

    1000 ಮತ್ತು 500 ರೂಪಾಯಿ ನೋಟುಗಳನ್ನು ಅಮಾನ್ಯೀಕರಣ ಮಾಡಿದಾಗ ಮೊದಲು ನಾನು ಸ್ವಾಗತಿಸಿದ್ದೆ. ಕಪ್ಪು ಹಣವನ್ನು ನಿರ್ಮೂಲನೆ ಮಾಡುವ ಉದ್ದೇಶದಿಂದ ನೋಟ್ ಬ್ಯಾನ್ ಮಾಡಲಾಗಿದ್ದು, ಅದರಿಂದ ಸಾಮಾನ್ಯ ಜನರಿಗೆ ಸಣ್ಣಪುಟ್ಟ ತೊಂದರೆಗಳು ಆಗಿರುತ್ತವೆ ಎಂದು ಅರ್ಥೈಸಿಕೊಂಡಿದ್ದೆ. ಆದರೆ ನಾನು ನೋಟ್ ಬ್ಯಾನ್ ಬೆಂಬಲಿಸಿದ್ದಕ್ಕೆ ಹಲವು ನಟರು ಮತ್ತು ಅರ್ಥಶಾಸ್ತ್ರಜ್ಞರು ನನ್ನನ್ನು ಟೀಕಿಸಿದ್ದರು ಎಂದು ತಿಳಿಸಿದ್ದಾರೆ.

    ಮೋದಿಯವರ ನೋಟು ರದ್ದತಿ ಒಳ್ಳೆಯ ನಿರ್ಧಾರವಾಗಿದೆ. ಆದರೆ ನೋಟ್ ಬ್ಯಾನ್ ಜಾರಿಗೊಳಿಸುವ ರೀತಿ ಸಮರ್ಪಕವಾಗಿರಲಿಲ್ಲ. ಇಂದು ನೋಟು ರದ್ದತಿ ತಪ್ಪು ಎಂದು ಹೇಳುವವರ ಮಾತು ಸರಿಯಾದಂತಾಗಿದೆ. ಸರ್ಕಾರದ ಪ್ರತಿಕ್ರಿಯೆ ಅನುಮಾನವನ್ನು ಹುಟ್ಟು ಹಾಕಿದೆ ಎಂದು ತಿಳಿಸಿದ್ದಾರೆ.